Tag: ಕುಸುಮಾ ಹನುಮಂತರಾಯಪ್ಪ

  • ಮತದಾರರಿಗೆ ಗಿಫ್ಟ್ ಆಮಿಷ ಆರೋಪ – ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಡಿ.ಕೆ ಸುರೇಶ್ ವಿರುದ್ಧ ಕೇಸ್

    ಮತದಾರರಿಗೆ ಗಿಫ್ಟ್ ಆಮಿಷ ಆರೋಪ – ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಡಿ.ಕೆ ಸುರೇಶ್ ವಿರುದ್ಧ ಕೇಸ್

    ಬೆಂಗಳೂರು: ಮತದಾರರಿಗೆ ಗಿಫ್ಟ್ ಬಾಕ್ಸ್ (Gift Box) ಹಂಚಿ ಆಮಿಷವೊಡ್ಡುತ್ತಿದ್ದ ಆರೋಪದ ಮೇಲೆ ಆರ್‌ಆರ್ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ (Kusuma Hanumantharayappa) ಹಾಗೂ ಸಂಸದ ಡಿ.ಕೆ ಸುರೇಶ್ (DK Suresh) ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಆರ್‌ಆರ್ ನಗರದ ಬಿಬಿಎಂಪಿ (BBMP) ಕಚೇರಿ ಬಳಿ ಮತದಾರರಿಗೆ ತವಾ ಬಾಕ್ಸ್ ಹಂಚಿಕೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಫ್ಲೈಯಿಂಗ್ ಸ್ಕ್ವಾಡ್‌ ಅಧಿಕಾರಿ ಸುರೇಶ್ ಸ್ಥಳಕ್ಕೆ ತೆರಳಿದಾಗ, ತವಾ ಹಂಚುತ್ತಿದ್ದವರಲ್ಲಿ ಇಬ್ಬರು ಓಡಿಹೋಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ಗಿಫ್ಟ್ ಬಾಕ್ಸ್‌ಗಳ ಮೇಲೆ ಕುಸುಮಾ ಹಾಗೂ ಡಿ.ಕೆ ಸುರೇಶ್ ಭಾವಚಿತ್ರಗಳಿದ್ದು, ಅವುಗಳನ್ನ ಸೀಜ್‌ ಮಾಡಲಾಗಿದೆ. ಈ ಬಗ್ಗೆ ಆರ್‌ಆರ್ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಂಡಾಯದ ಬಾಣಲೆಯಲ್ಲಿ ಕಾಂಗ್ರೆಸ್ ಕೊತಕೊತ – ಯಾರು ಎಲ್ಲಿ ರೆಬೆಲ್‌?

    2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪ್ರಕಟಿಸಿದ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಕುಸುಮಾ ಅವರಿಗೆ ಟಿಕಟ್‌ ಘೋಷಣೆ ಮಾಡಲಾಗಿತ್ತು. ಇದನ್ನೂ ಓದಿ:ನಮ್ಮ ಜೊತೆಗೆ ಸೂಪರ್ ಸ್ಟಾರ್ ಬಂದ್ರೆ ಕುಮಾರಸ್ವಾಮಿಗೆ ಯಾಕೆ ಚಿಂತೆ – ಸಿಎಂ ಪ್ರಶ್ನೆ

    ಒಂದೇ ದಿನ 8 ಕೋಟಿ ಹಣ ಸೀಜ್: ಚುನಾವಣೆ ಹೊತ್ತಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಹುಡುಕಿದಷ್ಟೂ ನಗ-ನಗದು ಪತ್ತೆಯಾಗ್ತಿವೆ. ಶುಕ್ರವಾರ ಒಂದೇ ದಿನ ರಾಜ್ಯದಲ್ಲಿ ಬರೋಬ್ಬರಿ 8 ಕೋಟಿ ನಗದು ಪತ್ತೆಯಾಗಿದ್ದು, ಈವರೆಗೆ 35 ಕೋಟಿಗೂ ಹೆಚ್ಚು ನಗದು ಸೀಜ್ ಆಗಿದೆ. ನಗದು ಚಿನ್ನಾಭರಣ ಸೇರಿ 93 ಕೋಟಿ ಅಧಿಕ ಮೌಲ್ಯದ ವಸ್ತುಗಳನ್ನ ಚುನಾವಣಾ ಆಯೋಗ ವಶಕ್ಕೆ ಪಡೆದುಕೊಂಡಿದೆ.

  • ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪಗೆ ಕೊರೊನಾ ಸೋಂಕು

    ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪಗೆ ಕೊರೊನಾ ಸೋಂಕು

    ಬೆಂಗಳೂರು: ಕಾಂಗ್ರೆಸ್ ನಾಯಕಿ ಹಾಗೂ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಅವರಿಗೆ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

    ಈ ಬಗ್ಗೆ ಕುಸುಮಾ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ‘ನನ್ನ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮನೆಯಲ್ಲಿಯೇ ಐಸೋಲೇಟ್ ಆಗಿದ್ದು, ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕಕೆ ಬಂದಿರುವವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.

    ಮಹಾಮಾರಿ ಕೊರೊನಾ ಎರಡನೇ ಅಲೆಯು ತೀವ್ರ ತರವಾಗಿದ್ದು ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಕ್ಯಾಪ್ಷನ್ ಹಾಕಿಕೊಳ್ಳುವ ಮೂಲಕ ಹಂಚಿಕೊಂಡಿದ್ದಾರೆ.

    ಈ ಹಿಂದೆ ರಾಜರಾಜೇಶ್ವರಿ ನಗರದ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಸ್ಪರ್ಧಿಸಿದ್ದರು.

  • ರಂಗೇರಿದ ಆರ್.ಆರ್.ನಗರ- ಮೂರು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

    ರಂಗೇರಿದ ಆರ್.ಆರ್.ನಗರ- ಮೂರು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

    – ಯಾರಿಗೆ ಒಲಿಯುತ್ತಾಳೆ ರಾಜ ರಾಜೇಶ್ವರಿ?

    ಬೆಂಗಳೂರು: ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರುತ್ತಿದೆ. ಇಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಿಂದ ಕುಸುಮಾ ಹನುಮಂತರಾಯಪ್ಪ, ಬಿಜೆಪಿಯಿಂದ ಮುನಿರತ್ನ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿ ಬೈ ಎಲೆಕ್ಷನ್ ಅಖಾಡದಲ್ಲಿದ್ದು, ಆರ್.ಆರ್.ನಗರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ.

    ನಾಮಪತ್ರ ಸಲ್ಲಿಕೆ ಹಿನ್ನೆಲೆ ರಾಜರಾಜೇಶ್ವರಿ ನಗರ ಜಂಟಿ ಆಯುಕ್ತರ ಕಚೇರಿಯ ಸುತ್ತಮುತ್ತ ಭದ್ರತೆ ಕೈಗೊಳ್ಳಲಾಗಿತ್ತು. ಮಂಗಳವಾರ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ ಬೆನ್ನಲ್ಲೇ ಪಕ್ಷ ಟಿಕೆಟ್ ಘೋಷಣೆ ಮಾಡಿತ್ತು. ಇಂದು ಅಪಾರ ಬೆಂಬಲಿಗರು ಮತ್ತು ಸಚಿವರ ಜೊತೆ ಆಗಮಿಸಿದ ಮುನಿರತ್ನ ಅವರು ನಾಮಪತ್ರ ಸಲ್ಲಿಸಿ, ಎಲ್ಲ ಒಳ್ಳೇ ರೀತಿಯಲ್ಲಿ ನಡೆದಿದೆ. ನನ್ನ ಮೇಲಿರುವ ಕ್ಷೇತ್ರದ ಜನತೆಯ ಋಣವನ್ನ ತೀರಿಸುತ್ತೇನೆ ಎಂದರು. ಮುನಿರತ್ನ ಅವರಿಗೆ ಡಿಸಿಎಂ ಅಶ್ವಥ್ ನಾರಾಯಣ್, ಸಚಿವರಾದ ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಆರ್.ಅಶೋಕ್ ಮತ್ತು ಸುಧಾಕರ್ ಸೇರಿದಂತೆ ಹಲವರು ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.

    ಇತ್ತ ಕಾಂಗ್ರೆಸ್ ಅಭ್ಯರ್ಥಿ ಹನುಮಂತರಾಯಪ್ಪ ಸಹ 11.45ಕ್ಕೆ ನಾಮಪತ್ರ ಸಲ್ಲಿಸಿ, ಇಂದು ನನ್ನ ಪಾಲಿಗೆ ಅತ್ಯಂತ ಮಹತ್ವದ ದಿನ. ನನ್ನ ಇಷ್ಟದ ದೇವರು ಆಂಜನೇಯನ ದರ್ಶನ ಮಾಡಿದ್ದೇನೆ. ದೇವರ ಪೂಜೆ ಬಳಿಕ ಹೊಸ ಶಕ್ತಿ ಬಂದಿದೆ. ಇಂತಹ ಅವಕಾಶ ಸಿಕ್ಕಿದ್ದಕ್ಕೆ ನಾನು ಯಾವಾಗಲೂ ಚಿರಋಣಿ. ತುಂಬಾ ಭಾವನಾತ್ಮಕ ದಿನ ಎಂದು ಹೇಳಿದರು. ಕುಸುಮಾ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಸಾಥ್ ನೀಡಿದರು.

    ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಅವರು ಮೊದಲಿಗೆ ರಾಜ ರಾಜರಾಜೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ನಗರ ಜಂಟಿ ಆಯುಕ್ತರ ಕಚೇರಿಗೆ ಆಗಮಿಸಿದರು. ನಾಮಪತ್ರ ಸಲ್ಲಿಸಿದ ಕೃಷ್ಣಮೂರ್ತಿ, ಬಿಜೆಪಿ ಮತ್ತು ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಆರ್.ಆರ್.ನಗರದ ಮನೆ ಮಗ. ಅಭಿವೃದ್ಧಿಗೆ ಜನರು ಮತ ಕೊಡಬೇಕು. ಇಲ್ಲಿ ನಾನು ಅಭ್ಯರ್ಥಿ ಅಲ್ಲ ಕುಮಾರಸ್ವಾಮಿ ಅಭ್ಯರ್ಥಿ. ಚುನಾವಣೆಯಲ್ಲಿ ಗೆದ್ದರೆ ನೀವು ಕಾಲಲ್ಲಿ ತೋರಿಸಿದ್ದನ್ನ ಮನಸ್ಸಿನಲ್ಲಿ ಇಟ್ಟು ಮಾಡ್ತೀನಿ. ನಾನು ಒಕ್ಕಲಿಗನೇ ಕಾಂಗ್ರೆಸ್ ಅವರು ಒಕ್ಕಲಿಗ ಅಂತ ಓಡಾಡಿದರೂ ಜನ ಜಾತಿ ಹೆಸರಲ್ಲಿ ಮತ ಕೊಡೊಲ್ಲ. ನೂರಕ್ಕೆ ನೂರು ನಾನು ಈ ಕ್ಷೇತ್ರದಲ್ಲಿ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೃಷ್ಣಮೂರ್ತಿ ಅವರ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.