Tag: ಕೂದಲು ದಾನ

  • ಕ್ಯಾನ್ಸರ್ ರೋಗಿಗಳಿಗೆ ತಲೆಗೂದಲು ದಾನ ಮಾಡಿದ ಅನುಪಮಾ ಗೌಡ

    ಕ್ಯಾನ್ಸರ್ ರೋಗಿಗಳಿಗೆ ತಲೆಗೂದಲು ದಾನ ಮಾಡಿದ ಅನುಪಮಾ ಗೌಡ

    ಕಿರುತೆರೆ ನಟಿ, ನಿರೂಪಕಿ ಅನುಪಮಾ ಗೌಡ ಮಾದರಿಯ ಕೆಲಸ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ವರ್ಷಗಳಿಂದ ಬೆಳೆಸಿದ್ದ ತಲೆಗೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡುವ ಮೂಲಕ ಅವರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ‘ನನ್ನ ವೃತ್ತಿ ಜೀವನದಲ್ಲಿ ಉದ್ದನೆಯ ಜಡೆ ನನ್ನ ಆತ್ಮವಿಶ್ವಾಸದ ಕುರುಹು ಆಗಿತ್ತು. ಈ ತಲೆಗೂದಲನ್ನು ಪ್ರೀತಿಯಿಂದ ಪೋಷಣೆ ಮಾಡುತ್ತಾ ಬಂದಿದ್ದೆ. ಇದೀಗ ಅನೇಕರಿಗೆ ಈ ತಲೆಗೂದಲಿನ ಅವಶ್ಯಕತೆ ಇರುವುದು ಕಂಡು ಬಂತು. ಹಾಗಾಗಿ ನಾನು ಅವುಗಳನ್ನು ಕತ್ತರಿಸಿ, ಅಗತ್ಯವಿದ್ದರಿಗೆ ಕೊಡಲು ಮುಂದಾಗಿದ್ದೇನೆ. ಈ ಕೆಲಸ ಮಾಡಲು ನನಗೆ ಹೆಮ್ಮೆ ಅನಿಸುತ್ತಿದೆ’ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ : ‘ಸಲಾರ್’ ಸಿನಿಮಾದಲ್ಲಿ ‘ಉಗ್ರಂ’ ಛಾಯೆ ಇದೆ: ಪ್ರಶಾಂತ್ ನೀಲ್

    ತಾವು ತಲೆಗೂದಲನ್ನು ಕಟ್ ಮಾಡಿಸಿದ್ದರ ಫೋಟೋವನ್ನೂ ಕೂಡ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು, ಇದೊಂದು ಚಿಕ್ಕ ಕೆಲಸವಾದರೂ, ತಲೆಗೂದಲು ಅವಶ್ಯವಿದ್ದವರ ಮುಖದಲ್ಲಿ ನಗು ನೋಡಿದಾಗ ಒಂದು ರೀತಿ ಸಾರ್ಥಕ ಭಾವ ಮೂಡುತ್ತದೆ ಎಂದೂ ಅವರು ಬರೆದುಕೊಂಡಿದ್ದಾರೆ. ತಾವು ಇಂಥದ್ದೊಂದು ಪೋಸ್ಟ್ ಹಾಕುತ್ತಿರುವುದು ಕೇವಲ ಬೇರೆಯವರಿಗೂ ಪ್ರೇರಣೆ ಆಗಲಿ ಎನ್ನುವ ಕಾರಣಕ್ಕಾಗಿಯೇ ಹೊರತು, ಯಾವುದೇ ಪ್ರಚಾರಕ್ಕಾಗಿ ಅಲ್ಲ’ ಎನ್ನುವುದನ್ನು ಅವರು ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ : EXCLUSIVE INTERVIEW: ಗೆಲ್ಲಲು ಹೊರಟವನಿಗೆ ಸೋಲು ದೊಡ್ಡದಾಗಬಾರದು: ಯಶ್

    ಹಳ್ಳಿ ದುನಿಯಾ ಶೋ ಮೂಲಕ ಟಿವಿ ರಂಗಕ್ಕೆ ಎಂಟ್ರಿ ಕೊಟ್ಟ ಅನುಪಮಾ ಗೌಡ, ಆ ನಂತರ ಧಾರಾವಾಹಿಗಳಲ್ಲಿ ನಟಿಸಿದರು. ನಂತರ ನಿರೂಪಣೆಯತ್ತ ಮುಖ ಮಾಡಿದರು. ಈಗ ಅನುಪಮಾ ಗೌಡ ಸ್ಟಾರ್ ನಿರೂಪಕಿ ಮತ್ತು ಬೇಡಿಕೆಯ ನಿರೂಪಕಿಯಾಗಿ ಬೆಳೆದಿದ್ದಾರೆ. ಕಷ್ಟದ ದಿನಗಳನ್ನು ಎದುರಿಸಿ ಇದೀಗ ತಮ್ಮಿಷ್ಟದಂತೆ ಬದುಕುವಷ್ಟು ಅನುಪಮಾ ಗೌಡ ವೃತ್ತಿ ಬದುಕನ್ನು ಕಟ್ಟಿಕೊಂಡಿದ್ದಾರೆ.

    ಈ ಹಿಂದೆ ಅನೇಕ ತಾರೆಯರು ಕ್ಯಾನ್ಸರ್ ರೋಗಿಗಳಿಗಾಗಿಯೇ ತಮ್ಮ ತಲೆಗೂದಲನ್ನು ದಾನ ಮಾಡಿದ್ದಾರೆ. ಈ ಹಿಂದೆ ಕಾರುಣ್ಯ ರಾಮ್, ಕಾವ್ಯ ಶಾಸ್ತ್ರಿ ಸೇರಿದಂತೆ ಹಲವು ನಟಿಯರು ಇಂತಹ ಕೆಲಸ ಮಾಡುವ ಮೂಲಕ ಮಾದರಿಯಾಗಿದ್ದರು.

  • ಕೂದಲಿನಿಂದ 126 ಕೋಟಿ, ಲಡ್ಡು ಪ್ರಸಾದದಿಂದ 365 ಕೋಟಿ – ಟಿಟಿಡಿ ನಿರೀಕ್ಷಿತ ಆದಾಯ

    ಅಮರಾವತಿ: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಗುರುವಾರ ತನ್ನ 2022-23ನೇ ಸಾಲಿನ ಬಜೆಟ್ ಮಂಡಿಸಿದೆ.

    ತಿರುಮಲದ ಪುರಾತನ ವೆಂಕಟೇಶ್ವರ ದೇವಾಲಯದ ಆಡಳಿತ ಮಂಡಳಿ 2022-23ರ ವಾರ್ಷಿಕ ಬಜೆಟ್‌ನಲ್ಲಿ 3,096.40 ಕೋಟಿ ರೂ. ಆದಾಯವನ್ನು ಅಂದಾಜಿಸಿದೆ.

    ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಬಜೆಟ್ ಸಭೆಯಲ್ಲಿ ಪರಿಶೀಲಿಸಿದ ಬಳಿಕ ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್. ಜವಾಹರ ರೆಡ್ಡಿ ವಾರ್ಷಿಕ ಬಜೆಟ್ ಬಗ್ಗೆ ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: 290 ಗ್ರಾಂ ತೂಕದ ಸ್ಟ್ರಾಬೆರಿ ಬೆಳೆದು ವಿಶ್ವ ದಾಖಲೆ

    ದೇವಾಲಯದ ವಾರ್ಷಿಕ ಆದಾಯದಲ್ಲಿ ಸುಮಾರು 1,000 ಕೋಟಿ ರೂ. ಹುಂಡಿಯಲ್ಲಿ (ದಾನ-ಪಾತ್ರೆ) ಭಕ್ತರಿಂದ ಬರುತ್ತದೆ ಎಂದು ಅಂದಾಜಿಸಲಾಗಿದೆ. ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿನ ಠೇವಣಿ ಮೇಲಿನ ಬಡ್ಡಿ ಸುಮಾರು 668.5 ಕೋಟಿ ರೂ., ವಿವಿಧ ರೀತಿಯ ಟಿಕೆಟ್‌ಗಳ ಮಾರಾಟದಿಂದ 362 ಕೋಟಿ ರೂ. ಸಂಗ್ರಹವಾಗಬಹುದು ಎಂದು ಅಂದಾಜಿಸಲಾಗಿದೆ.

    ಲಡ್ಡು ಪ್ರಸಾದ ಮಾರಾಟದಿಂದ 365 ಕೋಟಿ ರೂ., ವಸತಿ ಹಾಗೂ ಮದುವೆ ಮಂಟಪದ ಬಾಡಿಗೆಯಿಂದ 95 ಕೋಟಿ ರೂ., ಭಕ್ತರು ಅರ್ಪಿಸುವ ಕೂದಲು ಮಾರಾಟದಿಂದ 126 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಮಂಡಳಿಯ ವಿವಿಧ ಸೇವೆಗಳ ವೆಚ್ಚವನ್ನು 1,360 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಡೆಲ್ಲಿ To ಲಂಡನ್ ಬಸ್ ಟೂರ್ – 70 ದಿನಗಳಲ್ಲಿ 18 ದೇಶ ಸುತ್ತುವ ಅವಕಾಶ

    ಭಕ್ತರು ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಬಂದು ತಮ್ಮ ಕೂದಲನ್ನು ದಾನ ಮಾಡಿದರೆ ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯುತ್ತಾರೆ ಹಾಗೂ ಅವರ ಎಲ್ಲಾ ತೊಂದರೆಗಳು ದೂರವಾಗುತ್ತದೆ ಎಂಬುದು ಜನಪ್ರಿಯ ನಂಬಿಕೆ. ಲಕ್ಷ್ಮಿ ದೇವಿ ಇಲ್ಲಿ ಎಲ್ಲಾ ಪಾಪಗಳನ್ನು ಹಾಗೂ ದುಷ್ಟತನವನ್ನು ತೊರೆಯುವ ವ್ಯಕ್ತಿಯ ಎಲ್ಲಾ ದುಃಖಗಳನ್ನು ದೂರ ಮಾಡುತ್ತಾಳೆ ಎಂದು ನಂಬಲಾಗುತ್ತದೆ.

    ಈ ನಂಬಿಕೆಯನ್ನು ಪೂರ್ಣಗೊಳಿಸಲು ಜನರು ಎಲ್ಲಾ ದುಷ್ಟತನ ಹಾಗೂ ಪಾಪವನ್ನು ತಮ್ಮ ಕೂದಲ ರೂಪದಲ್ಲಿ ಬಿಡುತ್ತಾರೆ. ಪ್ರತಿದಿನ ಸುಮಾರು 20 ಸಾವಿರ ಭಕ್ತರು ತಿರುಪತಿ ದೇವಸ್ಥಾನಕ್ಕೆ ಕೇಶ ದಾನಕ್ಕೆ ಹೋಗುತ್ತಾರೆ. ಈ ಕೆಲಸಕ್ಕಾಗಿ ಸುಮಾರು 600 ಕ್ಷೌರಿಕರನ್ನು ದೇವಾಲಯದ ಆವರಣದಲ್ಲಿ ಇರಿಸಲಾಗಿದೆ.

  • ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ ನಟಿ ಕಾವ್ಯಾ ಶಾಸ್ತ್ರಿ

    ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ ನಟಿ ಕಾವ್ಯಾ ಶಾಸ್ತ್ರಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಕಾವ್ಯಾ ಶಾಸ್ತ್ರಿ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಕ್ಯಾನ್ಸರ್ ರೋಗಿಗಳಿಗಾಗಿ ನಾನು ಕೂದಲನ್ನು ದಾನ ಮಾಡಿದ್ದೇನೆ. ಕ್ಯಾನ್ಸರ್‌ನಿಂದ ನನ್ನ ಚಿಕ್ಕಪ್ಪನನ್ನು ಕಳೆದುಕೊಂಡಿದ್ದೇನೆ. ಆ ನೋವನ್ನು ತುಂಬ ಹತ್ತಿರದಿಂದ ಕಂಡಿದ್ದರಿಂದ ಈ ನಿರ್ಧಾಕ್ಕೆ ಬಂದಿದ್ದೇನೆ. ಕೂದಲು ದಾನ ತುಂಬ ಸಣ್ಣ ಕೆಲಸವೇ ಇರಹುದು. ಆದರೆ, ನನ್ನ ಕೆಲಸವನ್ನು ನಾನು ಮಾಡಿದ್ದೇನೆ. ಈ ಒಂದೊಳ್ಳೆ ಕೆಲಸಕ್ಕೆ ನೀವು ಕೈ ಜೋಡಿಸಿ ಎಂದು ಮನವಿ ಮಾಡಿ ಇನ್‍ಸ್ಟಾಗ್ರಾಮ್‍ನಲ್ಲಿ ಕೂದಲು ಕಟ್ ಮಾಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Kavya Shastry (@kaavya.shastry)

    ಕೊರೊನಾ ಸಂಕಷ್ಟದ ಪರಿಸ್ತೀತಿಯಲ್ಲಿ ಪ್ಲಾಸ್ಮಾ ದಾನ ಮಾಡಿ ಇತರರಿಗೂ ಮಾದರಿಯಾಗಿದ್ದರು. ಲಾಕ್‍ಡೌನ್ ಸಮಯದಲ್ಲಿ ದಿನಸಿಕಿಟ್, ಆಹಾರದ ಪೊಟ್ಟಣಗಳನ್ನು ಹಂಚಿದ್ದರು. ಇದೀಗ ನಟಿ ಕಾವ್ಯಾ ಶಾಸ್ತ್ರಿ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ್ದಾರೆ.

     

    View this post on Instagram

     

    A post shared by Kavya Shastry (@kaavya.shastry)

    ಈ ಹಿಂದೆ ಸ್ಯಾಂಡಲ್‍ವುಡ್‍ ನಟ ದ್ರುವಾ ಸರ್ಜಾ, ನಟಿ ಕಾರುಣ್ಯ ರಾಮ್ ಹೀಗೆ ಅನೇಕ ಮಂದಿ ನಟ, ನಟಿಯರು ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ್ದಾರೆ. ಇದೀಗ ಅದೇ ಸಾಲಿಗೆ ಕಾವ್ಯಾ ಶಾಸ್ತ್ರಿ ಕೂಡ ಸೇರ್ಪಡೆಯಾಗಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.