Tag: ಕೃಷ್ಣಾ ಮೇಲ್ದಂಡೆ ಯೋಜನೆ

  • ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಿ: ಡಿಕೆಶಿ

    ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಿ: ಡಿಕೆಶಿ

    ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಗೆ (Upper Krishna Project) ಅಧಿಸೂಚನೆಗೆ ಒಮ್ಮೆ ಆಂಧ್ರ ಪ್ರದೇಶ ಮತ್ತೊಮ್ಮೆ ಮಹಾರಾಷ್ಟ್ರದವರು ಕೇಂದ್ರದ ಮೇಲೆ ಒತ್ತಡ ತಂದು ನಿಲ್ಲಿಸಿದರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

    ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಪಿಹೆಚ್ ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಗತಿಯ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

    ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರು ಈ ಯೋಜನೆಯ ಪರವಾಗಿದ್ದು, ಇದಕ್ಕೆ ಅಧಿಸೂಚನೆ ಹೊರಡಿಸಲೇಬೇಕು ಎಂದು ಸಂಬಂಧಪಟ್ಟ ರಾಜ್ಯಗಳ ಸಭೆ ನಡೆಸಲು ಎರಡು ಬಾರಿ ಪ್ರಯತ್ನಿಸಿದರು. ಆದರೆ ಎರಡು ರಾಜ್ಯದವರು ದೂರವಾಣಿ ಕರೆ ಮಾಡಿ ನಿಲ್ಲಿಸಿದರು. ಕೇಂದ್ರ ಸಚಿವರನ್ನು ನಾನು, ಮುಖ್ಯಮಂತ್ರಿಯವರು ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರು ಭೇಟಿಯಾಗಿ ಮನವಿ ಸಲ್ಲಿಸಿದ್ದೆವು ಎಂದರು. ಇದನ್ನೂ ಓದಿ: ಐದೇ ನಿಮಿಷದಲ್ಲಿ ಆಟೋ, ಇಲ್ಲವಾದಲ್ಲಿ 50 ರೂ. ಆಫರ್ ನೀಡಿ ವಂಚನೆ – ರಾಪಿಡೋಗೆ 10 ಲಕ್ಷ ದಂಡ

    ಯೋಜನೆ ಜಾರಿಗೆ 2 ಲಕ್ಷ ಕೋಟಿ ಬೇಕು:
    ಕೃಷ್ಣಾ ಮೇಲ್ದಂಡೆ ಯೋಜನೆ (3) ಜಾರಿಗೆ 2 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಇದು ಸಾಧ್ಯವಾಗುತ್ತದೆಯೇ? ಈ ಯೋಜನೆ ವಿಚಾರದಲ್ಲಿ ದೊಡ್ಡ ಹಗರಣವೇ ನಡೆಯುತ್ತಿದೆ. ಭೂಮಿ ಪರಿಹಾರ ವಿಚಾರದಲ್ಲಿ ವಕೀಲರುಗಳು ಹಣ ಮಾಡುತ್ತಿದ್ದಾರೆ ವಿನಃ ರೈತರಿಗೆ ಪರಿಹಾರ ದೊರೆಯುವುದಿಲ್ಲ. ಆದ ಕಾರಣಕ್ಕೆ ಪರಿಷತ್ ಸದಸ್ಯರಾದ ಪೂಜಾರ್ ಅವರು ಅಲ್ಲಿನ ರೈತರನ್ನು ಸಮಾಧಾನಪಡಿಸಿದರೆ ಹದಿನೈದು ದಿನಗಳಲ್ಲಿ ಒಂದು ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೋಗಲು ಭಯವಿದೆ – ಪೊಲೀಸರ ಮುಂದೆ ಹಲವು ಬೇಡಿಕೆ ಇಟ್ಟ ಸಮೀರ್‌

    ಸುಪ್ರೀಂ ಕೊರ್ಟ್‌ನಿಂದ ಎಕರೆಗೆ 8-10 ಕೋಟಿ ಪರಿಹಾರ ನೀಡಿ ಎಂದು ಆದೇಶವಾಗಿದೆ. ಇಷ್ಟು ಪರಿಹಾರ ಮೊತ್ತ ಬೆಂಗಳೂರಿನಲ್ಲಿಯೇ ಇಲ್ಲ. ಆದ ಕಾರಣಕ್ಕೆ ಕಂದಾಯ ಇಲಾಖೆಯಿಂದ ನೀರಾವರಿ ಇಲಾಖೆಗೆ ಭೂಮಿ ಹಸ್ತಾಂತರ ಕುರಿತ ವಿಚಾರವನ್ನು ಸಚಿವ ಸಂಪುಟದ ಮುಂದಿಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಎಂಕೆ, ಬಿಜೆಪಿ ಯಾವುದೇ ಪಕ್ಷದ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ – ಟಿವಿಕೆ ವಿಜಯ್ ಘೋಷಣೆ

    ಈಗಾಗಲೇ 75,563 ಎಕರೆ ಸಬ್ ಮರ್ಜ್ ಆಗಿದೆ. ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವುದು 2,543 ಎಕರೆಗೆ ಮಾತ್ರ. ವಿವಿಧ ಹಂತಗಳಲ್ಲಿ ಅಧಿಸೂಚನೆ ಹೊರಡಿಸಿರುವ ಅಡಿ 29,568 ಎಕರೆ ಭೂಮಿಯಿದೆ. 43,452 ಎಕರೆ ಭೂಮಿಗೆ ಅಧಿಸೂಚನೆ ಹೊರಡಿಸಲು ಬಾಕಿ ಇದೆ. ಕಾಲುವೆಗಳ ನಿರ್ಮಾಣಕ್ಕೆ 51 ಸಾವಿರ ಎಕರೆ ಬೇಕಾಗಿದೆ. ಇದರಲ್ಲಿ 23 ಸಾವಿರ ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಆರ್.ಸಿ ಭೂಮಿಗೆ 6,467 ಎಕರೆ ಬೇಕಾಗಿದೆ. ಇದರಲ್ಲಿ 50%ನಷ್ಟು ಎಂದರೆ 3,392 ಎಕರೆ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಹೆಚ್‌ಡಿಕೆ

    ಶೀತ ವಾತಾವರಣ ತಡೆಯಲು 16.42 ಕೋಟಿ ವೆಚ್ಚ:
    ಸದಸ್ಯ ಸೂರಜ್ ರೇವಣ್ಣ ಅವರು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಹೇಮಾವತಿ ಹಾಗೂ ಯಗಚಿ ಶೀತಪೀಡಿತವಲ್ಲ ಎಂದು ಘೋಷಣೆಯಾಗಿರುವ ಗ್ರಾಮಗಳು ಯಾವುವು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಶೀತ ವಾತಾವರಣ ತಡೆಯಲು 12 ಕಾಮಗಾರಿಗಳಿಗೆ 16.42 ಕೋಟಿ ವೆಚ್ಚ ಮಾಡಲಾಗಿದೆ. ಮತ್ತೊಂದು ಅಂದಾಜು ವರದಿ ಮಾಡಿಸಿ 27 ಕೋಟಿ ಬೇಕಾಗಿದೆ ಎಂದು ವರದಿ ಸಲ್ಲಿಸಿದ್ದಾರೆ. ನಾವು ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ಈ ಬಗ್ಗೆ ಗಮನಹರಿಸುತ್ತೇವೆ ಎಂದು ನುಡಿದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ ಕೇಸ್ – ಆರೋಪಿಯನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

    ಈ ಹಿಂದೆ ಶಾಸಕರುಗಳು ಜಲಸಂಪನ್ಮೂಲ ಇಲಾಖೆಯಿಂದ ರಸ್ತೆ, ಸಮುದಾಯ ಭವನ ಬೇಕು ಎಂದು ಶಿಫಾರಸು ಮಾಡುತ್ತಿದ್ದರು. ಈಗ ನಾನು ಅದನ್ನೆಲ್ಲಾ ನಿಲ್ಲಿಸಿದ್ದೇನೆ. ನಮ್ಮ ಇಲಾಖೆ ಹಣವನ್ನು ಕಾಲುವೆ ಅಭಿವೃದ್ಧಿ, ಪ್ರಮುಖ ಯೋಜನೆಗಳಿಗೆ ಮಾತ್ರ ಬಳಸುತ್ತಿದ್ದೇವೆ. ಈ ವಿಚಾರವಾಗಿಯೂ ಮತ್ತೊಂದು ವರದಿ ತರಿಸಿ ಗಮನಹರಿಸುತ್ತೇನೆ. ಸದಸ್ಯರು ಹೇಳಿರುವಂತೆ ನ್ಯಾಯಾಲಯದ ವಿಚಾರ ಪರಿಶೀಲನೆ ಮಾಡಲಾಗುವುದು. ಆನಂತರ ನಾವು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಜಿಎಸ್‌ಟಿ ಪರಿಷ್ಕರಣೆ – 12%, 28% ಸ್ಲ್ಯಾಬ್‌ ತೆಗೆಯಲು ಸಚಿವರ ಸಮಿತಿ ಒಪ್ಪಿಗೆ

  • ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್ 10 ರವರೆಗೆ ನೀರು: ತಿಮ್ಮಾಪೂರ

    ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್ 10 ರವರೆಗೆ ನೀರು: ತಿಮ್ಮಾಪೂರ

    ಬೆಂಗಳೂರು: ಜಲಾಶಯಕ್ಕೆ ಒಳಹರಿವು ಬಂದಿರುವುದರಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ (Krishna Upper Bank Project) ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್‌ಬಿ ತಿಮ್ಮಾಪೂರ (RB Timmapur) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಚಿವರು, ಜಲಾಶಯಕ್ಕೆ ಒಳ ಹರಿವು ಬಂದಿರುವುದರಿಂದ ಚಾಲು-ಬಂದ್ ಪದ್ದತಿಯನ್ನು ಪರಿಷ್ಕರಿಸಿ 14 ದಿನ ನೀರು ಚಾಲು ಹಾಗೂ 10 ದಿನದ ಬದಲಿಗೆ 8 ದಿನ ಮಾತ್ರ ಬಂದ್ ಪದ್ದತಿಯನ್ನು ಅನುಸರಿಸಿ ಅಕ್ಟೋಬರ್ 17ರ ಬದಲಿಗೆ ಅಕ್ಟೋಬರ್ 14ನೇ ತಾರೀಖಿನಿಂದಲೇ ನೀರು ಚಾಲು ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೇ ಮುಂಗಾರು ಹಂಗಾಮಿಗೆ ನವೆಂಬರ್ 23 ರವರೆಗೂ ನೀರು ಹರಿಸಲು ಕೈಗೊಂಡಿದ್ದ ನಿರ್ಣಯದ ಬದಲಾಗಿ ಡಿಸೆಂಬರ್ 10 ರವರೆಗೂ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಳೇ ವೈಷಮ್ಯಕ್ಕೆ 9 ಎಕರೆ ಹತ್ತಿ ಬೆಳೆ ನಾಶ – ಲಕ್ಷಾಂತರ ರೂ. ಬೆಳೆ ಕಳೆದುಕೊಂಡ ರೈತರು

    ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿಗಾಗಿ ನೀರು ಹರಿಸುವುದನ್ನು ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿ ರೈತರ ಹಿತಕಾಪಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಸುಮಾರು 6 ಲಕ್ಷ ಬೆಕ್ ಪ್ರದೇಶದ ರೈತರಿಗೆ ಅನುಕೂಲವಾಗಲಿದೆ ಎಂದು ಸಚಿವ ಆರ್‌ಬಿ ತಿಮ್ಮಾಪೂರ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಚಾಮುಂಡೇಶ್ವರಿ ಬಳಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾ ವಿರೋಧ ಮಾಡಬೇಕು: ಪ್ರತಾಪ್ ಸಿಂಹ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಜೆಟ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯ – ಸಿಎಂರಿಂದ ಸಿಗುತ್ತಾ ಪರಿಹಾರ?

    ಬಜೆಟ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯ – ಸಿಎಂರಿಂದ ಸಿಗುತ್ತಾ ಪರಿಹಾರ?

    ಬಾಗಲಕೋಟೆ: ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಅಧಿಕಾರದ ಗದ್ದುಗೆಗೆ ಏರಿದ ಕಾಂಗ್ರೆಸ್ (Congress) ಪಕ್ಷ, ಸದ್ಯ ಆಡಳಿತದಲ್ಲಿದೆ. ರಾಜ್ಯದ ದೊರೆಯಾಗಿ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ. ಆದರೆ ಇದೇ ಕಾಂಗ್ರೆಸ್ ನಾಯಕರು ಚುನಾವಣೆ ಪೂರ್ವದಲ್ಲಿ ಜಿಲ್ಲೆಯ ಜನರಿಗೆ ಅನೇಕ ಭರವಸೆಗಳನ್ನು ನೀಡಿದ್ದರು. ಆದರೆ ಆ ಭರವಸೆಗಳು ಕೇವಲ ಮಾತಾಗಿ ಉಳಿದಿವೆ.

    ಮುಳುಗಡೆ ಎನ್ನುವ ಹಣೆ ಪಟ್ಟಿ ಕಟ್ಟಿಕೊಂಡಿರುವ ವಿಜಯಪುರ-ಬಾಗಲಕೋಟೆ ಅಖಂಡ ಜಿಲ್ಲೆಗೆ ರಾಜ್ಯದ ಸಿಎಂ ಸಿದ್ದರಾಮಯ್ಯ ಇದೇ ಸೆಪ್ಟೆಂಬರ್ 2 ರಂದು ಆಲಮಟ್ಟಿ ಅಣೆಕಟ್ಟೆಗೆ ಗಂಗಾ ಪೂಜೆ ಮತ್ತು ಬಾಗಿನ ಅರ್ಪಿಸಲು ಆಗಮಿಸಲಿದ್ದಾರೆ. ಈ ನಡುವೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗೆ ಒತ್ತು ನೀಡಿ ಉತ್ತರ ಕರ್ನಾಟಕ ಜ್ವಲಂತ ಸಮಸ್ಯೆಗಳ ಪರಿಹಾರ ನೀಡದೇ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಜಿಲ್ಲೆಯ ಜನರಲ್ಲಿದೆ.

    ಬಾಗಲಕೋಟೆ ಜಿಲ್ಲೆಯ ಕೃಷ್ಣ ಮೇಲ್ದಂಡೆ (Upper Krishna Project) 3ನೇ ಹಂತದ ಭೂಸ್ವಾಧೀನ ಕಾರ್ಯ ಆಮೆ ಗತಿಯಲ್ಲಿ ಸಾಗುತ್ತಿದೆ. ಮುಳುಗಡೆ ಸಂತ್ರಸ್ತರಿಗೆ ಶಾಶ್ವಾತ ಸೂರು ಕಲ್ಪಿಸುವುದು ಹಾಗೂ ಪರಿಹಾರ ಘೋಷಣೆ ಹೀಗೆ ಸಮಸ್ಯೆಗಳ ಸರಮಾಲೆ ಜಿಲ್ಲೆಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯಗೆ ಸವಾಲಾಗಿ ಪರಿಣಮಿಸಲಿದೆ.

    ನಮ್ಮ ಸರ್ಕಾರದ ಅವಧಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ಹೇಳಿಕೊಂಡಿದ್ದ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಘೋಷಣೆಗಳ ನೆಪ ಹೇಳಿ ಮುಳುಗಡೆ ಪ್ರದೇಶದ ಭೂಸ್ವಾಧೀನ, ಪುನರ್ ವಸತಿ, ಪುನರ್ ನಿರ್ಮಾಣಕ್ಕಾಗಿ ಬಜೆಟ್‌ನಲ್ಲಿ ಯಾವುದೇ ವಿಶೇಷ ಅನುದಾನ ಇಡದೇ, ಜಿಲ್ಲೆಯ ಜನರು ನಿರಾಸೆಗೊಳ್ಳುವಂತೆ ಮಾಡಿದೆ. ಇನ್ನು 2014-15ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ (ಮೆಡಿಕಲ್) ಕಾಲೇಜು ಘೋಷಣೆ ಮಾಡಿದ್ದರು. ಆದರೆ ಇಂದಿಗೂ ಅದರ ಕಾರ್ಯ ಒಂದು ಸಣ್ಣ ಪ್ರಗತಿ ಕಂಡಿಲ್ಲ.

    ಮೆಡಿಕಲ್ ಕಾಲೇಜಿಗೆ ಬೇಕಾದ ಭೂಮಿ ಈಗಾಗಲೇ 12 ಎಕರೆ ಜಾಗ ಕಾಯ್ದಿರಿಸಿ ಇಟ್ಟಿದ್ದರೂ ಸಹ ಕಟ್ಟಡ ಕಾರ್ಯವಾಗಲಿ ಅಥವಾ ಯಾವುದೇ ಕಾರ್ಯ ಶುರುವಾಗಿಲ್ಲ. ಬಜೆಟ್‌ನಲ್ಲಿ ಅನುದಾನ ಒದಗಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಹೀಗೆ ಹಲವಾರು ಸವಾಲುಗಳು ಬರುವ ಸೆಪ್ಟೆಂಬರ್ 2ರಂದು ಜಿಲ್ಲೆಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಎದುರಾಗಲಿವೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ಧ – ಸುಪ್ರೀಂ ಕೋರ್ಟ್‍ಗೆ ಕೇಂದ್ರ

    ಹೀಗಿರುವಾಗಲೇ ಕೃಷ್ಣೆಯ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆಶಿ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳ ಜೊತೆ ಜಂಟಿ ಸಭೆ ನಡೆಸಲಿದ್ದಾರೆ. ಹೀಗಾಗಿ ಈ ಎಲ್ಲ ಸವಾಲುಗಳನ್ನು ಸಿಎಂ, ಡಿಸಿಎಂ ಹೇಗೆ ಎದುರಿಸುತ್ತಾರೆ? ಮುಳುಗಡೆ ಜಿಲ್ಲೆಯ ಜನರಿಗೆ ಸಿಹಿ ಸುದ್ದಿಯನ್ನು ಕೊಡ್ತಾರಾ? ಇಲ್ಲವೇ ಕೇವಲ ಬಾಗಿನ ಅರ್ಪಣೆ ಮಾಡಿ ಹೋಗ್ತಾರಾ? ಎಂಬುದನ್ನು ಕಾಯ್ದು ನೋಡಬೇಕಿದೆ. ಇದನ್ನೂ ಓದಿ: ಮಾರ್ಗ ಮಧ್ಯೆ ಕೈಕೊಟ್ಟ ಅಂಬುಲೆನ್ಸ್ – ಆನೆ ದಾಳಿಯಿಂದ ಗಾಯಗೊಂಡಿದ್ದ ಶಾರ್ಪ್ ಶೂಟರ್ ಅರಣ್ಯ ಸಿಬ್ಬಂದಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೀರಿಗಾಗಿ ಕೂಡಲಸಂಗಮದಿಂದ ರಾಜಭವನಕ್ಕೆ ರೈತರ ಪಾದಯಾತ್ರೆ: ವೈಎಸ್‍ವಿ ದತ್ತಾ

    ನೀರಿಗಾಗಿ ಕೂಡಲಸಂಗಮದಿಂದ ರಾಜಭವನಕ್ಕೆ ರೈತರ ಪಾದಯಾತ್ರೆ: ವೈಎಸ್‍ವಿ ದತ್ತಾ

    – ಯುಕೆಪಿಯನ್ನ ರಾಷ್ಟ್ರಿಯ ನೀರಾವರಿ ಯೋಜನೆಯಾಗಿ ಘೋಷಿಸಲು ಆಗ್ರಹ
    – ದೇವೇಗೌಡರು ಅನುಮತಿ ಕೊಟ್ಟರೆ ನೀರಾವರಿಗಾಗಿ ಪಾದಯಾತ್ರೆ

    ರಾಯಚೂರು: ಸಮುದಾಯದ ಹಿತಕ್ಕಾಗಿ ಪಾದಯಾತ್ರೆ ಮಾಡುವ ಬದಲು ರೈತರ ಹಿತಕ್ಕೆ ಹೋರಾಟ ಮಾಡಬೇಕಿದೆ ದೇವೇಗೌಡರು ಅನುಮತಿ ನೀಡಿದರೆ ನೀರಾವರಿಗಾಗಿ ಪಾದಯಾತ್ರೆಗೆ ನಾವು ಸಿದ್ಧರಿದ್ದೇವೆ ಎಂದು ಜೆಡಿಎಸ್ ಮುಖಂಡ ವೈಎಸ್‍ವಿ ದತ್ತಾ ಹೇಳಿದರು.

    ಜಿಲ್ಲೆಯ ದೇವದುರ್ಗದಲ್ಲಿ ಆಯೋಜಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೀಸಲಾತಿ ಪಾದಯಾತ್ರೆ ಮಾಡುತ್ತಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಪಾದಯಾತ್ರೆ ಮಾಡಲು ನಾವು ಸಿದ್ಧರಿದ್ದೇವೆ. ಕೃಷ್ಣ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ನೀರಾವರಿ ಯೋಜನೆಯನ್ನಾಗಿ ಘೋಷಣೆ ಮಾಡಬೇಕು. ಸುಪ್ರೀಂ ಕೋರ್ಟ್ ನಲ್ಲಿ ಎಸ್‍ಎಲ್‍ಪಿ ಅರ್ಜಿ ವಿಲೇವಾರಿ ಮಾಡಿ ಯೋಜನೆಯ ಲಾಭ ರೈತರಿಗೆ ಸಿಗುವಂತೆ ಮಾಡುವ ಕಡೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

    ಬಸವ ಜಯಂತಿ ದಿನ ಬಸವಕಲ್ಯಾಣದಿಂದ ಬೆಂಗಳೂರಿನ ರಾಜ ಭವನದವರೆಗೆ ಪಾದಯಾತ್ರೆ ಮಾಡೋಣ. ಕೇಂದ್ರ ಸರ್ಕಾರ ಕೃಷ್ಣ ಮೇಲ್ದಂಡೆ ಯೋಜನೆ ಲಾಭ ರೈತರಿಗೆ ಸಿಗುವಂತೆ ಮಾಡಲು ಆಗ್ರಹಿಸೋಣ. ಪಾದಯಾತ್ರೆಯನ್ನು ಉದ್ಘಾಟಿಸುವ ಅರ್ಹತೆಯಿರುವ ಏಕೈಕ ವ್ಯಕ್ತಿ ಮಾಜಿ ಪ್ರಧಾನಿ ದೇವೇಗೌಡ. ದೇವೇಗೌಡರು ಅನುಮತಿ ನೀಡಿದರೆ ಪಾದಯಾತ್ರೆಗೆ ಎಲ್ಲ ರೈತರು ಸಿದ್ಧರಾಗೋಣ ಎಂದರು.

    ದೇವೇಗೌಡರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟಲಾಗಿದೆ. ಜೇನು ತುಪ್ಪದ ಬಾಟಲಿ ಮೇಲೆ ಕಿಡಿಗೇಡಿಗಳು ವಿಷದ ಬಾಟಲಿ ಅಂತ ಸ್ಟಿಕರ್ ಅಂಟಿಸಿದಂತೆ, ಉತ್ತಮ ಕೆಲಸ ಮಾಡಿದ ದೇವೇಗೌಡರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟಲಾಗಿದೆ ಎಂದು ವೈಎಸ್‍ವಿ ದತ್ತಾ ಸಮಾವೇಶದಲ್ಲಿ ವಿಷಾದ ವ್ಯಕ್ತಪಡಿಸಿದರು.

    ದೇವೇಗೌಡರು ಜಿಲ್ಲೆಗೆ ಎನ್‍ಆರ್‍ಬಿಸಿ ತಂದಿದ್ದಕ್ಕೆ ದೇವದುರ್ಗದ ಗಾಣಧಾಳ ಗ್ರಾಮದ ರೈತ ಪ್ರಭಾಕರ್ ರೆಡ್ಡಿ ದೇವೇಗೌಡರ ಪ್ರತಿಮೆ ಮಾಡಿ ಪೂಜಿಸುತ್ತಿದ್ದಾರೆ. ಆ ರೈತನ ಅಭಿಮಾವೇ ಇಂದಿನ ಕಾರ್ಯಕ್ರಮ ಆಯೋಜನೆಗೆ ಕಾರಣವಾಗಿದೆ ಎಂದು ದತ್ತಾ ಹೇಳಿದರು.

    ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗಾಗಿ ಆಯೋಜಿಸಿದ್ದ ಸಮಾವೇಶದಲ್ಲಿ ದೇವದುರ್ಗ ತಾಲೂಕಿನ ನೂತನ ಅಧ್ಯಕ್ಷರ ಪದಗ್ರಹಣ ನಡೆಯಿತು. ಬುಡ್ಡನಗೌಡ ಪಾಟೀಲ್ ನೂತನ ತಾಲೂಕಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಸಮಾವೇಶದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಶಾಸಕರಾದ ವೆಂಕಟರಾವ್ ನಾಡಗೌಡ, ವೆಂಕಟಪ್ಪ ನಾಯಕ್, ಕೋನರೆಡ್ಡಿ, ಬಂಡೆಪ್ಪ ಕಾಶಂಪುರ ಸೇರಿಸಂತೆ ಹಲವರು ಭಾಗವಹಿಸಿದ್ದರು.

  • ಕೊರೊನಾ ದೊಡ್ಡ ರೋಗವೇ ಅಲ್ಲ: ಸಚಿವ ರಮೇಶ್ ಜಾರಕಿಹೊಳಿ

    ಕೊರೊನಾ ದೊಡ್ಡ ರೋಗವೇ ಅಲ್ಲ: ಸಚಿವ ರಮೇಶ್ ಜಾರಕಿಹೊಳಿ

    – ಸಾಮಾಜಿಕ ಅಂತರ ಕಾಪಾಡಿ ಎಂದು, ತಾವೇ ನೂಕುನುಗ್ಗಲಿನಲ್ಲಿ ಭಾಗಿ
    – ಜನಜಂಗುಳಿ ಮಧ್ಯೆ ಮಾಸ್ಕ್ ಧರಿಸದೆ ಸನ್ಮಾನ ಮಾಡಿಸಿಕೊಂಡ ರಮೇಶ್ ಜಾರಕಿಹೊಳಿ

    ರಾಯಚೂರು: ಕೊರೊನಾ ದೊಡ್ಡ ರೋಗವೇ ಅಲ್ಲ, ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿದರೆ ಮಾತ್ರ ಕಡಿಮೆ ಆಗುತ್ತದೆ ಎಂದು ಹೇಳುತ್ತಲೇ, ಸ್ವತಃ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೂಕುನುಗ್ಗಲಿನಲ್ಲಿ ಭರ್ಜರಿ ಸನ್ಮಾನ ಮಾಡಿಸಿಕೊಂಡಿದ್ದಾರೆ.

    ರಾಯಚೂರಿನ ಮಸ್ಕಿಯ ಬುದ್ದಿನ್ನಿಯಲ್ಲಿ ನಡೆದ ನಂದವಾಡಗಿ ಏತನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮದ ಬಳಿಕ ವೇದಿಕೆಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೆ ಅವರ ಬೆಂಬಲಿಗರು ಸಚಿವರಿಗೆ ಸನ್ಮಾನ ಮಾಡಿದ್ದಾರೆ. ಈ ಮೂಲಕ ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ನಡೆದುಕೊಂಡಿದ್ದಾರೆ.

    ಈ ವೇಳೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲ, ಎಷ್ಟೇ ಲಾಕ್‍ಡೌನ್ ಮಾಡಿದರೂ, ಜನರು ಸಹಕಾರ ನೀಡಿದಾಗ ಮಾತ್ರ ಕೊರೊನಾ ತಡೆಯಲು ಸಾಧ್ಯ. ಜನರು ಸ್ವಯಂ ಪ್ರೇರಿತರಾಗಿ ಸಾಮಾಜಿಕ ಅಂತರ ಕಾಪಾಡಬೇಕು. ಪ್ರಧಾನಿಯವರ ಮಾರ್ಗದರ್ಶನ ಹಾಗೂ ಯಡಿಯೂರಪ್ಪನವರ ಸೂಚನೆ ಪಾಲನೆ ಮಾಡಿದರೆ, ಅಲ್ಲದೆ ವೈದ್ಯರ ಸಲಹೆಗಳನ್ನು ಜನ ಪಾಲಿಸಿದರೆ ಕೊರೊನಾ ದೊಡ್ಡ ರೋಗ ಅಲ್ವೇ ಅಲ್ಲ ಎಂದು ಹೇಳಿದರು.

    ಕೊರೊನಾದಿಂದ ಒಬ್ಬ ಸತ್ತರು ಸಾವೇ, ಸಾವಿರ ಸತ್ತರು ಸಾವೇ, ಸಾವು ಕಡಿಮೆ ಆಗಬೇಕು ಎಂಬುವುದು ಎಲ್ಲರ ಭಾವನೆ. ಯೂರೋಪ್ ದೇಶಕ್ಕೆ ಹೋಲಿಸಿದರೆ ನಮ್ಮ ದೇಶದಲ್ಲಿ ಜನರು ಗಟ್ಟಿಯಿದ್ದಾರೆ. ಕೊರೊನಾ ತಡೆಗೆ ದೇವರು ಸಹಕಾರ ನೀಡುತ್ತಾನೆ, ಎಲ್ಲವೂ ಸರಿ ಆಗುತ್ತೆ ಎಂದರು. ಆದರೆ ಇಷ್ಟೆಲ್ಲಾ ಹೇಳಿದ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಮದಲ್ಲಿ ತಾವೇ ನಿಯಮಗಳನ್ನು ಉಲ್ಲಂಘನೆ ಮಾಡಿದ್ದು, ಜನ ಖಂಡಿಸಿದ್ದಾರೆ.

    ಕಾಮಗಾರಿ ಕುರಿತು ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಆಗಿರುವ ಎಲ್ಲ ಕಾಮಗಾರಿಗಳನ್ನು ಆದಷ್ಟು ಶೀಘ್ರ ಮುಗಿಸಲು ಯತ್ನಿಸುತ್ತೇವೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಕಾಮಗಾರಿ ಮುಗಿಸಲು ಪ್ರಯತ್ನ ಮಾಡಲಾಗುವುದು. ನಾರಾಯಣಪುರ ಬಲದಂಡೆ ದುರಸ್ಥಿ ಕಾಮಗಾರಿಯಲ್ಲಿ ಕಳಪೆ ಆಗಿರುವುದನ್ನು ಸಹಿಸುವುದಿಲ್ಲ. ಆರೋಪದ ಕುರಿತು ಸಮಗ್ರ ತನಿಖೆ ಮಾಡಿಸಲಾಗುವುದು. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಅಕ್ರಮ ನೀರಾವರಿ ಬಗ್ಗೆಯೂ ಸಮಗ್ರ ತನಿಖೆ ಮಾಡಿಸಲಾಗುವುದು ಎಂದರು.

    ರಾಯಚೂರು, ಕೊಪ್ಪಳ, ಯಾದಗಿರಿಯಲ್ಲಿ ಹಲವು ನೀರಾವರಿ ಯೋಜನೆ ಜಾರಿ ಮಾಡಲಾಗುವುದು. ಪ್ರತಾಪ್ ಗೌಡರನ್ನು ಗೆಲ್ಲಿಸಿದರೆ ನಾನು 5ಂ ಕಾಲುವೆ ಮಾಡಿಕೊಡುತ್ತೇನೆ. ಯಾವುದೇ ತಾಂತ್ರಿಕ ಸಮಸ್ಯೆ ಇದ್ದರೂ ಪರಿಹಾರ ಮಾಡಲಾಗುವುದು. ಪ್ರತಾಪ್ ಗೌಡ ಗೆದ್ದರೆ ಸಚಿವರೂ ಆಗ್ತಾರೆ. ರಾಯಚೂರು ಉಸ್ತುವಾರಿ ಆಗ್ತಾರೆ. ಬಿಜೆಪಿ ಸರ್ಕಾರ ಬರುವುದಕ್ಕೆ ಪ್ರತಾಪ್ ಗೌಡ ಪಾಟೀಲ್‍ರ ಪಾತ್ರ ಮಹತ್ವದ್ದಾಗಿದೆ. ಈ ಭಾಗದ ಎಲ್ಲ ನೀರಾವರಿ ಯೋಜನೆಗಳನ್ನು ಮಾಡಲಾಗುವುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

  • ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಮನವಿ – ಕಾರಜೋಳ

    ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಮನವಿ – ಕಾರಜೋಳ

    ಬಾಗಲಕೋಟೆ: ಹಲವು ದಿನಗಳಿಂದ ಉಂಟಾಗಿರುವ ಪ್ರವಾಹದಿಂದ ಉತ್ತರ ಕರ್ನಾಟಕದ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗಿದೆ. ಅಲ್ಲದೆ, ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆಯೂ ಮನವಿ ಮಾಡಿದ್ದೇವೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.

    ದೆಹಲಿಯಿಂದ ವಿಡಿಯೋ ಮೂಲಕ ಸಾರ್ವಜನಿಕರಿಗೆ ಸಂದೇಶ ಕಳುಹಿಸಿರುವ ಗೋವಿಂದ್ ಕಾರಜೋಳ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದೇವೆ. ಆದರೆ ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಅಧಿಕಾರಿಗಳೊಂದಿಗೆ ಸಹಕರಿಸಿ ಸುರಕ್ಷಿತ ಸ್ಥಳಕ್ಕೆ ತೆರಳಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

    ಘಟಪ್ರಭಾ ನದಿಯಲ್ಲಿ 1.60 ಲಕ್ಷಕ್ಕಿಂತಲೂ ಹೆಚ್ಚು ನೀರು, ಹರಿಯುತ್ತಿದೆ. ಪ್ರವಾಹ ಹೆಚ್ಚುತ್ತಿದೆ. ನದಿ ದಡದ ಹಳ್ಳಿ ಜನತೆ, ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಸರ್ಕಾರದಿಂದ ಎಲ್ಲ ಶಾಲಾ ಕಾಲೇಜುಗಳಲ್ಲಿ ಗಂಜಿ ಕೇಂದ್ರ ತೆರೆಯಲಾಗಿದೆ. ಅಲ್ಲದೆ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಜಾನುವರುಗಳಿಗೂ ಮೇವಿನ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಯಾವುದಕ್ಕೂ ಭಯ ಪಡದೆ ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಹಕರಿಸಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಸಹ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆಯೂ ಮನವಿ ಮಾಡಿದ್ದೇವೆ. ಆದರೆ ತಕ್ಷಣಕ್ಕೆ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಘಟಪ್ರಭಾದಲ್ಲಿ ಹಿಂದೆದು ಕಂಡರಿಯದ ಪ್ರವಾಹ ಬಂದಿದೆ. ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಹೋಗಬೇಕು. ಮೈಮರೆತು ಕೂರದೇ ಅಧಿಕಾರಿಗಳೊಂದಿಗೆ ಸಹಕರಿಸಿ ಎಂದು ತಿಳಿಸಿದ್ದಾರೆ.

  • ಅಧಿಕಾರಿಗಳ ಎಡವಟ್ಟು- ಕಾಲುವೆಗೆ ಹರಿಯಬೇಕಿದ್ದ ನೀರು ಮನೆಗೆ ನುಗ್ಗಿತು

    ಅಧಿಕಾರಿಗಳ ಎಡವಟ್ಟು- ಕಾಲುವೆಗೆ ಹರಿಯಬೇಕಿದ್ದ ನೀರು ಮನೆಗೆ ನುಗ್ಗಿತು

    ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳ ಎಡವಟ್ಟಿನಿಂದ ಕಾಲುವೆಗೆ ಹರಿಯಬೇಕಿದ್ದ ನೀರು ಸಾರ್ವಜನಿಕರ ಮನೆಗಳಿಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ನಡೆದಿದೆ.

    ಆಲಮೇಲ ಪಟ್ಟಣದ ಬಸವ ನಗರದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಕೆಲ ದಿನಗಳ ಹಿಂದೆ ಕೃಷ್ಣಾ ಎಡದಂಡೆ ಕಾಲುವೆಯಿಂದ ಆಲಮಟ್ಟಿ ಅಣೆಕಟ್ಟಿಗೆ ನೀರು ಹರಿಸಲಾಗಿತ್ತು. ಆದರೆ ಕಾಲುವೆಯಲ್ಲಿ ಹೂಳು ತುಂಬಿದ ಪರಿಣಾಮ ಕಾಲುವೆಗೆ ಹೋಗಬೇಕಿದ್ದ ನೀರು ಮನೆಗಳಿಗೆ ನುಗ್ಗಿದೆ.

    16ನೇ ಡಿಸ್ಟ್ರಿಬ್ಯುಟರ್ ಕಾಲುವೆ ಮೂಲಕ ನೀರು ಹರಿಯುತ್ತಿದೆ. ಕಾಲುವೆ ದುರಸ್ತಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಲ್ಲದೆ ಕಾಲುವೆಗಳಿಗೆ ಹರಿಯಬೇಕಿದ್ದ ಅಪಾರ ಪ್ರಮಾಣದ ನೀರು ಪೋಲಾಗಿರುವುದು ಕೂಡ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗಳು ಕಾಲುವೆ ಬಗ್ಗೆ ತೋರಿದ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ. ಸರಿಯಾದ ಸಮಯಕ್ಕೆ ಹೂಳೆತ್ತುವ ಕಾರ್ಯ ಮಾಡಿದ್ದರೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಜನರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

  • ನಿಮಗೆ ವಯಸ್ಸಾಗಿದೆ, ಕುತ್ಕೊಳ್ಳಿ, ಕ್ಷಮೆ ಕೇಳ್ಬೇಡಿ: ಬಿಎಸ್‍ವೈ ಕಾಲೆಳೆದ ಸಿದ್ದರಾಮಯ್ಯ

    ನಿಮಗೆ ವಯಸ್ಸಾಗಿದೆ, ಕುತ್ಕೊಳ್ಳಿ, ಕ್ಷಮೆ ಕೇಳ್ಬೇಡಿ: ಬಿಎಸ್‍ವೈ ಕಾಲೆಳೆದ ಸಿದ್ದರಾಮಯ್ಯ

    ಬೆಂಗಳೂರು: ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ ವಿರೋಧ ಪಕ್ಷದ ನಾಯಕರ ಯಡಿಯೂರಪ್ಪನವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.

    ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ನಾವು 10 ಸಾವಿರ ಕೋಟಿ ರೂ. ಕೊಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದ್ದೇವು ಎಂದು ಸ್ಪಷ್ಟನೆ ನೀಡಿದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು, ಕಾಂಗ್ರೆಸ್ಸಿನವರು ಕೃಷ್ಣಾ ಮೇಲ್ದಂಡೆ ಯೋಜನೆಗೆ 50 ಸಾವಿರ ಕೋಟಿ ರೂ. ನೀಡುವುದಾಗಿ ಹೇಳಿದ್ದರು. ಆ ಬಗ್ಗೆ ನಾವು ದಾಖಲೆ ಸಮೇತ ಹೇಳುತ್ತೇನೆ, ಇಲ್ಲ ಅಂದ್ರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

    ಬಿ.ಎಸ್.ಯಡಿಯೂರಪ್ಪ ಅವರ ಆರೋಪದಿಂದ ಗರಂ ಆದ ಸಿದ್ದರಾಮಯ್ಯ, ಆಯ್ತು ಕುಳಿತುಕೊಳ್ಳಿ ಯಡಿಯೂರಪ್ಪ ಅವರೆ, ನಿಮಗೆ ವಯಸ್ಸಾಗಿದೆ, ಕ್ಷಮೆ ಕೇಳುವುದು ಬೇಡ. ಹಿಂದಿನ ಬಿಜೆಪಿ ಸರ್ಕಾರದಲ್ಲಿ 18 ಸಾವಿರ ಕೋಟಿ ರೂ. ನೀರಾವರಿಗೆ ಖರ್ಚು ಮಾಡಿದರೆ, ನಾವು 48 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ತಿರುಗೇಟು ಕೊಟ್ಟರು.

    ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಶಾಸಕ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವುದು ನಿಜ ಎಂದರು. ಇದರ ಬೆನ್ನಲ್ಲೇ ಪ್ರಣಾಳಿಕೆಯನ್ನು ಬಸನಗೌಡ ಪಾಟೀಲ್ ಯತ್ನಾಳ್ ಓದಿದರು. ಆಗ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಮಧ್ಯಪ್ರವೇಶಿಸಿ, ಕೃಷ್ಣಾ ಕೊಳದ ಯೋಜನೆಗಳಿಗೆ ಮಾತ್ರ 50 ಸಾವಿರ ಕೋಟಿ ರೂ. ಖರ್ಚು ಮಾಡುವ ಭರವಸೆ ಕೊಟ್ಟಿಲ್ಲ ಎಂದು ಸಮರ್ಥನೆ ಮಾಡಿಕೊಂಡರು.