Tag: ಕುಸ್ತಿಪಟು

  • ಒಲಿಂಪಿಕ್ಸ್‌ ಪದಕ ವಿಜೇತ ಕುಸ್ತಿಪಟುಗೆ ಶಾಕ್‌ – ಬಜರಂಗ್‌ ಪುನಿಯಾ 4 ವರ್ಷ ಬ್ಯಾನ್‌

    ಒಲಿಂಪಿಕ್ಸ್‌ ಪದಕ ವಿಜೇತ ಕುಸ್ತಿಪಟುಗೆ ಶಾಕ್‌ – ಬಜರಂಗ್‌ ಪುನಿಯಾ 4 ವರ್ಷ ಬ್ಯಾನ್‌

    ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ಕುಸ್ತಿಪಟು ಬಜರಂಗ್ ಪುನಿಯಾ (Wrestler Bajrang Punia) ಅವರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ.

    ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಪುನಿಯಾ ಮೂತ್ರದ ಮಾದರಿಯನ್ನು (Urine Sample) ಪರೀಕ್ಷೆಗೆ ನೀಡಲಿ ನಿರಾಕರಿಸಿದರು. ಇದನ್ನು ನಿಯಮ ಬಾಹಿರ ಎಂದು ಪರಿಗಣಿಸಿರುವ ನಾಡಾ ಪೂನಿಯಾರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ. ಕಳೆದ ಏಪ್ರಿಲ್‌ 23ರಂದು ಪುನಿಯಾರನ್ನ ನಾಡಾ ಮೊದಲಬಾರಿಗೆ ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಳಿ (UWW) ಸಹ ಅವರನ್ನ ಅಮಾನತುಗೊಳಿಸಿತ್ತು. ಇದರ ವಿರುದ್ಧ ಪುನಿಯಾ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ ನಾಡಾದ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್ (ADDP) ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತ್ತು. ಇದನ್ನೂ ಓದಿ: 1,000 ಕೋಟಿಗೆ RCB ಫ್ರಾಂಚೈಸಿ ಖರೀದಿಸಲು ಪ್ಲ್ಯಾನ್‌; ಮಂಡ್ಯದಲ್ಲಿ ಸದ್ದು ಮಾಡ್ತಿದೆ ಫ್ಯಾನ್ಸ್‌ ಪೋಸ್ಟರ್‌

    ನಾಡಾಗೆ ಮೂತ್ರ ಮಾದರಿಯನ್ನು ನೀಡದೇ ಇದ್ದದ್ದು ಯಾಕೆ? ಎಂದು ಜೂನ್‌ 23 ರಂದು ಕುಸ್ತಿಪಟುಗೆ ನೋಟಿಸ್‌ ನೀಡಿತ್ತು. ಸೆಪ್ಟೆಂಬರ್ 20 ಮತ್ತು ಅಕ್ಟೋಬರ್ 4 ರಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಆದೇಶ ಪ್ರಕಟಿಸಿರುವ ಎಡಿಡಿಪಿ, ಕಲಂ 10.3.1 ರ ಅಡಿಯಲ್ಲಿ ನಿರ್ಬಂಧಗಳಿಗೆ ಅಥ್ಲೀಟ್ ಹೊಣೆಗಾರನಾಗಿರುತ್ತಾನೆ ಮತ್ತು 4 ವರ್ಷಗಳ ಅವಧಿಗೆ ಅನರ್ಹತೆಗೆ ಹೊಣೆಗಾರನಾಗಿರುತ್ತಾನೆ ಎಂದು ಹೇಳಿದೆ. ಈ ಸಂದರ್ಭದಲ್ಲಿ ಬಜರಂಗ್ ಪುನಿಯಾ ಸ್ಪರ್ಧಾತ್ಮಕ ಕುಸ್ತಿಗೆ ಮರಳಲು ಮತ್ತು ವಿದೇಶದಲ್ಲಿ ಕೋಚಿಂಗ್‌ ಕೆಲಸಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ತನ್ನ ಆದೇಶದಲ್ಲಿ ತಿಳಿದಿದೆ. ಇದನ್ನೂ ಓದಿ: Keep Distance – ಇದು ನಮ್ಮ ನಿಮ್ಮ ನೆಮ್ಮದಿಯ ವಿಷಯ!

    ಕೆಲ ದಿನಗಳ ಹಿಂದೆಯಷ್ಟೇ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಕಾಂಗ್ರೆಸ್‌ ಸೇರ್ಪಡೆಯಾದರು. ಆನಂತರ ಪೂನಿಯಾ ಅವರನ್ನ ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನ (Indian Kisan Congress) ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಇದಕ್ಕೂ ಮುನ್ನ ಅವರು ರೈಲ್ವೆ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: 2026ರ ವೇಳೆಗೆ ದುಬೈನಲ್ಲಿ ವಿಶ್ವದ ಮೊದಲ ಡ್ರೋನ್‌ ಏರ್‌ ಟ್ಯಾಕ್ಸಿ ಹಾರಾಟ- ಹೇಗಿರಲಿದೆ ಟ್ಯಾಕ್ಸಿ?

  • ʻದಂಗಲ್‌ʼ ಸಿನಿಮಾ ಗಳಿಸಿದ್ದು 2,000 ಕೋಟಿ, ನಮಗೆ ಸಿಕ್ಕಿದ್ದು ಕೇವಲ 1 ಕೋಟಿ: ಬಬಿತಾ ಫೋಗಟ್‌

    ʻದಂಗಲ್‌ʼ ಸಿನಿಮಾ ಗಳಿಸಿದ್ದು 2,000 ಕೋಟಿ, ನಮಗೆ ಸಿಕ್ಕಿದ್ದು ಕೇವಲ 1 ಕೋಟಿ: ಬಬಿತಾ ಫೋಗಟ್‌

    ಚಂಡೀಗಢ: ಆಮೀರ್‌ ಖಾನ್‌ ನಟನೆಯ ಬ್ಲಾಕ್‌ಬಸ್ಟರ್‌ ʻದಂಗಲ್‌ʼಸಿನಿಮಾ (Dangal Cinema) ಇಡೀ ವಿಶ್ವದಾದ್ಯಂತ ಗಳಿಸಿದ್ದು 2,000 ಕೋಟಿ ರೂ. ಆದ್ರೆ ನಮ್ಮ ಕುಟುಂಬಕ್ಕೆ ಸಿಕ್ಕಿದ್ದು ಕೇವಲ 1 ಕೋಟಿ ರೂ. ಎಂದು ಭಾರತದ ಮಾಜಿ ಕುಸ್ತಿಪಟು ಬಬಿತಾ ಫೋಗಟ್‌ (Babita Phogat) ಬಹಿರಂಗಪಡಿಸಿದ್ದಾರೆ.

    2016ರಲ್ಲಿ ತೆರೆ ಕಂಡ‌ ಬಬಿತಾ ಫೋಗಟ್‌ ಅವರ ಜೀವನಾಧಾರಿತ ಬಾಲಿವುಡ್‌ ಸಿನಿಮಾ (Bollywood Movie) ʻದಂಗಲ್‌ʼ ದೇಶಾದ್ಯಂತ ಭರ್ಜರಿ ಕಮಾಲ್‌ ಮಾಡಿತ್ತು. ಸದ್ಯ ಕುಸ್ತಿ ಬಿಟ್ಟು ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಬಬಿತಾ ಅವರು ದಂಗಲ್‌ ಚಿತ್ರದ ಹಣಕಾಸಿನ ವಿವರವನ್ನ ಬಹಿರಂಗಪಡಿಸಿದ್ದಾರೆ. ದಂಗಲ್‌ ಚಿತ್ರವು ವಿಶ್ವದಾದ್ಯಂತ 2,000 ಕೋಟಿ ರೂ. ಗಳಿಸಿತು. ಆದ್ರೆ ಚಿತ್ರ ತಯಾಕರಿಂದ ನಮಗೆ ಸಿಕ್ಕಿದ್ದು ಕೇವಲ 1 ಕೋಟಿ ರೂ. ಮಾತ್ರ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಯುದ್ಧಕ್ಕೆ ನಮ್ಮ ಬೆಂಬಲ ಇಲ್ಲ: BRICS ಶೃಂಗಸಭೆಯಲ್ಲಿ ಮೋದಿ ಸ್ಪಷ್ಟನೆ

    ಇದರಿಂದ ನಿಮಗೆ ಭ್ರಮನಿರಸನವಾಗಿದೆಯೇ ಎಂದು ನಿರೂಪಕರು ಮರು ಪ್ರಶ್ನೆ ಮಾಡಿದಾಗ ಪ್ರತಿಕ್ರಿಯಿಸಿದ ಬಬಿತಾ, ಇದು ತಮ್ಮ ತಂದೆ ಮಹಾವೀರ್ ಸಿಂಗ್‌ ಫೋಗಟ್ (Mahavir Singh) Phogat) ಅವರಲ್ಲಿ ಅಡಗಿರುವ ಮೌಲ್ಯವನ್ನು ಪ್ರತಿಬಿಂಬಿಸುತ್ತದೆ. ಏಕೆಂದರೆ ನಮಗೆ ಜನರ ಪ್ರೀತಿ ಹಾಗೂ ಗೌರವ ಬೇಕು ಹಣ ಮುಖ್ಯವಲ್ಲ ಎಂದು ನಮ್ಮ ತಂದೆ ನಮಗೆ ಹೇಳಿದ್ದರು ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವ್ರು ಗನ್ ತಗೊಂಡು ಹೋದ್ರು, ಬುಲೆಟ್‌ಗಳು ಬಿಜೆಪಿ-ಜೆಡಿಎಸ್‌ನಲ್ಲಿವೆ: ಸುರೇಶ್ ಬಾಬು

    2016ರ ಡಿಸೆಂಬರ್ 23ರಂದು ಬಿಡುಗಡೆಯಾದ ದಂಗಲ್ ಚಿತ್ರವನ್ನು ನಿತೀಶ್ ತಿವಾರಿ ನಿರ್ದೇಶಿಸಿದ್ದು, ಆಮೀರ್ ಖಾನ್, ಮಹಾವೀರ್ ಫೋಗಟ್ ಅವರ ಪ್ರಮುಖ ಪಾತ್ರ ನಿರ್ವಹಿಸಿರುವುದು ಮಾತ್ರವಲ್ಲದೇ ಈ ಚಿತ್ರದ ಸಹ ನಿರ್ಮಾಪಕರೂ ಹೌದು. ಇದು ಮಾಜಿ ಕುಸ್ತಿಪಟು ಮಹಾವೀರ್ ಫೋಗಟ್ ಅವರು ತಮ್ಮ ಮಕ್ಕಳಾದ ಗೀತಾ ಹಾಗೂ ಬಬಿತಾ ಅವರನ್ನು ವಿಶ್ವದರ್ಜೆಯ ಕುಸ್ತಿಪಟುಗಳಾಗಿ ಬೆಳೆಸಿದ ಕಥಾನಕವನ್ನು ಬಿಂಬಿಸುತ್ತದೆ. ಇದನ್ನೂ ಓದಿ: `ಮಹಾ’ ಚುನಾವಣೆ: ಎನ್‌ಸಿಪಿ ಮೊದಲ ಪಟ್ಟಿ ಬಿಡುಗಡೆ – ಬಾರಾಮತಿಯಿಂದ ಅಜಿತ್ ಪವಾರ್ ಸ್ಪರ್ಧೆ

  • ನಾನು ಅವರ ಹಾಸಿಗೆಯ ಮೇಲೆ ಕುಳಿತಿದ್ದೆ – ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮತ್ತೆ ಸಾಕ್ಷಿ ಮಲಿಕ್‌ ಆರೋಪ

    ನಾನು ಅವರ ಹಾಸಿಗೆಯ ಮೇಲೆ ಕುಳಿತಿದ್ದೆ – ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮತ್ತೆ ಸಾಕ್ಷಿ ಮಲಿಕ್‌ ಆರೋಪ

    ನವದೆಹಲಿ: ನಾನು ಅವರ ಹಾಸಿಗೆಯ ಮೇಲೆ ಕುಳಿತಿದ್ದೆ ಎಂದು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಕುರಿತು ಮೇಲೆ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.

    2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕುಸ್ತಿಪಟು ಸಾಕ್ಷಿ ಮಲಿಕ್ ತಮ್ಮ ವೃತ್ತಿಜೀವನದ ಕೆಲವು ಘಟನೆಗಳ ಬಗ್ಗೆ ಪುಸ್ತಕ ರೂಪದಲ್ಲಿ ಹೊರ ತಂದಿದ್ದಾರೆ.

    ಕೆಲವು ತಿಂಗಳ ಹಿಂದೆಯಷ್ಟೇ ಸಾಕ್ಷಿ ಮಲಿಕ್ ಕುಸ್ತಿಯನ್ನು ತೊರೆದಿದ್ದರು. 2012ರ ಅಲ್ಮಾಟಿ (ಕಝಾಕಿಸ್ತಾನ್)ನಲ್ಲಿ ನಡೆದ ಏಷ್ಯನ್ ಜೂನಿಯರ್ ಚಾಂಪಿಯನ್‌ಶಿಪ್ ವೇಳೆ ಆಗಿನ ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಹೊಟೇಲ್ ಕೋಣೆಯೊಂದರಲ್ಲಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದರು ಎಂದು ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.ಇದನ್ನೂ ಓದಿ: ಸೂರ್ಯ ನಟನೆಯ ‘ಕಂಗುವ’ ಚಿತ್ರದ ರೊಮ್ಯಾಂಟಿಕ್‌ ಸಾಂಗ್‌ ಔಟ್‌

    ತನ್ನ ಪೋಷಕರೊಂದಿಗೆ ಮಾತನಾಡಲು ನನ್ನನ್ನು ಬ್ರಿಜ್ ಭೂಷಣ್ ಹೊಟೇಲ್ ಕೋಣೆಯೊಂದರೊಳಗೆ ಕಳುಹಿಸಿದರು. ಅದರ ನಂತರ ನಡೆದದ್ದು ನನ್ನ ಜೀವನದ ಅತ್ಯಂತ ಆಘಾತಕಾರಿ ಘಟನೆಗಳಲ್ಲಿ ಒಂದು ಎಂದು ಹೇಳಿದ್ದಾರೆ.

    ನಾನು ಒಳಗೆ ಹೋಗಿ ನನ್ನ ಮನೆಯವರೊಂದಿಗೆ ಮಾತನಾಡುತ್ತಿದ್ದೆ. ಏನಾದರೂ ಕೆಟ್ಟದ್ದು ಸಂಭವಿಸಬಹುದು ಎಂದುಕೊಂಡಿದ್ದೆ. ಅಷ್ಟರಲ್ಲೇ ಅವರೂ ಕೂಡ ಒಳಗೆ ಬಂದರು. ನಾನು ಕಾಲ್ ಕಟ್ ಮಾಡಿದ ತಕ್ಷಣ ಅವರು ಕಿರುಕುಳ ನೀಡಲು ಪ್ರಯತ್ನಿಸಿದರು. ಅವನನ್ನು ತಳ್ಳಿ ಅಳಲು ಪ್ರಾರಂಭಿಸಿದೆ. ನನ್ನಿಂದ ಅವರು ಏನನ್ನು ಬಯಸಿದ್ದರೋ, ಅದು ನನ್ನಿಂದ ಆಗುವುದಿಲ್ಲ ಎಂದು ತಿಳಿದಾಗ ಅವರೇ ನನ್ನಿಂದ ದೂರ ಸರಿದರು. ಬಳಿಕ ನಾನು ಅಲ್ಲಿಂದ ನನ್ನ ಕೋಣೆಗೆ ಹೋದೆ. ಆದರೆ ಈ ರೀತಿ ಅನುಭವಿಸಿದ್ದು ಮೊದಲಲ್ಲ. ಇದಕ್ಕೂ ಮುಂಚೆ ಟ್ಯೂಷನ್ ಶಿಕ್ಷಕರೊಬ್ಬರು ನನ್ನೊಂದಿಗೆ ಬಾಲ್ಯದಲ್ಲಿರುವಾಗ ಅನುಚಿತವಾಗಿ ವರ್ತಿಸಿದ್ದರು ಎಂದು ಹೇಳಿಕೊಂಡಿದ್ದಾರೆ.

    ನನ್ನ ಬಾಲ್ಯದಲ್ಲಿಯೂ ನಾನು ಕಿರುಕುಳಕ್ಕೊಳಗಾಗಿದ್ದೇನೆ. ಆದರೆ ನನ್ನ ತಾಯಿ ನನ್ನ ಬೆನ್ನೆಲುಬಾಗಿದ್ದರು. ನಾನು ಅಲ್ಮಾಟಿಯಲ್ಲಿ ಏನಾಯಿತು ಎಂಬುದನ್ನು ಮರೆತುಬಿಡಲು ಪ್ರಯತ್ನಿಸಿದೆ. ನನ್ನ ಪೋಷಕರು ನನಗೆ ಅದೇ ರೀತಿಯ ಸಲಹೆ ನೀಡಿದರು. ಇಷ್ಟೆಲ್ಲ ನಡೆದರೂ ನನ್ನ ಕುಟುಂಬದವರು ಸ್ಪರ್ಧೆ ಹಾಗೂ ತರಬೇತಿಯ ಕುರಿತು ಗಮನ ಹರಿಸಲು ತಿಳಿಸಿದರು. ತರಬೇತಿಯನ್ನು ಮುಂದುವರೆಸಲು ಕೂಡ ನನ್ನ ಕುಟುಂಬದವರು ಅನುಮತಿ ನೀಡಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞಳಾಗಿದ್ದೇನೆ ಎಂದರು.ಇದನ್ನೂ ಓದಿ:ಬೆಂಗಳೂರು ಮಳೆಯ ಸಮಸ್ಯೆಗೆ ಪರಿಹಾರ ಕೊಡದ ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ: ಸುರೇಶ್ ಬಾಬು

  • ಭಾರತದ ಸ್ಟಾರ್‌ ರೆಸ್ಲರ್ ವಿನೇಶ್ ಫೋಗಟ್‌ಗೆ ಚಿನ್ನದ ಪದಕ!

    ಭಾರತದ ಸ್ಟಾರ್‌ ರೆಸ್ಲರ್ ವಿನೇಶ್ ಫೋಗಟ್‌ಗೆ ಚಿನ್ನದ ಪದಕ!

    ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದ ಸ್ಟಾರ್ ರೆಸ್ಲರ್‌ ವಿನೇಶ್ ಫೋಗಟ್ (Vinesh Phogat) ಭಾರತಕ್ಕೆ ಮರಳಿದ ಬಳಿಕ ಚಿನ್ನದ ಪದಕ (Gold Medal) ಪಡೆದಿದ್ದಾರೆ.

    ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ವಿನೇಶ್‌ ಅವರು ಒಲಿಂಪಿಕ್ಸ್‌ನಿಂದಲೇ ಅನರ್ಹಗೊಂಡರು, ಅಲ್ಲದೇ ವಿನೇಶ್‌ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ (CAS) ವಜಾಗೊಳಿಸಿತ್ತು. ಹಾಗಿದ್ದರೂ ಚಿನ್ನದ ಪದಕ ಸಿಕ್ಕಿದ್ದು ಹೇಗೆ ಅನ್ನೋದು ಅಚ್ಚರಿಯಾಗಿದೆ. ಈ ಬಗ್ಗೆ ತಿಳಿಯಬೇಕಿದ್ದರೆ ಮುಂದೆ ಓದಿ… ಇದನ್ನೂ ಓದಿ: ಸರ್ಕಾರಿ ಕೆಲಸ ತಿರಸ್ಕರಿಸಿದ ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸರಬ್ಜೋತ್‌ ಸಿಂಗ್‌

    ಶನಿವಾರ ಭಾರತಕ್ಕೆ ಮರಳಿದ ಫೋಗಟ್‌ಗೆ ದೆಹಲಿಯ ವಿಮಾನ ನಿಲ್ದಾಣದಲ್ಲಿ (Delhi Airport) ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿತು. ಅಭಿಮಾನಿಗಳನ್ನು ನೋಡಿ ಫೋಗಟ್ ಭಾವೋದ್ವೇಗಕ್ಕೆ ಒಳಗಾದರು. ಫೋಗಟ್ ಕಣ್ಣಲ್ಲಿ ನೀರು ಉಕ್ಕಿತ್ತು. ಕಾಂಗ್ರೆಸ್ ಸಂಸದ ದೀಪಿಂದರ್ ಹೂಡಾ, ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸಂತೈಸುವ ಕೆಲಸ ಮಾಡಿದರು. ಬಳಿಕ ತೆರೆದ ವಾಹನದಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳಿದರು. ರೋಡ್‌ಶೋನಲ್ಲಿ ದೊಡ್ಡ ಗುಂಪು ಅವಳನ್ನು ಹಿಂಬಾಲಿಸಿತು.

    ದೆಹಲಿಯಿಂದ ಬಾಳಲಿಗೆ ಹೋಗುವ ಮಾರ್ಗದಲ್ಲಿ, ಹಲವಾರು ಗ್ರಾಮಗಳಲ್ಲಿ ವಿನೇಶ್ ಬೆಂಬಲಿಗರು ಅವರನ್ನ ಸನ್ಮಾನಿಸಿದರು, 135 ಕಿಮೀ ದೂರದ ಪ್ರಯಾಣವು ಸುಮಾರು 13 ಗಂಟೆಗಳ ಕಾಲ ತೆಗೆದುಕೊಂಡಿತು. ಬಳಿಕ ಅವರ ಹುಟ್ಟೂರು ಬಾಳಲಿಯಲ್ಲಿ ಸಮುದಾಯದ ಹಿರಿಯರು ಚಿನ್ನದ ಪದಕ ನೀಡಿ ಗೌರವಿಸಿದರು. ಇದನ್ನೂ ಓದಿ: WTC ಅಂಕಪಟ್ಟಿಯಲ್ಲಿ ಭಾರತ ಮತ್ತೆ ನಂ.1 – 2ನೇ ಸ್ಥಾನಕ್ಕೆ ಕುಸಿದ ಆಸೀಸ್‌

    ನಿಗದಿಗಿಂತ ತೂಕಕ್ಕಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕೆ ಫೋಗಟ್‌ ಅವರನ್ನು ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics) ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ. ವಿಭಾಗದ ಫೈನಲ್‌ನಿಂದ ಅನರ್ಹಗೊಳಿಸಲಾಗಿತ್ತು. ಕ್ರೀಡಾಕೂಟದ ಸಂದರ್ಭದಲ್ಲಿ ವಿವಾದ ಪರಿಹಾರಕ್ಕಾಗಿ ವಿಶೇಷವಾಗಿ ಸ್ಥಾಪಿಸಲಾಗಿರುವ ಸಿಎಎಸ್‌ನ ತಾತ್ಕಾಲಿಕ ವಿಭಾಗಕ್ಕೆ ತಮ್ಮ ವಿರುದ್ಧದ ಕ್ರಮ ಪ್ರಶ್ನಿಸಿ ವಿನೇಶ್‌ ಆ.9 ರಂದು ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಭವಿಷ್ಯದ ಬಗ್ಗೆ ಖಚಿತವಿಲ್ಲ – 2032ರವರೆಗೆ ಆಡುವ ಸುಳಿವು ನೀಡಿದ ವಿನೇಶ್‌ ಫೋಗಟ್‌

    ಫೈನಲ್‌ ಪಂದ್ಯದ ಮುನ್ನಾದಿನ ನಾನು ‌ಮೂರು ಪಂದ್ಯವನ್ನು ಆಡಿದ್ದೇನೆ. ಆ ದಿನ ನಿಗದಿತ 50 ಕೆಜಿ ತೂಕದ ಮಿತಿಯಲ್ಲಿ ಇದ್ದ ಕಾರಣ ಜಂಟಿಯಾಗಿ ಬೆಳ್ಳಿ ಪದಕದ ಗೌರವ ನೀಡಬೇಕೆಂದು ಮನವಿ ಮಾಡಿದ್ದರು. ವಿನೇಶ್‌ ಫೋಗಟ್‌ ಪರವಾಗಿ ಖ್ಯಾತ ವಕೀಲ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಆದಾಗ್ಯೂ ವಿನೇಶ್‌ ಅವರ ಮೇಲ್ಮನವಿ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ (CAS) ವಜಾಗೊಳಿಸಿಸಿತ್ತು.

    ವಿನೇಶ್ ಎರಡು ಬಾರಿ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ, ಏಷ್ಯನ್ ಗೇಮ್ಸ್ ಚಾಂಪಿಯನ್ ಮತ್ತು 8 ಏಷ್ಯನ್ ಚಾಂಪಿಯನ್‌ಶಿಪ್ ಪದಕಗಳನ್ನು ಗೆದ್ದಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್‌ಗೆ ಶಾಕ್ ಕೊಟ್ಟ ಆರ್‌ಸಿಬಿ – ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಔಟ್?

  • ಭಾರತಕ್ಕೆ ಮರಳಿದ ವಿನೇಶ್‌ ಫೋಗಟ್‌ಗೆ ಅದ್ಧೂರಿ ಸ್ವಾಗತ

    ಭಾರತಕ್ಕೆ ಮರಳಿದ ವಿನೇಶ್‌ ಫೋಗಟ್‌ಗೆ ಅದ್ಧೂರಿ ಸ್ವಾಗತ

    ನವದೆಹಲಿ: ಭಾರತದ ಸ್ಟಾರ್ ರೆಸ್ಲರ್ ವಿನೇಶ್ ಫೋಗಟ್ (Vinesh Phogat) ಭಾರತಕ್ಕೆ ವಾಪಸ್ ಆಗಿದ್ದಾರೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ (Delhi Airport) ಫೋಗಟ್‌ಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿದೆ.

    ಅಭಿಮಾನಿಗಳನ್ನು ನೋಡಿ ಫೋಗಟ್ ಭಾವೋದ್ವೇಗಕ್ಕೆ ಒಳಗಾದರು. ಫೋಗಟ್ ಕಣ್ಣಲ್ಲಿ ನೀರು ಉಕ್ಕಿತ್ತು. ಕಾಂಗ್ರೆಸ್ ಸಂಸದ ದೀಪಿಂದರ್ ಹೂಡಾ, ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸಂತೈಸುವ ಕೆಲಸ ಮಾಡಿದರು. ಬಳಿಕ ತೆರೆದ ವಾಹನದಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳಿದರು.

    ವಿನೇಶ್ ಫೋಗಟ್ ಬೆಂಬಲಕ್ಕೆ ಭಾರತದ ಕುಸ್ತಿ ಫೆಡರೇಷನ್ ನಿಲ್ಲಲಿಲ್ಲ ಎಂದು ಫೋಗಟ್ ಪತಿ ಸೋಮ್‌ವೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದ್ರಾವಿಡ್ ಪುತ್ರನ ಸಿಕ್ಸ್ – ವಿಡಿಯೋ ವೈರಲ್‌, ಅಭಿಮಾನಿಗಳ ಮೆಚ್ಚುಗೆ

    ಭಾರತೀಯ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಅವರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ (CAS) ವಜಾಗೊಳಿಸಿಸಿತ್ತು.

    ನಿಗದಿಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕೆ ಫೋಗಟ್‌ ಅವರನ್ನು ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics) ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ. ವಿಭಾಗದ ಫೈನಲ್‌ನಿಂದ ಅನರ್ಹಗೊಳಿಸಲಾಗಿತ್ತು.ಕ್ರೀಡಾಕೂಟದ ಸಂದರ್ಭದಲ್ಲಿ ವಿವಾದ ಪರಿಹಾರಕ್ಕಾಗಿ ವಿಶೇಷವಾಗಿ ಸ್ಥಾಪಿಸಲಾಗಿರುವ ಸಿಎಎಸ್‌ನ ತಾತ್ಕಾಲಿಕ ವಿಭಾಗಕ್ಕೆ ತಮ್ಮ ವಿರುದ್ಧದ ಕ್ರಮ ಪ್ರಶ್ನಿಸಿ ವಿನೇಶ್‌ ಆ.9 ರಂದು ಮೇಲ್ಮನವಿ ಸಲ್ಲಿಸಿದ್ದರು.


    ಫೈನಲ್‌ ಪಂದ್ಯದ ಮುನ್ನಾದಿನ ನಾನು ‌ಮೂರು ಪಂದ್ಯವನ್ನು ಆಡಿದ್ದೇನೆ. ಆ ದಿನ ನಿಗದಿತ 50 ಕೆಜಿ ತೂಕದ ಮಿತಿಯಲ್ಲಿ ಇದ್ದ ಕಾರಣ ಜಂಟಿಯಾಗಿ ಬೆಳ್ಳಿ ಪದಕದ ಗೌರವ ನೀಡಬೇಕೆಂದು ಮನವಿ ಮಾಡಿದ್ದರು. ವಿನೇಶ್‌ ಫೋಗಟ್‌ ಪರವಾಗಿ ಖ್ಯಾತ ವಕೀಲ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

     

  • Paris Olympics 2024 | ಅನರ್ಹಗೊಂಡ ಕೆಲವೇ ನಿಮಿಷಗಳಲ್ಲಿ ವಿನೇಶ್‌ ಆಸ್ಪತ್ರೆಗೆ ದಾಖಲು

    Paris Olympics 2024 | ಅನರ್ಹಗೊಂಡ ಕೆಲವೇ ನಿಮಿಷಗಳಲ್ಲಿ ವಿನೇಶ್‌ ಆಸ್ಪತ್ರೆಗೆ ದಾಖಲು

    ಪ್ಯಾರಿಸ್‌: ಅಧಿಕ ತೂಕದ ಕಾರಣದಿಂದ ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ (Paris Olympics 2024) ಅನರ್ಹಗೊಂಡ ಬೆನ್ನಲ್ಲೇ ಭಾರತೀಯ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಅಧಿಕ ತೂಕದ ಕಾರಣ ಮಹಿಳೆಯರ ಫ್ರೀ ಸ್ಟೈಲ್ (Freestyle final)​ 50 ಕೆಜಿ ಕುಸ್ತಿ ಸ್ಪರ್ಧೆಯ ಫೈನಲ್​ಗೂ ಮುನ್ನ ವಿನೇಶ್ ಫೋಗಟ್‌ ಅನರ್ಹಗೊಂಡಿದ್ದು, ಭಾರತಕ್ಕೆ ಪದಕವೊಂದು ಕೈ ತಪ್ಪಿದಂತಾಗಿದೆ. ಈ ಬೆನ್ನಲ್ಲೇ ಫೋಗಟ್‌ ನಿರ್ಜಲೀಕರಣ ಸಮಸ್ಯೆಯಿಂದಾಗಿ ಪ್ಯಾರಿಸ್‌ನಲ್ಲಿ ಆಸ್ಪತ್ರೆಗೆ (Paris Hospital) ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್: ವಿನೇಶ್‌ಗೆ ಸಮಾಧಾನ ಹೇಳಿದ ಮೋದಿ

    ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ಕೆಲವೇ ನಿಮಿಷಗಳಲ್ಲಿ ವಿನೇಶ್‌ ನಿರ್ಜಲೀಕರಣ ಕಾರಣದಿಂದ ಮೂರ್ಛೆ ಹೋಗಿದ್ದಾರೆ, ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಸ್ತುತ ವಿನೇಶ್‌ರನ್ನ ಒಲಿಂಪಿಕ್‌ ವಿಲೇಜ್‌ನ ಪಾಲಿಕ್ಲಿನಿಕ್‌ನಲ್ಲಿ ದಾಖಲಿಸಲಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

    2016ರ ರಿಯೋ ಹಾಗೂ 2020ರ ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್‌ ಫೈನಲ್‌ನಲ್ಲಿ ಸೋತು ಪದಕದಿಂದ ವಂಚಿತರಾಗಿದ್ದ ವಿನೇಶ್‌ 2024ರಲ್ಲಿ ಫೈನಲ್‌ ತಲುಪಿ ಭಾರತಕ್ಕೆ ಪದಕ ಖಚಿತಪಡಿಸಿದ್ದರು. ಆದರೆ ಹೆಚ್ಚಿನ ತೂಕ ಹೊಂದಿದ ಹಿನ್ನೆಲೆಯಲ್ಲಿ ಫೋಗಟ್‌ ಫೈನಲ್‌ನಿಂದ ಅನರ್ಹರಾಗಿದ್ದಾರೆ. ಇದನ್ನೂ ಓದಿ: Paris Olympics| ಭಾರತಕ್ಕೆ ಆಘಾತ – ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ

    ಮಂಗಳವಾರ ನಡೆದ ಕುಸ್ತಿ ಪಂದ್ಯದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸಿ ಒಲಿಂಪಿಕ್ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ವಿನೇಶ್ ಫೋಗಟ್ ಪಾತ್ರರಾಗಿದ್ದರು. ಇದನ್ನೂ ಓದಿ: ವಿನೇಶ್‌ ಫೋಗಟ್‌ ಫೈನಲ್‌ಗೆ ಲಗ್ಗೆ – ಒಲಿಂಪಿಕ್ಸ್‌ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು

    ಅನರ್ಹ ಯಾಕೆ?
    ವಿನೇಶ್‌ 50 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಗರಿಷ್ಟ 100 ಗ್ರಾಂ ಹೆಚ್ಚು ತೂಕ ಹೊಂದಲು ಅವಕಾಶವಿದೆ. ಆದರೆ ಬುಧವಾರ (ಇಂದು) ದೇಹದ ತೂಕ 150 ಗ್ರಾಂ ಜಾಸ್ತಿ ಇದ್ದ ಕಾರಣ ಅವರನ್ನ ಫೈನಲ್‌ನಿಂದ ಅನರ್ಹ ಮಾಡಲಾಗಿದೆ. ಇದರಿಂದ ಸೆಮಿಫೈನಲ್‌ನಲ್ಲಿ ಫೋಗಟ್‌ ವಿರುದ್ಧ ಪರಾಭವಗೊಂಡಿದ್ದ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಅವರಿಗೆ ಫೈನಲ್‌ ತಲುಪುವ ಅವಕಾಶ ಸಿಕ್ಕಿದೆ ಎಂದು ವರದಿಯಾಗಿದೆ.

  • ಮತ್ತೆ ಕುಸ್ತಿಪಟು ಭಜರಂಗ್‌ ಪೂನಿಯಾ ಅಮಾನತು

    ಮತ್ತೆ ಕುಸ್ತಿಪಟು ಭಜರಂಗ್‌ ಪೂನಿಯಾ ಅಮಾನತು

    ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ಕುಸ್ತಿಪಟು ಭಜರಂಗ್ ಪುನಿಯಾ (Wrestler Bajrang Punia) ಅವರನ್ನು ಮತ್ತೆ ಅಮಾನತು ಮಾಡಿದೆ.

    ಮಾರ್ಚ್ 10 ರಂದು ಸೋನಿಪತ್‌ನಲ್ಲಿ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಭಜರಂಗ್ ಪುನಿಯಾ ಮೂತ್ರದ ಮಾದರಿಯನ್ನು (Urine Sample) ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಭವಿಷ್ಯದ ಯಾವುದೇ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸದಂತೆ ಅಮಾನತುಗೊಳಿಸುವ ಆದೇಶವನ್ನು ನಾಡಾ ಹೊರಡಿಸಿದೆ.

    ಈ ಅಮಾನತು ನಿರ್ಧಾರ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಸ್ಪರ್ಧಿಸುವ ಅವರ ಪ್ರಯತ್ನಕ್ಕೆ ಹಿನ್ನಡೆಯಾಗಲಿದೆ.

     

    ಒಲಿಂಪಿಯನ್‌ಗಳಾದ ಸಾಕ್ಷಿ ಮಲಿಕ್ ಮತ್ತು ವಿನೇಶ್ ಸೇರಿದಂತೆ ಇತರ ಅಗ್ರ ಕುಸ್ತಿಪಟುಗಳು ಬಿಜೆಪಿ ಮಾಜಿ ಸಂಸದ ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಬಳಿಕ ನಡೆಸಿದ ಪ್ರತಿಭಟನೆಯಲ್ಲಿ ಭಜರಂಗ್‌ ಪೂನಿಯಾ ಮುಂಚೂಣಿಯಲ್ಲಿದ್ದರು. ಇದನ್ನೂ ಓದಿ: ಏಕದಿನ ವಿಶ್ವಕಪ್‌ ಸೋಲಿನ ಸೇಡು – ಬಲಿಷ್ಠ ಆಸೀಸ್‌ ವಿರುದ್ಧ ಅಫ್ಘಾನ್‌ಗೆ ಐತಿಹಾಸಿಕ ಗೆಲುವು!

    ಪುನಿಯಾ ಅವರಲ್ಲಿ ಮೂತ್ರದ ಮಾದರಿ ನೀಡುವಂತೆ ಕೇಳಿದ್ದರೂ ಅವರು ನಿಗದಿತ ಸಮಯದ ಒಳಗಡೆ ನೀಡಿಲ್ಲ ಎಂದು ನಾಡಾ ತಿಳಿಸಿದೆ.

    ಉದ್ದೀಪನಾ ಪರೀಕ್ಷೆ ಉದ್ದೇಶಕ್ಕಾಗಿ ಅಗತ್ಯವಾದ ಮೂತ್ರ ಮಾದರಿಗಳನ್ನು ಒದಗಿಸಲು ಸಂಬಂಧಿಸಿದ ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸಿದ್ದರು. ಆದರೆ ಅಧಿಕಾರಿಗಳಿ ಮನವಿಯ ನಂತರವೂ ನೀವು ಮೂತ್ರದ ಮಾದರಿಗಳನ್ನು ನೀಡಲು ನೀರಕಾರಿಸಿದ್ದೀರಿ. ಮೂತ್ರ ಮಾದರಿ ಸಂಗ್ರಹಿಸಲು ಅವಧಿ ಮೀರಿದ ಕಿಟ್‌ಗಳನ್ನು ನೀಡಲಾಗಿದೆ ಎಂಬ ನಿಮ್ಮ ಆರೋಪಕ್ಕೆ ಈಗಾಗಲೇ ಅಧಿಕಾರಿಗಳು ಉತ್ತರ ನೀಡಿದ್ದಾರೆ. ಈ ಕಾರಣಕ್ಕೆ ಅಮಾನತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ನಾಡಾ ತನ್ನ ನೋಟಿಸ್‌ನಲ್ಲಿ ಹೇಳಿದೆ.

     

    ಅಧಿಕಾರಿಗಳು ಹಲವು ಮನವಿಗಳ ನಂತರವೂ ನೀವು ಮೂತ್ರ ಮಾದರಿಗಳನ್ನು ನೀಡಲು ನಿರಾಕರಿಸಿದ್ದೀರಿ. ಮೂತ್ರ ಮಾದರಿಗಾಗಿ ಅವಧಿ ಮೀರಿದ ಕಿಟ್‌ಗಳನ್ನು ನೀಡಲಾಗಿದೆ ಎಂಬ ನಿಮ್ಮ ಆರೋಪಗಳಿಗೂ ಸಂಬಂಧಿಸಿದ ಅಧಿಕಾರಿಗಳು ವಿವರವಾಗಿ ಉತ್ತರ ನೀಡಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ನಿಮ್ಮ ವಿರುದ್ಧ ನಾಡಾ ಕ್ರಮ ಕೈಗೊಂಡಿದೆ” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

    ಮೂತ್ರದ ಮಾದರಿಯನ್ನು ನೀಡದ್ದು ಯಾಕೆ ಎನ್ನುವುದರ ಬಗ್ಗೆ ಲಿಖಿತವಾಗಿ ಕಾರಣವನ್ನು ಮೇ 7ರ ಒಳಗಡೆ ತಿಳಿಸಬೇಕು ಎಂದು ನಾಡಾ ಸೂಚಿಸಿತ್ತು. ಒಂದು ವೇಳೆ ಈ ಅವಧಿಯ ಒಳಗಡೆ ಸರಿಯಾದ ಕಾರಣ ನೀಡದೇ ಇದ್ದರೆ ಮುಂದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿತ್ತು.

    ಈ ನೋಟಿಸ್‌ಗೆ ಎಕ್ಸ್‌ನಲ್ಲಿ ಉತ್ತರಿಸಿದ ಭಜರಂಗ್ ಪುನಿಯಾ, ನಾನು ಮೂತ್ರ ನೀಡಲು ಯಾವುದೇ ಹಂತದಲ್ಲಿ ನಿರಾಕರಿಸಲಿಲ್ಲ. ಮಾರ್ಚ್‌ 10, 2024 ರಂದು ಡೋಪಿಂಗ್ ನಿಯಂತ್ರಣ ಅಧಿಕಾರಿಗಳು ನನ್ನನ್ನು ಮೂತ್ರದ ಮಾದರಿಯನ್ನು ಎರಡು ಬಾರಿ ಪಡೆಯಲು ಬಂದಾಗ ಅವರು ಅವಧಿ ಮೀರಿದ ಕಿಟ್‌ಗಳನ್ನು ನೀಡಿದ್ದರು ಎಂದು ತಿಳಿಸಿದ್ದರು.

     

  • ಕುಸ್ತಿಪಟುಗಳ ಪ್ರಕರಣದಲ್ಲಿ ಪ್ರಧಾನಿ ಮೋದಿ ಕೂಡ ಶಿಕ್ಷಾರ್ಹ : ನಟ ಕಿಶೋರ್

    ಕುಸ್ತಿಪಟುಗಳ ಪ್ರಕರಣದಲ್ಲಿ ಪ್ರಧಾನಿ ಮೋದಿ ಕೂಡ ಶಿಕ್ಷಾರ್ಹ : ನಟ ಕಿಶೋರ್

    ನ್ನಡದ ಹೆಸರಾಂತ ನಟ ಕಿಶೋರ್ (Kishor) ಪೋಕ್ಸೊ ಕಾಯ್ದೆಯಡಿ ಯಾರನ್ನೆಲ್ಲ ಶಿಕ್ಷಿಸಬಹುದು (Punishment) ಎಂದು ವಿವರಿಸುತ್ತಾ, ಕುಸ್ತಿಪಟುಗಳ ಪ್ರಕರಣವನ್ನು ಎಳೆತಂದಿದ್ದಾರೆ. ಈ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಶಿಕ್ಷಾರ್ಹರು ಎಂಬ ಆತಂಕಕಾರಿ ವಿಷಯವನ್ನು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

    ನಟ ಕಿಶೋರ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದು ಹೀಗೆ, ‘ಪೋಕ್ಸೊ (POCSO) ಕಾಯ್ದೆಯಡಿ ಯಾರಾದರೂ ಅಪ್ರಾಪ್ತ ವಯಸ್ಕರ ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿಯನ್ನು ಮುಚ್ಚಿಟ್ಟರೆ ಅವರು ವ್ಯಕ್ತಿಯಾಗಿದ್ದರೆ 6 ತಿಂಗಳು ಮತ್ತು ಅದು ಸಂಸ್ಥೆ ಅಥವಾ ಸಮಿತಿಯಾಗಿದ್ದರೆ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ.

    ಕುಸ್ತಿಪಟುಗಳ (Wrestler) ಪ್ರಕರಣದಲ್ಲಿ ವಿನೇಶ್ ಫೋಗಟ್ ಅವರು ಅಪ್ರಾಪ್ತ ವಯಸ್ಕ ಬಾಲಕಿಯೂ ಸೇರಿದಂತೆ ಮಹಿಳಾ ಕುಸ್ತಿ  ಪಟುಗಳ ಮೇಲೆ ದೈಹಿಕ ಕಿರುಕುಳದ ಬಗ್ಗೆ ಮೊದಲು ತಿಳಿಸಿದ್ದು ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi), ಅವರು ಪೊಲೀಸರಿಗೆ ತಿಳಿಸದೆ ಕ್ರೀಡಾ ಸಚಿವರಿಗೆ ತಿಳಿಸಿದರು, ಕ್ರೀಡಾ  ಸಚಿವರೂ ಅದನ್ನು ಪೊಲೀಸರಿಗೆ ತಿಳಿಸಲಿಲ್ಲ ಬದಲಿಗೆ ಆರೋಪಿ ಬ್ರಿಜ್ ಭೂಷಣ್ ಗೇ ತಿಳಿಸಿಬಿಟ್ಟರು. ಆತ ಈ ಬಗ್ಗೆ ಕುಸ್ತಿಪಟುಗಳಿಗೆ ಬೆದರಿಕೆ ಹಾಕಲು ಆರಂಭಿಸಿದ. ಇದನ್ನೂ ಓದಿ:‘ದೇವರ ಆಟ ಬಲ್ಲವರಾರು’ ಎನ್ನುತ್ತಾ 3 ವರ್ಷಗಳ ನಂತರ ಬಣ್ಣ ಹಚ್ಚಿದ ಸಿಂಧೂ ಲೋಕನಾಥ

    ಜನವರಿಯಲ್ಲಿ ನಡೆದ ಧರಣಿಯ ನಂತರ ಕ್ರೀಡಾ ಸಚಿವಾಲಯವು ಸಮಿತಿಯನ್ನು ರಚಿಸಿತು, ಇದರಲ್ಲಿ ಮತ್ತೆ ಕುಸ್ತಿಪಟುಗಳು ಅಪ್ರಾಪ್ತ ವಯಸ್ಕರು ಮತ್ತು ಇತರರ ಮೇಲೆ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ಈ ಹಿಂದೆ ಪ್ರಧಾನಿಗೆ ತಿಳಿಸಲಾದ ವಿಷಯವನ್ನು ತಿಳಿಸಿದರು. ಅವರೂ ಪೊಲೀಸರಿಗೆ ಮಾಹಿತಿ ನೀಡಿಲ್ಲ.

     

    ನಂತರ ಕುಸ್ತಿಪಟುಗಳು ಪೊಲೀಸ್ ಠಾಣೆಗೆ ಹೋದಾಗಲೂ, ಒಂದು ಜವಾಬ್ದಾರಿಯುತ ಸಂಸ್ಥೆಯಾದ ದೆಹಲಿ ಪೊಲೀಸ್ ಎಫ್ಐಆರ್ ದಾಖಲಿಸಲಿಲ್ಲ. ಐದು ತಿಂಗಳ ನಂತರ ರಾಷ್ಟ್ರದಾದ್ಯಂತ ಜನರು ಪ್ರತಿಭಟನೆಯನ್ನು ಪ್ರಾರಂಭಿಸಿದಾಗ, ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸರನ್ನು ಒತ್ತಾಯಿಸಿತು. ಆದ್ದರಿಂದ ಪೋಕ್ಸೊ ಕಾಯ್ದೆಯಡಿ ಪ್ರಧಾನಿ, ಕ್ರೀಡಾ ಸಚಿವ, ವಿಚಾರಣೆಗೆ ರಚಿಸಲಾದ ಸಮಿತಿ, ಪೊಲೀಸರಿಗೆ ಮಾಹಿತಿ ನೀಡದ ಕಾರಣಕ್ಕೆ ಮತ್ತು ಎಫ್‌ಐಆರ್ ದಾಖಲಿಸದ ದೆಹಲಿ ಪೊಲೀಸರು ಎಲ್ಲರೂ ಶಿಕ್ಷಾರ್ಹರು.  ಇಷ್ಟಲ್ಲದೇ ಅಪರಾಧಿಯನ್ನು ಇಷ್ಟೂ ದಿನ ರಕ್ಷಿಸಿ ಕಾನೂನು ಕ್ರಮಕ್ಕೆ ತಮ್ಮ ಅಧಿಕಾರ ಬಳಸಿ ತಡೆ ಮಾಡಿದ್ದಕ್ಕೆ ಇವರೆಲ್ಲರಿಗೂ ಇನ್ನೆಷ್ಟು ಶಿಕ್ಷೆಯೊ ಕೋರ್ಟೇ ಹೇಳಬೇಕು ಎಂದು ಕಿಶೋರ್ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

  • ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ – ಸಾಕ್ಷಿ ಮಲಿಕ್

    ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ – ಸಾಕ್ಷಿ ಮಲಿಕ್

    ನವದೆಹಲಿ: ನಾವು ಯಾರ ಜೊತೆಗೂ ರಾಜಿ ಮಾಡಿಕೊಂಡಿಲ್ಲ, ಹೋರಾಟದಿಂದ ಹಿಂದೆಯೂ ಸರಿಯುವುದಿಲ್ಲ, ನ್ಯಾಯಕ್ಕಾಗಿ ಒಗ್ಗಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ, ನಮ್ಮನ್ನು ದುರ್ಬಲಗೊಳಿಸಲು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಸಾಕ್ಷಿ ಮಲಿಕ್ (Sakshi Malik) ಹಾಗೂ ಅವರ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ (Satyawart Kadian) ಸ್ಪಷ್ಟನೆ ನೀಡಿದ್ದಾರೆ.

    ಶನಿವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜೊತೆಗೆ ಸಭೆ ನಡೆಸಿದ ಬೆನ್ನಲ್ಲೇ ಭಾರತೀಯ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ (Brij Bhushan Sharan Singh)
    ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪ್ರಮುಖ ಕುಸ್ತಿಪಟುಗಳಲ್ಲಿ ಒಬ್ಬರಾದ ಸಾಕ್ಷಿ ಮಲಿಕ್ ಹೋರಾಟದಿಂದ ಹಿಂದೆ ಸರಿದಿದ್ದು, ತಮ್ಮ ಕೆಲಸಕ್ಕಾಗಿ ರೈಲ್ವೇ ಇಲಾಖೆಗೆ (Railway Department) ಮರಳಿದ್ದಾರೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ಪ್ರತಿಭಟನೆಯಿಂದ ಹಿಂದೆ ಸರಿದ ಕುಸ್ತಿಪಟುಗಳು – ಮರಳಿ ರೈಲ್ವೇ ಉದ್ಯೋಗಕ್ಕೆ

    ಈ ವರದಿ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಾಕ್ಷಿ ಮಲಿಕ್ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ ಹೋರಾಟ ಹಿಂದಕ್ಕೆ ಪಡೆದಿರುವುದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಹೋರಾಟ ಮುಂದುವರಿಯಲಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ- ಪತ್ರದ ಮೂಲಕ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

    ಟ್ವಿಟ್ಟರ್‌ನಲ್ಲಿ (Twitter) ಈ ಬಗ್ಗೆ ಖುದ್ದು ಸಾಕ್ಷಿ ಮಲಿಕ್ ಕೂಡಾ ಪ್ರತಿಕ್ರಿಯೆ ನೀಡಿದ್ದು, ಹೋರಾಟದಿಂದ ಹಿಂದೆ ಸರಿದಿರುವ ಸುದ್ದಿ ಸಂಪೂರ್ಣ ತಪ್ಪು. ನ್ಯಾಯಕ್ಕಾಗಿ ನಡೆಸುತ್ತಿರುವ ಹೋರಾಟದಿಂದ ನಾವು ಹಿಂದೆ ಸರಿದಿಲ್ಲ, ನಾವೂ ಹಿಂದೆ ಸರಿಯುವುದೂ ಇಲ್ಲ. ಸತ್ಯಾಗ್ರಹದ ಜೊತೆಗೆ ರೈಲ್ವೇಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ದಯವಿಟ್ಟು ಯಾವುದೇ ತಪ್ಪು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

  • ಮುಸ್ಲಿಂ ಹೆಣ್ಣುಮಕ್ಕಳ ಹಾಗೂ ಕುಸ್ತಿ ಪಟುಗಳ ಬೆಂಬಲಕ್ಕೆ ನಿಂತ ನಟ ಕಿಶೋರ್

    ಮುಸ್ಲಿಂ ಹೆಣ್ಣುಮಕ್ಕಳ ಹಾಗೂ ಕುಸ್ತಿ ಪಟುಗಳ ಬೆಂಬಲಕ್ಕೆ ನಿಂತ ನಟ ಕಿಶೋರ್

    ಹಿಜಾಬ್ (hijab) ಹೋರಾಟ ಮತ್ತು ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟದ ಬಗ್ಗೆ ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ ನಟ ಕಿಶೋರ್ (Kishor). ಇದೆಲ್ಲವೂ ಮನುವಾದಿಗಳ ಕುತಂತ್ರ ಎಂದು ಬಣ್ಣಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡ ಬರಹ ಇಲ್ಲಿದೆ.

    ಯಾವ ಮುಸಲ್ಮಾನ ಮಹಿಳೆ, ಪುರುಷ ಪ್ರಾಭಲ್ಯದ ಸಂಕೇತವಾದ ಹಿಜಾಬನ್ನು ವಿರೋಧಿಸಿಯೂ ವಿರೋಧಿಸದಂತೆ ಮೆಲ್ಲ ಮೆಲ್ಲನೆ ಅದರಿಂದ ಸ್ವತಂತ್ರಳಾಗಿ, ಶಿಕ್ಷಿತಳೂ, ಸಶಕ್ತಳೂ ಆಗುತ್ತಿದ್ದಳೊ ಅವಳನ್ನು ಅಡ್ಡಗಟ್ಟಿ ಅವಳಲ್ಲಿ ಭಯ ಹುಟ್ಟಿಸಿ, ಆಕೆ ತನ್ನ ಆತ್ಮರಕ್ಷಣೆಗಾಗಿ ತನ್ನ ಅಸ್ಮಿತೆಯ ಹುಡುಕಾಟದಲ್ಲಿ ತನ್ನನ್ನು ಬಂಧನದಲ್ಲಿಟ್ಟಿದ್ದ ಅದೇ ಹಿಜಾಬಿನ ಮೊರೆ ಹೋಗುವ ಹಾಗೆ ಮಾಡಿದ ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು.

    ಒಂದು ಹೆಣ್ಣು ಶಿಕ್ಷಣ ಪಡೆದರೆ ಅವಳ ಮುಂದಿನ ಇಡೀ ಪೀಳಿಗೆ ಶಿಕ್ಷಣ ಪಡೆಯುತ್ತದೆ. ಸರಕಾರಿ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಇಂದೂ ಸಹ ನೂರರಲ್ಲಿ ಹದಿನಾಲ್ಕು ಮುಸ್ಲಿಂ ಹೆಣ್ಣು ಮಕ್ಕಳು ಮಾತ್ರ ಕಾಲೇಜು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಇಂಥಾ ಕಾಲದಲ್ಲಿ ಅದನ್ನೂ ತಡೆದು ಬಿಟ್ಟರೆ ಮುಸಲ್ಮಾನರನ್ನು ಮುಖ್ಯವಾಹಿನಿಯಿಂದ ಹೊರಗಿಡುವ ಷಡ್ಯಂತ್ರ ಯಶಸ್ವಿಯಾದಂತೆಯೇ ಸರಿ.

    ತನ್ನ ಮನೆ, ಸಂಬಂಧಿಕರು, ಮತ, ಸಂಪ್ರದಾಯವಾದ ಎಲ್ಲವನ್ನೂ ದಾಟಿ ಬಂದು ಕೊನೆಯ ಹಂತದಲ್ಲಿ ಶಿಕ್ಷಣ ವಂಚಿತಳಾಗುವುದಕ್ಕೆ ಕಾರಣ ಕೂಡ ಸ್ವಯಂ ಅವಳೇ ಆಗಿಬಿಟ್ಟರೆ? ದೇಶದ ಮುಖ್ಯವಾಹಿನಿಯಿಂದ ಮುಸ್ಲಿಂ ಮಹಿಳೆ ಮತ್ತು ಜನಾಂಗ ಎರಡೂ ಹೊರಗೆ, ಅದೂ ತನ್ನ ಕಾಲ ಮೇಲೆ ತಾನೇ ಕೊಡಲಿ ಹಾಕಿಕೊಂಡು. ಇದಲ್ಲವೇ ಮಾಸ್ಟರ್ ಸ್ಟ್ರೊಕ್.

    ಜಂತರ್ ಮಂತರ್ ನಲ್ಲಿ ಲೈಂಗಿಕ ದೌರ್ಜನದ ವಿರುದ್ಧ ಧರಣಿ ಕುಳಿತ ಹೆಣ್ಣುಮಕ್ಕಳು, ಅತ್ಯಾಚಾರಿಯ ಹೂಂಕಾರ, ಆಗಾಗ ಆ ಹೆಣ್ಣುಮಕ್ಕಳ ಮೇಲೇ ತನ್ನ ಶಕ್ತಿ ತೋರಿಸುವ ನರಸತ್ತ ಪೊಲೀಸ್, ಕಮಕ್ ಕಿಮಕ್ ಅನ್ನದೇ ಅತ್ಯಾಚಾರಿಗೆ ಪರೋಕ್ಷ ಬೆಂಬಲ ಕೊಟ್ಟು ಕುಳಿತ ಏಕವ್ಯಕ್ತಿ ಸರ್ಕಾರವಾದ ಪ್ರಧಾನಿ. ವಿಶ್ವಮಟ್ಟದ ತಾರೆಯರಿಗೇ ಹೀಗಾದರೆ ನಮ್ಮಂಥ ಸಾಮಾನ್ಯರಿಗಾದರೆ ಹೇಗೆ ಎಂಬ ಜನಸಾಮಾನ್ಯರ ಉದ್ಗಾರ. ಇಷ್ಟು ಸಾಲದೇ, ಶತಮಾನಗಳು ಹೋರಾಡಿ ವಿಶ್ವದ ಉತ್ತುಂಗಕ್ಕೇರಿದ ಹೆಣ್ಣು ಮಕ್ಕಳನ್ನು, ಅವರ ಬೆಂಗಾವಲಾಗಿ ನಿಂತ ದೇಶದ ತಾಯಿ ತಂದೆಯರೇ ಮತ್ತೆ ಮನುವಿನ ಕಲ್ಪನೆಯ ನಾಲ್ಕು ಗೋಡೆಗಳ ಕೂಪಕ್ಕೆ ತಳ್ಳಲು. ಭಾರತಾಂಬೆ ಅಂದು ಹಿಜಾಬಿನಲ್ಲಿ ಇಂದು ಜಂತರ್ ಮಂತರ್ ಅಖಾಡದಲ್ಲಿ ಮನುವಾದಿಗಳಿಗೆ ಸವಾಲೆಸೆಯುತ್ತಲೇ ಬಂದಿದ್ದಾಳೆ.

    ಜೈ ಭಾರತಾಂಬೆ