ಬಳ್ಳಾರಿ: ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿ (Kudligi) ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ನಡೆದಿದೆ.
ಬಂಡೆಬಸಾಪುರ ಗ್ರಾಮದ ಪಾಂಡುನಾಯ್ಕ್(18) ಮೃತ ಯುವಕ. ಗುರುವಾರ ಸಂಜೆ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಮಳೆ ಬರುತ್ತಿದ್ದ ಸಮಯದಲ್ಲಿ ಪಾಂಡುನಾಯ್ಕ್ ಮನೆ ಬಳಿ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬೊಲೆರೋ, ಬಸ್ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ
ಬಳ್ಳಾರಿ: ಸಂಡೂರು ಉಪಚುನಾವಣೆಗೆ (Sandur By Election) ಟಿಕೆಟ್ ಘೋಷಣೆ ಘೋಷಣೆಯಾಗಿದ್ದು ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತುಗೆ (Bangaru Hanumanthu) ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.
ಮೂಲತಃ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯವರಾದ ಬಂಗಾರು ಹನುಮಂತು ತಂದೆ ಬಂಗಾರು ಸೋಮಣ್ಣ ಕೆಎಸ್‌ಆರ್‌ಟಿಸಿ ಚಾಲಕರಾಗಿ ನಿವೃತ್ತಿ ಹೊಂದಿದ್ದಾರೆ. ತಂದೆ ಸೋಮಣ್ಣ ಕೊನೆಯದಾಗಿ ಕೂಡ್ಲಿಗಿಯಲ್ಲಿ ಸೇವೆ ಮಾಡಿದ ಹಿನ್ನೆಲೆಯಲ್ಲಿ ಕೂಡ್ಲಿಗಿಯಲ್ಲಿ ಕುಟುಂಬ ನೆಲೆ ನಿಂತಿದೆ.
ತಾಯಿ ಹುಲಿಗೆಮ್ಮ ಸದ್ಯ ಕೂಡ್ಲಿಗಿ ಪಟ್ಟಣ ಪಂಚಾಯತಿ ಸದಸ್ಯರಾಗಿದ್ದಾರೆ. ಬಂಗಾರು ಹನುಮಂತು ವಿದ್ಯಾರ್ಥಿ ಜೀವನ ಕೂಡ್ಲಿಗಿಯಲ್ಲಿ ಕಳೆದಿದ್ದಾರೆ. ಬಿಎ, ಬಿಎಡ್ ಓದಿರುವ ಬಂಗಾರು ವಿದ್ಯಾರ್ಥಿ ಜೀವನದಿಂದ ಹೋರಾಟದಲ್ಲಿ ಭಾಗಿಯಾಗುತ್ತಾ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಇದನ್ನೂ ಓದಿ: ಶಿಗ್ಗಾವಿ ಉಪಚುನಾವಣೆ| ಭರತ್ ಬೊಮ್ಮಾಯಿಗೆ ಬಿಜೆಪಿ ಟಿಕೆಟ್ ನೀಡಿದ್ದು ಯಾಕೆ?
2018ರಲ್ಲಿ ಸಂಡೂರು ಕ್ಷೇತ್ರದಲ್ಲಿ ಬಂಡಾಯ ಬಿಜೆಪಿ (BJP) ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡಿ ಸೋತಿದ್ದರು. 2023ರ ವಿಧಾನಸಭಾ ಚುನಾವಣೆ ವೇಳೆ ಕೂಡ್ಲಿಗಿ ಕ್ಷೇತ್ರಕ್ಕೆ ಪ್ರಯತ್ನ ಮಾಡಿದ್ದರೂ ಟಿಕೆಟ್ ಸಿಕ್ಕಿರಲಿಲ್ಲ.
ಕಲ್ಲಿನ ಕ್ರಷರ್, ಗಣಿಗಾರಿಕೆ ವ್ಯವಹಾರ ಮಾಡುತ್ತಿದ್ದು, ಕೃಷಿ ಜಮೀನು ಹೊಂದಿದ್ದಾರೆ. ಪ್ರಹ್ಲಾದ್ ಜೋಷಿ ಜೊತೆಗೆ ಉತ್ತಮ ಒಡನಾಟ ಹೊಂದಿರುವ ಬಂಗಾರು ಹನುಮಂತು ವಿಜಯೇಂದ್ರ ಅಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.
2006 ರಿಂದ 2009 ರವರೆಗೆ ಕೂಡ್ಲಿಗಿ ಮಂಡಲ ಯುವ ಮೋರ್ಚಾ ಅಧ್ಯಕ್ಷ, 2017 ರಿಂದ 2019 ರವರೆಗೆ ಜಿಲ್ಲಾ ಕಾರ್ಯಕಾರಿ ಸದಸ್ಯ, 2020 ರಿಂದ 2022 ರವರೆಗೆ ಬಳ್ಳಾರಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷರಾಗಿ ಬಿಜೆಪಿಯಲ್ಲಿ ಕೆಲಸ ಮಾಡಿದ್ದಾರೆ.
ಬಂಗಾರು ಹನುಮಂತು ಅವರು ಜನಾರ್ದನ ರೆಡ್ಡಿ ಆಪ್ತರಾಗಿದ್ದಾರೆ. ಟಿಕೆಟ್ ರೇಸ್‌ನಲ್ಲಿ ಬಂಗಾರು ಹನುಮಂತು ಮತ್ತು ಕೆ ಎಸ್ ದಿವಾಕರ್ ಅವರ ಹೆಸರಿತ್ತು. ಕಳೆದ ಚುನಾವಣೆಯಲ್ಲಿ ಕೆಆರ್‌ಪಿಪಿ ಪಕ್ಷದಿಂದ ಸ್ಪರ್ಧಿಸಿ ದಿವಾಕರ್ ಪರಾಭವಗೊಂಡಿದ್ದರು.
ಬಳ್ಳಾರಿ: ಸೇಬುಗಳನ್ನು (Apple) ತುಂಬಿದ್ದ ಲಾರಿ ಪಲ್ಟಿಯಾಗಿ (Lorry Overturn) ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಸೇಬುಗಳನ್ನು ಕ್ಷಣಮಾತ್ರದಲ್ಲೇ ಸಾರ್ವಜನಿಕರು ತುಂಬಿಕೊಂಡು ಹೋಗಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ಸೇಬುಗಳನ್ನು ತುಂಬಿದ್ದ ಲಾರಿ ಪಲ್ಟಿಯಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿದರೂ ಸ್ಥಳೀಯರು ಕ್ಯಾರೆ ಎನ್ನದೆ ಸೇಬುಗಳನ್ನು ಚೀಲಗಳಲ್ಲಿ ತುಂಬಿಕೊಂಡಿದ್ದಾರೆ. ಈ ವೇಳೆ ಪೊಲೀಸರು ಏನೂ ಮಾಡಲಾಗದೆ ಅಸಹಾಯಕರಂತೆ ನಿಂತಿದ್ದಾರೆ. ಇದನ್ನೂ ಓದಿ: ಭಾರೀ ಗಾತ್ರದ ವಾಹನ ಸಂಚಾರದಿಂದ ಕುಸಿದ ರಸ್ತೆ
ನಾ ಮುಂದು, ತಾ ಮುಂದು ಎಂದು ಹೆಣ್ಣು ಮಕ್ಕಳು, ಗಂಡು ಮಕ್ಕಳು ಸೇರಿ ನೂರಾರು ಜನರು ಸೇಬುಗಳನ್ನು ತುಂಬಿಕೊಂಡಿದ್ದಾರೆ. ಕ್ಷಣಮಾತ್ರದಲ್ಲೇ ಹಣ್ಣಿನ ಲೋಡ್ ಅನ್ನು ಖಾಲಿ ಮಾಡಿದ ಸಾರ್ವಜನಿಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ: ಮಾಜಿ ಶಾಸಕನ ಕಿಸೆಯಿಂದ ಹಣ ಎಗರಿಸಲು ಮುಂದಾದವನಿಗೆ ಧರ್ಮದೇಟು
ವಿಜಯನಗರ: ಕುರಿ ಮಂದೆಯ ಮೇಲೆ ಲಾರಿ ಹರಿದು 40 ಕ್ಕೂ ಅಧಿಕ ಕುರಿಗಳ ಸಾವಿಗೀಡಾದ ಘಟನೆ ಕೂಡ್ಲಿಗಿಯ (Kudligi) ಶಿವಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಸಾವಿಗೀಡಾದ ಕುರಿಗಳು ಶಿವಪುರದ ಬಾಲಪ್ಪ ಎಂಬ ರೈತನಿಗೆ ಸೇರಿದ್ದಾಗಿವೆ. ಹೊಸಪೇಟೆ (Hosapete) ಕಡೆಯಿಂದ ಬೆಂಗಳೂರು (Bengaluru) ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹರಿದಿದೆ. ಡಿಕ್ಕಿಯಾದ ರಭಸಕ್ಕೆ ರಸ್ತೆಯ ತುಂಬೆಲ್ಲಾ ಕುರಿಗಳು ಛಿದ್ರವಾಗಿ ಬಿದ್ದಿವೆ. ಇದನ್ನೂ ಓದಿ: ಪಿಎಸ್‍ಐ ಹಗರಣ – ಎಡಿಜಿಪಿ ಅಮೃತ್ ಪೌಲ್‌ಗೆ ಮತ್ತೊಂದು ಸಂಕಷ್ಟ
ಅತಿವೇಗವಾದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಲಾರಿ ಚಾಲಕ ಅಪಘಾತ ನಡೆಸಿ, ಅಲ್ಲಿಂದ ಲಾರಿ ನಿಲ್ಲಿಸದೇ ಮುಂದೆ ಸಾಗಿದ್ದಾನೆ. ಗ್ರಾಮಸ್ಥರು ಲಾರಿ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ರಸ್ತೆ ಪಕ್ಕದ ಕಬ್ಬಿಣದ ತಡೆಗೋಡೆಗೆ ಲಾರಿ ಡಿಕ್ಕಿಯಾಗಿದೆ. ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ವಿಪಕ್ಷ ನಾಯಕನಿಲ್ಲದೆ ಕಲಾಪ ನಡೆದಿದ್ದು ದುರ್ದೈವ: ಹೆಚ್.ಕೆ ಪಾಟೀಲ್
ಬಳ್ಳಾರಿ: ಕೂಡ್ಲಿಗಿ ಕ್ಷೇತ್ರದ ಮಾಜಿ ಕಾಂಗ್ರೆಸ್(Congress) ಶಾಸಕ ಎನ್ ಟಿ ಬೊಮ್ಮಣ್ಣ(79) ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎನ್ ಟಿ ಬೊಮ್ಮಣ್ಣ(N T Bommanna) ಒಂದು ತಿಂಗಳ ಹಿಂದೆ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ನೌಕಾಪಡೆಯ MiG-29K ಪತನ – ಪೈಲಟ್ ಅಪಾಯದಿಂದ ಪಾರು
ಎನ್‌ಟಿ ಬೊಮ್ಮಣ್ಣ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು.
Live Tv
[brid partner=56869869 player=32851 video=960834 autoplay=true]
ಬಳ್ಳಾರಿ: ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆತ ಕೂಡ್ಲಿಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50ರ ಗೌಡ್ರು ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿದೆ.
ಮಲ್ಲಪ್ಪ (40), ವೀರೇಶ್ (17), ಶರಣಪ್ಪ (15), ಸಾಬಮ್ಮ(19), ಮಹದೇವಮ್ಮ (52), ಮರಿಯಮ್ಮ (35) ಹಾಗೂ ಕಾರ್ ಚಾಲಕ ಸಿದ್ದು (22) ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಾಯಾಳುಗಳ ಪೈಕಿ ಮೂವರನ್ನ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರಿಗೆ ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳುಗಳು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲ್ವಾ ಗ್ರಾಮದ ನಿವಾಸಿಗಳಿಂದ ತಿಳಿದು ಬಂದಿದೆ. ಎಲ್ಲರೂ ಕೆಲಸ ಅರಸಿ ಬೆಂಗಳೂರಿನತ್ತ ಹೊರಟಿದ್ದರು. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ: ಕೂಡ್ಲಿಗಿ ಶಾಸಕ ನಾಗೇಂದ್ರ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಆಕ್ರೋಶ ಹೊರಹಾಕಿದ ಬೆಂಬಲಿಗರು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ವಿ.ಉಗ್ರಪ್ಪ ಅವರ ಬ್ಯಾನರ್‍ಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ.
ನಗರದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಡಿ.ಕೆ.ಶಿವಕುಮಾರ್ ಹಾಗೂ ಸಂಸದ ವಿ.ಉಗ್ರಪ್ಪ ಅವರ ಬ್ಯಾನರ್‍ಗೆ ಚಪ್ಪಲಿ ಹಾಕಿ ಮೆರವಣಿಗೆ ಮಾಡಿದರು. ಬಳಿಕ ರಾಯಲ್ ಸರ್ಕಲ್‍ನಲ್ಲಿ ಸೇರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ನಾಯಕರ ಫೋಟೋಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದರು. ಅಷ್ಟೇ ಅಲ್ಲದೆ ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮುಂದುವರಿಸಿದರು.
ಪ್ರತಿಭಟನೆಯಿಂದಾಗಿ ರಾಯಲ್ ಸರ್ಕಲ್‍ನಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿ ನೂರಾರು ವಾಹನಗಳು ರಸ್ತೆಯಲ್ಲಿ ಸಾಲಾಗಿ ನಿಂತಿದ್ದವು. ಇತ್ತ ಶಾಸಕ ಭೀಮಾನಾಯ್ಕ್ ಅವರಿಗೂ ಸಚಿವ ಸ್ಥಾನ ಕೈತಪ್ಪಿದಕ್ಕೆ ಅವರ ಬೆಂಬಲಿಗರು ಹಾಗೂ ಕೈ ಕಾರ್ಯಕರ್ತರು ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.