Tag: ಕೆಂಪೇಗೌಡ ಉತ್ಸವ

  • ಭಾನುವಾರ ದುಬೈನಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಉತ್ಸವ

    ಭಾನುವಾರ ದುಬೈನಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಉತ್ಸವ

    ಬೆಂಗಳೂರು: ದುಬೈನಲ್ಲಿ (Dubai) ಭಾನುವಾರ (ಅ.29) ಬೆಂಗಳೂರು ನಿರ್ಮಾತೃ ಕೆಂಪೇಗೌಡ ಉತ್ಸವ (Kempegowda Utsav) ನಡೆಯಲಿದೆ.

    ಯುಎಇ ಒಕ್ಕಲಿಗರ ಸಂಘದಿಂದ (Okkaligas Union UAE) ಕೆಂಪೇಗೌಡ ಉತ್ಸವ ಆಯೋಜನೆ ಮಾಡಲಾಗಿದ್ದು, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಸಾನಿಧ್ಯದಲ್ಲಿ ಕೆಂಪೇಗೌಡ ಉತ್ಸವ ನಡೆಯಲಿದೆ. ಇದನ್ನೂ ಓದಿ: ದಸರಾ ವಜ್ರಮುಷ್ಠಿ ಕಾಳಗದ ವಿಜೇತ ಚನ್ನಪಟ್ಟಣದ ಪ್ರವೀಣ್ ಜೆಟ್ಟಿಗೆ ಸನ್ಮಾನ

    ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭಾಗವಹಿಸುತ್ತಿದ್ದು, ಸಚಿವರಾದ ಕೆ.ವೆಂಕಟೇಶ್, ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸೇರಿದಂತೆ ಕರ್ನಾಟಕದಿಂದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಳೆದ ಹತ್ತು ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್

    ಈಗಾಗಲೇ ದುಬೈನಲ್ಲಿರುವ ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ಅವರನ್ನ ದುಬೈ ಒಕ್ಕಲಿಗ ಸಂಘದ ಸಂಚಾಲಕ ಕಿರಣ್ ಗೌಡ ಸೇರಿದಂತೆ ಸಂಘದ ಸದಸ್ಯರು ಸ್ವಾಗತಿಸಿ ಬರಮಾಡಿಕೊಂಡರು. ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೊಡಿಸೋದಾಗಿ ಚೈತ್ರಾ ಮಾದರಿಯಲ್ಲೇ ಕೋಟಿ ಕೋಟಿ ವಂಚನೆ- ಆರೋಪಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿದ್ದರಾಮೋತ್ಸವಕ್ಕೆ ಡಿಕೆಶಿ ಕೆಂಪೇಗೌಡ ಉತ್ಸವ ಟಕ್ಕರ್

    ಸಿದ್ದರಾಮೋತ್ಸವಕ್ಕೆ ಡಿಕೆಶಿ ಕೆಂಪೇಗೌಡ ಉತ್ಸವ ಟಕ್ಕರ್

    ಬೆಂಗಳೂರು: ಸಿದ್ದರಾಮಯ್ಯನವರ ಸಿದ್ದರಾಮೋತ್ಸವಕ್ಕೆ ಭರ್ಜರಿ ಕೌಂಟರ್ ಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

    SIDDARAMAIAH

    ಹಳೆ ಮೈಸೂರು ಭಾಗದಲ್ಲಿ ಅದ್ದೂರಿ ಕೆಂಪೇಗೌಡರ ಉತ್ಸವಕ್ಕೆ ಒಕ್ಕಲಿಗ ಸಮುದಾಯದ ನಾಯಕರು ಹಾಗೂ ಸ್ವಾಮೀಜಿಗಳು ಆಸಕ್ತಿ ತೋರುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದ್ದು, ಸಮುದಾಯದ ವತಿಯಿಂದ ಕೆಂಪೇಗೌಡ ಉತ್ಸವದ ಅಂಗವಾಗಿ ಬೃಹತ್ ಸಮಾವೇಶ ನಡೆಸಿದರೆ ಸಮಾವೇಶದ ಸಂಪೂರ್ಣ ಜವಾಬ್ದಾರಿ ಹೊರಲು ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಭಾರೀ ಮಳೆಗೆ ಕಳಸ, ಹೊರನಾಡು ಸಂಪರ್ಕ ಕಡಿತ – ಬೆಳ್ತಂಗಡಿ ಶಾಲಾ, ಕಾಲೇಜುಗಳಿಗೆ ರಜೆ

    ಈ ಮೂಲಕ, ರಾಜಕೀಯ ಎದುರಾಳಿಗಳಿಗೆ ತಮ್ಮ ಸಮುದಾಯದ ಶಕ್ತಿ ಹಾಗೂ ಬೆಂಬಲದ ಸಂದೇಶ ರವಾನಿಸುವುದು ಡಿಕೆಶಿ ಲೆಕ್ಕಾಚಾರವಾಗಿದೆ. ಈ ಮಧ್ಯೆ ಸಿದ್ದರಾಮಯ್ಯ ಅಮೃತ ಮಹೋತ್ಸವದ ಮಾಹಿತಿಯನ್ನ ಅಮೃತ ಮಹೋತ್ಸವ ಸಮಿತಿ ಇಂದು ಅಧಿಕೃತವಾಗಿ ಪ್ರಕಟಿಸಲಿದೆ. ಇದನ್ನೂ ಓದಿ: ಜುಲೈ 12ಕ್ಕೆ ಚಾಮರಾಜಪೇಟೆ ಬಂದ್ – ಬೆಂಬಲ ನೀಡಲು ಮುಸ್ಲಿಂ ವ್ಯಾಪಾರಿಗಳು ನಿರಾಕರಣೆ

    ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಬೆಳಗ್ಗೆ 10ಕ್ಕೆ ಸಭೆ ನಡೆಯಲಿದೆ. ಆರ್.ವಿ.ದೇಶಪಾಂಡೆ ನೇತೃತ್ವದ ಅಮೃತೋತ್ಸವ ಸಮಿತಿಯ ಸದಸ್ಯರಾದ ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಪಿಜಿಆರ್ ಸಿಂಧ್ಯ, ಜಯಮಾಲ, ಬಿ.ಎಲ್.ಶಂಕರ್, ವಿ.ಆರ್.ಸುದರ್ಶನ್, ಜಮೀರ್ ಅಹಮ್ಮದ್ ಸೇರಿದಂತೆ ಘಟಾನುಘಟಿಗಳು ಸಭೆಯಲ್ಲಿ ಭಾಗಿ ಆಗಲಿದ್ದಾರೆ. ಆಗಸ್ಟ್ 3ರ ಸಮಾವೇಶ, ಪೂರ್ವ ಸಿದ್ಧತೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]