Tag: ಕುಸ್ತಿ ಫೆಡರೇಷನ್ ಆಫ್ ಇಂಡಿಯಾ

  • ಬ್ರಿಜ್‌ ಭೂಷಣ್‌ ಆಪ್ತನಿಗೆ ಕುಸ್ತಿ ಅಧ್ಯಕ್ಷ ಪಟ್ಟ – ವಿರೋಧಿಸಿ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್‌ ಪುನಿಯಾ

    ಬ್ರಿಜ್‌ ಭೂಷಣ್‌ ಆಪ್ತನಿಗೆ ಕುಸ್ತಿ ಅಧ್ಯಕ್ಷ ಪಟ್ಟ – ವಿರೋಧಿಸಿ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್‌ ಪುನಿಯಾ

    ನವದೆಹಲಿ: ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಆಪ್ತ ಸಂಜಯ್ ಸಿಂಗ್ (Sanjay Singh) ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ವಿರೋಧಿಸಿ, ಕುಸ್ತಿಪಟು ಬಜರಂಗ್‌ ಪುನಿಯಾ (Bajrang Punia) ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.

    ಸಂಜಯ್‌ ಸಿಂಗ್‌ ಆಯ್ಕೆ ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್‌ (Sakshee Mallikh), ಗುರುವಾರ ಕಣ್ಣೀರಿಟ್ಟು ಕುಸ್ತಿಗೆ ವಿದಾಯ ಹೇಳಿದರು. ಇದರ ಬೆನ್ನಲ್ಲೇ ಬಜರಂಗ್‌ ಪುನಿಯಾ, ಪದ್ಮಶ್ರೀ ಪ್ರಶಸ್ತಿ (Padma Shri) ಹಿಂದಿರುಗಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಈಗಲೂ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದೇವೆ, ನಮ್ಮ ದುಃಖ ಯಾರಿಗೆ ಹೇಳೋಣ? – ನಿಲ್ಲದ ಕುಸ್ತಿಪಟುಗಳ ವೇದನೆ

    ‘ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಗೆ ಹಿಂದಿರುಗಿಸುತ್ತಿದ್ದೇನೆ. ಅದನ್ನು ಹೇಳಲು ಈ ಪತ್ರ ಬರೆದಿದ್ದೇನೆ ಎಂದು ಬಜರಂಗ್‌ ಪುನಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

    ‘ಎಲ್ಲಿ ಹೋಗಬೇಕು, ಏನು ಮಾಡಬೇಕು ಮತ್ತು ಹೇಗೆ ಬದುಕಬೇಕು ಎಂದು ನನಗೆ ಅರ್ಥವಾಗಲಿಲ್ಲ. ಸರ್ಕಾರ ಮತ್ತು ಜನರು ನನಗೆ ತುಂಬಾ ಗೌರವ ನೀಡಿದರು. ಈ ಗೌರವದ ಹೊರೆಯಲ್ಲಿ ನಾನು ಉಸಿರುಗಟ್ಟುವುದನ್ನು ಮುಂದುವರಿಸಬೇಕೇ? 2019 ರಲ್ಲಿ ನನಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು. ನನಗೂ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳು ದೊರೆತಿವೆ. ಈ ಗೌರವಗಳು ನನಗೆ ಸಿಕ್ಕಾಗ ತುಂಬಾ ಸಂತೋಷವಾಯಿತು. ಜೀವನದಲ್ಲಿ ಯಶಸ್ವಿಯಾಗಿದ್ದೇನೆ ಎಂದು ಅನಿಸಿತು. ಆದರೆ ಇಂದು ನಾನು ಆ ಕಾಲದ ಸಂತೋಷಕ್ಕಿಂತ ಹೆಚ್ಚು ದುಃಖಿತನಾಗಿದ್ದೇನೆ. ಈ ಗೌರವಗಳು ನನ್ನನ್ನು ಉಸಿರುಗಟ್ಟಿಸುತ್ತಿವೆ’ ಎಂದು ಪುನಿಯಾ ಹಿಂದಿಯಲ್ಲಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಬ್ರಿಜ್‌ ಭೂಷಣ್‌ ಆಪ್ತ ಕುಸ್ತಿ ಅಧ್ಯಕ್ಷ: ಶೂ ಬಿಚ್ಚಿಟ್ಟು‌, ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್!

    ಕನಿಷ್ಠ 12 ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬಿಜೆಪಿ ನಾಯಕ ಹಾಗೂ ಕುಸ್ತಿ ಫೆಡರೇಷನ್‌ ಆಫ್‌ ಇಂಡಿಯಾ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟಿಸಿದ ಕುಸ್ತಿಪಟುಗಳಲ್ಲಿ ಬಜರಂಗ್ ಪುನಿಯಾ ಕೂಡ ಒಬ್ಬರು.

  • ಕುಸ್ತಿ ಫೆಡರೇಷನ್‌ ಚುನಾವಣೆ – ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

    ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (WFI) ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹಟಿ ಹೈಕೋರ್ಟ್‌ನ (Gauhati High Court) ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ತಡೆ ನೀಡಿದೆ.

    ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಎಸ್‌.ವಿ ಭಟ್ಟಿ ಅವರಿದ್ದ ಪೀಠವು, ಜೂನ್ 25 ರಂದು ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿತು. ಈ ವೇಳೆ ಕೇಂದ್ರ ಕ್ರೀಡಾ ಸಚಿವಾಲಯ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ, ಅಸ್ಸಾಂ ಕುಸ್ತಿ ಅಸೋಸಿಯೇಷನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ – ಶುಕ್ರವಾರ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

    ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಭಾರತ ಕುಸ್ತಿ ಫೆಡರೇಷನ್‌ನ ಚುನಾವಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಕೋರಿ ಅಸ್ಸಾಂ ಕುಸ್ತಿ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುವಾಹಟಿ ಹೈಕೋರ್ಟ್‌ ಜು.28 ಕ್ಕೆ ಮುಂದೂಡಿತ್ತು.

    ಜು.11 ರಂದು ಡಬ್ಲ್ಯೂಎಫ್‌ಐ ಚುನಾವಣೆ ನಡೆಸಬೇಕಿತ್ತು. ಆದರೆ ಅಸ್ಸಾಂ ಸಂಸ್ಥೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು. ಇದನ್ನೂ ಓದಿ: ಮೋದಿ, ಯೋಗಿಯೇ ಟಾರ್ಗೆಟ್- 26/11ರಂತೆ ಮತ್ತೊಂದು ದಾಳಿಯ ಬೆದರಿಕೆ ಕರೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಸ್ತಿ ಪಟುಗಳಿಗೆ ನ್ಯಾಯ ಸಿಗುತ್ತಾ – ಬ್ಯಾಟ್‍ನಂತೆ ಚಾಟಿ ಬೀಸಿದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್

    ಕುಸ್ತಿ ಪಟುಗಳಿಗೆ ನ್ಯಾಯ ಸಿಗುತ್ತಾ – ಬ್ಯಾಟ್‍ನಂತೆ ಚಾಟಿ ಬೀಸಿದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್

    ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಭಾರತದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ (Kapil Dev) ಬೆಂಬಲ ನೀಡಿದ್ದಾರೆ. ಅವರು ಇನ್ಸ್ಟಾಗ್ರಾಮ್‍ನಲ್ಲಿ ಪ್ರತಿಭಟನಾ ನಿರತರ ಫೋಟೋ ಹಂಚಿಕೊಂಡು ನ್ಯಾಯ ಸಿಗುತ್ತದೆಯೇ? ಎಂದು ಬರೆದುಕೊಂಡಿದ್ದಾರೆ.

     

    ಕುಸ್ತಿ ಫೆಡರೇಷನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ವಿನೇಶ್ ಫೋಗಟ್ (Vinesh Phogat), ಬಜರಂಗ್ ಪುನಿಯಾ (Bajrang Punia), ಸಾಕ್ಷಿ ಮಲಿಕ್ (Sakshi Malik) ಸೇರಿ ಹಲವಾರು ಕುಸ್ತಿ ಪಟುಗಳು ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ದೇವ್ ಅವರಿಗೆ ಬೆಂಬಲ ನೀಡಿದ್ದು ಹೊಸ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು

    ಇದಕ್ಕೂ ಮುನ್ನ ಒಲಿಂಪಿಕ್ಸ್ (Olympic) ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra) ಪ್ರತಿಭಟನಾ ನಿರತ ಕುಸ್ತಿ ಪಟುಗಳಿಗೆ ಬೆಂಬಲ ಸೂಚಿಸಿದ್ದರು. ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಒದಗಿಸುವಂತೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಅಲ್ಲದೆ ಕುಸ್ತಿಪಟುಗಳು ಬೀದಿಗಿಳಿದಿರುವುದು ದುಃಖದ ಸಂಗತಿ ಎಂದು ಹೇಳಿಕೊಂಡಿದ್ದರು.

    ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ (Indian Olympic Association) ಅಧ್ಯಕ್ಷೆ ಪಿ.ಟಿ ಉಷಾ (PT Usha) ಕುಸ್ತಿ ಪಟುಗಳ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿದ್ದರು. ದೇಶದ ಘನತೆಗೆ ಧಕ್ಕೆ ತರಲು ಪ್ರತಿಭಟನೆ ನಡೆಸುತ್ತಿದ್ದಾರೆ. ಅಸೋಸಿಯೇಷನ್ ಬಳಿ ಬರುವುದು ಬಿಟ್ಟು ರಸ್ತೆಗಿಳಿದಿರುವುದ ಸರಿಯಲ್ಲ ಎಂದು ಟೀಕಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದರು. ಇದನ್ನೂ ಓದಿ: ಕುಸ್ತಿಪಟುಗಳು ಬೀದಿಗಿಳಿದು ಪ್ರತಿಭಟನೆ ಮಾಡ್ತಿರೋದು ದೇಶದ ಘನತೆಗೆ ಧಕ್ಕೆ – ಪಿ.ಟಿ ಉಷಾ ಬೇಸರ