Tag: ಕುಕ್ಕರ್‌ ಸ್ಫೋಟ

  • ಬೆಂಗಳೂರಿನಲ್ಲಿ ಶಂಕಾಸ್ಪದ ಕುಕ್ಕರ್ ಸ್ಫೋಟ – ಓರ್ವ ಸಾವು, ಮತ್ತೋರ್ವ ಗಂಭೀರ

    ಬೆಂಗಳೂರಿನಲ್ಲಿ ಶಂಕಾಸ್ಪದ ಕುಕ್ಕರ್ ಸ್ಫೋಟ – ಓರ್ವ ಸಾವು, ಮತ್ತೋರ್ವ ಗಂಭೀರ

    – ಘಟನಾ ಸ್ಥಳದಲ್ಲಿ ಸುಟ್ಟ ವಯರ್ ಪತ್ತೆ
    – ಎನ್‌ಐಎ ಪರಿಶೀಲನೆ

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮಂಗಳವಾರ ಶಂಕಾಸ್ಪದವಾಗಿ ಕುಕ್ಕರ್ ಸ್ಫೋಟಗೊಂಡ (Cooker Blast) ಪರಿಣಾಮ ಚಿಕಿತ್ಸೆ ಫಲಿಸದೆ ಓರ್ವ ಸಾವನ್ನಪ್ಪಿದ ಘಟನೆ ಜೆಪಿ ನಗರದಲ್ಲಿ (JP Nagar) ನಡೆದಿದೆ.

    ಕುಕ್ಕರ್ ಸ್ಫೋಟದಲ್ಲಿ ಉತ್ತರ ಪ್ರದೇಶ ಮೂಲದ ಮೋಸಿನ್ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇನ್ನೋರ್ವ ಗಾಯಾಳು ಸಮೀರ್‌ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸ್ಫೋಟದ ಹಿಂದೆ ಅನುಮಾನಗಳು ಶುರುವಾಗಿವೆ. ಜೆಪಿ ನಗರ 24ನೇ ಮುಖ್ಯರಸ್ತೆಯ ಉಡುಪಿ ಉಪಹಾರದ ಮನೆಯ ಬಳಿ ಈ ಘಟನೆ ನಡೆದಿದೆ. ಇದನ್ನೂ ಓದಿ: ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಸಿಎಂ ಕುರ್ಚಿ ಅಲ್ಲಾಡುತ್ತೆ: ಪ್ರತಾಪ್ ಸಿಂಹ

    ಈ ಸ್ಫೋಟವೂ ನಿಗೂಢವಾಗಿದೆ ಎನ್ನಲಾಗಿದ್ದು, ಈ ಹಿಂದೆ ನಡೆದ ರಾಮೇಶ್ವರಂ ಕೆಫೆಗೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತು. ಬಳಿಕ ಅದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತವಾಗಿತ್ತು. ಅದೇ ಮಾದರಿಯಲ್ಲಿ ಜೆಪಿ ನಗರದಲ್ಲಿ ನಡೆದಿರುವ ಸ್ಫೋಟವೂ ಕೂಡ ಅನುಮಾನಕ್ಕೆ ಕಾರಣವಾಗಿದೆ. ಮೇಲ್ನೋಟಕ್ಕೆ ಇದು ಕುಕ್ಕರ್ ಸ್ಫೋಟ ಎನ್ನಲಾಗುತ್ತಿದೆ. ಇದನ್ನೂ ಓದಿ: ಸಂಪನ್ಮೂಲದ ಗ್ಯಾರಂಟಿ ಇಲ್ಲದೇ ತಂದ ಗ್ಯಾರಂಟಿ ಯೋಜನೆಗಳನ್ನು ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಅಶೋಕ್

    ಸ್ಫೋಟದ ತೀವ್ರತೆಗೆ ರೂಂನಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಕುಕ್ಕರ್ ಸ್ಫೋಟ ಎನ್ನಲಾಗಿದ್ದು, ಸುಟ್ಟ ವಯರ್‌ಗಳು ಕೂಡ ಪತ್ತೆಯಾಗಿದೆ. ಇನ್ನು ಇಂದು (ಬುಧವಾರ) ಬಾಂಬ್ ನಿಷ್ಕ್ರಿಯಾ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಆ.20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ

  • ಕಾಂಗ್ರೆಸ್‌ ಶಾಸಕ ಹೆಚ್‌.ಸಿ ಬಾಲಕೃಷ್ಣ ನೀಡಿದ ಕುಕ್ಕರ್‌ ಸ್ಫೋಟ, ಬಾಲಕಿ ಮುಖಕ್ಕೆ ಗಂಭೀರ ಗಾಯ

    ಕಾಂಗ್ರೆಸ್‌ ಶಾಸಕ ಹೆಚ್‌.ಸಿ ಬಾಲಕೃಷ್ಣ ನೀಡಿದ ಕುಕ್ಕರ್‌ ಸ್ಫೋಟ, ಬಾಲಕಿ ಮುಖಕ್ಕೆ ಗಂಭೀರ ಗಾಯ

    – ರಾಮನಗರ ಕೂನಮುದ್ದನಹಳ್ಳಿ ಗ್ರಾಮಸ್ಥರ ಆರೋಪ

    ರಾಮನಗರ: ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡು (Cooker Blast) ಬಾಲಕಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ (Ramanagara) ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಚುನಾವಣಾ ಸಮಯದಲ್ಲಿ ಕಾಂಗ್ರೆಸ್ (Congress) ಶಾಸಕ ಹೆಚ್.ಸಿ ಬಾಲಕೃಷ್ಣ (H C Balakrishna) ಈ ಕುಕ್ಕರ್ ಗಳನ್ನ ನೀಡಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡು ಮಹಾಲಕ್ಷ್ಮಿ (17) ಎಂಬ ಬಾಲಕಿಗೆ ಮುಖದ ಮೇಲೆ ಸುಟ್ಟಗಾಯಗಳಾವೆ. ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದನ್ನೂ ಓದಿ: ಶಿಕ್ಷಕಿಯರಿಬ್ಬರ ಜಡೆ ಜಗಳ- ಮೂಕಪ್ರೇಕ್ಷರಾದ ಶಾಲಾ ಮಕ್ಕಳು

    ಇನ್ನೂ ಶಾಸಕ ಹೆಚ್.ಸಿ ಬಾಲಕೃಷ್ಣ ಈ ಕುಕ್ಕರ್ ನೀಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಮಹಿಳೆಯರು ಕುಕ್ಕರ್ ಗಳನ್ನ ತಂದು ರಸ್ತೆಗೆ ಎಸೆದು ಶಾಸಕರ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮ ಕುಕ್ಕರ್ ಗಳನ್ನ ನೀವೆ ತೆಗೆದುಕೊಂಡು ನಿಮ್ಮ ಹೆಂಡತಿಯರಿಗೆ ಕೊಡಿ, ಮತಪಡೆಯಲು ಬಡವರಿಗೆ ನೀಡಿ ಅವರ ಪ್ರಾಣಕ್ಕೆ ಕುತ್ತು ತರಬೇಡಿ ಎಂದು ಕುಕ್ಕರ್ ಗಳನ್ನ ಬೀದಿಗೆ ತಂದು ಎಸೆದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಗ್ಯಾರೆಂಟಿ ಎಫೆಕ್ಟ್ – 6 ದಿನಗಳಲ್ಲಿ ಬರೋಬ್ಬರಿ 78 ಸಾವಿರ ಬಿಪಿಎಲ್ ಅರ್ಜಿ ಸಲ್ಲಿಕೆ

  • ಕೇರಳದ ಲಾಡ್ಜ್‌ಗಳಿಗೆ ಕೊರಿಯರ್ ಮೂಲಕ ಬರ್ತಿತ್ತು ಬಾಂಬ್ ತಯಾರಿಸುವ ಸಾಮಾಗ್ರಿ

    ಕೇರಳದ ಲಾಡ್ಜ್‌ಗಳಿಗೆ ಕೊರಿಯರ್ ಮೂಲಕ ಬರ್ತಿತ್ತು ಬಾಂಬ್ ತಯಾರಿಸುವ ಸಾಮಾಗ್ರಿ

    ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟದ(Mangaluru Cooker Blast) ಉಗ್ರ ಶಾರೀಕ್(shariq) ಮಂಗಳೂರಿನ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಆತನ ಒಂದೊಂದೇ ಕೃತ್ಯಗಳು ರಾಷ್ಟ್ರೀಯ ತನಿಖಾ ದಳ(NIA) ತನಿಖೆಯಿಂದ ಹೊರ ಬೀಳುತ್ತಿದ್ದು ಈಗ ಈತ ಬಾಂಬ್ ತಯಾರಿಕೆ ಬೇಕಾದ ಸಾಮಾಗ್ರಿಗಳನ್ನು ಕೇರಳದ ಲಾಡ್ಜ್‌ಗಳಿಗೆ(Kerala Lodge) ತರಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

    ಕಳೆದ ನವೆಂಬರ್ 19 ರಂದು ಮಂಗಳೂರಿನ ನಾಗುರಿಯಲ್ಲಿ‌ ನಡೆದ ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಶಾರೀಕ್ ಚೇತರಿಸಿಕೊಳ್ಳುತ್ತಿದ್ದಾನೆ. ಅಂದಿನಿಂದ ಇಂದಿನವರೆಗೂ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಈಗ ಶೇ.80 ರಷ್ಟು ಗುಣಮುಖನಾಗಿದ್ದಾನೆ.

    ಎನ್‌ಐಎ ಅಧಿಕಾರಿಗಳು ಮಂಗಳೂರಿನಲ್ಲೇ ಬೀಡುಬಿಟ್ಟು ಶಾರೀಕ್‌ನ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಮಯದಲ್ಲಿ ಕೇರಳದ ಕೊಚ್ಚಿಯ ಆಲುವಾದ ಕೆಲವು ಲಾಡ್ಜ್‌ಗಳಲ್ಲಿ ಬಾಂಬ್ ತಯಾರಿಸುತ್ತಿದ್ದ ವಿಚಾರವನ್ನು ಈತ ಬಾಯಿಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಶೃತಿ ಹರಿಹರನ್ ದಾಖಲಿಸಿದ್ದ ಕೇಸ್‌ಗೆ ತಡೆಯಾಜ್ಞೆ

    ಆಲುವಾದ ರೈಲು ನಿಲ್ದಾಣ, ಬಸ್ಸು ನಿಲ್ದಾಣದ ಸಮೀಪದ ಹಲವು‌ ಲಾಡ್ಜ್‌ಗಳಲ್ಲಿ ತಂಗಿದ್ದ ಶಾರೀಕ್ ಅಲ್ಲಿಗೆ ಕೊರಿಯರ್ ಮೂಲಕ‌ ಬಾಂಬ್ ತಯಾರಿ ಸಾಮಾಗ್ರಿಗಳನ್ನು ತರಿಸಿಕೊಳ್ಳುತ್ತಿದ್ದ. ಆತ ಲಾಡ್ಜ್ ಬಿಟ್ಟು ಬಂದ ಬಳಿಕವೂ ಪಾರ್ಸೆಲ್‌ ಬರುತ್ತಿದ್ದು ಅದನ್ನು ಲಾಡ್ಜ್ ನವರು ಅವನಿಗೆ ತಲುಪಿಸುತ್ತಿದ್ದರು‌ ಎನ್ನುವ ಮಾಹಿತಿ ಹೊರ ಬಿದ್ದಿದೆ. ಹೀಗಾಗಿ ಎಲ್ಲಾ ಲಾಡ್ಜ್‌ಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್‌ಐಎ ತನಿಖೆಗೆ ಹಸ್ತಾಂತರಿಸಲು ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ

    ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್‌ಐಎ ತನಿಖೆಗೆ ಹಸ್ತಾಂತರಿಸಲು ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ

    ಬೆಂಗಳೂರು: ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಕಳೆದ ವಾರ ನಡೆದ ಘಟನೆಯ ಹಿಂದೆ ಉಗ್ರರ ದೊಡ್ಡ ಸಂಚೇ ಇತ್ತು ಎಂಬುದು ಬೆಳಕಿಗೆ ಬರುತ್ತಲೇ ಇದರ ತನಿಖೆಯನ್ನು ಎನ್‌ಐಎಗೆ (NIA) ವಹಿಸಬೇಕೆಂಬ ಒತ್ತಾಯ ಕೇಳಿಬರುತ್ತಿತ್ತು. ಇದೀಗ ಮಂಗಳೂರು ಸ್ಫೋಟ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲು ಸರ್ಕಾರ ನಿರ್ಧರಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತಿಳಿಸಿದ್ದಾರೆ.

    ಮಂಗಳೂರಿನ ಕಂಕನಾಡಿ ಸಮೀಪ ಕುಕ್ಕರ್ ಬಾಂಬ್ ಸ್ಫೋಟ ಘಟನೆಯ ಮುಂದಿನ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್ಲಾ ದೇವಾಲಯಗಳಲ್ಲೂ ಮುಸ್ಲಿಮರ ವ್ಯಾಪಾರ ಬಹಿಷ್ಕಾರ ಮಾಡಬೇಕು – ಪ್ರಮೋದ್ ಮುತಾಲಿಕ್

    ನವೆಂಬರ್ 19ರಂದು ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢವಾಗಿ ಸ್ಫೋಟವೊಂದು ಸಂಭವಿಸಿತ್ತು. ಘಟನೆಯಲ್ಲಿ ಆಟೋ ಡ್ರೈವರ್ ಹಾಗೂ ಹಿಂಬದಿ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿತ್ತು. ತನಿಖೆಯ ವೇಳೆ ಪ್ರಯಾಣಿಕನ ಸೋಗಿನಲ್ಲಿ ಬಂದು ಬಾಂಬ್ ಬ್ಲಾಸ್ಟ್ ಮಾಡಿದ್ದ ವ್ಯಕ್ತಿ ಮೋಸ್ಟ್ ವಾಂಟೆಡ್ ಶಾರೀಕ್ (Shariq) ಎಂಬುದು ತಿಳಿದುಬಂದಿದೆ. ಈತ ಮಂಗಳೂರಿನ ದೇವಾಲಯಗಳು ಸೇರಿದಂತೆ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲು ಯೋಜಿಸಿದ್ದ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಶಾರೀಕ್ ಅಲ್ಲ ಘಜನಿಯಿಂದ ಟಿಪ್ಪುವರೆಗಿನ ಎಲ್ಲರೂ ದೇವಸ್ಥಾನದ ಮೇಲೆ ದಾಳಿ ಮಾಡ್ಕೊಂಡೇ ಬಂದಿದ್ದಾರೆ: ಮುತಾಲಿಕ್

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್‌ ಬಾಂಬರ್‌ ಶಾರೀಕ್‌ ಗುಣಮುಖನಾಗಲು 25 ದಿನ ಬೇಕು

    ಕುಕ್ಕರ್‌ ಬಾಂಬರ್‌ ಶಾರೀಕ್‌ ಗುಣಮುಖನಾಗಲು 25 ದಿನ ಬೇಕು

    ಮಂಗಳೂರು: ಕುಕ್ಕರ್‌ ಸ್ಫೋಟದ(Mangaluru Blast Case) ರೂವಾರಿ, ಬಾಂಬರ್‌ ಶಾರೀಕ್(Shariq) ಗುಣಮುಖನಾಗಲು 25 ದಿನ ಬೇಕು ಎಂಬ ವಿಚಾರ ಸಿಕ್ಕಿದೆ.

    ಕಂಕನಾಡಿಯಲ್ಲಿರುವ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ Father Muller Hospital) ಶಾರೀಕ್ ದಾಖಲಾಗಿದ್ದು, 8 ಮಂದಿ ತಜ್ಞ ವೈದ್ಯರು ಆರೋಗ್ಯವನ್ನು ಗಮನಿಸುತ್ತಿದ್ದಾರೆ. ಶೇ.45 ರಷ್ಟು ದೇಹದ ಭಾಗ ಸುಟ್ಟು ಹೋಗಿರುವುದರಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ಪಬ್ಲಿಕ್‌ ಟಿವಿಗೆ ತಿಳಿಸಿವೆ. ಇದನ್ನೂ ಓದಿ: ಉಗ್ರ ಕೃತ್ಯಕ್ಕೆ ಹಿಂದುತ್ವ ಹಣೆಪಟ್ಟಿಗೆ ಸಂಚು – ಮುಂಬೈ ಕಸಬ್‌ನಂತೆ ದಾಳಿಗೆ ಬಾಂಬರ್‌ ಶಾರೀಕ್ ಸ್ಕೆಚ್‌

     

    ರಿಕ್ಷಾದಲ್ಲಿ ಸ್ಫೋಟಗೊಂಡು ಸಿಡಿದ ಕುಕ್ಕರ್‌ ಮುಚ್ಚಳ ಶಾರೀಕ್‌ ಕುತ್ತಿಗೆಗೆ ಬಡಿದಿದೆ. ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿದೆ.

    ಶಿವಮೊಗ್ಗದಲ್ಲಿ ಬಾಂಬ್‌ ಸ್ಫೋಟದ ಪರೀಕ್ಷೆ ನಡೆಸಿದ್ದ ಪ್ರಕರಣದಲ್ಲಿ ಶಾರೀಕ್‌ ಎ1 ಆರೋಪಿಯಾಗಿದ್ದಾನೆ. ಮಂಗಳೂರು ಸ್ಫೋಟಕ್ಕೂ ಮುನ್ನ ಆತ ತಮಿಳುನಾಡಿನ ಕೊಯಮತ್ತೂರಿಗೆ ಹೋಗಿದ್ದ. ಅಷ್ಟೇ ಅಲ್ಲದೇ ಕೇರಳಕ್ಕೂ ತೆರಳಿದ್ದ.

    ಮೈಸೂರಿನ ಕೊಠಡಿಯಲ್ಲಿ ಸ್ಫೋಟಕ ಸಾಮಾಗ್ರಿಗಳು ಸಿಕ್ಕಿರುವುದರಿಂದ ಉಗ್ರರ ಗ್ಯಾಂಗ್‌ ಬಗ್ಗೆ ಮಾಹಿತಿ ಪಡೆಯಲು ಆತನ ವಿಚಾರಣೆ ಅಗತ್ಯವಾಗಿದೆ. ಈ ಕಾರಣಕ್ಕೆ ಆತನ ಆರೋಗ್ಯದ ಮೇಲೆ ಪೊಲೀಸರು ಸಂಪೂರ್ಣ ನಿಗಾ ಇರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್ ಸ್ಫೋಟ ಪ್ರಕರಣ – ನಕಲಿ ಆಧಾರ್ ಕಾರ್ಡ್‌ನ ಅಸಲಿ ವ್ಯಕ್ತಿ ತುಮಕೂರಿನಲ್ಲಿ ಪತ್ತೆ

    ಕುಕ್ಕರ್ ಸ್ಫೋಟ ಪ್ರಕರಣ – ನಕಲಿ ಆಧಾರ್ ಕಾರ್ಡ್‌ನ ಅಸಲಿ ವ್ಯಕ್ತಿ ತುಮಕೂರಿನಲ್ಲಿ ಪತ್ತೆ

    ತುಮಕೂರು: ಮಂಗಳೂರಿನಲ್ಲಿ (Mangaluru) ಕುಕ್ಕರ್ ಬ್ಲಾಸ್ಟ್ (cooker blast) ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ಟ್ವಿಸ್ಟ್‌ಗಳು ಸಿಗುತ್ತಲೇ ಇವೆ. ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟಿಸಿರುವ ವ್ಯಕ್ತಿ ಬಳಿ ಇದ್ದ ಪ್ರೇಮ್ ರಾಜ್ (Prem Raj) ಹೆಸರಿನ ಆಧಾರ್ ಕಾರ್ಡ್ (Aadhaar Card) ನಕಲಿ ಎನ್ನುವುದು ತಿಳಿದು ಬಂದ ಬೆನ್ನಲ್ಲೇ ಅಸಲಿ ಪ್ರೇಮ್ ರಾಜ್‌ನನ್ನು ಪೊಲೀಸರು ತುಮಕೂರಿನಲ್ಲಿ (Tumakuru) ಪತ್ತೆಹಚ್ಚಿದ್ದಾರೆ.

    ಹುಬ್ಬಳ್ಳಿ (Hubballi) ಮೂಲದ ಪ್ರೇಮ ರಾಜ್ ಹುಟಗಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, ನಾನು ತುಮಕೂರಿನಲ್ಲಿ ರೈಲ್ವೇ ಟ್ರ್ಯಾಕ್ ಮೈನ್ ಟೈನರ್ ಆಗಿ ಕೆಲಸಮಾಡಿಕೊಂಡಿದ್ದು, ಸದ್ಯ ತುಮಕೂರಿನ ಹಿರೇಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವುದಾಗಿ ತಿಳಿಸಿದ್ದಾರೆ.

    ಕಳೆದ 2 ವರ್ಷಗಳಲ್ಲಿ 2 ಬಾರಿ ಆಧಾರ್ ಕಾರ್ಡ್ ಅನ್ನು ನಾನು ಕಳೆದುಕೊಂಡಿದ್ದೇನೆ. ಮೊದಲ ಸಲ ಧಾರವಾಡದಿಂದ ಬೆಳಗಾವಿಗೆ ಬಸ್‌ನಲ್ಲಿ ಹೋಗುತ್ತಿದ್ದ ವೇಳೆ ಕಾರ್ಡ್ ಕಳೆದುಕೊಂಡಿದ್ದೆ. ಬಳಿಕ ಮತ್ತೊಂದು ಆಧಾರ್ ಕಾರ್ಡ್ ಪಡೆದಿದ್ದೆ. ಅದನ್ನು ಕಳೆದ 6 ತಿಂಗಳ ಹಿಂದೆ ಹುಬ್ಬಳ್ಳಿಯಿಂದ ಬಸ್‌ನಲ್ಲಿ ಬರುತ್ತಿದ್ದ ವೇಳೆ ಕಳೆದುಕೊಂಡಿದ್ದೆ ಎಂದು ತಿಳಿಸಿದ್ದಾರೆ.

    ಶನಿವಾರ ರಾತ್ರಿಯೇ ನನಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಕರೆ ಮಾಡಿ ತುಮಕೂರು ಎಸ್‌ಪಿಯನ್ನು ಸಂಪರ್ಕಿಸುವಂತೆ ಸೂಚಿಸಿದ್ದರು. ಅದರಂತೆ ತುಮಕೂರು ಎಸ್‌ಪಿ ರಾಹುಲ್ ಕುಮಾರ್ ಶಹಪುರ್ ವಾಡ್ ಅವರನ್ನು ಸಂಪರ್ಕಿಸಿದೆ. ನಿನ್ನೆ ನಮ್ಮ ಮನೆಗೆ ಪೊಲೀಸರು ಬಂದು ಪರಿಶೀಲನೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕುಕ್ಕರ್‌ ಬಾಂಬ್‌ ಸ್ಫೋಟ – ಮೈಸೂರಿನಲ್ಲಿ ವಾಸ, ರೂಮಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆ

    ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರೇಮ್ ರಾಜ್, ನನ್ನ ಹೆಸರನ್ನು ಈ ರೀತಿಯಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ನನಗೂ ಮಂಗಳೂರಿನಲ್ಲಿ ನಡೆದಿರುವ ಘಟನೆಗೂ ಯಾವುದೇ ಸಂಬಂಧವಿಲ್ಲ. ಅಧಿಕಾರಿಗಳಿಗೆ ದೊರೆತಿರುವ ಆಧಾರ್ ಕಾರ್ಡ್‌ನಲ್ಲಿ ನನ್ನ ವಿಳಾಸ ಇದೆ. ಆದರೆ ಫೋಟೋ ನನ್ನದಲ್ಲ. ನನಗೂ ಈ ಕೃತ್ಯಕ್ಕೂ ಯಾವುದೇ ಸಂಬಂಧ ಇಲ್ಲ. ನನಗೆ ಯಾವುದೇ ಭಯವಿಲ್ಲ. ಪೊಲೀಸರು ಎಲ್ಲಿಗೆ ಬರಬೇಕು ಎಂದು ಹೇಳುತ್ತಾರೋ ಅಲ್ಲಿಗೆ ನಾನು ಬರುತ್ತೇನೆ ಎಂದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರರು ಮಂಗಳೂರು, ಕೊಯಮತ್ತೂರಿನಲ್ಲಿ ಓಡಾಡಿರುವ ಶಂಕೆ – ಇದೊಂದು ವ್ಯವಸ್ಥಿತ ಜಾಲ ಎಂದ ಸಿಎಂ

    Live Tv
    [brid partner=56869869 player=32851 video=960834 autoplay=true]

  • ಸಿಎಂ ಮಂಗಳೂರಿನಲ್ಲಿ ಇರುವಾಗಲೇ ಸ್ಕೆಚ್ – ಟೈಮರ್ ಕೈಕೊಟ್ಟು ದಾರಿ ಮಧ್ಯೆ ಬಾಂಬ್ ಸ್ಫೋಟ

    ಸಿಎಂ ಮಂಗಳೂರಿನಲ್ಲಿ ಇರುವಾಗಲೇ ಸ್ಕೆಚ್ – ಟೈಮರ್ ಕೈಕೊಟ್ಟು ದಾರಿ ಮಧ್ಯೆ ಬಾಂಬ್ ಸ್ಫೋಟ

    ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮಂಗಳೂರಿನಲ್ಲಿರುವಾಗಲೇ (Mangaluru) ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು (Bomb blast) ಉಗ್ರರು ಸಂಚು ರೂಪಿಸಿದ್ದ ವಿಚಾರ ಈಗ ಬಯಲಾಗಿದೆ.

    ಹೌದು. ಪಂಪ್‌ವೆಲ್ ವೃತ್ತದ ಬಳಿ ಈ ಕುಕ್ಕರ್ ಬಾಂಬ್ ಸ್ಫೋಟಿಸಲು (Cooker Blast) ಸಂಚು ರೂಪಿಸಲಾಗಿತ್ತು ಎಂಬ ಅನುಮಾನ ಎದ್ದಿದೆ.

    ಪಂಪ್‌ವೆಲ್ ಬಳಿ ಜನ ಸಂಚಾರ ಜಾಸ್ತಿ ಇರುತ್ತದೆ. ಕೇರಳಕ್ಕೆ ಹೋಗುವ ವಾಹನಗಳು ಈ ರಸ್ತೆಯ ಮೂಲಕ ಸಾಗುತ್ತದೆ. ಅಷ್ಟೇ ಅಲ್ಲದೇ ಹಾಸನ, ಪುತ್ತೂರು ಇತ್ಯಾದಿ ಕಡೆಗೆ ಹೋಗುವ ವಾಹನಗಳು ಇಲ್ಲೇ ಸಾಗುತ್ತದೆ. ಈ ಕಾರಣಕ್ಕೆ ಇಲ್ಲಿ ಸ್ಫೋಟಿಸಲು ಸಂಚು ರೂಪಿಸಲಾಗಿತ್ತು ಎಂಬ ಅನುಮಾನ ಎದ್ದಿದೆ.

    ಟೈಮ್ ಬಾಂಬ್:
    ಬ್ಯಾಟರಿ, ವಯರ್, ನಟ್, ಬೋಲ್ಟ್, ಸರ್ಕ್ಯೂಟ್ ರೀತಿಯ ವಸ್ತುಗಳು ಕುಕ್ಕರ್‌ನಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಇದೊಂದು ಟೈಮರ್ ಬಾಂಬ್ ಎನ್ನವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಟೈಮರ್ ಸೆಟ್ ಮಾಡಿ ಬಾಂಬ್ ಸ್ಫೋಟ ಮಾಡಲು ಸಂಚು ರೂಪಿಸಲಾಗಿತ್ತು. ಆದರೆ ಯಾವುದೋ ದೋಷದಿಂದ ಈ ಬಾಂಬ್ ಸ್ಫೋಟಗೊಂಡಿದೆ ಎಂಬ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

    ಘಟನೆಯಲ್ಲಿ ಗಾಯಗೊಂಡಿರುವ ವ್ಯಕ್ತಿ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ. ಶೇ.50 ರಷ್ಟು ದೇಹ ಸುಟ್ಟು ಹೋಗಿದೆ. ಆಧಾರ್ ಕಾರ್ಡ್ನಲ್ಲಿ ಹುಬ್ಬಳ್ಳಿಯ ಪ್ರೇಮ್ ರಾಜ್ ಹೆಸರಿನವಿಳಾಸವಿರುವುದು ಪತ್ತೆಯಾಗಿದೆ. ಆದರೆ ಇದು ನಕಲಿ ಐಡಿ ಕಾರ್ಡ್ ಎಂಬುದು ದೃಢಪಟ್ಟಿದೆ. ಇದನ್ನೂ ಓದಿ: ಮಂಗಳೂರಿನ ಆಟೋದಲ್ಲಿ ಕುಕ್ಕರ್‌ ಅನಿರೀಕ್ಷಿತವಾಗಿ ಸ್ಪೋಟಗೊಂಡಿಲ್ಲ, ಇದೊಂದು ಉಗ್ರ ಕೃತ್ಯ: ಪ್ರವೀಣ್‌ ಸೂದ್

    ಆತನ ಹೇಳಿಕೆಯಂತೆ ಪೊಲೀಸರ ತಂಡ ಮೈಸೂರಿನಲ್ಲಿ ತನಿಖೆ ನಡೆಸುತ್ತಿದೆ. ಪ್ರೇಮ್ ರಾಜ್ ತನ್ನ ಅಣ್ಣ ಎಂದು ತಿಳಿಸಿ ಬಾಬುರಾವ್ ಎಂಬವರ ನಂಬರ್ ನೀಡಿದ್ದಾನೆ. ಆದರೆ ಆ ನಂಬರ್‌ಗೆ ಕರೆ ಮಾಡಿದಾಗ ಪ್ರೇಮ್ ರಾಜ್ ತನ್ನ ಸಂಬಂಧಿಯೇ ಅಲ್ಲ ಎಂದು ತಿಳಿಸಿದ್ದಾರೆ. ಆತ ತನ್ನ ರೂಂನಲ್ಲಿದ್ದ. ಬೆಂಗಳೂರಿಗೆ ಹೋಗುತ್ತೇನೆ ಎಂದು ತಿಳಿಸಿದ್ದ. ಆತನ ಬಗ್ಗೆ ಬೇರೆ ಏನೂ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

    ಸಿಎಂ ಬೊಮ್ಮಾಯಿ ಮಂಗಳೂರು ಭೇಟಿ ಬೆನ್ನಲ್ಲೇ ಸ್ಫೋಟ ಸಂಭವಿಸಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಸ್ಫೋಟವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನಿಂದ ಮತ್ತಷ್ಟು ಬಾಂಬ್ ತಜ್ಞರ ತಂಡ ಘಟನಾ ಸ್ಥಳಗ್ಗೆ ಆಗಮಿಸಲಿದೆ. ಇಂದು ಮಂಗಳೂರಿಗೆ ಎನ್‌ಐಎ ತಂಡವೂ ಆಗಮಿಸುವ ಸಾಧ್ಯತೆಯಿದೆ.

    ಶನಿವಾರ ಸ್ವಾತಂತ್ರ‍್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿಗೆ ಆಗಮಿಸಿದ್ದರು. ಇದನ್ನೂ ಓದಿ: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಸ್ಫೋಟ – ನಟ್‌, ಬೋಲ್ಟ್‌, ಬ್ಯಾಟರಿ ಪತ್ತೆ

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನ ಆಟೋದಲ್ಲಿ ಕುಕ್ಕರ್‌ ಅನಿರೀಕ್ಷಿತವಾಗಿ ಸ್ಪೋಟಗೊಂಡಿಲ್ಲ, ಇದೊಂದು ಉಗ್ರ ಕೃತ್ಯ: ಪ್ರವೀಣ್‌ ಸೂದ್

    ಮಂಗಳೂರಿನ ಆಟೋದಲ್ಲಿ ಕುಕ್ಕರ್‌ ಅನಿರೀಕ್ಷಿತವಾಗಿ ಸ್ಪೋಟಗೊಂಡಿಲ್ಲ, ಇದೊಂದು ಉಗ್ರ ಕೃತ್ಯ: ಪ್ರವೀಣ್‌ ಸೂದ್

    ಬೆಂಗಳೂರು: ಮಂಗಳೂರಿನ(Mangaluru) ಅಟೋದಲ್ಲಿ ಕುಕ್ಕರ್‌ ಅನಿರೀಕ್ಷಿತವಾಗಿ ಸ್ಪೋಟಗೊಂಡಿದ್ದಲ್ಲ. ಇದೊಂದು ಭಯೋತ್ಪಾದನಾ ಕೃತ್ಯ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್(Praveen Sood) ಹೇಳಿದ್ದಾರೆ.

    ಈ ಸಂಬಂಧ ಟ್ವೀಟ್‌ ಮಾಡಿದ ಅವರು, ಉದ್ದೇಶಪೂರ್ವಕವಾಗಿ ಸಾವು ನೋವು ಹಾನಿ ಉಂಟು ಮಾಡಲು ಮಾಡಿದ್ದ ಪ್ಲಾನ್ ಇದಾಗಿದ್ದು ಕೇಂದ್ರ ತನಿಖಾ ಸಂಸ್ಥೆಗಳ ಜೊತೆ ಕರ್ನಾಟಕ ಪೊಲೀಸ್‌ ಸೂಕ್ಷ್ಮವಾಗಿ, ಆಳವಾಗಿ ತನಿಖೆ ನಡೆಸುತ್ತಿದೆ ಎಂದಿದ್ದಾರೆ.‌

    ಆಟೋದಲ್ಲಿ ಕುಕ್ಕರ್ ಸ್ಫೋಟ(Cooker Blast) ಪ್ರಕರಣ ತನಿಖೆಯ ಚುರುಕುಗೊಂಡಿದ್ದು ಪರಿಶೀಲನೆ ವೇಳೆ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿದೆ. ನಟ್, ಬೋಲ್ಟ್‌, ಬ್ಯಾಟರಿ, ಸರ್ಕಿಟ್ ರೀತಿಯ ವೈರಿಂಗ್ ಇರುವ ವಸ್ತುಗಳು ಪತ್ತೆಯಾಗಿದೆ. ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ(FSL), ಬಾಂಬ್ ನಿಷ್ಕ್ರೀಯ ದಳದಿಂದ(Bomb Disposal Squad) ತೀವ್ರ ಪರಿಶೀಲನೆ ನಡೆಯುತ್ತಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ, ಹೊತ್ತಿ ಉರಿದ ಆಟೋ – ಚಾಲಕ, ಸವಾರನಿಗೆ ಗಾಯ

     

    ಶನಿವಾರ ಸಂಜೆ 5 ಗಂಟೆಯ ವೇಳೆ ಮಂಗಳೂರಿನ(Mangaluru) ಪಂಪ್‍ವೆಲ್‍ನಿಂದ ನಾಗುರಿ ಕಡೆ ಚಲಿಸುತ್ತಿದ್ದ ಆಟೋ ನಿಗೂಢ ಸ್ಫೋಟಗೊಂಡಿದೆ. ದಾರಿ ಮಧ್ಯೆ ವ್ಯಕ್ತಿಯೊಬ್ಬ ಕೈಯಲ್ಲಿ ಕುಕ್ಕರ್ ಹಿಡಿದುಕೊಂಡು ಆಟೋ ಹತ್ತಿದ್ದು ನಾಗುರಿಗೆ ಹೋಗಲು ಚಾಲಕನಿಗೆ ಸೂಚಿಸಿದ್ದ. ಆದರೆ ಕೆಲವೇ ಕ್ಷಣಗಳಲ್ಲಿ ನಾಗುರಿಯ ಕಂಕನಾಡಿ ಪೊಲೀಸ್ (Police) ಠಾಣೆಯ ಎದುರು ಕ್ಷಣಗಳಲ್ಲಿ ಆಟೋದ ಒಳಗೆ ಸ್ಫೋಟಗೊಂಡಿದ್ದು ಪ್ರಯಾಣಿಕನ ಕೈಯಲ್ಲಿದ್ದ ಕುಕ್ಕರ್ ಛಿದ್ರಗೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನ ಆಟೋದಲ್ಲಿ ಕುಕ್ಕರ್ ಸ್ಫೋಟ – ನಟ್‌, ಬೋಲ್ಟ್‌, ಬ್ಯಾಟರಿ ಪತ್ತೆ

    ಮಂಗಳೂರಿನ ಆಟೋದಲ್ಲಿ ಕುಕ್ಕರ್ ಸ್ಫೋಟ – ನಟ್‌, ಬೋಲ್ಟ್‌, ಬ್ಯಾಟರಿ ಪತ್ತೆ

    ಮಂಗಳೂರು: ನಗರದ ಆಟೋದಲ್ಲಿ ಕುಕ್ಕರ್ ಸ್ಫೋಟ(Cooker Blast) ಪ್ರಕರಣ ತನಿಖೆಯ ಚುರುಕುಗೊಂಡಿದ್ದು ಪರಿಶೀಲನೆ ವೇಳೆ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿದ್ದು ಹೈ ಅಲರ್ಟ್‌ ಘೋಷಣೆಯಾಗಿದೆ.

    ನಟ್, ಬೋಲ್ಟ್‌, ಬ್ಯಾಟರಿ, ಸರ್ಕಿಟ್ ರೀತಿಯ ವೈರಿಂಗ್ ಇರುವ ವಸ್ತುಗಳು ಪತ್ತೆಯಾಗಿದೆ. ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ(FSL), ಬಾಂಬ್ ನಿಷ್ಕ್ರೀಯ ದಳದಿಂದ(Bomb Disposal Squad) ತೀವ್ರ ಪರಿಶೀಲನೆ ನಡೆಯುತ್ತಿದೆ.

    ಬಾಕ್ಸ್ ಮತ್ತು ಬ್ಯಾಗ್‌ನಿಂದಲೇ ನಿಗೂಢ ಸ್ಪೋಟ ಸಂಭವಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸ್ಪೋಟದ ತೀವ್ರತೆಗೆ ಪ್ರಯಾಣಿಕನ ದೇಹ ಶೇ.50ರಷ್ಟು ಸುಟ್ಟು ಹೋಗಿದ್ದು ಚಿಕಿತ್ಸೆ ಮುಂದುವರಿದಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವವನ್ನು ನಾಗುರಿ ಬಳಿ ಪ್ರಯಾಣಿಕ ಹತ್ತಿದ್ದ. ಆಟೋ ಒಂದು ಕಿ.ಮೀ ಕ್ರಮಿಸುವಷ್ಟರಲ್ಲಿ ನಿಗೂಢ ಸ್ಫೋಟಗೊಂಡಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.

    ಪರಿಶೀಲನೆ ವೇಳೆ ಪ್ರೇಮ್ ರಾಜ್ ಕನೋಗಿ ಎಂಬ ಹೆಸರಿ‌ನ ಐಡಿ ದಾಖಲೆ ಪತ್ತೆಯಾಗಿದೆ. ದಾಖಲೆಯಲ್ಲಿ ಮೈಸೂರಿನ ವಿಳಾದ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸ್‌ ತಂಡ ಮೈಸೂರಿಗೆ ತೆರಳಿದೆ. ಪ್ರಯಾಣಿಕನ ಬಳಿ 30 ಸಾವಿರ ರೂ. ನಗದು ಪತ್ತೆಯಾಗಿದೆ. ಇದನ್ನೂ ಓದಿ: ಲವ್ ಜಿಹಾದ್ ಆರೋಪ – ದೂರು ನೀಡಿದರೂ ಕ್ರಮ ಕೈಗೊಳ್ಳದ ಇನ್ಸ್‌ಪೆಕ್ಟರ್‌ ನಾಸಿರ್ ಹುಸೇನ್

    ಏನಿದು ಘಟನೆ?
    ಶನಿವಾರ ಸಂಜೆ 5 ಗಂಟೆಯ ವೇಳೆ ಮಂಗಳೂರಿನ(Mangaluru) ಪಂಪ್‍ವೆಲ್‍ನಿಂದ ನಾಗುರಿ ಕಡೆ ಚಲಿಸುತ್ತಿದ್ದ ಆಟೋ ನಿಗೂಢ ಸ್ಫೋಟಗೊಂಡಿದೆ. ದಾರಿ ಮಧ್ಯೆ ಸವಾರನೋರ್ವ ಕೈಯಲ್ಲಿ ಕುಕ್ಕರ್ ಹಿಡಿದುಕೊಂಡು ಆಟೋ ಹತ್ತಿದ್ದು ನಾಗುರಿಗೆ ಹೋಗಲು ಚಾಲಕನಿಗೆ ಸೂಚಿಸಿದ್ದ. ಆದರೆ ಕೆಲವೇ ಕ್ಷಣಗಳಲ್ಲಿ ನಾಗುರಿಯ ಕಂಕನಾಡಿ ಪೊಲೀಸ್ (Police) ಠಾಣೆಯ ಎದುರು ಆಟೋದ ಒಳಗೆ ಸ್ಫೋಟಗೊಂಡಿದ್ದು ಸವಾರನ ಕೈಯಲ್ಲಿದ್ದ ಕುಕ್ಕರ್ ಛಿದ್ರಗೊಂಡಿತ್ತು.

    Live Tv
    [brid partner=56869869 player=32851 video=960834 autoplay=true]