Tag: ಕೆಆರ್ ಮಾರುಕಟ್ಟೆ

  • ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರಲು ನಾಲಾಯಕ್: ಜೆಡಿಎಸ್ ಕಿಡಿ

    ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರಲು ನಾಲಾಯಕ್: ಜೆಡಿಎಸ್ ಕಿಡಿ

    ಬೆಂಗಳೂರು: ಕೆ.ಆರ್ ಮಾರುಕಟ್ಟೆಯಲ್ಲಿ (KR Market) ನಡೆದಿದ್ದ ಸಾಮೂಹಿಕ ಅತ್ಯಾಚಾರ ಕೇಸ್‌ಗೆ ಸಂಬಂಧಿಸಿದಂತೆ ಉಡಾಫೆ ಉತ್ತರ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ದ ಜೆಡಿಎಸ್ (JDS) ಕಿಡಿಕಾರಿದೆ.

    ಸಿದ್ದರಾಮಯ್ಯ ವಿರುದ್ದ ಎಕ್ಸ್‌ನಲ್ಲಿ ಕಿಡಿಕಾರಿರುವ ಜೆಡಿಎಸ್, ವಿಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ಟ್ಯಾಗ್ ಮಾಡಿ ವಾಗ್ದಾಳಿ ನಡೆಸಿದೆ. ಅಷ್ಟೇ ಅಲ್ಲದೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನಾಲಾಯಕ್ ಎಂದು ಲೇವಡಿ ಮಾಡಿದೆ. ಇದನ್ನೂ ಓದಿ: KUWSDB ಎಂಜಿನಿಯರ್‌ಗೆ ಉಪಲೋಕಾಯುಕ್ತ ತರಾಟೆ

    ಜೆಡಿಎಸ್ ಟ್ವೀಟ್ ಏನು?
    ಸಿದ್ದರಾಮಯ್ಯ ಅವರೇ ಅಧಿಕಾರ ಅನುಭವಿಸುವಾಗ ನಿಮಗೆ ಮರೆವಿನ ಕಾಯಿಲೆಯೇ? ಬೆಂಗಳೂರಿನ ಕೆ.ಆರ್.ಮಾರ್ಕೆಟ್‌ನಲ್ಲಿ ನಡೆದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಇಡೀ ರಾಜ್ಯವೇ ತಲೆ ತಗ್ಗಿಸುವ ಹೀನ ಕೃತ್ಯವಾಗಿದೆ. ಇದನ್ನೂ ಓದಿ: ಹೆಬ್ಬಾಳ್ಕರ್‌ ಕಾರನ್ನು ಬಟ್ಟೆ ಹಾಕಿ ಮುಚ್ಚಿದ್ದು ಯಾಕೆ? – ಮತ್ತೆ ಅನುಮಾನ ವ್ಯಕ್ತಪಡಿಸಿದ ಛಲವಾದಿ

    ಇದನ್ನು ಪ್ರಶ್ನಿಸಿದರೇ ಹಿಂದಿನ ಸರ್ಕಾರಗಳ ಕಾಲದಲ್ಲಿ ರೇಪ್ ಆಗಿಲ್ವಾ ಎಂದು ಸಮರ್ಥಿಸಿಕೊಳ್ಳುವ ನೀವು ರಾಜ್ಯದ ಮುಖ್ಯಮಂತ್ರಿಯಾಗಿರಲು ನಾಲಾಯಕ್ ಸಿದ್ದರಾಮಯ್ಯ. ಇದನ್ನೂ ಓದಿ: ಬಿಜೆಪಿ ಕೋರ್‌ ಕಮಿಟಿ ಸಭೆ – ರಾಮುಲುಗೆ ರಾಧಾಮೋಹನ್‌ ದಾಸ್‌ ಕ್ಲಾಸ್‌!

    ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕೊಲೆ, ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇರುವುದು ರಾಜ್ಯದಲ್ಲಿ ಕುಸಿದುಬಿದ್ದಿರುವುದು ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಏಯ್‌ ಯತ್ನಾಳ್‌ ಎಲ್ಲವನ್ನ ತೆಗೀಬೇಕಾ? – ಜಿಟಿಡಿ ಖಡಕ್‌ ವಾರ್ನಿಂಗ್‌

  • ಮತ್ತೆ ಹೆಚ್ಚಾಯ್ತು ದರೋಡೆಕೋರರ ಹಾವಳಿ – ಯುವಕನ ಮೇಲೆ ಡ್ಯಾಗರ್‌ನಿಂದ ದಾಳಿ

    ಮತ್ತೆ ಹೆಚ್ಚಾಯ್ತು ದರೋಡೆಕೋರರ ಹಾವಳಿ – ಯುವಕನ ಮೇಲೆ ಡ್ಯಾಗರ್‌ನಿಂದ ದಾಳಿ

    ಬೆಂಗಳೂರು: ಒಂಟಿಯಾಗಿ ಓಡಾಡುವವರನ್ನು ಟಾರ್ಗೆಟ್ ಮಾಡುತ್ತಿದ್ದ ದರೋಡೆಕೋರರ ಗುಂಪು ಯುವಕನ ಬಳಿ ಮೊಬೈಲ್, ಹಣ ಕಿತ್ತುಕೊಳ್ಳಲು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೃದಯ ಭಾಗ ಎಂದು ಕರೆಯುವ ಬಳೇಪೇಟೆ ಬಳಿ ನಡೆದಿದೆ.

    ಪ್ರಮೋದ್ (17) ದರೋಡೆ ಗ್ಯಾಂಗಿನಿಂದ ಹಲ್ಲೆಗೊಳಗಾದ ಯುವಕ. ಜನವರಿ 13 ರಂದು ತಡರಾತ್ರಿ ಸುಮಾರು 9.30ಕ್ಕೆ ಎಂಎಸ್‍ಆರ್ ಲೇನ್ ನಲ್ಲಿ ನಡೆದುಕೊಂಡು ಬರುವಾಗ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಮೊದಲೇ ಡ್ರಾಗರ್ ಹಿಡಿದು ಹೊಂಚು ಹಾಕಿ ಕುಳಿತ್ತಿದ್ದ 3 ದುಷ್ಕರ್ಮಿಗಳು ಪ್ರಮೋದ್‍ನನ್ನು ಅಟ್ಟಾಡಿಸಿ ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳೀಯರು ಯುವಕನ ಸಹಾಯಕ್ಕೆ ಧಾವಿಸಿ ರಕ್ಷಣೆ ಮಾಡಿದ್ದಾರೆ.

    ಸ್ಥಳೀಯರು ಯುವಕನ ನೆರವಿಗೆ ಧಾವಿಸಿದ್ದನ್ನು ಕಂಡ ದರೋಡೆಕೋರರ ಗುಂಪು ಅವರನ್ನು ಕ್ಷಣ ಕಾಲ ಗುರಾಯಿಸಿದ್ದು, ಬಳಿಕ ಕೃತ್ಯವನ್ನು ಮೊಬೈಲ್‍ನಲ್ಲಿ ಫೋಟೋ ತೆಗೆದುಕೊಳ್ಳಲು ಮುಂದಾಗುತ್ತಿದ್ದಂತೆ ಅವರ ಮೇಲೂ ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಈ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ನಗರದಲ್ಲಿ ಒಂಟಿಯಾಗಿ ಓಡಾಡುವವರನ್ನು ಟಾರ್ಗೆಟ್ ಮಾಡುವ ಈ ಗ್ಯಾಂಗ್ ಮಾರಕಾಸ್ತ್ರ ಹಿಡಿದು ಹೊಂಚು ಹಾಕಿ ಕುಳಿತ್ತಿರುತ್ತದೆ. ರಸ್ತೆಯಲ್ಲಿ ನಡೆದು ಬರುವ ಯುವಕ, ಯುವತಿಯರಿಂದ ಮೊಬೈಲ್, ಹಣ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಾರೆ. ಈ ವೇಳೆ ಪ್ರತಿರೋಧ ತೋರಿದವರ ಮೇಲೆ ಹಲ್ಲೆ ನಡೆಸುತ್ತಾರೆ. ಅಂದು ರಾತ್ರಿ ಕೂಡ ಯುವಕ ಮೊಬೈಲ್ ನೀಡದಿದ್ದರಿಂದ ಹಲ್ಲೆ ನಡೆಸಿದ್ದಾರೆ. ಆದರೆ ಅದೃಷ್ಟವಶಾತ್ ಸ್ಥಳೀಯರು ಯುವಕನ ನೆರವಿಗೆ ಬಂದ ಪರಿಣಾಮ ಅಪಾಯದಿಂದ ಪಾರಾಗಿದ್ದಾನೆ.

    ಈ ಘಟನೆ ಕುರಿತು ಕೆ.ಆರ್ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿಟಿವಿ ದೃಶ್ಯವಾಳಿಯನ್ನು ಆಧಾರಿಸಿ ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv