Tag: ಕೂಲಿ ಕೆಲಸ

  • ನಿರ್ಗತಿಕರನ್ನು ಕೆಲಸಕ್ಕೆಂದು ಕರೆದುಕೊಂಡು ಬಂದು ಕೂಡಿಹಾಕಿದ್ದ ದುರುಳ ಅರೆಸ್ಟ್ – 18 ಕಾರ್ಮಿಕರ ರಕ್ಷಣೆ

    ನಿರ್ಗತಿಕರನ್ನು ಕೆಲಸಕ್ಕೆಂದು ಕರೆದುಕೊಂಡು ಬಂದು ಕೂಡಿಹಾಕಿದ್ದ ದುರುಳ ಅರೆಸ್ಟ್ – 18 ಕಾರ್ಮಿಕರ ರಕ್ಷಣೆ

    ಹಾಸನ: ಕೂಲಿ ಕೆಲಸಕ್ಕೆಂದು (Wage Work) ಕರೆದುಕೊಂಡು ಬಂದು ಕೂಡಿ ಹಾಕಿದ್ದ 18 ಮಂದಿ ಕಾರ್ಮಿಕರನ್ನು (Workers) ರಕ್ಷಿಸಿ ಆರೋಪಿಯನ್ನು ಬಂಧಿಸಿದ ಘಟನೆ ಹಾಸನದ (Hassan) ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಹಾಸನ ಜಿಲ್ಲೆ ಅರಸೀಕೆರೆ (Arasikere) ತಾಲೂಕಿನ ಬಾಣಾವರ ಹೋಬಳಿಯ ಚೆಲುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮುನೇಶ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ನಿರ್ಗತಿಕರಿಗೆ ಕೆಲಸ ಕೊಡಿಸುತ್ತೇನೆ ಎಂದು ಕರೆದುಕೊಂಡು ಬಂದು ಎಲ್ಲರನ್ನೂ ಒಂದೆಡೆ ಕೂಡಿ ಹಾಕಿದ್ದ. ಅಲ್ಲದೇ ಕಾರ್ಮಿಕರಿಗೆ ಸರಿಯಾಗಿ ವೇತನ ಮತ್ತು ಆಹಾರ ನೀಡದೆ ದುಡಿಸಿಕೊಳ್ಳುತ್ತಿದ್ದ. ಒಂದೇ ವಾಹನದಲ್ಲಿ ಕೆಲಸಕ್ಕೆಂದು ಕರೆದುಕೊಂಡು ಹೋಗಿ ಮತ್ತೆ ತನ್ನ ತೋಟದ ಮನೆಯಲ್ಲಿ ಕೂಡಿ ಹಾಕುತ್ತಿದ್ದ ಕಿರಾತಕನನ್ನು ಬಂಧಿಸುವಲ್ಲಿ (Arrest) ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ: ರಾಯಚೂರು ಜಿಪಂ ಸಿಇಓಗೆ ನೋಟಿಸ್

    ರೈಲ್ವೆ, ಬಸ್ ನಿಲ್ದಾಣದಲ್ಲಿದ್ದ ನಿರ್ಗತಿಕರನ್ನು ಕರೆದುಕೊಂಡು ಬಂದು ಬಂಧಿಸಿಟ್ಟಿದ್ದು ಮಾತ್ರವಲ್ಲದೇ ಯಾರನ್ನೂ ಹೊರಗೆ ಬಿಡದೆ ದುಡಿಸಿಕೊಂಡು ಚಿತ್ರಹಿಂಸೆ ನೀಡುತ್ತಿದ್ದ. ಕಾರ್ಮಿಕರು ಸ್ನಾನ, ಬಟ್ಟೆ, ಆಹಾರವಿಲ್ಲದೇ ಪರದಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 18 ಮಂದಿ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಆರೋಪಿ ಮುನೇಶ್ ಈ ಹಿಂದೆಯೂ ಇಂತಹದೇ ಕೃತ್ಯಗಳಲ್ಲಿ ಭಾಗಿಯಾಗಿದ್ದು, ನಾಲ್ಕನೇ ಬಾರಿಗೆ ಪೊಲೀಸರ ಅತಿಥಿಯಾಗಿದ್ದಾನೆ. ಇದನ್ನೂ ಓದಿ: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!

  • ಕ್ಲಾಸ್ ರೂಮ್‍ನಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ- ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್

    ಕ್ಲಾಸ್ ರೂಮ್‍ನಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ- ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್

    ಯಾದಗಿರಿ: ಶಾಲೆಗೆ ಬರದೇ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ. ಶಾಲೆ ಓಪನ್ ಆದ್ರೂ ಶಾಲೆ ಕಡೆ ಮುಖ ಮಾಡದ ವಿದ್ಯಾರ್ಥಿಗಳು, ಶಾಲೆಗೆ ಗೈರು ಕೂಲಿಗೆ ಹೋಗುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದ ಯಾದಗಿರಿ ಜಿಲ್ಲೆಯ ವಿದ್ಯಾರ್ಥಿಗಳು ಬಾಲಕಾರ್ಮಿಕರಾಗುತ್ತಿದ್ದಾರೆ.

    ಇಡೀ ಕ್ಲಾಸ್ ರೂಮ್‍ನಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ ಆರನೇ ತರಗತಿಯಲ್ಲಿ ಒಬ್ಬ ವಿದ್ಯಾರ್ಥಿ, ಏಳನೇ ತರಗತಿಯಲ್ಲಿ ನಾಲ್ಕು ಮಕ್ಕಳು ಇದ್ದರು. ಉಳಿದ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು,ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಸಂಬರ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಿಸ್ಥಿತಿಯನ್ನು,ಹೇಳೊರಿಲ್ಲ ಕೇಳೋರಿಲ್ಲ ಎಂಬುವಂತಾಗಿದೆ. ಅಮಿತ್ ಶಾಗೆ ವಿಶ್ ಮಾಡಿ ಟ್ರೋಲ್‍ಗೊಳಗಾದ ನಟಿ ಸಾರಾ ಅಲಿಖಾನ್

    ಈ ಶಾಲೆಯಲ್ಲಿ ಸುಮಾರು 250 ಮಕ್ಕಳ ದಾಖಲಾತಿದ್ದು, 6 ನೇ ತರಗತಿಯಲ್ಲಿ ಒಬ್ಬ ವಿದ್ಯಾರ್ಥಿ ಶಾಲೆಗೆ ಬಂದ್ರೆ ಇನ್ನೂಳಿದ 49 ವಿದ್ಯಾರ್ಥಿಗಳು ಕೆಲಸಕ್ಕೆ ಹೋಗುತ್ತಿದ್ದಾರೆ. 7ನೇ ತರಗತಿಯಲ್ಲಿ 60 ಮಕ್ಕಳಿದ್ದು, ಇದರಲ್ಲಿ 4 ಜನ ವಿದ್ಯಾರ್ಥಿಗಳು ಶಾಲೆಗೆ ಬರ್ತಿದ್ದಾರೆ. ಹಲವಾರು ದಿನಗಳಿಂದ ಇದೆ ಪರಿಸ್ಥಿತಿ ನಡಿತೀದ್ರೂ ಶಿಕ್ಷಕರು ಫುಲ್ ಸೈಲಂಟ್ ಆಗಿದ್ದಾರೆ.

    ಮಕ್ಕಳು ಕೂಲಿಗೆ ಹೋದ್ರು ಶಿಕ್ಷಣ ಇಲಾಖೆ ಮಾತ್ರ ಕಣ್ಮುಚ್ಚಿದೆ. ಮಕ್ಕಳ ಕೂಲಿ ಕೆಲಸವೇ ನೆಪಾವಗಿಟ್ಟುಕೊಂಡ ಟೀಚರ್ಸ್, ಕಾಟಾಚಾರಕ್ಕೆ ಶಾಲೆಗೆ ಬಂದು, ಹರಟೆ ಹೊಡೆದು ಮತ್ತೆ ಸಂಜೆ ಮನೆಯ ವಾಪಸ್ ಆಗತ್ತಾರೆ.

    ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‌ನಲ್ಲಿ ಇದು ಬಯಲಾಗಿದೆ. ಉರಿ ಬಿಸಿಲು, ಜಡಿ ಮಳೆಯನ್ನದೇ ದಿನವಿಡೀ ಮಕ್ಕಳು ಹತ್ತಿ ಹೊಲದಲ್ಲಿ ದುಡಿಯುತ್ತಿದ್ದಾರೆ. ಸ್ವತಃ ಪೋಷಕರೇ ಮಕ್ಕಳನ್ನು ಕೂಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಯಾದಗಿರಿ ಜಿಲ್ಲೆಯಾದ್ಯಂತ ಬಾಲ ಕಾರ್ಮಿಕರು ಹೆಚ್ಚುತ್ತಿದ್ದು, 150 ರೂ. ಕೂಲಿಗಾಗಿ ಈಡೀ ದಿನ ಶಾಲಾ ಮಕ್ಕಳು ದುಡಿವಂತಾಗಿದೆ.ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಸಂಬರ, ವಂಕಸಂಬರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಿದೆ.

    ಇನ್ನೂ ಪೋಷಕರ ಒತ್ತಾಯಿಂದ ಕೂಲಿಗೆ ತೆರಳುತ್ತಿರುವ ವಿದ್ಯಾರ್ಥಿಗಳು ಶಾಲೆಯನ್ನು ನೆನದು ಕಣ್ಣೀರು ಹಾಕುತ್ತಿದ್ದಾರೆ. ಸರ್ ಶಾಲೆಗೆ ಹೋಗು ಅನ್ನಸತ್ತಿದೆ ಆದರೆ ಬಡತನ ಅದಕ್ಕೆ ಕೂಲಿಗೆ ಬಂದೆ. ನಮ್ಮ ಸರ್, ಗೆಳೆಯರು ನೆನಪಾಗುತ್ತಾರೆ, ಕೂಲಿ ಮಾಡೋಕೆ ಕಷ್ಟ ಆಗುತ್ತಿದೆ ಎಂದು ಪಬ್ಲಿಕ್ ಟಿವಿ ಕ್ಯಾಮರಾ ಎದುರು ಮುಗ್ಧ ವಿದ್ಯಾರ್ಥಿಗಳ ಅಳಲು ತೋಡಿಕೊಂಡಿದ್ದಾರೆ.

  • ಕೂಲಿ ಕೆಲಸಕ್ಕೆ ಮಕ್ಕಳನ್ನು ಕಳಿಸುವ ಪಾಲಕರಿಗೆ ದಂಡ- ಗ್ರಾಮದಲ್ಲಿ ಡಂಗೂರ

    ಕೂಲಿ ಕೆಲಸಕ್ಕೆ ಮಕ್ಕಳನ್ನು ಕಳಿಸುವ ಪಾಲಕರಿಗೆ ದಂಡ- ಗ್ರಾಮದಲ್ಲಿ ಡಂಗೂರ

    ಬಳ್ಳಾರಿ: ಕೂಲಿ ಕೆಲಸಕ್ಕೆ ಮಕ್ಕಳನ್ನು ಕಳಿಸುವ ಪಾಲಕರಿಗೆ ದಂಡ ಹಾಕಲಾಗುವುದು ಎಂದು ಬಳ್ಳಾರಿ ಜಿಲ್ಲೆಯ ಕುರುಗೋಡು ಕೋಳೂರು ಗ್ರಾಮದಲ್ಲಿ ಡಂಗೂರು ಹೊರಡಿಸಲಾಗಿದೆ.

    ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ರಿಂದ 10ತರಗತಿ ಒಟ್ಟು 184 ವಿದ್ಯಾರ್ಥಿಗಳು ಇದ್ದಾರೆ. ಆದರೆ ಶಾಲೆ ಪ್ರಾರಂಭವಾರದೂ ವಿದ್ಯಾರ್ಥಿಗಳ ಹಾಜರಾತಿ 50 ದಾಟಿಲ್ಲ. ಇದು ಶಿಕ್ಷಕರಿಗೆ ತೆಲೆನೋವು ಸೃಷ್ಟಿಸಿದೆ. ಮಕ್ಕಳನ್ನು ಶಾಲೆಗೆ ಬರುವ ನಿಟ್ಟಿನಲ್ಲಿ ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು, ಮುಖ್ಯ ಶಿಕ್ಷಕ ಹಾಗೂ ಶಿಕ್ಷಕರು ಸೇರಿ ಸಭೆಯನ್ನು ನಡೆಸಿದ್ದಾರೆ. ಇದನ್ನೂ ಓದಿ: ನೀಚ ಕೃತ್ಯ ಮಾಡುವವರಿಗೆ ಪೊಲೀಸರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ: ಅರಗ ಜ್ಞಾನೇಂದ್ರ

    ಸಭೆಯಲ್ಲಿ ಚರ್ಚಿಸುವ ಸಂದರ್ಭದಲ್ಲಿ ಮಕ್ಕಳನ್ನು ಪಾಲಕರು ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಕೂಲಿ ಕೆಲಸಕ್ಕೆ ಪಾಲಕರನ್ನು ಕರೆದುಕೊಂಡು ಹೋದರೆ ದಂಡ ಹಾಕುವ ಕುರಿತು ತೀರ್ಮಾನಿಸಲಾಗಿದೆ. ಹೀಗಾಗಿ ಪ್ರತಿ ಓಣಿಯಲ್ಲಿ ದಂಡ ಹಾಕುವ ಕುರಿತು ಡಂಗೂರ ಸಾರಲಾಗಿದೆ. ಈ ಡಂಗೂರ ಸಾರಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ಸಾಕಷ್ಟು ಸದ್ದು ಮಾಡುತ್ತಿದೆ.

  • ಕೊರೊನಾ ಲಾಕ್‍ಡೌನ್ – ಕಲ್ಲು ಒಡೆಯುವ ಕೂಲಿ ಕೆಲಸ ಮಾಡುತ್ತಿರುವ ವೀಲ್‍ಚೇರ್ ಕ್ರಿಕೆಟರ್

    ಕೊರೊನಾ ಲಾಕ್‍ಡೌನ್ – ಕಲ್ಲು ಒಡೆಯುವ ಕೂಲಿ ಕೆಲಸ ಮಾಡುತ್ತಿರುವ ವೀಲ್‍ಚೇರ್ ಕ್ರಿಕೆಟರ್

    ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದ ಇಂಡಿಯಾದ ವೀಲ್‍ಚೇರ್ ಕ್ರಿಕೆಟರ್ ಒಬ್ಬರು ಕಲ್ಲು ಒಡೆಯುವ ಕೂಲಿ ಕೆಲಸ ಮಾಡುವ ಸಂದರ್ಭ ಬಂದಿದೆ.

    ಕೊರೊನಾ ಮಹಾಮಾರಿಯಿಂದ ದೇಶದ ಜನರು ಆರ್ಥಿಕ ಸಂಕಷ್ಟ ಸಿಲುಕಿದ್ದಾರೆ. ಎಷ್ಟೋ ಜನ ಇದ್ದ ಕೆಲಸವನ್ನು ಕಳೆದುಕೊಂಡು ಜೀವನಕ್ಕಾಗಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಅಂತೆಯೇ ಒಂದು ಕಾಲದಲ್ಲಿ ಇಂಡಿಯಾ ವೀಲ್‍ಚೇರ್ ಕ್ರಿಕೆಟ್ ತಂಡದ ಆಟಗಾರ ಮತ್ತು ಪ್ರಸ್ತುತ ಇಂಡಿಯಾ ವೀಲ್‍ಚೇರ್ ಕ್ರಿಕೆಟ್ ತಂಡದ ಕೋಚ್ ಆಗಿರುವ ರಾಜೇಂದ್ರ ಸಿಂಗ್ ಧಮಿ ಕೂಲಿ ಕೆಲಸ ಮಾಡುತ್ತಿದ್ದಾರೆ.

    ವೀಲ್‍ಚೇರ್ ಕ್ರಿಕೆಟ್ ಆಟ ಭಾರತದಲ್ಲಿ ವೃತ್ತಿಪರ ಮತ್ತು ಅಧಿಕೃತವಾಗಿಲ್ಲ. ಆದರೂ ಪಂದ್ಯಗಳು ಆಗಾಗ ನಡೆಯುತ್ತವೆ. ಹೀಗಾಗಿ ಇದರಿಂದ ಬಹುಮಾನದ ಹಣದಿಂದ ರಾಜೇಂದ್ರ ಸಿಂಗ್ ಜೀವನ ನಡೆಸುತ್ತಿದ್ದರು. ಆದರೆ ಕೊರೊನಾ ಲಾಕ್‍ಡೌನ್ ನಂತರ ಯಾವುದೇ ಪಂದ್ಯಗಳು ನಡೆದಿಲ್ಲ. ಆ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರಾಜೇಂದ್ರ ಅವರು ತನ್ನ ಊರು ಉತ್ತರಖಂಡ ರಾಯ್ಕೊನಲ್ಲಿ ಕಲ್ಲು ಒಡೆಯುವ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ತನ್ನ ಪೋಷಕರು ಮತ್ತು ಒಡಹುಟ್ಟಿದವರನ್ನು ಸಾಕುತ್ತಿದ್ದಾರೆ.

    ರಾಜೇಂದ್ರ ಅವರು ಎರಡು ವರ್ಷದ ಮಗುವಾಗಿದ್ದಾಗ ಅವರ ದೇಹದ ಕೆಳಭಾಗ ಪಾಶ್ರ್ವವಾಯುವಿಗೆ ಒಳಗಾಗಿತ್ತು. ಆದರೆ ಅದನ್ನು ಲೆಕ್ಕಿಸದೇ ಕ್ರೀಡಾಪಟುವಾದ ಅವರು, ನ್ಯಾಷನಲ್ ಮಟ್ಟದಲ್ಲಿ ಭಾರತಕ್ಕಾಗಿ ಶಾಟ್‍ಪುಟ್ ಮತ್ತು ಡಿಸ್ಕಸ್ ಥ್ರೋನಲ್ಲಿ ಪದಕವನ್ನು ಗೆದ್ದು ತಂದಿದ್ದಾರೆ. ಆ ನಂತರ ಅವರು ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದ ಕಾರಣ, ವೀಲ್‍ಚೇರ್ ಕ್ರಿಕೆಟರ್ ಆಗಿದ್ದರು. ನಂತರ ಅದೇ ತಂಡಕ್ಕೆ ಕೋಚ್ ಕೂಡ ಆದರು. ಕಳೆದ ಮಾರ್ಚ್‍ನಲ್ಲಿ ಕ್ರಿಕೆಟ್ ಆಡಲು ಬೆಂಗಳೂರಿಗೆ ಬರಬೇಕಿತ್ತು. ಆದರೆ ಕೊರೊನಾ ಲಾಕ್‍ಡೌನ್‍ನಿಂದ ಅದು ಸಾಧ್ಯವಾಗಲಿಲ್ಲ.

    ಈ ವಿಚಾರದ ಬಗ್ಗೆ ಮಾತನಾಡಿರುವ ಧಮಿ, ಒಬ್ಬ ನ್ಯಾಷನಲ್ ಕ್ರೀಡಾಪಟುವಾಗಿ ನನಗೆ ಈ ಕೆಲಸ ಮಾಡುತ್ತಿರುವುದಕ್ಕೆ ಬೇಜಾರಿಲ್ಲ. ಭಿಕ್ಷೆ ಬೇಡುವುದಕ್ಕಿಂತ ಕಷ್ಟು ಪಟ್ಟ ಕೆಲಸ ಮಾಡುವುದು ಒಳ್ಳೆಯದು. ದಿನಗೂಲಿ ಕೆಲಸ ಮಾಡಿ ದಿಕ್ಕೆ 400 ರೂ. ದುಡಿಯುತ್ತಿದ್ದೇನೆ. ಇದರಿಂದ ನನ್ನ ಮನೆಗೂ ಸಹಾಯವಾಗಿದೆ. ಇದು ಕೇವಲ ನನ್ನ ಪರಿಸ್ಥಿತಿಯಲ್ಲ. ನನ್ನಂತ ಸಾವಿರಾರು ಜನ ಕ್ರೀಡಾಪಟುಗಳು ಇಂದು ಇದೇ ಪರಿಸ್ಥಿತಿಯಲ್ಲಿ ಇದ್ದಾರೆ. ಅವರಿಗೂ ಕೂಡ ಸಹಾಯವಾಗಬೇಕಿದೆ ಎಂದು ಹೇಳಿದ್ದಾರೆ.

    ರಾಜೇಂದ್ರ ಸಿಂಗ್ ಧಮಿ ಅವರು ಮಾಡುತ್ತಿರುವ ಕೆಲಸ ರಾಷ್ಟ್ರೀಯ ಸುದ್ದಿಯಾದ ನಂತರ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ 50,000 ರೂಪಾಯಿಗಳನ್ನು ಅನುದಾನವನ್ನು ಧಮಿಗೆ ನೀಡಿದೆ. ಆದರೆ ಉತ್ತರಖಂಡದ ರಾಜ್ಯ ಸರ್ಕಾರವು ಯಾವುದೇ ನೆರವು ನೀಡಿಲ್ಲ. ಕೇವಲ ನನಗೆ ಸಹಾಯ ಮಾಡಿದರೆ ಆಗುವುದಿಲ್ಲ. ನನ್ನ ಹಾಗೇ ಕಷ್ಟದಲ್ಲಿ ಇರುವ ಕ್ರೀಡಾಪಟುಗಳಿಗೆ ಸಹಾಯ ಮಾಡಬೇಕಿದೆ ಎಂದು ಧಮಿ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.

  • ಅಕ್ಕನ ಆರೈಕೆಗಾಗಿ ಶಾಲೆ ಬಿಟ್ಟು ಕೂಲಿಗೆ ಸೇರಿದ ತಮ್ಮ

    ಅಕ್ಕನ ಆರೈಕೆಗಾಗಿ ಶಾಲೆ ಬಿಟ್ಟು ಕೂಲಿಗೆ ಸೇರಿದ ತಮ್ಮ

    -ಹೆತ್ತವರಿಲ್ಲದೇ ಸಹಾಯ ಹಸ್ತ ಬಯಸುತ್ತಿರುವ ಬಡ ಜೀವಗಳು

    ಮೈಸೂರು: ಅಕ್ಕ-ತಮ್ಮ ಬಾಂಧವ್ಯ, ಅಣ್ಣ-ತಂಗಿಯ ಬಾಂಧವ್ಯ ಯಾವತ್ತೂ ಅಮರ. ಅಕ್ಕನಿಗಾಗಿ, ತಂಗಿಗಾಗಿ ಸಹೋದರ ಏನೂ ಬೇಕಾದರೂ ಮಾಡುತ್ತಾನೆ. ಯಾವ ತ್ಯಾಗಕ್ಕೂ ಬೇಕಾದರೂ ಸಿದ್ಧನಾಗುತ್ತಾನೆ. ಈ ಮಾತಿಗೆ ಸಾಕ್ಷಿ ಎನ್ನುವಂತಹ, ಮನ ಕಲುಕುವ ಸುದ್ದಿ ಇದಾಗಿದ್ದು, ತಂದೆ ತಾಯಿಯನ್ನು ಕಳೆದುಕೊಂಡ ಬಾಲಕ, ಪಾರ್ಶ್ವವಾಯು ರೋಗಕ್ಕೆ ಒಳಗಾದ ಅಕ್ಕನ ಆರೈಕೆಗಾಗಿ ಶಾಲೆ ಬಿಟ್ಟು ಕೂಲಿ ಮಾಡುತ್ತಿದ್ದಾನೆ.

    ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಅಲನಹಳ್ಳಿ ಗ್ರಾಮದ ಮಂಜುಳಾ ಮತ್ತು ಕುಮಾರ್ ದಂಪತಿ ಪುತ್ರ ಆಕಾಶ್(15) ತನ್ನ ಅಕ್ಕ ಅನುಷಾ(17) ಆರೈಕೆಗಾಗಿ ಓದು ಬಿಟ್ಟು ಕೂಲಿಗೆ ಇಳಿದಿದ್ದಾನೆ. ಅನಾರೋಗ್ಯದಿಂದ ಇವರ ತಂದೆ ತಾಯಿ ಮೃತಪಟ್ಟಿದ್ದಾರೆ. ಗ್ರಾಮದ ಟಿ.ಎಸ್ ಸಾರ್ವಜನಿಕ ಪ್ರೌಢಶಾಲೆಯಲ್ಲಿ ಆಕಾಶ್ 8ನೇ ತರಗತಿ ಓದುತ್ತಿದ್ದ. ಹೆತ್ತವರು ಮೃತಪಟ್ಟ ಕಾರಣ ರೋಗ ಪೀಡಿತ ಅಕ್ಕನ ನೋಡಿಕೊಳ್ಳಲು ಯಾರು ಇಲ್ಲದೆ, ಮನೆ ನಿರ್ವಹಣೆಗೆ ದಾರಿಯೂ ಇಲ್ಲದ ಕಾರಣ ಶಾಲೆ ಬಿಟ್ಟು ಕೂಲಿ ಮಾಡುತ್ತಿದ್ದಾನೆ.

    ಅಕ್ಕನಿಗೆ ಕೈ ಕಾಲುಗಳು ಸ್ವಾಧೀನ ಇಲ್ಲ. ಆಕೆಯ ನಿತ್ಯ ಕರ್ಮ ಪೂರೈಸಲು, ಊಟ ಮಾಡಿಸಲು, ಬಟ್ಟೆ ಬದಲಿಸಲು ತಮ್ಮ ನೆರವಾಗುತ್ತಿದ್ದಾನೆ. ಅಕ್ಕನ ಕೆಲಸ ಮುಗಿಸಿ ಕೂಲಿಗೆ ಹೋಗುತ್ತಿದ್ದಾನೆ. ಸಂಜೆ ಮನೆಗೆ ಬಂದು ಅಡುಗೆ ಮಾಡಿ ಅಕ್ಕನಿಗೆ ಊಟ ಮಾಡಿಸುತ್ತಾನೆ. ಈ ಅನಾಥ ಅಕ್ಕ-ತಮ್ಮನಿಗೆ ಉಳ್ಳವರ ಸಹಾಯ ಬೇಕಿದೆ.

    ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲ್ಲೂಕಿನ ಹಾಲಹಳ್ಳಿ ಆಕಾಶ್ ಮನೆಗೆ ತಹಸೀಲ್ದಾರ್ ಆರ್ ಮಂಜುನಾಥ್ ಭೇಟಿ ನೀಡಿದ್ದರು. ಅನುಷಾಳಿಗೆ ಮೆದುಳು ನಿಷ್ಕ್ರಿಯ ಕಾಯಿಲೆ(ಸೆಬರ್ ಪಾಲ್ಸಿ) ಎಂಬ ಕಾಯಿಲೆ ಇದ್ದು, ಆಕೆಗೆ ಯಾವುದೇ ಸ್ವಾಧೀನ ಇರುವುದಿಲ್ಲ ಹೀಗಾಗಿ ಆಕೆಯನ್ನು ಮೈಸೂರಿನ ಕರುಣಾಲಯ ಟ್ರಸ್ಟ್ ಗೆ ಸ್ಥಳಾಂತರಿಸಿ ಆಕೆಯ ಶುಶ್ರೂಷೆಯನ್ನು ಮಾಡಲಾಗುವುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

    ಇತ್ತ ಆಕಾಶ್‍ನನ್ನು ಮೈಸೂರಿನ ಬಾಲಮಂದಿರಕ್ಕೆ ಸೇರಿಸಿ ಶಿಕ್ಷಣ ಕೊಡಿಸಲಾಗುವುದು ಎಂದು ತಿಳಿಸಿದಾಗ, ಬಾಲಕ ಆಲನಹಳ್ಳಿಯ ಶಾಲೆಯಲ್ಲಿ ಓದುತ್ತೇನೆ ನನಗೆ ಹಾಸ್ಟೆಲ್ ವ್ಯವಸ್ಥೆ ಮಾಡಿಕೊಡಿ ಎಂದು ಹೇಳಿದ್ದಾನೆ. ಆತನ ಇಚ್ಛೆಯಂತೆ ಕ್ಯಾತನಹಳ್ಳಿಯಲ್ಲಿ ಹಾಸ್ಟೆಲ್ ಇದ್ದು ಆತನನ್ನು ಅಲ್ಲಿಗೇ ಸೇರಿಸಿ ಶಿಕ್ಷಣ ಮುಂದುವರಿಸಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

  • ಕೂಲಿ ಕೆಲಸಕ್ಕೆ ತೆರೆಳಿದ್ದ ಯುವಕ ಶವವಾಗಿ ಪತ್ತೆ

    ಕೂಲಿ ಕೆಲಸಕ್ಕೆ ತೆರೆಳಿದ್ದ ಯುವಕ ಶವವಾಗಿ ಪತ್ತೆ

    ಯಾದಗಿರಿ: ಬುಧವಾರ ಕಾಣೆಯಾಗಿದ್ದ ಯುವಕ ಇವತ್ತು ಶವವಾಗಿ ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಾಣತಿಹಾಳ ಗ್ರಾಮದಲ್ಲಿ ಇಂದು ನಡೆದಿದೆ.

    ಶಹಾಪುರ ತಾಲೂಕಿನ ಹಳಿಸಗರ ಗ್ರಾಮದ ಸುರೇಶ್ (19) ಮೃತ ಯುವಕ. ಬುಧವಾರ ಕೂಲಿ ಕೆಲಸಕ್ಕೆಂದು ತೆರಳಿದ್ದ ಸುರೇಶ್ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಸಂಬಂಧ ಸುರೇಶ್‍ನ ಪಾಲಕರು ಶಹಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು.

    ಇಂದು ಬಾಣತಿಹಾಳ ಗ್ರಾಮದ ಬಳಿಯ ಕೆಬಿಜೆಎನ್‍ಎಲ್ ಮುಖ್ಯ ಕಾಲುವೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಕಾಲುವೆ ಬಳಿ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯುವಕನನ್ನು ಕೈ ಕಾಲು ಕಟ್ಟಿ ಕಾಲುವೆಗೆ ಬಿಸಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಸಂಬಂಧ ಗೋಗಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

  • ಭೀಕರ ಬರಗಾಲಕ್ಕೆ ಬೇಸತ್ತು ಗುಳೆ ಹೊರಟ ಬಿಸಿಲನಾಡಿನ ಜನ!

    ಭೀಕರ ಬರಗಾಲಕ್ಕೆ ಬೇಸತ್ತು ಗುಳೆ ಹೊರಟ ಬಿಸಿಲನಾಡಿನ ಜನ!

    – ಇದುವರೆಗೆ 50 ಸಾವಿರಕ್ಕೂ ಹೆಚ್ಚು ಜನ ಗುಳೆ
    – ಉದ್ಯೋಗ ಖಾತ್ರಿ ಹೆಸ್ರಿಗೆ ಮಾತ್ರ, ಕೂಲಿ ಕೆಲಸವೇ ಇಲ್ಲ
    – ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಿಂದಲೇ ಗುಳೆ

    ರಾಯಚೂರು: ಭೀಕರ ಬರಗಾಲದಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಶನಿವಾರ, ಭಾನುವಾರ ಬಂದರೆ ಸಾಕು ಒಂದಿಲ್ಲೊಂದು ಗ್ರಾಮ ಖಾಲಿಯಾಗುತ್ತಿದೆ. ಮಹಾನಗರಗಳತ್ತ ಜೀವನ ನಡೆಸಲು ಕೆಲಸ ಅರಸಿ ಹಳ್ಳಿ ಜನರು ಗುಳೆ ಹೋಗುತ್ತಿದ್ದಾರೆ.

    ಸಿಂಧನೂರು ಬಸ್ ನಿಲ್ದಾಣದಿಂದ ಶನಿವಾರ ತಡರಾತ್ರಿ ಹತ್ತಾರು ಹಳ್ಳಿಗಳ ನೂರಾರು ಜನ ದುಡಿಯಲು ಬೆಂಗಳೂರಿಗೆ ಗುಳೆ ಹೋಗಿದ್ದಾರೆ. ತಡರಾತ್ರಿ ಗಂಟು- ಮೂಟೆ ಕಟ್ಟಿಕೊಂಡು ಮಕ್ಕಳೊಂದಿಗೆ ಬಂದ ಜನ, ಬಸ್ ಇಲ್ಲದೆ ಪರದಾಡಿದರು. ನಂತರ ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಮಾಡಿ ಜನರನ್ನ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಮಳೆ ಬೆಳೆ ಇಲ್ಲದೆ, ಕೂಲಿ ಕೆಲಸವೂ ಸಿಗದೆ ಜನ ತಮ್ಮ ಗ್ರಾಮಗಳನ್ನು ಬಿಡುತ್ತಿದ್ದಾರೆ.

    ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡರ ಸ್ವಕ್ಷೇತ್ರ ಸಿಂಧನೂರು ನೀರಾವರಿ ಪ್ರದೇಶವಾದರು ಬರ ನಿರ್ವಹಣೆ ಸಾಧ್ಯವಾಗಿಲ್ಲ. ಇತ್ತೀಚೆಗಷ್ಟೆ ಮಾನವಿ ತಾಲೂಕಿನ ಜನರು ತಂಡೋಪತಂಡವಾಗಿ ಗುಳೆ ಹೋಗಿದ್ದರು. ಆಗ ಕೂಡ ಗುಳೆ ಹೋಗುವವರಿಗಾಗಿಯೇ ಹೆಚ್ಚುವರಿಯಾಗಿ ನಾಲ್ಕು ಬಸ್‍ಗಳನ್ನ ಬಿಡಲಾಗಿತ್ತು.

    ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ 2019-20 ನೇ ಸಾಲಿನಲ್ಲಿ ಕೇವಲ ಶೇಕಡಾ 12.08 ರಷ್ಟು ಜನರಿಗೆ ಮಾತ್ರ ಕೂಲಿ ಕೆಲಸ ನೀಡಲಾಗಿದೆ. 85 ಲಕ್ಷ ಮಾನವ ದಿನಗಳನ್ನ ಸೃಜನೆ ಮಾಡಬೇಕಾದಲ್ಲಿ ಕೇವಲ 10 ಲಕ್ಷ 27 ಸಾವಿರ ದಿನಗಳನ್ನ ಮಾತ್ರ ಸೃಜನೆ ಮಾಡಲಾಗಿದ್ದು, 23 ಕೋಟಿ 79 ಲಕ್ಷ ಅನುದಾನ ಬಳಕೆ ಮಾಡಲಾಗಿದೆ. ಕಳೆದ ವರ್ಷ ಶೇಕಡಾ 114.59 ರಷ್ಟು ಸಾಧನೆ ಮಾಡಿ, 268 ಕೋಟಿ 65 ಲಕ್ಷ ರೂ. ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿತ್ತು. ಹೀಗಾಗಿ ಕಳೆದ ವರ್ಷ ಗುಳೆ ಹೋಗುವವರ ಸಂಖ್ಯೆ ಸ್ವಲ್ಪ ಕಡಿಮೆಯಿತ್ತು. ಆದರೆ ಈ ಬಾರಿ ಭೀಕರ ಬರಗಾಲ ಎದುರಾಗಿರುವುದರಿಂದ ಜನ ಜಾನುವಾರುಗಳು ತತ್ತರಿಸಿ ಹೋಗಿವೆ. ಜಾನುವಾರುಗಳನ್ನ ಮಾರಾಟ ಮಾಡಿ ಜನ ಗುಳೆ ಹೋಗುತ್ತಿದ್ದಾರೆ.