Tag: ಕೃಷಿಕಾಯ್ದೆ

  • ಎದೆಯಗಲ ಎಷ್ಟೇ ಇಂಚಿನದ್ದಾಗಿರ್ಲಿ, ಜನಶಕ್ತಿಯ ಎದುರು ಮಣಿಯಲೇಬೇಕು: ಸಿದ್ದರಾಮಯ್ಯ

    ಎದೆಯಗಲ ಎಷ್ಟೇ ಇಂಚಿನದ್ದಾಗಿರ್ಲಿ, ಜನಶಕ್ತಿಯ ಎದುರು ಮಣಿಯಲೇಬೇಕು: ಸಿದ್ದರಾಮಯ್ಯ

    ಬೆಂಗಳೂರು: ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾನೂನು ವಾಪಸ್ ಪಡೆದುಕೊಂಡಿರುವ ಕುರಿತಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲು ಸಾಲು ಟ್ವೀಟ್ ಮಾಡುವ ಮೂಲಕವಾಗಿ ರೈತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ತಿಳಿಸಿದ್ದಾರೆ. ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

    ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ

    ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ ಸ್ಪೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

  • ಕೃಷಿಕಾಯ್ದೆ ಪ್ರತಿಭಟನಾ ಸ್ಥಳದಲ್ಲಿ ಟ್ರಕ್ ಹರಿದು ಮೂವರು ಮಹಿಳೆಯರ ಸಾವು

    ಕೃಷಿಕಾಯ್ದೆ ಪ್ರತಿಭಟನಾ ಸ್ಥಳದಲ್ಲಿ ಟ್ರಕ್ ಹರಿದು ಮೂವರು ಮಹಿಳೆಯರ ಸಾವು

    ಚಂಡೀಗಢ: ಹರಿಯಾಣದ ಜಜ್ಜರ್ ರಸ್ತೆಯ ಟಿಕ್ರಿಯಲ್ಲಿ ರೈತರ ಪ್ರತಿಭಟನಾ ಸ್ಥಳದ ಬಳಿ ವೇಗವಾಗಿ ಬಂದ ಟ್ರಕ್ಕೊಂದು ಡಿವೈಡರ್ ಮೇಲೆ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.

     truck

    ಘಟನೆಯಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜಜ್ಜರ್ ರಸ್ತೆಯ ಮೇಲ್ಸೇತುವೆಯ ಕೆಳಗೆ ಕುಳಿತು ಆಟೋ ರಿಕ್ಷಾಕ್ಕಾಗಿ ಮಹಿಳೆಯರು ಕಾಯುತ್ತಿದ್ದ ವೇಳೆ ಬೆಳಗ್ಗೆ 6:30 ಕ್ಕೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮದ್ಯಕ್ಕೆ ಹತ್ತು ರೂ. ನೀಡದ್ದಕ್ಕೆ ಸ್ನೇಹಿತನನ್ನೇ ಕೊಂದ್ರು

    ಪ್ರಾಥಮಿಕ ವರದಿ ವರದಿಗಳ ಪ್ರಕಾರ ಮಹಿಳೆಯರು ಪಂಜಾಬ್‍ನ ಮನ್ಸಾ ಜಿಲ್ಲೆಯ ನಿವಾಸಿಗಳಾಗಿದ್ದು, ಪ್ರತಿಭಟನಾ ಸ್ಥಳದಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವುದಕ್ಕೆ ಕಾಯುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಇದೀಗ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೆಲಸ ಕೊಡಿಸುತ್ತೇವೆಂದು 400 ಮಂದಿಗೆ ಕೋಟಿ ಕೋಟಿ ವಂಚನೆ: ಇಬ್ಬರು ಅರೆಸ್ಟ್

  • ಕೃಷಿ ಕಾಯ್ದೆ ವಿರೋಧಿಸಿ, ಕಾಂಗ್ರೆಸ್ ಸೇರಿದ 100 ಬಿಜೆಪಿ ಕಾರ್ಯಕರ್ತರು

    ಕೃಷಿ ಕಾಯ್ದೆ ವಿರೋಧಿಸಿ, ಕಾಂಗ್ರೆಸ್ ಸೇರಿದ 100 ಬಿಜೆಪಿ ಕಾರ್ಯಕರ್ತರು

    ತಿರುವನಂತಪುರ: ನೂತನ ಕೃಷಿಕಾಯ್ದೆ ವಿರುದ್ಧ ರಾಷ್ಟ್ರವ್ಯಾಪ್ತಿ ಪ್ರತಿಭಟನೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಇದಕ್ಕೆ ಬೆಂಬಲ ನೀಡಿ ನಭಿಪುರ ಜಿಲ್ಲೆ 9 ಹಳ್ಳಿಯ 100 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ ಎಂದು ಭರೂಚ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅರುನ್ಸಿನ್ ರಾಣಾ ಶನಿವಾರ ಹೇಳಿದ್ದಾರೆ.

    ನಭೀಪುರ ಜಿಲ್ಲಾ ಪಂಚಾಯತ್ ಸದಸ್ಯ ಶಕೀಲ್ ಅಕುಜಿ ಅವರ ನೇತೃತ್ವದಲ್ಲಿ ಪರಿಮಲ್ಸಿಂಹ ರಾಣಾ ಅವರ ಸಮ್ಮುಖ ಭರೂಚ್‍ನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಅಧಿಕೃತವಾಗಿ ಶನಿವಾರ ಕಾಂಗ್ರೆಸ್ ಪಕ್ಷವನ್ನು ಸೇರಿದರು. ಹೊಸದಾಗಿ ಪಕ್ಷವನ್ನು ಸೇರಿದವರಲ್ಲಿ ಶೇಕಡ 70ಕ್ಕಿಂತ ಜನರು ಸ್ಥಳೀಯ ಪಾಟೀದಾರ್ ಪಟೇಲರು ಉಪ್ರಾಲಿ, ಸ್ಯಾಮ್ಲೋಡ್, ದಭಾಲಿ, ಭರ್ತಾನ, ಕವಿತಾ, ನಂದ್, ಪಿಪಾಲಿಯಾ, ಕರೇಲಾ ಮತ್ತು ಉಮ್ರಾ ಗ್ರಾಮಗಳಿಗೆ ಸೇರಿದ್ದು, ಉಳಿದವರು ಬುಡಕಟ್ಟು ಜನಾಂಗದವರಾಗಿದ್ದಾರೆ ಎಂದು ವರದಿಯಾಗಿದೆ.

    ಹೊಸಬರಿಗೆ ಬಿಜೆಪಿ ಪಕ್ಷದಲ್ಲಿ ಪ್ರಾಮುಖ್ಯತೆ ನೀಡಲಾಗುತ್ತಿಲ್ಲ ಮತ್ತು ಅವರ ಪ್ರದೇಶಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಹೀಗಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತಾರೆ ಎಂದು ಪರಿಮಾಲ್ಸಿಂಗ್ ಹೇಳಿದರು.

    ಉಪ್ರಾಲಿ ಗ್ರಾಮದ ಮಾಜಿ ಸರ್ಪಂಚ್ ಮಹೇಶ್ ಪಾಟೀಲ್(54) ಎಂಬವರು, 35 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತಿದ್ದೆ. ಆದ್ರೆ ಬಿಜೆಪಿ ಸರ್ಕಾರ ಜಾರಿಗೆ ತಂದ ಮೂರು ಹೊಸ ಕೃಷಿ ಕಾನೂನುಗಳನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದರು.

    ಈ ವಿಚಾರವಾಗಿ ಮಾತನಾಡಿದ ಬಿಜೆಪಿಯ ಭರೂಚ್ ಜಿಲ್ಲಾ ಘಟಕದ ಮುಖ್ಯಸ್ಥ ಮಾರುತಿ ಸಿನ್ಹ್ ಆಟೋದರಿಯಾ, ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ಜನ ಬಿಜೆಪಿ ಕಾರ್ಯಕರ್ತರು ಸೇರಿಕೊಂಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದ್ರೆ ಬಿಜೆಪಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವರು ಕಾಂಗ್ರೆಸ್ ಪಕ್ಷ ಸೇರಿಕೊಂಡಿಲ್ಲ ಎಂಬುವುದನ್ನು ಮಾತ್ರ ಹೇಳಬಲ್ಲೆ. ಈ ಕುರಿತಂತೆ ನಾನು ಪಕ್ಷದ ಸಾಂಸ್ಥಿಕ ಕಾರ್ಯದರ್ಶಿಯೊಂದಿಗೆ ಮಾತನಾಡಿ ಪರಿಶೀಲಿಸುತ್ತೇನೆ ಎಂದು ಹೇಳಿದರು.