Tag: ಕಿಸಾನ್ ಸಮ್ಮಾನ್ ನಿಧಿ

  • ಸೋಮವಾರ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ಬಿಡುಗಡೆ

    ಸೋಮವಾರ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ಬಿಡುಗಡೆ

    ನವದೆಹಲಿ: ರೈತರಿಗೆ (Farmers) ಗುಡ್ ನ್ಯೂಸ್. ಅ.17 ಸೋಮವಾರ ಕಿಸಾನ್ ಸಮ್ಮಾನ್ ಯೋಜನೆಯಡಿ (PM Kisan Samman)  12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಾಗುತ್ತಿದೆ.

    16 ಸಾವಿರ ಕೋಟಿ ಹಣ 8 ಲಕ್ಷ ರೈತರ ಖಾತೆಗಳನ್ನು ಸೇರಲಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi), ಒಂದು ದೇಶ ಒಂದು ಗೊಬ್ಬರ ಹೆಸರಿನಲ್ಲಿ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್‍ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೇ, 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಮೋದಿ ಆರಂಭಿಸಲಿದ್ದಾರೆ. ದೇಶದಲ್ಲಿರುವ 2.7 ಲಕ್ಷ ಗೊಬ್ಬರದ ಅಂಗಡಿಗಳನ್ನು ಹಂತ ಹಂತವಾಗಿ ವನ್ ಸ್ಟಾಪ್ ಸೆಂಟರ್‌ಗಳಾಗಿ ಬದಲಿಸಿ ಪಿಎಂ ಸಮೃದ್ಧಿ ಕೇಂದ್ರಗಳೆಂದು ಮರುನಾಮಕರಣ ಮಾಡಲಾಗುತ್ತದೆ. ಇದನ್ನೂ ಓದಿ: 22 ವರ್ಷಗಳ ಬಳಿಕ ನಡೆಯುತ್ತಿರುವ ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಕೌಂಟ್‍ಡೌನ್

    ವಿವಿಧ ಸಂಘ-ಸಂಸ್ಥೆಗಳಿಂದ ಒಂದು ಕೋಟಿಗೂ ಹೆಚ್ಚು ರೈತರು ಈ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದೀಗ ದೇಶದಲ್ಲಿರುವ ರಸಗೊಬ್ಬರ ಚಿಲ್ಲರೆ ಅಂಗಡಿಗಳನ್ನು ಹಂತ ಹಂತವಾಗಿ ಪ್ರದಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳಾಗಿ ಪರಿವರ್ತಿಸುವ ಕಾರ್ಯ ಮುಂದಿನ ದಿನಗಳಲ್ಲಿ ನಡೆಯಲಿದೆ. ಇದನ್ನೂ ಓದಿ: ಹಾಂಕಾಂಗ್‌ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದ್ದೇವೆ – ಮುಂದಿನ ಗುರಿ ತೈವಾನ್‌ ಎಂದ ಕ್ಸಿ ಜಿನ್‌ಪಿಂಗ್‌

    ಏನಿದು ಪಿಎಂ ಕಿಸಾನ್ ಸಮ್ಮಾನ್ ನಿಧಿ:
    ಪಿಎಂ ಕಿಸಾನ್ ಸಮ್ಮಾನ್ ನಿಧಿಯನ್ನು 2019ರ ಫೆಬ್ರವರಿ 24 ರಂದು ಜಾರಿಗೊಳಿಸಲಾಯಿತು. ಈ ಯೋಜನೆ ಮೂಲಕ ರೈತರಿಗೆ ವರ್ಷಕ್ಕೆ 6,000 ರೂ. ಪ್ರೋತ್ಸಾಹ ಧನ ನೀಡಿ ಕೃಷಿ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ನಂತೆ ವರ್ಷಕ್ಕೆ ಮೂರು ಕಂತಿನಲ್ಲಿ 6 ಸಾವಿರ ರೂ. ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಈಗಾಗಲೇ 11 ಕಂತುಗಳಲ್ಲಿ ರೈತರ ಖಾತೆಗೆ ಹಣ ಬಿಡುಗಡೆಗೊಳಿಸಲಾಗಿದೆ. ಕಳೆದ ಮೇ ತಿಂಗಳಿನಲ್ಲಿ ಕೊನೆಯ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ರೈತರ ಖಾತೆಗೆ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ಸಹಾಯಧನ ವರ್ಗಾವಣೆ

    ರೈತರ ಖಾತೆಗೆ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ಸಹಾಯಧನ ವರ್ಗಾವಣೆ

    ಬೆಂಗಳೂರು: ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಜ್ಯದ 47.83 ಲಕ್ಷ ರೈತರಿಗೆ 956.71 ಕೋಟಿ ರೂ.ಗಳ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ.


    ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರಿಂದು ರೈತರ ಖಾತೆಗಳಿಗೆ ಸಹಾಯಧನ ವರ್ಗಾಯಿಸಿದ್ದು, 2018-19 ರಿಂದ 2021-22 ರವರೆಗೆ ಭಾರತ ಸರ್ಕಾರದಿಂದ ಅನುಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ ಒಟ್ಟು 3864.66 ಕೋಟಿ ರೂ. ರಾಜ್ಯದ ರೈತರಿಗೆ ಪಾವತಿಯಾದಂತಾಗಿರುತ್ತದೆ. 2021-22 ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ 1975.12 ಕೋಟಿ ರೂ.ಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಸಾಧ್ಯವಾದಷ್ಟು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಲಾಗಿದೆ. ಇದನ್ನೂ ಓದಿ: ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರಕ್ಕೆ ತೆರಿಗೆ ವಿನಾಯ್ತಿ ಘೋಷಿಸಿದ ಯೋಗಿ ಆದಿತ್ಯನಾಥ್

     

    ದೇಶದ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿಹೆಚ್ಚು ಅಂದರೆ 96% ರಷ್ಟು ಆಧಾರ್ ಆಧಾರಿತ ಪಾವತಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯವಾಗಿದ್ದು, ಕಳೆದ ಬಾರಿ 2020-21 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯದ ಕೃಷಿಇಲಾಖೆಗೆ ಪ್ರಶಸ್ತಿಯು ಲಭಿಸಿದೆ. 2019 ರಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅರ್ಹ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂ.ಗಳ ಆರ್ಥಿಕ ನೆರವನ್ನು ಎರಡು ಕಂತುಗಳಲ್ಲಿ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೀಡುತ್ತಿದೆ. ಆಧಾರ್ ಗುರುತಿನ ಸಂಖ್ಯೆಯಾಧಾರದ ಮೇಲೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ಮೂಲಕ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಸಂಸದೆ ಸುಮಲತಾ ಬಿಜೆಪಿಗೆ ಬಂದ್ರೆ ಸ್ವಾಗತ ಮಾಡ್ತೀನಿ: ನಾರಾಯಣಗೌಡ

    ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆ ಆಯುಕ್ತ ಶರತ್, ನಿರ್ದೇಶಕಿ ನಂದಿನಿಕುಮಾರಿ, ಜಲಾನಯನ ಇಲಾಖೆ ಆಯುಕ್ತ ಡಾ. ವೆಂಕಟೇಶ್, ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

  • ರೈತರಲ್ಲಿ ಆಸೆ ಹೆಚ್ಚಿಸಿದ ಕಿಸಾನ್ ಸಮ್ಮಾನ್ – ಯಾವ ಜಿಲ್ಲೆಯ ರೈತರಿಗೆ ಸಿಕ್ತು ಮೊದಲ 2 ಸಾವಿರ..?

    ರೈತರಲ್ಲಿ ಆಸೆ ಹೆಚ್ಚಿಸಿದ ಕಿಸಾನ್ ಸಮ್ಮಾನ್ – ಯಾವ ಜಿಲ್ಲೆಯ ರೈತರಿಗೆ ಸಿಕ್ತು ಮೊದಲ 2 ಸಾವಿರ..?

    ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿರುವ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಬಗ್ಗೆ ರಾಜ್ಯದ ರೈತರು ಕುತೂಹಲ ಹೊಂದಿದ್ದಾರೆ. ಯಾರ ಖಾತೆಗೆ ಎರಡು ಸಾವಿರ ರೂಪಾಯಿ ಬಂದಿದೆ ಅಂತ ರೈತರು ಖಾತೆಗಳನ್ನ ಪರಿಶೀಲಿಸಿಕೊಳ್ಳುತ್ತಿದ್ದಾರೆ. ರಾಯಚೂರಿನ ರೈತರು ಸಹ ಸಹಾಯ ಧನದ ನಿರೀಕ್ಷೆಯಲ್ಲಿದ್ದು, ರಾಜ್ಯ ಸರ್ಕಾರ ಘೋಷಿಸಿದ ಸಾಲಮನ್ನಾಕ್ಕೆ ಕೇಳಿದಂತೆ ನಾನಾ ದಾಖಲೆಗಳನ್ನ ಕೇಳದೆ ಸುಲಭವಾಗಿ ಹಣ ನೀಡಬೇಕು ಅಂತ ಒತ್ತಾಯಿಸಿದ್ದಾರೆ.

    ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರ ಬ್ಯಾಂಕ್ ಖಾತೆಗೆ ವಾರ್ಷಿಕ 6 ಸಾವಿರ ರೂಪಾಯಿ ವರ್ಗಾಯಿಸುವ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ 75 ಸಾವಿರ ಕೋಟಿ ಮೊತ್ತದ ಯೋಜನೆಗೆ ಉತ್ತರ ಪ್ರದೇಶದ ಗೋರಖ್‍ಪುರದಲ್ಲಿ ಚಾಲನೆ ನೀಡಿದ್ದಾರೆ. ಮೂರು ಕಂತುಗಳ ಪೈಕಿ ಮೊದಲ ಕಂತಿನಲ್ಲಿ 1 ಕೋಟಿ ರೈತರ ಬ್ಯಾಂಕ್ ಖಾತೆಗೆ 2 ಸಾವಿರ ರೂಪಾಯಿ ವರ್ಗಾವಣೆ ಆಗಿದೆ. ಮಾರ್ಚ್ ಅಂತ್ಯದೊಳಗೆ ಬಾಕಿ ರೈತರ ಖಾತೆಗೆ ಮೊದಲ ಕಂತು ಜಮಾ ಆಗಲಿದೆ. ಹಾಗಾದ್ರೆ ರಾಜ್ಯದ ಯಾವ್ಯಾವ ಜಿಲ್ಲೆಯ ಎಷ್ಟು ಜನ ರೈತರಿಗೆ ಕಿಸಾನ್ ಸಮ್ಮಾನ ನಿಧಿ ಸಿಕ್ಕಿದೆ ಅನ್ನೋದು ಇನ್ನೂ ಸ್ಪಷ್ಟವಾಗಬೇಕಿದೆ.

    ಯಾವ ಜಿಲ್ಲೆಯಲ್ಲಿ ರೈತರಿಗೆ ಸಿಕ್ಕಿದೆ..?
    ಬಾಗಲಕೋಟೆ ಜಿಲ್ಲೆಯಲ್ಲಿ 67,064 ಜನ ಸಣ್ಣ ಹಾಗೂ ಅತಿ ಸಣ್ಣ ರೈತರಿದ್ದು ಇದೂವರೆಗೆ 6,645 ಜನ ನೋಂದಣಿಯಾಗಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ 25 ಸಾವಿರ ರೈತರ ನೋಂದಣಿ ಮಾಡಲಾಗಿದೆ. ಧಾರವಾಡದಲ್ಲಿ 10 ಸಾವಿರ, ಚಿತ್ರದುರ್ಗ ಜಿಲ್ಲೆಯ ಆರು ಸಾವಿರ ರೈತರು ನೋಂದಣಿಯಾಗಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ 13 ಸಾವಿರ ರೈತರ ಖಾತೆಗಳು ನೋಂದಣಿಯಾಗಿದ್ದು 3850 ರೈತರ ಖಾತೆಗೆ ಹಣ ಜಮಾ ಆಗಿದೆ. ರಾಯಚೂರು ಜಿಲ್ಲೆಯಲ್ಲಿ 6480 ರೈತರ ಖಾತೆಗಳು ನೋಂದಣಿಯಾಗಿದೆ. ಮಾರ್ಚ್ ಅಂತ್ಯದೊಳಗೆ ಎಲ್ಲಾ ರೈತರ ಖಾತೆಗೆ ಮೊದಲ ಕಂತು ಸೇರಬೇಕಿದೆ. ಹೀಗಾಗಿ ಯಾವುದೇ ಗೊಂದಲಗಳು ಇಲ್ಲದೆ ಅಧಿಕಾರಿಗಳು ಹಣ ಜಮಾ ಮಾಡಬೇಕು ಅಂತ ರಾಯಚೂರಿನಲ್ಲಿ ರೈತರು ಒತ್ತಾಯಿಸಿದ್ದಾರೆ.

    ಇಂದಿನಿಂದ ರೈತರ ಸಂಪರ್ಕ ಕೇಂದ್ರ, ಬಾಪುಜಿ ಸೇವಾ ಕೇಂದ್ರ, ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಬಜೆಟ್ ನಲ್ಲಿ ಘೋಷಿಸಿದಂತೆ ಮೋದಿ ಯೋಜನೆ ಜಾರಿಗೆ ಮಾಡಿದ್ದಾರೆ. ಆದ್ರೆ ಇನ್ನೂ ಯಾವೆಲ್ಲ ಗೊಂದಲಗಳಿವೆಯೋ ಅಂತ ರೈತರು ಯೋಚಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv