Tag: ಕುಂಭಮೇಳ

  • ಕುಂಭಮೇಳದಿಂದ ಬರುತ್ತಿದ್ದಾಗ ಅಪಘಾತ – ರಾಯಚೂರಿನ ವ್ಯಕ್ತಿ ಸಾವು

    ಕುಂಭಮೇಳದಿಂದ ಬರುತ್ತಿದ್ದಾಗ ಅಪಘಾತ – ರಾಯಚೂರಿನ ವ್ಯಕ್ತಿ ಸಾವು

    ರಾಯಚೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆಯುತ್ತಿರುವ ಕುಂಭಮೇಳಕ್ಕೆ (Kumb Mela) ಹೋಗಿದ್ದ ರಾಯಚೂರಿನ (Raichuru) ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    ಮಹಾದೇವ ವಾಲೇಕರ್ (48) ಮೃತ ದುರ್ದೈವಿ. ಮಧ್ಯಪ್ರದೇಶದ (Madhya Pradesh) ಮೇಹೂರ್ ಬಳಿ ಕಾರು ಇವರಿಗೆ ಡಿಕ್ಕಿ ಹೊಡೆದಿದ್ದರಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಧಾರ್ಮಿಕ ವಿಚಾರದಲ್ಲೂ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ: ಪ್ರಕಾಶ್‌ ರಾಜ್‌

    ರಾಯಚೂರು ತಾಲೂಕಿನ‌ ಚಂದ್ರಬಂಡಾ ಗ್ರಾಮದ ನಿವಾಸಿಯಾಗಿದ್ದ ಮಹಾದೇವ ಕುಟುಂಬ ಸ್ನೇಹಿತರೊಂದಿಗೆ ಪ್ರಯಾಗ್‌ರಾಜ್‌ ಕುಂಭಮೇಳದಿಂದ ವಾಪಸ್ ಊರು ಕಡೆ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.

    ಮಹಾದೇವ ವಾಲೇಕರ್ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿ ನಿಂತಿತ್ತು. ಕಾರಿನಲ್ಲಿದ್ದವರು ಕೆಳಗಡೆ ಇಳಿದಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ಮಹಾದೇವ ಮೇಲೆ ಹೈದರಾಬಾದ್‌ ಮೂಲದ ಕಾರು ಹರಿದಿದೆ.

    ಅಪಘಾತ ಬಳಿಕ ಮಹಾದೇವ್‌ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹೈದರಾಬಾದ್ ಮೂಲದ ಕಾರನ್ನು ಸ್ಥಳೀಯ ಪೊಲೀಸರು ಜಪ್ತಿ ಮಾಡಿದ್ದಾರೆ.

     

  • Prayagraj Kumbh Mela | 1500 ಕೋಟಿ ರೂ. ಖರ್ಚು ಮಾಡಿದ್ದಕ್ಕೆ UP ಆರ್ಥಿಕತೆಗೆ 3 ಲಕ್ಷ ಕೋಟಿ ಲಾಭ: ಯೋಗಿ

    Prayagraj Kumbh Mela | 1500 ಕೋಟಿ ರೂ. ಖರ್ಚು ಮಾಡಿದ್ದಕ್ಕೆ UP ಆರ್ಥಿಕತೆಗೆ 3 ಲಕ್ಷ ಕೋಟಿ ಲಾಭ: ಯೋಗಿ

    ಲಕ್ನೋ: ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆದ ಮಹಾ ಕುಂಭಮೇಳದಿಂದ (Maha Kumbh Mela) ಉತ್ತರ ಪ್ರದೇಶದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ (Yogi Adityanath) ಹೇಳಿದ್ದಾರೆ.

    ಇಂದು ಲಕ್ನೋದಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಸಮ್ಮುಖದಲ್ಲಿ 114 ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ನಡೆಯಿತು. ಇದನ್ನೂ ಓದಿ: ನಮ್ಮ ಮಕ್ಕಳು ಲವ್‌ ಜಿಹಾದ್‌ಗೆ ತುತ್ತಾಗಿದ್ದಾರೆ, ಸಹಾಯ ಮಾಡಿ: ಶ್ರೀರಾಮಸೇನೆಯ ಸಹಾಯ ಕೇಳಿದ ಪೊಲೀಸ್‌ ಅಧಿಕಾರಿಗಳು

    ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅದಿತ್ಯನಾಥ್‌, ನಮಗೆ ಪ್ರತಿ 6 ವರ್ಷಗಳಿಗೊಮ್ಮೆ ಕುಂಭ ಮತ್ತು ಪ್ರತಿ 12 ವರ್ಷಗಳಿಗೊಮ್ಮೆ ಮಹಾಕುಂಭವನ್ನು ಆಯೋಜಿಸುವ ಅವಕಾಶ ಸಿಗುತ್ತದೆ. ನಾವು ಮಾಡುವ ಎಲ್ಲಾ ಚಟುವಟಿಕೆಗಳು ನಮ್ಮ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತವೆ ಎಂದರು.


    ಕುಂಭಮೇಳವನ್ನು ಆಯೋಜಿಸಲು ಒಟ್ಟು 1500 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದಕ್ಕೆ ಪ್ರತಿಯಾಗಿ ನಮ್ಮ ಆರ್ಥಿಕತೆ 3 ಲಕ್ಷ ಕೋಟಿ ರೂ.ಗಳ ಲಾಭ ಪಡೆದಿದೆ. 1,500 ಕೋಟಿ ರೂ. ಹಣವನ್ನು ಕುಂಭಮೇಳಕ್ಕೆ ಮಾತ್ರ ಖರ್ಚು ಮಾಡಿಲ್ಲ. ಪ್ರಯಾಗ್‌ರಾಜ್ ನಗರದ ನವೀಕರಣಕ್ಕೆ ಖರ್ಚು ಮಾಡಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು.

  • ಮಹಾ ಕುಂಭಮೇಳದಲ್ಲಿ ಈವರೆಗೆ 43 ಕೋಟಿ ಜನರಿಂದ ಪುಣ್ಯಸ್ನಾನ

    ಮಹಾ ಕುಂಭಮೇಳದಲ್ಲಿ ಈವರೆಗೆ 43 ಕೋಟಿ ಜನರಿಂದ ಪುಣ್ಯಸ್ನಾನ

    ಪ್ರಯಾಗ್‌ರಾಜ್‌: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಈವರೆಗೆ 43 ಕೋಟಿ ಜನರು ಅಮೃತ ಸ್ನಾನ ಮಾಡಿದ್ದಾರೆ.

    144 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಜ.13 ರಿಂದ ಕುಂಭಮೇಳ ಆರಂಭವಾಗಿದೆ. ಆಧ್ಯಾತ್ಮ, ಭಕ್ತಿ-ಭಾವದ ಕೇಂದ್ರವಾಗಿರುವ ಕುಂಭಮೇಳಕ್ಕೆ ದೇಶ-ವಿದೇಶಗಳಿಂದ ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಹರಿದುಬರುತ್ತಿದ್ದಾರೆ.

    ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ. ಸಾಧು-ಸಂತರನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ. ಫೆ.26 ರ ವರೆಗೆ ಕುಂಭಮೇಳ ನಡೆಯಲಿದೆ.

  • ಇಂದಿನಿಂದ ಟಿ.ನರಸೀಪುರದಲ್ಲಿ ದಕ್ಷಿಣ ಭಾರತದ ಏಕೈಕ ಕುಂಭಮೇಳ

    ಇಂದಿನಿಂದ ಟಿ.ನರಸೀಪುರದಲ್ಲಿ ದಕ್ಷಿಣ ಭಾರತದ ಏಕೈಕ ಕುಂಭಮೇಳ

    ಮೈಸೂರು: ದಕ್ಷಿಣ ಭಾರತದ ಕುಂಭಮೇಳಕ್ಕೆ (Kumbh Mela) ಕ್ಷಣಗಣನೆ ಆರಂಭವಾಗಿದೆ. ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಮೈಸೂರು (Mysuru) ಜಿಲ್ಲೆಯ ಟಿ.ನರಸೀಪುರದ (T Narasipura) ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ.

    ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ಪವಿತ್ರ ಸ್ನಾನ ನಡೆಯುತ್ತಿದ್ದರೆ, ಕರ್ನಾಟಕದ ಪವಿತ್ರ ಕ್ಷೇತ್ರವೆಂದೇ ಟಿ.ನರಸೀಪುರದ ತ್ರಿವೇಣಿ ಸಂಗಮ ಹೆಸರುವಾಸಿಯಾಗಿದೆ. ಫೆ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ 9:30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆಯವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ. ಸರ್ಕಾರ ಇದಕ್ಕಾಗಿ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇದನ್ನೂ ಓದಿ: Aero India 2025 | ವೈಮಾನಿಕ ಪ್ರದರ್ಶನಕ್ಕಿಂದು ಚಾಲನೆ – ರಷ್ಯಾ, ಅಮೆರಿಕ ಸೇರಿ 90 ದೇಶಗಳು ಭಾಗಿ

    ಇನ್ನು ಇಂದು ಬೆಳಗ್ಗೆ 10 ಗಂಟೆಗೆ ಅಗಸ್ತೇಶ್ವರ ದೇವಸ್ಥಾನದಲ್ಲಿ ತ್ರಯೋದಶಿ, ಪುಷ್ಯ ಪ್ರಾತಃಕಾಲ 9 ಗಂಟೆಗೆ ಸನ್ನಿಧಿಯಲ್ಲಿ, ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅಥಿತಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ. ಇದನ್ನೂ ಓದಿ: Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ

    ಫೆ.11ರಂದು, ಚತುರ್ದಶಿ, ಆಶ್ಲೇಷ, ಪ್ರಾತಃ ಪುಣ್ಯಾಹ – ನವಗ್ರಹ ಹೋಮ, ಸುದರ್ಶನ ಹೋಮ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಧರ್ಮಸಭೆ, ಸಂಜೆ 4ಕ್ಕೆ ಮಹಾತ್ಮರ, ಸಂತರ, ಮಹಾ ಮಂಡಲೇಶ್ವರರ ತ್ರಿವೇಣಿ ಸಂಗಮ ಕ್ಷೇತ್ರ ಪ್ರವೇಶ, ಗುಂಜಾ ನರಸಿಂಹ ಸ್ವಾಮಿ ದೇವಸ್ಥಾನದಿಂದ ಟಿ.ನರಸೀಪುರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ಸಂಜೆ 6 ಗಂಟೆಗೆ ರುದ್ರ ಹೋಮ, ಪೂರ್ಣಾಹುತಿ, ರಾತ್ರಿ 7 ಗಂಟೆಗೆ ನಡೆಯುವ ಗಂಗಾ ಪೂಜೆಯ ವೇಳೆ ವಾರಾಣಸಿ ಗಂಗಾರತಿ ಮಾದರಿಯಲ್ಲಿ ದೀಪಾರತಿ ಕಾರ್ಯಕ್ರಮ ನಡೆಯಲಿದೆ. ಇದನ್ನೂ ಓದಿ: ಕಾರು-ಇನ್ನೋವಾ ನಡುವೆ ಭೀಕರ ಅಪಘಾತ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಕುಂಭಮೇಳದಲ್ಲಿ ವಿವಿಧ ಮಠಾಧೀಶರು, ರಾಜಕೀಯ ಗಣ್ಯರು ಭಾಗವಹಿಸಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ ವಿವಿಧ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿರಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಕುಂಭಮೇಳದ ಉದ್ಘಾಟನೆ ಮಾಡಲಿದ್ದು, ಸಚಿವರಾದ ಕೆ.ವೆಂಕಟೇಶ್, ರಾಮಲಿಂಗಾರೆಡ್ಡಿ, ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಯದುವೀರ್ ಒಡೆಯರ್, ಸ್ಥಳೀಯ ಶಾಸಕರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಚಾಮರಾಜನಗರ| ಚಾಲಕನಿಗೆ ಮೂರ್ಛೆ; ಮರಕ್ಕೆ ಡಿಕ್ಕಿಯಾದ ಬಸ್

    ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮೈಸೂರಿನ ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸೇರಿದಂತೆ ಹರಗುರುಚರ ಮೂರ್ತಿಗಳು ಕಾರ್ಯಕ್ರಮಗಳ ಸಾನಿಧ್ಯ ವಹಿಸಲಿದ್ದಾರೆ. ಇದನ್ನೂ ಓದಿ: ಫೆ.11ರಂದು ‘ಇನ್ವೆಸ್ಟ್‌ ಕರ್ನಾಟಕ 2025’ಕ್ಕೆ ಚಾಲನೆ – ಹೂಡಿಕೆ ಉತ್ಸವಕ್ಕೆ ಮುನ್ನುಡಿ: ಎಂ.ಬಿ.ಪಾಟೀಲ್‌

  • ಮಹಾ ಕುಂಭಮೇಳ – ತ್ರಿವೇಣಿ ಸಂಗಮದಲ್ಲಿಂದು ಮೋದಿ ಪುಣ್ಯ ಸ್ನಾನ

    ಮಹಾ ಕುಂಭಮೇಳ – ತ್ರಿವೇಣಿ ಸಂಗಮದಲ್ಲಿಂದು ಮೋದಿ ಪುಣ್ಯ ಸ್ನಾನ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ (Maha Kumbh Mela) ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.

    ಪ್ರಧಾನಿ ಮೋದಿ ಬೆಳಗ್ಗೆ 10:05ಕ್ಕೆ ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ (Prayag Raj Airport) ಆಗಮಿಸಲಿದ್ದು, ಅಲ್ಲಿಂದ ಬೆಳಗ್ಗೆ 10:10ಕ್ಕೆ ಡಿಪಿಎಸ್ ಹೆಲಿಪ್ಯಾಡ್‌ಗೆ ಪ್ರಯಾಣಿಸಿ, ನಂತರ 10:45 ಕ್ಕೆ ಏರಿಯಲ್ ಘಾಟ್‌ಗೆ ತೆರಳಲಿದ್ದಾರೆ. 10:50ಕ್ಕೆ ಏರಿಯಲ್ ಘಾಟ್‌ನಿಂದ ಮಹಾಕುಂಭಕ್ಕೆ ದೋಣಿಯಲ್ಲಿ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಬೆಳಗ್ಗೆ 11:00 ರಿಂದ 11:30ರ ವರೆಗೆ ಸಂಗಮ್ ಘಾಟ್‌ನಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ. ಇದನ್ನೂ ಓದಿ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ – ಯಾರು ಈ ಪೂನಂ ಗುಪ್ತಾ?

    ಬೆಳಗ್ಗೆ 11:45ಕ್ಕೆ ಅವರು ದೋಣಿಯಲ್ಲಿ ಏರಿಯಲ್ ಘಾಟ್‌ಗೆ ಹಿಂತಿರುಗಿ ನಂತರ ಡಿಪಿಎಸ್ ಹೆಲಿಪ್ಯಾಡ್‌ಗೆ ವಾಪಸ್ ಆಗ್ತಾರೆ. ಅಲ್ಲಿಂದ ಅವರು ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ ತೆರಳುತ್ತಾರೆ. ಮಧ್ಯಾಹ್ನ 12:30ಕ್ಕೆ ವಾಯುಪಡೆಯ ವಿಮಾನದಲ್ಲಿ ಪ್ರಯಾಗ್‌ರಾಜ್‌ನಿಂದ ಹೊರಡಲಿದ್ದಾರೆ. ಇದನ್ನೂ ಓದಿ: ಮಾತಿನ ಭರದಲ್ಲಿ ಪೂಜಾ ಹೆಗ್ಡೆ ಯಡವಟ್ಟು- ಹಿಗ್ಗಾಮುಗ್ಗಾ ಟ್ರೋಲ್ ಆದ ನಟಿ

    ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಸಂತರೊಂದಿಗೆ ಸಂವಹನ ನಡೆಸುವ ನಿರೀಕ್ಷೆಯಿದೆ.

  • ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ – ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ

    ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ – ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ

    ನವದೆಹಲಿ: ದೆಹಲಿಯಲ್ಲಿ (Delhi Polls) ನಾಳೆ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಈ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಬುಧವಾರ ಪವಿತ್ರ ಸ್ನಾನ ಮಾಡಲಿದ್ದಾರೆ.

    ಪ್ರಧಾನಿ ಮೋದಿ ಬೆಳಗ್ಗೆ 10:05 ಕ್ಕೆ ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಬೆಳಗ್ಗೆ 10:10 ಕ್ಕೆ ಡಿಪಿಎಸ್ ಹೆಲಿಪ್ಯಾಡ್‌ಗೆ ಪ್ರಯಾಣಿಸಿ, ನಂತರ 10:45 ಕ್ಕೆ ಏರಿಯಲ್ ಘಾಟ್‌ಗೆ ತೆರಳಲಿದ್ದಾರೆ. 10:50 ಕ್ಕೆ ಏರಿಯಲ್ ಘಾಟ್‌ನಿಂದ ಮಹಾಕುಂಭಕ್ಕೆ ದೋಣಿಯಲ್ಲಿ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಬೆಳಗ್ಗೆ 11:00 ರಿಂದ 11:30 ರವರೆಗೆ ಸಂಗಮ್ ಘಾಟ್‌ನಲ್ಲಿ ಸ್ನಾನ ಮಾಡಲಿದ್ದಾರೆ.

    ಬೆಳಗ್ಗೆ 11:45 ಕ್ಕೆ ಅವರು ದೋಣಿಯಲ್ಲಿ ಏರಿಯಲ್ ಘಾಟ್‌ಗೆ ಹಿಂತಿರುಗಿ ನಂತರ ಡಿಪಿಎಸ್ ಹೆಲಿಪ್ಯಾಡ್‌ಗೆ ವಾಪಸ್‌ ಆಗ್ತಾರೆ. ಅಲ್ಲಿಂದ ಅವರು ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ ತೆರಳುತ್ತಾರೆ. ಮಧ್ಯಾಹ್ನ 12:30 ಕ್ಕೆ ವಾಯುಪಡೆಯ ವಿಮಾನದಲ್ಲಿ ಪ್ರಯಾಗ್‌ರಾಜ್‌ನಿಂದ ಹೊರಡಲಿದ್ದಾರೆ.

    ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಸಂತರೊಂದಿಗೆ ಸಂವಹನ ನಡೆಸುವ ನಿರೀಕ್ಷೆಯಿದೆ. ಜೊತೆಗೆ 2025 ರ ಮಹಾಕುಂಭದಲ್ಲಿ (Kumbh Mela) ಭಾಗವಹಿಸುವ ಲಕ್ಷಾಂತರ ಯಾತ್ರಾರ್ಥಿಗಳಿಗೆ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸುತ್ತಾರೆ.

  • ಮಹಾ ಕುಂಭಮೇಳದಲ್ಲಿ ಭಾಗಿಯಾದ ‘ಕೆಜಿಎಫ್ 2’ ಕ್ವೀನ್‌

    ಮಹಾ ಕುಂಭಮೇಳದಲ್ಲಿ ಭಾಗಿಯಾದ ‘ಕೆಜಿಎಫ್ 2’ ಕ್ವೀನ್‌

    ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ (Kumbh Mela) ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಅಪಾರ ಸಂಖ್ಯೆಯಲ್ಲಿ ಕುಂಭ ಮೇಳದಲ್ಲಿ ಜನ ಭಾಗಿಯಾಗುತ್ತಿದ್ದಾರೆ. ಇದರ ನಡುವೆ ‘ಕೆಜಿಎಫ್ 2’ (KGF 2) ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ಅವರು ಮಾಸ್ಕ್ ಹಾಕಿಕೊಂಡೇ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಈ ಆಧ್ಯಾತ್ಮಿಕ ಅನುಭವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಮೌನಿ ಅಮಾವಾಸ್ಯೆಯಂದು ಮಹಾಕುಂಭ ಮೇಳದಲ್ಲಿನ ತ್ರಿವೇಣಿ ಸಂಗಮದಲ್ಲಿ ನಾನು ಪವಿತ್ರವಾದ ಸ್ನಾನ ಮಾಡುತ್ತೇನೆ ಎಂದು ಕನಸು ಮನಸಿನಲ್ಲಿಯೂ ಕೂಡ ಅಂದುಕೊಂಡಿರಲಿಲ್ಲ. ಈ ಅದ್ಭುತವಾದ ಅನುಭವವನ್ನು ನಾನು ಸಂಪೂರ್ಣವಾಗಿ ಅನುಭವಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಬದುಕು ಅಚ್ಚರಿಯ ಸಂತೆ ಈ ದೈವಿಕ ಅನುಗ್ರಹ ಮತ್ತು ಆಶೀರ್ವಾದದಿಂದ ನನ್ನ ಹೃದಯ ತುಂಬಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ದರ್ಶನ್‌-ಪ್ರೇಮ್‌ ಸಿನಿಮಾ ಮಾಡೇ ಮಾಡ್ತಾರೆ – ರಕ್ಷಿತಾ

    ಅಂದಹಾಗೆ, ಯಶ್‌ಗೆ ನಾಯಕಿಯಾಗಿ ‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಚಿತ್ರದ ಸಕ್ಸಸ್ ಬಳಿಕ ತೆಲುಗು ಹಾಗೂ ತಮಿಳಿನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ನ್ಯಾಚುರಲ್ ಸ್ಟಾರ್ ನಾನಿಗೆ ನಾಯಕಿಯಾಗಿ ‘ಹಿಟ್ 3’ ಸಿನಿಮಾದಲ್ಲಿ ನಟಿಸಿದ್ದಾರೆ.

  • ಶಾಹಿ ಸ್ನಾನ ಮಾಡಿ ವಿಡಿಯೋ ಹಂಚಿಕೊಂಡ ಪವಿತ್ರಾ ಗೌಡ

    ಶಾಹಿ ಸ್ನಾನ ಮಾಡಿ ವಿಡಿಯೋ ಹಂಚಿಕೊಂಡ ಪವಿತ್ರಾ ಗೌಡ

    ಪ್ರಯಾಗ್‌ರಾಜ್: ಸ್ಯಾಂಡಲ್‌ವುಡ್ ನಟಿ ಪವಿತ್ರಾ ಗೌಡ (Pavithra Gowda) ಅವರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಅದಷ್ಟೇ ಅಲ್ಲ, ಶಾಹಿ ಸ್ನಾನ ಮಾಡಿ ನಟಿ ವಿಡಿಯೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ತಡವಾದ್ರೂ ಈ ಸೆಲೆಬ್ರೇಷನ್ ಪ್ರೀತಿಯಿಂದ ತುಂಬಿದೆ – ಹೊಸ ಪೋಸ್ಟ್‌ ಹಂಚಿಕೊಂಡ ವಿಜಯಲಕ್ಷ್ಮಿ

    ‘ಮೌನಿ ಅಮಾವಾಸ್ಯೆಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೇ ಧನ್ಯಾಳು’. ನಾನು ಎಲ್ಲಾ ನಕಾರಾತ್ಮಕ ಶಕ್ತಿಯಿಂದ ಮುಕ್ತಳಾಗಿದ್ದೇನೆ ಎಂದು ನಂಬಿದ್ದೇನೆ. ಹರಹರ ಮಹಾದೇವ ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಇನ್ನೂ ಪವಿತ್ರಾ ಅವರು ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಬೇಲ್ ಸಿಕ್ಕಿದೆ. ಇದರ ನಡುವೆ ತಮ್ಮ ಫ್ಯಾಷನ್ ಬೂಟಿಕ್ ಉದ್ಯಮದ ಕಡೆ ನಟಿ ಹೆಚ್ಚು ಗಮನ ವಹಿಸುತ್ತಿದ್ದಾರೆ.

  • ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಭಕ್ತರು ಸಾವು – 60ಕ್ಕೂ ಹೆಚ್ಚು ಜನರಿಗೆ ಗಾಯ

    ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಭಕ್ತರು ಸಾವು – 60ಕ್ಕೂ ಹೆಚ್ಚು ಜನರಿಗೆ ಗಾಯ

    ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನ (Prayagraj) ಮಹಾಕುಂಭ (Maha Kumbh Stampede) ಸ್ಥಳದಲ್ಲಿ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದಾರೆ ಎಂದು ಬೃಹತ್ ಧಾರ್ಮಿಕ ಸಭೆಯ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಡಿಐಜಿ ತಿಳಿಸಿದ್ದಾರೆ.

    25 ಶವಗಳನ್ನು ಗುರುತಿಸಲಾಗಿದೆ. ಕಾಲ್ತುಳಿತದಿಂದ 60 ಮಂದಿ ಗಾಯಗೊಂಡಿದ್ದಾರೆ. ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ವೈಭವ್ ಕೃಷ್ಣ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ತಾಯಿ, ಮಗಳು ಸೇರಿ ಬೆಳಗಾವಿಯ ನಾಲ್ವರ ದುರ್ಮರಣ

    ಸ್ಥಳೀಯ ವರದಿಗಳು ಮತ್ತು ಪ್ರಯಾಗ್‌ರಾಜ್ ನಿವಾಸಿಗಳು ಕಾಲ್ತುಳಿತದಲ್ಲಿ ಸಾವುಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಸಾವು-ನೋವುಗಳ ಪ್ರಕಟಣೆ ಬಂದಿದೆ. ಆದಾಗ್ಯೂ, ವರದಿಗಳು ಸತ್ತವರ ಸಂಖ್ಯೆಗೆ ಅನುಗುಣವಾಗಿಲ್ಲ.

    ಅತ್ಯಂತ ಮಂಗಳಕರ ದಿನಗಳಲ್ಲಿ ಒಂದಾದ ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಪವಿತ್ರ ಸ್ನಾನ ಮಾಡಲು ಅನೇಕ ಯಾತ್ರಾರ್ಥಿಗಳ ನಡುವೆ ಜಾಗಕ್ಕಾಗಿ ಮಹಾ ಕುಂಭದ ಸಂಗಮ್ ಪ್ರದೇಶದಲ್ಲಿ ಮುಂಜಾನೆ ನೂಕುನುಗ್ಗಲು ಉಂಟಾಗಿದೆ. ಕಾಲ್ತುಳಿತ ಸಂಭವಿಸುವ ಮೊದಲು ಅನೇಕ ಜನರು ಬ್ಯಾರಿಕೇಡ್‌ಗಳನ್ನು ಒಡೆದು ನುಗ್ಗಿದ್ದಾರೆ. ಪರಿಣಾಮವಾಗಿ ಸಾವು-ನೋವುಗಳಾಗಿವೆ. ಇದನ್ನೂ ಓದಿ: ಕುಂಭಮೇಳದಿಂದ ವಾಪಸ್ ಆಗುವಾಗ ರಸ್ತೆ ಅಪಘಾತ – ಮೈಸೂರಿನ ಇಬ್ಬರು ದುರ್ಮರಣ

    ಮಹಾಕುಂಭದಲ್ಲಿ ಸ್ನಾನ ಮಾಡಲು ಬಂದ ಕರ್ನಾಟಕದ ನಿವಾಸಿ ಸರೋಜಿನಿ ಅವರು ಮಾತನಾಡಿದ್ದು, ನಾವು ಎರಡು ಬಸ್‌ಗಳಲ್ಲಿ 60 ಜನರ ಬ್ಯಾಚ್‌ನಲ್ಲಿ ಬಂದಿದ್ದೇವೆ. ನಮ್ಮ ಗುಂಪಿನಲ್ಲಿ ಒಂಬತ್ತು ಜನರಿದ್ದರು. ಇದ್ದಕ್ಕಿದ್ದಂತೆ ಗುಂಪಿನಲ್ಲಿ ತಳ್ಳಾಟವಾಯಿತು. ನಾವು ಕೂಡ ಸಿಕ್ಕಿಬಿದ್ದಿದ್ದೇವೆ ಎಂದು ತಿಳಿಸಿದ್ದಾರೆ.

  • ಕುಂಭಮೇಳದಲ್ಲಿ ಸ್ನಾನ ಮಾಡಿದ್ರೆ ಬಡತನ ನಿರ್ಮೂಲನೆ ಆಗೊಲ್ಲ: ಖರ್ಗೆ ಮಾತಿಗೆ ಸಿದ್ದರಾಮಯ್ಯ ಸಮರ್ಥನೆ

    ಕುಂಭಮೇಳದಲ್ಲಿ ಸ್ನಾನ ಮಾಡಿದ್ರೆ ಬಡತನ ನಿರ್ಮೂಲನೆ ಆಗೊಲ್ಲ: ಖರ್ಗೆ ಮಾತಿಗೆ ಸಿದ್ದರಾಮಯ್ಯ ಸಮರ್ಥನೆ

    ಬೆಂಗಳೂರು: ಕುಂಭಮೇಳದಲ್ಲಿ (Kumbh Mela) ಸ್ನಾನ ಮಾಡಿದ್ರೆ ಬಡತನ ನಿರ್ಮೂಲನೆ ಆಗುತ್ತಾ ಅಂತ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮಾತನ್ನ ಸಿಎಂ ಸಿದ್ದರಾಮಯ್ಯ (Siddaramaiah) ಸಮರ್ಥನೆ ಮಾಡಿಕೊಂಡಿದ್ದಾರೆ.

    ವಿವಾದದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಂಭ ಸ್ನಾನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿರೋ ಬಗ್ಗೆ ಅವರನ್ನೇ ಕೇಳಿ. ನನ್ನ ಅಭಿಪ್ರಾಯ ಕೂಡಾ ಅಷ್ಟೆ. ನಮ್ಮ ಸಂಪ್ರದಾಯ ಇದು ಅಷ್ಟೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ಅಟ್ರಾಸಿಟಿ ಕೇಸ್‌ನಲ್ಲಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಿ – ಸಿಎಂ ಖಡಕ್‌ ಸೂಚನೆ

    ಕುಂಭಮೇಳದಲ್ಲಿ ಸ್ನಾನ ಮಾಡೋರು, ಗಂಗೆಯಲ್ಲಿ ಸ್ನಾನ ಮಾಡೋದು ಪಾಪ ಪರಿಹಾರ ಆಗುತ್ತೆ ಅಂತ ನಂಬಿಕೆ ಇದೆ. ಆದರೆ ನಾವೆಲ್ಲ ಬಸವಣ್ಣನವರ ಅನುಯಾಯಿಗಳು. ಪಾಪ, ಪುಣ್ಯ ಎಲ್ಲಾ ಹೆಂಗೆ? ಅಯ್ಯಾ ಎಂದರೆ ಸ್ವರ್ಗ… ಎಲವೋ ಎಂದರೆ ನರಕ ಅನ್ನೋದ್ರಲ್ಲಿ ನಂಬಿಕೆ ಇಟ್ಟುಕೊಂಡು ಇದ್ದೇವೆ ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಮಾತನ್ನ ಸಮರ್ಥನೆ ಮಾಡಿಕೊಂಡರು.