Tag: ಕೃಷ್ಣ ನೀರಾವರಿ ಯೋಜನೆ

  • ಅ.2ರಂದು ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ನಿರ್ಣಾಯಕ ಪಾದಾಯಾತ್ರೆ- ಎಸ್‍ಆರ್ ಪಾಟೀಲ್

    ಅ.2ರಂದು ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ನಿರ್ಣಾಯಕ ಪಾದಾಯಾತ್ರೆ- ಎಸ್‍ಆರ್ ಪಾಟೀಲ್

    ಬಾಗಲಕೋಟೆ: ಯುಕೆಪಿ 3ನೇ ಹಂತದ ಯೋಜನೆ ತ್ವರಿತ ಜಾರಿಗೆ ಆಗ್ರಹಿಸಿ ಪಕ್ಷಾತೀತ, ಧರ್ಮಾತೀತ, ಸಾಮೂಹಿಕ ನಾಯಕತ್ವದಲ್ಲಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ನಿರ್ಣಾಯಕ ಪಾದಾಯಾತ್ರೆ ನಡೆಯಲಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್‍ಆರ್ ಪಾಟೀಲ್ ಹೇಳಿದರು.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಘಟಪ್ರಭಾ ನದಿಯ ಅನಗವಾಡಿ ಸೇತುವೆಯಿಂದ ಕೃಷ್ಣಾ ನದಿಯ ಕೋರ್ತಿ ಕೋಲ್ಹಾರದ ಸೇತುವೆಯವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಉತ್ತರ ಕರ್ನಾಟಕದ ಸ್ವಾಭಿಮಾನ ವೇದಿಕೆ ಅಡಿಯಲ್ಲಿ ನಾಡಿನ ಖ್ಯಾತ ಸ್ವಾಮೀಜಿಗಳು, ರೈತ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಯುಕೆಪಿ ಸಂತ್ರಸ್ತರು ಭಾಗಿಯಾಗಲಿದ್ದಾರೆ ಎಂದರು.

    ವಿಧಾನಸಭೆ ವಿಧಾನಪರಿಷತ್‍ನಲ್ಲಿ ಯುಕೆಪಿ ಯೋಜನೆ ಬಗ್ಗೆ ಧ್ವನಿ ಎತ್ತಲಾಗಿದೆ. ಆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ, 2500 ಕೋಟಿ ಅನುದಾನ ಕೊಡುವುದಾಗಿ ಹೇಳಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಅಧಿವೇಶನದಲ್ಲಿ ಯುಕೆಪಿ 3ನೇ ಹಂತದ ಯೋಜನೆ ಪೂರ್ಣಗೊಳಿಸಲು ಅಂದಾಜು 60ಸಾವಿರ ಕೋಟಿ ಅನುದಾನ ಬೇಕಾಗುತ್ತದೆ ಎಂದಿದ್ದರು. ಆದರೀಗ ಕೇವಲ 2500 ಕೋಟಿ ಕೊಡುವುದಾಗಿ ಹೇಳಿರೋದನ್ನು ನೋಡಿದರೆ ಈ ಯೋಜನೆ ಪೂರ್ಣಗೊಳಿಸಲು ಇನ್ನು 3 ದಶಕ ಬೇಕಾಗುತ್ತದೆ ಏನಿಸುತ್ತಿದೆ ಎಂದರು.

    ತೆಲಂಗಾಣ ಸರ್ಕಾರ ಕಾಲೇಶ್ವರ ಏತನೀರಾವರಿ ಯೋಜನೆಯನ್ನು ಕೇವಲ 3 ವರ್ಷದಲ್ಲಿ 1 ಲಕ್ಷ 20 ಸಾವಿರ ಕೋಟಿಯಲ್ಲಿ ಪೂರ್ಣಗೊಳಿಸಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದವರೇ ಆದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಿದ್ದಾರೆ, ಬಾಗಲಕೋಟೆ ಜಿಲ್ಲೆಯವರಾದ ಗೋವಿಂದ ಕಾರಜೋಳ ಜಲಸಂಪನ್ಮೂಲ ಸಚಿವರಿದ್ದಾರೆ. ಇನ್ನೂ ಒಂದೂವರೆ ವರ್ಷದಲ್ಲಿ ಯುಕೆಪಿ ಯೋಜನೆ ಪೂರ್ಣಗೊಳಿಸಿದರೆ ಬಿಜೆಪಿ ಬಹುದೊಡ್ಡ ಸಾಧನೆ ಮಾಡಿದಂತಾಗುತ್ತದೆ ಎಂದರು. ಇದನ್ನೂ ಓದಿ: ಪಂಜಾಬ್ ವಿಧಾನಸಭೆ ಚುನಾವಣೆ- ಎಎಪಿಯಲ್ಲಿ ಸಿಎಂ ಅಭ್ಯರ್ಥಿಯ ಬಗ್ಗೆ ಚರ್ಚೆ ಜೋರು

    ಈ ಹಿಂದೆ ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆಯನ್ನು ಕಾಂಗ್ರೆಸ್ ಪಕ್ಷ ಮಾಡಿದಾಗ, ಸಿದ್ದರಾಮಯ್ಯನವರು ನೀರಾವರಿ ಯೋಜನೆಗೆ ಪ್ರತಿ ವರ್ಷ 10 ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದರು. ಅದರಂತೆ ಐದು ವರ್ಷದಲ್ಲಿ 53 ಸಾವಿರ ಕೋಟಿ ನೀರಾವರಿಗೆ ಖರ್ಚು ಮಾಡಲಾಗಿದೆ. ಆದರೆ ಯುಕೆಪಿ ಯೋಜನೆಗೆ ಪ್ರತಿವರ್ಷ 10 ಸಾವಿರ ಕೋಟಿ ಕೊಡುವುದಾಗಿ ಹೇಳಿರಲಿಲ್ಲ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದನ್ನೂ ಓದಿ: ಆರ್‌ಎಸ್‌ಎಸ್‌ ಸದಸ್ಯನಾಗಿದ್ದ ಡಿಕೆಶಿಯವರೇ ಸಿದ್ದರಾಮಯ್ಯನವರ ಮಾತನ್ನು ಒಪ್ಪುತ್ತೀರಾ – ಬಿಜೆಪಿ ಪ್ರಶ್ನೆ

    ಇನ್ನು ಮೊನ್ನೆ ನಡೆದ ಅಧಿವೇಶನದಲ್ಲಿ ಯುಕೆಪಿ 3ನೇ ಹಂತದ ಯೋಜನೆ ಬಗ್ಗೆ ಚರ್ಚಿಸುವ ವೇಳೆ ಹೋರಾಟ ಮಾಡುವುದಾಗಿ ಹೇಳಿದ್ದೆ. ಅದರಂತೆ ಪಕ್ಷಾತೀತವಾಗಿ ಪಾದಯಾತ್ರೆ ಕೈಗೊಳ್ಳಲಾಗುತ್ತಿದೆ. ಎಲ್ಲಾ ಪಕ್ಷದರವರು, ಸಂಘಟನೆಯವರು, ಸಂತ್ರಸ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಪಾದಯಾತ್ರೆ ಅನಗವಾಡಿಯಿಂದ ಆರಂಭವಾಗಿ ಕೋರ್ತಿ ಕೋಲ್ಹಾರದ ಸೇತುವೆ ಬಳಿ ಮುಕ್ತಾಯವಾಗಲಿದೆ. ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಸೇರಿದಂತೆ ಅವಳಿ ಜಿಲ್ಲೆಯ ಸಂತ್ರಸ್ತರು ಭಾಗಿಯಾಗಲಿದ್ದಾರೆ ಎಂದರು.

    ಈ ವೇಳೆ ಬೀಳಗಿ ಮಾಜಿ ಶಾಸಕ ಜೆಟಿ ಪಾಟೀಲ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಸ್‍ಜಿ ನಂಜಯ್ಯನಮಠ, ರೈತ ಮುಖಂಡ ಮುತ್ತಪ್ಪ ಕೋಮಾರ, ಮಾಜಿ ಸಚಿವ ಎಚ್‍ವೈ ಮೇಟಿ, ಅಜಯ್ ಕುಮಾರ್ ಸರನಾಯಕ, ಬಸವಪ್ರಭು ಸರನಾಡಗೌಡ, ಸೇರಿದಂತೆ ಇರತ ನಾಯಕರು ಉಪಸ್ಥಿತರಿದ್ದರು.