Tag: ಕುಪೇಂದ್ರ ರೆಡ್ಡಿ

  • ಅಡ್ಡ ಮತದಾನ: ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ದೂರಿಗೆ JDS ನಿರ್ಧಾರ

    ಅಡ್ಡ ಮತದಾನ: ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ದೂರಿಗೆ JDS ನಿರ್ಧಾರ

    ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಜೆಡಿಎಸ್ ಶಾಸಕರು ಮತ್ತು ಅಡ್ಡ ಮತದಾನ ಮಾಡಿಸಿದ ಕಾಂಗ್ರೆಸ್, ಬಿಜೆಪಿ ಪಕ್ಷದ ವಿರುದ್ಧ ಜೆಡಿಎಸ್ ಪಕ್ಷದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು.

    ಫ್ರೀಡಂ ಪಾರ್ಕ್‍ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮತ್ತು ಪರಾಜಿತ ಅಭ್ಯರ್ಥಿ ಕುಪೇಂದ್ರ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ 420 ಶ್ರೀನಿವಾಸರು ಅಂತ ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದರು. ಚಪ್ಪಲಿ ತೋರಿಸಿ ಕಿಡಿಕಾರಿದರು. ಇದೇ ವೇಳೆ ಇಬ್ಬರು ಶಾಸಕರನ್ನು ಉಚ್ಚಾಟನೆ ಮಾಡಲು ಹಾಗೂ ಪಕ್ಷಾಂತರ ನಿಷೇಧ ಕಾಯ್ದೆಯಡಿ ಸ್ಪೀಕರ್‌ಗೆ ದೂರು ನೀಡಲು ಜೆಡಿಎಸ್ ನಿರ್ಧಾರ ಮಾಡಿತು. ಇದನ್ನೂ ಓದಿ:  ಕೋವಿಡ್ ಸಮಸ್ಯೆ – ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು 

    ಪ್ರತಿಭಟನೆಯಲ್ಲಿ ಮಾತನಾಡಿದ ಇಬ್ರಾಹಿಂ, ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಮತ ಹಾಕಿಸಿದ್ದಾರೆ. ತಾಕತ್ ಇದ್ದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸುರ್ಜೆವಾಲ ಇಬ್ಬರನ್ನು ಕಿತ್ತು ಹಾಕಿ ಎಂದು ಸವಾಲ್ ಹಾಕಿದರು.

    ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಡೀಲ್ ಮಾಡಿಕೊಂಡು ಕನ್ನಡಿಗರನ್ನು ಸೋಲಿಸಿದ್ದಾರೆ. ನಿಮಗೆ ಮಾನ ಮರ್ಯಾದೆ ಇದೆಯಾ. ನೀವು ಪತಿವ್ರತೆಯರಾ ಎಂದು ವ್ಯಂಗ್ಯವಾಡಿದರು.

    ಪರಾಜಿತ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಮಾತನಾಡಿ, ಕಾಂಗ್ರೆಸ್‍ನಿಂದಲೇ ಕಾಂಗ್ರೆಸ್ ದೇಶದಲ್ಲಿ ಮುಕ್ತವಾಗ್ತಿದೆ. ನನ್ನ ಸೋಲಿಗೆ ಸಿದ್ದರಾಮಯ್ಯ ಕಾರಣ. ಮನವಿ ಮಾಡಿದರು ಕಾಂಗ್ರೆಸ್ ನಾಯಕರು ಎರಡನೇ ಪ್ರಾಶಸ್ತ್ಯ ಮತಗಳನ್ನು ಕೊಟ್ಟಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಖಾಸಗಿ ಶಾಲಾ-ಕಾಲೇಜುಗಳಿಗೆ ನಮ್ಮ ಶಾಲೆಗಳು ಸ್ಪರ್ಧಿಸುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು 

    ಪರಿಷತ್ ಸದಸ್ಯ ಶರವಣ ಮಾತನಾಡಿ, ಸಿದ್ದರಾಮಯ್ಯ ಡೀಲ್ ರಾಜ, ಡೀಲ್ ರಾಮಯ್ಯ. ಸಿದ್ದರಾಮಯ್ಯ ಸುಳ್ಳು ರಾಮಯ್ಯ. ಮಾತಾಡೋದು ಆಚಾರ ಮಾಡೋದು ಬದನೆಕಾಯಿ. ಈಗ ಬಿಜೆಪಿ ಬಿ ಟೀಂ ಸಿದ್ದರಾಮಯ್ಯ ಅಂತ ಗೊತ್ತಾಗಿದೆ. ಎಷ್ಟು ಸೂಟ್ ಕೇಸ್ ಸಿದ್ದರಾಮಯ್ಯ ಅವರಿಗೆ ಬಂದಿದೆ ಹೇಳಬೇಕು. ಜಾತ್ಯತೀತ ಪಕ್ಷ ಎಂದು ಕಾಂಗ್ರೆಸ್‍ಗೆ ಹೇಳೋಕೆ ನೈತಿಕತೆ ಇಲ್ಲ ಆಕ್ರೋಶ ಹೊರಹಾಕಿದರು.

  • ದೇವೇಗೌಡರ ಕುಟುಂಬದರಿಗೆ ಸಾಲ ಕೊಟ್ಟಿರುವ ಕುಪೇಂದ್ರ : ಪಟ್ಟಿಯಲ್ಲಿ ದಾಖಲು

    ದೇವೇಗೌಡರ ಕುಟುಂಬದರಿಗೆ ಸಾಲ ಕೊಟ್ಟಿರುವ ಕುಪೇಂದ್ರ : ಪಟ್ಟಿಯಲ್ಲಿ ದಾಖಲು

    ಹಾಸನ: ಜೆಡಿಎಸ್‍ನಿಂದ ರಾಜ್ಯಸಭೆಗೆ ಸ್ಪರ್ಧೆ ಮಾಡಿರೋ ಉದ್ಯಮಿ ಕುಪೇಂದ್ರ ರೆಡ್ಡಿ ನಾಮಪತ್ರದ ಜೊತೆ ಸಲ್ಲಿಕೆ ಮಾಡಿರುವ ಅಫಿಡವಿಟ್‍ನಲ್ಲಿ ಕೆಲ ಅಂಶಗಳು ಕುತೂಹಲಕ್ಕೆ ಕಾರಣವಾಗಿದೆ.

    JDS to counter Congress' Mekedatu rally, to launch 'Jaladhaare' rally from Jan 26

    ಕುಪೇಂದ್ರ ರೆಡ್ಡಿ ಯಾರ್ಯಾರಿಗೆ ಸಾಲ ನೀಡಿದ್ದಾರೆ ಎಂಬ ಪಟ್ಟಿ ಈಗ ಎಲ್ಲರ ಗಮನ ಸೆಳೆದಿದೆ. ಕಾರಣ ದೇವೇಗೌಡರ ಕುಟುಂಬದ ಹಲವರು ಸಾಲ ಪಡೆದುಕೊಂಡ ಪಟ್ಟಿಯಲ್ಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಹೆಚ್‍.ಡಿ.ರೇವಣ್ಣ, ಅವರಿಂದ ಸಾಲ ಪಡೆಯಬಾರದು ಎಂಬ ನಿಯಮ ಏನಾದ್ರೂ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ.

    ಸಾಲ ನೀಡಿಕೆ ಪಟ್ಟಿ
    * ಭವಾನಿ ರೇವಣ್ಣ – 2 ಕೋಟಿ ರೂ.
    * ಪ್ರಜ್ವಲ್ ಆರ್ – 1 ಕೋಟಿ ರೂ.
    * ಹೆಚ್‍.ಡಿ.ರಮೇಶ್ – 3.90 ಕೋಟಿ ರೂ.
    * ಸೂರಜ್ – 5.80 ಕೋಟಿ ರೂ.
    * ಚನ್ನಾಂಬಿಕ ಫಿಲಮ್ಸ್ – 4 ಕೋಟಿ ರೂ.
    * ಜಮೀರ್ ಅಹಮದ್ ಖಾನ್ – 1 ಕೋಟಿ ರೂ.
    * ಸಿಎಸ್ ಪುಟ್ಟರಾಜು – 1.5 ಕೋಟಿ ರೂ.

    Revanna for Eng medium in primary schools | Deccan Herald

    ಹೆಚ್.ಡಿ.ರೇವಣ್ಣ ಪ್ರತಿಕ್ರಿಯೆ
    ಸಾಲ ತೆಗೆದುಕೊಳ್ಳಬಾರದು ಅಂತ ಎಲ್ಲಾದ್ರು ಇದೆಯಾ? ಅದು 4 ವರ್ಷಗಳ ಹಿಂದೆ ಚುನಾವಣೆಗೆ ಸಾಲ ಮಾಡಿರೋದು. ಕದ್ದು ಮುಚ್ಚಿ ತಗೊಂಡಿಲ್ಲ. ಎಲ್ಲವನ್ನು ಅಕೌಂಟ್ ಮೂಲಕವೇ ತೆಗೆದುಕೊಂಡಿದ್ದೇವೆ. ಪುಕ್ಸಟ್ಟೆ ಯಾವ ಹಣವೂ ತೆಗೆದುಕೊಂಡಿಲ್ಲ. ಎಲ್ಲದ್ದಕ್ಕೂ ದಾಖಲಾತಿ ಇದೆ ಎಂದು ತಿಳಿಸಿದರು.

  • ಬೆಳ್ಳಂದೂರು ಕೆರೆ ಮಾಲಿನ್ಯ ಪ್ರಕರಣ – ನಮ್ಮ ಅರ್ಜಿ ಪ್ರತ್ಯೇಕವಾಗಿ ಪರಿಗಣಿಸಿ ಸಂಸದ ಕುಪೇಂದ್ರ ರೆಡ್ಡಿ

    ಬೆಳ್ಳಂದೂರು ಕೆರೆ ಮಾಲಿನ್ಯ ಪ್ರಕರಣ – ನಮ್ಮ ಅರ್ಜಿ ಪ್ರತ್ಯೇಕವಾಗಿ ಪರಿಗಣಿಸಿ ಸಂಸದ ಕುಪೇಂದ್ರ ರೆಡ್ಡಿ

    ನವದೆಹಲಿ : ಬೆಳ್ಳಂದೂರು ಕರೆ ಮಾಲಿನ್ಯ ಪ್ರಕರಣದಲ್ಲಿ ತಮ್ಮನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ರಾಜ್ಯಸಭಾ ಸಂಸದ ಕುಪೇಂದ್ರ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರ ಸೇರಿ ಒಂಬತ್ತು ಸರ್ಕಾರಿ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.

    ಇಂದು ಸಿಜೆಐ ಎಸ್.ಎ ಬೋಬ್ಡೆ ನೇತೃತ್ವದ ತ್ರಿ ಸದಸ್ಯ ಪೀಠ ಮುಂದೆ ವಾದ ಮಂಡಿಸಿದ ವಕೀಲ ರಾಮ್ ಪ್ರಸಾದ್, ರಾಷ್ಟ್ರೀಯ ಹಸಿರು ನ್ಯಾಯಧೀಕರಣದಲ್ಲಿ ಮೊದಲು ಅರ್ಜಿ ಸಲ್ಲಿಸಿದ್ದು ನಮ್ಮ ಕಕ್ಷಿದಾರರು ಬಳಿಕ ಎನ್ ಜಿಟಿ ಸ್ವಯಂ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಅಲ್ಲದೇ ಎನ್ ಜಿಟಿ ದಾಖಲಿಸಿರುವ ಸ್ವಯಂ ದೂರಿನಲ್ಲೆ ನಮ್ಮ ಅರ್ಜಿಯನ್ನು ಸೇರ್ಪಡೆ ಮಾಡಿಕೊಂಡು ವಿಚಾರಣೆ ನಡೆಸುತ್ತಿದೆ. ಆದರೆ ನಮ್ಮ ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಬೇಕು ಎಂದು ಮನವಿ ಮಾಡಿದರು.

     

    ವಿಚಾರಣೆ ಆಲಿಸಿದ ಪೀಠ ರಾಜ್ಯ ಸರ್ಕಾರ, ಬಿಡಿಎ, ತಮಿಳುನಾಡು ಸರ್ಕಾರ, ಕೇಂದ್ರ ಪರಿಸರ ಇಲಾಖೆ, ಬಿಬಿಎಂಪಿ, ಪರಿಸರ ನಿಯಂತ್ರಣ ಮಂಡಳಿ ಸೇರಿ 9 ಇಲಾಖೆಗಳಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ.