Tag: ಕಿಶನ್ ರೆಡ್ಡಿ

  • ಆ.5 ರಿಂದ 15 ರವರೆಗೆ ASI ಪ್ರವಾಸಿ ತಾಣಗಳ ಪ್ರವೇಶ ಉಚಿತ

    ಆ.5 ರಿಂದ 15 ರವರೆಗೆ ASI ಪ್ರವಾಸಿ ತಾಣಗಳ ಪ್ರವೇಶ ಉಚಿತ

    ನವದೆಹಲಿ: ಆಗಸ್ಟ್‌ 5 ರಿಂದ ಆಗಸ್ಟ್‌ 15ರವರೆಗೆ ಪುರಾತತ್ವ ಇಲಾಖೆಯ ವ್ಯಾಪ್ತಿಯ ಅಡಿಯಲ್ಲಿ ಬರುವ ಎಲ್ಲ ಪ್ರವಾಸಿ ಸ್ಥಳಗಳನ್ನು ಉಚಿತವಾಗಿ ಭೇಟಿ ನೀಡಬಹುದು.

    ʼಅಜಾದಿ ಕಾ ಅಮೃತ್‌ ಮಹೋತ್ಸವʼದ ಅಂಗವಾಗಿ ಪುರಾತತ್ವ ಇಲಾಖೆ ಈ ನಿರ್ಧಾರವನ್ನು ಕೈಗೊಂಡಿದೆ.

    ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಟ್ವೀಟ್‌ ಮಾಡಿ, ಪುರಾತತ್ವ ಇಲಾಖೆಯ ಅಡಿ ಬರುವ ಎಲ್ಲಾ ಸ್ಮಾರಕಗಳಿಗೆ ಆಗಸ್ಟ್ 5 ರಿಂದ 15 ರವರೆಗೆ ಪ್ರವೇಶ ಉಚಿತ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧ್ವಜ ನೀತಿ ಸಂಹಿತೆ ಉಲ್ಲಂಘನೆ – ಶೂ ಹಾಕಿಕೊಂಡು ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ಕಾಲಿಟ್ಟ ಖಾಕಿ

    ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ತ್ವ ಶಾಸ್ತ್ರದ ಸ್ಥಳಗಳು ಮತ್ತು ಅವಶೇಷಗಳ 1959 ರ ನಿಯಮ 6 ರ ಅಡಿಯಲ್ಲಿ ನೀಡಲಾಗಿರುವ ಅಧಿಕಾರವನ್ನು ಬಳಸಿಕೊಂಡು ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಮಹಾನಿರ್ದೇಶಕರು ಸಂರಕ್ಷಿತ ಸ್ಮಾರಕಗಳು / ಪುರಾತತ್ವ ಸ್ಥಳಗಳಲ್ಲಿ ಯಾವುದೇ ಶುಲ್ಕವನ್ನು ವಿಧಿಸಬಾರದು ಎಂದು ಆದೇಶ ಪ್ರಕಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಸಿಎಂ

    ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಸಿಎಂ

    ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬಿಜೆಪಿ ಬಸವರಾಜ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಿದೆ. ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಚರ್ಚೆ ಇಲ್ಲದೆ ಬೊಮ್ಮಾಯಿ ಹೆಸರನ್ನು ಘೋಷಣೆ ಮಾಡಲಾಗಿದ್ದು, ಇದಕ್ಕೆ ಗೋವಿಂದ ಕಾರಜೋಳ ಅನುಮೋದನೆ ನೀಡಿದ್ದಾರೆ.

    ನಾಳೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಯಡಿಯೂರಪ್ಪನವರ ರಾಜೀನಾಮೆಯಿಂದಾಗಿ ಸಂಪುಟ ವಿಸರ್ಜನೆಯಾಗಿದ್ದು, ಯಾರಿಗೆ ಲಕ್? ಯಾರಿಗೆ ಶಾಕ್ ಎದುರಾಗುತ್ತೆ ಅನ್ನೋದರ ಬಗ್ಗೆ ಕುತೂಹಲ ಮನೆ ಮಾಡಿತ್ತು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ.

    ಇಂದು ಸಂಜೆ ಕ್ಯಾಪಿಟಲ್ಸ್ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ ಈ ಹೆಸರನ್ನು ಅಂತಿಮಗೊಳಿಸಲಾಯಿತು. ಸೋಮವಾರ ಬಿಜೆಪಿ ಸರ್ಕಾರ ರಚನೆಯಾದ ಎರಡು ವರ್ಷದ ಸಂಭ್ರಮಾಚರಣೆಯಲ್ಲಿಯೇ ಬಿ.ಎಸ್.ಯಡಿಯೂರಪ್ಪ ಅವರು ಗದ್ಗದಿತರಾಗಿಯೇ ತಮ್ಮ ರಾಜೀನಾಮೆಯನ್ನು ಘೋಷಣೆ ಮಾಡಿ, ತದನಂತರ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡಿದ್ದರು.

    ಆ ಬಳಿಕದಿಂದ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿತ್ತು. ಮುಂದಿನ ಸಿಎಂ ಆಯ್ಕೆಯ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆದಿತ್ತು. ಸಭೆ ಬಳಿಕ ರಾಜ್ಯಕ್ಕೆ ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಅವರನ್ನು ಕಳುಹಿಸಿತ್ತು. ಇದಕ್ಕೂ ಮೊದಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬಂದು ಹಂಗಾಮಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ತದನಂತರ ನೇರವಾಗಿ ಕ್ಯಾಪಿಟಲ್ಸ್ ಹೋಟೆಲ್ ನಲ್ಲಿಯ ಸಭೆಗೆ ಹಾಜರಾಗಿದ್ರು.

    ಇನ್ನು ವೀಕ್ಷಕರಾಗಿ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಸಹ ಮೊದಲಿಗೆ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ವೀಕ್ಷಕರ ಜೊತೆಯಲ್ಲಿಯೇ ಯಡಿಯೂರಪ್ಪ ಶಾಸಕಾಂಗ ಸಭೆಗೆ ಆಗಮಿಸಿದರು. ಕಾರ್ ನಿಂದ ಕೆಳಗೆ ಇಳಿಯುತ್ತಿದ್ದಂತೆ ಯಡಿಯೂರಪ್ಪ ವಿಜಯದ ಸಂಕೇತ ತೋರಿಸಿ ಮುಗಳ್ನಗೆ ಬೀರಿ ಸಭೆಗೆ ಹೋದರು. ಇದೀಗ ಈ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ನೂತನ ಸಿಎಂ ಎಂದು ಘೋಷಣೆ ಮಾಡಲಾಯಿತು.

  • ದೇಶಾದ್ಯಂತ ಸದ್ಯಕ್ಕೆ ಎನ್‌ಆರ್‌ಸಿ ಜಾರಿ ಮಾಡಲ್ಲ: ಕೇಂದ್ರ ಸರ್ಕಾರ

    ದೇಶಾದ್ಯಂತ ಸದ್ಯಕ್ಕೆ ಎನ್‌ಆರ್‌ಸಿ ಜಾರಿ ಮಾಡಲ್ಲ: ಕೇಂದ್ರ ಸರ್ಕಾರ

    ನವದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ)ಯನ್ನು ಸದ್ಯ ದೇಶಾದ್ಯಂತ ಜಾರಿ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

    ಎನ್‌ಆರ್‌ಸಿ ಜಾರಿ ತರುವ ಸಂಬಂಧ ಸಿದ್ಧತೆಗಳು ನಡೆಯುತ್ತಿವೆ. 2003ರ ಪೌರತ್ವ ನಿಯಮಗಳ ಅನುಗುಣವಾಗಿ ಎನ್‌ಆರ್‌ಸಿ ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ. ನಿಯಮಗಳನ್ನು ರೂಪಿಸಿದ ಮೇಲೆ ಜಾರಿ ತರುವ ಬಗ್ಗೆ ತಿಳಿಸಲಾಗುವುದು ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

    ನವದೆಹಲಿಯಲ್ಲಿ ಮಾತನಾಡಿದ ಅವರು, ದೇಶದ್ಯಾಂತ ಎನ್‌ಆರ್‌ಸಿ ಜಾರಿ ತರುವ ಸಂಬಂಧ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಈ ಸಂಬಂಧ ನಿಯಮಗಳನ್ನು ರೂಪಿಸುತ್ತಿದ್ದೇವೆ. ಆದರೆ ಎನ್‌ಆರ್‌ಸಿ ಜಾರಿಗೆ ಯಾವುದೇ ದಿನಾಂಕ ಇದುವರೆಗೂ ನಿಗದಿ ಮಾಡಿಲ್ಲ. ಎನ್‌ಆರ್‌ಸಿ ಶೀಘ್ರದಲ್ಲಿ ಜಾರಿ ಆಗುವುದಿಲ್ಲ. ಸೂಕ್ತ ಸಮಯ ನೋಡಿಕೊಂಡು ಜಾರಿ ಮಾಡಲಿದ್ದೇವೆ ಎಂದರು.

    ಎನ್‌ಆರ್‌ಸಿ ಮೂಲಕ ದೇಶದ ಎಲ್ಲ ಮುಸ್ಲಿಮರನ್ನು ಹೊರ ಹಾಕಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಆದರೆ ಭಾರತೀಯ ನಾಗರಿಕರಿಗೆ ಯಾವುದೇ ತೊಂದರೆ, ಕಿರುಕುಳ ಆಗುವುದಿಲ್ಲ ಎಂದು ಕಿಶನ್ ರೆಡ್ಡಿ ಸ್ಪಷ್ಟಪಡಿಸಿದರು.

    ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ಒಡಿಶಾದಲ್ಲಿ ನವೀನ್ ಪಟ್ನಾಯಕ್ ತಮ್ಮ ರಾಜ್ಯದಲ್ಲಿ ಎನ್‌ಆರ್‌ಸಿ ಜಾರಿ ಮಾಡುವುದಿಲ್ಲ ಎಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 2011 ಮತ್ತು 2015 ರಲ್ಲಿ ರಾಷ್ಟ್ರೀಯ ಜನಸಂಖ್ಯಾ ನೊಂದಣಿ ಪ್ರಕ್ರಿಯೆ ನಡೆಸಿದೆ. ಏಪ್ರಿಲ್ ಸೆಪ್ಟೆಂಬರ್ 2020 ರಿಂದ 2021 ರಾಷ್ಟ್ರೀಯ ಜನಸಂಖ್ಯಾ ನೊಂದಣಿಯೂ ಎನ್‌ಆರ್‌ಸಿ ನಿಯಮಗಳ ಅಡಿಯಲ್ಲಿ ನಡೆಯಬೇಕು ಎಂದರು.

  • ಕಳೆದ 3 ವರ್ಷದಲ್ಲಿ 700ಕ್ಕೂ ಹೆಚ್ಚು ಉಗ್ರರ ಹತ್ಯೆ – ಗೃಹ ಸಚಿವಾಲಯ

    ಕಳೆದ 3 ವರ್ಷದಲ್ಲಿ 700ಕ್ಕೂ ಹೆಚ್ಚು ಉಗ್ರರ ಹತ್ಯೆ – ಗೃಹ ಸಚಿವಾಲಯ

    ನವದೆಹಲಿ: ಕಳೆದ ಮೂರು ವರ್ಷದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 700 ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಭಾರತೀಯ ಗೃಹ ಸಚಿವಾಲಯ ಮಂಗಳವಾರ ತಿಳಿಸಿದೆ.

    ಈ ವರ್ಷ ಜನವರಿಯಿಂದ ಜೂನ್ 16 ನಡುವೆ ಸುಮಾರು 113 ಮಂದಿ ಭಯೋತ್ಪಾದಕರನ್ನು ಕೊಲ್ಲಲಾಗಿದೆ. 2018ರಲ್ಲಿ ಒಟ್ಟು 257 ಉಗ್ರರನ್ನು ಕೊಂದಿದ್ದೇವೆ. 2017ರಲ್ಲಿ 213 ಮತ್ತು 2016 ರಲ್ಲಿ 150 ಮಂದಿ ಉಗ್ರರನ್ನು ಕೊಲ್ಲಲಾಗಿದೆ. ಒಟ್ಟು ಮೂರು ವರ್ಷದಲ್ಲಿ ಸುಮಾರು 733 ಉಗ್ರರನ್ನು ಕೊಂದಿದ್ದೇವೆ ಎಂದು ಗೃಹ ಸಚಿವಾಲಯ ತಿಳಿಸಿದೆ.

    ಈ ಅವಧಿಯಲ್ಲಿ 112 ಭಾರತೀಯ ನಾಗರಿಕರೂ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. 2016ರಲ್ಲಿ 15 ಜನ ಮತ್ತು 2017ರಲ್ಲಿ 40 ಜನ, 2018ರಲ್ಲಿ 39 ಜನ ಮತ್ತು ಈ ವರ್ಷ ಜನವರಿಯಿಂದ ಜೂನ್ 16 ರವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಗೃಹ ಸಚಿವಾಲಯ ಅಂಕಿ ಅಂಶವನ್ನು ಬಿಡುಗಡೆ ಮಾಡಿದೆ.

    ಭಯೋತ್ಪಾದನೆಯನ್ನು ತಡೆಗಟ್ಟಲು ಭಾರತೀಯ ಭದ್ರತಾ ಪಡೆಗಳು ಪರಿಣಾಮಕಾರಿಯಾಗಿ ನಿರಂತರ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಇದ್ದರಿಂದ ಕಳೆದ ಮೂರು ವರ್ಷದಲ್ಲಿ ಇಷ್ಟೊಂದು ಉಗ್ರರನ್ನು ಕೊಂದಿದ್ದೇವೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಲೋಕಸಭೆಗೆ ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.

    ಭಾರತದಲ್ಲಿ ಭಯೋತ್ಪಾದಕರಿಗೆ ಬೆಂಬಲ ನೀಡುವ ವ್ಯಕ್ತಿಗಳ ಮೇಲೆ ಭದ್ರತಾ ಪಡೆಗಳು ನಿಗಾ ವಹಿಸಿವೆ. ಈ ರೀತಿಯ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಕೊಳ್ಳಲಾಗುತ್ತದೆ. ಭಯೋತ್ಪಾದಕ ಕೃತ್ಯಗಳಿಗೆ ಪರಿಣಾಮಕಾರಿಯಾದ ಪ್ರತೀಕಾರ ತೆಗೆದುಕೊಳ್ಳಲಾಗುತ್ತದೆ ಎಂದು ಕಿಶನ್ ರೆಡ್ಡಿ ಅವರು ತಿಳಿಸಿದರು.

  • ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಸಚಿವ ಕಿಶನ್ ರೆಡ್ಡಿಗೆ ಶಾ ಕ್ಲಾಸ್

    ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಸಚಿವ ಕಿಶನ್ ರೆಡ್ಡಿಗೆ ಶಾ ಕ್ಲಾಸ್

    ನವದೆಹಲಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಗೃಹ ಸಚಿವ ಅಮಿತ್ ಶಾ ತಮ್ಮ ಇಲಾಖೆಯ ಸಹಾಯಕ ಸಚಿವ ಕಿಶನ್ ರೆಡ್ಡಿ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕಿಶನ್ ರೆಡ್ಡಿ, ಬೆಂಗಳೂರು, ಭೋಪಾಲ್ ಅಥವಾ ದೇಶದ ಯಾವುದೇ ನಗರದಲ್ಲಿ ಭಯೋತ್ಪಾದಕ ಕೃತ್ಯ ನಡೆದರೂ ಅದರ ಬೇರುಗಳು ಹೈದರಾಬಾದ್‍ನಲ್ಲಿದೆ. ಹೈದರಾಬಾದ್‍ನಲ್ಲಿ ಪ್ರತಿ 2-3 ತಿಂಗಳುಗಳಿಗೊಮ್ಮೆ ಉಗ್ರರ ಬಂಧನವಾಗುತ್ತದೆ ಎಂದು ಹೇಳಿಕೆ ನೀಡಿದ್ದರು.

    ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದ್ದಂತೆ ಅಮಿತ್ ಶಾ ಕಿಶನ್ ರೆಡ್ಡಿ ಅವರಿಗೆ ಕ್ಲಾಸ್ ತೆಗೆದುಕೊಂಡು, ಇನ್ನು ಮುಂದೆ ಈ ರೀತಿಯ ವಿವಾದಕ್ಕೆ ಕಾರಣವಾಗುವ ಹೇಳಿಕೆಯನ್ನು ನೀಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

    ಶನಿವಾರ, ಸಂಸತ್ತಿನ ನಾರ್ತ್ ಬ್ಲಾಕ್‍ನಲ್ಲಿರುವ ಗೃಹ ಸಚಿವರ ಕಚೇರಿಯಲ್ಲಿ ಅಮಿತ್ ಶಾ ಅಧಿಕಾರ ಸ್ವೀಕರಿಸಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ನಂತರ ಅವರು, ಇಂದು ನಾನು ಗೃಹ ಇಲಾಖೆಯ ಉಸ್ತುವಾರಿಯನ್ನು ವಹಿಸಿಕೊಂಡಿದ್ದೇನೆ. ನನ್ನಲ್ಲಿ ನಂಬಿಕೆಯಿಟ್ಟು ನನಗೆ ಮುಖ್ಯವಾದ ಜವಾಬ್ದಾರಿ ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಕಿಶನ್ ರೆಡ್ಡಿಯವರ ಮಾತುಗಳಿಗೆ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ಸಚಿವರ ಮಾತು ಮುಸ್ಲಿಮರ ವಿರುದ್ಧ ಬಿಜೆಪಿ ಹೊಂದಿರುವ ದ್ವೇಷದ ಮನಸ್ಥಿತಿಯನ್ನು ಬಿಂಬಿಸುತ್ತದೆ. ಹೈದರಾಬಾದ್ ಉಗ್ರರ ಸ್ವರ್ಗ ಎಂದು ಗುಪ್ತಚರ, ರಾಷ್ಟ್ರೀಯ ತನಿಖಾ ದಳ ಸರ್ಕಾರಕ್ಕೆ ಲಿಖಿತ ರೂಪದಲ್ಲಿ ಸಲ್ಲಿಸಿದ್ಯಾ ಎಂದು ಪ್ರಶ್ನಿಸಿದ್ದಾರೆ.