Tag: ಕುಂಬಳಗೋಡು ಪೊಲೀಸ್‌ ಠಾಣೆ

  • ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಶಶಾಂಕ್ ಸಾವು

    ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಶಶಾಂಕ್ ಸಾವು

    ಬೆಂಗಳೂರು: ಪ್ರೀತಿ ವಿಚಾರಕ್ಕೆ ಯುವಕನನ್ನು ಕಿಡ್ನಾಪ್ ಮಾಡಿ ಬೆಂಕಿ ಹಚ್ಚಿದ್ದರಿಂದ ಗಂಭೀರ ಗಾಯಗೊಂಡಿದ್ದ ಶಶಾಂಕ್ (Shashank) ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ  ಸಾವನ್ನಪ್ಪಿದ್ದಾನೆ.

    ಆರ್‌ಆರ್ ನಗರದ ನಿವಾಸಿ ರಂಗನಾಥ್ ಹಾಗೂ ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್‌ನನ್ನು (19) ದುಷ್ಕರ್ಮಿಗಳು ಕಿಡ್ನಾಪ್ ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಘಟನೆಯಿಂದಾಗಿ ಶಶಾಂಕ್ ದೇಹದ 90% ರಷ್ಟು ಭಾಗ ಸುಟ್ಟು ಹೋಗಿತ್ತು. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಶಶಾಂಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

    ಘಟನೆಯೇನು?
    ನಗರದ ಖಾಸಗಿ ಕಾಲೇಜಿನಲ್ಲಿ ಯುವಕ ಸಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದ. ಶಶಾಂಕ್ ತನ್ನ ಸಂಬಂಧಿಕರ ಮಗಳೊಬ್ಬಳನ್ನು ಪ್ರೀತಿಸುತಿದ್ದ. ಇದಕ್ಕೆ ಯುವತಿಯ ಪೋಷಕರ ವಿರೋಧವಿತ್ತು. ಇದೇ ಕಾರಣಕ್ಕೆ ಕಾಲೇಜ್ ಬಳಿ ಇದ್ದ ಯುವಕನನ್ನು ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಕೈ ಕಾಲು ಕಟ್ಟಿ ಬೆಂಕಿ ಹಚ್ಚಿದ್ದರು. ಇದನ್ನೂ ಓದಿ ಪ್ರೀತಿ ವಿಚಾರಕ್ಕೆ ಕಿರಿಕ್ – ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

    ಇತ್ತೀಚೆಗೆ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ ಯುವತಿಯನ್ನು ಶಶಾಂಕ್ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಇದರಿಂದ ಅಸಮಾಧಾನಗೊಂಡಿದ್ದ ಯುವತಿಯ ಪೋಷಕರು ಆತನ ಮನೆಗೆ ನುಗ್ಗಿ ಗಲಾಟೆ ಮಾಡಿದ್ದರು. ಇದಾದ ಬಳಿಕ ಯುವತಿಯ ವಿಚಾರದಿಂದ ದೂರ ಇರುತ್ತೇನೆ ಎಂದು ಶಶಾಂಕ್ ಹೇಳಿದ್ದ. ಆದರೂ ದುಷ್ಕರ್ಮಿಗಳು ಶಶಾಂಕ್ ಮೇಲೆ ವಿಕೃತಿ ಮೆರೆದಿದ್ದರು. ಇದನ್ನೂ ಓದಿ: ಅಪ್ಪ-ಅಮ್ಮನ ತಲೆಗೆ ರಾಡ್‍ನಿಂದ ಹೊಡೆದು ಕೊಂದು ಮಗ ಎಸ್ಕೇಪ್!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಕ್ಸ್‌ಪ್ರೆಸ್‌ವೇಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ಹುಚ್ಚಾಟಕ್ಕೆ ಬೈಕ್ ಸವಾರ ಬಲಿ

    ಎಕ್ಸ್‌ಪ್ರೆಸ್‌ವೇಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ಹುಚ್ಚಾಟಕ್ಕೆ ಬೈಕ್ ಸವಾರ ಬಲಿ

    ಬೆಂಗಳೂರು: ಟೋಲ್ (Toll) ಕಟ್ಟುವುದನ್ನು ತಪ್ಪಿಸಲು ಹೋಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ (Bengaluru-Mysuru Expressway) ಒನ್ ವೇಯಲ್ಲಿ (One Way) ಬಂದ ಕೆಎಸ್‌ಆರ್‌ಟಿಸಿ (KSRTC) ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆಂಗೇರಿಯಲ್ಲಿ (Kengeri) ನಡೆದಿದೆ.

    ಈ ಘಟನೆ ಮೈಸೂರು ರೋಡ್ ರಾಜರಾಜೇಶ್ವರಿ ಆಸ್ಪತ್ರೆ ಬಳಿ ನಡೆದಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅಜಾಗರುಕತೆಗೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್‌ನಲ್ಲಿದ್ದ ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದು ಆತನನ್ನು ರಾಜರಾಜೇಶ್ವರಿ ಆಸ್ಪತ್ರೆಗೆ (Rajarajeshwari Hospital) ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಎನ್‍ಹೆಚ್‍ಎಮ್ ಒಳಗುತ್ತಿಗೆ ನೌಕರರ ಪ್ರತಿಭಟನೆ – ಎಸ್ಮಾ ಜಾರಿ ಮಾಡಿದ ಆರೋಗ್ಯ ಇಲಾಖೆ

    ಬೆಂಗಳೂರಿನಿಂದ ಮೈಸೂರಿಗೆ ಕೆಎಸ್‌ಆರ್‌ಟಿಸಿ ಬಸ್ ಹೊರಟಿತ್ತು. ಕಣಿಮಿಣಿಕೆ ಬಳಿ ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಮತ್ತೆ ವಾಪಸ್ ಬೆಂಗಳೂರು ಕಡೆಗೆ ಬರುತ್ತಿದ್ದಾಗ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಕುಂಬಳಗೋಡು ಠಾಣೆಯಲ್ಲಿ (Kumbalagodu Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಖಾಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಪರಾರಿ – ಪಂಜಾಬ್‌ ಹಲವೆಡೆ ಇಂಟರ್‌ನೆಟ್‌ ಸ್ಥಗಿತ