Tag: ಕೃತಿ

  • ಒಂದು ವಾರದಿಂದ ಬೆದರಿಕೆ  – ಪುತ್ರನಿಂದ ದೂರು, ಓಂ ಪ್ರಕಾಶ್‌ ಪತ್ನಿ ಅರೆಸ್ಟ್‌

    ಒಂದು ವಾರದಿಂದ ಬೆದರಿಕೆ – ಪುತ್ರನಿಂದ ದೂರು, ಓಂ ಪ್ರಕಾಶ್‌ ಪತ್ನಿ ಅರೆಸ್ಟ್‌

    – ತಾಯಿ, ತಂಗಿಯ ವಿರುದ್ಧ ಪುತ್ರ ಕಾರ್ತಿಕೇಶ್‌ ದೂರು

    ಬೆಂಗಳೂರು: ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ (Om Prakash) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್‌ಐಆರ್‌ ದಾಖಲಾಗಿದೆ.

    ಪುತ್ರ ಕಾರ್ತಿಕೇಶ್‌ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ (Pallavi), ಸಹೋದರಿ ಕೃತಿ (Kruthi) ವಿರುದ್ಧ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 103(ಕೊಲೆ) 3(ಒಂದೇ ಉದ್ದೇಶಕ್ಕಾಗಿ ಒಟ್ಟಾಗಿ ಎಸಗಿದ ಅಪರಾಧ) ಅಡಿ ಪ್ರಕರಣ ದಾಖಲಾಗಿದೆ.  ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಪತ್ನಿ ಪಲ್ಲವಿ ಮತ್ತು ಕೃತಿಯನ್ನು  ಪೊಲೀಸರು ಬಂಧಿಸಿದ್ದಾರೆ.

    ದೂರಿನಲ್ಲಿ ಏನಿದೆ?
    ಕಳೆದ ಒಂದು ವಾರದಿಂದ ತಾಯಿ ಪಲ್ಲವಿ ಕೊಲೆ ಬೆದರಿಕೆ ಹಾಕುತ್ತಿದ್ದರು. ಕೊಲೆ ಬೆದರಿಕೆ ಹಾಕುತ್ತಿದ್ದರಿಂದ ಅವರ ಸಹೋದರಿ ಸರಿತಾ ಮನೆಗೆ ತಂದೆ ಹೋಗಿದ್ದರು. ಎರಡು ದಿನಗಳ ಹಿಂದೆ ಕೃತಿ  ಸರಿತಾ ಅವರ ಮನೆಗ ಹೋಗಿ ಪೀಡಿಸಿ ಕರೆ ತಂದಿದ್ದಳು.

    ಏ.20ರ ಸಂಜೆ 5 ಗಂಟೆಯ ವೇಳೆ ನಾನು ದೊಮ್ಮಲೂರಿನಲ್ಲಿರುವ ಗಾಲ್ಫ್‌ ಅಸೋಸಿಯೇಷನ್‌ನಲ್ಲಿ ಇದ್ದಾಗ ನಮ್ಮ ಮನೆಯೆ ಪಕ್ಕದ ಮನೆಯವರು ಕರೆ ಮಾಡಿ ನಿಮ್ಮ ತಂದೆಯ ದೇಹ ಕೆಳಗಡೆ ಬಿದ್ದಿರುತ್ತದೆ ಎಂದು ತಿಳಿಸಿದರು.

    ಕೂಡಲೇ ದೊಮ್ಮಲೂರಿನಿಂದ ಹೊರಟು ಸಂಜೆ 5:45ಕ್ಕೆ ಮನೆಗೆ ಆಗಮಿಸಿದೆ. ಈ ವೇಳೆ ಸ್ಥಳದಲ್ಲಿ ಪೊಲೀಸರು ಮತ್ತು ಸಾರ್ವಜನಿಕರು ಇದ್ದರು. ತಂದೆಯ ತಲೆಯಿಂದ ರಕ್ತ ಬರುತ್ತಿತ್ತು. ದೇಹದ ಪಕ್ಕದಲ್ಲಿ ಬಾಟಲ್‌ ಮತ್ತು ಚಾಕು ಇತ್ತು. ನನ್ನ ತಾಯಿ ಪಲ್ಲವಿ ಮತ್ತು ತಂಗಿ ಕೃತಿ ಖಿನ್ನತೆಯಿಂದ ಬಳಲುತ್ತಿದ್ದು ಅವರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಅವರ ವಿರುದ್ಧ ಕಾನೂ ಕ್ರಮಗಳನ್ನು ಕೈಗೊಳ್ಳಬೇಕು.

  • ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು (Kendra Sahitya Akademi) ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು (Award) ಘೋಷಿಸಲಾಗಿದ್ದು ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ (Mudnakudu Chinnaswamy) ಅವರ ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ (Padmaraj Dandavati) ಅವರು ಅನುವಾದಿಸಿದ ಸೀತಾ: ರಾಮಾಯಣದ ಸಚಿತ್ರ ಮರುಕಥನ ಕೃತಿ ಆಯ್ಕೆಯಾಗಿದೆ.

    ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂ. ಹಾಗೂ ಸನ್ಮಾನ ಒಳಗೊಂಡಿದ್ದರೆ, ಅನುವಾದ ಪ್ರಶಸ್ತಿ 50 ಸಾವಿರ ರೂ ಹಾಗೂ ಸನ್ಮಾನಗಳು ಒಳಗೊಂಡಿರುತ್ತವೆ.

    ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದ್ದು ಇದನ್ನು ಗದಗದ ಲಡಾಯಿ ಪ್ರಕಾಶನವು ಪ್ರಕಟಿಸಿದೆ. ಪದ್ಮರಾಜ ದಂಡಾವತಿ ಅವರು ದೇವದತ್ತ ಪಟ್ಟನಾಯಕ ಅವರ ‘ಸೀತಾ’ ಕೃತಿಯನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದಿಸಿದ್ದು ಧಾರವಾಡದ ಮನೋಹರ ಗ್ರಂಥಮಾಲೆಯು ಈ ಕೃತಿಯನ್ನು ಪ್ರಕಟಿಸಿದೆ. ಇದನ್ನೂ ಓದಿ: ‘ಉಸಿರೇ ಉಸಿರೇ’ ಸಿನಿಮಾದಲ್ಲಿ ನಟಿಸಲಿದ್ದಾರೆ ಕಿಚ್ಚ ಸುದೀಪ್

    ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕರಾಗಿರುವ ಡಾ. ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ಈ ಪ್ರಶಸ್ತಿ ಆಯ್ಕೆಯು ನಡೆಯಿತು. ಅನುವಾದ ಆಯ್ಕೆ ಸಮಿತಿಯ ಜ್ಯೂರಿಗಳಾಗಿ ಜಗದೀಶ್ ಕೊಪ್ಪ, ಕಮಲಾಕರ ಭಟ್ಟ ಹಾಗೂ ಮೋಹನ್ ಕುಂಟಾರ ಕೆಲಸ ನಿರ್ವಹಿಸಿದ್ದರೆ ಮುಖ್ಯ ಪ್ರಶಸ್ತಿ ಆಯ್ಕೆ ಸಮಿತಿಗೆ ಡಾ.ಸಿ ನಾಗಣ್ಣ, ಪದ್ಮರಾಜ ದಂಡಾವತಿ ಹಾಗೂ ಚಂದ್ರಶೇಖರ ವಸ್ತ್ರದ ಅವರು ಜ್ಯೂರಿಗಳಾಗಿದ್ದರು.

    ಪ್ರಶಸ್ತಿಗಳನ್ನು 2023 ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ವಿಜೇತರರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್

    Live Tv
    [brid partner=56869869 player=32851 video=960834 autoplay=true]

  • ಸೆಟ್ ನಲ್ಲಿ ನಾಯಕಿಯ ಬದಲು ಇನ್ಯಾರಿಗೋ ಕಿಸ್ ಮಾಡಿದ್ರು ನಟ ಪ್ರೇಮ್

    ಸೆಟ್ ನಲ್ಲಿ ನಾಯಕಿಯ ಬದಲು ಇನ್ಯಾರಿಗೋ ಕಿಸ್ ಮಾಡಿದ್ರು ನಟ ಪ್ರೇಮ್

    ಬೆಂಗಳೂರು: ಇತ್ತೀಚೆಗೆ ನಿರ್ದೇಶಕ ಪ್ರಶಾಂತ್ ರಾಜ್ ನಿರ್ದೇಶಿಸಿರುವ ದಳಪತಿ ಸಿನಿಮಾ ಬಿಡುಗಡೆಗೊಂಡಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

    ದಳಪತಿಯ ಚಿತ್ರತಂಡ ಖಾಸಗಿ ರೇಡಿಯೋ ಕಾರ್ಯಕ್ರಮಕ್ಕೆ ಬಂದಿತ್ತು. ಈ ಕಾರ್ಯಕ್ರಯದಲ್ಲಿ ನಟ ಪ್ರೇಮ್ ಸೇರಿದಂತೆ ನಿರ್ದೇಶಕ ಪ್ರಶಾಂತ್ ರಾಜ್ ಮತ್ತು ನಟಿ ಕೃತಿ ಭಾಗವಹಿಸಿದ್ದರು. ಈ ವೇಳೆ ನಿರೂಪಕಿ ಸಿನಿಮಾಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದರು.

    ನಿರೂಪಕಿ ಪ್ರೇಮ್ ಗೆ ಸಿನಿಮಾದಲ್ಲಿ ಕಿಸ್ಸಿಂಗ್ ದೃಶ್ಯ ಬರುತ್ತದೆ ಎಂದು ಒಂದು ಪ್ರಶ್ನೆ ಕೇಳಿದ್ದಾರೆ. ಆಗ ನಟಿ ಕೃತಿ ಅವರು ಸಿನಿಮಾ ಶೂಟಿಂಗ್ ವೇಳೆ ನಡೆದ ಕಿಸ್ಸಿಂಗ್ ಘಟನೆಯ ಬಗ್ಗೆ ಹೇಳಿದ್ದಾರೆ.

    ಸಿನಿಮಾದಲ್ಲಿ ನಟ ಮತ್ತು ನಟಿಯ ಮಧ್ಯೆ ಒಂದು ಕಿಸ್ಸಿಂಗ್ ಸೀನ್ ನ ಶೂಟಿಂಗ್ ನಡೆಯುತ್ತಿತ್ತು. ಆಗ ನಾನು ಬೈಸಿಕಲ್ ಮೇಲೆ ಬರುತ್ತಿದ್ದೆ. ನನಗೆ ನಟ ಪ್ರೇಮ್ ಬಂದು ಕಿಸ್ ಮಾಡಬೇಕಿತ್ತು. ಆದರೆ ನನ್ನನ್ನ ನಿರ್ಲಕ್ಷಿಸಿ ನಿರ್ದೇಶಕ ಪ್ರಶಾಂತ್ ಸರ್ ಗೆ ಕಿಸ್ ಮಾಡಿದ್ರೂ ಎಂದು ಹೇಳಿದ್ದಾರೆ.

    ದಳಪತಿ ಸಿನಿಮಾದ ಮೊದಲ ಭಾಗವನ್ನು ಹೀರೋ ಮತ್ತು ಹೀರೋಯಿನ್ ಮಧ್ಯೆಯ ಲವ್ವಿಗೇ ಮೀಸಲಿಡಲಾಗಿದೆ. ಕ್ಯೂಟ್ ಎನಿಸೋ ಹೀರೋಯಿನ್ ಮೇಲೆ ಹುಡುಗನಿಗೆ ಭಲೇ ಪ್ರೀತಿ. ಪ್ರೀತಿಸುವ ಬಹುತೇಕರು ಮಾಡುವಂತೆ ಇಲ್ಲೂ ಕೂಡಾ ಹೀರೋ ಒಂದಿಷ್ಟು ಸುಳ್ಳು ಹೇಳಿ ಹುಡುಗಿಯನ್ನು ಪಟಾಯಿಸಿಕೊಂಡಿರುತ್ತಾನೆ. ದಿನ ಕಳೆದಂತೆ ಹುಡುಗಿಗೆ ಈತನ ಅಸಲಿಯತ್ತು ಗೊತ್ತಾಗಿಬಿಡುತ್ತದೆ. ಸುಳ್ಳು ಹೇಳಿದರೇನು ಹುಡುಗನಿಗೆ ಒಳ್ಳೇತನವಿದ್ದರೆ ಸಾಕು ಅಂತಾ ಮತ್ತೆ ಆಕೆ ಕೋಪವನ್ನು ತಣ್ಣಗಾಗಿಸಿಕೊಳ್ಳುವ ಹೊತ್ತಿಗೆ ಯಾರೂ ಊಹಿಸಲಾರದ ಟ್ವಿಸ್ಟ್ ನಡೆಯುತ್ತದೆ.

    ಪ್ರಶಾಂತ್ ರಾಜ್ ಅವರ ನಿರ್ದೇಶನಕ್ಕೆ ಚರಣ್ ರಾಜ್ ಸಂಗೀತ ಮತ್ತು ಸಂತೋಷ್ ರೈ ಪಾತಾಜೆ ಕ್ಯಾಮೆರಾ ಸಾಥ್ ನೀಡಿವೆ.