Tag: ಕೃತಿಚೌರ್ಯ

  • ತಡೆಯಾಜ್ಞೆ ತೆರವು – ಕಾಂತಾರ ವರಾಹರೂಪಂ ಹಾಡು ಬಳಕೆಗೆ ಅನುಮತಿ

    ತಡೆಯಾಜ್ಞೆ ತೆರವು – ಕಾಂತಾರ ವರಾಹರೂಪಂ ಹಾಡು ಬಳಕೆಗೆ ಅನುಮತಿ

    ತಿರುವನಂತಪುರಂ: ಕಾಂತಾರ(Kantara) ಚಿತ್ರದ ವರಾಹರೂಪಂ(Varaha Roopam) ಹಾಡಿನ ವಿವಾದದಲ್ಲಿ ಹೊಂಬಾಳೆ ಫಿಲ್ಮ್ಸ್‌ಗೆ ಮೊದಲ ಯಶಸ್ಸು ಸಿಕ್ಕಿದ್ದು, ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ.

    ಕೃತಿಚೌರ್ಯದ ಆರೋಪ ಮಾಡಿದ್ದ ‘ಥೈಕ್ಕುಡಂ ಬ್ರಿಡ್ಜ್’(Thaikkudam Bridge) ಅರ್ಜಿಯನ್ನು ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ, ವಿಚಾರಣೆಗೆ ನ್ಯಾಯವ್ಯಾಪ್ತಿ ಅಡ್ಡಿ ಎಂದು ಹೇಳಿ ಅರ್ಜಿಯನ್ನೇ ವಜಾಗೊಳಿಸಿದೆ.

    ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಿದ ವರಾಹರೂಪಂ ಹಾಡಿನ ಬರಹಗಾರ ಶಶಿರಾಜ್‌ ಕಾವೂರು, ಇಂದು ಕೆಳ ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಿದ  ಬಳಿಕ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದೆ ಮತ್ತು ವರಾಹರೂಪಂ ಹಾಡಿಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವು ಮಾಡಿದೆ. ನ್ಯಾಯ ಗೆದ್ದಿತು. ಜೈ ತುಳುನಾಡು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಿನಿಮಾಗಳ ಆಯ್ಕೆ, ದೇವರು ಬಗೆಗಿನ ಗ್ರಹಿಕೆ ಬಗ್ಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ಕೋಝಿಕ್ಕೋಡ್ ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡಿದ್ದರೂ ಪಾಲಕ್ಕಾಡ್‌ ನ್ಯಾಯಾಲಯದಲ್ಲಿ ಥೈಕ್ಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇನ್ನೂ ನಡೆಯುತ್ತಿದೆ. ಹೀಗಾಗಿ ಸದ್ಯಕ್ಕೆ ಮೂಲ ವರಾಹರೂಪಂ ಹಾಡನ್ನು ಬಳಸಲು ಸಾಧ್ಯವಿಲ್ಲ.

    ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್ ಕಾಂತಾರ ಸಿನಿಮದ ʼವರಾಹರೂಪಂʼ ಕೃತಿಚೌರ್ಯದ ಆರೋಪ ಮಾಡಿ ಕೇಸ್‌ ದಾಖಲಿಸಿತ್ತು. ಅರ್ಜಿಯನ್ನು ಮಾನ್ಯ ಮಾಡಿದ್ದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯ ಮತ್ತು ಕೋಝಿಕ್ಕೋಡ್ ಪ್ರಧಾನ ಜಿಲ್ಲಾ ನ್ಯಾಯಾಲಯ ಕಾಂತಾರ ನಿರ್ಮಾಪಕರಿಗೆ ವರಾಹರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಮುಂದಿನ ಆದೇಶದವರೆಗೆ ಸಿಂಕ್ರೊನೈಸ್ ಮಾಡಿದ ವರಾಹರೂಪಂ ಗೀತೆಯೊಂದಿಗೆ ಕಾಂತಾರ ಚಿತ್ರದ ಪ್ರದರ್ಶನ, ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ, ಸ್ಟ್ರೀಮಿಂಗ್ ಮಾಡದಂತೆ ಜಿಲ್ಲಾ ನ್ಯಾಯಾಲಯ ನಿರ್ಬಧ ವಿಧಿಸಿತ್ತು.

    ವಜಾಗೊಳಿಸಿದ್ದ ಹೈಕೋರ್ಟ್‌
    ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಬಳಕೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲ್ಮ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿತ್ತು. ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಭಾರತದ ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು.

    ಕೆಳ ನ್ಯಾಯಾಲಯಗಳು ಹೊರಡಿಸಿದ ಪ್ರತಿಯೊಂದು ಮಧ್ಯಂತರ ಆದೇಶಗಳಿಗೆ ನಾವು ಆದೇಶವನ್ನು ನೀಡಲು ಸಾಧ್ಯವಿಲ್ಲ. ಒಂದು ವೇಳೆ ಆದೇಶ ನೀಡಿದರೆ ಮೂಲ ನ್ಯಾಯವ್ಯಾಪ್ತಿಯ ನ್ಯಾಯಾಲಯಗಳು ಮತ್ತು ಮೇಲ್ಮನವಿ ನ್ಯಾಯಾಲಯಗಳು ನಿಷ್ಕ್ರಿಯವಾಗುತ್ತವೆ. ಈ ನ್ಯಾಯಾಲಯವು ಇಂತಹ ಕೇಸ್‌ಗಳಿಂದ ತುಂಬಿ ತುಳುಕುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತ್ತು. ಈ ಅರ್ಜಿಯನ್ನು ಈಗ ವಿಚಾರಣೆಗೆ ಪರಿಗಣಿಸಲಾಗದು ಎಂದ ಕೋರ್ಟ್‌ ಕಾನೂನಿನಲ್ಲಿ ಲಭ್ಯವಿರುವ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಹೊಂಬಾಳೆ ಫಿಲ್ಮ್ಸ್‌ನವರಿಗೆ ಸಲಹೆಯನ್ನು ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ತಂಡದ ವಿರುದ್ಧ ಹಣಕ್ಕಾಗಿ ನಾವು ಕದ್ದಿರುವ ಆರೋಪ ಮಾಡಿಲ್ಲ: ವಿಯಾನ್

    ‘ಕಾಂತಾರ’ ತಂಡದ ವಿರುದ್ಧ ಹಣಕ್ಕಾಗಿ ನಾವು ಕದ್ದಿರುವ ಆರೋಪ ಮಾಡಿಲ್ಲ: ವಿಯಾನ್

    ಕಾಂತಾರ (Kantara) ಸಿನಿಮಾದ ‘ವರಾಹ ರೂಪಂ’ ಹಾಡಿಗೆ ಕದ್ದಿರುವ ಆರೋಪ ಕೇಳಿ ಬಂದಿತ್ತು. ಈ ಹಾಡನ್ನು ತಮ್ಮ ನವರಸಂ (Navarasam) ಗೀತೆಯಿಂದ ಕದ್ದಿರುವುದಾಗಿ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಇದು ಭಾರೀ ಚರ್ಚೆಗೂ ಕಾರಣವಾಗಿತ್ತು. ದುಡ್ಡಿಗಾಗಿ ಅವರು ಆ ರೀತಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು. ಇದೀಗ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸದಸ್ಯರು ಉತ್ತರಿಸಿದ್ದು, ನಮಗೆ ಯಾವುದೇ ಹಣ ಬೇಕಿಲ್ಲ. ಕ್ರೆಡಿಟ್ ಕೊಟ್ಟು ಉಚಿತವಾಗಿ ಬಳಸಿಕೊಳ್ಳಬಹುದು ಎಂದು ತಂಡದ ಸದಸ್ಯ ವಿಯಾನ್ ಹೇಳಿಕೆ ನೀಡಿದ್ದಾರೆ.

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ (Varaha Rupam) ಹಾಡನ್ನು ಸಿನಿಮಾದಲ್ಲಿ ಬಳಸದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು, ಇದರಿಂದಾಗಿ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿತ್ತು. ಈ ಹಾಡನ್ನು ನಾನು ಯಾವುದರಿಂದಲೂ ಕದ್ದಿಲ್ಲ ಎಂದು ಈಗಾಗಲೇ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರೂ, ಕೇರಳದ ಕೋಝಿಕ್ಕೋಡ್ ಕೋರ್ಟ್ ಈ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ (Thaikudam Bidge Band) ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ತಮ್ಮ ಬ್ಯಾಂಡ್ ನ ಹಾಡಿನಿಂದ ಕದಿಯಲಾಗಿದೆ ಎಂದು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿಯೂ ತಿಳಿಸಿತ್ತು. ಹಾಗಾಗಿ ತಂಡವು ಕೋಝಿಕೋಡ್ ಕೋರ್ಟ್ ಗೆ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

    ಈ ಕುರಿತು ಸ್ವತಃ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ‘ನಮ್ಮ ನವರಸಂ ಮತ್ತು ವರಾಹ ರೂಪಂ ಹಾಡು ಅದೊಂದು ಹೋಲಿಕೆಯಲ್ಲಿ ನಮ್ಮ ಸಂಗೀತವನ್ನು ಕದಿಯಲಾಗಿದೆ’ ಎಂದು ಈ ಹಿಂದೆ ಬ್ಯಾಂಡ್ ಆರೋಪ ಮಾಡಿತ್ತು. ಕಾಂತಾರ ಟೀಮ್ ಹಾಡನ್ನು ಪ್ರೇರಿತವಾಗಿ ತಗೆದುಕೊಂಡಿಲ್ಲ, ಕೃತಿಚೌರ್ಯ ಮಾಡಿದೆ ಎಂದೂ ಹೇಳಿದ್ದರು. ಇದೀಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂತಾರ ‘ವರಾಹ ರೂಪಂ’  ಹಾಡಿಗೆ ಕೊಯಿಕ್ಕೋಡು ಕೋರ್ಟ್ ತಡೆಯಾಜ್ಞೆ

    ಕಾಂತಾರ ‘ವರಾಹ ರೂಪಂ’ ಹಾಡಿಗೆ ಕೊಯಿಕ್ಕೋಡು ಕೋರ್ಟ್ ತಡೆಯಾಜ್ಞೆ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ (Varaha Rupam) ಹಾಡನ್ನು ಸಿನಿಮಾದಲ್ಲಿ ಬಳಸದಂತೆ ತಡೆಯಾಜ್ಞೆ ನೀಡಲಾಗಿದ್ದು, ಇದರಿಂದಾಗಿ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿದೆ. ಈ ಹಾಡನ್ನು ನಾನು ಯಾವುದರಿಂದಲೂ ಕದ್ದಿಲ್ಲ ಎಂದು ಈಗಾಗಲೇ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು. ಆದರೂ, ಕೇರಳದ ಕೊಯಿಕ್ಕೋಡು  ಕೋರ್ಟ್ ಈ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಿದೆ.

    ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ (Thaikudam Bidge Band) ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ತಮ್ಮ ಬ್ಯಾಂಡ್ ನ ಹಾಡಿನಿಂದ ಕದಿಯಲಾಗಿದೆ ಎಂದು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿಯೂ ತಿಳಿಸಿತ್ತು. ಹಾಗಾಗಿ ತಂಡವು ಕೊಯಿಕ್ಕೋಡು ಕೋರ್ಟ್ ಗೆ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ: ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    ಈ ಕುರಿತು ಸ್ವತಃ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ‘ನಮ್ಮ ನವರಸಂ (Navarasam) ಮತ್ತು ವರಾಹ ರೂಪಂ ಹಾಡು ಅದೊಂದು ಹೋಲಿಕೆಯಲ್ಲಿ ನಮ್ಮ ಸಂಗೀತವನ್ನು ಕದಿಯಲಾಗಿದೆ’ ಎಂದು ಈ ಹಿಂದೆ ಬ್ಯಾಂಡ್ ಆರೋಪ ಮಾಡಿತ್ತು. ಕಾಂತಾರ ಟೀಮ್ ಹಾಡನ್ನು ಪ್ರೇರಿತವಾಗಿ ತಗೆದುಕೊಂಡಿಲ್ಲ, ಕೃತಿಚೌರ್ಯ ಮಾಡಿದೆ ಎಂದೂ ಹೇಳಿದ್ದರು. ಇದೀಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]