ಇದೇ ತಿಂಗಳ 13 ಹಾಗೂ 16ರಂದು ವಿಮಾನ ನಿಲ್ದಾಣದ ಭದ್ರತಾ ಪಡೆಯ ಮೇಲ್‌ಗೆ ಎರಡು ಬಾಂಬ್ ಬೆದರಿಕೆ (Bomb Threat) ಇಮೇಲ್‌ಗಳು ಬಂದಿವೆ. ಇಮೇಲ್‌ನಲ್ಲಿ ಏರ್‌ಪೋರ್ಟ್‌ನ ಶೌಚಾಲಯದ ಪೈಪ್‌ಲೈನ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಉಗ್ರ ಅಜ್ಮಲ್ ಕಸಬ್‌ಗೆ ಗಲ್ಲಿಗೇರಿಸಿದ್ದು ಸರಿಯಲ್ಲ. ಹೀಗಾಗಿ ಒಂದು ಪ್ಲ್ಯಾನ್ ಫೇಲ್ ಆದರೂ ಕೂಡ ಪ್ಲ್ಯಾನ್ `ಬಿ’ ಸಿದ್ಧವಾಗಿದೆ ಎಂದು ಉಗ್ರನ ಹೆಸರಲ್ಲಿ ಮೇಲ್ ಕಳುಹಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಹುಸಿ ಬಾಂಬ್ ಮೇಲ್‌ಗಳು ಇದೀಗ ಮತ್ತೆ ಆಕ್ಟೀವ್ ಆಗಿದ್ದು, ಪೊಲೀಸರಿಗೆ ತಲೆ ನೋವಾಗಿದೆ. ಬೆದರಿಕೆ ಮೇಲ್ ಹಿನ್ನೆಲೆ ಏರ್‌ಪೋರ್ಟ್ ಪೊಲೀಸರು ಹಾಗೂ ಅಧಿಕಾರಿಗಳು ಎಲ್ಲೆಡೆ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬೆದರಿಕೆ ಬಂದ ಮೇಲ್ ಐಡಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಇದನ್ನೂ ಓದಿ: ಬಹುಕೋಟಿ ವಂಚನೆ ಕೇಸ್ – ಐಶ್ವರ್ಯಗೌಡ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ಶುರು
ಬೆಂಗಳೂರು/ಚಿಕ್ಕಬಳ್ಳಾಪುರ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) 2024-25ರ ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ. ಈ ವಿಮಾನ ನಿಲ್ದಾಣದ ಮೂಲಕ, 2024ರಲ್ಲಿ 41 ದಶಲಕ್ಷ ಪ್ರಯಾಣಿಕರು ಸಂಚರಿಸಿದ್ದು, 5,00,000 ಮೆಟ್ರಿಕ್ ಟನ್ ತೂಕದ ಸರಕುಗಳನ್ನು ಸಾಗಿಸಲಾಗಿದೆ.
2023ರಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 37.53 ದಶಲಕ್ಷ ಪ್ರಯಾಣಿಕರು ಸಂಚರಿಸಿದ್ದರು. 2024ರಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.11.6ರಷ್ಟು ಏರಿಕೆಯಾಗಿದ್ದು, 41.88 ದಶಲಕ್ಷ ತಲುಪಿದೆ. ಶೇ.11.6ರಷ್ಟು ಹೆಚ್ಚಳವಾಗಿದೆ. ದೇಶೀಯ ಪ್ರಯಾಣಿಕರ ಸಂಖ್ಯೆಯು ಶೇ.10ರಷ್ಟು ಬೆಳವಣಿಗೆಯಾಗಿ 36.05 ದಶಲಕ್ಷ ತಲುಪಿದ್ದರೆ, ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯು ಶೇ.25ರಷ್ಟು ಹೆಚ್ಚಳವಾಗಿ, 5.83 ದಶಲಕ್ಷಕ್ಕೆ ಏರಿಕೆಯಾಗಿದೆ.ಇದನ್ನೂ ಓದಿ: ಕೊನೆಯಲ್ಲಿ ರಿಂಕು, ರಾಣಾ ಹೋರಾಟ ವ್ಯರ್ಥ – ಲಕ್ನೋಗೆ 4 ರನ್ ರೋಚಕ ಜಯ, ಕೆಕೆಆರ್‌ಗೆ ವಿರೋಚಿತ ಸೋಲು
ಈ ನಿಲ್ದಾಣದ ಮೂಲಕ ಪ್ರಯಾಣಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಲು, ಇಂಡಿಗೋ ವಿಮಾನಯಾನ ಸಂಸ್ಥೆಯು ತನ್ನ ಜಾಗತಿಕ ಜಾಲವನ್ನು ವಿಸ್ತರಿಸಿರುವುದು ಪ್ರಮುಖ ಕಾರಣವಾಗಿದೆ. ಜೊತೆಗೆ, ಬೆಂಗಳೂರಿನಿಂದ ಲಂಡನ್ ಹೀಥ್ರೂಗೆ ದೈನಂದಿನ ಹೆಚ್ಚುವರಿ ವಿಮಾನ ಹಾರಾಟ, ಕ್ಯಾಥೆ ಪೆಸಿಫಿಕ್, ಕೆಎಲ್‌ಎಂ, ಜಪಾನ್ ಏರ್‌ಲೈನ್ಸ್, ಕ್ವಾಂಟಾಸ್ ಸೇರಿದಂತೆ ಹಲವು ವಿದೇಶಿ ವಿಮಾನಯಾನ ಸಂಸ್ಥೆಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಒದಗಿಸುವ ವಿಮಾನ ಸೇವೆಯನ್ನು ಇನ್ನಷ್ಟು ಹೆಚ್ಚಿಸಿರುವುದು ಸಹ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯ ಹೆಚ್ಚಳಕ್ಕೆ ಕಾರಣವಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣ ಕಳೆದ ನಾಲ್ಕು ತಿಂಗಳುಗಳಿಂದ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರತದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ ಸ್ಥಾನ ಪಡೆದುಕೊಂಡಿದೆ. 76 ದೇಶೀಯ ಮತ್ತು 33 ಅಂತಾರಾಷ್ಟ್ರೀಯ ತಾಣಗಳಿಗೆ ಬೆಂಗಳೂರಿನಿAದ ತಡೆರಹಿತ ವಿಮಾನ ಸೇವೆ ಲಭ್ಯವಿದ್ದು, ಇದೇ ವರ್ಷದ ಮೇ ತಿಂಗಳಿನಿಂದ ವಿಯೆಟ್ನಾಂನ ಹನೋಯಿ ನಗರಕ್ಕೆ ಆರಂಭವಾಗಲಿರುವ ವಿಮಾನ ಸೇವೆಯು 34ನೇ ಅಂತಾರಾಷ್ಟ್ರೀಯ ತಾಣವಾಗಿ ಹೊರಹೊಮ್ಮಲಿದೆ.
5,00,000 ಮೆಟ್ರಿಕ್ ಟನ್ ದಾಟಿದ ಸರಕು ಸಾಗಣೆ:
ಸರಕು ಸಾಗಣೆಯಲ್ಲಿಯೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದಾಖಲೆ ನಿರ್ಮಿಸಿದೆ. ಇದೇ ಮೊದಲ ಬಾರಿಗೆ, 5,00,000 ಮೆಟ್ರಿಕ್ ಟನ್‌ಗಿಂತ ಹೆಚ್ಚು ಸರಕು ಸಾಗಣೆ ಮಾಡುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. 2024-25ರ ಆರ್ಥಿಕ ವರ್ಷದಲ್ಲಿ ಒಟ್ಟು 502,480 ಮೆಟ್ರಿಕ್ ಟನ್ ಸರಕನ್ನು ಸಾಗಣೆ ಮಾಡಲಾಗಿದ್ದು, ವರ್ಷದಿಂದ ವರ್ಷಕ್ಕೆ ಗಮನಾರ್ಹವಾದ ಶೇ.14ರಷ್ಟು ಬೆಳವಣಿಗೆ ದಾಖಲಾಗುತ್ತಿದೆ.ಇದನ್ನೂ ಓದಿ: ‘ಡೆವಿಲ್’ ಸಿನಿಮಾ ತುಂಬಾ ಡಿಫರೆಂಟ್ ಆಗಿದೆ: ಅಪ್‌ಡೇಟ್ ಕೊಟ್ಟ ವಿನಯ್
ಈ ಪೈಕಿ, ಅಂತಾರಾಷ್ಟ್ರೀಯ ಸರಕು ಸಾಗಣೆಯಲ್ಲಿ ಶೇ.21ರಷ್ಟು ಏರಿಕೆಯಾಗಿದ್ದು, ಒಟ್ಟು 321,418 ಮೆಟ್ರಿಕ್ ಟನ್ ಸರಕು ಸಾಗಿಸಲಾಗಿದೆ. ದೇಶೀಯ ಸರಕು ಸಾಗಣೆಯಲ್ಲಿ ಶೇ.4%ರಷ್ಟು ಏರಿಕೆಯಾಗಿದ್ದು, 1,81,062 ಮೆಟ್ರಿಕ್ ಟನ್ ತಲುಪಿದೆ. ಸತತ ನಾಲ್ಕನೇ ವರ್ಷ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕೊಳೆತುಹೋಗುವ ಪದಾರ್ಥಗಳ ರಫ್ತಿನಲ್ಲಿ ಭಾರತದ ನಂ.1 ವಿಮಾನ ನಿಲ್ದಾಣವಾಗಿ ಹೊರಹೊಮ್ಮುವ ಮೂಲಕ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಇದು ದೇಶದ ಕೃಷಿ ಪೂರೈಕೆ ಸರಪಳಿಯನ್ನು ಬಲಪಡಿಸುವಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪಾತ್ರವನ್ನು ಒತ್ತಿ ಹೇಳುತ್ತದೆ. ಜೊತೆಗೆ, ವಿಮಾನ ನಿಲ್ದಾಣವು ಮಾವು ಮತ್ತು ಕೊತ್ತಂಬರಿ ಸೊಪ್ಪಿನ ರಫ್ತಿನಲ್ಲಿ ಮುನ್ನಡೆ ಸಾಧಿಸಿದ್ದು, ಸಿದ್ಧ ಉಡುಪುಗಳು, ಔಷಧಗಳು ಮತ್ತು ಯಂತ್ರೋಪಕರಣಗಳ ಭಾಗಗಳ ಸಾಗಣೆಯಲ್ಲೂ ಹೆಚ್ಚಳವಾಗಿದೆ. ಸರಕು ಸಾಗಣೆಗೆ ಮೀಸಲಾದ 12 ವಿಮಾನಯಾನ ಸಂಸ್ಥೆಗಳ ಮೂಲಕ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಬೆಂಗಳೂರಿನಿಂದ ಸಿಂಗಾಪುರ, ಲಂಡನ್, ಫ್ರಾಂಕ್‌ಫರ್ಟ್, ಚಿಕಾಗೊ ಮತ್ತು ಮಸ್ಕತ್‌ನಂತಹ ಪ್ರಮುಖ ರಫ್ತು ಕೇಂದ್ರಿತ ನಗರಗಳನ್ನು ಸಂಪರ್ಕಿಸುತ್ತದೆ. ಶೆನ್ಜೆನ್, ಸಿಂಗಾಪುರ್, ಶಾಂಘೈ, ಹಾಂಗ್ ಕಾಂಗ್ ಮತ್ತು ಫ್ರಾಂಕ್‌ಫರ್ಟ್ ನಗರಗಳು ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಸರಕುಗಳು ಆಮದಾಗುವ ಪ್ರಮುಖ ತಾಣಗಳಾಗಿವೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಅವರು ಮಾತನಾಡಿ, ಬೆಂಗಳೂರು ಮತ್ತು ಭಾರತದಲ್ಲಿ ವಾಯುಯಾನದ ಬೆಳವಣಿಗೆಯ ಬಗ್ಗೆ ನಾವು ಉತ್ಸುಕರಾಗಿದ್ದೇವೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು, ದಕ್ಷಿಣ ಮತ್ತು ಮಧ್ಯ ಭಾರತದ ಹೆಬ್ಬಾಗಿಲಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ಕೆಲವು ವರ್ಷಗಳಲ್ಲಿ ವಾಯುಯಾನ ಪ್ರದೇಶ, ಲ್ಯಾಂಡ್‌ಸೈಡ್ ಮತ್ತು ಟರ್ಮಿನಲ್ ಸಾಮರ್ಥ್ಯಗಳ ವಿಸ್ತರಣೆಗೆ ಇನ್ನಷ್ಟು ಹೂಡಿಕೆ ಹೆಚ್ಚಿಸುವತ್ತ ಗಮನಹರಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ 17,000 ಕೋಟಿಗಿಂತಲೂ ಹೆಚ್ಚು ಹೂಡಿಕೆಯೊಂದಿಗೆ, ಈ ಪ್ರದೇಶದಲ್ಲಿ ಪ್ರಯಾಣಿಕರು ಮತ್ತು ಸರಕು ಸಾಗಣೆಯ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ನಾವು ಸಿದ್ಧರಾಗಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು/ಚಿಕ್ಕಬಳ್ಳಾಪುರ: ಸದಾ ಹೊಸತನ ಹೊಸ ಆವಿಷ್ಕಾರ, ತಂತ್ರಜ್ಞಾನದಿಂದ ಜಾಗತಿಕ ಮಟ್ಟದಲ್ಲೇ ಜನಮನ್ನಣೆ ಗಳಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (International Airport) ಅಂತರ್ಜಾಲದಲ್ಲಿ ಇನ್ನೂ ಮುಂದೆ ಕನ್ನಡ (Kannada) ಭಾಷೆ ಆಯ್ಕೆ ಮಾಡಿಕೊಳ್ಳುವುದನ್ನು ಹೊಸದಾಗಿ ಪರಿಚಯಿಸಿದೆ.
ಅಧಿಕೃತ ಅಂತರ್ಜಾಲದಲ್ಲಿ ಇಷ್ಟು ದಿನ ಇಂಗ್ಲೀಷ್ (English) ಭಾಷೆ ಆಯ್ಕೆಗೆ ಮಾತ್ರ ಅವಕಾಶವಿತ್ತು. ಆದರೆ ಇದೀಗ ಕನ್ನಡ ಭಾಷೆಗೆ ಆದ್ಯತೆ ಹಾಗೂ ಪ್ರಾಮುಖ್ಯತೆ ನೀಡಲಾಗಿದೆ. ಈ ಆಯ್ಕೆಯನ್ನು ಬಳಸುವ ಮೂಲಕ, ಸ್ಥಳೀಯ ಪ್ರಯಾಣಿಕರು ಇನ್ನು ಮುಂದೆ ವಿಮಾನ ನಿಲ್ದಾಣದ ಸೇವೆಗಳನ್ನು ಸುಲಭವಾಗಿ ತಮ್ಮದೇ ಕನ್ನಡ ಭಾಷೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಆದ್ಯತೆ ನೀಡುವ ಪ್ರಯಾಣಿಕರಿಗಾಗಿ ಕನ್ನಡ ಭಾಷೆಯ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ.ಇದನ್ನೂ ಓದಿ:25 ಸಾವಿರ ಶಿಕ್ಷಕರ ವಜಾ – ಜಡ್ಜ್‌ಗಳ ಮನೆಯಲ್ಲಿ ಹಣ ಪತ್ತೆಯಾದ್ರೆ ವರ್ಗಾವಣೆ, ಶಿಕ್ಷಕರ ವಜಾ ಯಾಕೆ? – ಮಮತಾ ಬ್ಯಾನರ್ಜಿ ಪ್ರಶ್ನೆ
ಏನೆಲ್ಲಾ ಮಾಹಿತಿ ಸಿಗಲಿದೆ?
ವಿಮಾನದ ನೈಜಸಮಯದ, ವಿಮಾನಗಳ ಹಾರಾಟದ ಮಾಹಿತಿ, ನಿರ್ಗಮನ, ಆಗಮನ ಮತ್ತು ವಿಳಂಬಗಳ ಬಗ್ಗೆ ತಡೆರಹಿತ ಮಾಹಿತಿ, ಪ್ರಯಾಣಿಕರು ವಿಮಾನಗಳನ್ನು ಕಾಯ್ದಿರಿಸಲು, ಸಾರಿಗೆ ಆಯ್ಕೆ ಮತ್ತು ವಿಮಾನ ನಿಲ್ದಾಣದ ಸೌಲಭ್ಯಗಳನ್ನು ಅನ್ವೇಷಿಸಲು ಅನುವು, ಭದ್ರತಾ ಕಾರ್ಯವಿಧಾನ, ಬ್ಯಾಗೇಜ್ ನಿಯಮಗಳು, ಪ್ರಯಾಣಕ್ಕೆ ಬೇಕಾದ ಅನುಕೂಲತೆಯ ಮಾಹಿತಿಗಳು ಸೇರಿದಂತೆ ಹಲವು ವಿಚಾರಗಳು ಸ್ಥಳೀಯ ಭಾಷೆಯಲ್ಲಿ ದೊರೆಯಲಿವೆ.
ಈಗಾಗಲೇ ವಿಮಾನ ನಿಲ್ದಾಣದಾದ್ಯಂತ ವಿಮಾನ ಮಾಹಿತಿ ಪ್ರದರ್ಶನ ವ್ಯವಸ್ಥೆ, ಸಾರ್ವಜನಿಕ ಪ್ರಕಟಣೆ ವ್ಯವಸ್ಥೆ, ಅಂಗಡಿ ಮತ್ತು ಮಳಿಗೆಗಳ ನಾಮಫಲಕಗಳಿಂದ ಹಿಡಿದು ಸಿಬ್ಬಂದಿಯವರೆಗೆ ಎಲ್ಲೆಡೆ ಕನ್ನಡವನ್ನು ವಿಮಾನ ನಿಲ್ದಾಣ ಅಳವಡಿಸಿಕೊಂಡಿದೆ. ಕರ್ನಾಟಕದ ಸಂಸ್ಕೃತಿ ಮತ್ತು ನೀತಿಗಳನ್ನು ಪ್ರತಿಬಿಂಬಿಸುವಂತೆ ವಿಮಾನ ನಿಲ್ದಾಣವನ್ನು ವಿನ್ಯಾಸಗೊಳಿಸಲಾಗಿದೆ.
ಕನ್ನಡ ಭಾಷೆಯ ಆಯ್ಕೆಯ ಅವಕಾಶದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹರಿ ಮಾರಾರ್ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಕೇವಲ ಸಾರಿಗೆ ಕೇಂದ್ರವಾಗಿರದೇ, ಸಾಕಷ್ಟು ಬೆಳೆದಿದೆ. ಇದೀಗ ಸ್ಥಳೀಯ ಭಾಷೆಯಲ್ಲೇ ವಿಮಾನ ನಿಲ್ದಾಣದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಕನ್ನಡ ಭಾಷಾ ಆಯ್ಕೆಯನ್ನು ಪರಿಚಯಿಸುವ ಮೂಲಕ ನಮ್ಮ ಭಾಷಾ ಪರಂಪರೆಯ ಶ್ರೀಮಂತಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಒಟ್ಟಿನಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕನ್ನಡ ಭಾಷಾ ಆಯ್ಕೆಯ ಪರಿಚಯವು ವಿಮಾನ ನಿಲ್ದಾಣದಲ್ಲಿ ಕನ್ನಡದ ಪರಿಸರವನ್ನು ವೃದ್ಧಿಸಲಿದ್ದು, ಇದು ಕನ್ನಡಿಗರಿಗೆ ಸಂತಸ ಹಾಗೂ ಹೆಮ್ಮೆಯ ವಿಚಾರವಾಗಿದೆ.
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) 2024ರಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತು ಸರಕು ಸಾಗಣೆಯಲ್ಲಿ (Freight Transport) ದಾಖಲೆಯ ಬೆಳವಣಿಗೆ ಕಂಡಿದೆ. 2024ರಲ್ಲಿ ಬರೋಬ್ಬರಿ 4 ಕೋಟಿ ಪ್ರಯಾಣಿಕರು ಪ್ರಯಾಣ ಬೆಳೆಸುವ ಮೂಲಕ ಜಾಗತಿಕವಾಗಿ ಅತಿದೊಡ್ಡ ವಿಮಾನ ನಿಲ್ದಾಣಗಳಲ್ಲಿ ಒಂದು ಎಂಬ ಸ್ಥಾನಮಾನವನ್ನ ಇನ್ನಷ್ಟು ಬಲಪಡಿಸಿಕೊಂಡಿದೆ.
ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ವಾರ್ಷಿಕ ಸರಕು ಸಾಗಣೆಯು 4,96,227 ಮೆಟ್ರಿಕ್ ಟನ್ ತಲುಪುವ ಮೂಲಕ ಗರಿಷ್ಠ ದಾಖಲೆ ನಿರ್ಮಾಣವಾಗಿದೆ. ಇದು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಭಾಗಗಳಲ್ಲಿ ತನ್ನ ಕಾರ್ಯಕ್ಷಮತೆಯನ್ನು ಎತ್ತಿ ಹಿಡಿದಿದೆ. ಈ ಬೃಹತ್ ಬೆಳವಣಿಗೆಯು ಬೆಂಗಳೂರಿನಿಂದ ವಾಯು ಮಾರ್ಗದ ಮೂಲಕ ಪ್ರಯಾಣಿಸುವವರಿಗೆ (Air Passengers) ಹಾಗೂ ವ್ಯಾಪಾರ ವಹಿವಾಟು ನಡೆಸುವವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕೇಂದ್ರಬಿಂದು ಎಂಬ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದಿದೆ. ಇದನ್ನೂ ಓದಿ: ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು ಕದನ – ಸಾವಿನ ಸಂಖ್ಯೆ 10ಕ್ಕೆ ಏರಿಕೆ, 1.80 ಲಕ್ಷ ಜನರ ಸ್ಥಳಾಂತರ
ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ:
2023ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆಯು 3.72 ಕೋಟಿ ಆಗಿತ್ತು. ಆದ್ರೆ 2024ರಲ್ಲಿ 4.73 ಕೋಟಿ ಪ್ರಯಾಣಿಕರು ವಿಮಾನ ನಿಲ್ದಾಣದ ಮೂಲಕ ಪ್ರಯಾಣ ಬೆಳೆಸಿದ್ದಾರೆ. 2024ರ ಅಕ್ಟೋಬರ್ 20 ರಂದು ಒಂದೇ ದಿನದಲ್ಲಿ 1,26,532 ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುವ ಮೂಲಕ ದಾಖಲೆ ನಿರ್ಮಾಣವಾಗಿದೆ. ಇದಷ್ಟೇ ಅಲ್ಲದೆ, ಅಕ್ಟೋಬರ್ 17, 2024 ರಂದು ವಿಮಾನಯಾನ ಸಂಚಾರ ನಿರ್ವಹಣೆಯಲ್ಲಿ 782 ಎಟಿಎಂ ಮೂಲಕ ಗರಿಷ್ಠ ದಾಖಲೆ ನಿರ್ಮಾಣವಾಗಿದೆ. ಈವರೆಗೆ ಬೆಂಗಳೂರು ವಿಮಾನ ನಿಲ್ದಾಣದ ವಿಮಾನಯಾನ ಸಂಚಾರ ನಿರ್ವಹಣೆಯಲ್ಲಿ ವಾರ್ಷಿಕ ದೈನಂದಿನ ಸರಾಸರಿ 723 ಎಟಿಎಂ ದಾಖಲಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
2024ರ ಪ್ರಮುಖಾಂಶಗಳು
• ಬೆಂಗಳೂರು ವಿಮಾನ ನಿಲ್ದಾಣವು 2024 ರಲ್ಲಿ ಒಟ್ಟು 4.73 ಕೋಟಿ ಪ್ರಯಾಣಿಕರ ಸಂಖ್ಯೆಯನ್ನು ದಾಖಲಿಸಿದೆ.
• 2024ರ ಅಕ್ಟೋಬರ್ 20ರಂದು ಒಂದೇ ದಿನದಲ್ಲಿ 1,26,532ರ ದಾಖಲೆಯ ಪ್ರಯಾಣಿಕರು ಸಂಚರಿಸಿದ್ದಾರೆ. ಪ್ರತಿದಿನ ಸರಾಸರಿ 723 ವಿಮಾನಗಳ ಸಂಚಾರ ನಿರ್ವಹಣೆಯಾಗಿದೆ.
• ಬೆಂಗಳೂರು ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ, ವಾರ್ಷಿಕವಾಗಿ 21.1% ರಷ್ಟು
• 11 ಹೊಸ ದೇಶೀಯ ಸ್ಥಳಗಳು ಮತ್ತು 4 ಅಂತಾರಾಷ್ಟ್ರೀಯ ಸ್ಥಳಗಳಿಗೆ ಬೆಂಗಳೂರಿನಿಂದ ಸಂಪರ್ಕ ಕಲ್ಪಿಸಲಾಗಿದೆ.
• ಈ ವರ್ಷದಲ್ಲಿ 4,96,227 ಮೆಟ್ರಿಕ್ ಟನ್‌ಗಳ (MT) ದಾಖಲೆ ಸರಕು ಸಾಗಣೆ, ಕಾರ್ಗೋ ಟನ್‌ನಲ್ಲಿ ವಾರ್ಷಿಕ 17% ಗಮನಾರ್ಹ ಬೆಳವಣಿಗೆ ಕಂಡಿದೆ.
• 1,884 ಮೆಟ್ರಿಕ್ ಟನ್ – ಒಂದೇ ದಿನದಲ್ಲಿ ದಾಖಲೆಯಾದ ಅತಿ ಹೆಚ್ಚು ಸರಕು ಸಾಗಣೆ.
ಸಂಪರ್ಕ ಮತ್ತು ಹೊಸ ಮಾರ್ಗಗಳ ಪರಿಚಯ:
ಕಳೆದ ವರ್ಷ ಡಿಸೆಂಬರ್ 31 ರಂದು ಪ್ರಕಟವಾದ ವರದಿ ಪ್ರಕಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 75 ದೇಶೀಯ ಮತ್ತು 30 ಅಂತಾರಾಷ್ಟ್ರೀಯ ಸ್ಥಳಗಳಿಗೆ ವಿಮಾನ ಸೇವೆ ಒದಗಿಸಲಾಗಿದೆ. ಈ ಮೂಲಕ ಪ್ರಯಾಣಿಕರ ಮತ್ತು ಸರಕುಗಳ ಸಾಗಣೆಗೆ ದಕ್ಷಿಣ ಮತ್ತು ಮಧ್ಯ ಭಾರತಕ್ಕೆ ಹೆಬ್ಬಾಗಿಲಾಗಿ ವಿಮಾನ ನಿಲ್ದಾಣವು ತನ್ನ ಸ್ಥಾನವನ್ನು ಮತ್ತಷ್ಟು ಬಲಗೊಳಿಸಿಕೊಂಡಿದೆ. ಜಾಗತಿಕ ವಿಮಾನಯಾನ ಜಾಲದಲ್ಲಿ ವರ್ಜಿನ್ ಅಟ್ಲಾಂಟಿಕ್, ಸಲಾಮ್ ಏರ್, ಮಾಂಟಾ ಏರ್ ಮತ್ತು ಫ್ಲೈ-91 ನಂತಹ ಹೊಸ ವಿಮಾನಯಾನ ಸಂಸ್ಥೆಗಳೊಂದಿಗೆ ಬೆಂಗಳೂರು ವಿಮಾನ ನಿಲ್ದಾಣ ಸಹಯೋಗ ಸಾಧಿಸಿದೆ. 2024 ರಲ್ಲಿ ದೈನಂದಿನ ಅಂತಾರಾಷ್ಟ್ರೀಯ ವಿಮಾನ ಸಂಚಾರಗಳ ಸಂಖ್ಯೆ ಸರಾಸರಿ 75 ಆಗಿತ್ತು, ಆದರೆ ಇದು 2023 ರಲ್ಲಿ ದಿನಕ್ಕೆ 62 ರಷ್ಟಿತ್ತು. ಈ ಮೂಲಕ ಅಂತಾರಾಷ್ಟ್ರೀಯ ವಿಮಾನಗಳ ಆವರ್ತನವು 21% ರಷ್ಟು ಹೆಚ್ಚಾಗಿರುವುದನ್ನು ಈ ದತ್ತಾಂಶ ಸೂಚಿಸುತ್ತದೆ.
2024ರ ಅಂತ್ಯದ ವೇಳೆಗೆ, ಇಂಡಿಗೋ ಬೆಂಗಳೂರಿನಿಂದ 46 ಸಾಪ್ತಾಹಿಕ ನಿರ್ಗಮನ ವಿಮಾನಗಳನ್ನು ಸೇರ್ಪಡೆಗೊಳಿಸಿದೆ. ಇದು ಭಾರತದಿಂದ ನಿರ್ಗಮಿಸುವ ಒಟ್ಟು 240 ಹೆಚ್ಚುವರಿ ಸಾಪ್ತಾಹಿಕ ನಿರ್ಗಮನ ವಿಮಾನಗಳ 3ನೇ ಒಂದು ಭಾಗವಾಗಿದೆ. ಈ ಮೂಲಕ, 2024ರಲ್ಲಿ ಇಂಡಿಗೋ ಭಾರತದಲ್ಲಿ ಅತಿ ಹೆಚ್ಚು ವಿಮಾನಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೇರ್ಪಡೆಗೊಳಿಸಿದೆ. ಇದನ್ನೂ ಓದಿ: ಡಿಕೆಶಿ ಎರಡೂವರೆ ವರ್ಷ ಯಾಕೆ, ಮುಂದೆ ಐದು ವರ್ಷ ಸಿಎಂ ಆಗಲಿ: ಕೆ.ಎನ್.ರಾಜಣ್ಣ
ವಿಮಾನ ನಿಲ್ದಾಣದ ಪ್ರಮುಖ ದೇಶೀಯ ಮಾರ್ಗಗಳಲ್ಲಿ ದೆಹಲಿ (DEL), ಮುಂಬೈ (BOM), ಕೋಲ್ಕತ್ತಾ (CCU), ಹೈದರಾಬಾದ್ (HYD), ಮತ್ತು ಪುಣೆ (PNQ) ಸೇರಿವೆ. ಅಲ್ಲದೇ ಹೊಸ ದೇಶಿಯ ಸ್ಥಳಗಳಿಗೆ ವಿಮಾನ ಸಂಪರ್ಕ ಆರಂಭಿಸಲಾಗಿದ್ದು, ಅಯೋಧ್ಯೆ (AYJ), ಐಜ್ವಾಲ್ (AJL), ದಿಯೋಘರ್ (DGH), ನಾಂದೇಡ್ (NDC), ಜಬಲ್ಪುರ್ (JLR), ದಿಬ್ರುಗಢ್ (DIB), ಮತ್ತು ಸಿಂಧುದುರ್ಗದಂತಹ (SDW) ಸ್ಥಳಗಳನ್ನು ಇವು ಒಳಗೊಂಡಿವೆ.
ದುಬೈ (DXB), ಸಿಂಗಾಪುರ (SIN), ಅಬುಧಾಬಿ (AUH), ದೋಹಾ (DOH), ಮತ್ತು ಲಂಡನ್ ಹೀಥ್ರೂ (LHR) ಅಂತಾರಾಷ್ಟ್ರೀಯ ಸ್ಥಳಗಳಿಗೆ ವಿಮಾನ ಸಂಪರ್ಕದ ಜೊತೆಗೆ, ಕೆಲವು ಹೊಸ ಅಂತಾರಾಷ್ಟ್ರೀಯ ಸ್ಥಳಗಳಿಗೆ ವಿಮಾನ ಸಂಪರ್ಕ ಕಲ್ಪಿಸಲಾಗಿದೆ. ಡೆನ್‌ಪಾಸರ್ (DPS), ಮಾರಿಷಸ್ (MRU), ಶ್ರೀಲಂಕಾ, ಮಾಲ್ಡೀವ್ಸ್‌ನ ಧಾಲುಗಳಿಗೆ (DDD) ಅಂತಾರಾಷ್ಟ್ರೀಯವಾಗಿ ಬೆಂಗಳೂರಿನಿಂದ ಹೊಸದಾಗಿ ವಿಮಾನ ಸಂಪರ್ಕ ಆರಂಭಿಸಲಾಗಿದೆ. ಇದು ಬೆಂಗಳೂರು ವಿಮಾನ ನಿಲ್ದಾಣದ ಸಂಪರ್ಕ ಹೆಚ್ಚಿಸಲು ಮತ್ತು ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆ ಪೂರೈಸಲು ನಡೆಸುತ್ತಿರುವ ಪ್ರಾಮಾಣಿಕ ಪ್ರಯತ್ನವಾಗಿದೆ.
ಕಾರ್ಗೋ ವ್ಯಾಪಾರದಲ್ಲಿ ಮೈಲಿಗಲ್ಲು:
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಸರಕು ಸಾಗಣೆಯಲ್ಲೂ ಗಮನಾರ್ಹ ಬೆಳವಣಿಗೆ ಕಂಡಿದೆ. 2024 ರಲ್ಲಿ 4,96,227 ಮೆಟ್ರಿಕ್ ಟನ್ ಸರಕನ್ನು ಸಾಗಿಸಲು ಅನುವು ಮಾಡಿಕೊಡಲಾಗಿದೆ. 2023ಕ್ಕೆ ಹೋಲಿಸಿದರೆ, ಇದು 17% ರಷ್ಟು ಹೆಚ್ಚಳವಾಗಿದೆ. ಇನ್ನೂ ಅಂತಾರಾಷ್ಟ್ರೀಯ ಸರಕು ಸಾಗಣೆಯಲ್ಲೂ 23% ರಷ್ಟು ಬೆಳವಣಿಗೆ ಕಂಡಿದ್ದು, ಒಟ್ಟು 3,13,981 ಮೆಟ್ರಿಕ್ ಟನ್ ಕೊಳೆಯುವ ಪದಾರ್ಥಗಳು, ಬಿಡಿ ಭಾಗಗಳು, ಎಂಜಿನಿಯರಿಂಗ್ ಸರಕು ಮತ್ತು ಇ-ಕಾಮರ್ಸ್ ಸಾಗಣೆಗೆ ಬೇಡಿಕೆ ಹೆಚ್ಚಾಗಿದೆ. ದೇಶೀಯವಾಗಿ ಸರಕುಗಳ ಸಾಗಣೆ ಪ್ರಮಾಣವು ಸಹ 9% ರಷ್ಟು ಹೆಚ್ಚಾಗಿದ್ದು, 1,82,246 ಮೆಟ್ರಿಕ್ ಟನ್ ತಲುಪಿದೆ. ಕೊಳೆಯುವ ಸರಕುಗಳು ಮತ್ತು ಇ-ಕಾಮರ್ಸ್ ಚಟುವಟಿಕೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ.
ಜುಲೈ 11, 2024 ರಂದು 1,884 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡುವ ಮೂಲಕ ಒಂದೇ ದಿನ ಅತಿ ಹೆಚ್ಚು ಸರಕು ಸಾಗಣೆ ಪ್ರಮಾಣ ದಾಖಲಾಗಿದೆ. ಕಾರ್ಗೋ ಬೆಳವಣಿಗೆಯನ್ನು ಪ್ರೇರೇಪಿಸುವ ಪ್ರಮುಖ ಸರಕುಗಳಾದ ಕೊಳೆತುಹೋಗುವ ಕೃಷಿ ಸರಕುಗಳು, ಸಿದ್ಧ ಉಡುಪುಗಳು, ಔಷಧ, ಯಂತ್ರೋಪಕರಣಗಳ ಭಾಗಗಳು, ಹಾಗೂ ಇತರೆ ಬಿಡಿಭಾಗಗಳ ಸಾಗಣೆ ಸೇವೆಯನ್ನು ಬೆಂಗಳೂರು ವಿಮಾನ ನಿಲ್ದಾಣವು ಒದಗಿಸಿದೆ.
2024 ರಲ್ಲಿ ಬೆಂಗಳೂರು ವಿಮಾನ ನಿಲ್ದಾಣವು 10.8 ದಶಲಕ್ಷ ಗುಲಾಬಿಗಳನ್ನು ಸಾಗಣೆ ಮಾಡಿದ್ದು, 2023ಕ್ಕೆ ಹೋಲಿಸಿದರೆ 14% ರಷ್ಟು ಬೆಳವಣಿಗೆ ಕಂಡಿದೆ. ಅದೇ ರೀತಿ, 822 ಮೆಟ್ರಿಕ್ ಟನ್ ಮಾವಿನ ಹಣ್ಣು ಬೆಂಗಳೂರು ವಿಮಾನ ನಿಲ್ದಾಣದಿಂದ ರಫ್ತಾಗಿದ್ದು, 2023ಕ್ಕೆ ಹೋಲಿಸಿದರೆ 20% ಹೆಚ್ಚಳ ಕಂಡಿದೆ. ಇನ್ನು, ಕೊತ್ತಂಬರಿ ಸಾಗಣೆಯಲ್ಲೂ 53% ಬೆಳವಣಿಗೆ ದಾಖಲಾಗಿದೆ.
ಪ್ರಸ್ತುತ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗ ಎರಡರಲ್ಲೂ ಕಾರ್ಯನಿರ್ವಹಿಸುವ 12 ಸರಕು ವಿಮಾನಯಾನ ಸಂಸ್ಥೆಗಳ ಸೇವೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲಭ್ಯವಿದೆ. ಪ್ರಮುಖ ರಫ್ತು ಮಾರ್ಗಗಳಲ್ಲಿ ಸಿಂಗಾಪುರ (SIN), ಲಂಡನ್ (LHR), ಫ್ರಾಂಕ್‌ಫರ್ಟ್ (FRA), ಚಿಕಾಗೊ (ORD), ಮತ್ತು ಮಸ್ಕಟ್ (MCT) ಒಳಗೊಂಡಿವೆ. ಅಗ್ರ ಆಮದು ಮಾರ್ಗಗಳಲ್ಲಿ ಶೆನ್‌ಜೆನ್ (SZX), ಸಿಂಗಾಪುರ (SIN), ಶಾಂಘೈ (PVG) ಹಾಂಗ್ ಕಾಂಗ್ (HKG), ಮತ್ತು ಫ್ರಾಂಕ್‌ಫರ್ಟ್ (FRA) ಸೇರಿವೆ.
ಒಟ್ಟಾರೆ, 2024 ರಲ್ಲಿ ಬೆಂಗಳೂರು ವಿಮಾನ ನಿಲ್ದಾಣವು ಪ್ರಯಾಣಿಕರು ಹಾಗೂ ಸರಕು ಸಾಗಣೆಯಲ್ಲಿ ಉತ್ತಮ ಬೆಳವಣಿಗೆ ಕಂಡಿದೆ. ವಿಮಾನ ನಿಲ್ದಾಣವು ದಕ್ಷಿಣ ಮತ್ತು ಮಧ್ಯ ಭಾರತಕ್ಕೆ ಆದ್ಯತೆಯ ಹೆಬ್ಬಾಗಿಲಾಗಿ ಬದ್ಧತೆಯನ್ನು ಸಾಬೀತುಪಡಿಸಿದೆ. ವಿಸ್ತರಣೆ, ಕಾರ್ಯಾಚರಣೆಯ ಉತ್ಕೃಷ್ಟತೆ ಮತ್ತು ಪ್ರಯಾಣಿಕ-ಕೇಂದ್ರಿತ ಮನೋಭಾವದೊಂದಿಗೆ ಮುಂಬರುವ ವರ್ಷಗಳಲ್ಲಿ ಇನ್ನಷ್ಟು ಬೆಳವಣಿಗೆ ಕಾಣುವ ಭರವಸೆ ನೀಡಿದೆ.
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport Bengaluru) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಾಂಸ್ಕೃತಿಕ ದಸರಾ ಹಬ್ಬವನ್ನು ಟರ್ಮಿನಲ್ 1 ಮತ್ತು 2 ನಲ್ಲಿ ಅಕ್ಟೋಬರ್ 11ರವರೆಗೆ ಅದ್ಧೂರಿಯಿಂದ ಆಚರಿಸಲಾಗುತ್ತಿದೆ.
ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ನಮ್ಮ ಹೆಮ್ಮೆಯ ಸಂಸ್ಕೃತಿಯನ್ನು ಕಣ್ತುಂಬಿಸಿಕೊಳ್ಳಲು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ನಮ್ಮ ಸಾಂಸ್ಕೃತಿಕ ಕಲೆಗಳಾದ ಯಕ್ಷಗಾನ, ಕೂಚಿಪುಡಿ, ಡೊಳ್ಳು ಕುಣಿತ, ತಮಟೆ ವಾದ್ಯ, ನಾಟ್ಯ, ಸಂಗೀತ ಕಚೇರಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಟರ್ಮಿನಲ್ 1 ಮತ್ತು 2ನಲ್ಲಿ ನಡೆಸಲಾಗುತ್ತಿದೆ. ಈ ಎಲ್ಲಾ ಸಂಭ್ರಮಾಚರಣೆಯ ಭಾಗವಾಗಿ ಬೆಂಗಳೂರು (Bengaluru) ವಿಮಾನ ನಿಲ್ದಾಣ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದನ್ನೂ ಓದಿ: ಯಾವತ್ತಿದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡೇ ನೀಡುತ್ತಾರೆ – ಈಶ್ವರಪ್ಪ
ಅ.9ರಂದು ಕರ್ನಾಟಕ ಸಂಗೀತ ಹಾಗೂ ನೃತ್ಯ ರೂಪಕ, ಅ.10ರಂದು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಕೂಚಿಪುಡಿ ನೃತ್ಯ ಪ್ರದರ್ಶನ, ಅ.11 ರಂದು ಬೊಂಬೆ ಪ್ರದರ್ಶನ ನಡೆಯಲಿದೆ. ಈ ಎಲ್ಲಾ ಸಾಂಪ್ರದಾಯಕ ಮನರಂಜನೆಯೊಂದಿಗೆ ದಸರಾ ಹಬ್ಬವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಣ್ತುಂಬಿಕೊಳ್ಳಬಹುದು. ಇದನ್ನೂ ಓದಿ: ಜಾತಿಗಣತಿ ವರದಿ ಅನುಷ್ಠಾನ ಮಾಡ್ತೀವಿ- ಎಕ್ಸ್‌ನಲ್ಲಿ ಸಿಎಂ ಪುನರುಚ್ಚಾರ
ಬೆಂಗಳೂರು: ಟೋಕಿಯೋ-ಬೆಂಗಳೂರು ಮಾರ್ಗದ ವಿಮಾನಗಳನ್ನು ಇನ್ನಷ್ಟು ಹೆಚ್ಚಿಸುವುದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಹಾಗೂ ಜಪಾನ್ ಏರ್‌ಲೈನ್ಸ್ (JAL) ಘೋಷಿಸಿದೆ.
ಹೆಚ್ಚುತ್ತಿರುವ ಬೇಡಿಕೆಯನ್ನು ಸರಿಹೊಂದಿಸಲು, ಜೆಎಎಲ್ ತನ್ನ ಕಾರ್ಯಾಚರಣೆಯನ್ನು ಟೋಕಿಯೊ-ಬೆಂಗಳೂರು ಮಾರ್ಗದಲ್ಲಿ ವಾರಕ್ಕೆ ಐದು ವಿಮಾನಗಳಿಗೆ ಹೆಚ್ಚಿಸಲಿದೆ. ಪ್ರಸ್ತುತ ವಾರಕ್ಕೆ ಮೂರು ವಿಮಾನಗಳು, ಅಕ್ಟೋಬರ್ ಕೊನೆಯ ವಾರದಿಂದ ಪ್ರಾರಂಭವಾಗುತ್ತವೆ. ಈ ಪ್ರಕಟಣೆಯು ಬೆಂಗಳೂರಿನ ಸ್ಥಾನಮಾನವನ್ನು ದಕ್ಷಿಣ ಮತ್ತು ಮಧ್ಯ ಭಾರತಕ್ಕೆ ಗೇಟ್ ವೇ ಆಗಿ ಗಟ್ಟಿಗೊಳಿಸುತ್ತದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಜಲಾನಯನ ಪ್ರದೇಶಗಳಿಂದ ಪ್ರಯಾಣಿಕರಿಗೆ ಸಂಪರ್ಕವನ್ನು ಮತ್ತು ಪ್ರಯಾಣವನ್ನು ಸುಗಮಗೊಳಿಸುತ್ತದೆ. ಇದನ್ನೂ ಓದಿ: ದೇಸಾಯಿ ಆಯೋಗಕ್ಕೆ ಮುಡಾ ಪ್ರಕರಣ ಕುರಿತು ಮಾಹಿತಿ ನೀಡಲಿ: ಪರಮೇಶ್ವರ್
ಬಿಎಲ್‌ಆರ್ (BLR) ವಿಮಾನ ನಿಲ್ದಾಣವು ದಕ್ಷಿಣ ಭಾರತದಲ್ಲಿ ಜಪಾನ್‌ಗೆ ನೇರ ಸಂಪರ್ಕವನ್ನು ಒದಗಿಸುವ ಏಕೈಕ ವಿಮಾನ ನಿಲ್ದಾಣವಾಗಿದೆ. ಜೆಎಎಲ್ ಈ ನಿರ್ಣಾಯಕ ಲಿಂಕ್ ಅನ್ನು ಒದಗಿಸುವ ವಿಶೇಷ ವಿಮಾನಯಾನ ಸಂಸ್ಥೆಯಾಗಿದೆ. ಜೆಎಎಲ್ ತನ್ನ ಬೋಯಿಂಗ್ B787-8 ವಿಮಾನವನ್ನು ಈ ಮಾರ್ಗದಲ್ಲಿ ನಿರ್ವಹಿಸುತ್ತದೆ. ಇದು ಎರಡುವರ್ಗದ ಸಂರಚನೆಯಲ್ಲಿ 186 ಪ್ರಯಾಣಿಕರನ್ನು ಕೂರಿಸುತ್ತದೆ. ಇದನ್ನೂ ಓದಿ: ದಲಿತರ ಬಗ್ಗೆ ಮಾತಾಡೋ ನೈತಿಕತೆ ಬಿಜೆಪಿಯವರಿಗೆ ಇಲ್ಲ – ಸಿದ್ದರಾಮಯ್ಯ
ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಮಾತನಾಡಿ, ಜೆಎಎಲ್ ಗ್ರೂಪ್ ಬಿಎಲ್‌ಆರ್ ಏರ್‌ಪೋರ್ಟ್‌ನಲ್ಲಿ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಲು ಮುಂದಾಗಿರುವುದು ಸಂತಸದ ವಿಷಯ. ಈ ಮೂಲಕ ದಕ್ಷಿಣ ಹಾಗೂ ಮಧ್ಯ ಭಾರತದ ಪ್ರಮುಖ ಅಂತಾರಾಷ್ಟ್ರೀಯ ಗೇಟ್ ವೇ ಆಗಿರುವ ಕೆಂಪೇಗೌಡ ವಿಮಾನ ನಿಲ್ದಾಣದ ಹಿರಿಮೆ ಇನ್ನಷ್ಟು ಹೆಚ್ಚಿದಂತಾಗಿದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲ, ಮೊದಲು ನನ್ನನ್ನ ಫೇಸ್ ಮಾಡಿ – ಹೆಚ್‌ಡಿಕೆಗೆ ಜಮೀರ್ ಸವಾಲ್
ಜಪಾನ್ ಏರ್‌ಲೈನ್ಸ್ 2020ರ ಏ.12 ರಂದು ಬಿಎಲ್‌ಆರ್ ವಿಮಾನ ನಿಲ್ದಾಣದಿಂದ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಅಂದಿನಿಂದ ಬೆಂಗಳೂರು ಮತ್ತು ಜಪಾನ್ ನಡುವಿನ ಪ್ರಯಾಣಿಕರ ದಟ್ಟಣೆಯು ಗಮನಾರ್ಹವಾಗಿ ಬೆಳೆದಿದೆ. 2022ರಲ್ಲಿ 23,532 ಪ್ರಯಾಣಿಕರು ಮತ್ತು 2023ರಲ್ಲಿ 62,959 ಪ್ರಯಾಣಿಕರು ಈ ಮಾರ್ಗವಾಗಿ ಪ್ರಯಾಣಿಸಿದ್ದಾರೆ. ಇದನ್ನೂ ಓದಿ: ಡಿ.ಕೆ ಶಿವಕುಮಾರ್‌ಗೆ ನಾಡಿನ ಜನ ಪಾಠ ಕಲಿಸೋ ದಿನ ದೂರವಿಲ್ಲ: ಜೆಡಿಎಸ್
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (KIAB/BLR ವಿಮಾನ ನಿಲ್ದಾಣ) FY 2023-24 ಸಾಲಿನ ಸತತ ನಾಲ್ಕನೇ ವರ್ಷವೂ ಪೆರಿಷಬಲ್ ಸರಕುಗಳ ರಫ್ತಿನಲ್ಲಿ ಭಾರತದಲ್ಲೇ ನಂಬರ್ 1 ಸ್ಥಾನ ಮುಂದುವರೆಸಿಕೊಂಡು ಬಂದಿದೆ.
ಈ ಆರ್ಥಿಕ ವರ್ಷದಲ್ಲಿ, BLR ವಿಮಾನ ನಿಲ್ದಾಣವು 63,188 ಮೆಟ್ರಿಕ್ ಟನ್‌ಗಳ (MT) ಪೆರಿಷಬಲ್ ಸರಕು ಸಾಗಣೆ ಮಾಡುವ ಮೂಲಕ ದಾಖಲೆ ನಿರ್ಮಿಸಿದೆ. ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ.18ರಷ್ಟು ಏರಿಕೆ ಕಂಡಿದೆ. ಈ ಮೂಲಕ BLR ವಿಮಾನ ನಿಲ್ದಾಣವು ಪೆರಿಷಬಲ್ ಸರಕುಗಳ ಸಾಗಣೆಯಲ್ಲಿ ಭಾರತದಲ್ಲಿ ತನ್ನ ಸಾಧನೆಯನ್ನು ಎತ್ತಿ ತೋರಿಸುತ್ತದೆ. ದೇಶದ ಒಟ್ಟು ಪೆರಿಷಬಲ್ ಸರಕುಗಳ ಶೇ.28ರಷ್ಟು ಹಾಗೂ ದಕ್ಷಿಣ ಭಾರತದ ಪೆರಿಷಬಲ್ ಸರಕುಗಳ ಒಟ್ಟು ಶೇ.44 ಅನ್ನು BLR ವಿಮಾನ ನಿಲ್ದಾಣದ ಮೂಲಕವೇ ನಿರ್ವಹಿಸಲಾಗಿದೆ. FY 2023-24 ಸಾಲಿನಲ್ಲಿ ಪೆರಿಷಬಲ್ ಸರಕು ಸಾಗಣೆಯಲ್ಲಿ ಶೇ.28ರಷ್ಟು ರಾಷ್ಟ್ರೀಯ ಪಾಲನ್ನು ಹೊಂದಿದೆ. ಇದನ್ನೂ ಓದಿ: ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ 500ರೂ. ದಂಡ- ಬಿಬಿಎಂಪಿ ಆಯುಕ್ತ ಎಚ್ಚರಿಕೆ
BLR ವಿಮಾನ ನಿಲ್ದಾಣವು ವರ್ಷವಿಡೀ ವಿವಿಧ ಪೆರಿಷಬಲ್ ಸರಕುಗಳನ್ನು ರಫ್ತು ಮಾಡುವಲ್ಲಿ ಉತ್ಕೃಷ್ಟವಾಗಿದೆ. FY 2023-24 ಸಾಲಿನಲ್ಲಿ ಕೋಳಿ ಉತ್ಪನ್ನ ರಫ್ತಿನಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು, 47,041 ಮೆಟ್ರಿಕ್ ಟನ್‌ಗಳನ್ನು ಸಾಗಿಸಿದೆ. ಇದಲ್ಲದೆ, 2,050 ಮೆಟ್ರಿಕ್ ಟನ್ ಹೂವುಗಳನ್ನು ರಫ್ತು ಮಾಡಿದೆ. ಒಟ್ಟಾರೆಯಾಗಿ ಕೋಳಿ, ತಾಜಾ ತರಕಾರಿಗಳು, ತಾಜಾ ಹಣ್ಣುಗಳು ಮತ್ತು ಹೂವುಗಳು ಸೇರಿದಂತೆ ಪ್ರಮುಖ ಪೆರಿಷಬಲ್ ಸರಕುಗಳು ಒಳಗೊಂಡಿದೆ.
ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ (Bengaluru Airport) ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಮಾತನಾಡಿ, FY 2023-24 ರಲ್ಲಿ ಪೆರಿಷಬಲ್ ಸರಕುಗಳ ರಫ್ತಿನಲ್ಲಿ BLR ವಿಮಾನ ನಿಲ್ದಾಣದ ಬೆಳವಣಿಗೆ ಹಾಗೂ ನಾಯಕತ್ವದ ಬಗ್ಗೆ ಅಪಾರ ಹೆಮ್ಮೆ ಎನಿಸುತ್ತದೆ. ಈ ಮೈಲಿಗಲ್ಲು ಸಾಧಿಸಲು ನಮ್ಮ ಬಳಿ ಇರುವ ಕೋಲ್ಡ್‌ಚೇನ್ ಶ್ರೇಷ್ಠತೆ ಹಾಗೂ ನಮ್ಮ ಪಾಲುದಾರರು ಮತ್ತು ಗ್ರಾಹಕರು ನಮ್ಮ ಮೇಲಿರಿಸಿರುವ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದರು. ಇದನ್ನೂ ಓದಿ: ವಿಶ್ವನಾಥ್, ಪುತ್ರ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೋಟೋ ಇದೆ: ಬೈರತಿ ಸುರೇಶ್ ಬಾಂಬ್!
ದಕ್ಷಿಣ ಭಾರತದಲ್ಲಿಯೇ ಶೇ.44 ರಷ್ಟನ್ನು ಒಟ್ಟು ಪೆರಿಷಬಲ್ ಸರಕು ರಫ್ತು ಪಾಲನ್ನು ನಾವು ಹೊಂದಿದ್ದೇವೆ. BLR ವಿಮಾನ ನಿಲ್ದಾಣವನ್ನು ದಕ್ಷಿಣ ಮತ್ತು ಮಧ್ಯ ಭಾರತಕ್ಕೆ ಪ್ರಧಾನ ಗೇಟ್‌ವೇ ಆಗಿ ಪರಿವರ್ತಿಸಿದ್ದೇವೆ. ಪೆರಿಷಬಲ್ ಸರಕುಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಬೆಂಬಲಿಸಲು ಮತ್ತು ಜಾಗತಿಕ ವ್ಯಾಪಾರದಲ್ಲಿ ಪ್ರಮುಖ ರಫ್ತುದಾರರಾಗಿ ನಮ್ಮ ಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಲು ಮೂಲಸೌಕರ್ಯ ಮತ್ತು ಸೇವೆಗಳನ್ನು ಹೆಚ್ಚಿಸುವುದರ ಮೇಲೆ ಗಮನ ಹರಿಸಿದ್ದೇವೆ ಎಂದು ತಿಳಿಸಿದರು.
ಸಂಪರ್ಕ ಸಾಧನೆಯಲ್ಲಿ BLR ವಿಮಾನ ನಿಲ್ದಾಣವು ಗೇಟ್‌ವೇಯಾಗಿದ್ದು, ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಭಾರತೀಯ ಉತ್ಪಾದಕರನ್ನು ಸಂಪರ್ಕಿಸುತ್ತದೆ. ವಿಮಾನ ನಿಲ್ದಾಣದ ವಿಸ್ತಾರವಾದ ಜಾಲವಾದ ಓಮನ್, ಸಿಂಗಾಪುರ, ಕತಾರ್, ಯುಎಇ, ಮಾಲ್ಡೀವ್ಸ್, ಯುಕೆ ಮತ್ತು ಕುವೈತ್‌ನಂತಹ ಉನ್ನತ ಮಾರುಕಟ್ಟೆಗಳನ್ನು ಒಳಗೊಂಡಂತೆ 100ಕ್ಕೂ ಹೆಚ್ಚು ಜಾಗತಿಕ ಸ್ಥಳಗಳಿಗೆ ಪೆರಿಷಬಲ್ ಸರಕುಗಳ ತಡೆರಹಿತ ಸಾಗಣೆಯನ್ನು ಸುಗಮಗೊಳಿಸುತ್ತದೆ. ಈ ಸಂಪರ್ಕವು ದಕ್ಷಿಣ ಭಾರತದ ರಫ್ತು ಸಾಮರ್ಥ್ಯವನ್ನು ಹೆಚ್ಚಿಸುವುದಲ್ಲದೆ, ತಾಜಾ ಉತ್ಪನ್ನವು ಅಂತಾರಾಷ್ಟ್ರೀಯ ಖರೀದಿದಾರರನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ತಲುಪಿಸುತ್ತದೆ. ಇದನ್ನೂ ಓದಿ: MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್
BLR ವಿಮಾನ ನಿಲ್ದಾಣವು WFS BLR ಕೂಲ್‌ಪೋರ್ಟ್ ಅನ್ನು ಸಹ ಹೊಂದಿದ್ದು, ಇದು 40,000 ಮೆಟ್ರಿಕ್ ಟನ್‌ಗಳ ಟರ್ಮಿನಲ್ ಸಾಮರ್ಥ್ಯದೊಂದಿಗೆ ಭಾರತದ ಮೊದಲ ಏಕೀಕೃತ ಆನ್-ಏರ್‌ಪೋರ್ಟ್ ಪೆರಿಷಬಲ್ ಸರಕುಗಳ ನಿರ್ವಹಣಾ ಕೇಂದ್ರವಾಗಿದೆ. ಈ ಅತ್ಯಾಧುನಿಕ ಸೌಲಭ್ಯವು ಪೆರಿಷಬಲ್ ಕೋಲ್ಡ್ ಸ್ಟೋರೇಜ್ ಸರಕುಗಳಿಗಾಗಿ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ. ಸಸ್ಯ ಮತ್ತು ಪ್ರಾಣಿಗಳ ಕ್ವಾರಂಟೈನ್ ತಪಾಸಣೆ, ಡ್ರಗ್ ಕಂಟ್ರೋಲರ್ ಲ್ಯಾಬ್ ಮತ್ತು ಭಾರತೀಯ ಕಸ್ಟಮ್ಸ್ ಸೇರಿದಂತೆ ಆನ್-ಸೈಟ್ ನಿಯಂತ್ರಕ ಸೇವೆಗಳನ್ನು ಒಳಗೊಂಡಿದೆ. ತನ್ನ ಮೂಲಸೌಕರ್ಯ ಮತ್ತು ಸೇವೆಗಳನ್ನು ನಿರಂತರವಾಗಿ ಸುಧಾರಿಸುವ ಮೂಲಕ, BLR ವಿಮಾನ ನಿಲ್ದಾಣವು ಪೆರಿಷಬಲ್ ಸರಕುಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಬೆಂಬಲಿಸುವ ಜೊತೆಗೆ, ಭಾರತದಲ್ಲಿ ಕೃಷಿ ಮತ್ತು ತೋಟಗಾರಿಕಾ ರಫ್ತಿಗೆ ಸಹಕಾರ ನೀಡುತ್ತದೆ. ಈ ಮೂಲಕ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿ, ಅಂತಾರಾಷ್ಟ್ರೀಯ ವ್ಯಾಪಾರ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ.
ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಜನಪ್ರಿಯತೆಯಿಂದಾಗಿ ರಾಜಧಾನಿ ಬೆಂಗಳೂರಿನ ಹೊರಗೂ ಮೆಟ್ರೋ (Metro) ರೈಲು ಸಂಪರ್ಕ ಸಾಧ್ಯತೆ ಮುನ್ನೆಲೆಗೆ ಬಂದಿದೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೊಸ ಮೆಟ್ರೋ ಮಾರ್ಗಗಳನ್ನು ಆರಂಭಿಸಲು ಕರ‍್ಯಸಾಧ್ಯತಾ ವರದಿ ತಯಾರಿಗೆ ಮುಂದಾಗಿದ್ದಾರೆ. ಒಂದು ವೇಳೆ ಓಕೆ ಆದರೆ ಬೆಂಗಳೂರಿನ (Benagluru) ಬಿಐಇಸಿಯಿಂದ ತುಮಕೂರಿಗೆ (Tumkuru) ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಗೆ (Devanahaali) ಮೆಟ್ರೋ ಸಂಚಾರ ಶುರುವಾಗಬಹುದು. ಸರ‍್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕರ‍್ಯಸಾಧ್ಯತಾವರದಿ ತಯಾರಿಸುವುದಾಗಿ ಸಿಎಂ ಘೋಷಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಭಾರದ ನಡುವೆ ಸರ್ಕಾರಿ ಇಲಾಖೆಗಳಿಗೆ ಬಂಪರ್ – ಯಾವ ಇಲಾಖೆಗೆ ಎಷ್ಟು ಅನುದಾನ?
ಬೆಂಗಳೂರು: ಮುಂಬೈಗೆ ತೆರಳಬೇಕಿದ್ದ ವಿಮಾನ (Flight) ಸುಮಾರು 10 ಗಂಟೆಗೂ ಹೆಚ್ಚು ಕಾಲ ತಡವಾಗಿದ್ದರಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಸ್ಪೈಸ್‌ಜೆಟ್ (Spicejet) ಸಿಬ್ಬಂದಿ ವಿರುದ್ಧ ನೂರಾರು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಗಮ್ಯಸ್ಥಾನವನ್ನು ತಲುಪಲು ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೇ ಇದ್ದುದರಿಂದ ಆಕ್ರೋಶಗೊಂಡ ಪ್ರಯಾಣಿಕರು ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.
ಬೆಂಗಳೂರು ವಿಮಾನ (Bengaluru Airport) ನಿಲ್ದಾಣದ ಗೇಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ಸುಮಾರು 250 ಪ್ರಯಾಣಿಕರು ವಿಮಾನ ಹತ್ತಲು ತೊಂದರೆ ಅನುಭವಿಸಿದರು. ವಿಮಾನ ಬೆಳಗ್ಗೆ 6 ಗಂಟೆಗೆ ಹೊರಡಬೇಕಿತ್ತು. ಪ್ರಯಾಣಿಕರು ಆಗಲೇ ವಿಮಾನವನ್ನು ಏರಿದ್ದರು. ಆದರೆ ಪ್ರಯಾಣಿಕರು 2 ಗಂಟೆ ವಿಮಾನದಲ್ಲಿ ಕಳೆದ ಬಳಿಕ ಅಲ್ಲಿನ ಸಿಬ್ಬಂದಿ ತಾಂತ್ರಿಕ ದೋಷಗಳನ್ನು ಉಲ್ಲೇಖಿಸಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗೆ ಇಳಿಸಿದ್ದಾರೆ.
ಪ್ರಯಾಣಿಕರು ಬೋರ್ಡಿಂಗ್ ಕೌಂಟರ್‌ಗೆ ಹಿಂತಿರುಗಿದ ನಂತರ ಸ್ಪೈಸ್‌ಜೆಟ್ ಸಿಬ್ಬಂದಿ ವಿಮಾನವನ್ನು ಮಧ್ಯಾಹ್ನ 12 ಗಂಟೆಗೆ ಮರು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಅನಂತರ ಅದನ್ನು ಮಧ್ಯಾಹ್ನ 3 ಗಂಟೆಗೆ ಮತ್ತು ಈಗ ರಾತ್ರಿ 8:30ಕ್ಕೆ ಬದಲಾಯಿಸಲಾಗಿದೆ. ಇದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಿಂದ ಸೋನಿಯಾ ಗಾಂಧಿ ಸಂಸತ್ತಿಗೆ! – ಹೈಕಮಾಂಡ್ ಮುಂದೆ ಡಿಕೆಶಿ ಪ್ರಸ್ತಾಪ
ಸರಿಯಾದ ಮಾಹಿತಿ ನೀಡದ ಕಾರಣ ಪ್ರಯಾಣಿಕರು ವಿಮಾನ ವಿಳಂಬಕ್ಕೆ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ. ಏರ್‌ಲೈನ್ಸ್ ಸಿಬ್ಬಂದಿ ವಿರುದ್ಧ ಗೇಟ್ ನಂಬರ್ 15 ರಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಪ್ರಯಾಣಿಕರು ಕೂಡಲೇ ಪ್ರಯಾಣಕ್ಕೆ ಬೇರೆ ವಿಮಾನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದಾರೆ.
ಬೆಂಗಳೂರಿನಿಂದ ಮುಂಬೈಗೆ ಸ್ಪೈಸ್‌ಜೆಟ್ ವಿಮಾನ ವಿಳಂಬವಾಗಿದ್ದು ನಮ್ಮ ಮಾತು ಕೇಳಲು ಇಲ್ಲಿ ಯಾರೂ ಇಲ್ಲ ಎಂದು ಪ್ರಯಾಣಿಕರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಸ್ಪೈಸ್‌ಜೆಟ್ ಇನ್ನೂ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಇದನ್ನೂ ಓದಿ: ಚಂಡಮಾರುತಕ್ಕೆ ಬಾಲಿವುಡ್ ನಟ ಆಮೀರ್ ಸಿಲುಕಿದ್ದು ಹೇಗೆ?
ಬೆಂಗಳೂರು: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆ ವಿಮಾನ (Flight) ಹಾರಾಟಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಕಳೆದ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ.
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ತೆರಳುವ 44 ವಿಮಾನಗಳು ರದ್ದಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ 16 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.
ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್ ಇಂದು ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಕರ್ನಾಟಕ ಬಂದ್‌ಗೆ ರಾಜ್ಯದ ವಿವಿಧ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಏರ್‌ಪೋರ್ಟ್ ಒಳಗಡೆ ಪ್ರತಿಭಟನೆಗೆ ಯತ್ನ – ಐವರು ಪೊಲೀಸರ ವಶಕ್ಕೆ
ಕರ್ನಾಟಕ ಬಂದ್ ಹಿನ್ನೆಲೆ ಹೆಚ್ಚಿನ ಪ್ರಯಾಣಿಕರು ಕೊನೆ ಕ್ಷಣದಲ್ಲಿ ತಮ್ಮ ವಿಮಾನದ ಟಿಕೆಟ್‌ಗಳನ್ನು ಕ್ಯಾನ್ಸಲ್ ಮಾಡಿದ್ದಾರೆ. ಈ ಕಾರಣಕ್ಕೆ ಹಲವು ವಿಮಾನಯಾನ ಸಂಸ್ಥೆಗಳು ವಿಮಾನ ಹಾರಾಟಗಳನ್ನು ರದ್ದು ಮಾಡಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಈವರೆಗೂ ಪರಿಹಾರ ಸಿಗದೇ ಇರೋ ಏಕೈಕ ಸಮಸ್ಯೆ ಕಾವೇರಿಯದ್ದು: ನಟ ಉಪೇಂದ್ರ