Tag: ಕೆಂದ್ರ ಸರ್ಕಾರ

  • ಏರ್ ಇಂಡಿಯಾ ಸಾಲವನ್ನು ತೀರಿಸಿ ಟಾಟಾಗೆ ಮಾರಿದ್ದು ಆತ್ಮನಿರ್ಭರ ಭಾರತ ಹೇಗಾಗುತ್ತದೆ: ಸಿದ್ದರಾಮಯ್ಯ ಕಿಡಿ

    ಏರ್ ಇಂಡಿಯಾ ಸಾಲವನ್ನು ತೀರಿಸಿ ಟಾಟಾಗೆ ಮಾರಿದ್ದು ಆತ್ಮನಿರ್ಭರ ಭಾರತ ಹೇಗಾಗುತ್ತದೆ: ಸಿದ್ದರಾಮಯ್ಯ ಕಿಡಿ

    ಬೆಂಗಳೂರು: ಶ್ರೀಮಂತರ ಆದಾಯ ಏರಿಕೆ ಆಗುತ್ತಿದೆ. ಬಂಡವಾಳಿಗರಿಗೆ ಕಡಿಮೆ ತೆರಿಗೆ ವಿಧಿಸಿದ್ದರಿಂದ ಭಾರತದಲ್ಲಿ ಬಡವರ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್ ಮಾಡಿದ ಸಿದ್ದರಾಮಯ್ಯ ಬೊಮ್ಮಾಯಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ

    ಪೋಸ್ಟ್‍ನಲ್ಲಿ ಏನಿದೆ?
    ರಾಜ್ಯಪಾಲರು ಈ ಬಾರಿ ಸರ್ಕಾರದ ಒಂದು ವರ್ಷದ ಸಾಧನೆಯ ವರದಿಯನ್ನು ಸದನದಲ್ಲಿ ಓದಿದರು. ಸರ್ಕಾರವು ರಾಜ್ಯಪಾಲರ ಬಾಯಲ್ಲಿ ಹೇಳಿಸಿದ ಮಾತುಗಳಲ್ಲಿ ಬಹುಪಾಲು ಜೊಳ್ಳು ಹಾಗೂ ಈ ಸರ್ಕಾರಕ್ಕೆ ಯಾವುದೇ ಗೊತ್ತು ಗುರಿಗಳು ಇಲ್ಲ ಎಂಬುದರ ಸೂಚಕವಾಗಿವೆ. ಅನೇಕ ಕಡೆ ಕೇಂದ್ರದ ಕಾರ್ಯಕ್ರಮಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯಪಾಲರ ಭಾಷಣದ ಮೇಲೆ ಸೂಚನೆಗಳನ್ನು ಮಂಡಿಸಿದ ಬಿಜೆಪಿಯ ಶಾಸಕರು ಮೋದಿಯವರನ್ನು ಮತ್ತು ಕೇಂದ್ರದ ಯೋಜನೆಗಳನ್ನು ಶ್ಲಾಘಿಸುವುದಕ್ಕಷ್ಟೆ ಸೀಮಿತಗೊಂಡರು. ನನ್ನ ರಾಜಕೀಯ ಜೀವನದಲ್ಲಿ ಇಷ್ಟು ಕಳಪೆ ಭಾಷಣವನ್ನು ಹಿಂದೆಂದೂ ಕೇಳಿರಲಿಲ್ಲ.

    ಬಂಡವಾಳಿಗರ ಮತ್ತು ಕಾಪೆರ್Çೀರೇಟ್ ಕುಳಗಳ ಮೂಗಿನ ನೇರಕ್ಕೆ ದೇಶವನ್ನು ಮುನ್ನಡೆಸುತ್ತಿರುವ ಮೋದಿ ಅವರು ಇದರಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದ್ದಾರೆ ಎಂದರೆ, ಭಾರತದ ಅತಿ ಶ್ರೀಮಂತರಾದ ಅದಾನಿ ಅಂಬಾನಿ ಮುಂತಾದ 142 ಜನರ ಸಂಪತ್ತು 23 ಲಕ್ಷ ಕೋಟಿಗಳಿದ್ದದ್ದು ಈಗ ಅದು 53 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ. ಆದರೆ ಜನರ ಮೇಲಿನ ತೆರಿಗೆ ಹೊರೆ, ಬೆಲೆ ಏರಿಕೆ ಎರಡೂ ದುಪ್ಪಟ್ಟಾಗಿವೆ.

    ಮನಮೋಹನಸಿಂಗರ ಕಾಲದಲ್ಲಿ ದೇಶ ಸಂಗ್ರಹಿಸುವ 100 ರೂ ತೆರಿಗೆಯಲ್ಲಿ ಜನರ ತೆರಿಗೆಯ ಪಾಲು 58 ರಷ್ಟಿತ್ತು. ಬಂಡವಾಳಿಗರ ತೆರಿಗೆ ಪಾಲು ಶೇ. 42 ರಷ್ಟಿತ್ತು. ಈಗ ಜನರ ಪಾಲು 75 ಕ್ಕೆ ಏರಿಕೆಯಾಗಿದೆ. ಬಂಡವಾಳಿಗರಿಂದ 25 ರೂಪಾಯಿ ಸಂಗ್ರಹಿಸುತ್ತಿದ್ದಾರೆ. ಇದರ ಫಲವಾಗಿ ದೇಶದ ಬಡವರ ಸಂಖ್ಯೆ ಹೆಚ್ಚುತ್ತಿದೆ. ದೇಶ ದೊಡ್ಡ ಸಾಲಗಾರನಾಗುತ್ತಿದೆ.

    2014 ರಲ್ಲಿ 53 ಲಕ್ಷ ಕೋಟಿಗಳಿದ್ದ ದೇಶದ ಸಾಲ 2022 ರ ಕೊನೆಗೆ 152 ಲಕ್ಷ ಕೋಟಿಗಳಷ್ಟಾಗುತ್ತಿದೆ. ದೇಶವು ಸಂಗ್ರಹಿಸುವ 22 ಲಕ್ಷ ಕೋಟಿ ತೆರಿಗೆಯಲ್ಲಿ 9.40 ಲಕ್ಷ ಕೋಟಿ ಬಡ್ಡಿ ಕಟ್ಟಲಾಗುತ್ತಿದೆ. ಅಂದರೆ ದುಡಿದ 100 ರೂಪಾಯಿನಲ್ಲಿ 43 ರೂಪಾಯಿ ಬಡ್ಡಿ ಕಟ್ಟುವುದಕ್ಕೆ ಖರ್ಚು ಮಾಡಲಾಗುತ್ತಿದೆ. ಹಾಗಾಗಿ ಮೋದಿ ಸರ್ಕಾರ ದೇಶದ ಆಸ್ತಿಗಳನ್ನೆಲ್ಲ ಮಾರಾಟಕ್ಕಿಟ್ಟಿದ್ದು, ಏರ್ ಇಂಡಿಯಾ ಸಾಲವನ್ನು ಮೋದಿ ಸರ್ಕಾರವೇ ತೀರಿಸಿ ಕೇವಲ 2700 ಕೋಟಿಗಳನ್ನು ನಗದು ರೂಪದಲ್ಲಿ ಪಡೆದುಕೊಂಡು ಟಾಟಾಗಳಿಗೆ ಬಿಟ್ಟುಕೊಟ್ಟಿದೆ. ಇದನ್ನೇ ಆತ್ಮ ನಿರ್ಭರ ಭಾರತ ಎಂದು ದಾರಿ ತಪ್ಪಿಸಲಾಗುತ್ತಿದೆ. ಇದನ್ನೂ ಓದಿ : ನಾನು ರಾಧಿಕಾ ಕುಮಾರಸ್ವಾಮಿ’.. ನಿಮ್ಮೊಂದಿಗೆ..

    ರಾಜ್ಯದಿಂದ ಮೋದಿ ಸರ್ಕಾರವು 3 ಲಕ್ಷ ಕೋಟಿ ರೂಗಳಷ್ಟು ವಿವಿಧ ರೂಪದ ತೆರಿಗೆಗಳನ್ನು ಸಂಗ್ರಹಿಸುವ ಕೇಂದ್ರವು ವಾಪಸ್ಸು ನೀಡುತ್ತಿರುವುದು ಕೇವಲ 43 ಸಾವಿರ ಕೋಟಿ. ಇದರಿಂದ ರಾಜ್ಯದ ಆರ್ಥಿಕತೆಯೂ ದಿಕ್ಕುತಪ್ಪಿದೆ. 2018 ರ ವರೆಗೆ 2.42 ಲಕ್ಷ ಕೋಟಿಗಳಷ್ಟಿದ್ದ ರಾಜ್ಯದ ಸಾಲ ಈಗ 4.57 ಲಕ್ಷ ಕೋಟಿಗಳಷ್ಟಾಗಿದೆ.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪ ಸಂಖ್ಯಾತರ ಕಲ್ಯಾಣ, ಯುವಜನರ ಕಲ್ಯಾಣ ಮತ್ತು ನೇಕಾರರು ಮೀನುಗಾರರು ಕುಂಬಾರರು ಅಕ್ಕಸಾಲಿಗರು, ಮೇದಾರÀರು, ಕ್ಷೌರಿಕರು, ಉಪ್ಪಾರರು ವಿವಿಧ ವಾಹನ ಚಾಲಕರು, ಮಡಿವಾಳರು ಮುಂತಾದ ಕುಶಲ ಕರ್ಮಿಗಳ ಕುರಿತು ಒಂದಕ್ಷರದ ಪ್ರಸ್ತಾಪವಿಲ್ಲ. ಲೋಕೋಪಯೋಗಿ, ಸಣ್ಣ ಕೈಗಾರಿಕೆ, ನಗರ, ಪಟ್ಟಣಗಳ ಅಭಿವೃದ್ಧಿ ಕುರಿತು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವಿಲ್ಲ. ರಾಜ್ಯಪಾಲರ ಭಾಷಣದಲ್ಲಿ ಜನರ ಕಲ್ಯಾಣದ ಕುರಿತು ಪ್ರಸ್ತಾಪವೂ ಇಲ್ಲ. ಅಭಿವೃದ್ಧಿ ಕುರಿತಾದ ಪ್ರಸ್ತಾಪವೂ ಇಲ್ಲ. ಈ ಕುರಿತು ತಾನು ಏನೂ ಮಾಡಿಲ್ಲ ಎಂದು ಸರ್ಕಾರವೆ ಪ್ರಾಮಾಣಿಕವಾಗಿ ಒಪ್ಪಿಕೊಂಡಿದೆ. ತನ್ನ ಅದಕ್ಷತೆಯನ್ನು ಒಪ್ಪಿಕೊಂಡದ್ದಕ್ಕಾಗಿ ಸರ್ಕಾರಕ್ಕೆ ಅಭಿನಂದಿಸುತ್ತೇನೆ.
    ಸರ್ಕಾರ ರಾಜ್ಯಪಾಲರ ಮೂಲಕ ಓದಿಸಿದ 116 ಪ್ಯಾರಾಗÀಳಲ್ಲಿ 22 ಪ್ಯಾರಾಗಳನ್ನು ಕೋವಿಡ್ ಯಶಸ್ವಿ ನಿರ್ವಹಣೆ, 8 ಪ್ಯಾರಾಗಳನ್ನು ಪ್ರವಾಹವನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ್ದೇವೆಂದು ಕೊಚ್ಚಿಕೊಳ್ಳಲು ದುರುಪಯೋಗಪಡಿಸಿಕೊಂಡಿದೆ. ಕೋವಿ???ನಿಂದ ರಾಜ್ಯದಲ್ಲಿ 4 ಲಕ್ಷ ಜನರು ಮರಣ ಹೊಂದಿದ್ದರೆ, ಅಸಂಖ್ಯಾತ ಮಕ್ಕಳು ತಬ್ಬಲಿಗಳಾಗಿವೆ. ವೃದ್ಧ ತಂದೆ ತಾಯಿಗಳು ಅನಾಥರಾಗಿದ್ದಾರೆ. ಆದರೂ ಸಹ ಸರ್ಕಾರ ತಾವು ಸಾಧನೆ ಮಾಡಿದ್ದೇವೆಂದು ರಾಜ್ಯಪಾಲರ ಬಾಯಲ್ಲಿ ಹೇಳಿಸಿದೆ.

    ಕಳೆದ ಮೇನಲ್ಲಿ ತೌಕ್ತೆ ಚಂಡಮಾರುತ ಬಂದಿತ್ತು. ಆಗಸ್ಟ್‍ನಲ್ಲಿ ಅತಿವೃಷ್ಟಿಯಾಗಿತ್ತು. ಅದರ ಪರಿಹಾರವನ್ನು ಇನ್ನೂ ನೀಡುವುದರಲ್ಲೇ ಇದ್ದಾರೆ. ಇದನ್ನು ಜವಾಬ್ಧಾರಿಯುತ ಸರ್ಕಾರ ಎನ್ನಬಹುದೆ? ನೀರಾವರಿ ಕುರಿತಂತೆಯೂ ರಾಜ್ಯಪಾಲರ ಮಾತುಗಳು ನಿಜಕ್ಕೂ ನಿರಾಶಾದಾಯಕವಾಗಿವೆ. ಯಾವ ಕಾರ್ಯಕ್ರಮಗಳನ್ನು ಎಷ್ಟು ಅನುದಾನದಲ್ಲಿ ರೂಪಿಸಲಾಗಿದೆ ಎಂಬ ಮಾಹಿತಿಯೇ ಇಲ್ಲ.

    ಈ ಸರ್ಕಾರದಲ್ಲಿ ಅತ್ಯಂತ ನಿರ್ಲಕ್ಷಿತ ಇಲಾಖೆಗಳಲ್ಲಿ ಕೃಷಿಯೂ ಒಂದು. ಪ್ಯಾರಾ 41 ರಲ್ಲಿ ಬೆಂಬಲ ಬೆಲೆ ಯೋಜನೆ ಬಗ್ಗೆ ಪ್ರಸ್ತಾಪಿಸಲಾಗಿದೆ. ನಾನೆಲ್ಲೊ ಈ ವರ್ಷದ ಬೆಂಬಲ ಬೆಲೆ ಇರಬೇಕೆಂದು ನೋಡಿದರೆ 2020-21 ರಲ್ಲಿ ಖರೀದಿಸಿದ್ದನ್ನು ಪ್ರಸ್ತಾಪಿಸಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆ 2019 ರಲ್ಲಿ ಪ್ರಾರಂಭವಾಯಿತು. ಆಗ ರಾಜ್ಯ ಸರ್ಕಾರ ಕೇಂದ್ರದ 6000 ದ ಜೊತೆಗೆ 4000 ರೂಗಳನ್ನು ನೀಡುವುದಾಗಿ ಹೇಳಿತ್ತು. ಆದರೆ 2019 ಮತ್ತು 2020 ರಲ್ಲಿ ನೀಡಿದ್ದು ಕೇವಲ ತಲಾವಾರು 2000 ರೂಪಾಯಿಗಳನ್ನು ಮಾತ್ರ.

    ನಮ್ಮ ಸರ್ಕಾರ ಬಂಡವಾಳ ಆಕರ್ಷಣೆಯಲ್ಲಿ ದೇಶದಲ್ಲಿ 1 ಅಥವಾ 2 ನೇ ಸ್ಥಾನಗಳತ್ತು. ಈಗ ಓಲಾ ಬೈಕ್, ಏಥರ್, ಟಾಟಾ ಎಲೆಕ್ಟ್ರಾನಿಕ್ಸ್ ಮುಂತಾದ ಬೃಹತ್ ಬಂಡವಾಳದ ಕಂಪೆನಿಗಳು 10000 ಕೋಟಿ ಬಂಡವಾಳ ಹೂಡಲು ತಯಾರಿದ್ದವು. ಆದರೆ ಈ ಸರ್ಕಾರ ಆಸಕ್ತಿ ವಹಿಸದ ಕಾರಣ ತಮಿಳುನಾಡಿನ ಪಾಲಾದವು. ರಾಜ್ಯವು ಕೈಗಾರಿಕಾಭಿವೃದ್ಧಿಯಲ್ಲೂ ಹಿಂದೆ ಬಿದ್ದಿದೆ.

    ಎನ್.ಇ.ಪಿ. ಯಂಥ ಮನೆಹಾಳು ನೀತಿಗಳನ್ನು ಸರ್ಕಾರ ಸಾಧನೆ ಎಂದು ಹೇಳಿಸಿದೆ. ಕಾಲೇಜು- ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸಕರುಳಿಲ್ಲ, ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯ ಪುಸ್ತಕಗಳಿಲ್ಲ. ವಿಶ್ವ ವಿದ್ಯಾಲಯಗಳಲ್ಲಿ ವೈಜ್ಞಾನಿಕ ಮನೋಭಾವಗಳಿರುವ ಅಧ್ಯಾಪಕರಿಲ್ಲ. ಸ್ವತಂತ್ರವಾಗಿ ಅಧ್ಯಯನ ಮಾಡುವ, ಬರೆಯುವ ಅಧ್ಯಾಪಕರಿಗೆ ಸರ್ಕಾರದ ಕಿರುಕುಳದ ಭಯ. ಹೀಗಾಗಿ ಸಂಸ್ಕøತದಂಥಹ ಭಾಷೆಗಳ ಹೇರಿಕೆಗಷ್ಟೆ ಎ???ಇಪಿ ಸೀಮಿತವಾಗಿದೆ. ವಸತಿಯ ವಿಚಾರದಲ್ಲಿ ಕೇವಲ ಭವಿಷ್ಯ ನುಡಿಯಲಾಗಿದೆಯೇ ಹೊರತು ಸಾಧನೆಗಳಿಲ್ಲ.ಕಲ್ಯಾಣ ಕರ್ನಾಟಕದ ಹೆಸರು ಬದಲಾಯಿಸಿದೆವು, ಕಛೇರಿಯನ್ನು ಸ್ಥಳಾಂತರಿಸಿದೆವು ಎಂದು ಪ್ಯಾರಾ 75 ರಲ್ಲಿ ಹೇಳಿಕೊಳ್ಳಲಾಗಿದೆ. ಇದನ್ನು ಸಾಧನೆ ಎಂದು ಹೇಳಬಹುದೆ?

    ರಾಜ್ಯ ಸರ್ಕಾರ ಅಮೃತ ಹೆಸರಿನಲ್ಲಿ ಹಲವು ಯೋಜನೆಗಳನ್ನು ರಾಜ್ಯಪಾಲರ ಬಾಯಲ್ಲಿ ಪ್ರಸ್ತಾಪ ಮಾಡಿಸಿದೆ. ಅದರಲ್ಲಿ 750 ಗ್ರಾಮಗಳನ್ನು ಆಯ್ಕೆ ಮಾಡಿ ತಲಾ 25 ಲಕ್ಷ ರೂಪಾಯಿಗಳನ್ನು ನೀಡಲಾಗುವುದೆಂದು ಪ್ಯಾರಾ 21 ರಲ್ಲಿ ಪ್ರಸ್ತಾಪಿಸಲಾಗಿದೆ. 25 ಲಕ್ಷ ರೂಪಾಯಿಗಳಲ್ಲಿ ಯಾವ ಗ್ರಾಮವನ್ನು ಅಮೃತ ಗ್ರಾಮ ಮಾಡಲಾಗುತ್ತದೆ? ನಮ್ಮ ಸರ್ಕಾರದ ಅವಧಿಯಲ್ಲಿ ತಲಾ 1 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಒಟ್ಟು ರೂ.1750 ಕೋಟಿಗಳನ್ನು ನೀಡಿ ಮುಖ್ಯಮಂತ್ರಿ ಸುವರ್ಣ ಗ್ರಾಮ ಯೋಜನೆಯಡಿ ಜಾರಿಗೆ ತಂದು ಯಶಸ್ವಿಯಾಗಿ ಅನುಷ್ಟಾನ ಮಾಡಿದ್ದೆವು.

    ಕೋವಿಡ್ ಸಂದರ್ಭದಲ್ಲಿ ಕಾರ್ಮಿಕ ನಿಧಿಯ ಹಣವನ್ನು ಕಾರ್ಮಿಕರಿಗೆ ಕೊಟ್ಟು ನಾವು ಸಾಧನೆ ಮಾಡಿದ್ದೇವೆ ಎಂದು ಪ್ಯಾರಾ 39 ರಲ್ಲಿ ಪ್ರಸ್ತಾಪಿಸಲಾಗಿದೆ.
    ಪಶುಪಾಲನೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ರಾಜ್ಯದ ಜಿಡಿಪಿಗೆ ರೂ.1 ಲಕ್ಷ ಕೋಟಿಯವರೆಗೂ ಕೊಡುಗೆ ನೀಡುತ್ತಿರುವ, ಸುಮಾರು 45 ಲಕ್ಷ ರೈತ ಕುಟುಂಬಗಳ ಜೀವನಾಧಾರವಾಗಿರುವ ಪಶುಪಾಲನೆಯನ್ನು ಈ ಮಟ್ಟಿಗೆ ನಿರ್ಲಕ್ಷಿಸಬಹುದೆ?

    ಪತ್ರಕರ್ತರಿಗೆ ಕೆಎಸ್‍ಆರ್‍ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಹಳೆಯ ಯೋಜನೆಯನ್ನೆ ಮುಂದುವರಿಸಿ ರಾಜ್ಯಪಾಲರ ಬಾಯಲ್ಲಿ ಸಾಧನೆ ಎಂದು ಹೇಳಿಸಲಾಗಿದೆ. ಸರ್ಕಾರ ಸುಳ್ಳು ಹೇಳಿ, ತನ್ನ ಬೆನ್ನನ್ನು ತಾನೆ ತಟ್ಟಿಕೊಂಡು ಓಡಾಡುತ್ತಿದೆ ಎಂಬುದಕ್ಕೆ ರಾಜ್ಯಪಾಲರ ಭಾಷಣವೆ ಸಾಕ್ಷಿ. ರಾಜ್ಯವು ಅತಿ ಕೆಟ್ಟ ಆಡಳಿತವನ್ನು ಎದುರಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿ ಈ ಭಾಷಣವಿದೆ.

  • ಎದೆಯಗಲ ಎಷ್ಟೇ ಇಂಚಿನದ್ದಾಗಿರ್ಲಿ, ಜನಶಕ್ತಿಯ ಎದುರು ಮಣಿಯಲೇಬೇಕು: ಸಿದ್ದರಾಮಯ್ಯ

    ಎದೆಯಗಲ ಎಷ್ಟೇ ಇಂಚಿನದ್ದಾಗಿರ್ಲಿ, ಜನಶಕ್ತಿಯ ಎದುರು ಮಣಿಯಲೇಬೇಕು: ಸಿದ್ದರಾಮಯ್ಯ

    ಬೆಂಗಳೂರು: ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾನೂನು ವಾಪಸ್ ಪಡೆದುಕೊಂಡಿರುವ ಕುರಿತಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲು ಸಾಲು ಟ್ವೀಟ್ ಮಾಡುವ ಮೂಲಕವಾಗಿ ರೈತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ತಿಳಿಸಿದ್ದಾರೆ. ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

    ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ

    ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ ಸ್ಪೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

  • ಆಕ್ಸಿಜನ್ ಕೊರತೆಯಿಂದ ಯಾರೂ ಸತ್ತಿಲ್ಲವೆಂದು ಕೇಂದ್ರ ಸರ್ಕಾರ ಸುಳ್ಳು ಹೇಳಿದೆ: ಶಾಸಕ ನರೇಂದ್ರ

    ಆಕ್ಸಿಜನ್ ಕೊರತೆಯಿಂದ ಯಾರೂ ಸತ್ತಿಲ್ಲವೆಂದು ಕೇಂದ್ರ ಸರ್ಕಾರ ಸುಳ್ಳು ಹೇಳಿದೆ: ಶಾಸಕ ನರೇಂದ್ರ

    ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದ ಯಾರೂ ಮೃತಪಟ್ಟಿಲ್ಲ ಎಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಹಸಿ ಸುಳ್ಳು ಹೇಳಿದೆ ಎಂದು ಚಾಮರಾಜನಗರ ಜಿಲ್ಲೆ ಹನೂರು ಶಾಸಕ ಆರ್.ನರೇಂದ್ರ ವಾಗ್ದಾಳಿ ನಡೆಸಿದ್ದಾರೆ.

    ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮರಾಜನಗರದಲ್ಲಿ 36 ಮಂದಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ. ಹೈಕೋರ್ಟ್ ನೇಮಿಸಿದ್ದ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯೇ ತನಿಖೆ ನಡೆಸಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿರುವ ಬಗ್ಗೆ ವರದಿ ನೀಡಿದೆ. ಅಲ್ಲದೆ ಹೈಕೋರ್ಟ್ ಸೂಚನೆ ಮೇರೆಗೆ 24 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಿದೆ. ಹೀಗಿದ್ದರೂ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸುಳ್ಳು ಉತ್ತರ ನೀಡಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯಲ್ಲಿ ವಿಪ್ಲವ, ಬಿಎಸ್‍ವೈ ನಿರ್ಗಮನ- ರಾಜೀನಾಮೆ ಜಪಿಸಿದ ಯಡಿಯೂರಪ್ಪ

    ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಕನಿಷ್ಟ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಜೊತೆಗೆ ಮನೆಯ ಆಧಾರ ಸ್ಥಂಭವಾಗಿದ್ದವರನ್ನು ಕಳೆದುಕೊಂಡು ಎಷ್ಟೋ ಕುಟುಂಬಗಳು ತೀವ್ರ ಕಷ್ಟಕ್ಕೆ ಸಿಲುಕಿವೆ. ಸರ್ಕಾರ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಮೃತರ ಕುಟುಂಬಗಳಿಗೆ ಧೈರ್ಯ ತುಂಬಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:ಮಠಾಧೀಶರ ಲಾಬಿಯಿಂದ ಯಡಿಯೂರಪ್ಪ ಬೆಳೆದಿಲ್ಲ: ಬಿ.ವೈ ರಾಘವೇಂದ್ರ

  • ಕಸಾಯಿಖಾನೆಗಳಿಗೆ ಗೋವುಗಳ ಮಾರಾಟ ನಿಷೇಧಿಸಿರುವುದಕ್ಕೆ ಸಂತಸ, ರೈತರಿಗೆ ಹೊರೆ: ಹೆಚ್‍ಡಿಕೆ

    ಕಸಾಯಿಖಾನೆಗಳಿಗೆ ಗೋವುಗಳ ಮಾರಾಟ ನಿಷೇಧಿಸಿರುವುದಕ್ಕೆ ಸಂತಸ, ರೈತರಿಗೆ ಹೊರೆ: ಹೆಚ್‍ಡಿಕೆ

    ವಿಜಯಪುರ: ಕಸಾಯಿಖಾನೆಗಳಿಗೆ ಗೋವುಗಳ ಮಾರಾಟವನ್ನು ಕೆಂದ್ರ ಸರ್ಕಾರ ನಿಷೇಧ ಮಾಡಿದ್ದು, ಇದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ವಿಜಯಪುರದಲ್ಲಿ ಸಂತೋಷ ವ್ಯಕ್ತಪಡಿಸಿದ್ದಾರೆ. ಆದ್ರೆ ಇದರಿಂದ ರೈತರಿಗೆ ಹೊರೆಯಾಗಲಿದೆ ಅಂತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ನಿಜವಾಗ್ಲೂ ಗೋ ರಕ್ಷಣೆ ಮಾಡುವ ಉದ್ದೇಶ ಇದ್ದಿದ್ದೇ ಆದರೆ, ಗೋ ಕೇಂದ್ರಗಳನ್ನು ತಗೆದು ರೈತರಿಗೆ ಸಲಹಲು ಆಗದ ಗೋವುಳನ್ನು ಸರ್ಕಾರ ಪಾಲನೆ ಮಾಡುವ ನಿಟ್ಟಿನಲ್ಲಿ ಕ್ರಮ ತಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

    ಕರ್ನಾಟಕದ ಬಸ್ ಗಳ ಮೇಲೆ ಮಹಾರಾಷ್ಟ್ರದಲ್ಲಿ ಶಿವಸೇನೆ ನಡೆಸುತ್ತಿರುವ ಪುಂಡಾಟಿಕೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಅಲ್ಲದೆ ಇದರಿಂದ ದಿನನಿತ್ಯ ಬಸ್ ನಲ್ಲಿ ಪ್ರಯಾಣಿಸುವವರು ಆತಂಕ ಪಡುವಂತಾಗಿದೆ. ಈ ಸಮಸ್ಯೆಯನ್ನು ಗನ್ ಹಿಡಿದು ಬಗೆಹರಿಸಲು ಸಾಧ್ಯವಿಲ್ಲ. ಸೌಹಾರ್ದಯುತವಾದ ಮಾತುಕತೆ ಮೂಲಕ ಬಗೆಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಲಹೆಯಿತ್ತರು.

    ಯಡ್ಡಿಯೂರಪ್ಪ ಪಕ್ಷದಲ್ಲಿ ಬರ ಬಂದಿದ್ದಕ್ಕೆ ಬರ ಪ್ರವಾಸ ಮಾಡುತ್ತಿದ್ದಾರೋ ಅಥವಾ ನಿಜವಾಗಲೂ ರೈತರಿಗಾಗಿ ಬರ ಪ್ರವಾಸ ಮಾಡುತ್ತಿದ್ದಾರೋ ಎಂದು ಜನರಿಗೆ ಸ್ಪಷ್ಟಪಡಿಸಬೇಕೆಂದು ಎಚ್‍ಡಿಕೆ ಅಗ್ರಹಿಸಿದರು.