Tag: ಕುಮಟಾ

  • ಕುಮಟಾ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಆಯ್ಕೆ ಎತ್ತಿ ಹಿಡಿದ ಕೋರ್ಟ್ – ಏನಿದು ವಿವಾದ?

    ಕುಮಟಾ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಆಯ್ಕೆ ಎತ್ತಿ ಹಿಡಿದ ಕೋರ್ಟ್ – ಏನಿದು ವಿವಾದ?

    ಕಾರವಾರ: ಕುಮಟಾ ಬಿಜೆಪಿ ಶಾಸಕ ದಿನಕರ್ ಶೆಟ್ಟಿ (Dinakar Shetty) ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಧಾರವಾಡ ಕೋರ್ಟ್‌ ತೀರ್ಪು ನೀಡಿದೆ.

    2023 ರ ವಿಧಾನಸಭೆ ಚುನಾವಣೆಯಲ್ಲಿ 673 ಮತಗಳ ಅಲ್ಪ ಮತದಿಂದ ಗೆಲುವು ಕಂಡಿದ್ದ ಬಿಜೆಪಿ ಶಾಸಕ ದಿನಕರ್ ಶೆಟ್ಟಿಯ ಆಯ್ಕೆ ಪ್ರಶ್ನಿಸಿ ಅಲ್ಪ ಮತದಲ್ಲಿ ಪರಾಭವಗೊಂಡಿದ್ದ ಜೆಡಿಎಸ್‌ನ ಸೂರಜ್ ಸೂನಿ ಎರಡು ವರ್ಷದ ಹಿಂದೆ ಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನಲ್ಲಿ ರಾಜ್ಯ ಸರ್ಕಾರ ಜನರ ಕ್ಷಮೆಯಾಚಿಸಬೇಕು: ರವಿಕುಮಾರ್

    ದೂರಿನ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಸೂರಜ್ ಸೋನಿ ಅವರ ಅರ್ಜಿಯನ್ನು ವಜಾ ಮಾಡಿ ಆದೇಶಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದಿನಕರ್ ಶೆಟ್ಟಿ 59,966 ಮತ ಗಳಿಸಿದ್ದರು. ಜೆಡಿಎಸ್‌ನ ಸೂರಜ್ ನಾಯ್ಕ ಸೋನಿ 59,293 ಮತ ಗಳಿಸಿದ್ದರು. 673 ಮತದಲ್ಲಿ ಬಿಜೆಪಿ ದಿನಕರ್ ಶೆಟ್ಟಿ ಗೆಲವು ಕಂಡಿದ್ದರು. ಈ ಗೆಲುವನ್ನು ಎತ್ತಿ ಹಿಡಿದ ಧಾರವಾಡ ಹೈಕೋರ್ಟ್, ಈ ಆದೇಶ ಮಾಡಿದೆ.

    ಕ್ಷೇತ್ರ- ಕುಮಟಾ ವಿಧಾನಸಭಾ ಕ್ಷೇತ್ರ
    ದಿನಕರ್ ಶೆಟ್ಟಿ (ಬಿಜೆಪಿ) – ಗೆಲುವು
    ಪಡೆದ ಮತಗಳ ಸಂಖ್ಯೆ – 59,966
    ಸೂರಜ್ ನಾಯ್ಕ ಸೋನಿ (ಜೆಡಿಎಸ್) – ಸೋಲು
    ಪಡೆದ ಮತಗಳ ಸಂಖ್ಯೆ – 59,293
    ಗೆಲುವಿನ ಅಂತರ – 673

  • Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ಮಹಿಳೆಯ ರಕ್ಷಣೆ

    Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ಮಹಿಳೆಯ ರಕ್ಷಣೆ

    ಕಾರವಾರ: ಹಿಂದೂ ಧರ್ಮದ ಧಾರ್ಮಿಕತೆಗೆ ವಾಲಿದ ರಷ್ಯಾ (Russia) ಮೂಲದ ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ ಏಕಾಂತವಾಗಿ ವಾಸವಿದ್ದು ಇವರನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ (Kumta) ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದಲ್ಲಿ ನಡೆದಿದೆ.

    ಮೋಹಿ (40), ಅವರ ಪುಟ್ಟ ಮಕ್ಕಳಾದ ಪ್ರೆಯಾ (06) ಹಾಗೂ ಅಮಾ (4) ರಕ್ಷಣೆಗೊಳಗಾದ ರಷ್ಯಾ ಮೂಲದ ಪ್ರಜೆಗಳು. ರಷ್ಯಾದಿಂದ ಬಿಸಿನೆಸ್ ವಿಸಾ ದಡಿ ಗೋವಾಕ್ಕೆ ಬಂದಿದ್ದ ಈ ಮಹಿಳೆ ಗೋವಾ ಮೂಲಕ ಗೋಕರ್ಣಕ್ಕೆ ಬಂದು ಇಲ್ಲಿನ ದಟ್ಟ ಅರಣ್ಯವಾದ ರಾಮತೀರ್ಥ ಬಳಿಯ ಗುಹೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಿದ್ದಳು. ಅಲ್ಲಿಯೇ ಚಿಕ್ಕ ರುದ್ರನ ಮೂರ್ತಿ ಇಟ್ಟುಕೊಂಡು ಪೂಜಾ ಕಾರ್ಯ ಮಾಡುತ್ತಾ ದಿನ ಕಳೆಯುತಿದ್ದಳು. ಸಿಪಿಐ ಶ್ರೀಧರ್ ನೇತ್ರತ್ವದ ತಂಡ ಈ ಭಾಗದಲ್ಲಿ ಗುಡ್ಡ ಕುಸಿತವಾದ್ದರಿಂದ ಗಸ್ತು ತಿರುಗುವಾಗ ಗುಹೆಯಲ್ಲಿ ಯಾರೋ ವಾಸವಾಗಿರುವುದನ್ನು ಪತ್ತೆ ಮಾಡಿ ವಿದೇಶಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ:  ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ

    ರಷ್ಯಾದ ಮೋಹಿಗೆ ಆಧ್ಯಾತ್ಮದ ಕಡೆ ಹೆಚ್ಚು ಆಸಕ್ತಿ ಇರುವುದರಿಂದ ಪ್ರಕೃತಿಯಲ್ಲಿ ಇರಬೇಕು ಎಂದು ತನ್ನ ಮಕ್ಕಳೊಂದಿಗೆ ಏಕಾಂಗಿಯಾಗಿ ಗುಹೆ ಸೇರಿದ್ದಳು. ಗುಡ್ಡ ಕುಸಿತವಾಗಿರುವ ರಾಮತೀರ್ಥ ಗುಡ್ಡದ ಗುಹೆಯಲ್ಲಿ ತಮ್ಮ ಪುಟ್ಟ ಮಕ್ಕಳೊಂದಿಗೆ ಕತ್ತಲಲ್ಲೇ ಬದುಕು ಕಳೆಯುತಿದ್ದಳು. ಎಸ್.ಪಿ ಎಂ ನಾರಾಯಣ್ ಸಲಹೆಯಂತೆ ಆಕೆಗೆ ಸ್ಥಳೀಯ ಎನ್‌ಜಿಓ ಮೂಲಕ ಆಪ್ತ ಸಮಾಲೋಚನೆ ನಡೆಸಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ರಷ್ಯಾ ರಾಯಭಾರ ಕಚೇರಿಯನ್ನು ಸಂಪರ್ಕಿಸಲಾಗಿದ್ದು ಆಕೆಯನ್ನು ಆಕೆಯ ದೇಶಕ್ಕೆ ಪುನಃ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ, ಚಾಲಕ ಗ್ರೇಟ್‌ ಎಸ್ಕೇಪ್‌

  • ಭಾರೀ ಮಳೆಗೆ ಕೊಚ್ಚಿ ಹೋಯ್ತು ಹೈವೇ| ಕುಮಟಾ – ಶಿರಸಿ ಸಂಪರ್ಕ ಕಡಿತ

    ಭಾರೀ ಮಳೆಗೆ ಕೊಚ್ಚಿ ಹೋಯ್ತು ಹೈವೇ| ಕುಮಟಾ – ಶಿರಸಿ ಸಂಪರ್ಕ ಕಡಿತ

    ಕಾರವಾರ: ಅಬ್ಬರದ ಮಳೆಗೆ (Rain) ದೇವಿಮನೆ ಘಟ್ಟದಲ್ಲಿ (Devimane Ghat) ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿದ್ದು ಕುಮಟಾ – ಶಿರಸಿ (Kumta- Sirsi) ಸಂಪರ್ಕ ಕಡಿತಗೊಂಡಿದೆ.

    ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು. ಶುಕ್ರವಾರ ಸುರಿದ ಭಾರೀ ಮಳೆಗೆ ರಸ್ತೆಯೇ ಕೊಚ್ಚಿಹೋಗಿದೆ. ಇದನ್ನೂ ಓದಿ: ತಾಳಿ ಕಟ್ಟುವಾಗಲೇ ಮದುವೆ ಬೇಡವೆಂದ ವಧು ತಾನು ಪ್ರೀತಿಸಿದ ಯುವಕನ ಜೊತೆ ವಿವಾಹ

     

    ಅಬ್ಬರದ ಮಳೆಯಿಂದ ಬೆಣ್ಣೆ ಹೊಳೆ ಹಳ್ಳದ ನೀರು ಹರಿದು ಬಂದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ.

    ತಾತ್ಕಾಲಿಕ ರಸ್ತೆ ಕೊಚ್ಚಿಹೋಗಿದ್ದರಿಂದ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಕುಮಟಾ ಮೂಲಕ ದೇವಿಮನೆ ಘಟ್ಟ ಭಾಗದಲ್ಲಿ ಸಂಚಾರ ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.

  • ಕುಡುಕ ಗಂಡನಿಗೆ ಬುದ್ಧಿ ಕಲಿಸಲು ಹೋದ ಹೆಂಡತಿ ಮಾಡಿದ್ದು ಆತ್ಮಹತ್ಯೆ ನಾಟಕ!

    ಕುಡುಕ ಗಂಡನಿಗೆ ಬುದ್ಧಿ ಕಲಿಸಲು ಹೋದ ಹೆಂಡತಿ ಮಾಡಿದ್ದು ಆತ್ಮಹತ್ಯೆ ನಾಟಕ!

    ಕಾರವಾರ: ಗಂಡ-ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಗಾದೆಯೊಂದಿದೆ. ಆದರೆ ಗಂಡ-ಹೆಂಡತಿ ಜಗಳ ಮುಂದುವರಿದರೆ ಏನಾಗುತ್ತೆ ಅನ್ನೋದಕ್ಕೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ (Kumta) ತಾಲೂಕಿನ ಸಾಂತಗಲ್ ಗ್ರಾಮದ ನಿವೇದಿತಾ ನಾಗರಾಜ ಭಂಡಾರಿ ಎಂಬ ಗೃಹಿಣಿ ಮಾಡಿದ ಪಜೀತಿ ಯಾರಿಗೂ ಬೇಡ.

    ಕಳೆದೆರಡು ದಿನಗಳ ಹಿಂದೆ ಗೃಹಿಣಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ ಎಂಬ ವರದಿಗೆ ಟ್ವಿಸ್ಟ್ ಸಿಕ್ಕಿದೆ. ಕುಮಟಾದ ಸಾಂತಗಲ್ ಗ್ರಾಮದ ನಿವೇದಿತಾ ನಾಗರಾಜ ಭಂಡಾರಿ ಮಕ್ಕಳನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು, ಕುಮಟಾದ ಹೆಡ್‌ಬಂದರ್ ಸಮುದ್ರದ ಬಳಿ ತಾನು ತಂದಿದ್ದ ಸ್ಕೂಟಿಯಲ್ಲಿ ಮಾಂಗಲ್ಯ, ಕಾಲುಂಗುರ, ಮೊಬೈಲ್ ಇಟ್ಟು ಸಮುದ್ರಕ್ಕೆ ಹಾರಿದಂತೆ ನಾಟಕವಾಡಿದ್ದಾಳೆ.

    ಸಮುದ್ರದಲ್ಲಿ ಆಕೆಯ ವೇಲ್ ಬಿದ್ದು ತೇಲುತ್ತಿದ್ದುದ್ದನ್ನು ಕಂಡು ಲೈಫ್ ಗಾರ್ಡಗಳು, ಪೊಲೀಸರು ಸಮುದ್ರ ಜಾಲಾಡಿದ್ದಾರೆ. ಆದರೆ ಆಕೆಯ ಶವ ಮಾತ್ರ ಸಿಕ್ಕಿರಲಿಲ್ಲ. ಹೀಗಾಗಿ ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಪಿಎಸ್‌ಐ ನವೀನ್ ನೇತೃತ್ವದ ತಂಡ ಸಮುದ್ರ ಜಾಲಾಡುವ ಜೊತೆ ಬೇರೆ ರೀತಿಯಲ್ಲೂ ತನಿಖೆ ಕೈಗೊಂಡಿದ್ದರು. ಇದನ್ನೂ ಓದಿ: ಚಿಕ್ಕಪ್ಪನನ್ನೇ ಕೊಂದ ಪ್ರಕರಣ – ಜ್ಯೂಸ್ ಅಂತ ಹೇಳಿ ಮದ್ಯ ಕುಡಿಸಿದ್ದಕ್ಕೆ ಬರ್ಬರ ಹತ್ಯೆ

    ಕೊನೆಗೆ ಆಟೋ ಚಾಲಕರೊಬ್ಬರ ಮೂಲಕ ಆಕೆ ಬೇರೆಡೆ ಅಡಗಿರುವ ಕುರಿತು ಮಾಹಿತಿ ಕಲೆಹಾಕಿ ಬಲೆ ಬೀಸಿದಾಗ ಸಾವಿನ ನಾಟಕವಾಡಿರುವುದು ಪತ್ತೆಯಾಗಿದೆ. ಆಕೆಯನ್ನು ವಿಚಾರಣೆ ನಡೆಸಿದಾಗ ತಾನು ಗಂಡನ ಮೇಲೆ ಕೋಪಕ್ಕೆ ಹೀಗೆ ಮಾಡಿದ್ದೇನೆ. ಪ್ರತಿ ದಿನ ಕುಡಿದು ನನ್ನೊಂದಿಗೆ ಜಗಳವಾಡುತಿದ್ದ, ಹೊಡೆಯುತಿದ್ದ. ಹೀಗಾಗಿ ಆತನಿಗೆ ಬುದ್ಧಿ ಕಲಿಸಲು ಹೀಗೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ.

    ಸದ್ಯ ಆತ್ಮಹತ್ಯೆ ಪ್ರಕರಣವೇನೋ ಸುಖಾಂತ್ಯ ಕಂಡಿದೆ. ಆದರೆ ಗಂಡ-ಹೆಂಡತಿ ಜಗಳದಿಂದ ಪೊಲೀಸರು, ದಿನವಿಡೀ ರಕ್ಷಣಾ ಕಾರ್ಯದಲ್ಲಿ ತೊಡಗಿದ ಲೈಫ್ ಗಾರ್ಡ್‌ಗಳ ಸಮಯ ವ್ಯರ್ಥ ಮಾಡಿದ್ದು ಮಾತ್ರ ವಿಪರ್ಯಾಸವಾಗಿದೆ. ಇದನ್ನೂ ಓದಿ: ಹೆಜ್ಜೆ ಹೆಜ್ಜೆಗೂ ಅಡೆತಡೆ – ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ

  • ಮಕ್ಕಳನ್ನು ಬಲಿಕೊಡಲು ಮನಸ್ಸಾಗದೇ ತಾನೊಬ್ಬಳೇ ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

    ಮಕ್ಕಳನ್ನು ಬಲಿಕೊಡಲು ಮನಸ್ಸಾಗದೇ ತಾನೊಬ್ಬಳೇ ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

    ಕಾರವಾರ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆಯೊಬ್ಬಳು ತನ್ನ ಮಕ್ಕಳನ್ನು ಕರೆದುಕೊಂಡು ಆತ್ಮಹತ್ಯೆಗೆ (Suicide) ಮುಂದಾದರೂ ಕೊನೆಗೆ ಮುಗ್ದ ಮಕ್ಕಳನ್ನು ಬಲಿಕೊಡಲು ಮನಸ್ಸಾಗದೇ ತಾನೊಬ್ಬಳೇ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾದ (Kumta) ಹೆಡ್‌ಬಂದರ್ ಬಳಿ ನಡೆದಿದೆ.

    ಕುಮಟಾದ ಸಾಂತಗಲ್ ಗ್ರಾಮದ ನಿವೇದಿತಾ ನಾಗರಾಜ ಭಂಡಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮನೆಯಿಂದ ಸ್ಕೂಟಿಯಲ್ಲಿ ತನ್ನ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಬಂದು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮಹಿಳೆ ಯೋಜಿಸಿದ್ದಳು. ಆದರೆ ಮಕ್ಕಳನ್ನು ಬಲಿ ಕೊಡಲು ಮನಸ್ಸು ಒಪ್ಪದೇ ಕುಮಟಾದ ಪಿಕ್‌ಅಪ್ ಬಸ್‌ನಿಲ್ದಾಣದ ಬಳಿ ಅವರಿಬ್ಬರನ್ನು ಬಿಟ್ಟು, ಬಳಿಕ ತಾನೊಬ್ಬಳೇ ಕುಮಟಾದ ಬಂದರಿನ ಕಡಲ ತೀರಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಕಳ್ಳರಿಗೆ ಮೆಣಸಿನಕಾಯಿ ತಿನ್ನಲು ಒತ್ತಾಯಿಸಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು

    ಸಮುದ್ರಕ್ಕೆ ಹಾರುವುದಕ್ಕೂ ಮುನ್ನ ಮಹಿಳೆ ಸ್ಕೂಟಿಯಲ್ಲಿ ಮಾಂಗಲ್ಯ, ಕಾಲುಂಗುರ, ಮೊಬೈಲ್ ಇಟ್ಟು ಸಮುದ್ರಕ್ಕೆ ಹಾರಿದ್ದಾಳೆ. ಮಹಿಳೆ ಸಮುದ್ರಕ್ಕೆ ಹಾರುವುದನ್ನು ಗಮನಿಸಿದ ಲೈಫ್‌ಗಾರ್ಡ್‌ಗಳು ಆಕೆಯ ರಕ್ಷಣೆಗೆ ಮುಂದಾದರೂ ಅಲೆಗಳ ಅಬ್ಬರ ಹೆಚ್ಚಿದ್ದ ಕಾರಣ ಕೊನೆಗೆ ಮಹಿಳೆ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಲಗಿದ್ದಾಗ ತಲೆಗೆ ದೊಣ್ಣೆಯಿಂದ ಹೊಡೆದು ಪತ್ನಿ ಕೊಂದ ಪತಿ

  • ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗ ಸಾವು – ಮೂವರ ರಕ್ಷಣೆ

    ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗ ಸಾವು – ಮೂವರ ರಕ್ಷಣೆ

    ಕಾರವಾರ: ಸಮುದ್ರದಲ್ಲಿ (Sea) ಈಜಲು ತೆರಳಿದ್ದ ಪ್ರವಾಸಿಗನೊಬ್ಬ ಮುಳುಗಿ ಸಾವಿಗೀಡಾದ ಘಟನೆ ಕುಮಟಾದ (Kumta) ಬಾಡದಲ್ಲಿ ನಡೆದಿದೆ. ಮತ್ತೊಂದು ಕಡೆ ಮುರ್ಡೇಶ್ವರದಲ್ಲಿ (Murdeshwar) ಸಮುದ್ರದಲ್ಲಿ ಮುಳುಗುತ್ತಿದ್ದ ಮೂರು ಜನ ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

    ಮೃತನನ್ನು ಶಿವಮೊಗ್ಗ (Shivamogga) ಮೂಲದ ಪ್ರಶಾಂತ್ ಗುಪ್ತ ಎಂದು ಗುರುತಿಸಲಾಗಿದೆ. ಮೃತ ಪ್ರಶಾಂತ್ 11 ಜನರೊಂದಿಗೆ ಕುಮಟಾಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸಮುದ್ರಕ್ಕೆ ಈಜಲು ಹೋಗಿದ್ದಾಗ ಈ ಘಟನೆ ನಡೆದಿದೆ. ಈ ಸಂಬಂಧ ಕುಮಟಾ ಪೊಲೀಸ್‌ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಾಘ್ ಬಕ್ರಿ ಚಹಾ ಕಂಪನಿ ಮಾಲೀಕ ಮೆದುಳು ರಕ್ತಸ್ರಾವದಿಂದ ಸಾವು

    ಇನ್ನೊಂದೆಡೆ ಮುರ್ಡೇಶ್ವರದಲ್ಲಿ ಬಾಗಲಕೋಟೆಯಿಂದ ಬಂದಿದ್ದ ಮೂವರು ಪ್ರವಾಸಿಗರು ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಈ ವೇಳೆ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬಸವನಗೌಡ ಪಾಟೀಲ್ (22), ಶರಣು ಇಂಚಲ್ (21), ರವಿಚಂದ್ರನ್(22) ರಕ್ಷಣೆಗೊಳಗಾದ ಪ್ರವಾಸಿಗರಾಗಿದ್ದಾರೆ. ಶಶಿ, ಪಾಂಡು, ರಾಮಚಂದ್ರ ಅವರು ರಕ್ಷಣೆ ಮಾಡಿ ಪ್ರಥಮ ಚಿಕಿತ್ಸೆ ನೀಡಿದ ಲೈಫ್ ಗಾರ್ಡ್ ಸಿಬ್ಬಂದಿಯಾಗಿದ್ದಾರೆ.

    ದಸರಾ ರಜೆ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ವಿವಿಧ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಸಮುದ್ರಕ್ಕೆ ಇಳಿಯದಂತೆ ಲೈಫ್ ಗಾರ್ಡ್ ಸಿಬ್ಬಂದಿ ಎಚ್ಚರಿಕೆ ನೀಡಿದರೂ ಪ್ರವಾಸಿಗರು ಸಮುದ್ರಕ್ಕೆ ಇಳಿದು ತೊಂದರೆಗೆ ಸಿಲುಕುತ್ತಿದ್ದಾರೆ. ಇದನ್ನೂ ಓದಿ: ಉತ್ತರಕನ್ನಡದಲ್ಲಿ ಡೆಂಗ್ಯೂಗೆ ಇನ್ನೊಬ್ಬ ವ್ಯಕ್ತಿ ಬಲಿ- ಸಾವಿನ ಸಂಖ್ಯೆ 2ಕ್ಕೆ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವ ನಾಮಪತ್ರ ಸಲ್ಲಿಕೆ ವೇಳೆ ಭಿನ್ನಮತ ಸ್ಫೋಟ – ಮಾಜಿ ಶಾಸಕಿ ಮನೆಗೆ ತೆರಳಿ ಸ್ಪರ್ಧೆಗೆ ಒತ್ತಾಯಿಸಿದ ಕಾರ್ಯಕರ್ತರು

    ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವ ನಾಮಪತ್ರ ಸಲ್ಲಿಕೆ ವೇಳೆ ಭಿನ್ನಮತ ಸ್ಫೋಟ – ಮಾಜಿ ಶಾಸಕಿ ಮನೆಗೆ ತೆರಳಿ ಸ್ಪರ್ಧೆಗೆ ಒತ್ತಾಯಿಸಿದ ಕಾರ್ಯಕರ್ತರು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ (Kumta) ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ನಿವೇದಿತ್ ಆಳ್ವ ನಾಮಪತ್ರ ಸಲ್ಲಿಕೆ ವೇಳೆ ಭಿನ್ನಮತ ಸ್ಫೋಟಗೊಂಡಿದೆ.

    ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವ ನಾಮಪತ್ರ ಸಲ್ಲಿಕೆ ವೇಳೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರು ಆಳ್ವ ಅವರನ್ನು ಬೆಂಬಲಿಸದೆ, ನೇರವಾಗಿ  ಕಾಂಗ್ರೆಸ್ ಮಾಜಿ ಶಾಸಕಿ ಶಾರದಾ ಶೆಟ್ಟಿ (Sharada Shetty) ಅವರ ಮನೆಗೆ ತೆರಳಿದ್ದಾರೆ. ಹಾಗೂ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಬೇಕು ಎಂದು ಅವರನ್ನು ಒತ್ತಾಯಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಟಿಕೆಟ್ ವಂಚಿತರಾಗಿ ಪಕ್ಷೇತರವಾಗಿ ಸ್ಪರ್ಧಿಸಿರುವ ಮಾಜಿ ಶಾಸಕಿ ಶಾರದಾ ಶೆಟ್ಟಿಯವರು ನೂರಾರು ಕಾರ್ಯಕರ್ತರ ಎದುರು ಕಣ್ಣೀರು ಹಾಕಿದ್ದಾರೆ. ಇದನ್ನು ಓದಿ: ಪುತ್ರನ ನಾಮಪತ್ರ ಸಲ್ಲಿಸಲು ತನ್ನ ಹಳೆಯ ಅಂಬಾಸಿಡಾರ್ ಕಾರಿನಲ್ಲಿ ಪ್ರಯಾಣಿಸಿದ ಯಡಿಯೂರಪ್ಪ

    ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವ ವಿರುದ್ಧ ಕಾರ್ಯಕರ್ತರೇ ಅಸಮಾಧಾನಗೊಂಡಿದ್ದಾರೆ. ಅಲ್ಲದೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್‍ನ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿವಾನಂದ ಹೆಗಡೆ ಕಡತೋಕ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ತಯಾರಿ ನಡೆಸಿದ್ದಾರೆ. ಇದನ್ನು ಓದಿ: ಟಿಕೆಟ್ ಸಿಗದಿದ್ದಕೆ 5 ವರ್ಷಗಳ ಬಳಿಕ ಮತ್ತೆ ಹುದ್ದೆಯನ್ನೇರಿದ ಪೊಲೀಸ್ ಅಧಿಕಾರಿ: ಸಾರ್ವಜನಿಕ ವಲಯದಲ್ಲಿ ಚರ್ಚೆ

  • ಆಟೋದಲ್ಲಿ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಇಬ್ಬರ ಬಂಧನ

    ಆಟೋದಲ್ಲಿ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಇಬ್ಬರ ಬಂಧನ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ (kumta) ಪಟ್ಟಣದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು (Student) ಆಟೋದಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

    ತಾಲೂಕಿನ ಕೋನಳ್ಳಿಯ ನಿವಾಸಿ ಅಖಿಲ್ ಈಶ್ವರ ಅಡಿಗುಂಡಿ (20) ಹಾಗೂ ಹೊನ್ನಾವರ ಕಡತೋಕಾದ ಹೆಬ್ಳೆಕೊಪ್ಪ ನಿವಾಸಿ ಸಮರ್ಥ ಜಟ್ಟಿ ಮುಕ್ರಿ (20) ಬಂಧಿತರು. ಈ ಇಬ್ಬರು ಸೇರಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಇದರಿಂದಾಗಿ ವಿದ್ಯಾರ್ಥಿನಿ ಗರ್ಭಿಣಿ ಆಗಿದ್ದಾಳೆ. ಇದನ್ನೂ ಓದಿ: ಪೀಸ್‌ಪೀಸ್ ಪ್ರೇಮಿ ಅಫ್ತಾಬ್ ಹತ್ಯೆಗೆ ಯತ್ನ – ಪೊಲೀಸ್ ವ್ಯಾನ್ ಮೇಲೆ ದಾಳಿ

    ವಿದ್ಯಾರ್ಥಿನಿಯು ಗರ್ಭಿಣಿಯಾಗಿರುವ ವಿಷಯ ತಿಳಿದ ಕುಟುಂಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾಲಕಿಯ ಹೇಳಿಕೆ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದನ್ನೂ ಓದಿ: ಅಶ್ಲೀಲ ವೀಡಿಯೋ ಕಳುಹಿಸಿ ಮುಸ್ಲಿಮ್‌ ಯುವಕರ ತಲೆಕೆಡಿಸಿದ್ದ ಶಾರೀಕ್‌

    Live Tv
    [brid partner=56869869 player=32851 video=960834 autoplay=true]

  • ಕುಡಿದ ಮತ್ತಿನಲ್ಲಿ ಗಂಡನಿಂದ ಹೆಂಡ್ತಿಯ ಮರ್ಡರ್- ಮಕ್ಕಳು ನೋಡ್ತಿದ್ದಂತೆ ಅಟ್ಟಾಡಿಸಿ ಓರ್ವನ ಹತ್ಯೆ

    ಕುಡಿದ ಮತ್ತಿನಲ್ಲಿ ಗಂಡನಿಂದ ಹೆಂಡ್ತಿಯ ಮರ್ಡರ್- ಮಕ್ಕಳು ನೋಡ್ತಿದ್ದಂತೆ ಅಟ್ಟಾಡಿಸಿ ಓರ್ವನ ಹತ್ಯೆ

    ಕಾರವಾರ: ಕುಡಿತ ಮತ್ತಿನಲ್ಲಿ ಮತೊ ಮಹಾಶಯನೊಬ್ಬ ತನ್ನ ಪತ್ನಿ ಹಾಗೂ ಮಗನನ್ನು ಕೊಂದು ಬಳಿಕ ತಾನೂ ನೇಣಿಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಂಗಣೆ ಗ್ರಾಮದಲ್ಲಿ ನಡೆದಿದೆ.

    ತಾಕಿ ಮರಾಠಿ(35) ಹಾಗೂ ಲಕ್ಷ್ಮಣ ಮರಾಠಿ(12) ಕೊಲೆಯಾದವರು. ರಾಮ ಮರಾಠಿ(40) ಹೆಂಡತಿ, ಮಗನನ್ನ ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇದನ್ನೂ ಓದಿ: `ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

     ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ನಿನ್ನೆ ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ ರಾಮ ಮರಾಠಿ, ಏಕಾಏಕಿ ಕತ್ತಿಯಿಂದ ಮಲಗಿದ್ದ ಪತ್ನಿಗೆ ಹೊಡೆದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ದೃಶ್ಯವನ್ನ ಇಬ್ಬರು ಮಕ್ಕಳು ನೋಡಿ ಕಿರುಚಾಡಿದ್ದಾರೆ. ಈ ವೇಳೆ ರಾಮ, ಒಬ್ಬ ಮಗನನ್ನ ಅಟ್ಟಿಸಿಕೊಂಡು ಹೋಗಿ ಕೊಂದಿದ್ದಾನೆ.

    ಇತ್ತ ಇನ್ನೊಬ್ಬ ಮಗ ತಂದೆ ಕೈಯಿಂದ ತಪ್ಪಿಸಿಕೊಂಡಿದ್ದಾನೆ. ನಂತರ ಮನೆಗೆ ಬಂದ ರಾಮು, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಕುಮಟಾ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಿನಿಮಾ ಸ್ಟೈಲ್‍ನಲ್ಲಿ ಚೇಸಿಂಗ್ – ರಾಜಸ್ಥಾನಕ್ಕೆ ತೆರಳಿ ದರೋಡೆಕೋರರ ಹೆಡೆಮುರಿಕಟ್ಟಿದ ಬೆಂಗ್ಳೂರು ಪೊಲೀಸರು

    Live Tv
    [brid partner=56869869 player=32851 video=960834 autoplay=true]

  • ಕಾರವಾರ, ಕುಮಟಾದಲ್ಲಿ ಅಬ್ಬರಿಸಿದ ವರುಣ – ಜನಜೀವನ ಅಸ್ತವ್ಯಸ್ತ

    ಕಾರವಾರ, ಕುಮಟಾದಲ್ಲಿ ಅಬ್ಬರಿಸಿದ ವರುಣ – ಜನಜೀವನ ಅಸ್ತವ್ಯಸ್ತ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಇಂದು ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ ಕಾರವಾರ ನಗರ ಮತ್ತು ಸುತ್ತಮುತ್ತ ಹಲವು ರಸ್ತೆಗಳು ಜಲಾವೃತವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

    ಕಾರವಾರ ನಗದ ಹಬ್ಬುವಾಡದಲ್ಲಿ ಹೈಚರ್ಚ್ ರಸ್ತೆ, ನಂದನಗದ್ದಾ, ರೈಲು ನಿಲ್ದಾಣ ರಸ್ತೆ ಸೇರಿದಂತೆ ಹಲವೆಡೆ ಚರಂಡಿಯಿಂದ ಮಳೆ ನೀರು ಉಕ್ಕಿ ಹರಿದಿದೆ. ರಸ್ತೆಯಲ್ಲಿ ಉಕ್ಕಿ ಹರಿದ ನೀರಿನಿಂದಾಗಿ ವಾಹನ ಸವಾರರು ಪರದಾಡುವಂತಾಗಿದ್ದು, ನಗರದ ರೈಲ್ವೆ ನಿಲ್ದಾಣರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇದನ್ನೂ ಓದಿ: ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು: ದೇವೇಗೌಡರ ಪತ್ರ

     

    ರವೀಂದ್ರನಾಥ ಟ್ಯಾಗೋರ್ ಕಡಲತೀರದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಳೆ ನೀರು ತುಂಬಿದ್ದು, ಇದರಿಂದ ಸುಮಾರು ಅರ್ಧ ಕಿಲೋಮೀಟರ್ ರಸ್ತೆಯು ನದಿಯಂತೆ ಗೋಚರಿಸುತ್ತಿತ್ತು. ಕುಮಟಾ ಭಾಗದಲ್ಲಿ ಸಹ ಅಬ್ಬರದ ಮಳೆಗೆ ಹಲವು ರಸ್ತೆಗಳು ನೀರು ತುಂಬಿ ವಾಹನ ಸವಾರರು ಪರದಾಡುವಂತಾಯಿತು.

    ಜಿಲ್ಲೆಯಲ್ಲಿ ಇದೇ ತಿಂಗಳು 25ರ ವರೆಗೆ ಯಲ್ಲೋ ಅಲರ್ಟ ಫೋಷಿಸಲಾಗಿದ್ದು, ನದಿ ದಡದಲ್ಲಿರುವ ಗ್ರಾಮಗಳ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

    Live Tv