Tag: ಕೀರ್ತಿ ಕೃಷ್ಣ

  • ಶ್ರೇಯಸ್ ಜೊತೆ ದಿಲ್ ದಾರ್ ಅಖಾಡಕ್ಕಿಳಿದ ಕೀರ್ತಿ ಕೃಷ್ಣ!

    ಶ್ರೇಯಸ್ ಜೊತೆ ದಿಲ್ ದಾರ್ ಅಖಾಡಕ್ಕಿಳಿದ ಕೀರ್ತಿ ಕೃಷ್ಣ!

    ಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಟಿಸಿರುವ ಚಿತ್ರ `ದಿಲ್ ದಾರ್’ (Dildar). ಆರಂಭಿಕವಾಗಿ ಕೆಲ ಮಾಹಿತಿ ನೀಡಿದ್ದ ಚಿತ್ರತಂಡ ಯಾವ ಭರಾಟೆಗಳೂ ಇಲ್ಲದೆ ತಣ್ಣಗೆ ಈ ಚಿತ್ರದ ಚಿತ್ರೀಕರಣ ಮುಗಿಸಿಕೊಂಡಿದೆ. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಹಾಡೊಂದು ಮಾತ್ರವೇ ಸದ್ಯ ಬಾಕಿ ಉಳಿದುಕೊಂಡಿದೆ. ಈ ಹಂತ ದಾಟಿಕೊಂಡರೂ ಸದರಿ ಸಿನಿಮಾ ನಾಯಕಿಯ ಬಗ್ಗೆ ಚಿತ್ರತಂಡ ಗೌಪ್ಯತೆ ಕಾಪಾಡಿಕೊಂಡಿತ್ತು. ಕಡೆಗೂ ಕೀರ್ತಿ ಕೃಷ್ಣ ಶ್ರೇಯಸ್‌ಗೆ ನಾಯಕಿಯಾಗಿ ನಟಿಸಿದ್ದಾರೆಂಬ ಅಧಿಕೃತ ಮಾಹಿತಿಯನ್ನು ಇದೀಗ ಜಾಹೀರು ಮಾಡಲಾಗಿದೆ!

    ಕೀರ್ತಿ ಕೃಷ್ಣ ಇತ್ತೀಚೆಗಷ್ಟೇ ಚಿತ್ರರಂಗದಲ್ಲಿ ಮೆಲುವಾಗಿ ಕೇಳಿಸುತ್ತಿರೋ ಹೆಸರು. ವಿಶೇಷವೆಂದರೆ, ಈಕೆ ನಟ ಶರಣ್ ಅವರ ಸೊಸೆ. ಅವರ ತಂಗಿ ಉಷಾ ಕೃಷ್ಣ ಅವರ ಮಗಳು ಕೀರ್ತಿ ಕೃಷ್ಣ. ಸಿಂಪಲ್ ಸುನಿ ಮುಂಬರುವ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿರುವ ಕೀರ್ತಿ, ಈಗಾಗಲೇ ದಿಲ್ ದಾರ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಒಂದೊಳ್ಳೆ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆಂಬ ಮೆಚ್ಚುಗೆ ಚಿತ್ರತಂಡದಲ್ಲಿದೆ. ಒಂದು ವಿರಳ ಪ್ರೇಮ ಕಥೆಗೆ ನಿರ್ದೇಶಕರಿಲ್ಲಿ ದೃಷ್ಯ ಬರೂಪ ಕೊಟ್ಟಿದ್ದಾರಂತೆ. ಈ ಮೂಲಕ ಶ್ರೇಯಸ್‌ಗೆ ಜೋಡಿಯಾಗಿ ಕೀರ್ತಿ ಕೃಷ್ಣ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಖುಷಿಯಲ್ಲಿದ್ದಾರೆ.‌

    ಪ್ರೇಮಕಥೆ ಅಂದಾಕ್ಷಣ ಒಂದು ಸಿದ್ಧಸೂತ್ರ ಕಲ್ಪನೆ ಮೂಡಿಕೊಳ್ಳೋದು ಸಹಜ. ಆದರೆ, ಚಿತ್ರರಂಗದಲ್ಲಿ ದಶಕಗಳ ಕಾಲ ಪಳಗಿಕೊಂಡಿರುವ ಮಧುಗೌಡ ಚೌಕಟ್ಟಿನಾಚೆ ಹಬ್ಬಿಕೊಂಡ ಚೆಂದದ ಕಥೆಯೊಂದಿಗೆ ಈ ಸಿನಿಮಾವನ್ನು ರೂಪಿಸಿದ್ದಾರಂತೆ. ಶ್ರೇಯಸ್ ಮಂಜು ಕೂಡಾ ಅತ್ಯಂತ ಖುಷಿಯಿಂದಲೇ ಸದರಿ ಕಥೆಯನ್ನು ಒಪ್ಪಿಕೊಂಡಿದ್ದಾರೆ. ವೇಗವಾಗಿ ಚಿತ್ರೀಕರಣ ಮುಗಿಸಿಕೊಂಡಿರುವ ಚಿತ್ರತಂಡ ಸದ್ಯ ಒಂದು ಹಾಡನ್ನಷ್ಟೇ ಬಾಕಿ ಉಳಿಸಿಕೊಂಡಿದೆ. ಅತ್ಯಂತ ಅದ್ಧೂರಿಯಾಗಿ, ವಿಶೇಷವಾಗಿ ಆ ಹಾಡನ್ನು ಸೆರೆ ಹಿಡಿಯಲು ನಿರ್ದೇಶಕರು ತಯಾರಾಗಿದ್ದಾರೆ. ಈಗಾಗಲೇ ಅರ್ಜುನ್ ಜನ್ಯಾ ಸ್ಪೆಷಲ್ ಹಾಡೊಂದನ್ನು ಕಂಪೋಸ್ ಮಾಡಿ ಕೊಟ್ಟಿದ್ದಾರೆ. ಅದಕ್ಕೆ ತಕ್ಕುಗಾದ ನೃತ್ಯ ಸಂಯೋನೆಯೂ ನಡೆದಿದೆ. ಅಪ್ಪು ನಿರ್ಗಮನದ ನಂತರ ಆ ಪರಿಯ ನೃತ್ಯ ವೈಭವ ಮರೆಯಾದಂತಿದೆ. ಆದರೆ, ಈ ಹಾಡಿನಲ್ಲಿ ವಿಭಿನ್ನ ನೃತ್ಯಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ನಾಯಕ ನಟ ಶ್ರೇಯಸ್ ಇದಕ್ಕಾಗಿ ಶ್ರಮಪಟ್ಟು ಕಲಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಒಂದಿಡೀ ಚಿತ್ರತಂಡವೀಗ ಆ ಹಾಡಿಗಾಗಿ ತಾಲೀಮು ನಡೆಸುತ್ತಿದೆ.

    ಆ ಹಾಡಿನ ಚಿತ್ರೀಕರಣದೊಂದಿಗೆ ಎಲ್ಲವೂ ಮುಕ್ತಾಯಗೊಳ್ಳಲಿದೆ. ಅಂದುಕೊಂಡಂತೆಯೇ ಎಲ್ಲ ನಡೆದರೆ ಇದೇ ಯುಗಾದಿಯ ಆಸುಪಾಸಲ್ಲಿ ದಿಲ್ ದಾರ್ ಚಿತ್ರ ತೆರೆಗಾಣಲಿದೆ. ಇಂಥಾ ಚಿತ್ರದ ಮೂಲಕ ಕೀರ್ತಿ ಕೃಷ್ಣ ಅವರಿಗೂ ಬಹುದೊಡ್ಡ ಬ್ರೇಕ್ ಸಿಗುವ ನಿರೀಕ್ಷೆಗಳಿವೆ. ಎಲ್ಲಾ ವರ್ಗಕ್ಕೂ ಹಿಡಿಸುವಂತೆ ರೂಪುಗೊಂಡಿರುವ ಈ ಸಿನಿಮಾದಲ್ಲಿ ಭರಪೂರ ಮನರಂಜನೆಯೂ ಇರಲಿದೆ. ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಭರ್ಜರಿ ಆಕ್ಷನ್ ಸೀನುಗಳಲ್ಲಿ ಶ್ರೇಯಸ್ ಮಂಜು ಪ್ರೇಕ್ಷಕರಿಗೆ ಅಚ್ಚರಿ ಮೂಡಿಸಲಿದ್ದಾರೆಂಬುದು ಚಿತ್ರತಂಡದ ಭರವಸೆ.

  • ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಹಿರಿಯ ನಟಿ ಶ್ರುತಿ ಕುಟುಂಬದ ಮನೆ ಮಗಳು

    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಹಿರಿಯ ನಟಿ ಶ್ರುತಿ ಕುಟುಂಬದ ಮನೆ ಮಗಳು

    ನಿರ್ದೇಶಕ ಸಿಂಪಲ್ ಸುನಿ (Simple Suni) ಹೊಸ ಸಿನಿಮಾ ದೇವರು ರುಜು ಮಾಡಿದನು. ಇಂದು ಈ ಚಿತ್ರ ಅದ್ಧೂರಿಯಾಗಿ ಸೆಟ್ಟೇರಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದೇವರು ರುಜು ಮಾಡಿದನು ಸಿನಿಮಾದ ಮುಹೂರ್ತ ನೆರವೇರಿದೆ. ಗ್ರೀನ್ ಹೌಸ್ ಮಾಲೀಕರಾದ ವಾಸು ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ನಾಯಕ ವಿರಾಜ್ ಅವರ ಅಜ್ಜಿ ಕ್ಯಾಮೆರಾಗೆ ಕ್ಲ್ಯಾಪ್‌ ಮಾಡಿ ಚಾಲನೆ ನೀಡಿದರು. ಈ ಚಿತ್ರದ ಮೂಲಕ ಯುವ ನಟ ವಿರಾಜ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇವರಿಗೆ ನಾಯಕಿಯಾಗಿ ಹಿರಿಯ ನಟಿ ಶ್ರುತಿ (Shruti Krishna) ಮತ್ತು ಶರಣ್ (Sharan) ಅವರ ಕೊನೆಯ ಸಹೋದರಿ ಉಷಾ ಅವರ ಪುತ್ರಿ ಕೀರ್ತಿ (Keerthi Krishna) ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ:ಶೂಟಿಂಗ್ ಮುಗಿಸಿ ಆಸ್ಪತ್ರೆಗೆ ಬಂದಿದ್ದೆ, ಕೊನೆಯ ಬಾರಿಗೆ ಪ್ರಜ್ಞೆಯಲ್ಲಿದ್ದಾಗ ನೋಡಲಾಗಲಿಲ್ಲ: ತಾಯಿಯ ಅಗಲಿಕೆಗೆ ಕಿಚ್ಚ ಭಾವುಕ

     

    View this post on Instagram

     

    A post shared by Su Ni (@simplesuni)

    ‘ದೇವರು ರುಜು ಮಾಡಿದನು’ ಎಂಬ ಕ್ಯಾಚಿ ಟೈಟಲ್ ಮೂಲಕ ಕಿಕ್ ಕೊಟ್ಟಿದ್ದ ಸುನಿ ಟೈಟಲ್ ಟೀಸರ್ ಬಿಟ್ಟು ನಿರೀಕ್ಷೆಯನ್ನು ಇಮ್ಮಡಿಗೊಳಿಸಿದ್ದಾರೆ. ಸಂಗೀತವೇ ಉಸಿರು ಎಂದು ಜೀವಿಸುವ ಇಬ್ಬರು ನಾಯಕಿಯರು ಹಾಗೂ ಸಂಗೀತ ಇಷ್ಟವಿಲ್ಲದಿದ್ದರೂ ಅದನ್ನು ಪ್ರೀತಿಸುವ ನಾಯಕ. ಒಂದೇ ಮಾತಿನಲ್ಲಿ ಹೇಳುವುದಾದರೆ ಸೊಗಸಾದ ಸಂಗೀತದ ಕಥೆ ಜೊತೆಗೆ ರಕ್ತ ಚರಿತ್ರೆಯನ್ನು ಸುನಿ ಹೇಳೋದಿಕ್ಕೆ ಹೊರಟಿದ್ದಾರೆ. ‘ದೇವರು ರುಜು ಮಾಡಿದನು’ ಟೀಸರ್ ಬಹಳ ಇಂಪ್ರೆಸಿವ್ ಆಗಿದೆ. ಕ್ಯಾಮೆರಾ ವರ್ಕ್, ಅದ್ಭುತ ಸಂಗೀತ, ನಾಯಕ ವಿರಾಜ್, ನಾಯಕಿಯರಾದ ಕೀರ್ತಿ ಕೃಷ್ಣ ಹಾಗೂ ದಿವಿತಾ ರೈ ಅಭಿನಯಕ್ಕೆ ಟೀಸರ್ ತೂಕ ಹೆಚ್ಚಿಸಿದೆ.

    ಮುಹೂರ್ತದ ಬಳಿಕ ಮಾತನಾಡಿದ ನಾಯಕ ವಿರಾಜ್, ತುಂಬಾ ಖುಷಿಯಾಗುತ್ತಿದೆ. ಈ ಮುಹೂರ್ತ ಸಮಾರಂಭ ನನ್ನ ಜೀವನದ ಒಂದಲ್ಲ, ಎರಡಲ್ಲ ಎಷ್ಟೋ ವರ್ಷದ ಕನಸು. ಚಿಕ್ಕವನಿದ್ದಾಗಿನಿಂದಲೂ ನಟನಾಗಬೇಕು ಎಂಬ ಆಸೆ ನನ್ನಲ್ಲಿತ್ತು. ಸ್ಕೂಲ್ ಟೀಚರ್ಸ್ ಡ್ಯಾನ್ಸ್, ನಟನೆ ಮಾಡು ಎಂದು ಹೇಳುತ್ತಿದ್ದರು. ನಾನು ಆಗ ಮಾಡುತ್ತಿದ್ದೆ. ಆಗ ನನ್ನ ಫ್ರೆಂಡ್ಸ್ ಚಪ್ಪಾಳೆ ತಟ್ಟುತ್ತಿದ್ದರು. ಆಗ ಇದೇನೂ ಕಿಕ್ ಇದೆಯಲ್ಲಾ, ಸಖತ್ ಇದೆ ಎನಿಸುವುದು. ಕಲಾವಿದರಿಗೆ ಇದೆ ಬೇಕಿರುವುದು. ಜನ ಕೊಡುವ ರೆಸ್ಪಾನ್ಸ್ ಅದು ವಂಡರ್ ಫುಲ್. ಅಂದಿನಿಂದ ನನ್ನ ಪಯಣ ಶುರುವಾಯ್ತು. ಜನರಿಗೆ ಏನಾದರೂ ಮಾಡಬೇಕು. ನನಗೆ ಇಷ್ಟವಾಗಿದ್ದನ್ನು ಮಾಡಬೇಕು ಅಂತಾ ಅನಿಸಿತು. ಸ್ಕೂಲ್, ಕಾಲೇಜ್, ಡ್ಯಾನ್ಸ್, ಆಕ್ಟಿಂಗ್ ಮಾಡುತ್ತಾ ಬಂದೆ. ನಂತರ ನಟನೆ ತರಬೇತಿ ಪಡೆದೆ. ನಾಟಕ ಮಾಡಿಕೊಂಡು ಬಂದಿದ್ದೇನೆ. ನಾನು ಹೊಸಬ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದೇನೆ ಎಂದರು.

    ವಿರಾಜ್ ರಂಗಭೂಮಿ ಕಲಾವಿದ. ರಂಗಭೂಮಿಯಲ್ಲಿ ಸಾಕಷ್ಟು ಅನುಭವಗಳನ್ನು ಪಡೆದುಕೊಂಡಿರುವ ಈ ವಿರಾಜ್ ‌ಈಗ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಹೊಸ ಪ್ರತಿಭೆಯನ್ನು ಚಿತ್ರರಂಗಕ್ಕೆ ಪರಿಚಯ ಮಾಡುವಾಗ ಸಾಕಷ್ಟು ತಯಾರಿಯನ್ನು ಮಾಡಿಕೊಂಡೇ ಎಂಟ್ರಿ ಕೊಟ್ಟಿರುತ್ತಾರೆ. ಅದರಂತೆ ವಿರಾಜ್ ಇಂಟ್ರುಡ್ಯೂಸ್ ಮಾಡುವಾಗಲೂ ಅಷ್ಟೇ ಪೂರ್ವ ತಯಾರಿ ಮಾಡಿಕೊಂಡೇ ಬಂದಿದ್ದಾರೆ. ಇನ್ನು ಗ್ರೀನ್ ಹೌಸ್ ಮೂವೀಸ್ ಅಡಿಯಲ್ಲಿ ಸಿನಿಮಾವನ್ನು ಗೋವಿಂದ್ ರಾಜ್ ಸಿಟಿ ನಿರ್ಮಾಣ ಮಾಡುತ್ತಿದ್ದಾರೆ.

  • Special- ನಟಿ ಶ್ರುತಿ ಕುಟುಂಬದ ಮೂರನೇ ತಲೆಮಾರು ಸಿನಿ ರಂಗಕ್ಕೆ ಎಂಟ್ರಿ

    Special- ನಟಿ ಶ್ರುತಿ ಕುಟುಂಬದ ಮೂರನೇ ತಲೆಮಾರು ಸಿನಿ ರಂಗಕ್ಕೆ ಎಂಟ್ರಿ

    ತ್ತೀಚೆಗೆ ನಟ ಶರಣ್ (Sharan) ಅವರ ಮಗ ‘ಗುರು ಶಿಷ್ಯರು’ ಚಿತ್ರದಲ್ಲಿ ಪಾತ್ರವೊಂದನ್ನು ನಿಭಾಯಿಸಿದ್ದರು. ಈಗ ಶರಣ್ ಅವರ ಕೊನೆಯ ಸಹೋದರಿ ಉಷಾ ಕೃಷ್ಣ (Usha Krishna) ಅವರ ಮಗಳು  ಕೀರ್ತಿ ಕೃಷ್ಣ (Keerthi Krishna) ಕೂಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ದೊಡ್ಡಮ್ಮ ಶ್ರುತಿ (Shruti) ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವ ಕಲಾವಿದೆ. ಮಾವ ಶರಣ್ ಕನ್ನಡ ಚಿತ್ರರಂಗದ ಸ್ಟಾರ್ ನಟ. ಈ ನಡುವೆ ಕೀರ್ತಿ ಕೃಷ್ಣ ಯಾವ ಸಿನಿಮಾದೊಂದಿಗೆ ಚಿತ್ರರಂಗದಲ್ಲಿ ಲಾಂಚ್ ಆಗಬಹುದು ಎನ್ನುವ ಕುತೂಹಲ ಎಲ್ಲರಲ್ಲೂ ಇತ್ತು. ಚಿತ್ರರಂಗದಲ್ಲಿ ಸಾಕಷ್ಟು ಜನ ಕೀರ್ತಿ ಕೃಷ್ಣ ಅವರನ್ನು ತಮ್ಮ ಚಿತ್ರದ ಮೂಲಕ ಪರಿಚಯಿಸಲು ತುದಿಗಾಲಲ್ಲಿ ನಿಂತಿದ್ದರು. ಅಂತಿಮವಾಗಿ ಈಗ ಕೀರ್ತಿ ತಮ್ಮ ಮೊದಲ ಸಿನಿಮಾವನ್ನು ಒಪ್ಪಿದ್ದಾರೆ. ಅದು ಧರಣಿ (Dharani) ಮೂಲಕ ಸಿನಿಮಾ ರಂಗ ಪ್ರವೇಶ ಮಾಡುತ್ತಿದ್ದಾರೆ.

    ಮನೋಜ್ ನಾಯಕನಾಗಿ ನಟಿಸುತ್ತಿರುವ ʻಧರಣಿʼ ಫಸ್ಟ್ ಲುಕ್  ಪೋಸ್ಟರ್  ಮೂಲಕವೇ ಎಲ್ಲರ ಗಮನ ಸೆಳೆದಿತ್ತು. ಕೋಳಿ ಪಂದ್ಯದ ಜೊತೆಗೆ ಕಾಡುವ ಕಥೆಯೊಂದು ಈ ಚಿತ್ರದಲ್ಲಿದೆ ಅಂತಾ ಚಿತ್ರತಂಡ ಹೇಳಿಕೊಂಡಿತ್ತು. ಈಗ ಕೀರ್ತಿ ಆಯ್ಕೆಯಾಗುವ ಮೂಲಕ ʻಧರಣಿʼಯ ಕುರಿತು ಕ್ಯೂರಿಯಾಸಿಟಿ ಹೆಚ್ಚಾಗಿದೆ. ಇದನ್ನೂ ಓದಿ: ಬಹುಕಾಲದ ಗೆಳತಿ ಜೊತೆ ತೆಲುಗು ನಟ ಶರ್ವಾನಂದ್ ಎಂಗೇಜ್‌ಮೆಂಟ್

    ಸರಿ ಸುಮಾರು ಹನ್ನೆರಡು ವರ್ಷಗಳ ಹಿಂದೆ ತೆರೆ ಕಂಡಿದ್ದ ರಾಮ್ ಕುಮಾರ್ ಮತ್ತು ಶ್ರುತಿ  ಅಭಿನಯದ ʻಶ್ರೀ ನಾಗ ಶಕ್ತಿʼ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಮುಖಕ್ಕೆ ಬಣ್ಣ ಹಚ್ಚಿದ್ದವರು ಕೀರ್ತಿ. ವಿದ್ಯಾಭ್ಯಾಸದ ಕಾರಣಕ್ಕೆ ಚಿತ್ರರಂಗದಿಂದ ದೂರವೇ ಉಳಿದಿದ್ದರು. ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಕಾಲೇಜಿನಲ್ಲಿ ಬಿಬಿಎ ಮುಗಿಸಿರುವ ಕೀರ್ತಿ ಈಗ ಪೂರ್ಣ ಪ್ರಮಾಣದಲ್ಲಿ ಸಿನಿಮಾ ರಂಗದಲ್ಲಿ ತೊಡಗಿಸಿಕೊಳ್ಳುವ ಮನಸ್ಸು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ಕಥೆ ಸಿಕ್ಕರೆ ಮಾತ್ರ ಒಪ್ಪಬೇಕು ಅಂತಾ ಕಾದಿದ್ದ ಕೀರ್ತಿ ಮತ್ತು ಅವರ ಕುಟುಂಬದವರಿಗೆ ʻಧರಣಿʼಯ ಕತೆ ಅಪಾರವಾಗಿ ಇಷ್ಟವಾಗಿದ್ದರಿಂದ ಈ ಚಿತ್ರದ ಮೂಲಕ ನಾಯಕಿಯಾಗಲು ಒಪ್ಪಿಗೆ ನೀಡಿದ್ದಾರೆ.

    ಶ್ರುತಿ ಅವರ ಇಡೀ ಕುಟುಂಬ ಕಲಾಸೇವೆಯಲ್ಲಿ ತೊಡಗಿಸಿಕೊಂಡಿದೆ. ತಂದೆ ಕೃಷ್ಣ, ತಾಯಂದಿರಾದ ರಾಧ-ರುಕ್ಮಿಣಿ ರಂಗಭೂಮಿ ಮತ್ತು ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಕೃಷ್ಣ ಅವರ ತಾಯಿ ಕೂಡಾ ನಟಿಯಾಗಿದ್ದವರು. ನಂತರ ಶ್ರುತಿ ಮತ್ತು ಶರಣ್ ಕೂಡಾ ಬಣ್ಣದ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಿದವರು. ಈಗ ಮೂರನೇ ತಲೆಮಾರಿನ ಕೀರ್ತಿ ಕೃಷ್ಣ ಕೂಡಾ ಭರವಸೆ ಮೂಡಿಸಿದ್ದಾರೆ.

    ಅನಂತು ವರ್ಸಸ್ ನುಸ್ರತ್ ಖ್ಯಾತಿಯ ಸುಧೀರ್ ಶಾನುಭೋಗ್ ನಿರ್ದೇಶನದ ʻಧರಣಿʼ ಚಿತ್ರವನ್ನು ಯಂಗ್ ಥಿಂಕರ್ಸ್ ಫಿಲಂಸ್ ಲಾಂಛನದಲ್ಲಿ ಜಿ.ಕೆ.ಉಮೇಶ್ ಕೆ. ಗಣೇಶ್ ಐತಾಳ್ ಅವರು  ನಿರ್ಮಿಸುತ್ತಿದ್ದಾರೆ.  ಶಶಾಂಕ್ ಶೇಷಗಿರಿ ಸಂಗೀತ, ಅರುಣ್ ಸುರೇಶ್ ಛಾಯಾಗ್ರಹಣ, ಅರುಣೋದಯ ಕಥೆ , ಶ್ರೀನಿಧಿ ಡಿ ಎಸ್ ಸಂಭಾಷಣೆ ಜೊತೆಗೆ ಡಾ.ವಿ.ನಾಗೇಂದ್ರ ಪ್ರಸಾದ್ ಹಾಗೂ ಶಿವಕುಮಾರ್ ಮಾವಲಿ ಸಾಹಿತ್ಯ, ಟೈಗರ್ ಶಿವು ಸಾಹಸ ಸಂಯೋಜನೆ ಇದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ನನ್ನ ಪ್ರೀತಿಯ ಹುಡುಗಿ’ ಮುಹೂರ್ತ

    ‘ನನ್ನ ಪ್ರೀತಿಯ ಹುಡುಗಿ’ ಮುಹೂರ್ತ

    ಬೆಂಗಳೂರು: ಭೀರೇಶ್ವರ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೋಹನ್ ಸುರೇಶ್, ಪಿ.ಕೃಷ್ಣಪ್ಪ ನಿರ್ಮಾಣದ ‘ನನ್ನ ಪ್ರೀತಿಯ ಹುಡುಗಿ’ ಚಿತ್ರಕ್ಕೆ ನಾಗಮಂಗಲ ತಾಲೂಕಿನ ಮದ್ದೇನಹಟ್ಟಿ ಅಮ್ಮನವರ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು.

    ಕೀರ್ತಿ ಕೃಷ್ಣ, ರಾಘವ್, ಅಂಜೆಶ್ರೀ ಅಭಿನಯಿಸಿದ ದೃಶ್ಯಗಳ ಚಿತ್ರೀಕರಣ ಇದೇ ವೇಳೆ ನಡೆಯಿತು. ನಿರ್ದೇಶನ- ಕಿರಣ್ ದೇವಿ (ಪಾವಗಡ), ಛಾಯಾಗ್ರಹಣ – ಎನ್‍ಟಿಎ ವೀರೇಶ್, ಸಂಗೀತ – ವಿಜಯ್ ಹ್ಯಾಡ್ಲಿ, ಸಾಹಸ – ಮೈಸೂರ್ ವೇಲು, ನೃತ್ಯ – ಲಕ್ಷ್ಮೀಶ್‍ವಿಯ್, ಆರ್ವಿನ್‍ಫ್ರಾನ್ಸಿಸ್, ವಜಾದ್ ಸರ್ಜಾರಿಯಾ, ಸಾಹಿತ್ಯ-ಯೋಗರಾಜ್ ಭಟ್, ಬಹದ್ದೂರ್ ಚೇತನ್, ಅಭಿಜಿತ್ ಆಳದಂಗಡಿ, ಮಧುಮಿಲನ್ ಮಂಡ್ಯ, ತಾರಾಗಣದಲ್ಲಿ – ಕೀರ್ತಿ ಕೃಷ್ಣ, ರಾಘವ್, ಅಂಜೆಶ್ರೀ, ನಿಖಿತ, ಬಾಲು, ಸುರಕ್ಷ, ಹರ್ಷಿತ, ಕೋಟಾಶಂಕರ್, ಕರಾಟರಾಜ, ಸಂಗೀತ, ಸುಲೋಚನ, ಡಿಂಗ್ರಿ ನಾಗರಾಜ್, ಪವನ್, ಕೆಂಪೇಗೌಡ ಮುಂತಾದವರಿದ್ದಾರೆ.