Tag: ಕೀರ್ತನೆ

  • ಒಡಿಶಾದಲ್ಲಿ ಟ್ರಕ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ 6 ಮಂದಿ ಸಾವು, ಐವರು ಗಂಭೀರ

    ಒಡಿಶಾದಲ್ಲಿ ಟ್ರಕ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ 6 ಮಂದಿ ಸಾವು, ಐವರು ಗಂಭೀರ

    ಭುವನೇಶ್ವರ: ಟ್ರಕ್‌ಗೆ (Truck) ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಒಡಿಶಾದ (Odisha) ಸುಂದರ್‌ಗಢ್ (Sundargarh) ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ.

    ಹೇಮಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಯಕನಪಾಲಿ ಪ್ರದೇಶದ ಬಳಿ ವ್ಯಾನ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಪ್ರದೇಶದಲ್ಲಿ ದಟ್ಟ ಮಂಜಿನಿಂದ ಅಪಘಾತ ಸಂಭವಿಸರಬಹುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೀರ್ತನಾ ತಂಡವೊಂದರ ಸದಸ್ಯರು ಚಕ್ಕಪ್ಲೈ ಗ್ರಾಮಕ್ಕೆ ತೆರಳಿದ್ದು, ತಮ್ಮ ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಇದನ್ನೂ ಓದಿ: Madkeri | ಮಹಿಳೆ ಜೊತೆ ಸೇರಿ ಕೊಲೆ – ಸ್ಥಳ‌ ಮಹಜರ್‌ ವೇಳೆ ಆರೋಪಿ ಎಸ್ಕೇಪ್‌

    ಮೃತರು ಜಿಲ್ಲೆಯ ಕಂದಗೋಡ ಮತ್ತು ಸಮರ್ಪಿಂಡ ಗ್ರಾಮಗಳಿಗೆ ಸೇರಿದವರು ಎಂದು ವರದಿಗಳು ತಿಳಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸ್ಥಳೀಯರು ರಸ್ತೆ ತಡೆ ನಡೆಸಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ| 3ರ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ – ಮೃತದೇಹ ಹೊಲದಲ್ಲಿ ಹೂತುಹಾಕಿದ ಸಂಬಂಧಿ

  • ಉಡುಪಿ: ಶ್ರೀಕೃಷ್ಣ ಮಠದಲ್ಲಿ ಯೇಸುದಾಸ್ ಗಾನಸುಧೆ

    ಉಡುಪಿ: ಶ್ರೀಕೃಷ್ಣ ಮಠದಲ್ಲಿ ಯೇಸುದಾಸ್ ಗಾನಸುಧೆ

    ಉಡುಪಿ: ಶ್ರೀಕೃಷ್ಣನ ಅಪ್ಪಟ ಅಭಿಮಾನಿ, ಪದ್ಮವಿಭೂಷಣ ಗಾಯಕ ಕೆ.ಜೆ. ಯೇಸುದಾಸ್ ಉಡುಪಿಯಲ್ಲಿ ತಮ್ಮ ಗಾಯನದ ಮೂಲಕ ಸಾವಿರಾರು ಸಂಗೀತಾಭಿಮಾನಿಗಳನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸುಮಾರು ಎರಡು ಗಂಟೆಗಳ ಕಾಲ ನಿರಂತರ ಗಾನಸುಧೆಯನ್ನು ಯೇಸುದಾಸ್ ಹರಿಸಿದರು.

    ಮೊದಲು ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೇ ಹಾಡಿದ ಯೇಸುದಾಸ್, ನಂತರ ದೇವರ ಕೀರ್ತನೆಗಳನ್ನು ಹಾಡಿದರು. ತಮಗಿಷ್ಟದ ಆರಾಧ್ಯ ದೇವರು ಶ್ರೀಕೃಷ್ಣನ ನಾಮಗಳನ್ನು ಹಾಡಿದರು. ಇದಕ್ಕೂ ಮೊದಲು ಶ್ರೀಕೃಷ್ಣಮಠಕ್ಕೆ ಆಗಮಿಸಿದ ಅವರು ಕಡೆಗೋಲು ಕೃಷ್ಣನ ದರ್ಶನ ಮಾಡಿದರು. ಕುಟುಂಬ ಸಮೇತ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪರ್ಯಾಯ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

    ಪ್ರತೀ ವರ್ಷ ಯೇಸುದಾಸ್ ಅವರು ಹುಟ್ಟುಹಬ್ಬದ ಸಂದರ್ಭದಲ್ಲಿ ಕೃಷ್ಣಮಠಕ್ಕೆ ಭೇಟಿಕೊಡುವ ವಾಡಿಕೆ ಇಟ್ಟುಕೊಂಡಿದ್ದಾರೆ. ಸದ್ಯ ಪೇಜಾವರ ಪರ್ಯಾಯ ನಡೆಯುತ್ತಿದ್ದು, ಸ್ವಾಮೀಜಿಗಳ ಮೇಲಿನ ಗೌರವದಿಂದ ಉಡುಪಿಯಲ್ಲಿ ಕಾರ್ಯಕ್ರಮ ನೀಡಲು ಯೇಸುದಾಸ್ ಒಪ್ಪಿದ್ದರು. ಯೇಸುದಾಸ್ ಅವರ ಬಳಗ ಕರ್ನಾಟಕ ಸಂಗೀತ ಅಭಿಮಾನಿಗಳನ್ನು ಕೆಲಕಾಲ ಸಂಗೀತ ಲೋಕದಲ್ಲಿ ತೇಲಾಡಿಸಿತು.