Tag: ಕೆಂಪೇಗೌಡ

  • ಕುರ್ಚಿ ಸಿಗುವುದೇ ಕಷ್ಟ, ಕುರ್ಚಿ ಸಿಕ್ಕಾಗ ತೆಪ್ಪಗೆ ಬಂದು ಕುಳಿತುಕೊಳ್ಳಬೇಕು: ಡಿಕೆಶಿ

    ಕುರ್ಚಿ ಸಿಗುವುದೇ ಕಷ್ಟ, ಕುರ್ಚಿ ಸಿಕ್ಕಾಗ ತೆಪ್ಪಗೆ ಬಂದು ಕುಳಿತುಕೊಳ್ಳಬೇಕು: ಡಿಕೆಶಿ

    – ತುರ್ತು ಪರಿಸ್ಥಿತಿ ಸಮಯದಲ್ಲಿ ನಮ್ಮ ಮನೆ ಮೇಲೆ ರೈಡ್ ಆಗಿತ್ತು
    – ನನ್ನ ತಂದೆಗೆ ನನ್ನನ್ನು ಎಂಜಿನಿಯರ್ ಮಾಡಬೇಕು ಎನ್ನುವ ಆಸೆ ಇತ್ತು
    – ವಕೀಲರ ಸಂಘಕ್ಕೆ 5 ಕೋಟಿ ರೂ. ಅನುದಾನ

    ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿರುವಾಗ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಕಾರ್ಯಕ್ರಮವೊಂದರಲ್ಲಿ ಕುರ್ಚಿ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದಾರೆ.

    ವಕೀಲರ ಸಂಘದಿಂದ ಶುಕ್ರವಾರ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು (Kempegowda Jayanthi) ಉದ್ಘಾಟಿಸಿ ಶಿವಕುಮಾರ್ ಮಾತನಾಡಿದರು. ಡಿಸಿಎಂ ಅವರು ಮಾತನಾಡುತ್ತಿದ್ದ ವೇಳೆ ಸಭಾಂಗಣದ ಇಕ್ಕೆಲಗಳಲ್ಲಿ ನಿಂತಿದ್ದ ವಕೀಲರನ್ನು ಉದ್ದೇಶಿಸಿ, ಇಷ್ಟೊಂದು ಕುರ್ಚಿಗಳಿವೆ ಬನ್ನಿ ಕುಳಿತುಕೊಳ್ಳಿ. ಕುರ್ಚಿ ಸಿಗುವುದೇ ಕಷ್ಟ. ಕುರ್ಚಿ ಸಿಕ್ಕಾಗ ತೆಪ್ಪಗೆ ಬಂದು ಕುಳಿತುಕೊಳ್ಳಬೇಕು. ನಿಮ್ಮನ್ನು ನೋಡಿದರೆ ತ್ಯಾಗಿಗಳ ತರಹ ಕಾಣುತ್ತಾ ಇದ್ದೀರಿ ಎಂದು ಚಟಾಕಿ ಹಾರಿಸಿದರು.

    ವಕೀಲರ ಬಳಿ ನ್ಯಾಯ ಕೊಡಿಸಿ ಎಂದು ಜನರು ಬರುತ್ತಾರೆ. ನಿಮ್ಮ ಆತ್ಮತೃಪ್ತಿಗೆ ಕೆಲಸ ಮಾಡಬೇಕು. ನಿಮ್ಮ ಬಳಿ ಬಂದ ಕಕ್ಷಿದಾರನಿಗೆ ಸಂತೋಷವಾಗುವಂತೆ ಕೆಲಸ ಮಾಡಬೇಕು. ಕಪ್ಪು ಕೋಟು ಹಾಕಿದ್ದೇನೆ ಎಂದು ಕಾನೂನನ್ನು ಕೈಗೆತ್ತಿಕೊಳ್ಳಬೇಡಿ. ನಿಮ್ಮ ಹಾಗೂ ಪೊಲೀಸರ ನಡುವೆ ಆಗಾಗ್ಗೆ ಸಂಘರ್ಷವಾಗುತ್ತಾ ಇರುತ್ತಾರೆ. ಈ ಪೋಲಿಸರು ಮೈಮೇಲೆ ಖಾಕಿ ಬಂದ ತಕ್ಷಣ ದೇವರು ಬಂದಂತೆ ಆಡುತ್ತಾರೆ ಎಂದರು.

    ಒಂದು ವಾರದೊಳಗೆ ಸಂಘದ ಕಟ್ಟಡಕ್ಕೆ ಸೋಲರ್ ಗ್ರಿಡ್ ವ್ಯವಸ್ಥೆಗೆ ಪರಿಶೀಲನೆ ನಡೆಸಲಾಗುವುದು. ಇದರ ಬಗ್ಗೆ ಹಿಂದೆಯೇ ಮಾತುಕತೆಯಾಗಿತ್ತು. ನೀವು ಅಧಿಕಾರಿಗಳ ಹಿಂದೆ ಬಿದ್ದು ಕೆಲಸ ಮಾಡಿಸಿಕೊಳ್ಳಬೇಕು. ಜೊತೆಗೆ ಈ ಸಂಸ್ಥೆಗೆ ಭೂಮಿ ಬೇಕು ಎಂದು ಹೇಳಿದ್ದೀರಿ. ಆದ ಕಾರಣಕ್ಕೆ 10 ಎಕರೆ ಕಂದಾಯ ಭೂಮಿಯನ್ನು ಲಭ್ಯತೆ ನೋಡಿಕೊಂಡು ನೀಡಲಾಗುವುದು. ನಗರದ 20 ಕಿಮೀ ವ್ಯಾಪ್ತಿಯಲ್ಲಿ ಭೂಮಿ ಇದ್ದರೆ ನೀವೆ ಹುಡುಕಿ. ನಾವು ನೀಡುವ ಹಣವನ್ನು ನಿಮಗೆ ಉಪಯೋಗವಾಗುವ ಉತ್ತಮ ಕೆಲಸಗಳಿಗೆ ವಿನಿಯೋಗಿಸಿ ಎಂದರು. ಇದನ್ನೂ ಓದಿ: 2 ಬಾರಿ ಟಿಕೆಟ್‌ ಕ್ಯಾನ್ಸಲ್‌ ಮಾಡಿದ್ರೂ ಡಿಕೆಶಿ ಭೇಟಿಗೆ ಅವಕಾಶ ನೀಡದ ರಾಹುಲ್‌!

    ವಕೀಲರ ಸಂಘಕ್ಕೆ ಪ್ರತಿ ವರ್ಷ 5 ಲಕ್ಷ ರೂ.ವನ್ನು ಕೆಂಪೇಗೌಡ ಜಯಂತಿ ಆಚರಣೆಗೆ ನೀಡಲಾಗುವುದು. ಸಂಘದ ಉಪಯೋಗಕ್ಕಾಗಿ 5 ಕೋಟಿ ರೂ. ಜಿಬಿಎಯಿಂದ ನೀಡಲಾಗುವುದು. ಕೆಂಪೇಗೌಡ ಪ್ರಶಸ್ತಿಯನ್ನು ಕಡ್ಡಾಯವಾಗಿ ಇಬ್ಬರು ವಕೀಲರಿಗೆ ಪ್ರತಿವರ್ಷ ನೀಡಲಾಗುವುದು ಎಂದು ತಿಳಿಸಿದರು.

    ಬೆಂಗಳೂರು ಯೋಜಿತ ನಗರವಲ್ಲ. ಆದರೆ ಕೆಂಪೇಗೌಡರು ಅಂದೇ ಯೋಜಿತವಾಗಿ ನಗರ ಕಟ್ಟಿದವರು. ಕೃಷ್ಣದೇವರಾಯ ಅವರ ಚಿಂತನೆಗಳನ್ನು ಇಲ್ಲಿ ಅಳವಡಿಸಿದರು. ವ್ಯಾಪಾರ ವಹಿವಾಟುಗಳನ್ನು ಬೆಳೆಸಲು ಈ ಊರನ್ನು ಕಟ್ಟಿ ಬೆಳಗಿದರು. ಅವರ ಆಚಾರ ವಿಚಾರಗಳನ್ನು ಉಳಿಸಲು ʼಗ್ರೇಟರ್ ಬೆಂಗಳೂರು ಪ್ರಾಧಿಕಾರʼದ ಮೂಲಕ ಮುಂದಡಿ ಇಟ್ಟಿದ್ದೇವೆ ಎಂದರು.

    ರಾಜ್ಯಪಾಲರು ಸಹ ಶಿವಕುಮಾರ್ ದೂರದೃಷ್ಟಿ ಹೊಂದಿದ್ದಾನೆ ಎಂದು ಸಹಕಾರ ನೀಡಿದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್ ಅವರು ಸಹ ಉತ್ತಮ ಜನನಾಯಕ. ಅವರು ಸಹ ಇದಕ್ಕೆ ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಲಕ್ಷ ಕೋಟಿ ರೂ. ಯೋಜನೆಗಳನ್ನು ಬೆಂಗಳೂರಿನ ಅಭಿವೃದ್ದಿಗೆ ಖರ್ಚು ಮಾಡುವ ಆಲೋಚನೆ ಇದೆ ಎಂದರು.

    ಕೆಂಪೇಗೌಡ ಜಯಂತಿ, ಪ್ರಾಧಿಕಾರ ಪ್ರಾರಂಭ ಮಾಡಿದವರೇ ನಾವು. ಪ್ರತಿ ಊರಿನಲ್ಲೂ ಕೆಂಪೇಗೌಡ ಜಯಂತಿ ಮಾಡಬೇಕು ಎಂದು ಹೇಳಿದವರು ನಾವೇ. ಬೆಂಗಳೂರು ನಗರ ಅಭಿವೃದ್ದಿ ಇಲಾಖೆಯನ್ನು ಛಲದಿಂದ ತೆಗೆದುಕೊಂಡಿದ್ದೇನೆ. ಈ ನಗರದ ಬಗ್ಗೆ ನನ್ನದೇ ಆದ ಕನಸುಗಳಿವೆ. ತಿಹಾರ್ ಜೈಲಿನಿಂದ ಹೊರಗೆ ಬಂದಾಗ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಾ ನಾನು ಹುಟ್ಟುತ್ತಾ ಕೃಷಿಕ, ನಂತರ ಉದ್ಯಮಿ, ಆಕಸ್ಮಿಕವಾಗಿ ಶಿಕ್ಷಣ ಪ್ರೇಮಿ, ಆಯ್ಕೆಯಿಂದ ರಾಜಕಾರಣಿ. ರಾಜಕಾರಣಿ ಆಗಲೇ ಬೇಕು ಎಂದು ಶಾಲಾ ದಿನಗಳಲ್ಲೇ ಕನಸು ಕಂಡವನು. ಅಲ್ಲಿಂದ ಸಂಘಟನೆ ಮಾಡಿಕೊಂಡು ಬೆಳೆಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ತೆಲಂಗಾಣ ಫೈರ್ ಬ್ರಾಂಡ್ ಟಿ.ರಾಜಾ ಸಿಂಗ್ ರಾಜೀನಾಮೆ ಅಂಗೀಕರಿಸಿದ ಬಿಜೆಪಿ

    ನಮ್ಮ ತಂದೆ, ತಾತನ ಹೆಸರು ಕೆಂಪೇಗೌಡ ಎಂದಿದೆ. ನನ್ನ ಮಗನ ಹೆಸರು ಆಕಾಶ್ ಕೆಂಪೇಗೌಡ, ತಮ್ಮನ ಹೆಸರೂ ಸಹ ಕೆಂಪೇಗೌಡ ಎಂದಿತ್ತು ಆನಂತರ ಸುರೇಶ್ ಎಂದು ಮಾಡಿಕೊಂಡ. ಶಿವನಿಗೆ ಹರಕೆ ಮಾಡಿಕೊಂಡು ನನಗೆ ಶಿವಕುಮಾರ್ ಎಂದು ಹೆಸರಿಟ್ಟರು. ಈ ಇತಿಹಾಸ ನನಗೆ ಗೊತ್ತಿಲ್ಲಎಂದರು.

    ಉದಾರ ಮನಸ್ಸಿನಿಂದ ಬೆಂಗಳೂರನ್ನು ಕಟ್ಟಿದವರು ಕೆಂಪೇಗೌಡರು. ನಮ್ಮ ಮೂಲವನ್ನು ಮರೆತರೆ ಎತ್ತರಕ್ಕೆ ಬೆಳೆಯಲು ಸಾಧ್ಯವಿಲ್ಲ. ನಾವು ನಾಲ್ಕು ʼಕೆʼಗಳನ್ನು ಮರೆಯಬಾರದು ಬೆಂಗಳೂರು ಕಟ್ಟಿದ ಕಂಪೇಗೌಡರು, ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಅವರು, ಕನ್ನಡ ಸಾಹಿತ್ಯವನ್ನು ಬೆಳಗಿದ ನಾಡಗೀತೆ ಬರೆದ ಕುವೆಂಪು ಅವರು, ವಿಕಾಸ ಸೌಧ ಕಟ್ಟಿದ ಎಸ್.ಎಂ ಕೃಷ್ಣ ಅವರು ಎಂದು ಹೇಳಿದರು.

    ನನ್ನ ತಂದೆಗೆ ನನ್ನನ್ನು ಎಂಜಿನಿಯರ್ ಮಾಡಬೇಕು ಎನ್ನುವ ಆಸೆ. ಆದರೆ ನನಗೆ ವಕೀಲನಾಗುವ ಆಸೆ. ಚಿನ್ನ, ಬೆಳ್ಳಿ ಮನೆಯಲ್ಲಿಯೇ ಇರುವುದು ಸಾಮಾನ್ಯ. ತುರ್ತು ಪರಿಸ್ಥಿತಿ ಸಮಯದಲ್ಲಿ ನಮ್ಮ ಮನೆ ಮೇಲೆ ಅಧಿಕಾರಿಗಳು ರೈಡ್ ಮಾಡಿದ್ದರು. ರೈಡ್ ಮಾಡಿದ ಅಧಿಕಾರಿ ಎಂಜಿನಿಯರ್. ಅದಕ್ಕೆ ನಮ್ಮ ತಂದೆಗೆ ಓದಿಸಬೇಕು ಎನ್ನುವ ಛಲ. ಆದರೆ ಅವರ ಆಸೆ ಕೈಗೂಡಲಿಲ್ಲ ಎಂದರು.

     

    ನಾನು ಕೊನೆಯ ವರ್ಷದ ಪದವಿ ಓದುವಾಗಲೇ ದೇವೇಗೌಡರ ವಿರುದ್ದ ಚುನಾವಣೆಗೆ ನಿಲ್ಲುವ ಅವಕಾಶ ಬಂದಿತು. ನಾನು ಎಂಜಿನಿಯರ್ ಆಗಲು ಸಾಧ್ಯವಾಗಲಿಲ್ಲ. ಆದರೆ ಗ್ಲೋಬಲ್ ಅಕಾಡೆಮಿ ಎನ್ನುವ ತಾಂತ್ರಿಕ ವಿದ್ಯಾಲಯ ಪ್ರಾರಂಭ ಮಾಡಿದ್ದೇನೆ. ನೂರಾರು ಜನ ಎಂಜಿನಿಯರ್ ಗಳನ್ನು ತಯಾರು ಮಾಡುತ್ತಿದ್ದೇನೆ. ನನಗೆ ವಕೀಲನಾಗುವ ಅವಕಾಶ ಸಿಗಲಿಲ್ಲ ಅದಕ್ಕೆ ಮಗನನ್ನು ವಕೀಲನನ್ನಾಗಿ ಮಾಡಿದ್ದೇನೆ ಎಂದು ತಿಳಿಸಿದರು.

    ನಾನು 29 ವರ್ಷಕ್ಕೆಲ್ಲಾ ಮಂತ್ರಿಯಾದೆ. ಚಿಕ್ಕ ವಯಸ್ಸಿಗೆ ನನಗೆ ಹೆಚ್ಚು ಜವಾಬ್ದಾರಿಗಳು ಹೆಗಲ ಮೇಲೆ ಬಂದವು. ಸದನದಲ್ಲಿ ಘಟಾನುಘಟಿ ನಾಯಕರು ಇದ್ದರು. ವೈ.ಕೆ.ರಾಮಯ್ಯ, ಎ.ಕೆ.ಸುಬ್ಬಯ್ಯ ಅವರು, ನಂಜೇಗೌಡರು ಸೇರಿದಂತೆ ಅನೇಕ ನಾಯಕರ ಮಾತುಗಳನ್ನು ಕೇಳುತ್ತಿದ್ದೆನು. ನನಗೆ ತಲೆ ಸೀಳಿದರೆ ಅಕ್ಷರ ಇರಲಿಲ್ಲ. ನಾನು ಮಾತನಾಡುವುದೆಲ್ಲವು ನನ್ನ ಅನುಭವದ ಮಾತುಗಳು. ಜೀವನದಲ್ಲಿ ಅನುಭವವೇ ಮುಖ್ಯ ಎಂದು ನುಡಿದರು.

    ಸನ್ಮಾನ ಮಾಡಿದಷ್ಟು ಜವಾಬ್ದಾರಿ ಹೆಚ್ಚಾಗುತ್ತದೆ ಆದ ಕಾರಣ ನಾನು ಇದುವರೆಗು ಪ್ರಶಸ್ತಿ ತೆಗೆದುಕೊಳ್ಳಲು ನಾನು ಹೋಗಿಲ್ಲ. ನಾನು ಚಿತ್ರನಟಿ ಪ್ರೇಮಾ ಅವರ ದೊಡ್ಡ ಅಭಿಮಾನಿ. ಅವರು ಕಾರ್ಯಕ್ರಮದಲ್ಲಿ ನಮ್ಮನ್ನು ನಗಿಸುತ್ತಾರೆ ಎಂದುಕೊಂಡೆ ಏಕೋ ನಮ್ಮನ್ನೆಲ್ಲ ನಗಿಸಲಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು.

    ಧಾರವಾಡ ಪೀಠವಾಗಬೇಕು ಎಂದು ಹೋರಾಟ ಮಾಡುತ್ತಿದ್ದರು. ಆಗ ನಾನು ಹಿರಿಯ ವಕೀಲರನ್ನು ಕೇಳಿದರೆ ಅವರೆಲ್ಲರೂ ಇಲ್ಲೇ ಇರಲಿ ಎಂದು ಹೇಳುತ್ತಿದ್ದರು. ಈಗ ಅಲ್ಲಿಯೂ ಸಹ ಚೆನ್ನಾಗಿ ಬೆಳೆಯುತ್ತಿದೆ. ಈ ನಗರದಲ್ಲಿ ಇರುವ ಅತ್ಯುತ್ತಮ ಶಿಕ್ಷಣ ವ್ಯವಸ್ಥೆ ದೇಶದಲ್ಲಿ ಎಲ್ಲಿಯೂ ಇಲ್ಲ. ದೇಶದ ಅತ್ಯುತ್ತಮ ಸಂಸ್ಥೆಗಳು ಇಲ್ಲಿಯೇ ಏಕೆ ಸ್ಥಾಪನೆ ಮಾಡಲಾಯಿತು. ದೇಶದ ಅನೇಕ ಪ್ರತಿಷ್ಟಿತ ಜನರು೦ ಓದಿದ್ದು ಇಲ್ಲಿಯೇ ಎಂದರು.

    ಎಸ್ .ಎಂ. ಕೃಷ್ಣ ಅವರ ಕಾಲದಲ್ಲಿ ನಾನು ನಗರಾಭಿವೃದ್ದಿ ಸಚಿವನಾಗಿದ್ದೆ. ಅಂದು ವಿಮಾನ ನಿಲ್ದಾಣಕ್ಕೆ 6 ಸಾವಿರ ಎಕರೆ ನೀಡಲಾಯಿತು. ಇದೇ ವೇಳೆ ರತನ್ ಟಾಟಾ ಅವರನ್ನು ಭೇಟಿ ಮಾಡಲು ಹೋದಾಗ ಅವರು ನೀವು ಹಾಗೂ ಕೇಂದ್ರ ಸರ್ಕಾರ ಒಟ್ಟಿಗೆ ಕೆಲಸ ಮಾಡಬೇಕು ಎಂದು ಹೇಳಿದ್ದರು. ಇದರ ಶಂಕುಸ್ಥಾಪನೆಗೆ ವಾಜಪೇಯಿ ಅವರು ಬಂದಿದ್ದರು. ಅವರು ಇನ್ನು ಮೇಲೆ ವಿಶ್ವ ನಾಯಕರು ಮೊದಲು ಬೆಂಗಳೂರಿಗೆ ಬಂದು ಆನಂತರ ದೇಶದ ಇತರೇ ಭಾಗಗಳಿಗೆ ಹೋಗುತ್ತಾರೆ ಎಂದು ಹಿರಿಯ ಕಾನೂನು ಸಲಹೆಗಾರರೊಬ್ಬರು ದೆಹಲಿಯಲ್ಲಿ ನನಗೆ ಒಂದು ಮಾತು ಹೇಳಿದರು. ಬೆಂಗಳೂರಿಗೆ ಬಂದವರು ಮತ್ತೆ ವಾಪಸ್ ಬರುವುದಿಲ್ಲವಲ್ಲ ಎಂದರು. ಅದಕ್ಕೆ ನಾನು ನಮ್ಮ ನೆಲದ ಸಂಸ್ಕೃತಿ, ಗುಣ ಎಂದು ಉತ್ತರಿಸಿದೆ ಎಂದು ಹೇಳಿದರು.

    ಅಮೆರಿಕ, ಚೈನಾದಲ್ಲಿ ಐಫೋನ್ ತಯಾರು ಮಾಡಲು ಅಧಿಕ ವೆಚ್ಚವಾಗುತ್ತದೆ ಆದ ಕಾರಣಕ್ಕೆ ಇಲ್ಲಿಗೆ ಬಂದು ತಯಾರು ಮಾಡುತ್ತಿದ್ದಾರೆ. ಇದರಿಂದ 50 ಸಾವಿರ ಜನರಿಗೆ ಉದ್ಯೋಗ ದೊರೆತಿದೆ. ಇಲ್ಲಿನ ತಾಂತ್ರಿಕ ನೈಪುಣ್ಯತೆಯೂ ಚೆನ್ನಾಗಿ ಇರುವ ಕಾರಣಕ್ಕೆ ಅವರು ಬಂದಿದ್ದಾರೆ ಎಂದು ತಿಳಿಸಿದರು.

    ಬೆಂಗಳೂರಿನ ವಕೀಲರ ಸಂಘ 25 ಸಾವಿರ ಸದಸ್ಯತ್ವ ಹೊಂದಿದೆ ಎಂದು ಕೇಳಲ್ಪಟ್ಟೆ. ನೀವು ಮನಸ್ಸು ಮಾಡಿದರೆ ಬೆಂಗಳೂರಿನಲ್ಲಿ ಯಾವ ಪಕ್ಷವನ್ನು ಕೂಡ ಅಧಿಕಾರಕ್ಕೆ ತರಬಹುದು, ಬೀಳಿಸಬಹುದು ಎಂದರು.

    ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ದಾಟಿದೆ. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ರಸ್ತೆಯ ಸಾಮರ್ಥ್ಯ ಮಾತ್ರ ಅಷ್ಟೇ ಇದೆ. ಇತ್ತೀಚೆಗೆ ಯಾರೋ ಮೆಟ್ರೋ ಹಳದಿ ಮಾರ್ಗ ಆಗಿಲ್ಲ ಎಂದು ಪ್ರತಿಭಟನೆ ಮಾಡುತ್ತಿದ್ದರು. ಅದರ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಕೆಲವರು ಚಟಕ್ಕೆ ಮಾಧ್ಯಮಗಳಲ್ಲಿ ಬರುತ್ತೇವೆ ಎಂದು ಏನೋ ಮಾಡುತ್ತಾರೆ ಎಂದರು.

    ಶಿವರಾಂ ಕಾರಂತ ಬಡಾವಣೆಗೆ ಏಳು ಸಾವಿರ ಕೋಟಿ ಬಂಡವಾಳ ಹಾಕಿದ್ದೇವೆ ಆದರೆ ನ್ಯಾಯಲಯದಲ್ಲಿ ದಾವೆ ಹೂಡಿರುವ ಕಾರಣಕ್ಕೆ ಅವರು ಅರ್ಜಿಯನ್ನೇ ತೆಗೆದುಕೊಳ್ಳಬೇಡಿ ಎಂದಿದ್ದಾರೆ. ಇದೆಲ್ಲವೂ ಸರ್ಕಾರಕ್ಕೆ ನಷ್ಟ ಎಂದು ಹೇಳಿದರು.

  • ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿದ್ದರಾಮಯ್ಯ

    ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿದ್ದರಾಮಯ್ಯ

    ಬೆಂಗಳೂರು: ಕೆಂಪೇಗೌಡರು (Kempe Gowda) ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

    ಬೆಂಗಳೂರಿನ ವಿಧಾನಸೌಧದ (Vidhana Soudha) ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

    ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ (BBMP) ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು. ಇದನ್ನೂ ಓದಿ: ವಿಷ ಪ್ರಾಷನದಿಂದಲೇ 5 ಹುಲಿಗಳು ಸಾವು: ಖಚಿತ ಪಡಿಸಿದ ಸಿಸಿಎಫ್ ಹೀರಾಲಾಲ್

    ಕೆಂಪೇಗೌಡರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಗ್ವಾಲಿಯರ್‌-ಬೆಂಗಳೂರು ಹೊಸ ರೈಲಿಗೆ ಚಾಲನೆ

    ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.

    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

    ತನಿಖೆಗೆ ಕ್ರಮ :  ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

  • ‘ಕಟ್ಲೆ’ ಸಿನಿಮಾದ ಸಾಂಗ್ ರಿಲೀಸ್ ಮಾಡಿದ ಡಾರ್ಲಿಂಗ್ ಕೃಷ್ಣ

    ‘ಕಟ್ಲೆ’ ಸಿನಿಮಾದ ಸಾಂಗ್ ರಿಲೀಸ್ ಮಾಡಿದ ಡಾರ್ಲಿಂಗ್ ಕೃಷ್ಣ

    ರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ (Kempegowda)ಪ್ರಮುಖಪಾತ್ರದಲ್ಲಿ ನಟಿಸಿರುವ “ಕಟ್ಲೆ” (Katle) ಚಿತ್ರದ ಮೊದಲ ಹಾಡನ್ನು (Song) ನಟ ಡಾರ್ಲಿಂಗ್ ಕೃಷ್ಣ (Darling Krishna)  ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.  ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ” ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ಹಾಸ್ಯನಟನಾಗಿದ್ದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನಾಯಕನನ್ನಾಗಿ ಮಾಡಿದ ನಿರ್ಮಾಪಕ ಭರತ್ ಗೌಡ ಅವರಿಗೆ ನಾನು ಆಭಾರಿ ಎಂದು ಮಾತು ಆರಂಭಿಸಿದ ನಾಯಕ ಕೆಂಪೇಗೌಡ, ಶ್ರೀವಿದ ಅವರು “ಕಟ್ಲೆ” ಚಿತ್ರಕ್ಕೆ ಅದ್ಭುತವಾದ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚೇತನ್ ಕುಮಾರ್ ಬರೆದು ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿರುವ ಈ ಹಾಡು ಎಲ್ಲರಿಗೂ ಮೆಚ್ಚುಗೆಯಾಗಲಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಡಾರ್ಲಿಂಗ್ ಕೃಷ್ಣ ಅವರಿಗೆ ಧನ್ಯವಾದ ಎಂದರು.

    ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ಭರತ್ ಗೌಡ‌ ಅವರು. ಅವರು ನಮ್ಮ‌ ಮೇಲೆ ನಂಬಿಕೆಯಿಟ್ಟು ಬಂಡವಾಳ ಹಾಕಿರುವುದೇ ನಮ್ಮ ಕನಸು ನನಸಾಗಲು ಕಾರಣ. ಅವರಿಗೆ ಹಾಗೂ ನನ್ನ‌ ತಂಡಕ್ಕೆ ನನ್ನ ಧನ್ಯವಾದ. ನಮ್ಮ ಚಿತ್ರದ ಪ್ರಥಮ ಹಾಡು ಇಂದು ಬಿಡುಗಡೆಯಾಗಿದೆ.  ಸದ್ಯದಲ್ಲೇ “ಕಟ್ಲೆ” ಸೆನ್ಸಾರ್ ವೀಕ್ಷಿಸಲಿದ್ದು, ಡಿಸೆಂಬರ್ ವೇಳೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು ನಿರ್ದೇಶಕ ಶ್ರೀವಿದ.

    ಶ್ರೀವಿದ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಎಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಭರತ್ ಗೌಡ ಹೇಳಿದರು‌. ಹಾಡು ಹುಟ್ಟಿದ ಬಗ್ಗೆ ಹಾಡು ಬರೆದಿರುವ ಚೇತನ್ ಕುಮಾರ್ ಹಾಗೂ ಸಂಗೀತ ಸಂಯೋಜಕನೆ ಕುರಿತು ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಮಾಹಿತಿ ನೀಡಿದರು. ನಾಯಕಿಯರಾದ ಅಮೃತ ರಾಜ್, ಸಂಹಿತ, ನಟರಾದ ಉಮೇಶ್, ತಬಲ ನಾಣಿ, ಹರೀಶ್ ರಾಜ್, ಕರಿಸುಬ್ಬು ನಟಿಯರಾದ ಶೃತಿ, ನಿಸರ್ಗ ಅಪ್ಪಣ್ಣ ಮುಂತಾದವರು “ಕಟ್ಲೆ” ಬಗ್ಗೆ ಮಾತನಾಡಿದರು.

  • ‘ಕೆಂಪೇಗೌಡ’ ಚಿತ್ರದ ಬಜೆಟ್ 60 ಕೋಟಿ ರೂಪಾಯಿ: ಫಿಕ್ಸ್ ಆಗಿದ್ದಾರೆ ಹೀರೋ

    ‘ಕೆಂಪೇಗೌಡ’ ಚಿತ್ರದ ಬಜೆಟ್ 60 ಕೋಟಿ ರೂಪಾಯಿ: ಫಿಕ್ಸ್ ಆಗಿದ್ದಾರೆ ಹೀರೋ

    ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರವರ ಜೀವನ ಚರಿತ್ರೆ (biopic) ಸಿನಿಮಾವಾಗುತ್ತಿರುವ ವಿಚಾರವನ್ನು ಈ ಹಿಂದೆ ಓದಿದ್ದೀರಿ. ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಎಂಬ ಶೀರ್ಷಿಕೆಯಡಿ ಸಿನಿಮಾ ಘೋಷಣೆಯಾಗಿದೆ. ಇದು 60 ಕೋಟಿ ರೂಪಾಯಿಗೂ ಅಧಿಕ ಬಜೆಟ್ ನಲ್ಲಿ ನಿರ್ಮಾಣವಾಗಲಿದೆಯಂತೆ. ಕನ್ನಡದ ನಟರೇ ಕೆಂಪೇಗೌಡ ಪಾತ್ರವನ್ನು ಮಾಡಲಿದ್ದು, ಕೇರಳದಲ್ಲಿ ಅವರು ಕೆಲ ವಿದ್ಯೆಗಳನ್ನು ಕಲಿಯುತ್ತಿದ್ದಾರಂತೆ.

    ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಅಂತೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರನ್ನು ಕಟ್ಟಿ ಬೆಳೆಸಿದ ನಾಡಪ್ರಭು ಕೆಂಪೇಗೌಡರ ಸಾಹಸ ಕಥೆಯನ್ನು ಸಿನಿಮಾ ರೂಪಕ್ಕೆ ಇಳಿಸುತ್ತಿರುವುದು ರಾಜ್ಯ ಪ್ರಶಸ್ತಿ ವಿಜೇತ ಖ್ಯಾತ ನಿರ್ದೇಶಕ ದಿನೇಶ್ ಬಾಬು. ಇನ್ಸ್‌ಪೆಕ್ಟರ್‌ ವಿಕ್ರಂ, ಅಭಿ ಸೇರಿದಂತೆ 50ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿರುವ ದಿನೇಶ್ ಬಾಬು (Dinesh Babu) ಧರ್ಮಬೀರು ನಾಡಪ್ರಭು ಕೆಂಪೇಗೌಡ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹಾಗಿದ್ರೆ ನಾಡಪ್ರಭು ಕೆಂಪೇಗೌಡರಾಗಿ ಬಣ್ಣ ಹಚ್ಚುತ್ತಿರುವವರು ಯಾರು ಅನ್ನೋದನ್ನು ಸದ್ಯಕ್ಕೆ ಚಿತ್ರತಂಡ ರಿವೀಲ್ ಮಾಡಿಲ್ಲ. ಜನಪ್ರಿಯ ನಟರೊಬ್ಬರು ಕೆಂಪೇಗೌಡರಾಗಿ ರಾರಾಜಿಸಲಿದ್ದಾರೆ ಎನ್ನುತ್ತದೆ ಚಿತ್ರತಂಡ. ಸದ್ಯ ಆ ನಟ ತಮ್ಮ ಪಾತ್ರದ ತಯಾರಿಯಲ್ಲಿ ಬ್ಯುಸಿಯಾಗಿದ್ದು, ಮುಂದಿನ ದಿನಗಳಲ್ಲಿ ಅವರನ್ನು ನಿಮ್ಮ ಮುಂದೆ ಪರಿಚಯಿಸುವುದಾಗಿ ಚಿತ್ರತಂಡ ತಿಳಿಸಿದೆ.

    ವೃತ್ತಿಯಲ್ಲಿ ವೈದ್ಯರಾಗಿರುವ ಕಿರಣ್ ತೋಟಂಬೈಲ್ ಸಿನಿಮಾ ಮೇಲಿನ ಪ್ರೀತಿಯಿಂದಾಗಿ ಈ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕೆಂಪೇಗೌಡ ಮೆಡಿಕಲ್ ಕಾಲೇಜ್‌ನಲ್ಲಿ ವ್ಯಾಸಂಗ ಮಾಡುವಾಗಲೇ ಮುಂದೊಂದು ದಿನ ಕೆಂಪೇಗೌಡರ ಸಿನಿಮಾ ಮಾಡಬೇಕು ಅಂದುಕೊಂಡಿದ್ದರಂತೆ. ಅದರಂತೆ ಇಂದು ಧರ್ಮಬೀರು ನಾಡಪ್ರಭು ಕೆಂಪೇಗೌಡರ (Dharmabeeru Nadaprabhu Kempegowda)  ಸಿನಿಮಾ ನಿಮ್ಮ ಮುಂದೆ ತರಲು ಸಜ್ಜಾಗಿದ್ದಾರೆ.

     

    ಧರ್ಮೇಂದ್ರ ಕುಮಾರ್ ಅರೇನಹಳ್ಳಿ ಕಥೆ ಬರೆದಿದ್ದು, ಸಂಕೇತ್ ಎಂವೈಎಸ್ ಈ ಸಿನಿಮಾಗೆ ಕ್ಯಾಮೆರಾ ಹಿಡಿಯುತ್ತಿದ್ದು, ಉಜ್ವಲ್ ಕುಲಕರ್ಣಿ ಸಂಕಲನ, ನಿರ್ಮಾಪಕರಾದ ಕಿರಣ್ ತೋಟಂಬೈಲ್ ಸಂಗೀತ ಒದಗಿಸುತ್ತಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಹಾಗೂ ಸಂತೋಷ್ ನಾಯಕ್ ಸಾಹಿತ್ಯ ಹಾಡುಗಳಿಗಿದ್ದು, ಮಾಸ್ತಿ ಹಾಗೂ ರಘು‌ ನಿಡುವಳ್ಳಿ ಸಂಭಾಷಣೆ ಧರ್ಮಬೀರು ನಾಡಪ್ರಭು ಕೆಂಪೇಗೌಡ ಚಿತ್ರಕ್ಕಿದ್ದು, ಚೇತನ್ ರಾಜ್ ನಿರ್ಮಾಣ ನಿರ್ವಹಣೆಯನ್ನು  ಮಾಡುತ್ತಿದ್ದಾರೆ.  ಕನ್ನಡ ಹಾಗೂ‌‌‌ ಇಂಗ್ಲೀಷ್ ಭಾಷೆಯಲ್ಲಿ ಚಿತ್ರ‌ ನಿರ್ಮಾಣವಾಗಲಿದ್ದು,  ಮೇ ಅಥವಾ ಜೂನ್ ತಿಂಗಳಲ್ಲಿ‌ ಮುಹೂರ್ತ ನಡೆಯಲಿದೆ. ಮುಹೂರ್ತ ಮುಗಿಸಿಕೊಂಡು ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

  • ನಾಯಿ, ನರಿ ಬೊಗಳಿದರೆ ಇತಿಹಾಸ ಬದಲಾಗಲ್ಲ: ನಟ ಚೇತನ್ ಬಗ್ಗೆ ಜಗ್ಗೇಶ್ ಕಟುನುಡಿ

    ನಾಯಿ, ನರಿ ಬೊಗಳಿದರೆ ಇತಿಹಾಸ ಬದಲಾಗಲ್ಲ: ನಟ ಚೇತನ್ ಬಗ್ಗೆ ಜಗ್ಗೇಶ್ ಕಟುನುಡಿ

    ನಾಡಪ್ರಭು ಕೆಂಪೇಗೌಡ ವಿಚಾರವಾಗಿ ನಟ ಚೇತನ್ ಮಾಡಿರುವ ಎಕ್ಸ್ (ಟ್ವೀಟ್) ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತಂತೆ ಸಾಕಷ್ಟು ಪ್ರತಿಕ್ರಿಯೆಗಳು ಕೂಡ ವ್ಯಕ್ತವಾಗಿವೆ. ನಟ ಜಗ್ಗೇಶ್ (Jaggesh) ಕೂಡ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಚೇತನ್ ಮೇಲೆ ಹರಿಹಾಯ್ದಿದ್ದಾರೆ.

    ಕೆಂಪೇಗೌಡ ವಿಜಯನಗರ ಸಾಮ್ರಾಜ್ಯದ ಒಡೆಯನ ತೊಡೆಯ ಮೇಲೆ ಕೂತು ಬೆಳೆದ ಮಗು. ಮುಂದೆ ಸಾಮಾಜಿಕ ನ್ಯಾಯ ಎತ್ತಿ ಸಾರ್ವಭೌಮ. ಇಂದಿನ ನಾಯಿ ನರಿ ಬೊಗಳಿದರೆ ಅವರ ಇತಿಹಾಸ ಬದಲಾಗುವುದೆ. ಚಿತ್ರರಂಗದಲ್ಲಿ ನೆಲೆಕಾಣದೆ ಚಾಪು ಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತ? ಕಾನೂನಿನಿದೆ ಎಚ್ಚರ  ಎಂದು ಸೋಷಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ.

    ಚೇತನ್ ವಿರುದ್ಧ ದೂರು

    ವಿವಾದಾತ್ಮಕ ಹೇಳಿಕೆಯ ಮೂಲಕವೇ ಸಾಕಷ್ಟು ಸದ್ದು ಮಾಡುತ್ತಿರುವ ನಟ ಚೇತನ್ (Chetan) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ನಟ ಚೇತನ್ ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ನಾಡಪ್ರಭು ಕೆಂಪೇಗೌಡರ (Kempegowda) ವಿರುದ್ಧ ಅವಮಾನ ಮಾಡುವಂತಹ ಪೋಸ್ಟ್ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ವಕೀಲ ಆರ್.ಎಲ್.ಎನ್ ಮೂರ್ತಿ ಎನ್ನುವವರು ಶೇಷಾದ್ರಿ ಪುರಂ (Seshadripuram) ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು (complaint) ನೀಡಿದ್ದಾರೆ.

    ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರಾದೃಷ್ಟವಶಾತ್ ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಚೇತನ್ ಬರೆದಿದ್ದರು.

     

    ಈ ಟ್ವೀಟ್ ಅನ್ನು ಆಧರಿಸಿ ಮೂರ್ತಿ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು ದಾಖಲಿಸಿದ್ದಾರೆ. ಚೇತನ್ ನೇರ ನಿಷ್ಠುರದ ಕಾರಣದಿಂದಾಗಿ ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತಾರೆ. ಇಂತಹ ವಿಚಾರಗಳಿಗಾಗಿ ಹಲವಾರು ಬಾರಿ ಇವರ ಮೇಲೆ ದೂರುಗಳು ದಾಖಲಾಗಿವೆ.

  • ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್ ವಿರುದ್ಧ ದೂರು

    ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್ ವಿರುದ್ಧ ದೂರು

    ವಿವಾದಾತ್ಮಕ ಹೇಳಿಕೆಯ ಮೂಲಕವೇ ಸಾಕಷ್ಟು ಸದ್ದು ಮಾಡುತ್ತಿರುವ ನಟ ಚೇತನ್ (Chetan) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ನಟ ಚೇತನ್ ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ನಾಡಪ್ರಭು ಕೆಂಪೇಗೌಡರ (Kempegowda) ವಿರುದ್ಧ ಅವಮಾನ ಮಾಡುವಂತಹ ಪೋಸ್ಟ್ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ವಕೀಲ ಆರ್.ಎಲ್.ಎನ್ ಮೂರ್ತಿ ಎನ್ನುವವರು ಶೇಷಾದ್ರಿ ಪುರಂ (Seshadripuram) ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು (complaint) ನೀಡಿದ್ದಾರೆ.

    ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರಾದೃಷ್ಟವಶಾತ್ ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಚೇತನ್ ಬರೆದಿದ್ದರು.

    ಈ ಟ್ವೀಟ್ ಅನ್ನು ಆಧರಿಸಿ ಮೂರ್ತಿ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು ದಾಖಲಿಸಿದ್ದಾರೆ. ಚೇತನ್ ನೇರ ನಿಷ್ಠುರದ ಕಾರಣದಿಂದಾಗಿ ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತಾರೆ. ಇಂತಹ ವಿಚಾರಗಳಿಗಾಗಿ ಹಲವಾರು ಬಾರಿ ಇವರ ಮೇಲೆ ದೂರುಗಳು ದಾಖಲಾಗಿವೆ.

  • ನಾಡಪ್ರಭು ಕೆಂಪೇಗೌಡರಿಗೆ ಅಗೌರವ ತೋರಿ ನಟ ಚೇತನ್‌ ಪೋಸ್ಟ್‌

    ನಾಡಪ್ರಭು ಕೆಂಪೇಗೌಡರಿಗೆ ಅಗೌರವ ತೋರಿ ನಟ ಚೇತನ್‌ ಪೋಸ್ಟ್‌

    – ನಟ ಚೇತನ್‌ ವಿರುದ್ಧ ಎನ್‌ಸಿಆರ್‌ ದಾಖಲಿಸಿದ ಶೇಷಾದ್ರಿಪುರಂ ಪೊಲೀಸ್‌
    – ಸಿಎಂ ಕ್ರಮ ಕೈಗೊಳ್ಳುವಂತೆ ಅಶ್ವಥ್‌ ನಾರಾಯಣ್‌ ಆಗ್ರಹ

    ಬೆಂಗಳೂರು: ಆಗಾಗ್ಗೆ ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ಮೂಲಕ ಹೇಳಿಕೆ ನೀಡುತ್ತಾ ವಿವಾದಕ್ಕೆ ಗುರಿಯಾಗುತ್ತಿರುವ ನಟ ಚೇತನ್‌ (Chetan Kumar Ahimsa) ಮತ್ತೊಂದು ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

    ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ (Kempegowda) ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶೇಷಾದ್ರಿಪುರಂ ಪೊಲೀಸರು ಎನ್‌ಸಿಆರ್‌ ದಾಖಲಿಸಿದ್ದಾರೆ. ಇದನ್ನೂ ಓದಿ: ಸಂಸತ್‌ನಲ್ಲಿನ ಭದ್ರತಾ ಲೋಪಕ್ಕೂ, ಸಂಸದರ ಅಮಾನತಿಗೂ ಸಂಬಂಧವಿಲ್ಲ: ಲೋಕಸಭಾ ಸ್ಫೀಕರ್‌ ಸ್ಪಷ್ಟನೆ

    ಇಬ್ಬರು ಯೋಧರ ಕಥೆ ಎಂದು ಕೆಂಪೇಗೌಡ ಹಾಗೂ ಟಿಪ್ಪು ಸುಲ್ತಾನ್ (Tipu Sultan) ಬಗ್ಗೆ ಬರಹವೊಂದನ್ನು ಚೇತನ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೆಂಪೇಗೌಡ: ಊಳಿಗಮಾನ್ಯ ಜಾತಿ ಲಾಭಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್: ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಬರಹವನ್ನು ಗಮನಿಸಿ ವಕೀಲ ಆರ್.ಎಲ್.ಎನ್ ಮೂರ್ತಿ ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದಾರೆ.

    ತಾನೊಬ್ಬ ನಟ ಎಂದು ಹೇಳಿಕೊಳ್ಳುವ ಚೇತನ್‌ ಅಹಿಂಸಾ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಾಕಿ ನಾಡಪ್ರಭುಗಳಿಗೆ ಅಗೌರವ ತೋರಿದ್ದಾರೆ. ಅವರ ವಿರುದ್ಧ ಸಾಕಷ್ಟು ಪ್ರಕರಣಗಳು ದಾಖಲಾಗಿವೆ. ಈ ದೇಶದ ಪ್ರಜೆಯಾಗಿರದ ಚೇತನ್‌ ಗೌರವಾನ್ವಿತ ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿರುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಆದ್ದರಿಂದ ಕೂಡಲೇ ಅವರನ್ನು ವಿಚಾರಣೆಗೆ ಒಳಪಡಿಸಿ, ಸೋಶಿಯಲ್‌ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್‌ಗಳನ್ನು ತೆಗೆಸಬೇಕು, ಚೇತನ್‌ ಪಾಸ್‌ಪೋರ್ಟ್‌ ರದ್ದು ಮಾಡಿ ಅವರನ್ನ ಮಾತೃದೇಶಕ್ಕೆ ಗಡಿಪಾರು ಮಾಡಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪೆಂಟಗನ್‌ ಮೀರಿಸುವ ವಿಶ್ವದ ಅತಿದೊಡ್ಡ ಕಚೇರಿ ಸಂಕೀರ್ಣ ʻಸೂರತ್ ಡೈಮಂಡ್ ಬೋರ್ಸ್ʼ – ಭಾನುವಾರ ಪ್ರಧಾನಿ ಮೋದಿಯಿಂದ ಉದ್ಘಾಟನೆ

    ಕ್ರಮ ವಹಿಸಲು ಸಿಎಂಗೆ ಆಗ್ರಹ: ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌ ಅಶ್ವಥ್‌ ನಾರಾಯಣ್‌ ಅವರೂ ಸಹ ಚೇತನ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಚೇತನ್‌ ಎನ್ನುವ ವ್ಯಕ್ತಿಯು ನಾಡಪ್ರಭು ಕೆಂಪೇಗೌಡರ ಕುರಿತು ಕೀಳು ಅಭಿರುಚಿಯ ಪದ ಬಳಕೆ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ. ಯಾವುದೇ ಒಂದು ಸಮುದಾಯದ ಭಾವನೆಗೆ ಧಕ್ಕೆ ತಂದು ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರನ್ನು ನಿಯಂತ್ರಿಸಲು ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎನ್ನುವುದಕ್ಕೆ ಇಷ್ಟೊಂದು ಸ್ಪಷ್ಟ ನಿದರ್ಶನ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಆತ್ಮಾಹುತಿಗೂ ಪ್ಲಾನ್ ಮಾಡಿದ್ದ ಸಂಸತ್ ದಾಳಿಕೋರರು – ಶೀಘ್ರವೇ ಪ್ರತಾಪ್ ಸಿಂಹ ವಿಚಾರಣೆ

  • ‘ಸುಬ್ರಹ್ಮಣ್ಯ’ನಾದ ಆರ್ಮುಗಂ ರವಿಶಂಕರ್ ಪುತ್ರ- ಮಗನ ಚಿತ್ರಕ್ಕೆ ಅಪ್ಪನೇ ಡೈರೆಕ್ಟರ್

    ‘ಸುಬ್ರಹ್ಮಣ್ಯ’ನಾದ ಆರ್ಮುಗಂ ರವಿಶಂಕರ್ ಪುತ್ರ- ಮಗನ ಚಿತ್ರಕ್ಕೆ ಅಪ್ಪನೇ ಡೈರೆಕ್ಟರ್

    ರ್ಮುಗಂ ರವಿಶಂಕರ್ ಆ್ಯಕ್ಟರ್ ಮಾತ್ರವಲ್ಲ ಡೈರೆಕ್ಟರ್, ರೈಟರ್, ಸಿಂಗರ್, ವಾಯ್ಸ್ ಓವರ್ ಆರ್ಟಿಸ್ಟ್ ಕೂಡ ಹೌದು. ಸಿನಿಕೆರಿಯರ್ ಆರಂಭದಲ್ಲಿ ಡಬ್ಬಿಂಗ್ ಆರ್ಟಿಸ್ಟ್ ಆಗಿದ್ದರು. ಅನಂತರ ಒಂದೊಂದೆ ಮೆಟ್ಟಿಲುಗಳನ್ನೇರುತ್ತಾ ನಟನಾಗುವ ತಮ್ಮ ಕನಸನ್ನ ಈಡೇರಿಸಿಕೊಂಡರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep) ನಟನೆಯ ‘ಕೆಂಪೇಗೌಡ’ (Kempegowda) ಸಿನಿಮಾದಲ್ಲಿ ಆರ್ಮುಗಂ ಪಾತ್ರದಲ್ಲಿ ನಟಿಸುವ ಮೂಲಕ ಜನಪ್ರಿಯತೆ ಗಳಿಸಿದರು. ಅಲ್ಲಿವರೆಗೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು ಕೂಡ ಬಿಗ್ ಬ್ರೇಕ್ ಸಿಕ್ಕಿರಲಿಲ್ಲ. ಆದರೆ, ಕೆಂಪೇಗೌಡ ಸಿನಿಮಾದಿಂದ ರವಿಶಂಕರ್ (Ravishankar) ಕೆರಿಯರ್ ಬದಲಾಯ್ತು. ನೇಮು-ಫೇಮು-ಕ್ರೇಜು-ಕಾಸು ಹೀಗೆ ಎಲ್ಲವೂ ಕೂಡ ಒಟ್ಟೊಟ್ಟಿಗೆ ದಕ್ಕಿತು, ಬೇಡಿಕೆ ಸೃಷ್ಟಿಯಾಯ್ತು. ಈಗಲೂ ಆ ಬೇಡಿಕೆ ತಗ್ಗಿಲ್ಲ, ಸದ್ಯಕ್ಕೆ ತಗ್ಗೋದು ಇಲ್ಲ ಅನ್ನೋದಕ್ಕೆ ಅವರ ಕೈಯಲ್ಲಿರುವ ಸಿನಿಮಾಗಳೇ ಸಾಕ್ಷಿ.

    ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ‌ಂ ರವಿಶಂಕರ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಕಳೆದ 20 ವರ್ಷಗಳ ಹಿಂದೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀಗೆ ಮೊದಲ ಭಾರಿ ಆ್ಯಕ್ಷನ್ ಕಟ್ ಹೇಳಿದ್ದರು. ‘ದರ‍್ಗಿ’ ಸಿನಿಮಾ ಡೈರೆಕ್ಷನ್ ಮಾಡುವ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದರು. ಅವತ್ತಿಗೆ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿ ತೆಲುಗಿಗೆ ರಿಮೇಕ್ ಕೂಡ ಆಗಿತ್ತು. ರವಿಶಂಕರ್‌ಗೆ ಈ ಚಿತ್ರದಿಂದ ಒಳ್ಳೆಯ ಹೆಸರು ಬಂದಿತ್ತು. ಆದರೆ, ಅದ್ಯಾಕೋ ಏನೋ ಗೊತ್ತಿಲ್ಲ ‘ದರ‍್ಗಿ’ ನಂತರ ಡೈರೆಕ್ಷನ್ ಕಡೆ ಮುಖ ಮಾಡಿರಲಿಲ್ಲ. ಇದೀಗ, 20 ವರ್ಷಗಳು ಉರುಳಿದ್ಮೇಲೆ ಮತ್ತೆ ಡೈರೆಕ್ಟರ್ ಹ್ಯಾಟ್ ತೊಡಲು ರೆಡಿಯಾಗಿದ್ದಾರೆ. ಅದು ಅವರ ಮಗನ ಸಿನಿಮಾಗೆ ಅನ್ನೋದು ವಿಶೇಷ.

    ರವಿಶಂಕರ್ ಅವರ ಮಗ ಅದ್ವಯ್‌ ಶಂಕರ್ (Adhvay Shankar) ವಿದೇಶದಲ್ಲಿ ನಟನಾ ತರಬೇತಿಯನ್ನು ಪಡೆದುಕೊಂಡಿದ್ದಾರೆ. ವಿದ್ಯಾಭ್ಯಾಸವೆಲ್ಲ ಮುಗಿಸಿ ವಾಪಾಸ್ ಹುಟ್ಟೂರಿಗೆ ಮರಳಿರುವ ಮಗನನ್ನು ಬಣ್ಣದ ಜಗತ್ತಿಗೆ ಪರಿಚಯಿಸಿದ್ದಾರೆ. ತಾತನಂತೆ, ಅಪ್ಪ-ಚಿಕ್ಕಪ್ಪರಂತೆ ಕಲೆ ರಕ್ತಗತವಾಗಿ ಬಂದಿರುವುದರಿಂದ ಮುಖಕ್ಕೆ ಬಣ್ಣ ಹಚ್ಚಲು ಅದ್ವಯ್ ಕೂಡ ಓಕೆ ಹೇಳಿದ್ದು, ಪುತ್ರನ ಚೊಚ್ಚಲ ಚಿತ್ರಕ್ಕೆ ತಾವೇ ಆ್ಯಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ. ನಟ ಕಮ್ ನಿರ್ದೇಶಕ ರವಿಶಂಕರ್.

    ಇಂದು ಆಯುಧಪೂಜೆ ಅಂಗವಾಗಿ ಅದ್ವಯ್‌ ಚೊಚ್ಚಲ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ‘ಸುಬ್ರಹ್ಮಣ್ಯ’ (Subrahmanya Film) ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಪೋಸ್ಟರ್‌ನಲ್ಲಿ ದೈವಿಕ ಅಂಶಗಳು ಹೈಲೆಟ್ ಆಗಿವೆ. ಪೋಸ್ಟರ್‌ನಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಮತ್ತು ಅವರ ವಾಹನ ನವಿಲನ್ನು ತೋರಿಸಲಾಗಿದೆ. ನಾಯಕ ಅದ್ವಯ್‌ ಒಂದು ಕೈಯಲ್ಲಿ ಜ್ವಾಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ನಿಗೂಢವಾಗಿ ಕಾಣುವ ಪುಸ್ತಕವನ್ನು ಇಟ್ಟುಕೊಂಡಿದ್ದಾರೆ. ಇದನ್ನೂ ಓದಿ:‘ಮಗ್ಗಿ ಪುಸ್ತಕ’ದ ಫಸ್ಟ್ ಲುಕ್ ಲಾಂಚ್ ಮಾಡಿದ ಯದುವೀರ ಒಡೆಯರ್

    ಅರ್ಜುನ್ ರೆಡ್ಡಿ ಸಿನಿಮಾ ಖ್ಯಾತಿಯ ರಾಜ್ ತೋಟ ಕ್ಯಾಮೆರಾ ಹಿಡಿದಿದ್ದು, ಕೆಜಿಎಫ್ ಸಲಾರ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರ್ ಸಂಗೀತ, ವಿಜಯ್ ಎಂ ಕುಮಾರ್ ಸಂಕಲನ, ಮಾಸ್ತಿ ಸಂಭಾಷಣೆ ಸುಬ್ರಹ್ಮಣ್ಯ ಸಿನಿಮಾಕ್ಕಿದೆ. ಎಸ್ ಜಿ ಮೂವೀ ಮೇಕರ್ಸ್‌ ಬ್ಯಾನರ್ ನಡಿ ತಿರುಮಲ ರೆಡ್ಡಿ ಮತ್ತು ಅನಿಲ್ ಕಡಿಯಾಲ ಬಂಡವಾಳ ಹಾಕಿದ್ದು, ಪ್ರವೀಣಾ ಕಡಿಯಾಲ ಹಾಗೂ ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸುಬ್ರಹ್ಮಣ್ಯ ಸಿನಿಮಾ ತಯಾರಾಗುತ್ತಿದ್ದು, ಡಿಸೆಂಬರ್‌ನಿಂದ ಚಿತ್ರತಂಡದ ಶೂಟಿಂಗ್ ಶುರುವಾಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಅನು ಗೌಡ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

    ನಟಿ ಅನು ಗೌಡ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

    ನ್ನಡ ಕಿರುತೆರೆ, ಹಿರಿತೆರೆಯಲ್ಲಿ ಆಕ್ಟೀವ್ ಆಗಿರುವ ಅನು ಗೌಡ (Actress Anu Gowda) ಅವರ ಮೇಲೆ ಜಮೀನು ವಿವಾದದ ವಿಚಾರವಾಗಿ ಹಲ್ಲೆ ನಡೆದಿದೆ. ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ಪರಿಚಿತರಾಗಿರುವ ಅನು ಗೌಡ ಮೇಲೆ ಜಮೀನು ವಿಚಾರಕ್ಕೆ ಸ್ಥಳಿಯ ನಿವಾಸಿಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಇದನ್ನೂ ಓದಿ:ನೀನು ಆಂಟಿಯಾಗಿ 1 ವರ್ಷದ ಅನುಭವವಿದೆ- ಬರ್ತ್‌ಡೇಯಂದು ಪತ್ನಿ ಕಾಲೆಳೆದ ನಟ ಸುದರ್ಶನ್

    ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸದ್ಯ ನಟಿ ಅನು ಗೌಡ ಸಾಗರದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಮೀನಿನ ವಿಚಾರದಲ್ಲಿ ಸ್ಥಳೀಯ ನೀವಾಸಿಗಳಾದ ನೀಲಮ್ಮ- ಮೋಹನ್ ಎನ್ನುವರು ಅನು ಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಸ್ಪಡಿಯಲ್ಲಿರುವ ಜಮೀನನ್ನು ನಟಿ ಅನು, ಅಪ್ಪ ಅಮ್ಮ ನೋಡಿಕೊಳ್ಳುತ್ತಿದ್ದು, ಅನು ಗೌಡ ಆಗಾಗ ಬೆಂಗಳೂರಿನಿಂದ ಬಂದು ಹೋಗುತ್ತಿದ್ದರು. ಆದರೆ, ಜಮೀನು ವಿವಾದ ವಿಚಾರಕ್ಕೆ ಅನು ಗೌಡ ಮೇಲೆ ಹಲ್ಲೆ ಮಾಡಲಾಗಿದೆ.

    ನಟಿ ಅನು ಗೌಡ ತಮಿಳು ಸೇರಿದಂತೆ ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ವಿಷ್ನುವರ್ಧನ್, ಶಿವಣ್ಣ, ಅಪ್ಪು ಹಾಗೂ ಸುದೀಪ್ ಸಿನಿಮಾಗಳಲ್ಲಿ ಸೈಡ್ ಆಕ್ಟಿಂಗ್ ಮಾಡಿದ್ದಾರೆ. ಕನ್ನಡದಲ್ಲಿ ಸವಿಸವಿ ನೆನಪುಮ ಭೂಗತ, ವಿಷ್ಣುವರ್ಧನ್ ಜೊತೆಗೆ ಸ್ಕೂಲ್ ಮಾಸ್ಟರ್, ಕಿಚ್ಚ ಸುದೀಪ್ ಜೊತೆ ಕೆಂಪೇಗೌಡ ಚಿತ್ರದಲ್ಲಿ ನಟಿಸಿದ್ದಾರೆ. ‘ದಂಡಂ ದಶಗುಣಂ’ ಚಿತ್ರದಲ್ಲಿ ರಮ್ಯಾ ಸಹೋದರಿ ಪಾತ್ರದಲ್ಲಿ ನಟಿಸಿದ್ದಾರೆ.  ಸುಗ್ರೀವ, ಹುಡುಗರು ಸಿನಿಮಾದಲ್ಲಿ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • LKGಯಿಂದ ಸ್ನಾತಕೋತ್ತರ ಪದವಿವರೆಗೂ ಕೆಂಪೇಗೌಡರ ಪಠ್ಯ ಸೇರಿಸಿ: ನಂಜಾವಧೂತ ಶ್ರೀ

    LKGಯಿಂದ ಸ್ನಾತಕೋತ್ತರ ಪದವಿವರೆಗೂ ಕೆಂಪೇಗೌಡರ ಪಠ್ಯ ಸೇರಿಸಿ: ನಂಜಾವಧೂತ ಶ್ರೀ

    ಬೆಂಗಳೂರು: ನಾಡಪ್ರಭು ಕೆಂಪೇಗೌಡರ (Kempegowda) 514ನೇ ಜಯಂತಿಯನ್ನು ವಿಧಾನಸೌಧದಲ್ಲಿ (Vidhana Soudha) ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ನಂಜಾವಧೂತ ಸ್ವಾಮೀಜಿ (Nanjavadutha Swamiji) ಸರ್ಕಾರ ಪಠ್ಯದಲ್ಲಿ ಎಲ್‍ಕೆಜಿಯಿಂದ ಪಿಜಿವರೆಗೂ ಕೆಂಪೇಗೌಡರ ಪಠ್ಯ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು.

    ಮುಂದುವರೆದು ಮಾತನಾಡಿದ ಅವರು, ಕೆಂಪೇಗೌಡರ ಫೋಟೋವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಳವಡಿಕೆ ಮಾಡಲು ಸರ್ಕಾರ ಆದೇಶ ಹೊರಡಿಸಬೇಕು. ಲಾಲ್ ಬಾಗ್ ಗೋಪುರದ ಬಳಿ ಕೆಂಪೇಗೌಡರ ಥೀಮ್ ಪಾರ್ಕ್ ಸ್ಥಾಪನೆ ನಿರ್ಮಿಸಬೇಕು. ಇಂಗ್ಲೆಂಡ್‍ನಲ್ಲಿ ಕೆಂಪೇಗೌಡರ ಪುತ್ಥಳಿ ಮಾಡಲು ಅಲ್ಲಿನ ಮೇಯರ್ ಸಿದ್ದರಿದ್ದಾರೆ. ಸರ್ಕಾರ ಪತ್ರ ವ್ಯವಹಾರ ಮಾಡಿ ಅದನ್ನು ಮಾಡಿಸಬೇಕು. ಸಂಕ್ರಾಂತಿ ಹಬ್ಬದ ವೇಳೆ ಕೆಂಪೇಗೌಡರ ಹೆಸರಲ್ಲಿ ಅಂತರಾಷ್ಟ್ರೀಯ ಬೆಂಗಳೂರು ಹಬ್ಬ ಆಚರಿಸಬೇಕು. ಕೆಂಪೇಗೌಡರ ಹೆಸರಲ್ಲಿ ಒಂದು ಜಿಲ್ಲೆ ಸ್ಥಾಪನೆಯಾಗಬೇಕು. ಅವರ ಹೆಸರಲ್ಲಿ ಒಂದು ವಿಶ್ವವಿದ್ಯಾಲಯ ಪ್ರಾರಂಭ ಮಾಡಬೇಕು. ಬೆಂಗಳೂರು ವಿವಿ ಸೆಂಟ್ರಲ್ ಯುನಿವರ್ಸಿಟಿಗೆ ಕೆಂಪೇಗೌಡರ ಹೆಸರಿಡಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮೋದಿ ಪ್ರಶ್ನಿಸಿದ್ದ ಅಮೆರಿಕ ಪತ್ರಕರ್ತೆಗೆ ಕಿರುಕುಳ – ವೈಟ್‍ಹೌಸ್ ಪ್ರತಿಕ್ರಿಯೆ

    ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar), ಕೆಂಪೇಗೌಡರನ್ನ ಕೇವಲ ಒಕ್ಕಲಿಗರಿಗೆ ಸೀಮಿತ ಮಾಡುವುದು ಬೇಡ. ಅವರು ರಾಷ್ಟ್ರದ ಆಸ್ತಿಯಾಗಿದ್ದಾರೆ. ಬಹಳ ಉತ್ಸಾಹದಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆ ತೆಗೆದುಕೊಂಡಿದ್ದೇನೆ. ಬೆಂಗಳೂರನ್ನು ಮಾದರಿ ನಗರವನ್ನಾಗಿಸಲು ಸಲಹೆಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ನಿಂತು ಹೋಗಿದ್ದ ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಿದ್ದಾರೆ.

    ಚಂದ್ರಶೇಖರ ಸ್ವಾಮೀಜಿ ಮಾತನಾಡಿ ಡಿ.ಕೆ ಶಿವಕುಮಾರ್ ಅವರು ಕೆಂಪೇಗೌಡರಂತೆ ದಿಟ್ಟ ನಾಯಕ ಎಂದು ಬಣ್ಣಿಸಿದರು. ಅವರು ಮುಖ್ಯಮಂತ್ರಿ ಆಗಬೇಕು ಎಂಬ ಬಯಕೆಯನ್ನು ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಯುವ ಉದ್ಯಮಿ ನಿತಿನ್ ಕಾಮತ್, ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜಯದೇವ ಹೃದ್ರೋಗ ಸಂಸ್ಥೆಗೆ ಈ ವರ್ಷದ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಅಕ್ಕಪಕ್ಕ ಕೂರಿಸಿಕೊಂಡು ಡಿಕೆಶಿ-ಅಶ್ವಥ್‍ಗೆ ನಿರ್ಮಲಾನಂದ ಶ್ರೀಗಳು ಕಿವಿಮಾತು

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]