Tag: ಕೂಳೂರು

  • ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    ಮಂಗಳೂರು: ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು, ಮಹಿಳೆ ಮೃತಪಟ್ಟಿರುವ ಘಟನೆ ಮಂಗಳೂರು (Mangaluru) ನಗರದ ಕೂಳೂರು (Kulur) ರಾಯಲ್ ಓಕ್ ಶೋರೂಂ ಮುಂಭಾಗ ನಡೆದಿದೆ.

    ಉಡುಪಿಯ ಪರ್ಕಳ ಮೂಲದ ಮಾಧವಿ ಮೃತ ಮಹಿಳೆ. ಮಂಗಳೂರಿನ ಎ.ಜೆ.ಆಸ್ಪತ್ರೆಯ ಸಿಬ್ಬಂದಿಯಾಗಿರುವ ಮಾಧವಿ, ಕರ್ತವ್ಯಕ್ಕೆ ಹಾಜರಾಗಲು ದ್ವಿಚಕ್ರ ವಾಹನದಲ್ಲಿ ಆಗಮಿಸುತ್ತಿದ್ದರು. ದ್ವಿಚಕ್ರ ವಾಹನವು ರಸ್ತೆ ಹೊಂಡಕ್ಕೆ ಬಿದ್ದ ಪರಿಣಾಮ ಮಾಧವಿ ರಸ್ತೆಗೆ ಬಿದ್ದಿದ್ದರು. ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮೈಸೂರು | ಮಾಲ್‌ನ ನಾಲ್ಕನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ಸಾವು

    ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಗಳು ಹೊಂಡಗುಂಡಿಗಳಿಂದ ತುಂಬಿದ್ದು, ಇದನ್ನು ದುರಸ್ಥಿ ಮಾಡದ ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.

  • 6 ಜನರ ಮೇಲೆ ಎಫ್‌ಐಆರ್ ದಾಖಲು – ಹನಿಟ್ರ್ಯಾಪ್‌ಗೆ ಮುಮ್ತಾಜ್ ಅಲಿ ಬಲಿ?

    6 ಜನರ ಮೇಲೆ ಎಫ್‌ಐಆರ್ ದಾಖಲು – ಹನಿಟ್ರ್ಯಾಪ್‌ಗೆ ಮುಮ್ತಾಜ್ ಅಲಿ ಬಲಿ?

    ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ತಮ್ಮ ಮುಮ್ತಾಜ್ ಅಲಿ (Mumtaz Ali) ಅವರ ಮೃತದೇಹ ಪತ್ತೆಯಾಗಿದ್ದು, ಆರು ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೆ ಮುಮ್ತಾಜ್ ಅಲಿ ಅವರು ಹನಿಟ್ರ್ಯಾಪ್‌ಗೆ (Honeytrap) ಬಲಿಯಾಗಿದ್ರಾ ಎಂಬ ಪ್ರಶ್ನೆ ಎದ್ದಿದೆ.

    ಮಾಜಿ ಶಾಸಕ ಮೊಯಿದ್ದೀನ್ ಬಾವಾ ತಮ್ಮ ಮುಮ್ತಾಜ್ ಅಲಿ ಅವರು ಭಾನುವಾರ ಬೆಳಗ್ಗೆಯಿಂದ ಕಾಣೆಯಾಗಿದ್ದರು. ನಾಪತ್ತೆಯಾಗಿದ್ದ ಹಿನ್ನೆಲೆ ಮುಮ್ತಾಜ್ ಆಲಿ ಸಹೋದರ ಹೈದರ್ ದೂರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆ ಪ್ರಚೋದಿಸಿರುವುದಾಗಿ ದೂರು ನೀಡಿದ್ದಾರೆ.

    ದೂರಿನಲ್ಲಿ ಏನಿತ್ತು?
    ಸಹೋದರ ಮುಮ್ತಾಜ್ ಆಲಿ ಸಮಾಜದ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರ ಗೌರವ ಹಾಳು ಮಾಡಲು ಮಹಿಳೆಯ ಬಳಸಿಕೊಂಡು ಷಡ್ಯಂತ್ರ ಮಾಡಿದ್ದಾರೆ. ರೆಹಮತ್ ಅಕ್ರಮ ಸಂಬಂಧ ಇದೆ ಎಂದು ಸುಳ್ಳು ಪ್ರಚಾರದ ಬೆದರಿಕೆ ಹಾಕಿದ್ದಾರೆ. 2024ರ ಜುಲೈನಿಂದ ಈವರೆಗೆ 50 ಲಕ್ಷ ರೂ. ವಸೂಲಿ ಮಾಡಿದ್ದಾರೆ. 25 ಲಕ್ಷ ರೂ. ಹಣವನ್ನು ಚೆಕ್ ಮೂಲಕವೂ ಮಹಿಳೆ ಹಣ ಪಡೆದಿದ್ದಾಳೆ.ಇದನ್ನೂ ಓದಿ: ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿತ: ಪೊಲೀಸರಿಂದ ಮಹಿಳೆಯ ರಕ್ಷಣೆ

    ಸತ್ತಾರ್ ಎಂಬಾತ ಮುಮ್ತಾಜ್ ಆಲಿಯ ರಾಜಕೀಯ ವಿರೋಧಿಯಾಗಿದ್ದಾನೆ. ಜೀವ ಬೆದರಿಕೆ ಜೊತೆಗೆ ಮುಮ್ತಾಜ್ ಅಲಿ ಕುಟುಂಬಕ್ಕೂ ಬೆದರಿಸಿದ್ದರು. ಹೀಗಾಗಿಯೇ ನಾನು ಅಲ್ಲಾಹುನ ಕಡೆಗೆ ಹೋಗುತ್ತಿದ್ದೇನೆ ಎಂದು ಆಡಿಯೋ ಮೆಸೇಜ್ ಹಾಕಿ ಸಹೋದರ ಮುಮ್ತಾಜ್ ಆಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.

    ದೂರು ನೀಡಿದ ಬೆನ್ನಲ್ಲೆ ಮಹಿಳೆ ರೆಹಮತ್ ಜೊತೆ ಅಬ್ದುಲ್ ಸತ್ತಾರ್, ಶಫಿ, ಮುಸ್ತಾಫ, ಶೋಯೆಬ್ ಹಾಗೂ ಸಿರಾಜ್ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ಎಫ್‌ಐಆರ್ ದಾಖಲಾಗಿದ್ದ ಆರು ಜನರ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆ ನಾಪತ್ತೆಯಾಗಿದ್ದು, ಕೇರಳದಲ್ಲಿ ಆಕೆಯ ಲೊಕೇಷನ್ ಪತ್ತೆಯಾಗಿದೆ. ಅಲ್ಲಿಗೆ ತೆರಳಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾಳೆ. ಮುಮ್ತಾಜ್ ಅಲಿ ನಾಪತ್ತೆ ಹಿಂದೆ ಆಕೆಯ ಕೈವಾಡ ಇದೆ ಎನ್ನುವುದು ತಿಳಿದುಬಂದಿದ್ದು, ತನಿಖೆ ನಡೆಯುತ್ತಿದೆ.

    ಏನಿದು ಪ್ರಕರಣ?
    ಮಾಜಿ ಶಾಸಕ ಮೊಯಿದ್ದೀನ್ ಬಾವಾ ತಮ್ಮ ಮುಮ್ತಾಜ್ ಅಲಿ ಅವರು ಭಾನುವಾರ ಬೆಳಗ್ಗೆಯಿಂದ ಕಾಣೆಯಾಗಿದ್ದರು. ಮಂಗಳೂರಿನ ಕೂಳೂರು ಫಲ್ಗುಣಿ ನದಿ ಸೇತುವೆ ಮೇಲೆ ಅವರ ಕಾರು ನಿನ್ನೆ ಪತ್ತೆಯಾಗಿತ್ತು. ಇದರಿಂದ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಶಂಕೆಯಿದ ಭಾನುವಾರ ಬೆಳಗ್ಗೆಯಿಂದ ಕೋಸ್ಟ್ ಗಾರ್ಡ್, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಸ್ಥಳೀಯ ಮುಳುಗು ತಜ್ಞರಿಂದ ಶೋಧ ಕಾರ್ಯಚರಣೆ ನಡೆದಿತ್ತು.

    ಸೋಮವಾರ ಬೆಳಗ್ಗೆ ಸತತ 30 ಗಂಟೆಗಳ ಕಾರ್ಯಾಚರಣೆ ಬಳಿಕ ಸಿಕ್ಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ವಿನೋದ್ ರಾಜ್, ಸಿರಾಜ್ ಕೂಳೂರು, ಲಾರೆನ್ಸ್ ಹಾಗೂ ಡೇವಿಡ್ ತಂಡ ನದಿಯ ಮಧ್ಯೆ ಶೋಧ ಕಾರ್ಯ ನಡೆಸುತ್ತಿರುವಾಗ ಶವ ಪತ್ತೆಯಾಗಿದೆ. ಕೂಳೂರು ಸೇತುವೆಯಿಂದ 200 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡ ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ತರದ್ದಕ್ಕೆ ಗೃಹಿಣಿಯ ಕತ್ತು ಹಿಸುಕಿ ಕೊಲೆ

  • ಮೊಯಿದ್ದೀನ್ ಬಾವ  ಸಹೋದರನ ಶವ ಫಲ್ಗುಣಿ ನದಿಯಲ್ಲಿ ಪತ್ತೆ

    ಮೊಯಿದ್ದೀನ್ ಬಾವ ಸಹೋದರನ ಶವ ಫಲ್ಗುಣಿ ನದಿಯಲ್ಲಿ ಪತ್ತೆ

    ಮಂಗಳೂರು: ಮಾಜಿ ಕಾಂಗ್ರೆಸ್‌ ಶಾಸಕ ಮೊಯಿದ್ದೀನ್ ಬಾವ (Moinuddin Bawa) ಅವರ ಸಹೋದರ ಮುಮ್ತಾಜ್ ಅಲಿ (Mumtaz Ali) ಅವರ ಶವ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.

    ಕೂಳೂರಿನ ಸೇತುವೆಯ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ಇಂದು ನೀರಿನಲ್ಲಿ ವ್ಯಕ್ತಿಯೊಬ್ಬರ ತಲೆ ಕಾಣುತ್ತಿತ್ತು. ಸಮೀಪಕ್ಕೆ ತೆರಳಿದಾಗ ಇದು ಮುಮ್ತಾಜ್ ಅಲಿ ಅವರ ದೇಹ ಎನ್ನುವುದು ಖಚಿತವಾಗಿದೆ.

    ಫಲ್ಗುಣಿ ನದಿಯ ನೀರಿನಿಂದ ಶವವನ್ನು ಈಗ ಮೇಲಕ್ಕೆ ಎತ್ತಲಾಗಿದೆ. ಮುಮ್ತಾಜ್ ಅಲಿ ಅವರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರ ಇದು ದೃಢಪಡಲಿದೆ.

     

    ಬಾವಾ ಅವರ ತಮ್ಮ 52 ವರ್ಷದ ಮುಮ್ತಾಜ್ ಅಲಿ ಭಾನುವಾರ ಬೆಳಗ್ಗೆ ದಿಢೀರ್ ನಾಪತ್ತೆಯಾಗಿದ್ದರು. ಕೂಳೂರಿನ ಸೇತುವೆ ಬಳಿ ಅಪಘಾತ ನಡೆದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿತ್ತು. ಇದು ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು.

    ಮುಮ್ತಾಜ್ ಅಲಿ ಫಿಶ್‌ಮಿಲ್, ಕಾಲೇಜು ಸೇರಿದಂತೆ ಹಲವು ಉದ್ಯಮ ನಡೆಸಿಕೊಂಡಿದ್ದರು. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ಮುಮ್ತಾಜ್ ಅಲಿ ಶನಿವಾರ ರಾತ್ರಿ ಮನೆಯವರೊಂದಿಗೆ ಮುನಿಸಿಕೊಂಡು ಮಾತುಕತೆ ನಡೆಸಿದ್ದರು. ಭಾನುವಾರ ಬೆಳಗ್ಗಿನ ಜಾವ 3 ಗಂಟೆಗೆ ಯಾರಿಗೂ ತಿಳಿಯದಂತೆ ತನ್ನ ಬಿಎಂಡಬ್ಲ್ಯೂ ಕಾರನ್ನು (BMW Car) ಚಲಾಯಿಸಿಕೊಂಡು ಕದ್ರಿಯ ತನ್ನ ಮನೆಯಿಂದ ಪಣಂಬೂರು ಬಳಿ ಬಂದಿದ್ದರು. ಅಲ್ಲಿಂದ ವೇಗವಾಗಿ ಕೂಳೂರು ಹೈವೇಯಲ್ಲಿ ಬರುತ್ತಿದ್ದಾಗ ಖಾಸಗಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದಿದ್ದರು.

    ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ  ಫಲ್ಗುಣಿ ನದಿಯಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡ ಸೇರಿದಂತೆ ಈಜುತಜ್ಞ ಈಶ್ವರ್ ಮಲ್ಪೆ ತಂಡ ಮುಮ್ತಾಜ್ ಅಲಿಗಾಗಿ ಶೋಧ ಕಾರ್ಯ ನಡೆಸಿತ್ತು.

     

  • ಅಕ್ರಮ ಚಟುವಟಿಕೆಗಳ ತಾಣ ಈಗ ಸುಂದರ ಪಾರ್ಕ್- ಫ್ಲೈಓವರ್ ಕೆಳಗೆ ಉದ್ಯಾನವನ ನಿರ್ಮಾಣ

    ಅಕ್ರಮ ಚಟುವಟಿಕೆಗಳ ತಾಣ ಈಗ ಸುಂದರ ಪಾರ್ಕ್- ಫ್ಲೈಓವರ್ ಕೆಳಗೆ ಉದ್ಯಾನವನ ನಿರ್ಮಾಣ

    – ಮಂಗಳೂರಿನ ಗುರುಚಂದ್ರ ಹೆಗ್ಡೆ ನಮ್ಮ ಹೀರೋ

    ಮಂಗಳೂರು: ಪ್ರಧಾನಿ ಮೋದಿಯವರ ಸ್ವಚ್ಛ ಭಾರತದ ಪರಿಕಲ್ಪನೆಯಿಂದ ಪ್ರೇರಿತರಾದ ಉದ್ಯಮಿಯೊಬ್ಬರು ಅಕ್ರಮ ಚಟುವಟಿಕೆಗಳ ತಾಣ ಹಾಗೂ ಡಂಪಿಂಗ್ ಯಾರ್ಡ್ ಆಗಿದ್ದ ಹೈವೇ ಫ್ಲೈ ಓವರ್ ಕೆಳಗಿನ ಜಾಗವನ್ನು ಸುಂದರ ಪಾರ್ಕ್ ಮಾಡಿದ್ದಾರೆ. ಗಬ್ಬೆದ್ದು ನಾರುತ್ತಿದ್ದ ಆ ಸ್ಥಳ ಈಗ ಎಲ್ಲರ ಆಕರ್ಷಣೆಯಾಗಿದೆ. ಇದಕ್ಕೆ ಕಾರಣರಾದವರು ನಮ್ಮ ಮಂಗಳೂರಿನ ಪಬ್ಲಿಕ್ ಹೀರೋ.

    ಮಂಗಳೂರಿನ ಕೂಳೂರು ನಿವಾಸಿ ವಿ.ಜಿ.ಗುರುಚಂದ್ರ ಹೆಗ್ಡೆ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಟ್ರಾನ್ಸ್‍ಪೋರ್ಟ್ ಉದ್ಯಮ ಆರಂಭಿಸಿದ್ದಾರೆ. ಕೂಳೂರಿನಲ್ಲಿ ಚಿಕ್ಕದಾದ ಒಂದು ಕಚೇರಿಯನ್ನು ಮಾಡಿಕೊಂಡಿದ್ದಾರೆ. ಕಚೇರಿ ಎದುರಿನ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್‍ನ ಕೆಳಭಾಗ ಗೂಡಂಗಡಿಗಳ ತಾಣವಾಗಿತ್ತು. ಎಲ್ಲರೂ ಕಸ ಕಡ್ಡಿ ತಂದು ಇಲ್ಲಿ ಹಾಕುತ್ತಿದ್ದರು. ಇದರಿಂದ ದುರ್ವಾಸನೆ ಬೀರುತ್ತಿತ್ತು. ರಾತ್ರಿಯಾದ್ರೆ ಇಲ್ಲಿ ಅಕ್ರಮ ಚಟುವಟಿಕೆಗಳು ನಡೀತಿದ್ವು. ಇಂದು ಅದೇ ಜಾಗವನ್ನು ಗುರುಚಂದ್ರ ಅವರು ಸುಂದರ ಪಾರ್ಕ್ ಮಾಡಿದ್ದಾರೆ.

    ಪಾಲಿಕೆಯ ಅಧಿಕಾರಿಗಳ ಸಹಾಯದಿಂದ ಅಕ್ರಮ ಗೂಡಂಗಡಿಗಳನ್ನು ತೆರವು ಮಾಡಿಸಿದ್ದಾರೆ. 4 ಲಕ್ಷ ರೂಪಾಯಿ ಖರ್ಚು ಮಾಡಿ ಸುಂದರವಾದ ಪಾರ್ಕ್, ಫುಟ್‍ಪಾತ್, ವಾಕಿಂಗ್ ಟ್ರ್ಯಾಕ್ ಮಾಡಿಸಿದ್ದಾರೆ. ಫ್ಲೈ ಓವರ್ ಪಿಲ್ಲರ್‍ಗಳ ಮೇಲೆ ಸುಂದರ ಕಲಾಕೃತಿಗಳನ್ನು ಮೂಡಿಸಿದ್ದಾರೆ.

    ಗುರುಚಂದ್ರ ಹೆಗ್ಡೆಯವರು ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರವನ್ನೂ ನಡೆಸುತ್ತಿದ್ದಾರೆ. ಇವರಿಂದ ಪ್ರೇರೇಪಿತರಾದವರು ತಮ್ಮ ಊರಲ್ಲೂ ಹೀಗೆ ಸಮಾಜ ಸೇವೆ ಮಾಡಲು ಮುಂದಾಗಿದ್ದಾರೆ.

    https://www.youtube.com/watch?v=oua2LrHkXJ8