Tag: ಕೆಎಸ್ ಈಶ್ವರಪ್ಪ

  • ಸದ್ಯಕ್ಕೆ ನಾನು ಬಿಜೆಪಿಗೆ ಮರಳುವುದಿಲ್ಲ: ಈಶ್ವರಪ್ಪ

    ಸದ್ಯಕ್ಕೆ ನಾನು ಬಿಜೆಪಿಗೆ ಮರಳುವುದಿಲ್ಲ: ಈಶ್ವರಪ್ಪ

    – ನನ್ನ, ಯಡಿಯೂರಪ್ಪ ಸ್ನೇಹ ಮುಂದುವರಿಯುತ್ತಿದೆ ಎಂದ ಮಾಜಿ ಸಚಿವ

    ಬೆಂಗಳೂರು: ನಾನು ಸದ್ಯಕ್ಕೆ ಬಿಜೆಪಿಗೆ (BJP) ಮರಳುವುದಿಲ್ಲ, ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ. ಮೊದಲು ಬಿಜೆಪಿ ಪರಿಸ್ಥಿತಿ ಸರಿಯಾಗಬೇಕು. ವಿಜಯೇಂದ್ರ (BY Vijayendra) ಆಹ್ವಾನ ಕೊಟ್ಟಿರುವ ಬಗ್ಗೆ ಗೊತ್ತಿಲ್ಲ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು. ಇದನ್ನೂ ಓದಿ: 2025 ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್‌ ನೇಮಕ

    ಇನ್ನು, ನನ್ನ ಯಡಿಯೂರಪ್ಪ ಸ್ನೇಹ ಬಹಳ ಹಳೆಯದು, ಇವತ್ತಿನದಲ್ಲ. ನಾವಿಬ್ಬರೂ ಪಾರ್ಟ್‌ನರ್‌ಶಿಪ್‌ನಲ್ಲಿ ಹಿಂದೆ ಫ್ಯಾಕ್ಟರಿ ಮಾಡಿದ್ದೆವು. ನಮ್ಮಿಬ್ಬರ ಮಧ್ಯೆ ಸ್ನೇಹ ಮುಂದುವರೀತಿದೆ. ರಾಜಕಾರಣಕ್ಕೂ ಸ್ನೇಹಕ್ಕೂ ಸಂಬಂಧ ಇಲ್ಲ. ನನ್ನ ಹುಟ್ಟುಹಬ್ಬಕ್ಕೆ ಪತ್ರಿಕೆಯಲ್ಲೂ ಅವರು ಶುಭಾಶಯ ಕೋರಿಕೆ ಹಾಕಿಸಿದ್ದರು. ನಮ್ಮ ಮನೆಯ ಕಾರ್ಯಕ್ರಮಗಳಿಗೆ ಅವರು ಬಂದಿದ್ದಾರೆ. ಅವರ ಮನೆ ಕಾರ್ಯಕ್ರಮಗಳಿಗೆ ನಾವು ಹೋಗಿದ್ದೇವೆ. ಸ್ನೇಹ ಬೇರೆ ರಾಜಕಾರಣ ಬೇರೆ ಎಂದು ತಿಳಿಸಿದರು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ತನಿಖೆ ಏನಾಯ್ತು – ಪಾದಯಾತ್ರೆ ನೆನಪಿಸಿ ಸಿಎಂಗೆ ಪತ್ರ ಬರೆದ ಹೆಚ್.ಕೆ ಪಾಟೀಲ್

  • ಸಾಧು ಸಂತರೊಂದಿಗೆ ಸೇರಿಕೊಂಡು ಕ್ರಾಂತಿವೀರ ಬ್ರಿಗೇಡ್ ಶುರು – ಫೆ.4 ರಂದು ಉದ್ಘಾಟನೆ: ಈಶ್ವರಪ್ಪ

    ಸಾಧು ಸಂತರೊಂದಿಗೆ ಸೇರಿಕೊಂಡು ಕ್ರಾಂತಿವೀರ ಬ್ರಿಗೇಡ್ ಶುರು – ಫೆ.4 ರಂದು ಉದ್ಘಾಟನೆ: ಈಶ್ವರಪ್ಪ

    ಬೆಂಗಳೂರು: ಸಾಧು ಸಂತರೊಂದಿಗೆ ಸೇರಿಕೊಂಡು ಕ್ರಾಂತಿವೀರ ಬ್ರಿಗೇಡ್ ಶುರು ಮಾಡಿದ್ದೇವೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ (KS Eshwarappa) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಕ್ರಾಂತಿವೀರ ಬ್ರಿಗೇಡ್ (Krantiveera Brigade) ಉದ್ಘಾಟನೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.4 ರಂದು ಬಸವನ ಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಆಗಲಿದೆ. ಇದು ಜಾತ್ಯಾತೀತವಾಗಿ ಮತ್ತು ಪಕ್ಷಾತೀತವಾ ಕಾರ್ಯಕ್ರಮ ನಡೆಯಲಿದೆ. ಹಿಂದೂ ಧರ್ಮ ರಕ್ಷಣೆ ಮಾಡಲು ಹಿಂದೂಗಳು ಒಂದಾಗಬೇಕು. ಹಿಂದೂಗಳು ಒಂದಾಗದಿದ್ದರೆ ಬಹಳ ಕಷ್ಟ. 1008 ಮಠಾಧೀಶರ ಪಾದಪೂಜೆಯೊಂದಿಗೆ ಉದ್ಘಾಟನೆ ಆಗಲಿದೆ. ಹಿಂದೂ ಧರ್ಮದ ಒಳಿತಿಗಾಗಿ ಕ್ರಾಂತಿವೀರ ಬ್ರಿಗೇಡ್ ಕೆಲಸ ಮಾಡಲಿದೆ ಎಂದರು.ಇದನ್ನೂ ಓದಿ: ‌ರೂಲ್ಸ್‌ಗೆಲ್ಲಾ ಡೊಂಟ್ ಕೇರ್-‌ ಮತ್ತೆ ಹೊಡೆದಾಡಿಕೊಂಡ ತ್ರಿವಿಕ್ರಮ್‌, ಉಗ್ರಂ ಮಂಜು

    ಹಿಂದುಳಿದವರು ಮತ್ತು ದಲಿತರಿಗೆ ಬೆಂಬಲ ಸಮಾಜದಿಂದಲೂ, ಸರ್ಕಾರದಿಂದಲೂ ಸಿಗುತ್ತಿಲ್ಲ. ಯಾರಿಗೆ ಅನ್ಯಾಯ ಆಗಿದೆಯೋ ಅಲ್ಲಿ ಕ್ರಾಂತಿವೀರ ಬ್ರಿಗೇಡ್ ನಿಲ್ಲಲಿದೆ. ಸ್ವಾಮೀಜಿಗಳು ತೀರ್ಮಾನ ತೆಗೆದುಕೊಂಡಾಗ ನಾವು ಪೂರ್ಣ ಬೆಂಬಲ ನೀಡಿದ್ದೇವೆ. ಬಸವರಾಜ ಬಾಳೇಕಾಯಿ ಬ್ರಿಗೇಡ್ ಅಧ್ಯಕ್ಷರಾಗಿ, ಕೆ.ಇ. ಕಾಂತೇಶ್ ಕಾರ್ಯಾಧ್ಯಕ್ಷರಾಗಿ ಇರುತ್ತಾರೆ. ನಾನು ಮತ್ತು ಗೂಳಿ ಹಟ್ಟಿ ಶೇಖರ್ ಬ್ರಿಗೇಡ್‌ನ ಸಂಚಾಲಕರಾಗಿರುತ್ತೇವೆ. ಸಕಲ ಹಿಂದೂ ಸಮಾಜದ ರಕ್ಷಣೆಗೆ ಈ ಬ್ರಿಗೇಡ್ ಕೆಲಸ ಮಾಡಲಿದೆ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಗೋಶಾಲೆ ಘೋಷಣೆ ಆಗಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ ಈ ಆದೇಶವನ್ನು ರದ್ದು ಮಾಡಿತು. ಸರ್ಕಾರದಲ್ಲಿ ಹಿಂದೂ ವಿರೋಧಿ ಕೆಲಸಗಳು ಆಗುತ್ತಿವೆ. ಧರ್ಮಸ್ಥಳದಲ್ಲಿ ನೇತ್ರಾವತಿ ನದಿಗೆ ತಲೆಕಡಿದ ಹಸು, ಹಸುವಿನ ರಕ್ತ ಬಂದು ಬೀಳುತ್ತಿದೆ. ವಕ್ಫ್ ಆಸ್ತಿ ಅಂತಾ ಪಹಣಿಯಲ್ಲಿ ಸೇರಿದ್ದನ್ನು ಒಂದಾದರೂ ವಾಪಸ್ ಪಡೆದಿದ್ದಾರಾ ಎಂದು ಪ್ರಶ್ನಿಸಿ ಕಿಡಿಕಾರಿದರು.

    ಈ ಹಿಂದೆ ರಾಯಣ್ಣ ಬ್ರಿಗೇಡ್ ಅನ್ನು ಅಮಿತ್ ಶಾ ಅವರ ಮಾತು ಕೇಳಿ ನಿಲ್ಲಿಸಿದ್ದೆ. ಈಗ ಸಾಧು ಸಂತರ ಜೊತೆ ಸೇರಿಕೊಂಡು ಕ್ರಾಂತಿವೀರ ಬ್ರಿಗೇಡ್ ಶುರು ಮಾಡಿದ್ದೇವೆ. ಈಬಾರಿ ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ. ಯಾರು ಬೆಂಬಲಿಸಿದರೂ ಸ್ವಾಗತ ಮಾಡ್ತೇವೆ. ಹಿಂದೂ ಸಮಾಜದಲ್ಲಿರುವ ಎಲ್ಲ ಸಕಲ ಸಮಾಜದವರಿಗೆ ಈ ಬ್ರಿಗೇಡ್ ಬೆಂಬಲ ಕೊಡುತ್ತದೆ. ಹಿಂದೆ ರಾಯಣ್ಣ ಬ್ರಿಗೇಡ್ ಕಟ್ಟಿದ್ದಾಗ ಯಾವುದೇ ಸ್ವಾಮೀಜಿಗಳು ನೇತೃತ್ವ ತೆಗೆದುಕೊಂಡಿರಲಿಲ್ಲ. ದೊಡ್ಡವರ ಮಾತು ಕೇಳುವ ಅಭ್ಯಾಸ ಆಗ ನನಗೆ ಇತ್ತು, ಆದರೆ ಇವತ್ತು ಇಲ್ಲ. ಅಂದು ದೊಡ್ಡವರ ಮಾತು ಕೇಳಿ ನಿಲ್ಲಿಸಿದೆ. ಇಂದು ಯಾವುದೇ ಕಾರಣಕ್ಕೂ ಈ ಬ್ರಿಗೇಡ್ ನಿಲ್ಲುವುದಿಲ್ಲ. ಇದು ಯಾವುದೇ ಪಕ್ಷದ ಬ್ರಿಗೇಡ್ ಆಗಿಲ್ಲ.ಬಿಜೆಪಿಯಲ್ಲಿನ ಅಸಮಾಧಾನಿತರು, ಸಮಾಧಾನಿತರು ನಮ್ಮ ಜೊತೆ ಎನ್ನುವ ಪ್ರಶ್ನೆ ಇಲ್ಲ. ಫೆ.4 ರಂದು ಎಲ್ಲವೂ ವೇದಿಕೆ ಮೇಲೆ ಗೊತ್ತಾಗುತ್ತದೆ ಎಂದು ಹೇಳಿದರು.

    ನಾನು ಲೋಕಸಭಾ ಚುನಾವಣೆಗೆ ನಿಲ್ಲುವ ವೇಳೆ ಯಾವ ಕಾರಣಕ್ಕೆ ನಿಲ್ಲುತ್ತಿದ್ದೇನೆ ಎಂದು ಹೇಳಿದ್ದೆ. ನಾನು ಯಾವ ವಿಚಾರ ಹೇಳಿದ್ದೇನೋ ಅದೇ ವಿಚಾರ ದೇವರ ದಯದಿಂದ ಇಂದು ಬಿಜೆಪಿಯಲ್ಲಿ ಚರ್ಚೆ ಆಗುತ್ತದೆ. ಇದು ತಾತ್ಕಾಲಿಕ ಗೊಂದಲ, ಬಗೆಹರಿಯುತ್ತದೆ. ನನ್ನ ಬಿಜೆಪಿ ಹೈಕಮಾಂಡ್ ಸೇರಿಸಲು ಯೋಚನೆ ಮಾಡಿದರೆ ಹೋಗಬೇಕಾ ಎಂದು ನಾನೂ ಯೋಚನೆ ಮಾಡಬೇಕು. ನಾನು ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರಲ್ಲ, ಬಿಜೆಪಿ ನನ್ನ ತಾಯಿ. ಬ್ರಿಗೇಡ್ ಬಿಡಿ ಎಂದು ಮೋದಿ ಯಾವುದೇ ಕಾರಣಕ್ಕೂ ಹೇಳಲ್ಲ. ಬಿಜೆಪಿಯಲ್ಲಿ ಹಿಂದುತ್ವ ಸಿದ್ಧಾಂತ ದೂರ ಹೋಗಿದೆ, ಹೊಂದಾಣಿಕೆ ರಾಜಕೀಯ ಹೆಚ್ಚಾಗಿದೆ. ಹೊಂದಾಣಿಕೆ ರಾಜಕೀಯ ಶುದ್ದೀಕರಣ ಆಗಲಿ ಎಂಬ ಆಸೆ ನನ್ನದು, ಅನೇಕ ಮುಖಂಡರ ಆಸೆಯೂ ಅದೇ ಆಗಿದೆ. ಬಿಜೆಪಿ ಶುದ್ದೀಕರಣ ಆಗುತ್ತದೆ, ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ವೈಯಕ್ತಿಕ ದ್ವೇಷ ಇಲ್ಲ. ಆದರೆ ಬಿಜೆಪಿಯೊಳಗಿನ ವ್ಯವಸ್ಥೆ ಸರಿಯಿಲ್ಲ, ಅದು ಬದಲಾಗಬೇಕು. ಶಿಕಾರಿಪುರದಲ್ಲಿ ನಮ್ಮ ಭಿಕ್ಷೆ ಎಂದು ಡಿಕೆಶಿ ಹೇಳಿದ್ದರು. ನಾನು ವರುಣಾದಲ್ಲಿ ನಿಂತಿದ್ದರೆ ಸಿದ್ದರಾಮಯ್ಯ ಕಥೆ ಏನಾಗುತ್ತಿತ್ತು ಎಂದು ವಿಜಯೇಂದ್ರ ಹೇಳಿದ್ದಾರೆ. ಅಂದರೆ ನಾನೇ ಗೆಲ್ಲಿಸಿದೆ ಅಂತಾ ತಾನೇ ಅರ್ಥ? ಇದು ಹೊಂದಾಣಿಕೆ ರಾಜಕೀಯ ಅಲ್ಲದೇ ಇನ್ನೇನು? ರಾಜಕೀಯ ಬೆತ್ತಲೆ ಇದು ಎಂದರು.ಇದನ್ನೂ ಓದಿ: ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ, ಗುತ್ತಿಗೆದಾರರ ಬಾಕಿ ಪಾವತಿಸಿ – ಸಿಎಂಗೆ ಹೆಚ್‌ಡಿಕೆ ತಿರುಗೇಟು

  • ಫೆ.4ರಂದು ಬಸವನ ಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ: ಈಶ್ವರಪ್ಪ

    ಫೆ.4ರಂದು ಬಸವನ ಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ: ಈಶ್ವರಪ್ಪ

    ವಿಜಯಪುರ: ಫೆಬ್ರವರಿ 4 ರಂದು ವಿಜಯಪುರ (Vijayapura) ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ (Basavana Bagewadi) ಕ್ರಾಂತಿವೀರ ಬ್ರಿಗೇಡ್ (Krantiveera Brigade) ಉದ್ಘಾಟನೆ ನಡೆಯಲಿದೆ. 1,008 ಸಾದು ಸಂತರ ಪಾದ ಪೂಜೆ ಮೂಲಕ ಬ್ರಿಗೇಡ್ ಉದ್ಘಾಟನೆ ನಡೆಯಲಿದೆ ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ (KS Eshwarappa) ಹೇಳಿದ್ದಾರೆ.

    ಈ ಕುರಿತು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 1 ಲಕ್ಷ ಜನ ಸೇರಿಸಿ ಕಾರ್ಯಕ್ರಮ ಮಾಡುತ್ತೇವೆ. ಇದಕ್ಕಾಗಿ ಜನವರಿ 12ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪ್ರವಾಸ ಮಾಡಿ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ. ಬ್ರಿಗೇಡ್ ಅನ್ನು ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ತಿಂಥಣಿ ಶಾಖಾ ಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಉದ್ಘಾಟನೆ ಮಾಡುತ್ತಾರೆ. ರಾಜ್ಯದ ವಿವಿಧ ಭಾಗಗಳಿಂದ ಒಂದು ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದರು. ಇದನ್ನೂ ಓದಿ: ಚಿತ್ರಸಂತೆಗೆ ಚಾಲನೆ – ಮನೆಗೊಂದು ಕಲಾಕೃತಿ ಇರಬೇಕು: ಸಿಎಂ

    ಹಿಂದೂ ಸಮಾಜದ ಪರವಾಗಿ ಬ್ರಿಗೇಡ್ ಹೋರಾಟ ಮಾಡಲಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳ ಪರ ಬ್ರಿಗೇಡ್ ಕೆಲಸ ಮಾಡಲಿದೆ. ನನ್ನ ಜೀವನದಲ್ಲಿ ನಾನು ರಾಜಕಾರಣದ ಜೊತೆ ಜೊತೆಗೆ ಸಾಧು ಸಂತರ ಸೇವೆ ಮಾಡಿದ್ದೇನೆ. ಬ್ರಿಗೇಡ್ ಸ್ಥಾಪನೆ ಮಾಡೋದಕ್ಕೆ ಮುಖ್ಯ ಉದ್ದೇಶ ಹಿಂದುಳಿದ ಮಠಗಳ ಅಭಿವೃದ್ಧಿ. ಹಿಂದೂಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನಮ್ಮ ಹೋರಾಟ ಇರಲಿದೆ ಎಂದು ಹೇಳಿದರು. ಇದನ್ನೂ ಓದಿ: ಸಚಿನ್ ಆತ್ಮಹತ್ಯೆ ಕೇಸ್ – ಬೀದರ್‌ನಲ್ಲಿ ಬಹುತೇಕ ತನಿಖೆ ಮುಕ್ತಾಯ, ಕಲಬುರಗಿಗೆ ತೆರಳಿದ ಸಿಐಡಿ ಟೀಂ

    ರಾಜಕಾರಣದ ಜೊತೆಗೆ ಧಾರ್ಮಿಕ ಕಾರ್ಯದಲ್ಲೂ ನಾನು ಭಾಗಿಯಾಗುತ್ತಿದ್ದೇನೆ. ಈ ಹಿಂದೆ ಮಠ, ಮಂದಿರಗಳಿಗೆ ಹಣ ನೀಡುವಂತೆ ಮಾಡಿದ್ದು ನಾನೇ. ಹೀಗಾಗಿ ನಾನು ಧಾರ್ಮಿಕ ಕೆಲಸ ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: Photo Gallery: ಬೆಂಗಳೂರಲ್ಲಿ ಚಿತ್ರಸಂತೆ – ಕಲಾಸಕ್ತರನ್ನು ಕೈಬೀಸಿ ಕರೆಯುತ್ತಿವೆ ಕಲಾಕೃತಿಗಳು..

    ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿ ನನ್ನ ವಿರುದ್ಧ ಆರೋಪ ಬಂದಾಗ ನಾನು ರಾಜೀನಾಮೆ ನೀಡಿದ್ದೇನೆ.ನಾನು ಆರ್‌ಎಸ್‌ಎಸ್‌ನಿಂದ ಬೆಳೆದು ಬಂದವನು. ಆರೋಪ ಬಂದ ತಕ್ಷಣವೇ ರಾಜೀನಾಮೆ ನೀಡಿದ್ದೇನೆ. ಕೆಲವರು ನನ್ನ ವಿರುದ್ಧ ರಾಜಕೀಯ ಮಾಡಿದರು. ಅವರು ಈಗ ಅನುಭವಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯಾವುದೇ ಮಂತ್ರಿ, ಶಾಸಕರ ಮಕ್ಕಳು ಬಸ್‌ನಲ್ಲಿ ಓಡಾಡಲ್ಲ: ಟಿಕೆಟ್ ದರ ಏರಿಕೆಗೆ ಹೆಚ್‌ಡಿಕೆ ಕಿಡಿ

    ನನ್ನ ವಿರುದ್ಧ ಕೆಲವರು ಕೆಲಸ ಮಾಡಿದ್ದರು, ಅವರಿಗೆ ದೇವರೇ ಉತ್ತರ ನೀಡುತ್ತಿದ್ದಾನೆ. ಮುಂದಿನ ದಿನಗಳಲ್ಲಿ ಅವರಿಗೆ ದೇವರು ಒಳ್ಳೆದು ಮಾಡುತ್ತಾರೆ. ಇನ್ನು ನನ್ನ ವಿರುದ್ಧ ಕೆಲಸ ಮಾಡಿದವರು ಯಾರು, ಯಾವ ಪಕ್ಷದವರು ಅನ್ನೋದನ್ನ ಸಮಯ ಬಂದಾಗ ಗೊತ್ತಾಗುತ್ತೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಗುಜರಾತ್‌ನ ಪೋರಬಂದರ್‌ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, 3 ಸಾವು

  • ಸಿಎಂ ಸಿದ್ದರಾಮಯ್ಯ ಉತ್ತರ ಕುಮಾರ ಇದ್ದಂತೆ: ಈಶ್ವರಪ್ಪ ಲೇವಡಿ

    ಸಿಎಂ ಸಿದ್ದರಾಮಯ್ಯ ಉತ್ತರ ಕುಮಾರ ಇದ್ದಂತೆ: ಈಶ್ವರಪ್ಪ ಲೇವಡಿ

    ವಿಜಯಪುರ: ಒಂದರ್ಥದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಉತ್ತರ ಕುಮಾರನ ತರಹ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ಲೇವಡಿ ಮಾಡಿದರು.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ (Caste Census) ವಿಚಾರವಾಗಿ ಒಂದರ್ಥದಲ್ಲಿ ಸಿಎಂ ಸಿದ್ದರಾಮಯ್ಯ ಉತ್ತರ ಕುಮಾರನ ತರಹ. ಜಾತಿಗಣತಿ ವರದಿಯನ್ನು ಸಚಿವ ಸಂಪುಟದ ಎದುರು ಇಟ್ಟೇ ಇಡುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ಈವರೆಗೂ ಇಟ್ಟಿಲ್ಲ. ಇದೀಗ ಹೊಸ ದಿನಾಂಕ ಸಹ ಪ್ರಕಟಿಸಿದ್ದು, ಅದನ್ನೂ ಕಾಯ್ದು ನೋಡೋಣ. ಈಗಾಗಲೇ ಜಾತಿಗಣತಿ ಮಾಡಲು ನೂರಾರು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಕೂಡಲೇ ಅದನ್ನು ಸಚಿವ ಸಂಪುಟದ ಮುಂದೆ ತನ್ನಿ, ಚರ್ಚೆ ಮಾಡಿ ಬಳಿಕ ಬಿಡುಗಡೆ ಮಾಡಿ ಎಂದರು.ಇದನ್ನೂ ಓದಿ: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಭೀಕರ ಕೊಲೆ

    ರಾಜ್ಯದಲ್ಲಿ ಮಳೆ ಬಂದು ರೈತರು ಸಂಕಷ್ಟದಲ್ಲಿದ್ದಾರೆ. ಯಾವೊಬ್ಬ ಮಂತ್ರಿಯೂ ಸ್ಥಳಕ್ಕೆ ಭೇಟಿ ನೀಡಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತಿದ್ದು, ಕಾಂಗ್ರೆಸ್ (Congress) ಅಧಿಕಾರದಲ್ಲಿದೆ ಎಂಬುವುದನ್ನು ಮರೆತಂತಿದೆ. ಹಿಂದುಳಿದವರ, ದಲಿತರ ಅಭಿವೃದ್ಧಿ ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದನ್ನು ಮರೆತಿದ್ದಾರೆ. ಈ ಹಿಂದೆ ಬಿಜೆಪಿ (BJP) ಸರ್ಕಾರ ಹಿಂದುಳಿದ ವರ್ಗದ ಇಲಾಖೆಯಿಂದ 1,073 ಯೋಜನೆಗಳನ್ನು ಜಾರಿಗೊಳಿಸಿತ್ತು. ಆ ಯೋಜನೆಗಳನ್ನೆಲ್ಲ ರದ್ದು ಮಾಡಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವಂತೂ ಬಹಿರಂಗವಾಗಿದೆ. ಅಲ್ಲಿನ ಹಣ ನುಂಗಿ ನೀರು ಕುಡಿದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ವಿಪಕ್ಷದವರ ಮೇಲೆ ಕೇಸ್ ವಿಚಾರ:
    ಹಲವಾರು ಹಗರಣ ಮಾಡಿರುವ ಸಿದ್ದರಾಮಯ್ಯವರೇ ಅದಕ್ಕೆ ಪ್ರತಿಯಾಗಿ ವಿರೋಧಿಗಳ ಮೇಲೆ ಕೇಸ್ ಮಾಡುವ ನಿಟ್ಟಿನಲ್ಲಿ ತಲ್ಲೀನರಾಗಿದ್ದಾರೆ. ಅದನ್ನು ಬಿಟ್ಟು ರೈತರು, ಸಾಮಾನ್ಯ ಜನರು, ಹಿಂದುಳಿದ, ದಲಿತರ ಬಗ್ಗೆ ಕಾಳಜಿ ವಹಿಸಬೇಕು. ಏನಾದರೂ ಹೇಳಲು ಹೊರಟರೇ ನಾನು ದೇವರಾಜು ಅರಸು ತರಹ ಎಂದು ಹೇಳುತ್ತಾರೆ. ಹೀಗೆ ಹೇಳುವವರು ಆ ನಿಟ್ಟಿನಲ್ಲಿ ನಡೆದುಕೊಳ್ಳಬೇಕು. ಮಳೆ ಬಂದು ಬೆಳೆ ಹಾಳಾಗಿದೆ. ತಾತ್ಕಾಲಿಕವಾಗಿ ಯಾರಾದರೂ ರೈತರಿಗೆ ಪರಿಹಾರ ಕೊಡಿ. ರಸ್ತೆ, ಚರಂಡಿಗಳನ್ನು ತ್ವರಿತವಾಗಿ ರಿಪೇರಿಗೊಳಿಸಿ ಎಂದು ಕಿಡಿಕಾರಿದರು.

    ಹೊಸ ಬ್ರಿಗೇಡ್ ಸ್ಥಾಪನೆ ವಿಚಾರ:
    ಈ ಹಿಂದೆ ಕೂಡಲ ಸಂಗಮ ಸ್ವಾಮೀಜಿಯವರು ಹಿಂದುತ್ವದ ರಕ್ಷಣೆಗಾಗಿ ಬ್ರಿಗೇಡ್ ಸ್ಥಾಪಿಸಿ ಎಂದು ಹೇಳಿದ್ದರು. ಅದಕ್ಕಾಗಿ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಹಾಗೂ ಈಶ್ವರಪ್ಪ ಕೈಗೆ ಖಡ್ಗ ಕೊಟ್ಟಿರುವುದಾಗಿ ಹೇಳಿದ್ದರು. ಆ ನಿಟ್ಟಿನಲ್ಲಿ ನೂರಾರು ಸಂತರು ಸೇರಿ ಪ್ರೋತ್ಸಾಹ ನೀಡಿದ ಫಲವಾಗಿ ಇದೀಗ ಸಭೆ ಕರೆಯಲಾಗಿದೆ. ರಾಜ್ಯದ ಎರಡು ಸಾವಿರಕ್ಕೂ ಅಧಿಕ ಪ್ರಮುಖರು ಬಾಗಲಕೋಟೆಯಲ್ಲಿ ಸಭೆ ಸೇರುತ್ತಿದ್ದಾರೆ. ಸಭೆ ಸೇರಿ ಬ್ರಿಗೇಡ್‌ಗೆ ಯಾವ ಹೆಸರಿಡುವುದು ಎಂಬ ತೀರ್ಮಾನ ಕೈಗೊಳ್ಳುತ್ತಾರೆ. ಸಭೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ್ ಸಹ ಪಾಲ್ಗೊಳ್ಳಲಿದ್ದಾರೆ. ಯತ್ನಾಳ್ ಅವರೇ ಇಂಥದ್ದೊಂದು ವಿಚಾರ ಪ್ರಸ್ತಾಪಿಸುತ್ತಾರೆ ಎಂದು ನನಗೆ ಕಲ್ಪನೆ ಇರಲಿಲ್ಲ. ಸಾಧು ಸಂತರೇ ಇದರ ನೇತೃತ್ವ ವಹಿಸಲಿದ್ದು, ಅವರ ಅಪೇಕ್ಷೆ ಮೇರೆಗೆ ಬ್ರಿಗೇಡ್ ನಡೆಯುತ್ತಿದೆ ಎಂದರು.

    ಓಪನ್ ಆಗಿ ತಲ್ವಾರ, ಪೆಟ್ರೋಲ್ ಬಾಂಬ್ ತಂದು ಹಿಂದೂಗಳ ಅಂಗಡಿ ಮುಂಗಟ್ಟು ಮೇಲೆ ದಾಳಿ ನಡೆಸುತ್ತಿದ್ದಾರೆ. ಗಣಪತಿ ವಿಚಾರದಲ್ಲಿ ಗಲಭೆಯಾದರೆ ಸರ್ಕಾರ ಹಿಂದೂಗಳ ಮೇಲೆಯೇ ಪ್ರಕರಣ ದಾಖಲಿಸುತ್ತದೆ. ಹೀಗಾಗಿ ಸಮಸ್ತ ಹಿಂದೂ ಸಮಾಜದ ರಕ್ಷಣೆಗೆ ಬ್ರಿಗೇಡ್ ಸಿದ್ಧವಾಗುತ್ತಿದೆ. ಬಿಜೆಪಿ ಶುದ್ಧೀಕರಣ ಆಗಬೇಕೆಂಬುದು ಬಹಳಷ್ಟು ಜನರ ಮನದಿಂಗಿತವಾಗಿದೆ. ರಾಜ್ಯದಿಂದ ದೆಹಲಿ ಮಟ್ಟದವರೆಗೆ ಈ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿಸಿದರು.

    ಸರ್ಕಾರವು ತಮಗೆ ಬೇಕಾದ ಹಿರಿಯರನ್ನು ಇಟ್ಟುಕೊಂಡು ಬೇಡವಾದ ಹಿರಿಯರನ್ನು ಹೊರ ಹಾಕುತ್ತಿದ್ದಾರೆ. ಇಲ್ಲಿ ಸ್ವಜನ ಪಕ್ಷಪಾತ ನಡೆದಿದೆ. ನಾವು ಅಪೇಕ್ಷೆಪಟ್ಟಂತೆ ರಾಜ್ಯದಲ್ಲಿ ಹಿಂದುತ್ವ ಇಲ್ಲ. ಇದರಿಂದ ಸಾಕಷ್ಟು ಜನರಿಗೆ ನೋವಿದೆ. ನಾನು ಹಿಂದುತ್ವದಿಂದಲೇ ಮೇಲೆ ಬಂದಿದ್ದೇನೆ. ಹೀಗಾಗಿ ಬ್ರಿಗೇಡ್ ಮಾಡಿ ಆ ಮೂಲಕ ಹಿಂದುತ್ವದ ಋಣ ತೀರಿಸಲು ಮುಂದಾಗಿದ್ದೇನೆ. ಹಿಂದುತ್ವ ರಕ್ಷಣೆಗೆ ಸಿದ್ದರಾಮಯ್ಯ ನಿಲ್ಲಲಿ. ಯಾವ ವ್ಯಕ್ತಿ ಕುಂಕುಮ, ಕೇಸರಿ ಕಂಡರೆ ಮೈಮೇಲೆ ಭೂತ ಬಂದವರಂತೆ ಆಡುತ್ತಾರೆ ಅವರೆ ರಕ್ಷಣೆಗೆ ನಿಲ್ಲಲಿ. ಹಗರಣ ಮೈಮೇಲೆ ಬರುತ್ತಿದ್ದಂತೆ ಸೌದತ್ತಿ ಯಲ್ಲಮ್ಮಗೂ ಹೋಗುತ್ತಾರೆ, ಚಾಮುಂಡಿಗೂ ಹೋಗುತ್ತಾರೆ. ಎದೆಯಲ್ಲಿ ಇಷ್ಟಾದರೂ ಹಿಂದುತ್ವ ಇದೆ ಎಂಬುದಕ್ಕೆ ನಿಮಗೆ ಧನ್ಯವಾದ ತಿಳಿಸುತ್ತೇನೆ. ಹಿಂದುತ್ವ ಉಳಿಸಿದರೆ ಚಾಮುಂಡಿ ನಿಮ್ಮನ್ನು ಉಳಿಸುತ್ತಾಳೆ. ಇದು ನಾಟಕೀಯವಾಗಿದ್ದರೆ ಯಲ್ಲಮ್ಮ, ಚಾಮುಂಡಿಯೇ ಶಿಕ್ಷೆ ಕೊಡಿಸುತ್ತಾರೆ ಎಂದು ಹೇಳಿದರು.

    ಜೋಶಿ ಕುಟುಂಬದ ಮೇಲಿನ ಆಪಾದನೆ ವಿಚಾರ:
    ಪ್ರಹ್ಲಾದ್ ಜೋಶಿ ಅವರ ಕುಟುಂಬಸ್ಥರ ಮೇಲೆ ಆಪಾದನೆ ಬಂದಿರುವುದು ದುರ್ದೈವ. ತಕ್ಷಣ ತನಿಖೆ ಆಗಬೇಕು. ತಲೆ ಮರೆಸಿಕೊಳ್ಳುವ ಬದಲು ಸ್ಪಷ್ಟನೆ ಕೊಡಬಹುದಿತ್ತು. ಆದರೆ ಯಾಕೆ ತಲೆ ಮರೆಸಿಕೊಂಡರು ಗೊತ್ತಿಲ್ಲ. ಬೇಲಿನೆ ಎದ್ದು ಹೊಲ ಮೇಯ್ದಂತೆ ಆಗಬಾರದು. ಹಿಂದುತ್ವದ ಹೆಸರು ಹೇಳಿಕೊಂಡು ಮಾಡಬಾರದ್ದನ್ನು ಮಾಡುವವರ ಬಗ್ಗೆ ಸಮಾಜ ಎಚ್ಚರ ವಹಿಸಬೇಕೆಂದು ಮನವಿ ಮಾಡಿದರು.ಇದನ್ನೂ ಓದಿ: 700 ಶಾರ್ಪ್‌ ಶೂಟರ್ಸ್‌.. ಸ್ಟಾರ್‌ ನಟ, ಜನಪ್ರಿಯ ವ್ಯಕ್ತಿಗಳೇ ಟಾರ್ಗೆಟ್‌ – ಮುಂಬೈ ಭೂಗತ ಜಗತ್ತಿಗೆ ಬಿಷ್ಣೋಯ್‌ ಗ್ಯಾಂಗ್‌ ಎಂಟ್ರಿ?

  • ಅ.20ಕ್ಕೆ ಬಾಗಲಕೋಟೆಯಲ್ಲಿ ರಾಯಣ್ಣ ಚನ್ನಮ್ಮ ಬ್ರಿಗೇಡ್ ಸಭೆ: ಕೆಎಸ್ ಈಶ್ವರಪ್ಪ

    ಅ.20ಕ್ಕೆ ಬಾಗಲಕೋಟೆಯಲ್ಲಿ ರಾಯಣ್ಣ ಚನ್ನಮ್ಮ ಬ್ರಿಗೇಡ್ ಸಭೆ: ಕೆಎಸ್ ಈಶ್ವರಪ್ಪ

    ಶಿವಮೊಗ್ಗ: ಹಿಂದೂ ಧರ್ಮದ ಎಲ್ಲಾ ಸಮುದಾಯದ ಬಡವರ ಏಳಿಗೆಗಾಗಿ ರಾಯಣ್ಣ ಚನ್ನಮ್ಮ ಬ್ರಿಗೇಡ್ (Rayanna Channamma Brigade) ಆರಂಭಿಸುತ್ತಿದ್ದು, ಅ.20 ರಂದು ಬಾಗಲಕೋಟೆಯ (Bgalkote) ಚರಂತಿಮಠ ಸಭಾಂಗಣದಲ್ಲಿ ಚಿಂತನ ಮಂಥನ ಸಭೆ ಆಯೋಜಿಸಲಾಗಿದೆ ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ (KS Eshwarappa) ತಿಳಿಸಿದರು.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಹಿಂದೆ ರಾಯಣ್ಣ ಬ್ರಿಗೇಡ್ ಸ್ಥಾಪನೆ ಮಾಡಿದ್ದೆ. ಆಗ ಈ ಬ್ರಿಗೇಡ್ ನಿಲ್ಲಿಸುವಂತೆ ಯಡಿಯೂರಪ್ಪ ಅವರು ತಿಳಿಸಿದ್ದರು. ಹೀಗಾಗಿ ಬ್ರಿಗೇಡ್ ಸ್ಥಗಿತಗೊಳಿಸಿದ್ದೆ. ಆದರೆ ಈ ಬಾರಿ ಅಂತಹ ತಪ್ಪು ಮಾಡುವುದಿಲ್ಲ ಎಂದರು. ಇದನ್ನೂ ಓದಿ: ಇಸ್ರೇಲ್‌ ಜೊತೆ ಮೋದಿಗೆ ಉತ್ತಮ ಸಂಬಂಧವಿದೆ – ಕಾಂಗ್ರೆಸ್‌ನಿಂದ ಇವಿಎಂ-ಪೇಜರ್‌ ಅನುಮಾನ

    ಬಾಗಲಕೋಟೆಯಲ್ಲಿ ನಡೆಯುವ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ 25 ಮಂದಿ ಸಾಧು ಸಂತರು ಭಾಗವಹಿಸಲಿದ್ದು, ಸುಮಾರು ಎರಡೂವರೆ ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಾವೇರಿ| ಡಿವೈಡರ್‌ಗೆ ಡಿಕ್ಕಿ ಹೊಡೆದು ಆಟೋ ಮೇಲೆ ಬಿದ್ದ ಕಾರು – ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ

  • ಯಾವತ್ತಿದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡೇ ನೀಡುತ್ತಾರೆ – ಈಶ್ವರಪ್ಪ

    ಯಾವತ್ತಿದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡೇ ನೀಡುತ್ತಾರೆ – ಈಶ್ವರಪ್ಪ

    ಗದಗ: ಯಾವತ್ತಿದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡೇ ನೀಡುತ್ತಾರೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ (KS Eshwarappa) ಹೇಳಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲು ಕಾಂಗ್ರೆಸ್ ಪರಿಸ್ಥಿತಿ ನೋಡಿ ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ಕೊಡುವುದು ನಂತರ ಎಂದು ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್, ದೇಶಪಾಂಡೆ, ರಾಯರಡ್ಡಿ, ಎಲ್ಲರೂ ಹೇಳಿದ್ದರು. ನಾವೆಲ್ಲರೂ ಬಂಡೆಯ ಹಾಗೇ ಸಿಎಂ ಜೊತೆಗೆ ಇರುತ್ತೇವೆ ಎಂದಿದ್ದರು. 5 ವರ್ಷ ಅವರೇ ಮುಖ್ಯಮಂತ್ರಿ ಅಂದರೂ ಅದು ಕೃತಕತೆ, ನಾಟಿಕೀಯ ಹೇಳಿಕೆಯಾಗುತ್ತದೆ. ಯಾವತ್ತಿದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡೇ ನೀಡುತ್ತಾರೆ. ಹೀಗಾಗಿ ಬೇರೆ ಬೇರೆ ಸಭೆಗಳನ್ನು ನಡೆಸುತ್ತಿದ್ದಾರೆ ಎಂದರು.ಇದನ್ನೂ ಓದಿ: 70th National Film Awards: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

    ಒಂದು ಕಡೆ ದಲಿತ ಮುಖ್ಯಮಂತ್ರಿ ಎಂದು ಚರ್ಚೆ ನಡೆಯುತ್ತಿದೆ. ಮುಂಚೆ ಯಾಕೆ ದಲಿತ ಮುಖ್ಯಮಂತ್ರಿಯನ್ನು ಮಾಡಲಿಲ್ಲ? ಕಾಂಗ್ರೆಸ್‌ಗೆ ಬಹುಮತ ಹೊಸದಾಗಿ ಬಂದಿದೀಯಾ? ಆವಾಗ ಯಾಕೆ ದಲಿತರು ನೆನಪಾಗಲಿಲ್ಲ? ಕಾಂಗ್ರೆಸ್‌ನ ಭ್ರಷ್ಟಾಚಾರಗಳ ಬಗ್ಗೆ ತುಂಬಾ ಸ್ಪಷ್ಟವಾಗಿ ಕೋರ್ಟ್ನಲ್ಲಿ ಆದೇಶವಾಗಿದೆ. ನಾನು ಸಿಎಂ ಅವರಿಗೆ ಪ್ರಾರ್ಥನೆ ಮಾಡುತ್ತೇನೆ. ನೀವು ರಾಜೀನಾಮೆ ಕೊಟ್ಟು ತನಿಖೆಯಲ್ಲಿ ಕ್ಲೀನ್‌ಚೀಟ್ ತೆಗೆದುಕೊಂಡು ಬನ್ನಿ. ಬಂದು ಮತ್ತೆ ಸಿಎಂ ಆಗಿ ಏನು ಅಭ್ಯಂತರವಿಲ್ಲ. ಸಿಎಂ ರಾಜೀನಾಮೆ ಕೊಡದೇ ಕೋರ್ಟಿಗೆ ಅಪಮಾನವಾಗಿದೆ. ಕೇವಲ ಕೋರ್ಟಿಗೆ ಅಲ್ಲ. ಇದು ಸಂವಿಧಾನಕ್ಕೆ ಮಾಡಿರುವ ಅಪಮಾನವಾಗಿದೆ ಎಂದರು.

    ಇದೇ ವೇಳೆ ಬಿಜೆಪಿ ವಿಚಾರವಾಗಿ ಮಾತನಾಡಿ, ಈಗ ಹಿಂದುತ್ವ ಬಿಟ್ಟು, ಬಿಜೆಪಿಯಲ್ಲಿ (BJP) ಸ್ವಜನ ಪಕ್ಷಪಾತ ನಡೆಯುತ್ತಿದೆ. ಇದಕ್ಕೆ ಸರಿಯಾಗಿ ಬ್ರೇಕ್ ಹಾಕಬೇಕು. ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತವಾಗಬೇಕು. ವಿಜಯೇಂದ್ರ ಕಾಂಗ್ರೆಸ್ ಪಕ್ಷದ ಭಿಕ್ಷೆಯಿಂದ ಶಾಸಕರಾಗಿದ್ದೀರಿ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಈವರೆಗೂ ಉತ್ತರ ನೀಡಿಲ್ಲ. ಏನು ಹೊಂದಾಣಿಕೆಯಾಗಿತ್ತು ಎನ್ನುವುದನ್ನು ಡಿಕೆಶಿ ಬಹಿರಂಗ ಮಾಡಲಿ. ಈ ಹೊಂದಾಣಿಕೆ ರಾಜಕಾರಣ ಮುಕ್ತಾಯವಾಗಬೇಕು. ಒಂದು ಕುಟುಂಬದ ಕೈಗೆ ಬಿಜೆಪಿ ಸಿಕ್ಕಿಬಿದ್ದಿರುವುದರಿಂದ ಪಕ್ಷದಲ್ಲಿ ಶಾಸಕರ ಸಂಖ್ಯೆ ಕಡಿಮೆಯಾಗುತ್ತಿವೆ. ಈ ಕುರಿತು ಬಿಜೆಪಿ ಪಕ್ಷದಲ್ಲಿ ಚರ್ಚೆಯಾಗಬೇಕು ಎಂದು ಬಿಎಸ್‌ವೈ ಕುಟುಂಬದ ವಿರುದ್ಧ ಹರಿಹಾಯ್ದರು.

    ಇದೇ ತಿಂಗಳು 20ರಂದು ಬೃಹತ್ ಸಮಾವೇಶ ಪ್ಲ್ಯಾನ್‌ ಮಾಡಲಾಗಿದೆ ಎಂದರು. ಸಂಘಟನೆ ಮಾಡಲು ಸಾಕಷ್ಟು ಫೋನ್ ಕಾಲ್ ಬರುತ್ತಿವೆ. ಸಾಧು, ಸಂತರ ಮಾರ್ಗದರ್ಶನದಲ್ಲಿ ಯಾವ ಹೆಸರು ಇಡಬೇಕು. ಯಾವ ರೂಪದಲ್ಲಿ ಸಂಘಟನೆ ತೆಗೆದುಕೊಂಡು ಹೋಗಬೇಕು ಎನ್ನುವದು ಗೊತ್ತಾಗುತ್ತದೆ. ಬಸವನಗೌಡ ಪಾಟೀಲ್ ಯತ್ನಾಳ್ ಕೂಡಾ ಬರುತ್ತಾರೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಕೂಡಾ ಸಾಥ್ ನೀಡುತ್ತಾರೆ. ಇದು ಈಶ್ವರಪ್ಪ ಹಾಗೂ ಯತ್ನಾಳ್ ನೇತೃತ್ವ ಅಲ್ಲ. ಇದು ಸಾಧು, ಸಂತರ ನೇತೃತ್ವದಲ್ಲಿ ನಡೆಯುತ್ತದೆ ಎಂದರು.ಇದನ್ನೂ ಓದಿ: ಜಾತಿಗಣತಿ ವರದಿ ಅನುಷ್ಠಾನ ಮಾಡ್ತೀವಿ- ಎಕ್ಸ್‌ನಲ್ಲಿ ಸಿಎಂ ಪುನರುಚ್ಚಾರ

  • ಯಡಿಯೂರಪ್ಪ, ಅವರ ಮಕ್ಕಳು ಬಿಜೆಪಿಗೆ ದ್ರೋಹ ಮಾಡಿದ್ರು: ಈಶ್ವರಪ್ಪ ಗುಡುಗು

    ಯಡಿಯೂರಪ್ಪ, ಅವರ ಮಕ್ಕಳು ಬಿಜೆಪಿಗೆ ದ್ರೋಹ ಮಾಡಿದ್ರು: ಈಶ್ವರಪ್ಪ ಗುಡುಗು

    – ತವರು ಮನೆಗೆ ಹೋಗದೇ ಇರುವ ಯಾವ ಹೆಣ್ಣು ಇಲ್ಲ – ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ ಮಾಜಿ ಡಿಸಿಎಂ

    ಹುಬ್ಬಳ್ಳಿ: ಮಾಜಿ ಸಿಎಂ ಯಡಿಯೂರಪ್ಪ (B S Yediyurappa) ಮತ್ತು ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (B Y Vijayendra) ವಿರುದ್ಧ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (K S Eshwarappa) ಮತ್ತೆ ಗುಡುಗಿದ್ದು, ಪರೋಕ್ಷವಾಗಿ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ತವರು ಮನೆಗೆ ಹೋಗದೆ ಇರುವ ಯಾವ ಹೆಣ್ಣು ಇಲ್ಲ. ಆದರೆ, ತವರು ಮನೆ ಸ್ವಲ್ಪ ಕೆಟ್ಟಿದೆ. ಇದು ಸರಿಯಾಗಬೇಕು. ಅಣ್ಣ ತಮ್ಮ ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ಇದು ತಂದೆ ತಾಯಿಗೆ ಗೊತ್ತಾಗಬೇಕು. ತವರು ಮನೆಗೆ ಹೋಗಬೇಕು ಅನ್ನೋದು ಹೆಣ್ಣಿನ ಅಪೇಕ್ಷೆ. ಮದುವೆ ಮುಂಜಿಗೆ ಅಣ್ಣ ಕರೆದಿಲ್ಲಾ ಅಂತ ಸಿಟ್ಟು ಇರುತ್ತದೆ. ಯಾವ ಸಂದರ್ಭದಲ್ಲಿಯೂ ಕೊಟ್ಟ ಹೆಣ್ಣು ಕುಲಕ್ಕೆ ಹೊರಗಲ್ಲಾ. ಮನೆಯ ಗೃಹಲಕ್ಷ್ಮಿಯರೇ ಹೆಣ್ಣು ಮಕ್ಕಳು. ಇಂದಲ್ಲಾ ನಾಳೆ ಅವರಿಗೆ ಬುದ್ಧಿ ಬರುತ್ತೆ, ಜನ ಬುದ್ಧಿ ಕಲಿಸುತ್ತಾರೆ ಎಂದರು. ಇದನ್ನೂ ಓದಿ: Paralympics 2024 | ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಮೋದಿ

    ಬುದ್ಧಿ ಕಲಿಸೋ ಪ್ರಯತ್ನ ನಾನು ಆರಂಭ ಮಾಡಿದ್ದೆ. ಈಗ ಅದನ್ನು ಯತ್ನಾಳ್ ಮುಂದುವರಿಸಿದ್ದಾರೆ. ಯಡಿಯೂರಪ್ಪ ಮತ್ತು ಅವರ ಮಕ್ಕಳು ಬಿಜೆಪಿಗೆ ದ್ರೋಹ ಮಾಡಿದರು. ನಮ್ಮ ಭಿಕ್ಷೆಯಿಂದ ವಿಜಯೇಂದ್ರ ಗೆದ್ದಿದ್ದು ಎಂದು ಡಿಕೆಶಿ ಹೇಳುತ್ತಾರೆ. ಈ ಮೂಲಕ ಕಾಂಗ್ರೆಸ್ (Congress) ಕಾರ್ಯಕರ್ತರಿಗೆ ದ್ರೋಹ ಮಾಡಿದರು. ಈ ಹೊಂದಾಣಿಕೆ ರಾಜಕೀಯ ಬೇಡ ಅನ್ನೋ ಕಾರಣಕ್ಕೆ ನಾನು ಚುನಾವಣಾಗೆ ಸ್ಪರ್ಧೆ ಮಾಡಿದೆ. ಇದು ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ಅರ್ಥ ಆಗಬೇಕು. ಕುಟುಂಬ ರಾಜಕಾರಣ ಮುಕ್ತ ಬಿಜೆಪಿ ಆಗಬೇಕು. ಸ್ವಜನ ಪಕ್ಷಪಾತ ಕೊನೆಯಾಗಬೇಕು. ಯಡಿಯೂರಪ್ಪ ತನ್ನ ಸುತ್ತಲೂ ಇರುವವರಿಗೆ ಹೆಚ್ಚಿನ ಅವಕಾಶ ನೀಡುತ್ತಾರೆ. ಹಿಂದುತ್ವವಾದಿಗಳಾದ ಯತ್ನಾಳ್, ಸಿ.ಟಿ.ರವಿ, ಅನಂತ್ ಕುಮಾರ್, ಪ್ರತಾಪ್ ಸಿಂಹ ಬೇಡ. ಇದರ ವಿರುದ್ಧ ನನ್ನ ಹೋರಾಟ. ಇದರಿಂದ ನನಗೆ ವೈಯಕ್ತಿಕ ತೊಂದರೆ ಆದರೂ ಪರವಾಗಿಲ್ಲ ಎಂದು ಗುಡುಗಿದರು. ಇದನ್ನೂ ಓದಿ: ಸಿಪಿಎಂ ನಾಯಕ ಸೀತಾರಾಮ್‌ ಯೆಚೂರಿ ನಿಧನ

    ನನಗೆ ತೊಂದರೆ ಆಗುತ್ತೆ ಎಂದು ಮೊದಲೇ ಗೊತ್ತಿತ್ತು. ಈಗ ತೊಂದರೆ ಆಗುತ್ತಿದೆ, ಆಗಲಿ ಅನುಭವಿಸುತ್ತೇನೆ. ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಇಲ್ಲ ಎಂದು ಬಿಂಬಿಸುತ್ತಿದ್ದಾರೆ. ಇದು ಹೋಗಬೇಕು ಅನ್ನೋದಕ್ಕೆ ನನ್ನ ಹೋರಾಟ. ಬಿಜೆಪಿ ಯಾರೋ ನಾಲ್ಕು ಜನ ಕಟ್ಟಿದ ಪಕ್ಷ ಅಲ್ಲಾ. ಲಕ್ಷಾಂತರ ಜನ ರಕ್ತವನ್ನು ಬೆವರಿನ ರೂಪದಲ್ಲಿ ಸುರಿಸಿ ಕಟ್ಟಿರುವ ಪಕ್ಷ ಎಂದರು.

    ರಾಯಣ್ಣ ಬ್ರಿಗೇಡ್‌ಗೆ ಮರು ಚಾಲನೆ ಕುರಿತು ಬೆಂಬಲಿಗರ ಜೊತೆ ಚರ್ಚೆ ವಿಚಾರವಾಗಿ, ರಾಯಣ್ಣ ಬ್ರಿಗೇಡ್ ಮತ್ತೆ ಆರಂಭ ಮಾಡಿ ಎಂದು ಹೇಳುತ್ತಾ ಇದ್ದಾರೆ. ಇವತ್ತು ಬೆಂಬಲಿಗರ ಜೊತೆ ಚರ್ಚೆ ಮಾಡುತ್ತೇನೆ. ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ಒಂದೂವರೆ ವರ್ಷ ಕಾಂಗ್ರೆಸ್ ಸರ್ಕಾರ ಇದ್ದಿದ್ದೇ ನನಗೆ ಆಶ್ಚರ್ಯ. ಸಿದ್ದರಾಮಯ್ಯ ಅವರ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲಾ ಅಂದರು. ಈಗ ಅವರು ಇಳಿದರೆ ನಾವು ಆಗುತ್ತೇವೆ ಅಂತಾರೆ. ಹಾಗಾದ್ರೆ ಒಪ್ಪಿಕೊಂಡಂತೆ ಅಲ್ವಾ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ: ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ವಾಗ್ದಾಳಿ

  • ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ: ಸಿಎಂ ವಿರುದ್ಧ ಈಶ್ವರಪ್ಪ ಗರಂ

    ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ: ಸಿಎಂ ವಿರುದ್ಧ ಈಶ್ವರಪ್ಪ ಗರಂ

    – ಹಿಂದೂ ಸಂಸ್ಕೃತಿಯನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ

    ಬಾಗಲಕೋಟೆ: ಚೌತಿ ಗಣಪತಿ ಪ್ರಸಾದ ಪರೀಕ್ಷೆ ಮಾಡಿ ವಿತರಣೆ ವಿಚಾರಕ್ಕೆ, ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ. ಸಿಎಂಗೆ ಯಾಕೆ ಹಿಂದೂಗಳ ಬಗ್ಗೆ ನಿಕೃಷ್ಠ ಭಾವನೆ. ಕಾನೂನಿಗೆ ಅಪಮಾನ ಮಾಡಬೇಡಿ ಎಂದು ಕೆಎಸ್ ಈಶ್ವರಪ್ಪ (K S Eshwarappa), ಸಿಎಂ ಸಿದ್ದರಾಮಯ್ಯ (CM Siddaramaiah)ವಿರುದ್ಧ ಗರಂ ಆಗಿದ್ದಾರೆ.

    ಬಾಗಲಕೋಟೆಯಲ್ಲಿ (Bagalkote) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಮಾತ್ರವಲ್ಲ ದೇಶದ ತುಂಬೆಲ್ಲ ಗಣಪತಿ ಕೂರಿಸಲಾಗುತ್ತದೆ. ಗಣಪತಿ ಪ್ರಸಾದ ಕೊಡಬೇಕಾದರೆ ಆಹಾರ ಇಲಾಖೆ ಪರೀಕ್ಷೆ ಮಾಡಬೇಕಂತೆ. ಸಿದ್ದರಾಮಯ್ಯ ಹುಟ್ಟೋ ಮುಂಚೆಯಿಂದಲೂ ದೇಶದಲ್ಲಿ ಗಣಪತಿ ಕೂರಿಸುತ್ತಿದ್ದರು. ಕಾಂಗ್ರೆಸ್ ಪಕ್ಷ ಹುಟ್ಟೋಕಿಂತ ಮುಂಚೆ ದೇಶದಲ್ಲಿ ಗಣಪತಿ ಇಡಲಾಗುತ್ತಿದೆ. ಈಗ ಸರ್ಕಾರ ಹೊಸ ವ್ಯವಸ್ಥೆ ಮಾಡಿಕೊಳ್ಳುತ್ತಿದೆ ಎಂದರು. ಇದನ್ನೂ ಓದಿ: ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ

    ಪ್ರಸಾದ ಪರೀಕ್ಷೆ ಮಾಡಿ ನೀಡುವ ಕಾನೂನು ತಂದಿದ್ದಾರೆ. ಹಿಂದೂ ಧರ್ಮದ ಬಗ್ಗೆ ಇಷ್ಟು ಕೀಳುಮಟ್ಟದ ರಾಜಕಾರಣ ಕಾಂಗ್ರೆಸ್‌ನವರು (Congress) ಯಾಕೆ ಮಾಡುತ್ತಿದ್ದಾರೆ. ನೀವು ಮಸೀದಿ, ಚರ್ಚ್ ಗಳಲ್ಲಿ ತಿನ್ನುವ ಪದಾರ್ಥಗಳ ಪರೀಕ್ಷೆ ಮಾಡಿದ್ದೀರಾ? ಎಂದು ಪ್ರಶ್ನಿಸಿದರು.

    ನಮ್ಮ ದೇಶದ ಇತಿಹಾಸದಲ್ಲಿ ಕರ್ನಾಟಕದ (Karnataka) ಈಗಿನ ರಾಜಕಾರಣ ಬಹಳ ಕೀಳುಮಟ್ಟಕ್ಕೆ ಇಳಿದಿದೆ. ಆಡಳಿತ ಪಕ್ಷ ಭ್ರಷ್ಟಾಚಾರ ಮಾಡಿರುವುದಕ್ಕೆ ವಿರೋಧ ಪಕ್ಷ ಆಪಾದನೆ ಮಾಡೋದು ತಪ್ಪಲ್ಲ. ಆದರೆ ವಿರೋಧ ಪಕ್ಷ ಆಪಾದನೆ ಮಾಡಿದ್ದನ್ನು ಆಡಳಿತ ಪಕ್ಷ ತನಿಖೆ ಮಾಡಿಸಿ ಅದರಲ್ಲಿ ತಾವು ತಪ್ಪಿತಸ್ಥರಲ್ಲ ಅಂತ ಹೊರಗೆ ಬರಬೇಕು, ಅದು ಪದ್ಧತಿ. ತಪ್ಪಿತಸ್ಥರಾಗಿದ್ದರೆ ಅವರಿಗೆ ಏನು ಶಿಕ್ಷೆಯಾಗಬೇಕೊ ಅದು ಆಗುತ್ತದೆ. ಆದರೆ ಈಗ ಆಡಳಿತ ಪಕ್ಷ ಬಂದು ಒಂದೂವರೆ ವರ್ಷದ ನಂತರ ಸಿದ್ದರಾಮಯ್ಯ ಬಗ್ಗೆ ಇತರರ ಬಗ್ಗೆ ಆರೋಪವನ್ನು ವಿಪಕ್ಷದವರು ಮಾಡುತ್ತಿದ್ದಾರೆ. ಆಪಾದನೆ ಮಾಡುವ ಈ ಸಂದರ್ಭದಲ್ಲಿ ಒಂದೊಂದು ರೂಪದ ಹೋರಾಟ ನಡೆಯುತ್ತಿವೆ. ಭ್ರಷ್ಟಾಚಾರದ ತನಿಖೆಯ ಈ ಸಂದರ್ಭದಲ್ಲಿ ವೈಯಕ್ತಿಕ ಟೀಕೆ ಎಷ್ಟು ಕೀಳುಮಟ್ಟಕ್ಕೆ ಇಳಿದಿದೆ ಅಂದರೆ ಟಿವಿ ನೋಡುವುದಕ್ಕೆ ಬೇಸರ ಆಗುತ್ತಿದೆ. ಹೊಸದಾಗಿ ರಾಜಕಾರಣಕ್ಕೆ ಬರುವ ರಾಜಕಾರಣಿಗಳು ಮಹಿಳಾ ರಾಜಕಾರಣಿಗಳು ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ – ಟ್ರಾಫಿಕ್ ಸಿಗ್ನಲ್‌ಗಳ ಸಂಖ್ಯೆಯಲ್ಲಿ ಏರಿಕೆ

    ಈ ಸ್ಥಿತಿ ನೋಡಿದರೆ ನಾವು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಬರಬಾರದು ಅಂತ ತೀರ್ಮಾನ ಮಾಡುವ ಸ್ಥಿತಿ ರಾಜಕಾರಣದಲ್ಲಿ ಬೆಳೆಯುತ್ತಿದೆ. ಈ ಕೀಳುಮಟ್ಟದ ವೈಯಕ್ತಿಕ ಟೀಕೆಗಳನ್ನು ಎಂದು ನಾವು ಕಂಡಿರಲಿಲ್ಲ. ನನ್ನ ರಾಜಕೀಯ ಇತಿಹಾಸದಲ್ಲಿ ಕೇಳಿರಲಿಲ್ಲ. ನಾನು ಎಲ್ಲ ರಾಜಕಾರಣಿಗಳಿಗೂ ಮನವಿ ಮಾಡುತ್ತೇನೆ. ಇದುವರೆಗೂ ಆಗಿದ್ದು ಆಯಿತು. ಇನ್ಮುಂದೆ ವೈಯಕ್ತಿಕ ಟೀಕೆ ಬಿಟ್ಟು ರಾಜಕಾರಣ ಮಾಡಿ ಎಂದು ಹೇಳಿದರು.

    ಬಹಳ ಜನಕ್ಕೆ ಸಿಎಂ ಖುರ್ಚಿ ಮೇಲೆ ಕಣ್ಣಿದೆ:
    ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಖುರ್ಚಿ ಮೇಲೆ ಬಹಳಷ್ಟು ಜನರ ಕಣ್ಣಿದೆ. ಆದರೆ ಸಿಎಂ ಖುರ್ಚಿ ಮೇಲೆ ಟವೆಲ್ ಹಾಸ್ತಾ ಇದಾರೆ ಎಂಬ ಪದ ನಾನು ಬಳಸುವುದಿಲ್ಲ. ಆದರೆ ಬಹಳ ಜನಕ್ಕೆ (ಸಿಎಂ) ಅದರ ಮೇಲೆ ಕಣ್ಣಿದೆ. ಒಂದು ಕಡೆ ಮುಖ್ಯಮಂತ್ರಿಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸೋದಿಲ್ಲ, ಬೆಂಬಲ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಖುರ್ಚಿ ಮೇಲೆ ಬೆಂಬಲ ಕೊಡುವವರದ್ದೆ ಹಂಬಲ ಇದೆ. ಹಂಬಲದ ಮುಖಾಂತರ ರಾಜಕಾರಣ ನಡೆಯುತ್ತಿದೆ. ಇದು ಸ್ವಾಭಾವಿಕ. ಈಗ ಏನು ತೀರ್ಪು ಬರುತ್ತದೆ ಎಂದು ಎಲ್ಲರೂ ಕಾಯುತ್ತಿದ್ದಾರೆ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳು – ಪ್ರಕರಣ ಭೇದಿಸಿದ ಪೊಲೀಸರಿಗೆ ಹಿರಿಯ ಅಧಿಕಾರಿಗಳ ಮೆಚ್ಚುಗೆ

    ಬಹಳ ಜನ ಕಾಂಗ್ರೆಸ್‌ನವರು ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಉಳಿಯಲಿಕ್ಕಿಲ್ಲ ಅಂದುಕೊಂಡಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಸಿಎಂ ಆಗಿ ಉಳಿಯುತ್ತಾರೋ ಇಲ್ವೋ ಗೊತ್ತಿಲ್ಲ. ಅಕಸ್ಮಾತ್ ತೀರ್ಪಿನಲ್ಲಿ ಸಿದ್ದರಾಮಯ್ಯನವರದ್ದೇ ತಪ್ಪಿದೆ ಎಂದು ಎಫ್‌ಐಆರ್ ದಾಖಲಾದರೆ ರಾಜೀನಾಮೆ ಕೊಡಬಹುದು, ಕೊಡಬೇಕಾಗಬಹುದು. ಆ ಸಂದರ್ಭದಲ್ಲಿ ಏನಾಗಬಹುದು. ಸಿದ್ದರಾಮಯ್ಯ ಅಪೇಕ್ಷೆ ಪಡುವಂತಹ ವ್ಯಕ್ತಿ ಸಿಎಂ ಆಗ್ತಾರಾ? ಸಿದ್ದರಾಮಯ್ಯ ಇಷ್ಟಪಡುವ ವ್ಯಕ್ತಿ ಸಿಎಂ ಆಗಲು ಬಿಡ್ತಾರಾ? ಕಾಂಗ್ರೆಸ್‌ನ ಡಿಕೆಶಿ, ಎಂಬಿ ಪಾಟಿಲ್ ಉಳಿದಂತೆ ಎಲ್ಲ ಪ್ರಮುಖರು ಅವರಿಗೆ ಅವಕಾಶ ಕೊಡಲಿಲ್ಲ ಅಂದರೆ ಸರ್ಕಾರ ಎಷ್ಟರಮಟ್ಟಿಗೆ ಇರುತ್ತೆ ಇರೋದಿಲ್ಲ, ಅದು ಜಡ್ಜ್ಮೆಂಟ್ ಮೇಲೆ ತೀರ್ಮಾನ ಆಗುತ್ತದೆ ಎಂದು ಹೇಳಿದರು.

    ಸಿದ್ದರಾಮಯ್ಯ ಟೆಂಪಲ್ ರನ್ ವಿಚಾರವಾಗಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಹಿಂದೆ ಅನೇಕ ದೇವಸ್ಥಾನಗಳಿಗೆ ಹೋಗುತ್ತಿರಲಿಲ್ಲ. ಈಗ ಅನೇಕ ದೇವಸ್ಥಾನಗಳಿಗೆ ಹೋಗುತ್ತಿದ್ದಾರೆ. ನಾನು ಅದನ್ನು ಸ್ವಾಗತ ಮಾಡುತ್ತೇನೆ. ಚಾಮುಂಡಿ ಬೆಟ್ಟಕ್ಕಂತೂ ಮೇಲಿಂದ ಮೇಲೆ ಹೋಗುತ್ತಿದ್ದಾರೆ. ಹಿಂದೂ ಸಂಸ್ಕೃತಿ ಬಗ್ಗೆ ಅವರಿಗೆ ಹೆಚ್ಚಿನ ಗೌರವ ಬಂದಿದೆಯಲ್ಲ. ಅದಕ್ಕೆ ತುಂಬಾ ಸಂತೋಷದಿಂದ ಸ್ವಾಗತ ಮಾಡುತ್ತೇನೆ. ಇಂತಹ ಸಂದರ್ಭದಲ್ಲೇ ಹಿಂದೂ ಸಮಾಜದ ಮೇಲೆ ಆಗುತ್ತಿರುವ ಆಘಾತ ತಡೆದುಕೊಳ್ಳಲಾಗುತ್ತಿಲ್ಲ ಎಂದರು. ಇದನ್ನೂ ಓದಿ: ಮುಂಬೈ ಪೊಲೀಸರ ಹೆಸರಲ್ಲಿ ಚಿತ್ರದುರ್ಗದ ವೈದ್ಯನಿಗೆ ಕೋಟ್ಯಂತರ ರೂಪಾಯಿ ವಂಚನೆ: ಇಬ್ಬರ ಬಂಧನ

    ಹಿಜಬ್ ನಿಷೇಧ ಮಾಡಿದ ವಿಚಾರವಾಗಿ ಕುಂದಾಪುರ ಕಾಲೇಜಿನ ಪ್ರಿನ್ಸಿಪಾಲ್, ಹಿಜಾಬ್ ಹಾಕಿಕೊಂಡು ಕಾಲೇಜ್ ಗೇಟ್ ಒಳಗೆ ಬರಬೇಡಿ ಅಂದಿದ್ದರು. ಅವರನ್ನ ಈ ಬಾರಿ ರಾಜ್ಯಪ್ರಶಸ್ತಿಗೆ ಆಯ್ಕೆ ಮಾಡಿದ್ದರು. ಈಗ ಅದನ್ನು ತಡೆ ಹಿಡಿತಾರೆ ಅಂದರೆ ಇದು ಹಿಂದೂ ಧರ್ಮಕ್ಕೂ ಅಪಮಾನ. ಪ್ರಿನ್ಸಿಪಾಲ್‌ಗೂ ಅಪಮಾನ. ಇದು ಮುಸಲ್ಮಾನರಿಗೆ ಸಂತೃಪ್ತಪಡಿಸುವ ವ್ಯವಸ್ಥೆ. ಇದು ಒಳ್ಳೆಯದಲ್ಲ ಸಿದ್ದರಾಮಯ್ಯನವರೇ. ದೇವಸ್ಥಾನಗಳಿಗೆ ಹೋಗಿದಿರಾ. ಹಿಂದೂ ಧರ್ಮದ ಮೇಲೆ ನಿಮಗೆ ಆಸಕ್ತಿ ಇದೆ. ಆ ಪ್ರಿನ್ಸಿಪಾಲ್‌ಗೆ ತಕ್ಷಣ ಪ್ರಶಸ್ತಿ ಕೊಡಿ. ಒಳ್ಳೆ ಪ್ರಿನ್ಸಿಪಾಲ್ ಎಂದು ಘೋಷಣೆ ಮಾಡಿದ್ದನ್ನು ತಡೆ ಹಿಡಿಯಬೇಕಾದರೆ ಕಾನೂನಿಗೆ ಮಾಡಿದ ಅಪಮಾನ. ಹಿಂದೂಗಳಿಗೆ ಮಾಡಿದ ಅಪಮಾನ ಎಂದು ಹರಿಹಾಯ್ದರು. ಇದನ್ನೂ ಓದಿ: ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ – ಮತ್ತೆ ಮೂವರು ಆರೋಪಿಗಳು ಅರೆಸ್ಟ್

    ಕೇಂದ್ರದಲ್ಲಿ ಹೆಚ್‌ಡಿಕೆ ಪ್ರಾಬಲ್ಯ, ಬಿಜೆಪಿ ಜೆಡಿಎಸ್‌ನಲ್ಲಿ ಮರ್ಜ್ ಆಗುತ್ತಾ ಎಂಬ ಪ್ರಶ್ನೆಗೆ, ಬಿಜೆಪಿ (BJP) ಯಾವುದೇ ಪಕ್ಷದ ಜೊತೆ ಮರ್ಜ್ ಆಗಲ್ಲ. ಹಿಂದೂ ಸಂಸ್ಕೃತಿಯನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ. ಹಾಗಾಗಿ ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ. ದೇಶದ ಪ್ರಧಾನಿ, ಅನೇಕ ರಾಜ್ಯಗಳಲ್ಲಿ ಸಿಎಂಗಳು, ಶಾಸಕರು, ಅನೇಕ ಬಿಜೆಪಿ ಸಂಸದರು ಇರಲು ಕಾರಣ ಹಿಂದೂ ಸಂಸ್ಕೃತಿ. ಇವತ್ತು, ನಿನ್ನೆ ಯಾರೋ ಮಾಡುತ್ತಿರುವ ಪ್ರಯತ್ನದಿಂದ ಅಧಿಕಾರಕ್ಕೆ ಬಂದಿಲ್ಲ. ಅನೇಕ ವರ್ಷಗಳಿಂದ ರಕ್ತ ಬೆವರು ರೂಪದಲ್ಲಿ ಸುರಿಸಿದ ರಾಷ್ಟ್ರ ಭಕ್ತರು ಧರ್ಮ ನಿಷ್ಠರು ಈ ಪಕ್ಷವನ್ನ ಕಟ್ಟಿರೋದು. ಹಾಗಾಗಿ ಈ ಪಕ್ಷ ತಾತ್ಕಾಲಿಕವಾಗಿ ಕೆಲವರ ಕುಟುಂಬದ ಕೈಗೆ ಸಿಕ್ಕಿದೆ. ಇದನ್ನ ಸರಿ ಮಾಡೋದಕ್ಕೆ ಖಂಡಿತಾ ಆಗುತ್ತೆ, ಸರಿ ಆಗೇ ಆಗುತ್ತೆ ಅನುಮಾನವಿಲ್ಲ ಎಂದರು.

    ಈ ದೇಶಕ್ಕೆ ಒಂದೇ ಆಶಾ ಕಿರಣ ಬಿಜೆಪಿ, ಯಾವುದೇ ಪಕ್ಷದ ಜೊತೆ ಮರ್ಜ್ ಆಗಲ್ಲ. ಪರೋಕ್ಷವಾಗಿ ಬಿಎಸ್‌ವೈ ಕುಟುಂಬದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಹುಲ್‌ ಗಾಂಧಿ ಅಮೆರಿಕ ಪ್ರವಾಸ – ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಿದ ಸ್ಯಾಮ್‌ ಪಿತ್ರೋಡಾ

  • ಮುಸ್ಲಿಮರ ಓಲೈಕೆಗೆ ರಾಮನಗರ ಹೆಸರು ಬದಲಾವಣೆ: ಈಶ್ವರಪ್ಪ

    ಮುಸ್ಲಿಮರ ಓಲೈಕೆಗೆ ರಾಮನಗರ ಹೆಸರು ಬದಲಾವಣೆ: ಈಶ್ವರಪ್ಪ

    ಶಿವಮೊಗ್ಗ: ರಾಜ್ಯದಲ್ಲಿ ಮೂರು ಉಪಚುನಾವಣೆ ಎದುರಾಗುತ್ತಿದೆ. ಚುನಾವಣೆಯಲ್ಲಿ ಮುಸ್ಲಿಮರನ್ನು (Muslim Community) ಸಂತೃಪ್ತಿಪಡಿಸಲು, ಮುಸ್ಲಿಮರ ಓಲೈಕೆಗಾಗಿ ಸರ್ಕಾರ ರಾಮನಗರ (Ramanagara) ಹೆಸರು ಬದಲಾವಣೆ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ಆರೋಪಿಸಿದ್ದಾರೆ.

    ಶಿವಮೊಗ್ಗದಲ್ಲಿ (Shivamogga) ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಮ ಎನ್ನುವ ಹೆಸರಿದ್ದರೆ ನಿಮಗೆ ಏನಾದರೂ ಸಮಸ್ಯೆ ಇದೆಯಾ? ಹಿಂದುತ್ವದ ಹೆಸರು ಬಂದರೆ ಸಿದ್ದರಾಮಯ್ಯ, ಡಿಕೆಶಿ ಅವರಿಗೆ ದೆವ್ವ ಬಂದಹಾಗೆ ಆಗುತ್ತದೆ. ರಾಮನಗರದ ಹೆಸರು ರಾಮನಗರ ಅಂತಾನೇ ಇರಬೇಕು ಎಂದರು. ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಮೌನ ಪ್ರತಿಭಟನೆ

    ಇಡೀ ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ರೈತರು ಸಂಪೂರ್ಣ ಸಂಕಷ್ಟದಲ್ಲಿ ಇದ್ದಾರೆ. ಕಾಂಗ್ರೆಸ್‌ನವರು ಬಿಜೆಪಿ ಮೇಲೆ ಆರೋಪ ಮಾಡುವುದರಲ್ಲೇ ಬ್ಯುಸಿ ಆಗಿದ್ದಾರೆ. ರಾಜ್ಯ ಸರ್ಕಾರ ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಲುಕಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ

    14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ಆಗಿದೆ. ಮುಡಾ ಹಗರಣ, ವಾಲ್ಮೀಕಿ ಹಗರಣ, ಅಪೆಕ್ಸ್ ಬ್ಯಾಂಕ್ ಹಗರಣ ಹಾಗು ಬೋವಿ ನಿಗಮದ ಹಗರಣದ ಬಗ್ಗೆ ಮಾಧ್ಯಮದಲ್ಲಿ ಪ್ರತಿನಿತ್ಯ ಬರುತ್ತಿದೆ. ಈ ಬಗ್ಗೆ ಸಿದ್ದರಾಮಯ್ಯ ಸದನದಲ್ಲಿ ಉತ್ತರ ಕೊಡಲೇ ಇಲ್ಲ. ಯಾಕೆಂದರೆ ಎಲ್ಲರೂ ಹಗರಣದ ಬಗ್ಗೆ ದಾಖಲಾತಿ ಕೈಯಲ್ಲಿ ಹಿಡಿದುಕೊಂಡು ಕುಳಿತಿದ್ದರು. ನಿಮ್ಮ ಬಳಿ ದಾಖಲೆ ಇದ್ದರೆ ಬಿಜೆಪಿ, ಕಾಂಗ್ರೆಸ್ ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣವನ್ನು ಸಿಬಿಐಗೆ ವಹಿಸಿ. ಯಾರೇ ಹಗರಣ ಮಾಡಿದರೂ ಬಹಿರಂಗ ಆಗುತ್ತದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ – ಸಿದ್ದರಾಮಯ್ಯ ಪರ ಸಚಿವ ಜಮೀರ್ ಬ್ಯಾಟಿಂಗ್‌

  • ಮೋದಿ ಫೋಟೋ ಬಳಕೆ – ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

    ಮೋದಿ ಫೋಟೋ ಬಳಕೆ – ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

    – ಆಯೋಗಕ್ಕೆ ಒಟ್ಟು 5 ದೂರುಗಳನ್ನು ನೀಡಿದ ಬಿಜೆಪಿ

    ಬೆಂಗಳೂರು: ಮೋದಿ (Narendra Modi) ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ (Shivamogga) ಬಂಡಾಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ವಿರುದ್ಧ ಬಿಜೆಪಿ (BJP) ಕ್ರಮಕ್ಕೆ ಮುಂದಾಗಿದ್ದು, ಈ ಕುರಿತು ಚುನಾವಣಾ ಆಯೋಗಕ್ಕೆ (Election Commission) ದೂರು ನೀಡಿದೆ.

    ಮೋದಿ ಫೋಟೋ ಬಳಕೆಗೆ ಬ್ರೇಕ್ ಹಾಕಲು ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ, ಛಲವಾದಿ ನಾರಾಯಣ ಸ್ವಾಮಿ ಹಾಗೂ ಪಿ ರಾಜೀವ್ ನೇತೃತ್ವದಲ್ಲಿ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇದನ್ನೂ ಓದಿ: ಬಾಡೂಟವನ್ನೂ ಭಯೋತ್ಪಾದನೆಯಂತೆ ವೈಭವೀಕರಿಸುತ್ತಿದೆ, ಕಾಂಗ್ರೆಸ್‌ ಹೊಸತೊಡಕು ವಿರೋಧಿ: ಜೆಡಿಎಸ್‌ ಕಿಡಿ

    ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಛಲವಾದಿ ನಾರಾಯಣ (Chalavadi Narayanaswamy) ಸ್ವಾಮಿ, ಶಿವಮೊಗ್ಗದಲ್ಲಿ ನಮ್ಮ ಅಭ್ಯರ್ಥಿಯಾಗಿ ರಾಘವೇಂದ್ರ ಅವರು ನಿಂತಿದ್ದಾರೆ. ಆದರೆ ಈಶ್ವರಪ್ಪ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲುತ್ತೇನೆ ಎಂದು ಹೇಳುತ್ತಿದ್ದಾರೆ. ಈಶ್ವರಪ್ಪ ಅವರು ಪ್ರಧಾನಿ ಮೋದಿ ಅವರ ಭಾವಚಿತ್ರ ಬಳಕೆ ಮಾಡುತ್ತಿದ್ದಾರೆ. ಹಾಗಾಗಿ ಇದರ ಬಗ್ಗೆ ಗಮನ ಹರಿಸಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ ಎಂದರು. ಇದನ್ನೂ ಓದಿ: ಒಳನುಸುಳುವಿಕೆ ತಡೆಯಲು ಬಿಜೆಪಿಗೆ ಮತ ನೀಡಿ: ಬಂಗಾಳದಲ್ಲಿ ಅಮಿತ್ ಶಾ ಮನವಿ

    ಮೋದಿ ಅವರ ಹೆಸರನ್ನು ಕೂಡ ಬಳಕೆ ಮಾಡಬಾರದು. ಒಂದು ಪಕ್ಷದ ನಾಯಕರ ಹೆಸರನ್ನು ಆಗಲಿ ಬಳಸುವ ಹಾಗಿಲ್ಲ. ಅದಕ್ಕೆ ವಿರೋಧ ಮಾಡುತ್ತೇವೆ. ನಮ್ಮ ಪಕ್ಷದ ಲೀಡರ್‌ಗಳ ಹೆಸರನ್ನು ಬಳಸಬಾರದು. ಪ್ರಧಾನ ಮಂತ್ರಿಗಳ ಪೋಟೋ ಆಗಲಿ, ಹೆಸರು ಆಗಲಿ ಬಳಕೆ ಮಾಡಬಾರದು. ನಾವೇನು ಪಕ್ಷದಿಂದ ಅವರನ್ನು ವಜಾ ಮಾಡಿಲ್ಲ ವಿತ್ ಡ್ರಾ ಮಾಡಿಕೊಂಡು ಪಕ್ಷಕ್ಕಾಗಿ ಕೆಲಸ ಮಾಡಿ ಎಂದು ಹೇಳಿದರು. ಇದನ್ನೂ ಓದಿ: ಕೇಜ್ರಿವಾಲ್‌ ಬಂಧನ ಬಳಿಕ ಎಎಪಿಗೆ ಮತ್ತೊಂದು ಶಾಕ್‌ – ಸಚಿವ ರಾಜ್‌ಕುಮಾರ್‌ ಆನಂದ್‌ ರಾಜೀನಾಮೆ

    ಚುನಾವಣಾ ಆಯೋಗಕ್ಕೆ ಬಿಜೆಪಿ ಒಟ್ಟು ಐದು ದೂರುಗಳನ್ನು ನೀಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಅಧಿಕಾರಿ ಊಟ ಬಡಿಸಿರುವ ಬಗ್ಗೆ ಬಿಜೆಪಿ ದೂರು ನೀಡಿದೆ. ಇನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಿರ್ಮಾಪಕರಾಗಿರುವ ‘ರಣಗಲ್’ ಚಲನಚಿತ್ರದ ಜಾಹೀರಾತು ಮೊತ್ತವನ್ನು ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ಸೇರಿಸಬೇಕು ಎಂದು ದೂರು ನೀಡಲಾಗಿದೆ. ಅಲ್ಲದೇ ಕುಡಚಿಯಲ್ಲಿ ಬಿಜೆಪಿ ಎಲ್‌ಇಡಿ ವಾಹನದಲ್ಲಿದ್ದ ಪ್ರಣಾಳಿಕೆ ಸಲಹಾ ಪೆಟ್ಟಿಗೆಯನ್ನು ಸುಟ್ಟು ಹಾಕಿರುವ ಬಗ್ಗೆ ಕೂಡಾ ದೂರು ಕೊಟ್ಟಿದೆ. ಅಷ್ಟು ಮಾತ್ರವಲ್ಲದೇ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಅಕ್ಕಿ ಹಂಚುತ್ತಿರುವ ಆರೋಪದ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಇದನ್ನೂ ಓದಿ: ಸಾಯಿಬಾಬಾ ಮಂದಿರ ನಿರ್ಮಿಸಿ ತಾಯಿ ಕನಸು ಈಡೇರಿಸಿದ ನಟ ವಿಜಯ್