Tag: ಕುಕ್ಕೆ ಸುಬ್ರಹ್ಮಣ್ಯ

  • ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ? ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?

    ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ? ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?

    ಹಿಂದೂ ಧರ್ಮದಲ್ಲಿ ದೇವರಂತೆ ನಾಗದೇವರನ್ನೂ ಪೂಜಿಸಲಾಗುತ್ತದೆ. ಜಾತಕದಲ್ಲಿ ನಾಗದೋಷ, ಕುಟುಂಬದಲ್ಲಿ ಸಮಸ್ಯೆ, ನಾಗರ ಹಾವನ್ನು ಹತ್ಯೆ.. ಇತ್ಯಾದಿ ಕಾರಣಕ್ಕೆ ಆಶ್ಲೇಷ ಬಲಿ ಸೇವೆಯನ್ನು ಭಕ್ತರು ಮಾಡುತ್ತಾರೆ. ಸಾಧಾರಣವಾಗಿ ಕುಕ್ಕೆ ಸುಬ್ರಹ್ಮಣ್ಯ (Kukke Subramanya) ಕ್ಷೇತ್ರದಲ್ಲಿ ಹೆಚ್ಚಾಗಿ ಆಶ್ಲೇಷ ಬಲಿ (Ashlesha Bali ಸೇವೆಯನ್ನು ಮಾಡುತ್ತಾರೆ. ಒಂದು ವೇಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲು ಸಾಧ್ಯವಾಗದೇ ಇದ್ದವರು ಸಮೀಪದ ಸುಬ್ರಹ್ಮಣ್ಯ ದೇವಸ್ಥಾನ ಅಥವಾ ನಾಗನ ಕಟ್ಟೆಗಳಲ್ಲೂ ಆಶ್ಲೇಷ ಬಲಿ ಸೇವೆ ಮಾಡುತ್ತಾರೆ. 

     

    ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?
    ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ ಎಂದು ತಿಳಿಯಬೇಕಾದರೆ ಪುರಾಣ ಕಥೆಗೆ ಹೋಗಬೇಕಾಗುತ್ತದೆ. ಕದ್ರು ಮತ್ತು ವಿನತೆ ಇಬ್ಬರೂ ಕಶ್ಯಪ ಮಹರ್ಷಿಗಳ ಪತ್ನಿಯರು. ಅವರು ಮಕ್ಕಳನ್ನು ಪಡೆಯಲು ಬಯಸಿದಾಗ, ಕದ್ರು ಸಾವಿರ ನಾಗಗಳಿಗೆ ಜನ್ಮ ನೀಡಿದರೆ, ವಿನತೆ ಇಬ್ಬರು ಮಕ್ಕಳಾದ ಅರುಣ ಮತ್ತು ಗರುಡನಿಗೆ ಜನ್ಮ ನೀಡುತ್ತಾಳೆ.

    ಒಂದು ದಿನ ಉಚ್ಚೈಶ್ರವಸ್ ಎಂಬ ಕುದುರೆಯ ಬಾಲದ ಬಣ್ಣದ ಬಗ್ಗೆ ಕದ್ರು ಮತ್ತು ವಿನತೆಯರ ನಡುವೆ ಪಣ ಏರ್ಪಡುತ್ತದೆ. ಕದ್ರು ಬಾಲ ಕಪ್ಪು ಎಂದು ವಾದಿಸಿದರೆ, ವಿನತೆ ಬಾಲ ಬಿಳಿ ಎಂದು ಹೇಳುತ್ತಾಳೆ. ಕದ್ರು ತನ್ನ ನಾಗಪುತ್ರರನ್ನು ಕುದುರೆಯ ಬಾಲಕ್ಕೆ ಅಂಟಿಕೊಂಡು ಕಪ್ಪಾಗಿ ಕಾಣುವಂತೆ ಮಾಡುತ್ತಾಳೆ, ಇದರಿಂದ ವಿನತೆ ಸೋತು ಗುಲಾಮಳಾಗುತ್ತಾಳೆ. ಕದ್ರು ವಿನತೆಯನ್ನು ತನ್ನ ಗುಲಾಮೆಯನ್ನಾಗಿ ನಡೆಸಿಕೊಳ್ಳುತ್ತಾಳೆ. ತಾಯಿಯನ್ನು ಗುಲಾಮೆಯನ್ನಾಗಿ ನಡೆಸಿದ್ದಕ್ಕೆ ಸಿಟ್ಟಾದ ಗರುಡ ನಾಗಪುತ್ರರನ್ನು ತಿನ್ನಲು ಮುಂದಾಗುತ್ತಾನೆ. ಈ ಸಂದರ್ಭದಲ್ಲಿ ಗರುಡನಿಂದ ಪಾರಾಗಲು ನಾಗಗಳು ಸುಬ್ರಹ್ಮಣ್ಯನ ಮೊರೆ ಹೋಗುತ್ತವೆ. ಸುಬ್ರಹ್ಮಣ್ಯ ನಾಗಗಳನ್ನು ರಕ್ಷಿಸುತ್ತಾನೆ. ಇದನ್ನೂ ಓದಿ: ನಾಗರ ಪಂಚಮಿಯಂದು ಹೀಗೆ ಮಾಡಿ – ಕಾಳ ಸರ್ಪದೋಷಕ್ಕೆ ಸಿಗುತ್ತೆ ಪರಿಹಾರ

    kukke subramanya

     

    ಸ್ಕಂದ ಪುರಾಣದ ಪ್ರಕಾರ ಒಮ್ಮೆ ಸುಬ್ರಹ್ಮಣ್ಯ ಬ್ರಹ್ಮನ ಮುಂದೆ ನಿನಗಿಂತ ನನಗೆ ಹೆಚ್ಚು ಜ್ಞಾನವಿದೆ ಎಂದು ಹೇಳಿ ಅಪಹಾಸ್ಯ ಮಾಡಿದ್ದ. ಈ ವಿಚಾರ ತಂದೆಯಾದ ಶಿವನಿಗೆ ತಿಳಿಯುತ್ತದೆ. ಸುಬ್ರಹ್ಮಣ್ಯನನ್ನು ಕರೆದು, ಸೃಷ್ಟಿಕರ್ತನನ್ನು ಅವಮಾನ ಮಾಡಿದ್ದಕ್ಕೆ ನಿನಗೆ ನೀನೇ ಶಿಕ್ಷಿ ವಿಧಿಸಬೇಕೆಂದು ಸೂಚಿಸುತ್ತಾನೆ. ತಂದೆಯ ಮಾತಿನಂತೆ ಸುಬ್ರಹ್ಮಣ್ಯ ಸರ್ಪದ ರೂಪವನ್ನು ತಾಳಿ ಹಲವು ವರ್ಷ ಬದುಕಿದ್ದ ಎಂಬ ಕಥೆಯೂ ಇದೆ.

    ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ?
    ವ್ಯಕ್ತಿಯ ಜಾತಕದಲ್ಲಿ ಕಾಳಸರ್ಪದೋಷ ಇರುವವರು ಮಾಡುತ್ತಾರೆ. ಹಿಂದೆ ತಿಳಿದೋ ಅಥವಾ ತಿಳಿಯದೆಯೋ ಸರ್ಪಗಳಿಗೆ ಹಾನಿ ಮಾಡಿದ್ದರೆ, ಅಂತಹ ದೋಷಗಳನ್ನು ಪರಿಹರಿಸಲು ಆಶ್ಲೇಷಾ ಪೂಜೆ ಮಾಡಲಾಗುತ್ತದೆ.

    ಅಷ್ಟೇ ಅಲ್ಲದೇ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ, ವಿವಾಹ, ಭೂ, ಜಲ, ಬೆಳೆ ಅಭಿವೃದ್ಧಿಗಾಗಿ ಈ ಸೇವೆಯನ್ನು ಮಾಡಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿದೆ. ಮನೆಯಲ್ಲಿ ಶಾಂತಿ ನೆಲೆಸಲು, ವಿವಾಹ ಸಮಸ್ಯೆಗಳು ನಿವಾರಣೆಯಾಗಲು ಮತ್ತು ಸಂತಾನ ಭಾಗ್ಯಕ್ಕಾಗಿ ಈ ಪೂಜೆ ಮಾಡಲಾಗುತ್ತದೆ.  ವಿಶೇಷವಾಗಿ ಆಶ್ಲೇಷ ನಕ್ಷತ್ರದಂದು ಈ ಪೂಜೆಯನ್ನು ಮಾಡುವುದರಿಂದ ಸರ್ಪ ದೋಷಗಳು ನಿವಾರಣೆಯಾಗುತ್ತವೆ ಮತ್ತು ಜೀವನದಲ್ಲಿ ಸುಖ-ಸಮೃದ್ಧಿ ಉಂಟಾಗುತ್ತದೆ ಎಂಬ ನಂಬಿಕೆಯಿದೆ.

  • ಕುಕ್ಕೆಯಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಅಣ್ಣಾಮಲೈ

    ಕುಕ್ಕೆಯಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಅಣ್ಣಾಮಲೈ

    ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ (Kukke Subramanya) ತಮಿಳುನಾಡು (Tamil Nadu) ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರ.

    ಕುಕ್ಕೆಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಆಶ್ಲೇಷ ಬಲಿ ಪೂಜೆ (Ashlesha Bali Pooja) ನೆರವೇರಿಸಿ ಅಣ್ಣಾಮಲೈ ಬಳಿಕ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.  ಇದನ್ನೂ ಓದಿ: ಇಂದು ಸುರ್ಜೇವಾಲ ಜೊತೆ ಒನ್ ಟು ಒನ್ ಮೀಟಿಂಗ್‌ 8 ಶಾಸಕರಿಗೆ ಬುಲಾವ್‌

    ಭೇಟಿ ಬಳಿಕ ಮಾತನಾಡಿದ ಅವರು, ನಾನು ಕಳೆದ ಹತ್ತು ಹದಿನೈದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುತ್ತಿದ್ದೇಮೆ. ಆಶ್ಲೇಷ ನಕ್ಷತ್ರದ ಈ ಪುಣ್ಯದಿನದಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ತಮಿಳುನಾಡಿನ ಜನ, ಕರ್ನಾಟಕದ ಜನ ಹಾಗೂ ಇಡೀ ಭಾರತದ ಜನರು ಸುಖ ಶಾಂತಿ ನೆಮ್ಮದಿಯಾಗಿ ಇರಬೇಕು. ಎಲ್ಲಾ ಜನರಿಗೂ ಒಳ್ಳೆದಾಗಬೇಕು ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮೊದಲ ಬಾರಿಗೆ ಜೂನ್ ತಿಂಗಳಲ್ಲಿ KRS ಭರ್ತಿ  ಇಂದು ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿದ್ದಾರೆ ಸಿಎಂ

    ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡಿನ ಜವಾಬ್ದಾರಿಯ ಜೊತೆಗೆ ರಾಷ್ಟ್ರೀಯ ಮಟ್ಟದ ಹುದ್ದೆಯನ್ನು ನೀಡಲು ಬಿಜೆಪಿ ಮುಂದಾಗಿದೆ.

    ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿ, ತಮಿಳುನಾಡಿನಲ್ಲಿಯೂ ಅವರ ಕೆಲಸ ಮುಂದುವರಿಯುವುದು ಇದರ ಜೊತೆಗೆ ರಾಷ್ಟ್ರೀಯ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

  • ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ – ಪುತ್ತೂರಿಗೆ NDRF ತಂಡ ಆಗಮನ

    ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ – ಪುತ್ತೂರಿಗೆ NDRF ತಂಡ ಆಗಮನ

    – ದಕ್ಷಿಣ ಕನ್ನಡ ಜಿಲ್ಲೆಗೆ 5 ದಿನ ರೆಡ್‌ ಅಲರ್ಟ್‌
    – ಗುಡ್ಡ ಭಾಗದ ನಿವಾಸಿಗಳ ಸ್ಥಳಾಂತರಕ್ಕೆ ಆದೇಶ

    ಮಂಗಳೂರು: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ (Kukke Subramanaya) ಕುಮಾರಧಾರಾ ಸ್ನಾನ ಘಟ್ಟ (Kumaradhara Snana Ghatta) ಮುಳುಗಡೆಯಾಗಿದೆ.

    ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಇದನ್ನೂ ಓದಿ: ಮೂಡಬಿದಿರೆಯ ಎರುಗುಂಡಿ ಫಾಲ್ಸ್ ಬಳಿ ಏಕಾಏಕಿ ನುಗ್ಗಿದ ನೀರು -ಹಗ್ಗ ಕಟ್ಟಿ ಕೊಚ್ಚಿ ಹೋಗಲಿದ್ದ ಐವರ ರಕ್ಷಣೆ


    ದೇವಸ್ಥಾನದ ಆಡಳಿತ ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ

    ಇಂದು ರೆಡ್‌ ಅಲರ್ಟ್‌:
    ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು ಇಂದೂ ಕೂಡಾ ರೆಡ್ ಅಲರ್ಟ್ ಜಾರಿಯಾಗಿದೆ. ಬಿಟ್ಟು ಬಿಡದೇ ನಿರಂತರವಾಗಿ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆ ಸುರಿಯುತ್ತಿದೆ. ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್‌ ಅಲರ್ಟ್‌, ಎಲ್ಲಿ ಅತಿಹೆಚ್ಚು ಮಳೆ?

    ಮಳೆ ಅಬ್ಬರದ ಹಿನ್ನೆಲೆಯಲ್ಲಿ ಪುತ್ತೂರಿಗೆ 25 ಸಿಬ್ಬಂದಿಯ ಎನ್‌ಡಿಆರ್‌ಎಫ್‌ (NDRF) ಸಿಬ್ಬಂದಿ ಆಗಮಿಸಿದ್ದಾರೆ. ಭಾರೀ ಗಾಳಿ ಮಳೆ ಹಿನ್ನಲೆ ಅಧಿಕಾರಿಗಳಿಗೆ ಸರ್ವ ಸನ್ನದ್ಧ ಆಗಿರಲು ಸೂಚನೆ ನೀಡಲಾಗಿದೆ.

     

    5 ದಿನಗಳ ಕಾಲ ಜಿಲ್ಲೆಗೆ ರೆಡ್‌ ಅಲರ್ಟ್‌ ಜಾರಿಯಾಗಿರುವ ಕಾರಣ ಅಪಾಯದಲ್ಲಿರುವ ಗುಡ್ಡ ಭಾಗದ ನಿವಾಸಿಗಳನ್ನು ಸ್ಥಳಾಂತರ ಮಾಡುವಂತೆ ಆದೇಶಿಸಲಾಗಿದೆ. ಈಗಾಗಲೇ ಸಮುದ್ರಕ್ಕೆ ತೆರಳಿರುವ ಮೀನುಗಾರಿಕಾ ಬೋಟ್‌ಗಳು ತಕ್ಷಣ ದಡಕ್ಕೆ ಬಂದು ನವಮಂಗಳೂರು ಬಂದರಿನಲ್ಲಿ (NMPA) ಲಂಗರು ಹಾಕಲು ಅನುಮತಿ ನೀಡಲಾಗಿದೆ.

  • ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷನಾಗಿ ಕಾಂಗ್ರೆಸ್ ಮುಖಂಡ, ಮಾಜಿ ರೌಡಿಶೀಟರ್ ಆಯ್ಕೆ

    ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷನಾಗಿ ಕಾಂಗ್ರೆಸ್ ಮುಖಂಡ, ಮಾಜಿ ರೌಡಿಶೀಟರ್ ಆಯ್ಕೆ

    – ಜೈಲು ಸೇರಿದ್ದವನಿಗೆ ಅಧ್ಯಕ್ಷ ಪಟ್ಟಕ್ಕೆ ಶಿಫಾರಸು ಮಾಡಿದ್ದ ದಿನೇಶ್ ಗುಂಡೂರಾವ್

    ಮಂಗಳೂರು: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya Temple) ಅಧ್ಯಕ್ಷನಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ರೌಡಿಶೀಟರ್‌ವೊಬ್ಬನನ್ನು ಆಯ್ಕೆ ಮಾಡಲಾಗಿದೆ. ಭಾರಿ ವಿರೋಧದ ನಡುವೆಯೂ ಮಾಜಿ ರೌಡಿಶೀಟರ್‌ನನ್ನು ಸರ್ಕಾರ ಆಯ್ಕೆ ಮಾಡಿದೆ.

    ಗ್ರಾಪಂ ಸದಸ್ಯನೂ ಆಗಿರುವ ಹರೀಶ್ ಇಂಜಾಡಿಗೆ ಅಧ್ಯಕ್ಷ ಪಟ್ಟ ಸಿಕ್ಕಿದೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ದೋಖಾ ಮಾಡಿ ಜೈಲುಪಾಲಾಗಿದ್ದ. ಈತನಿಗೆ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಶಿಫಾರಸು ಮಾಡಿದ್ದರು. ಅದರಂತೆ ಹರೀಶ್‌ಗೆ, ಕುಕ್ಕೆ ವ್ಯವಸ್ಥಾಪನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನ ಒಲಿದಿದೆ. ಆಡಳಿತ ಮಂಡಳಿ ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧ ಇದ್ದವರು ಸದಸ್ಯರಾಗಬಾರದು ಎಂಬ ನಿಯಮ ಮೀರಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ʻಬಿಬಿಎಂಪಿʼ ಹೆಸರು ಇತಿಹಾಸ ಪುಟಕ್ಕೆ – ಮೇ 15ರಿಂದ ʻಗ್ರೇಟರ್‌ ಬೆಂಗಳೂರುʼ ಆಡಳಿತ ಜಾರಿ

    ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚನೆ ಮಾಡಿದ್ದ ಆರೋಪವನ್ನು ಹರೀಶ್ ಇಂಜಾಡಿ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ಬಂಧನವೂ ಆಗಿತ್ತು. ಹರೀಶ್‌ಗೆ ಸದಸ್ಯ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಧಾರ್ಮಿಕದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸ್ಥಳೀಯರು ಪತ್ರ ಬರೆದಿದ್ದರು. ರೌಡಿಶೀಟರ್ ಆಗಿದ್ದ ಹರೀಶ್ ಇಂಜಾಡಿಯನ್ನು ಅಧ್ಯಕ್ಷನನ್ನಾಗಿ ಮಾಡಬೇಡಿ ಅಂತಾ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮರಳು ಮಾಫಿಯಾ ಮತ್ತು ಮರ ಕಳ್ಳ ಸಾಗಣೆ ಆರೋಪ ಈತ ಮೇಲಿದೆ ಎಂದು ಗಮನ ಸೆಳೆದಿದ್ದಾನೆ.

    ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷಗಾದಿಗೆ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ರೌಡಿಶೀಟರ್ ಎಂದಿದ್ದ ಕಾಂಗ್ರೆಸ್ ಆತನ ಮನೆಗೆ ಭೇಟಿ ನೀಡಿರಲಿಲ್ಲ. ಇದೀಗ ದಿನೇಶ್ ಗುಂಡೂರಾವ್ ಅವರ ಶಿಫಾರಸಿನಂತೆ ಮಾಜಿ ರೌಡಿಶೀಟರ್‌ಗೆ ಕುಕ್ಕೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ. ಇದನ್ನೂ ಓದಿ: ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಮನವಿ

  • ಕುಕ್ಕೆ ದೇಗುಲದಲ್ಲಿ ಕತ್ರಿನಾ ಕೈಫ್- ಆಶ್ಲೇಷಾ ಬಲಿ ಪೂಜೆ ಮಾಡಿಸಿದ ನಟಿ

    ಕುಕ್ಕೆ ದೇಗುಲದಲ್ಲಿ ಕತ್ರಿನಾ ಕೈಫ್- ಆಶ್ಲೇಷಾ ಬಲಿ ಪೂಜೆ ಮಾಡಿಸಿದ ನಟಿ

    ಬಾಲಿವುಡ್ ನಟಿ ಕತ್ರಿನಾ ಕೈಫ್  (Katrina Kaif) ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ (Kukke Subramanya) ತಂಗಿದ್ದಾರೆ. ದೇವಸ್ಥಾನದಲ್ಲಿ ಇಂದು (ಮಾ.12) ಆಶ್ಲೇಷಾ ಬಲಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ:ನಟಿ ರನ್ಯಾ ಬೆನ್ನಲ್ಲೇ ಮತ್ತಿಬ್ಬರು ಸ್ಯಾಂಡಲ್‌ವುಡ್ ನಟಿಯರಿಗೆ ಮಾಸ್ಟರ್ ಸ್ಟ್ರೋಕ್

    ನಿನ್ನೆಯಿಂದ (ಮಾ.11) ಕತ್ರಿನಾ ದೇವಸ್ಥಾನದಲ್ಲಿ ವಿವಿಧ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಸರ್ಪ ಸಂಸ್ಕಾರ ಸೇವೆ, ನಾಗ ಪ್ರತಿಷ್ಠಾ ಸೇವೆಯಲ್ಲಿ ಭಾಗಿಯಾಗಿದ್ದಾರೆ. ಸಂತಾನ, ವ್ಯವಹಾರಿಕ, ಕೌಟುಂಬಿಕ, ಜೀವನದ ಒಳಿತಿಗಾಗಿ ಕತ್ರಿನಾ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.

    ಸಾಮಾನ್ಯವಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಹಾಗಾಗಿ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ.

  • ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದರ್ಶನ ಪಡೆದ ಅಮೆರಿಕದ ನಿಯೋಜಿತ ಅಧ್ಯಕ್ಷ ಟ್ರಂಪ್ ಬಿಸಿನೆಸ್ ಪಾರ್ಟ್ನರ್

    ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದರ್ಶನ ಪಡೆದ ಅಮೆರಿಕದ ನಿಯೋಜಿತ ಅಧ್ಯಕ್ಷ ಟ್ರಂಪ್ ಬಿಸಿನೆಸ್ ಪಾರ್ಟ್ನರ್

    ಮಂಗಳೂರು: ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ವ್ಯಾವಹಾರಿಕ ಪಾಲುದಾರ ಶಶಿಭೂಷಣ್ ಅವರು ಮಂಗಳೂರಿಗೆ ಭೇಟಿ ನೀಡಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ (Kukke Shri Subrahmanya Temple) ದರ್ಶನ ಪಡೆದರು.

    ಚಂಪಾಷಷ್ಠಿ ದಿನ ಶಶಿಭೂಷಣ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಮೆರಿಕಾದಲ್ಲಿ ನೆಲೆಸಿರುವ ಇವರು ಹೈದರಾಬಾದ್‌ನ ಮೂಲದವರು. ಶಶಿಭೂಷಣ್ ಅಮೆರಿಕದಲ್ಲಿ 500 ಎಕರೆ ಜಾಗದಲ್ಲಿ 3,000 ಕೋಟಿ ವೆಚ್ಚದಲ್ಲಿ ಶಂಕರಾಚಾರ್ಯರ ಆಧ್ಯಾತ್ಮಿಕ ಕೇಂದ್ರ ಮತ್ತು ದೇವಸ್ಥಾನ ಕಟ್ಟಿಸುತ್ತಿದ್ದಾರೆ.

    ಅಮೆರಿಕನ್ ಪೊಲಿಟಿಕಲ್ ಆಕ್ಷನ್ ಕಮಿಟಿಯ ‘ಎ’ ಪ್ಯಾಕ್ ಮುನ್ನಡೆಸಿದ್ದರು. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವಿನಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು. ಈಗ ಅತ್ಯಂತ ಇತಿಹಾಸ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.

  • ಆಫ್ರಿಕಾ ವಿರುದ್ಧ ಸರಣಿ ಗೆದ್ದ ಬಳಿಕ ಪತ್ನಿಯೊಂದಿಗೆ ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸೂರ್ಯಕುಮಾರ್‌ ಭೇಟಿ

    ಆಫ್ರಿಕಾ ವಿರುದ್ಧ ಸರಣಿ ಗೆದ್ದ ಬಳಿಕ ಪತ್ನಿಯೊಂದಿಗೆ ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸೂರ್ಯಕುಮಾರ್‌ ಭೇಟಿ

    ಮಂಗಳೂರು: ಟೀಂ ಇಂಡಿಯಾದ ಟಿ20 ತಂಡದ ನಾಯಕ ಸೂರ್ಯ ಕುಮಾರ್ ಯಾದವ್ (Surya Kumar yadav) ಅವರು ಕುಕ್ಕೆ ಸುಬ್ರಹ್ಮಣ್ಯ (Kukke Subramanya) ಭೇಟಿ ನೀಡಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಗೆದ್ದ ಬಳಿಕ ಪತ್ನಿ ದೇವಿಶಾ ಶೆಟ್ಟಿಯೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಸೂರ್ಯ ಕುಮಾರ್‌ ಯಾದವ್‌ ಆಶ್ಲೇಷ ಬಲಿ ಪೂಜೆ ,ಮಹಾಪೂಜೆ ಅಭಿಷೇಕವನ್ನು ನೆರವೇರಿಸಿದರು. ದೇವಸ್ಥಾನದ ವತಿಯಿಂದ ಯಾದವ್ ದಂಪತಿಗೆ ಗೌರವ ಸಮರ್ಪಿಸಲಾಯಿತು.

    ಈ ಹಿಂದೆ ಜುಲೈನಲ್ಲಿ ಟಿ20 ಕ್ರಿಕೆಟ್‌ ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್‌ ಮತ್ತು ಪತ್ನಿ ದೇವಿಶಾ ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದನ್ನೂ ಓದಿ:IPL Mega Auction 2025: ಹರಾಜಲ್ಲಿ 13ರ ಬಾಲಕ!

    ನ.15 ರಂದು ಆಫ್ರಿಕಾ ವಿರುದ್ಧ ಕೊನೆಯ ಏಕದಿನ ಪಂದ್ಯ ನಡೆದಿತ್ತು. ದಾಖಲೆಯ 135 ರನ್‌ಗಳ ಜಯದೊಂದಿಗೆ 4 ಪಂದ್ಯಗಳ ಟಿ 20 (T20) ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದುಕೊಂಡಿತ್ತು.

     

  • ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ – ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ

    ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ – ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ

    ಮಂಗಳೂರು: ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ (Rain) ಹಿನ್ನೆಲೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ (Kadaba) ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

    ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಎರಡನೇ ಸಲ ಕುಮಾರಧಾರ (Kumaradhara) ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದ್ದು, ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚಿಸಲಾಗಿದೆ. ಇದನ್ನೂ ಓದಿ: Valmiki Scam | ನಾಪತ್ತೆಯಾಗಿದ್ದ ದದ್ದಲ್‌ ವಿಧಾನಸೌಧದಲ್ಲಿ ಪ್ರತ್ಯಕ್ಷ

    ನಿರಂತರ ಸುರಿಯುತ್ತಿರುವ ಮಳೆಗೆ ಕುಮಾರಧಾರ ತುಂಬಿ ಹರಿಯುತ್ತಿದೆ. ಅಲ್ಲದೇ ಕುಮಾರಧಾರ ಉಪನದಿ ದರ್ಪಣ ತೀರ್ಥ ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್

  • ಭಾರೀ ಮಳೆಗೆ ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ

    ಭಾರೀ ಮಳೆಗೆ ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ

    – ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ

    ಮಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

    ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ (Kumaradhara River) ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಿದೆ. ಕುಮಾರಧಾರ ಉಪನದಿ ದರ್ಪಣ ತೀರ್ಥ ಕೂಡ ತುಂಬಿ ಹರಿಯುತ್ತಿದೆ.

    ತುಂಬಿ ಹರಿಯುತ್ತಿರುವುದರಿಂದ ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ದೇಗುಲಕ್ಕೆ ಬರುವ ಭಕ್ತರು ನದಿ ದಡದಲ್ಲೇ ತೀರ್ಥಸ್ನಾನ ಮಾಡುತ್ತಿದ್ದಾರೆ. ನದಿತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ – ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

    ಮಣ್ಣಿನ ದಿಬ್ಬ ಕುಸಿದು ಮಕ್ಕಳಿಬ್ಬರು ಪಾರು: ಇತ್ತ ಪುತ್ತೂರಿನಲ್ಲಿ ಮನೆ ಮೇಲೆ ಮಣ್ಣಿನ ದಿಬ್ಬ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಪಾರಾದ ಘಟನೆ ಇಂದು ನಸುಕಿನ‌ ಜಾವ ನಡೆದಿದೆ. ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಮಜೀದ್ ಎಂಬವರ ಮನೆಗೆ ಪಕ್ಕದ ಮಣ್ಣಿನ ದಿಬ್ಬ ಕುಸಿದು ಬಿದ್ದಿದೆ.

    ಮಜೀದ್ ಮತ್ತು ಇಬ್ಬರು ಮಕ್ಕಳ ಮಲಗಿದ್ದ ಕೊಠಡಿ ಮೇಲೆ ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಬಿದ್ದಿದೆ. ಈ ವೇಳೆ ಇಬ್ಬರು ಮಕ್ಕಳು‌ ಮಣ್ಣಿನಡಿ ಸಿಲುಕಿಕೊಂಡಿದ್ದು ತಕ್ಷಣ ಎಚ್ಚೆತ್ತ ಮಜೀದ್ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ಮಾಡಿದ್ದು,ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆದಿದೆ.

  • ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯನ್ನ ಎತ್ತಿ ಎಸೆದ  ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆ

    ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯನ್ನ ಎತ್ತಿ ಎಸೆದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆ

    ಮಂಗಳೂರು: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯನ್ನು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ (Kukke Subramanya Temple) ಕ್ಷೇತ್ರದ ಆನೆ ಯಶಸ್ವಿನಿ (Elephant Yashaswini) ಎತ್ತಿ ಬಿಸಾಡಿದ ಘಟನೆ ನಡೆದಿದೆ.

    ಪೋಲೀಸರು ಆನೆಯೊಂದಿಗೆ ಫೋಟೋ ತೆಗೆಯುತ್ತಿದ್ದ ಸಂದರ್ಭದಲ್ಲಿ ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯೋರ್ವ ಆನೆಯ ಎದುರು ಸಾಗಿದ್ದ. ವ್ಯಕ್ತಿಯನ್ನು‌ ನೋಡಿದ ಕೂಡಲೇ ಆನೆ ತನ್ನ ಸೊಂಡಿಲಿನಿಂದ ಎತ್ತಿ ಎಸೆದಿದೆ. ಇದನ್ನೂ ಓದಿ: ನಾವು ಭಾರತದ ಜೊತೆಗಿದ್ದೇವೆ: ಪಾಕಿಸ್ತಾನ ಉಪ ಪ್ರಧಾನಿ

     

    ಎಸೆದ ರಭಸಕ್ಕೆ ವ್ಯಕ್ತಿ ನೆಲಕ್ಕೆ ಅಪ್ಪಳಿಸಿದ್ದು ಯಾವುದೇ ಗಾಯಗಳಾಗದೇ ಪಾರಾಗಿದ್ದಾರೆ. ವ್ಯಕ್ತಿ ಕುಡಿತದ ಮತ್ತಿನಲ್ಲೇ ತೂರಾಡಿಕೊಂಡು ಬಂದಿರೋದ್ರಿಂದಲೇ ಆನೆ ಕೋಪಗೊಂಡು ಎತ್ತಿ ಬಿಸಾಡಿದೆ ಎನ್ನಲಾಗಿತ್ತಿದೆ.