Tag: ಕುಣಿಗಲ್

  • ಫ್ರೀ ಬಸ್ ಎಫೆಕ್ಟ್ – ಉಸಿರುಗಟ್ಟಿ ಕಾಪಾಡಿ ಎಂದು ಕೂಗಿಕೊಂಡ ಮಹಿಳೆ

    ಫ್ರೀ ಬಸ್ ಎಫೆಕ್ಟ್ – ಉಸಿರುಗಟ್ಟಿ ಕಾಪಾಡಿ ಎಂದು ಕೂಗಿಕೊಂಡ ಮಹಿಳೆ

    ತುಮಕೂರು: ಮಹಿಳಾ ಪ್ರಯಾಣಿಕರಿಗಾಗಿ ಸರ್ಕಾರ ನೀಡಿರುವ ಫ್ರೀ ಬಸ್ ಯೋಜನೆ (Shakti Scheme) ಹಲವು ಫಜೀತಿ ಸೃಷ್ಟಿ ಮಾಡುತ್ತಿದೆ. ಮೈಸೂರಿನಿಂದ ತುಮಕೂರಿಗೆ (Tumakuru) ಸಂಚರಿಸುತ್ತಿದ್ದ ಬಸ್‌ನಲ್ಲಿ ಮಹಿಳೆಯೊಬ್ಬರು ಉಸಿರುಗಟ್ಟಿ ಕಿರುಚಾಡಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ (Kunigal) ಪಟ್ಟಣದಲ್ಲಿ ನಡೆದಿದೆ.

    ಅತಿಯಾದ ಜನಸಂದಣಿಯಲ್ಲಿ ಬಸ್‌ನೊಳಗೆ ಉಂಟಾದ ತೀವ್ರ ನೂಕಾಟ-ತಳ್ಳಾಟದಿಂದ ಮಹಿಳೆಯೊಬ್ಬರಿಗೆ ಉಸಿರಾಡಲು ತೀವ್ರ ತೊಂದರೆ ಉಂಟಾಗಿದೆ. ನನ್ನನ್ನು ಕಾಪಾಡಿ, ಬಸ್ಸಿನಿಂದ ಕೆಳಗಿಳಿಸಿ ಎಂದು ಜೋರಾಗಿ ಮಹಿಳಾ ಪ್ರಯಾಣಿಕರೊಬ್ಬರು ಕೂಗಿಕೊಂಡಿದ್ದಾರೆ. ತಕ್ಷಣವೇ ಬಸ್ಸು ನಿಲ್ಲಿಸಿದ ನಿರ್ವಾಹಕರು ಮಹಿಳೆಯನ್ನು ಕೆಳಗಿಳಿಸಿದ್ದಾರೆ. ಇದನ್ನೂ ಓದಿ: ಹಳೆ ಬೇರು ಹೊಸ ಚಿಗುರು ರೀತಿ ವಿಜಯೇಂದ್ರ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುತ್ತಿದ್ದಾರೆ: ರೇಣುಕಾಚಾರ್ಯ

    ಈ ಬಸ್ ಮೈಸೂರು ತುಮಕೂರು ಮಾರ್ಗದಲ್ಲಿ ಸಂಚರಿಸುತ್ತಿತ್ತು. ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿದ್ದ ಮಹಿಳಾ ತಂಡ ಈ ಬಸ್ಸಿನಲ್ಲಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.  ಇದನ್ನೂ ಓದಿ: ಕಾಡಾನೆ ದಾಳಿ – ಮನೆ ಮೇಲೆ ತೆಂಗಿನ ಮರ ಬಿದ್ದು ಲಕ್ಷಾಂತರ ರೂ. ನಷ್ಟ

  • ಹೇಮಾವತಿ ನೀರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧ: ಕುಣಿಗಲ್ ಶಾಸಕ ರಂಗನಾಥ್

    ಹೇಮಾವತಿ ನೀರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧ: ಕುಣಿಗಲ್ ಶಾಸಕ ರಂಗನಾಥ್

    ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ (Hemavati Express Canal) ವಿವಾದ ಮತ್ತಷ್ಟು ತೀವ್ರಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಹೇಮಾವತಿ ನೀರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ (Dr Ranganath) ಹೇಳಿಕೆ ನೀಡಿದ್ದಾರೆ.

    ಕುಣಿಗಲ್ ತಾಲೂಕಿನ ಎಲೆಯೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ತಾಲೂಕಿನ ರೈತರಿಗಾಗಿ ತಗ್ಗಿ ಬಗ್ಗಿ ನಡೆಯಲು ಸಿದ್ಧನಿದ್ದೇನೆ. ನೀವು ಪೈಪ್‌ಲೈನ್ ಕಾಮಗಾರಿಗೆ ಅಡ್ಡಿಪಡಿಸಲು ನಿಂತರೆ ಕುಣಿಗಲ್ ತಾಲೂಕಿನ ನಾವು ಗಂಡು ಮಕ್ಕಳು ಕಚ್ಚೆ ಕಟ್ಟಿ ಹೋರಾಟ ಮಾಡೋಕೆ ತಯಾರಿದ್ದೇವೆ. ಮುಂದಿನ ದಿನಗಳಲ್ಲಿ ಬೀದಿಗೆ ಇಳಿಯುತ್ತೇವೆ. ನಮ್ಮ ತಾಲೂಕಿನ ನೀರಿಗಾಗಿ ಹೋರಾಟ ಮಾಡುತ್ತೇವೆ ಎಂದರು. ಇದನ್ನೂ ಓದಿ:‌ ಕಾಲ್ತುಳಿತ ಕೇಸ್‌; IPS ಅಧಿಕಾರಿ ವಿಕಾಸ್‌ ಕುಮಾರ್‌ಗೆ ರಿಲೀಫ್‌ – ಅಮಾನತು ರದ್ದಿಗೆ CAT ಆದೇಶ

    ನಾನು ಸಹ ಕುಣಿಗಲ್ ತಾಲೂಕಿನ ಮಗನಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಹಿಂದೆಮುಂದೆ ನೋಡಲ್ಲ. ನನ್ನ ತಾಲೂಕಿನ ರೈತರಿಗೋಸ್ಕರ ನನ್ನ ದೇಹ ತ್ಯಾಗಕ್ಕೂ ಸಿದ್ಧನಿದ್ದೇನೆ. ನಮ್ಮೂರು ಎಲೆಯೂರಿನಲ್ಲಿ ಈ ಮಾತು ಹೇಳುತ್ತಿದ್ದೇನೆ. ನಾನು ಬಹಳ ತಾಳ್ಮೆಯಿಂದ ನೋಡುತ್ತಿದ್ದೇನೆ ಎಂದು ವೇದಿಕೆ ಮೇಲೆ ಭಾವುಕ ಮಾತುಗಳನ್ನಾಡಿದರು. ಇದನ್ನೂ ಓದಿ: ಅವಧಿ ಮುಗಿದ ವಾಹನಗಳಿಗೆ ಇಂದಿನಿಂದ ಪೆಟ್ರೋಲ್, ಡಿಸೇಲ್ ಇಲ್ಲ

  • ನೀನೇ ಬೇಕೆಂದು ಪ್ರೀತಿಸಿ ಮದುವೆ – 3 ತಿಂಗಳ ಗರ್ಭಿಣಿ ಮಾಡಿ ಪತಿ ಎಸ್ಕೇಪ್

    ನೀನೇ ಬೇಕೆಂದು ಪ್ರೀತಿಸಿ ಮದುವೆ – 3 ತಿಂಗಳ ಗರ್ಭಿಣಿ ಮಾಡಿ ಪತಿ ಎಸ್ಕೇಪ್

    – ಪತಿ ಹುಡುಕಿಕೊಡಿ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ – ಮುಂದಾಗಿದ್ದೇನು?

    ಬೆಂಗಳೂರು: ಮದುವೆಯಾದ ಮೂರೇ ತಿಂಗಳಿಗೆ ಪತ್ನಿಯನ್ನು ಗರ್ಭಿಣಿ ಮಾಡಿ, ಪತಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ(Bengaluru) ಕಾಮಾಕ್ಷಿಪಾಳ್ಯದಲ್ಲಿ(Kamakshipalya) ನಡೆದಿದೆ.

    ಕುಣಿಗಲ್(Kunigal) ಮೂಲದ ಯುವತಿಯು ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೇಮಂತ್ ಕುಮಾರ್ ಪರಿಚಿತಯವಾಗಿತ್ತು. ಹೇಮಂತ್, ಯುವತಿಯ ಬೆನ್ನು ಬಿದ್ದು ಪ್ರೀತಿಸುವಂತೆ ಒತ್ತಾಯ ಮಾಡಿದ್ದ. ನಂತರ ಕಳೆದ ಮಾರ್ಚ್‌ನಲ್ಲಿ ಇಬ್ಬರು ವಿವಾಹವಾಗಿದ್ದರು. ಆದರೆ ಮದುವೆಯಾದ ಮೂರೇ ತಿಂಗಳಲ್ಲಿ ಪತ್ನಿಯ ನಡತೆ ಸರಿಯಲ್ಲ ಎಂದು ದೂಷಿಸಿ, ಮನೆಬಿಟ್ಟು ಹೋಗಿದ್ದ. ಇದನ್ನೂ ಓದಿ: ಮಡೆನೂರು ಮನು ವಿವಾದದಲ್ಲಿ ಅಪ್ಪಣ ಹೆಸರು ತಳುಕು – ನಟ ಹೇಳಿದ್ದೇನು?

    ಇದೀಗ 3 ತಿಂಗಳ ಗರ್ಭಿಣಿಯಾಗಿರೋ ಪತ್ನಿ, ಪತಿಗಾಗಿ ಹುಡುಕಾಟ ನಡೆಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಶ್ಚಿಮ ವಿಭಾಗ ಮಹಿಳಾ ಪೊಲೀಸ್ ಠಾಣೆಗೆ ಪತ್ನಿ ದೂರು ನೀಡಲಾಗಿದೆ. ಪೊಲೀಸರು ಪತಿ, ಪತ್ನಿ ಇಬ್ಬರನ್ನೂ ಕರೆಸಿ ತಿಳಿ ಹೇಳಿ ಕಳುಹಿಸಿದ್ದಾರೆ.

  • ತಂಗಿ ಪ್ರೀತಿಗೆ ಅಣ್ಣನೇ ಸಪೋರ್ಟ್‌ – ಬೈದು ಬುದ್ದಿ ಹೇಳಿದ ತಂದೆಯನ್ನೇ ಕೊಂದ ಮಗ!

    ತಂಗಿ ಪ್ರೀತಿಗೆ ಅಣ್ಣನೇ ಸಪೋರ್ಟ್‌ – ಬೈದು ಬುದ್ದಿ ಹೇಳಿದ ತಂದೆಯನ್ನೇ ಕೊಂದ ಮಗ!

    – ಕುಣಿಗಲ್ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣಕ್ಕೆ ಟ್ವಿಸ್ಟ್

    ತುಮಕೂರು: ಕುಣಿಗಲ್ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೈದು ಬುದ್ದಿಮಾತು ಹೇಳಿದ ತಂದೆಯನ್ನೇ ಮಗ ಹತ್ಯೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

    ಹೆಬ್ಬೂರಿನ ತಿಮ್ಮಸಂದ್ರ ಗ್ರಾಮದ ನಿವಾಸಿಯಾಗಿದ್ದ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕ ನಾಗೇಶ್ (58) ಇದೇ ತಿಂಗಳ 10 ರಂದು ಸಾವನಪ್ಪಿದ್ದರು. ಕರೆಂಟ್ ಶಾಕ್‌ನಿಂದ ಫ್ಯಾಕ್ಟರಿಯಲ್ಲಿ ಮೃತಪಟ್ಟಿದ್ದಾರೆಂದು ಬಿಂಬಿಸಲಾಗಿತ್ತು. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಪೊಲೀಸ್ ತನಿಖೆ ವೇಳೆ ಇದು ಅಸಹಜ ಸಾವಲ್ಲ, ಬದಲಾಗಿ ಕೊಲೆ ಎಂಬುದು ಗೊತ್ತಾಗಿದೆ. ಸದ್ಯ ಸಿಸಿಟಿವಿ ಆಧರಿಸಿ ತನಿಖೆ ಆರಂಭಿಸಿದ ಪೊಲೀಸರಿಗೆ, ಮಗನಿಂದಲೇ ಹತ್ಯೆ ನಡೆದಿರುವುದು ತಿಳಿದುಬಂದಿದೆ.

    ಫ್ಯಾಕ್ಟರಿಯಲ್ಲಿ ಇಟ್ಟಿದ್ದ ಹಣವನ್ನು ನಾಗೇಶ್ ಅವರ ಪುತ್ರ ಸೂರ್ಯ ತೆಗೆದುಕೊಳ್ಳುತ್ತಿದ್ದ. ತಂದೆಗೆ ಕಾಣದಂತೆ ಪದೇ ಪದೇ ಹಣ ತೆಗೆದುಕೊಳ್ಳುತ್ತಿದ್ದ. ಇದು ನಾಗೇಶ್‌ಗೆ ಗೊತ್ತಾದ ಬಳಿಕ ಮಗನ ಜೊತೆ ಜಗಳವಾಯಿತು. ಇನ್ನೊಂದೆಡೆ ಸೂರ್ಯನ ತಂಗಿಯನ್ನ ಲವ್ ಸಂಜಯ್ ಎಂಬಾತ ಪ್ರೀತಿ ಮಾಡುತ್ತಿದ್ದ. ಸಂಜಯ್ ಲವ್‌ಗೆ ಸೂರ್ಯನೇ ಸಪೋರ್ಟ್ ಮಾಡಿದ್ದ. ಈ ವಿಚಾರಕ್ಕೂ ನಾಗೇಶ್ ವಿರೋಧ ವ್ಯಕ್ತಪಡಿಸಿದ್ದರು. ಸಂಜಯ್ ಮನೆಗೆ ಬರುವುದಕ್ಕೆ ನಾಗೇಶ್ ವಿರೋಧ ವ್ಯಕ್ತಪಡಿಸಿದ್ದರು. ಒಮ್ಮೆ ಮನೆ ಬಳಿ ಬಂದಾಗ ಎಚ್ಚರಿಕೆಯನ್ನೂ ನೀಡಿದ್ದರು.

    ನಾಗೇಶ್ ಹತ್ಯೆಗೆ ಎರಡು ಬಾರಿ ಸೂರ್ಯ ಹಾಗೂ ಸಂಜಯ್ ಕೊಲೆಗೆ ಯತ್ನಿಸಿದ್ದರು. ಒಂದು ಸಲ ಅಪಘಾತ ಮಾಡಿಸಿ ಕೊಲೆ ಯತ್ನಿಸಿದ್ದರು. ಅಪಘಾತದಲ್ಲಿ ನಾಗೇಶ್ ಬಚಾವ್ ಆಗಿದ್ದರು. ಚಿತ್ರದುರ್ಗದಲ್ಲಿ ನಾಗೇಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಅಲ್ಲಿಯೂ ನಾಗೇಶ್ ಬಚಾವ್ ಆಗಿದ್ದರು. ಇದೀಗ ಫ್ಯಾಕ್ಟರಿಯಲ್ಲಿ ಕೊಲೆ ಮಾಡಿದ್ದಾರೆ.

  • ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಐವರಿಗೆ ಸಣ್ಣಪುಟ್ಟ ಗಾಯ

    ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಐವರಿಗೆ ಸಣ್ಣಪುಟ್ಟ ಗಾಯ

    ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ (Bus) ಪಲ್ಟಿಯಾದ ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ತುಮಕೂರು (Tumakuru) ಜಿಲ್ಲೆ ಕುಣಿಗಲ್ (Kunigal) ತಾಲೂಕಿನ ಹೇರೂರು ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

    ಬಸ್ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಬಸ್‌ನಲ್ಲಿ ಒಟ್ಟು 24 ಜನ ಪ್ರಯಾಣಿಕರು ಇದ್ದರು. ಬಸ್ ಪಲ್ಟಿಯಿಂದಾಗಿ 5 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಮಗು ಸೇರಿ ಮೂವರಿಗೆ ತೀವ್ರ ಗಾಯ

    ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Champions Trophy 2025 | ಟಾಸ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ

  • ಡಿ.ಕೆ ಶಿವಕುಮಾರ್‌ಗೆ ನೋವಾಗುವಂತೆ ಮಾತನಾಡಬಾರದು: ಕುಣಿಗಲ್ ಶಾಸಕ ರಂಗನಾಥ್

    ಡಿ.ಕೆ ಶಿವಕುಮಾರ್‌ಗೆ ನೋವಾಗುವಂತೆ ಮಾತನಾಡಬಾರದು: ಕುಣಿಗಲ್ ಶಾಸಕ ರಂಗನಾಥ್

    ಬೆಂಗಳೂರು: ಯಾರೇ ಆಗಲಿ ಕಷ್ಟ ಪಟ್ಟು ಪಕ್ಷ ಕಟ್ಟಿದ ಡಿ.ಕೆ ಶಿವಕುಮಾರ್‌(D K Shivakumar) ಅವರಿಗೆ ನೋವಾಗುವಂತೆ ಮಾತನಾಡಬಾರದು ಎಂದು ಕುಣಿಗಲ್(Kunigal) ಶಾಸಕ ರಂಗನಾಥ್(Ranganath) ಹೇಳಿದರು.

    ಬೆಂಗಳೂರಿನಲ್ಲಿ ರಾಜಣ್ಣ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಬ್ಬ ಕಾರ್ಯಕರ್ತನಾಗಿ ಪಕ್ಷ ಕಟ್ಟಿದವರಿಗೆ ನೋವಾಗುವ ರೀತಿ ಮಾತಾಡಬಾರದು. ಡಿಕೆಶಿ ಅವರು ಪಕ್ಷಕ್ಕಾಗಿ ಹಗಲು ರಾತ್ರಿ ದುಡಿದಿದ್ದಾರೆ. ಅವರಿಗೆ ನೋವಾಗುವ ರೀತಿ ಮಾತನಾಡುವುದು ತಪ್ಪು ಎಂದರು. ಇದನ್ನೂ ಓದಿ : ಪಿಜಿ ಮೆಡಿಕಲ್: ಸ್ಟ್ರೇ ವೇಕೆನ್ಸಿ ಸುತ್ತಿಗೆ ಅರ್ಜಿ ಸಲ್ಲಿಸಲು ಫೆ.19ರವರೆಗೆ ಅವಕಾಶ: ಕೆಇಎ

    ಮೊದಲು ಸರ್ಕಾರ ಬಂದ್ರೆ ಸಾಕಪ್ಪ ಅಂತ ನಮಗೆ ಇತ್ತು. ಡಿ.ಕೆ ಶಿವಕುಮಾರ್ ಅವರ ಅಧ್ಯಕ್ಷತೆ ಮತ್ತು ಸಿದ್ದರಾಮಯ್ಯ ಅವರ ಮುಂದಾಳತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಪಕ್ಷ ಹಾಗೂ ಸರ್ಕಾರ ಎರಡು ಚೆನ್ನಾಗಿ ನಡೆಯುತ್ತಿದೆ. ಇಂತಹ ಸಂದರ್ಭಗಳಲ್ಲಿ ಈ ಹೇಳಿಕೆ ತರವಲ್ಲ. ದಯವಿಟ್ಟು ಕಾರ್ಯಕರ್ತರಿಗೆ ನೋವಾಗುವ ಹೇಳಿಕೆ ಕೊಡಬಾರದು. ಎಷ್ಟೇ ದೊಡ್ಡವರಾದ್ರೂ ಪಕ್ಷಕ್ಕೆ ಹಾನಿ ಮಾಡಬಾರದು ಎಂದು ಡಿಕೆ ಶಿವಕುಮಾರ್ ಅವರು ಹೇಳಿಕೊಟ್ಟಿದ್ದಾರೆ. ರಾಜಣ್ಣ ಹೇಳಿಕೆಯನ್ನು ಎಐಸಿಸಿ ಅವರು ನೋಡ್ತಾರೆ ಎಂದು ಹೇಳಿದರು. ಇದನ್ನೂ ಓದಿ : ಅಟಲ್‌ಜೀ ಜನ್ಮ ಶತಾಬ್ಧಿ – ವಾಜಪೇಯಿ ಜತೆ ಕೆಲಸ ಮಾಡಿದ ಸಮಕಾಲೀನ ಕಾರ್ಯಕರ್ತರಿಗೆ ಬಿಜೆಪಿ ಗೌರವ

  • ತುಮಕೂರು| ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ – ಪತಿ ಸಾವು, ಪತ್ನಿ ಗಂಭೀರ

    ತುಮಕೂರು| ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ – ಪತಿ ಸಾವು, ಪತ್ನಿ ಗಂಭೀರ

    ತುಮಕೂರು: ಸಾಲಬಾಧೆ (Indebtedness) ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಪತಿ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆ ಕುಣಿಗಲ್ (Kunigal) ಪಟ್ಟಣದ ಹೌಸಿಂಗ್ ಬೋರ್ಡ್‌ನಲ್ಲಿ ನಡೆದಿದೆ.

    ಅನಿಲ್ (47) ಹಾಗೂ ಉಮಾ (45) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ ಸೇವಿಸಿದ ಪರಿಣಾಮ ಅನಿಲ್ ಮೃತಪಟ್ಟಿದ್ದು, ಪತ್ನಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಅನಿಲ್ ಕಗ್ಗೆರೆ ಗ್ರಾಮದವರಾಗಿದ್ದು, ಹೌಸಿಂಗ್ ಬೋರ್ಡ್‌ನಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಜೊತೆ ವಾಸವಿದ್ದರು. ಹಲವು ವರ್ಷಗಳಿಂದ ಕುಣಿಗಲ್ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ಸ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಇತ್ತೀಚಿಗೆ ಆನ್‌ಲೈನ್‌ನಲ್ಲಿ ಹಣ ಹೂಡಿಕೆ (Online Investment) ಮಾಡಿ ಅನಿಲ್ ಸುಮಾರು 8-10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್‌ನನ್ನು ಎನ್‌ಕೌಂಟರ್‌ ಮಾಡಿದ್ರೆ 1,11,11,111 ರೂ. ಬಹುಮಾನ – ಕರ್ಣಿ ಸೇನೆಯಿಂದ ಘೋಷಣೆ

    ಸಾಲಗಾರರ ಕಿರುಕುಳಕ್ಕೆ ಬೇಸತ್ತು ಸೋಮವಾರ ಸಂಜೆ ತಮ್ಮ ಮನೆಯಲ್ಲಿ ಮಾತ್ರೆ ಸೇವಿಸಿ ಪತಿ, ಪತ್ನಿ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಡ ಅನಿಲ್ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಪತ್ನಿ ಉಮಾಗೆ ಕುಣಿಗಲ್ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಕೆವಿ ಹಾಗೂ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ನಕಲಿ ರಸಗೊಬ್ಬರ, ಕ್ರಿಮಿನಾಶಕ ಸಾಗಿಸುತ್ತಿದ್ದ ವಾಹನ ಜಪ್ತಿ

  • ದೇಗುಲದ ಭದ್ರತಾ ಸಿಬ್ಬಂದಿಯ ಜಾತಿ ನಿಂದನೆ- ಅರ್ಚಕ ಅರೆಸ್ಟ್

    ದೇಗುಲದ ಭದ್ರತಾ ಸಿಬ್ಬಂದಿಯ ಜಾತಿ ನಿಂದನೆ- ಅರ್ಚಕ ಅರೆಸ್ಟ್

    ತುಮಕೂರು: ದೇವಸ್ಥಾನದ ಹುಂಡಿ ಮುಟ್ಟಿದ ದೇಗುಲದ ಭದ್ರತಾ ಸಿಬ್ಬಂದಿಯ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ದೇವಸ್ಥಾನದ ಅರ್ಚಕನೋರ್ವನ ಬಂಧನವಾಗಿದೆ. ತುಮಕೂರು (Tumakuru) ಜಿಲ್ಲೆ ಕುಣಿಗಲ್ (Kunigal) ಠಾಣಾ ವ್ಯಾಪ್ತಿಯ ಬೆಟ್ಟದ ರಂಗಸ್ವಾಮಿ ದೇವಸ್ಥಾನದಲ್ಲಿ (Bettada Ranganathaswamy Temple) ಈ ಘಟನೆ ನಡೆದಿದೆ.

    ಅರ್ಚಕ ರಾಕೇಶ್ ವಿರುದ್ಧ ದೇಗುಲದ ಭದ್ರತಾ ಸಿಬ್ಬಂದಿ ಪಾರ್ಥರಾಜು ಎಂಬುವವರು ದೂರು ನೀಡಿದ್ದರು. ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದೇ ದಿನ ಮಧ್ಯಾಹ್ನ ಅರ್ಚಕ ರಾಕೇಶ್ ಕೋಲಿನಿಂದ ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಭದ್ರತಾ ಸಿಬ್ಬಂದಿ ದೂರಿನಲ್ಲಿ ತಿಳಿಸಿದ್ದಾರೆ.  ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಇಂಟ್ರೆಸ್ಟಿಂಗ್ ಕಳ್ಳತನ ಪ್ರಕರಣಗಳು – ಒಟ್ಟು 7 ಖದೀಮರ ಅರೆಸ್ಟ್!

    ಅರ್ಚಕ ಕೋಲಿನಿಂದ ಭದ್ರತಾ ಸಿಬ್ಬಂದಿಗೆ ಹೊಡೆಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಲ್ಲಿ ನೀನು ಕುಳಿತುಕೊಳ್ಳುವಂತಿಲ್ಲ. ಇದು ಸರ್ಕಾರದ ದೇವಾಲಯ. ಇಲ್ಲಿಂದ ಹೋಗು ಎಂದು ಅರ್ಚಕ ಹೇಳಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಈ ಆಧಾರದ ಮೇಲೆ ಅರ್ಚಕನನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: Photo Gallery | ಮಂಗಳೂರು ನವರಾತ್ರಿ ಉತ್ಸವ – ಶಾರದಾ ಮಾತೆಗೆ 6ನೇ ದಿನದ ಶೃಂಗಾರ

  • ಡೀಸೆಲ್ ಟ್ಯಾಂಕರ್, ಲಾರಿ ಡಿಕ್ಕಿ – ಇಬ್ಬರು ಟೋಲ್ ಸಿಬ್ಬಂದಿ ಸೇರಿ ಮೂವರಿಗೆ ಗಂಭೀರ ಗಾಯ

    ಡೀಸೆಲ್ ಟ್ಯಾಂಕರ್, ಲಾರಿ ಡಿಕ್ಕಿ – ಇಬ್ಬರು ಟೋಲ್ ಸಿಬ್ಬಂದಿ ಸೇರಿ ಮೂವರಿಗೆ ಗಂಭೀರ ಗಾಯ

    – ಡೀಸೆಲ್ ತುಂಬಿಕೊಳ್ಳಲು ಮುಗಿಬಿದ್ದ ಸ್ಥಳೀಯರು

    ತುಮಕೂರು: ಡೀಸೆಲ್ ಟ್ಯಾಂಕರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ತುಮಕೂರು (Tumakuru) ಜಿಲ್ಲೆಯಲ್ಲಿ ನಡೆದಿದೆ.

    ಕುಣಿಗಲ್ (Kunigal) ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ರಾಜ್ಯ ಹೆದ್ದಾರಿ 33ರಲ್ಲಿರುವ ದೊಡ್ಡಮಾವತ್ತೂರು ಟೋಲ್ ಬಳಿ ಅಪಘಾತ ಸಂಭವಿಸಿದೆ. ಕುಣಿಗಲ್ ಕಡೆಯಿಂದ ಮದ್ದೂರು ಕಡೆಗೆ ತೆರಳುತ್ತಿದ್ದ ಟೈಲ್ಸ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮದ್ದೂರು ಕಡೆಯಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಡೀಸೆಲ್ ತುಂಬಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದೊಡ್ಡಮಾವತ್ತೂರು ಟೋಲ್‌ಗೆ ಗುದ್ದಿ ಸಿಬ್ಬಂದಿ ವಿಶ್ರಾಂತಿ ಕೊಠಡಿಗೆ ಲಾರಿ ನುಗ್ಗಿದ್ದು, ಟೋಲ್ ಸಂಪೂರ್ಣ ಜಖಂ ಆಗಿದೆ. ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

    ಇಂದು (ಮಂಗಳವಾರ) ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಡಿಸೆಲ್ ತುಂಬಿಕೊಳ್ಳಲು ಸ್ಥಳೀಯರು ಮುಗಿಬಿದ್ದಿದ್ದು, ಬಕೆಟ್, ಬಿಂದಿಗೆಗಳಲ್ಲಿ ಡೀಸೆಲ್ ತುಂಬಿಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಮೆಟ್ರೋ ಟ್ರ‍್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನ – ಪ್ರಾಣಾಪಾಯದಿಂದ ಯುವಕ ಪಾರು

    ಡೀಸೆಲ್ ಟ್ಯಾಂಕರ್ ಚಾಲಕ ಹಾಗೂ ಇಬ್ಬರು ಟೋಲ್ ಸಿಬ್ಬಂದಿಗೆ ಗಂಭೀರ ಗಾಯವಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮೃತೂರು ಪೊಲೀಸರು, ಹುಲಿಯೂರುದುರ್ಗ ಪೊಲೀಸರು, ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸಿಬ್ಬಂದಿಗಳು ಧಾವಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ, ರಾಜ್ಯ ಪೊಲೀಸರಿಗೆ ಸತ್ವ ಇಲ್ಲ: ಶೋಭಾ ಕರಂದ್ಲಾಜೆ

    ಡಿಸೇಲ್ ತುಂಬಿದ್ದ ಟ್ಯಾಂಕರ್ ಅನಾಹುತ ಆಗದಂತೆ ನೋಡಿಕೊಂಡಿದ್ದಾರೆ. ಮೂರು ಕ್ರೇನ್‌ಗಳ ಮೂಲಕ ವಾಹನಗಳನ್ನು ಮೇಲೆತ್ತಿದ್ದು, ವಾಹನಗಳ ಓಡಾಟಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ. ಗಾಯಾಳುಗಳು ಕುಣಿಗಲ್ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಯಾದಗಿರಿ| ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

  • ಗೌರಿ ಹಬ್ಬಕ್ಕೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿದು ಸಾವು

    ಗೌರಿ ಹಬ್ಬಕ್ಕೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿದು ಸಾವು

    ತುಮಕೂರು: ಗೌರಿ ಹಬ್ಬದ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ಪೂಜೆಗೆ ತೆರಳಿದ್ದ ಬಾಲಕಿ (Girl) ಹಾವು ಕಡಿತದಿಂದ (Snake Bite) ಮೃತಪಟ್ಟ ಧಾರುಣ ಘಟನೆ ಕುಣಿಗಲ್ (Kunigal) ಪಟ್ಟಣದ 22ನೇ ವಾರ್ಡ್‌ನಲ್ಲಿ ಶುಕ್ರವಾರ ನಡೆದಿದೆ.

    ಸ್ಪಂದನ (13) ಮೃತಪಟ್ಟ ಬಾಲಕಿ. ಈಕೆ 22ನೇ ವಾರ್ಡ್‌ನ ಮಲ್ಲಿಪಾಳ್ಯದಲ್ಲಿ ವಾಸವಾಗಿರುವ ಪುರಸಭೆ ವಾಟರ್ ಮ್ಯಾನ್ ಕುಮಾರ್ ಎಂಬುವರ ಮಗಳು.

    ಶುಕ್ರವಾರ ಮನೆಯವರೊಂದಿಗೆ ಗೌರಿ ಹಬ್ಬದ ನಿಮಿತ್ತ ಪಟ್ಟಣದ ವೈಕೆ ಆರ್ ಪಾರ್ಕ್ ಬಳಿ ಇರುವ ಮುಳ್ಳುಕಟ್ಟಮ್ಮ ದೇವಾಲಯಕ್ಕೆ ಪೂಜೆಗೆ ತೆರಳಿದ್ದಳು. ಬಾಲಕಿ ದೇವಾಲಯ ಸಮೀಪದಲ್ಲಿದ್ದ ಬೆಂಚ್ ಮೇಲೆ ಕುಳಿತ್ತಿದ್ದಾಗ ಹಾವು ಕಡಿತಕ್ಕೆ ಒಳಗಾಗಿದ್ದಾಳೆ. ಇದನ್ನೂ ಓದಿ: 2026-27 ರೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ವಿಶ್ವಾಸ: ಸಿದ್ದರಾಮಯ್ಯ

     

    ಪೂಜೆ ಮುಗಿಸಿಕೊಂಡು ಕುಟುಂಬದವರೊಂದಿಗೆ ಮನೆಗೆ ಬಂದ ಬಾಲಕಿ, ಕೆಲಕಾಲ ಆಟ ಆಡಿದ್ದಾಳೆ. ನಂತರ ತೀವ್ರ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾಳೆ. ಮನೆಯವರು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

    ಮತ್ತಷ್ಟು ಚಿಕಿತ್ಸೆಗೆ ಚಿಕಿತ್ಸೆಗೆ ಬೆಳ್ಳೂರ್ ಕ್ರಾಸ್ ಬಳಿ ಇರುವ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ.