Tag: ಕುಣಿಗಲ್

  • ಮನೆ ಮಾಲೀಕನಿಗೆ ಗುಂಡು ಹಾರಿಸಿ ದರೋಡೆಗೆ ಯತ್ನ – ಆರೋಪಿಗಳು ಅಂದರ್

    ಮನೆ ಮಾಲೀಕನಿಗೆ ಗುಂಡು ಹಾರಿಸಿ ದರೋಡೆಗೆ ಯತ್ನ – ಆರೋಪಿಗಳು ಅಂದರ್

    ತುಮಕೂರು: ನೀರು ಕೇಳುವ ನೆಪದಲ್ಲಿ ಮನೆಗೆ ಬಂದು, ಪಿಸ್ತೂಲ್‍ನಿಂದ ಗುಂಡು ಹಾರಿಸಿ ಮನೆ ದರೋಡೆ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು (Kunigal Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಜಾರ್ಖಂಡ್ (Jharkhand) ಮೂಲದ ಏಜಾಸ್ ಮಿರ್ದಹ (30), ಸಹಿಬುಲ್ ಅನ್ಸಾರಿ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಮಾ.26 ರಂದು ಕುಣಿಗಲ್‍ನ ಉರ್ಕೆಹಳ್ಳಿ ಗ್ರಾಮದ ಗಂಗಣ್ಣ ಎಂಬುವರ ತೋಟದ ಮನೆಗೆ ಕುಡಿಯುವ ನೀರು ಕೇಳಿಕೊಂಡು ಬಂದಿದ್ದರು. ಬಳಿಕ ಮನೆಯಲ್ಲಿದ್ದ ಹಣ ದೋಚಲು ಯತ್ನಿಸಿದ್ದರು. ಈ ವೇಳೆ ದರೋಡೆ ತಡೆಯಲು ತಡೆಯಲು ಯತ್ನಿಸಿದ್ದ ಗಂಗಣ್ಣನ ಕಾಲಿಗೆ ಗುಂಡು ಹಾರಿಸಿದ್ದರು. ಇದನ್ನೂ ಓದಿ: ಅಡಿಟರ್ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಅಂದೇ ಕೆಲ್ಸ ಮುಗಿಸಲು ಒತ್ತಡ ಹಾಕಿದ್ದಕ್ಕೆ ಸಹೋದ್ಯೋಗಿಗಳಿಂದಲೇ ಸುಪಾರಿ

    ಈ ಸಂಬಂಧ ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಒಂದು ಬೈಕ್, ಎರಡು ಪಿಸ್ತೂಲ್, ನಾಲ್ಕು ಸಜೀವ ಗುಂಡುಗಳು ಹಾಗೂ ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

    ಈ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್: ಪೊಲೀಸ್ ಆಯುಕ್ತರಿಗೆ ದೂರು

  • ಕೆರೆಗೆ ಬಿದ್ದು ನವ ವಿವಾಹಿತೆ ಸಾವು

    ಕೆರೆಗೆ ಬಿದ್ದು ನವ ವಿವಾಹಿತೆ ಸಾವು

    ತುಮಕೂರು: ಖಿನ್ನತೆಗೆ ಒಳಗಾಗಿದ್ದ ನವ ವಿವಾಹಿತೆ (Newly Married Woman) ಕೆರೆಗೆ ಬಿದ್ದು ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಶಿಡ್ಲನಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಕುಣಿಗಲ್ ಪಟ್ಟಣದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪಿಯುಸಿ (Second PUC) ವ್ಯಾಸಂಗ ಮಾಡುತ್ತಿದ್ದ ರಕ್ಷಿತಾ ಕೆರೆಗೆ (Lake) ಬಿದ್ದು ಪ್ರಾಣ ಕಳೆದುಕೊಂಡ ನವ ವಿವಾಹಿತೆ.  ಇದನ್ನೂ ಓದಿ: ಗಂಡ ಹೆಂಡತಿ ಬಿಗ್ ಬಾಸ್ ಮನೆಯಲ್ಲೇ ಡಿವೋರ್ಸ್

     

    ಕಳೆದ ಇಪ್ಪತ್ತು ದಿನಗಳ ಹಿಂದೆ ಸೋದರ ಮಾವನೊಂದಿಗೆ ಕುಟುಂಬಸ್ಥರು ಒಪ್ಪಿಸಿ ಮದುವೆ ಮಾಡಿಕೊಡಲಾಗಿತ್ತು. ಮದುವೆ ಬಳಿಕ ರಕ್ಷಿತಾಳನ್ನು ಕಾಲೇಜಿನಿಂದ ಬಿಡಿಸಿದ್ದರು ಎಂದು ತಿಳಿದು ಬಂದಿದೆ.

    ಆರೋಗ್ಯ ಸಮಸ್ಯೆ (Health Problem) ಕಾರಣದಿಂದ ಖಿನ್ನತೆ ಒಳಗಾಗಿದ್ದ ರಕ್ಷಿತಾ ಕೆರೆಗೆ ಬಿದ್ದಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ(ಯುಡಿಆರ್) ದಾಖಲಾಗಿದೆ.

     

  • ಕ್ಯಾಂಡಲ್‌ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕುತ್ತಿದ್ದ ಬಾಲಕಿ ಬೆಂಕಿಗೆ ಬಲಿ

    ಕ್ಯಾಂಡಲ್‌ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕುತ್ತಿದ್ದ ಬಾಲಕಿ ಬೆಂಕಿಗೆ ಬಲಿ

    ತುಮಕೂರು:  ಮೊಂಬತ್ತಿ ಬೆಳಕಿನಲ್ಲಿ ಬೈಕ್‌ಗೆ ಪೆಟ್ರೋಲ್ ಹಾಕುವಾಗ ಪೆಟ್ರೊಲ್‌ ಬಾಟಲ್‌ ಕೈತಪ್ಪಿ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸೌಂದರ್ಯ (16) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

    ಕುಣಿಗಲ್ ತಾಲೂಕು ಎಡೆಯೂರು ಹೋಬಳಿಯ ಕಟ್ಟಿಗೇಹಳ್ಳಿ ಗ್ರಾಮದ  ಲಕ್ಷ್ಮಣರವರ ಮಗಳು ಸೌಂದರ್ಯ ಪಟ್ಟಣದ ಮಹಾತ್ಮ ಗಾಂಧಿ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿ ಓದುತ್ತಿದ್ದಳು.  ಇದನ್ನೂ ಓದಿ: ಮೇ ಕಳೆದ ಬಳಿಕ ಸರ್ಕಾರ ಪತನ ಖಚಿತ: ಹೆಚ್‍ಡಿಕೆ ಸ್ಫೋಟಕ ಭವಿಷ್ಯ

     

    ಶುಕ್ರವಾರ ರಾತ್ರಿ ಮನೆಯ ಅಂಗಡಿಯಲ್ಲಿ ವಿದ್ಯುತ್ ಇಲ್ಲದಾಗ ಮೊಂಬತ್ತಿ ಹಚ್ಚಿ ಇಡಲಾಗಿತ್ತು. ಎದುರಿನಲ್ಲಿಯೇ ಬೈಕ್‌ಗೆ ಪೆಟ್ರೋಲ್ ಹಾಕುವಾಗ ವಿದ್ಯುತ್ ಬಂದಾಗ ಗಾಬರಿಗೊಂಡ ಸೌಂದರ್ಯ ಪೆಟ್ರೋಲ್ ಬಾಟಲಿ ಕೈ ಬಿಟ್ಟಿದ್ದಾಳೆ. ಈ ವೇಳೆ ಪೆಟ್ರೋಲ್ ಚೆಲ್ಲಿ ಮೇಣದಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಅಂಗಡಿ ಸಾಮಾಗ್ರಿ ಆಹುತಿಯಾಗಿತ್ತು.

    ಗಾಯಗೊಂಡಿದ್ದ ಸೌಂದರ್ಯಳನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸೌಂದರ್ಯ ಮೃತಪಟ್ಟಿದ್ದು, ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

     

  • ಕಂಬಳ ನೋಡಿ ವಾಪಸ್ಸಾಗ್ತಿದ್ದ ವೇಳೆ ಭೀಕರ ಅಪಘಾತ- ಇಬ್ಬರು ಸಾವು, ಮೂವರು ಗಂಭೀರ

    ಕಂಬಳ ನೋಡಿ ವಾಪಸ್ಸಾಗ್ತಿದ್ದ ವೇಳೆ ಭೀಕರ ಅಪಘಾತ- ಇಬ್ಬರು ಸಾವು, ಮೂವರು ಗಂಭೀರ

    ತುಮಕೂರು: ಕಂಬಳ (Kambala) ನೋಡಿ ವಾಪಸ್ಸಾಗುತ್ತಿದ್ದ ವೇಳೆ ಬೋರ್‌ವೆಲ್ ಲಾರಿ (Borewell Lorry) ಹಾಗೂ ಕಾರಿನ (Car) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

    ತುಮಕೂರು ಜಿಲ್ಲೆಯ ಕುಣಿಗಲ್ (Kunigal) ತಾಲೂಕಿನ ಚಿಗಣಿಪಾಳ್ಯ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಮಂಗಳೂರಿನ (Mangaluru) ಪೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶನ್ ಶೆಟ್ಟಿ(20) ಹಾಗೂ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಭಟ್ಟರ ತೋಟ ಗ್ರಾಮದ ನಿವಾಸಿ ಫಿಲೀಪ್ ಲೋಬೋ (32) ಮೃತಪಟ್ಟಿದ್ದಾರೆ. ನಿತೀಶ್ ಬಂಡಾರಿ, ಪ್ರೀತಿ ಲೋಬೋ ಮತ್ತು ಹರೀಶ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಫ್ಲೈಓವರ್‌ಗೆ ಬಸ್ ಡಿಕ್ಕಿ- ನಾಲ್ವರಿಗೆ ಗಾಯ

    ಬೆಂಗಳೂರಿನಲ್ಲಿ (Bengaluru) ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಬೋರ್‌ವೆಲ್ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪಾಲಿಕೆ ಪ್ಲ್ಯಾನ್ – ಅಂಡರ್‌ಪಾಸ್, ಮೇಲ್ಸೇತುವೆ ನಿರ್ಮಾಣಕ್ಕೆ ಮುಂದಾದ ಪಾಲಿಕೆ

    ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಹಾಗೂ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 3ನೇ ಬ್ಯಾಚ್ ಒತ್ತೆಯಾಳುಗಳನ್ನು ಇಂದು ಬಿಡುಗಡೆ ಮಾಡಲಿದೆ ಹಮಾಸ್

  • ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    ತುಮಕೂರು: ಕುಣಿಗಲ್ (Kunigal) ಪಟ್ಟಣದಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ನಾಲ್ಕು ಮಂದಿ ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸುವಲ್ಲಿ (Arrest) ಯಶಸ್ವಿಯಾಗಿದ್ದಾರೆ.

    ಕೂತರಹಳ್ಳಿ ಗ್ರಾಮದ ಕೆಡಿ ಆಕಾಶ್, ಬಿಳಿದೇವಾಲಯ ಗ್ರಾಮದ ಸಾಗರ್, ಚಿಕ್ಕಕಲ್ಯಾ ಗ್ರಾಮದ ರಾಜಣ್ಣ, ಎಂಎಸ್ ಪ್ರಸಾದ್ ಬಂಧಿತ ಆರೋಪಿಗಳು. ಆಗಸ್ಟ್ 3 ರಂದು ಜಗದೀಶ್ ಎಂಬಾತ ಕುಣಿಗಲ್ ಪಟ್ಟಣದ ಎಲ್‌ಐಸಿ ಕಚೇರಿ ಬಳಿ ಚಹಾ ಕುಡಿಯುತ್ತಾ ನಿಂತಿದ್ದಾಗ ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಲಾಂಗ್‌ನಿಂದ ಏಕಾಏಕಿ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇದನ್ನೂ ಓದಿ: ಕೊಲೆ ಆರೋಪಿಯನ್ನು ಬಂಧಿಸಲು ಸಹಾಯ ಮಾಡಿದ ತಾರಾಗೆ ಭಾರೀ ಮೆಚ್ಚುಗೆ

    ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಗದೀಶ್‌ನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆ ಮರೆಸಿಕೊಂಡಿದ್ದ ಆರೋಪಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಈ ನಡುವೆ ಗಾಯಾಳು ಜಗದೀಶ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಇದನ್ನೂ ಓದಿ: ಗೂಡ್ಸ್ ವಾಹನ ಡಿಕ್ಕಿಯಾಗಿ ಮಕ್ಕಳಿಬ್ಬರ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೋವು ಹೇಳಿಕೊಂಡ ಬಡ ಮಹಿಳೆಗೆ ತಾವೇ ಶಸ್ತ್ರಚಿಕಿತ್ಸೆ ಮಾಡಿದ MLA ರಂಗನಾಥ್

    ನೋವು ಹೇಳಿಕೊಂಡ ಬಡ ಮಹಿಳೆಗೆ ತಾವೇ ಶಸ್ತ್ರಚಿಕಿತ್ಸೆ ಮಾಡಿದ MLA ರಂಗನಾಥ್

    ತುಮಕೂರು: ಶಾಸಕರ ಬಳಿ ಆರೋಗ್ಯ ಸಮಸ್ಯೆ ಹೇಳಿಕೊಳ್ಳಲು ಬಂದ ಬಡ ಮಹಿಳೆಯೊಬ್ಬರಿಗೆ ಸ್ವತಃ ಶಾಸಕ ಡಾ.ರಂಗನಾಥ್ (Dr. Ranganath) ಅವರೇ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

    ಕುಣಿಗಲ್ (Kunigal) ತಾಲೂಕಿನ ಕುಂದೂರು ಗ್ರಾಮದ ಆಶಾ ಎಂಬ ಮಹಿಳೆ ಕೀಲು ಸಮಸ್ಯೆಯಿಂದ ನೋವು ಅನುಭವಿಸುತ್ತಿದ್ದರು. ಇದನ್ನು ಶಾಸಕರ ಬಳಿ ಹೇಳಿ ಏನಾದರೂ ಸಹಾಯ ಪಡೆಯಲು ಮಹಿಳೆ ಬಂದಿದ್ದರು. ಶಾಸಕರು ಮಹಿಳೆಯನ್ನು ಬೋರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಶಾಸಕರೇ ಸ್ವತಃ ಮಹಿಳೆಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಇದನ್ನೂ ಓದಿ: PSI scam – ಇಂದು ಹೈಕೋರ್ಟ್‍ನಲ್ಲಿ ಮರುಪರೀಕ್ಷೆ ಅರ್ಜಿ ವಿಚಾರಣೆ

    ಕಳೆದ 10 ವರ್ಷಗಳ ಹಿಂದೆ ಯಶಸ್ವಿನಿ ಯೋಜನೆಯಡಿ ಕೀಲು ಆಪರೇಷನ್ ಮಾಡಿಸಿಕೊಂಡಿದ್ದ ಮಹಿಳೆಗೆ ಮತ್ತೆ ಸಮಸ್ಯೆಯಾಗಿತ್ತು. ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಕಾಯಿಲೆಗೆ 2 ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು. ಶಸ್ತ್ರಚಿಕಿತ್ಸೆ ಮಾಡಲು 4-5 ಲಕ್ಷ ರೂ. ಖರ್ಚಾಗುತ್ತಿತ್ತು. ಈಗ ಶಾಸಕರೇ ಉಚಿತ ಶಸ್ತ್ರಚಿಕಿತ್ಸೆ ನೀಡಿದ್ದಾರೆ.

    ಅಲ್ಲದೇ ಇದೇ ರೀತಿಯ ಸಮಸ್ಯೆಯಿಂದ ಬಳಲುತ್ತಿರುವ 23 ಮಹಿಳೆಯರಿಗೆ ಕುಣಿಗಲ್ ಶಾಸಕ ಡಾ.ರಂಗನಾಥ್ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿದ್ದಾರೆ. ಶಾಸಕರು ಮೂಲತಃ ಆರ್ಥೋಪೆಡಿಕ್ ವೈದ್ಯರಾಗಿದ್ದಾರೆ. ಶಾಸಕರ ಈ ಸೇವೆಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: 20 ದಿನ ನೋ ಪ್ರಾಬ್ಲಂ – ಮಳೆ ಬಾರದೆ ಇದ್ರೆ ಮೈಸೂರಿಗೆ ಕುಡಿಯುವ ನೀರಿಗೆ ಹಾಹಾಕಾರ ನಿಶ್ಚಿತ!

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಕುಣಿಗಲ್‍ನಲ್ಲಿ ಭೀಕರ ಅಪಘಾತ- ಬೆಂಗಳೂರಿಗೆ ಹೋಗುತ್ತಿದ್ದ ಇಬ್ಬರು ಸಾವು

    ಕುಣಿಗಲ್‍ನಲ್ಲಿ ಭೀಕರ ಅಪಘಾತ- ಬೆಂಗಳೂರಿಗೆ ಹೋಗುತ್ತಿದ್ದ ಇಬ್ಬರು ಸಾವು

    ತುಮಕೂರು: ಬೆಳ್ಳಂಬೆಳಗ್ಗೆ ಕಾರು ಹಾಗೂ ಟಿಟಿ ವಾಹನದ ನಡುವೆ ಅಪಘಾತವಾಗಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.

    ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ಕಾರು- ಟಿಟಿ ವಾಹನ ಡಿಕ್ಕಿ ಆಗಿದ್ದು ಸ್ಥಳದಲ್ಲೇ ಕಾರಿನಲ್ಲಿದ್ದ ರಘು(27) ಸಂತೋಷ (21) ಮೃತಪಟ್ಟಿದ್ದಾರೆ. ಮೃತರು ಬೆಂಗಳೂರಿನ ಸಂಜಯ್ ನಗರದ ವಾಸಿಗಳಾಗಿದ್ದಾರೆ. ಇನ್ನೂಳಿದಂತೆ ವಿಜಯ್ (30) ಸ್ಥಿತಿ ಗಂಭೀರವಾಗಿದ್ದು, ಟಿಟಿ ವಾಹನದಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಕಾರಿನ ಗಾಜು ಪುಡಿ ಮಾಡಿದ ಕಿಡಿಗೇಡಿಗಳು- ಸಿಸಿ ಕ್ಯಾಮರಾದಲ್ಲಿ ದುಷ್ಕೃತ್ಯ ಸೆರೆ

    ಧರ್ಮಸ್ಥಳಕ್ಕೆ ಹೋಗುತಿದ್ದ ಟಿ.ಟಿ. ವಾಹನ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಚಿಕ್ಕಮಗಳೂರಿನಿಂದ- ಬೆಂಗಳೂರಿಗೆ ವಾಪಸ್ ಹೋಗುತ್ತಿದ್ದ ಕಾರೊಂದು ಡಿವೈಡರ್ ದಾಟಿ ಟಿ.ಟಿ. ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಕುಣಿಗಲ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

  • ಮಾಧುಸ್ವಾಮಿ ನನಗೆ ದೊಡ್ಡ ಭೂತದ ತರ ಕಾಣಿಸಿಬಿಟ್ರು: ಶಾಸಕ ರಂಗನಾಥ್

    ಮಾಧುಸ್ವಾಮಿ ನನಗೆ ದೊಡ್ಡ ಭೂತದ ತರ ಕಾಣಿಸಿಬಿಟ್ರು: ಶಾಸಕ ರಂಗನಾಥ್

    ಬೆಂಗಳೂರು: ತಮ್ಮ ಕ್ಷೇತ್ರದ ಬೇಡಿಕೆ ವಿಚಾರವಾಗಿ ಮಾತನಾಡುತ್ತಿದ್ದ ಕುಣಿಗಲ್ ಶಾಸಕ ರಂಗನಾಥ್, ನಾನು ನಮ್ಮ ಕ್ಷೇತ್ರಕ್ಕೆ ನೀರಿನ ಯೋಜನೆ ಆರಂಭಿಸಬೇಕೆಂದಿದ್ದಾಗ ಸಚಿವ ಮಾಧುಸ್ವಾಮಿ ಅಡ್ಡಗಾಲು ಹಾಕಿದ್ರು, ಹಾಗಾಗಿ ಮಾಧುಸ್ವಾಮಿ ನನಗೆ ಭೂತದ ರೀತಿ ಕಾಣಿಸಿದರು ಎಂದು ವ್ಯಂಗ್ಯವಾಡಿದರು.

    ಸದನದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ನಾನು ಮೂರು ಟಿಎಂಸಿ ನೀರು ತೆಗೆದುಕೊಂಡಿದ್ದೆ. ಮತ್ತೆ ಮೂರು ಟಿಎಂಸಿ ನೀರಿನ ಯೋಜನೆ ಆರಂಭವಾಗಬೇಕಿತ್ತು ಆದ್ರೆ ಸಮ್ಮಿಶ್ರ ಸರ್ಕಾರ ಬಿದ್ದು ಹೋಯ್ತು. ಬಳಿಕ ಬಿಜೆಪಿ ಸರ್ಕಾರ ಬಂತು ಆಗ ಈ ಹಿಂದಿನ ಯೋಜನೆಗೆ ಸಚಿವ ಮಾಧುಸ್ವಾಮಿ ಅಡ್ಡಗಾಲು ಹಾಕಿದ್ರು ಹಾಗಾಗಿ ನನಗೆ ಮಾಧುಸ್ವಾಮಿ ಭೂತದ ತರಹ ಕಂಡ್ರು ಎಂದರು. ಇದನ್ನು ಕೇಳಿಸಿಕೊಂಡ ಮಾಧುಸ್ವಾಮಿ ನಕ್ಕು ಸಮ್ಮನಾದರು. ಇದನ್ನೂ ಓದಿ: ತವರಿಗೆ ನವೀನ್ ಮೃತದೇಹ- ಪ್ರಧಾನಿಗೆ ಕರೆಮಾಡಿ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ

    ಗೂರುರು ಡ್ಯಾಮ್‍ನಿಂದ ಕುಣಿಗಲ್ ನಮ್ಮ ತಾಲೂಕಿಗೆ 200 ಕಿಮೀ. ಇದೆ. 3,000 ಎಮ್‌ಸಿಎಫ್‌ಟಿ ನೀರಿಗಾಗಿ ನಾನು ಬೇಡಿಕೆ ಇಟ್ಟಿದ್ದೇನೆ. ಆದರೆ ಅದನ್ನು ಕೊಡೋಕೆ ಈವರೆಗೂ ಆಗಿಲ್ಲ. ಆದರೆ ಈ ಬಾರಿ 32 ಕೆರೆಗಳನ್ನು ತುಂಬಿಸುವ ಕೆಲಸ ಆಗಿದೆ. ಈ ಹಿಂದಿನ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ ಶಿವಕುಮಾರ್ ಅವರು ಕೊಟ್ಟ ಸಹಕಾರದಿಂದ ಡ್ಯಾಮ್‍ನ್ನು ಪುನರ್‌ಶ್ಚೇತನ ಮಾಡಿದ್ದೇವು. ಈ ಹಿಂದಿನ ಸರ್ಕಾರದ 6ನೇ ಕ್ಯಾಬಿನೆಟ್ ಸಭೆಯಲ್ಲಿ ಈ ಯೋಜನೆಗೆ ಅನುಮತಿ ಸಿಕ್ಕಿತು. ಆ ಬಳಿಕ ದುರದೃಷ್ಟ ಎಂಬಂತೆ ಸರ್ಕಾರ ಬದಲಾವಣೆಯಾಯಿತು. ನಂತರ ಬಂದ ಸರ್ಕಾರದಲ್ಲಿ ಮಾಧುಸ್ವಾಮಿ ಈ ಯೋಜನೆ ಅಡ್ಡಗಾಲು ಹಾಕಿದ್ರು. ನಾನು ನೀರಿಗಾಗಿ ಹೋರಾಟ ಮಾಡುತ್ತ ಬರುತ್ತಿದ್ದೇನೆ ನನಗೆ ಈ ಯೋಜನೆಯನ್ನು ಪಾಸ್ ಮಾಡಿಕೋಡಿ. ಇದರಿಂದ ಬರುವ ಕ್ರೆಡಿಟ್ ಬಿಜೆಪಿ ಸರ್ಕಾರಕ್ಕೆ ಇರಲಿ. ಇದರಿಂದ 2 ಲಕ್ಷ ರೈತರಿಗೆ ಸಹಾಯ ಮಾಡಿದಂತಾಗುತ್ತದೆ ಎಂದರು.

  • ಸೊಸೆ ಮೇಲಿನ ಕೋಪಕ್ಕೆ ಮೊಮ್ಮಗಳನ್ನು ಬಲಿ ಪಡೆದ ಅತ್ತೆ

    ಸೊಸೆ ಮೇಲಿನ ಕೋಪಕ್ಕೆ ಮೊಮ್ಮಗಳನ್ನು ಬಲಿ ಪಡೆದ ಅತ್ತೆ

    ತುಮಕೂರು: ಸೊಸೆ ಮೇಲಿನ ಕೋಪಕ್ಕೆ ಏನೂ ಅರಿಯದ 2 ವರ್ಷದ ಪುಟಾಣಿ ಮೊಮ್ಮಗಳನ್ನು ಅತ್ತೆ ಬಲಿ ಪಡೆದಿರುವ ಅಮಾನವೀಯ ಘಟನೆ ಕುಣಿಗಲ್ ತಾಲೂಕಿನ ಸಾಸಲು ಗ್ರಾಮದಲ್ಲಿ ನಡೆದಿದೆ.

    ತ್ರಿಷಾ ಮೃತಪಟ್ಟ ಮಗು. ಹುಚ್ಚು ನಾಯಿ ಕಡಿತಕ್ಕೆ ಒಳಗಾದ 1 ತಿಂಗಳು 10 ದಿನದ ನಂತರ ಮಗು ಮೃತಪಟ್ಟಿದೆ. ಆರೋಪಿ ಜಯಮ್ಮ, ಹಸು ಮೇಯಿಸಲು ಹೊಲದ ಬಳಿ ಹೋಗುವಾಗ ತನ್ನ ಜೊತೆ ಮಗುವನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ ಹುಚ್ಚು ನಾಯಿಯೊಂದು ಹಸು ಹಾಗೂ ಮಗುವಿಗೆ ಕಚ್ಚಿದೆ. ಆದರೆ ಸೊಸೆ ಮೇಲಿನ ಕೋಪದಿಂದ ಈ ವಿಚಾರವನ್ನು ಯಾರಿಗೂ ಹೇಳದೇ ಜಯಮ್ಮ ಮುಚ್ಚಿಟ್ಟಿದ್ದರು. ಹುಚ್ಚು ನಾಯಿ ಕಡಿದ ಮೂರೇ ದಿನಕ್ಕೆ ಹಸು ಮೃತಪಟ್ಟಿತ್ತು. ಕಳೆದ ಒಂದು ವಾರದ ಹಿಂದೆ ಮಗು ತ್ರಿಷಾ ರಕ್ತ ವಾಂತಿ ಮಾಡಿಕೊಂಡಿತ್ತು. ಈ ವೇಳೆ ಪಾಲಕರು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಮಗುವಿಗೆ ಯಾವುದೋ ಬೆಕ್ಕು, ಇಲ್ಲ ನಾಯಿ ಕಚ್ಚಿರುವ ಬಗ್ಗೆ ವೈದ್ಯರು ಶಂಕೆ ವ್ಯಕ್ತಪಡಿಸಿದ್ದರು. ಮಗು ಗಂಭೀರ ಸ್ಥಿತಿ ತಲುಪಿದ ಬಳಿಕ ಜಯಮ್ಮ ಹುಚ್ಚು ನಾಯಿ ಕಡಿದ ಬಗ್ಗೆ ಬಾಯ್ಬಿಟ್ಟರು. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಿಜೆಪಿ ಏಜೆಂಟ್: ಕಾಂಗ್ರೆಸ್

    ಘಟನೆ ನಡೆದು 1 ತಿಂಗಳು 10 ದಿನಗಳ ಬಳಿಕ ಎಲ್ಲ ವಿಚಾರವನ್ನು ಜಯಮ್ಮ ತಿಳಿಸಿದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿದೆ. ಮಗ ಪುಟ್ಟರಾಜುವಿಗೆ 2 ವರ್ಷದ ಹಿಂದೆ ಚಿಕ್ಕಮ್ಮ ಅವರ ಜೊತೆ ವಿವಾಹವಾಗಿತ್ತು. ಆದರೆ ಮಗನ ವಿವಾಹದ ಬಗ್ಗೆ ಜಯಮ್ಮ ಅಸಮಾಧಾನ ಹೊಂದಿದ್ದರು. ಅತ್ತೆ-ಸೊಸೆಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಜಗಳದಲ್ಲಿ ಮಗುವಿಗೆ ಹುಚ್ಚು ನಾಯಿ ಕಡಿದ ವಿಷಯವನ್ನು ಅತ್ತೆ ಬಚ್ಚಿಟ್ಟಿದ್ದರು. ಇದೀಗ ಒಂದು ಎಡವಟ್ಟು ಮಗುವಿನ ಪ್ರಾಣ ಕಸಿದಿದೆ. ಈ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಯಾವುದೇ ಧರ್ಮದ ಬಗ್ಗೆ ಅಗೌರವ ತೋರಿದ್ರೆ ಸಹಿಸುವುದಿಲ್ಲ: ಭಗವಂತ್ ಮಾನ್

  • ಹೊಸ ಮನೆ ಕಟ್ಟಿದ್ದ ಅವಿವಾಹಿತ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು

    ಹೊಸ ಮನೆ ಕಟ್ಟಿದ್ದ ಅವಿವಾಹಿತ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು

    – ರೈಲಿಗೆ ತಲೆಕೊಟ್ಟು ಸೂಸೈಡ್

    ತುಮಕೂರು: ಪೊಲೀಸ್ ಪೇದೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

    ಕುಣಿಗಲ್ ಠಾಣೆಯ ಯಲ್ಲಾಲಿಂಗ ಮೇಟಿ (29) ಆತ್ಮಹತ್ಯೆ ಮಾಡಿಕೊಂಡ ಪೇದೆ. ಕುಣಿಗಲ್ ರೈಲ್ವೆ ನಿಲ್ದಾಣದ ಬಳಿ ಶನಿವಾರ ಘಟನೆ ನಡೆದಿದೆ. ಮೃತ ಪೇದೆ ಮೂಲತಃ ವಿಜಯಪುರ ಜಿಲ್ಲೆಯವರೆಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಈ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮೃತ ಪೇದೆ ಯಲ್ಲಾಲಿಂಗ ಮೇಟಿ ವಿಜಯಪುರದಲ್ಲಿ ಹೊಸದಾಗಿ ಮನೆಕಟ್ಟಿದ್ದರು ಎನ್ನಲಾಗಿದೆ. ಅವಿವಾಹಿತನನಾಗಿದ್ದ ಯಲ್ಲಾಲಿಂಗ ಸದಾ ಒತ್ತಡದಲ್ಲಿ ಇರುತ್ತಿದ್ದರು ಎನ್ನಲಾಗಿದೆ. ಕೌಟುಂಬಿಕ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.