ಕಲಬುರಗಿ: ಜಿಲ್ಲೆಯ ಉಪಗುತ್ತಿಗೆದಾರನಿಗೆ ಸರ್ಕಾರದ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ವರ್ಕ್ ಆರ್ಡರ್ ಕೊಡಿಸುವುದಾಗಿ ನಂಬಿಸಿ 1.21 ಕೋಟಿ ರೂ. ವಂಚಿಸಿದ ಆರೋಪದಡಿ ರಾಜ್ಯ ಸಚಿವರೊಬ್ಬರ ಅಳಿಯ ಸೇರಿ ಐವರ ವಿರುದ್ಧ ನಗರದ ಸೈಬರ್, ಆರ್ಥಿಕ ಮತ್ತು ಮಾದಕವಸ್ತು ತಡೆ (ಸೆನ್) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪಗುತ್ತಿಗೆದಾರ ನೀಡಿದ ದೂರಿನ ಅನ್ವಯ ಕಲಬುರಗಿಯ (Kalaburagi) ಲಕ್ಷ್ಮಿಕಾಂತ ಕಟ್ಟಿಮನಿ, ರಾಯಚೂರಿನ ಸಂತೋಷ್ ನಾಯಕ, ಕಿರಣ್, ಬೆಂಗಳೂರಿನ ಶ್ರೀಧರ್ ಹಾಗೂ ಕೊಪ್ಪಳದ ರವಿ ಮಾಲಿಪಾಟೀಲ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ದೂರುದಾರರು ಜಲಜೀವನ್ ಮಿಷನ್ ಕಾಮಗಾರಿಗಳ ಉಪಗುತ್ತಿಗೆಯನ್ನು ಪಡೆದು ಅವುಗಳ ಕೆಲಸ ಮಾಡುತ್ತಿದ್ದರು. ಕೆಲ ವರ್ಷಗಳಿಂದ ಪರಿಚಯಸ್ಥನಾಗಿದ್ದ ಲಕ್ಷ್ಮಿಕಾಂತ, ತನಗೆ ದೊಡ್ಡ ದೊಡ್ಡ ಅಧಿಕಾರಿಗಳು, ರಾಜಕಾರಣಿಗಳ ಪರಿಚಯವಿದೆ. ಅವರ ಸಹಕಾರದಿಂದ ಬಹಳಷ್ಟು ಜನರಿಗೆ 50 ಕೋಟಿ ರೂ.ವರೆಗಿನ ಟೆಂಡರ್‌ಗಳನ್ನು ಕೊಡಿಸಿದ್ದಾಗಿ ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಶುರುವಾದ ಅರ್ಧ ಗಂಟೆಯ ನಂತರವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದೆವು: ಜೈಶಂಕರ್
ಕೆಕೆಆರ್‌ಡಿಬಿಯ 20 ಕೋಟಿ ರೂ. ಹಾಗೂ ಸರ್ಕಾರಿ ಕಚೇರಿಗಳ ಕ್ಯಾಲೆಂಡರ್ ಪೂರೈಕೆಯ 5 ಕೋಟಿ ರೂ. ಟೆಂಡರ್, 25 ಕೋಟಿ ರೂ. ವರ್ಕ್ ಆರ್ಡರ್ ಕೊಡಿಸುವುದಾಗಿ ಉಪಗುತ್ತಿಗೆದಾರನಿಗೆ ಆರೋಪಿಗಳು ನಂಬಿಸಿದ್ದರು. ಆರೋಪಿಗಳ ಬೇಡಿಕೆಯಂತೆ ಕಚೇರಿ ಖರ್ಚಿನ 1.21 ಕೋಟಿ ರೂ.ಗಳನ್ನು ಆರೋಪಿ ಸಂತೋಷ್ ನಾಯಕ ಖಾತೆಗೆ ಜಮಾ ಮಾಡಿದ್ದರು. ಕಟ್ಟಡ ಸಾಮಗ್ರಿಗಳು ಖರೀದಿಸಿದ್ದಾಗಿ ಬಿಲ್ ತೋರಿಸಿ 2.28 ಲಕ್ಷ ರೂ. ಪಡೆದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ
ಬಹಳ ದಿನಗಳು ಕಳೆದರೂ ಉಪಗುತ್ತಿಗೆದಾರನಿಗೆ ವರ್ಕ್ ಆರ್ಡರ್ ಬರಲಿಲ್ಲ. ಆರೋಪಿಗಳಿಗೆ ಫೋನ್ ಮಾಡಿದಾಗ, ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ನಿಮಗೆ ಖಂಡಿತವಾಗಿ ಟೆಂಡರ್ ಆರ್ಡರ್ ಕೊಡಿಸುತ್ತೇವೆ ಎಂದಿದ್ದರು. ಟೆಂಡರ್‌ಗಾಗಿ ನೀಡಿದ ಹಣ ವಾಪಸ್ ಕೊಡುವಂತೆ ಒತ್ತಾಯಿಸಿದಾಗ 50 ಲಕ್ಷ ರೂ. ಚೆಕ್ ನೀಡಿದ್ದರು. ಹಣ ವರ್ಗಾವಣೆಗೆ ಯತ್ನಿಸಿದಾಗ ಆ ಚೆಕ್ ಬೌನ್ಸ್ ಆಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಶಾಂತಿಯುತವಾಗಿ ಬದುಕಬೇಕಾದ್ರೆ ರೊಟ್ಟಿ ತಿನ್ನಿ, ಇಲ್ಲದಿದ್ರೆ ನನ್ನ ಬುಲೆಟ್‌ಗಳು ಯಾವಾಗಲೂ ರೆಡಿ ಇರುತ್ತೆ: ಮೋದಿ ವಾರ್ನಿಂಗ್
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದೂರುದಾರರು, ರಾಜಕಾರಣಿಗಳ ಹೆಸರು ಹೇಳಿಕೊಂಡು ಪರಿಚಯ ಮಾಡಿಕೊಂಡು ಆರೋಪಿಗಳು, ನನ್ನ ಜಿಎಸ್‌ಟಿ ನಂಬರ್ ಮೇಲೆ ವರ್ಕ್ ಆರ್ಡರ್ ಕೊಡಿಸುವುದಾಗಿ ನಂಬಿಸಿ ನನ್ನಿಂದ ಹಣ ಪಡೆದರು. ಐವರು ಆರೋಪಿಗಳಲ್ಲಿ ಸಚಿವರೊಬ್ಬರ ಅಳಿಯ ಸಹ ಇದ್ದಾರೆ. ಹಣ ವಾಪಸ್ ಕೊಡುವುದಾಗಿ ಆರೋಪಿಗಳು ಭರವಸೆ ಕೊಟ್ಟಿದ್ದರು ಎಂದಿದ್ದಾರೆ.
-ಹಿಂದುಳಿದ ಹಣೆಪಟ್ಟಿ ಹೋಗಲಾಡಿಸುವುದೇ ನನ್ನ ಗುರಿ: ಡಾ.ಅಜಯ್ ಸಿಂಗ್
ಕಲಬುರಗಿ: ಕಣ್ಣಿಗೆ ಕಾಣುವಂತೆ ಬದಲಾವಣೆಯ ಮ್ಯಾಕ್ರೋ ಯೋಜನೆಗಳನ್ನು ಪ್ರದೇಶದಲ್ಲಿ ಅನುಷ್ಠಾನಕ್ಕೆ ತರುವ ಮೂಲಕ ಕಲ್ಯಾಣ ಕರ್ನಾಟಕ (Kalyana Karnataka) ಪ್ರದೇಶಕ್ಕೆ ಅಂಟಿಕೊಂಡಿರುವ ಹಿಂದುಳಿದ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸುವುದೇ ತಮ್ಮ ಮೊದಲ ಗುರಿ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ (Dr Ajay Singh) ಹೇಳಿದ್ದಾರೆ.
ಸೋಮವಾರ ಮಂಡಳಿ ಕಚೇರಿಯಲ್ಲಿ ನೂತನ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಪ್ರದೇಶದಲ್ಲಿನ ಸಾಕ್ಷರತೆ ಪ್ರಮಾಣ ಹೆಚ್ಚಿಸುವುದು, ಅಪೌಷ್ಟಿಕತೆ ನಿವಾರಣೆ, ತಾಯಿ-ಮಕ್ಕಳ ಮರಣ ಪ್ರಮಾಣ ತಗ್ಗಿಸುವುದರ ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸುವುದು, ಮೂಲಸೌಕರ್ಯ ಬಲಪಡಿಸುವುದು ತಮ್ಮ ಮೊದಲ ಆದ್ಯತೆಯಾಗಿರಲಿದೆ ಎಂದರು. ಇದನ್ನೂ ಓದಿ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು: ಸಿದ್ದರಾಮಯ್ಯ ಘೋಷಣೆ
ರಾಜ್ಯದ ಈ ಹಿಂದಿನ 175 ತಾಲೂಕುಗಳಲ್ಲಿ 114 ತಾಲೂಕು ಹಿಂದುಳಿದ ತಾಲೂಕುಗಳಾಗಿವೆ. ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿರುವುದು 39 ತಾಲೂಕು ಎಂದು ಡಾ.ಡಿ.ಎಂ.ನಂಜುಂಡಪ್ಪ ಅವರ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಪ್ರದೇಶದ ಪ್ರತಿ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಟ್ರಾಮಾ ಸೆಂಟರ್ ಸ್ಥಾಪನೆ ಮಾಡಲಾಗುವುದು. ರಾಜ್ಯದ ಸಾಕ್ಷರತೆ ಪ್ರಮಾಣ 75.36% ಇದ್ದರೆ, ಕಲ್ಯಾಣ ಕರ್ನಾಟಕ ಭಾಗದ ಪ್ರಮಾಣ 64% ಇದೆ. ಈ ವ್ಯತ್ಯಾಸವನ್ನು ಸರಿದೂಗಿಸಲು ಪ್ರತಿ ಹೋಬಳಿವಾರು ಪದವಿ ಪೂರ್ವ ಕಾಲೇಜುಗಳನ್ನು ಸ್ಥಾಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ತಮಿಳುನಾಡು ಇಷ್ಟು ತುರ್ತಾಗಿ ಸುಪ್ರೀಂ ಮೊರೆ ಹೋಗುವ ಅಗತ್ಯ ಇರಲಿಲ್ಲ: ಡಿಕೆಶಿ
ಮಂಡಳಿಗೆ ಸರ್ಕಾರ ನೀಡುವ ಅನುದಾನ ಖರ್ಚು ಮಾಡದಿರುವುದು ಮಂಡಳಿಗೆ ದೊಡ್ಡ ಸವಾಲು ಮತ್ತು ಆಪಾದನೆ ಇದೆ. ಇದನ್ನು ತಮ್ಮ ಅವಧಿಯಲ್ಲಿ ಮುಂದುವರೆಯಲು ಬಿಡುವುದಿಲ್ಲ. ಮಂಡಳಿಗೆ ಅಧಿಕಾರಿ, ಸಿಬ್ಬಂದಿ, ಎಂಜಿನಿಯರ್ ಕೊರತೆ ಇರುವುದು ಗಮನಕ್ಕೆ ಬಂದಿದೆ. ಹಣಕಾಸು ಇಲಾಖೆಯ ಅನುಮೋದನೆ ಪಡೆದು ಸಿಬ್ಬಂದಿ ಭರ್ತಿ ಮಾಡಲಾಗುವುದು. ಮುಂದೆ ಅನುದಾನವನ್ನು ಸಹ ಕಾಲಮಿತಿಯಲ್ಲಿ ಖರ್ಚು ಮಾಡಲಾಗುವುದು ಎಂದರು. ಇದನ್ನೂ ಓದಿ: ಚಿರತೆಗೆ 6ರ ಬಾಲಕಿ ಬಲಿ – ತಿರುಮಲ ಬೆಟ್ಟ ಹತ್ತಲು ಹೊಸ ರೂಲ್ಸ್
ಮಂಡಳಿಗೆ ಅಜಯ್ ಸಿಂಗ್ ಸುಪ್ರೀಂ, ವಿವೇಚನಾ ಅನುದಾನ ಹೆಚ್ಚಳ:
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಡಳಿಯ ಅಧ್ಯಕ್ಷರಿಗೆ ಇದ್ದ 96%ರಷ್ಟು ಅನುದಾನ ಹಂಚಿಕೆ ಅಧಿಕಾರವನ್ನು 26%ಕ್ಕೆ ಇಳಿಸಿತ್ತು. ನಮ್ಮ ಸರ್ಕಾರವು ಅಧ್ಯಕ್ಷರ ವಿವೇಚನಾ ನಿಧಿ ಬಳಕೆ 96%ಕ್ಕೆ ಮತ್ತೆ ಹೆಚ್ಚಿಸುವ ಮೂಲಕ ಮಂಡಳಿಗೆ ಬಲ ನೀಡಿದೆ. ಹೀಗಾಗಿ ಡಾ.ಅಜಯ್ ಸಿಂಗ್ ಅವರೇ ಮಂಡಳಿಗೆ ಸುಪ್ರೀಂ ಎಂದು ಹೇಳಿದರು. ಇದನ್ನೂ ಓದಿ: ಸ್ವಾತಂತ್ರ್ಯೋತ್ಸವಕ್ಕೆ ಗುಡ್ ನ್ಯೂಸ್ – ಆ.15 ರಿಂದ ಕೆಜಿ ಟೊಮೆಟೋ 50 ರೂ.ಗೆ ಮಾರಾಟ
ಈ ಸಂದರ್ಭದಲ್ಲಿ ಶಾಸಕರು ಮತ್ತು ಮಂಡಳಿಯ ನೂತನ ಸದಸ್ಯರಾದ ಬಿ.ಆರ್.ಪಾಟೀಲ, ತಿಪ್ಪಣಪ್ಪ ಕಮಕನೂರ, ಅರವಿಂದ ಅರಳಿ ಮತ್ತು ವಿಧಾನಸಭೆ ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ ಪಾಟೀಲ ಹುಮನಾಬಾದ್, ಅರವಿಂದ ಅರಳಿ, ಮಂಡಳಿ ಕಾರ್ಯದರ್ಶಿ ಅನಿರುದ್ಧ ಪಿ.ಶ್ರವಣ ಸೇರಿದಂತೆ ಅನೇಕ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 6 ತಿಂಗಳಲ್ಲಿ ಬಿಜೆಪಿಯವರು ಸರ್ಕಾರ ಮಾಡಿ ತೋರಿಸಲಿ: ಪ್ರಿಯಾಂಕ್ ಖರ್ಗೆ ಸವಾಲು
ಇದಕ್ಕೂ ಮುನ್ನ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಾ.ಅಜಯ್ ಸಿಂಗ್ ಅವರಿಗೆ ಮಂಡಳಿ ಕಾರ್ಯದರ್ಶಿ ಅನಿರುದ್ಧ್ ಶ್ರವಣ ಪಿ. ಅವರು ಶಿಷ್ಟಾಚಾರದಂತೆ ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಶುಭ ಕೋರಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮುಖಂಡರು ನೂತನ ಅಧ್ಯಕ್ಷರಿಗೆ ಶುಭ ಕೋರಿದರು. ಇದನ್ನೂ ಓದಿ: ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ – ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ
ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ 5,000 ಕೋಟಿ ರೂ. ನೀಡುವುದಾಗಿ ಹೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ. ಮುಂದೆ ಚುನಾವಣೆ ಬರುತ್ತಿದೆ ಈ ಅನುದಾನ ಬಿಡುಗಡೆ ಅಸಾಧ್ಯಾ ಎಂದು ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಕೆಆರ್‌ಡಿಬಿಗೆ ಘೋಷಿತ ಅನುದಾನ 3,000 ಕೋಟಿ ರೂಪಾಯಿಯಲ್ಲಿ ಕೇವಲ 1,500 ರೂಪಾಯಿ ಕೋಟಿ ಮಾತ್ರ ಬಿಡುಗಡೆ ಮಾಡಿ ಉಳಿದ 1,500 ಕೋಟಿ ರೂಪಾಯಿಯನ್ನು ಎಸ್‍ಡಿಪಿನಲ್ಲಿ ಬಿಡುಗಡೆ ಮಾಡದೇ ಮಹಾತ್ವಾಕಾಂಕ್ಷೆ ತಾಲೂಕುಗಳೆಂದು ಮರುನಾಮಕರಣ ಮಾಡಿ ಬಿಡುಗಡೆ ಮಾಡುತ್ತಿದ್ದಾರೆ. ಆ ಅನುದಾನ ಹೆಡ್ ಆಫ್ ಅಕೌಂಟ್‍ಗೆ ಬರುವುದಿಲ್ಲ. ಘೋಷಿತ ಅನುದಾನವನ್ನೇ ಸರಿಯಾಗಿ ಬಿಡುಗಡೆ ಮಾಡದ ಸಿಎಂ ಮತ್ತೆ 5,000 ಕೋಟಿ ರೂ. ನೀಡುವುದಾಗಿ ಹೇಳಿದ್ದಾರೆ. ಇದನ್ನು ಗಮನಿಸಿದರೆ, ಬೊಮ್ಮಾಯಿ ಅವರು ಮೋದಿಗಿಂತಲೂ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ. ಡಬಲ್ ಇಂಜಿನ್ ಸರ್ಕಾರದ ದೋಖಾ ಹಾಗೂ ಬೊಮ್ಮಾಯಿಯವರ ಬಂಡಲ್‍ನಿಂದಾಗಿ ಕಲ್ಯಾಣ ಕರ್ನಾಟಕ ಹಿನ್ನೆಡೆಯಾಗುತ್ತಿದೆ ಎಂದು ಹರಿಹಾಯ್ದರು.
ಸ್ಥಳೀಯ ಮುಖಂಡರ ನಿರಾಸಕ್ತಿಯಿಂದ ಕಲಬುರಗಿಯಲ್ಲಿ ಅಭಿವೃದ್ದಿಯಾಗಿಲ್ಲ ಎಂದು ಸಿಎಂ ಹೇಳಿದ್ದಾರೆ, ನಿಮ್ಮ ಅವಧಿಯಲ್ಲಿ 5 ಸಿಎಂ ಕೊಟ್ಟಿದ್ದಿರಲ್ಲ ನಿಮ್ಮ ಕೊಡುಗೆ ಏನಿದೆ? ನೀವು ನಿನ್ನೆ ಉದ್ಘಾಟನೆ ಮಾಡಿದ ಕಮೀಷನರ್ ಕಚೇರಿಗೆ ಅಡಿಗಲ್ಲು ಹಾಕಿದ್ದೇ ನಾನು. ನೀವು ಬಂದಿಳಿದ ವಿಮಾನ ನಿಲ್ದಾಣ ನಿರ್ಮಿಸಿದ್ದೇ ನಮ್ಮ ಅವಧಿಯಲ್ಲಿ, ನಿನ್ನೆ ನೀವು ಓಡಾಡಿದ ರಸ್ತೆ ನಿರ್ಮಾಣ ಮಾಡಿದ್ದೆ ನಾವು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಲೀಕ್ – ವಿಶ್ವವಿದ್ಯಾಲಯದಲ್ಲಿ ಭುಗಿಲೆದ್ದ ಪ್ರತಿಭಟನೆ
ಯುಪಿಎ ಅವಧಿಯಲ್ಲಿ ಮಂಜೂರಾಗಿದ್ದ ರೈಲ್ವೆ ವಲಯ, ನಿಮ್ಝ್, ಜವಳಿ ಪಾರ್ಕ್, ಏಮ್ಸ್, ಮೇಕ್ ಇನ್ ಇಂಡಿಯಾ, ಇಎಸ್‍ಐ ಮೇಲ್ದರ್ಜೆಗೆ ಏರಿಸುವ ಯೋಜನೆಗಳೆಲ್ಲ ಏನಾದವು ಎಂದು ಪ್ರಶ್ನಿಸಿದ ಅವರು, ಕಲಬುರಗಿ ಸಂಸದ ಉಮೇಶ್ ಜಾಧವ್ ಈ ಮೂರು ವರ್ಷದಲ್ಲಿ ಏನು ಮಾಡಿದ್ದಾರೆ? ಮೋದಿ ಅವರ ಮನ್ ಕಿ ಬಾತ್ ಅನ್ನು ಕನ್ನಡದಲ್ಲಿ ಅನುವಾದ ಮಾಡಿ ಹೇಳಿದ್ದು ಹಾಗೂ ಕೇಂದ್ರಿಯ ವಿವಿಯನ್ನು ಆರ್‌ಎಸ್‍ಎಸ್ ಕೇಂದ್ರವನ್ನಾಗಿ ಪರಿವರ್ತನೆ ಮಾಡುತ್ತಿರುವುದೇ ಇವರ ಸಾಧನೆಯಾಗಿದೆ. ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳು, ರೈಲ್ವೆ ಮೇಲ್ಸೇತುವೆ ಹಾಗೂ ಕೆಳ ಸೇತುವೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಗುತ್ತಿಗೆದಾರರ ಬಳಿ ಹಣವಿದ್ದರೆ ಕಾಮಗಾರಿ ಮುಂದುವರೆಸಲಿ ಎರಡು ವರ್ಷದ ನಂತರ ಬಿಲ್ ಮಾಡುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಇದೇನಾ ಅಭಿವೃದ್ದಿ ಎಂದರೆ ಎಂದು ಟೀಕಿಸಿದರು.
ಕಲಬುರಗಿಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಅಭಿವೃದ್ದಿ ಮಾಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಕೊನೆ ಪಕ್ಷ ಇಲ್ಲಿನ ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ಭಾಷಣ ತಯಾರು ಮಾಡಿಕೊಳ್ಳಬೇಕಿತ್ತು. ನಿರಾಣಿ ಅವರು ಮಿಷನ್ 20/20 ಎನ್ನುತ್ತಾರೆ. 2019ರಲ್ಲಿ ಕೊರೆದ ಕೊಳವೆ ಬಾವಿಗಳ ಬಿಲ್ ಪಾವತಿಯಾಗಿಲ್ಲ ಇನ್ನೂ ಅಂತರಾಷ್ಟ್ರೀಯ ಮಟ್ಟದಲ್ಲಿ ಹೇಗೆ ಅಭಿವೃದ್ದಿ ಮಾಡುತ್ತಾರೆ ಎಂದು ಪ್ರಿಯಾಂಕ್ ಪ್ರಶ್ನಿಸಿದರು. ಇದನ್ನೂ ಓದಿ: ಎಸ್‍ಟಿ ಮೀಸಲಾತಿಯನ್ನು ಶೇ.6 ರಿಂದ ಶೇ.10ಕ್ಕೆ ಹೆಚ್ಚಿಸುತ್ತೇವೆ: ಕೆಸಿಆರ್
ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಜವಳಿ ಪಾರ್ಕ್ ಯೋಜನೆಯಲ್ಲಿ ಅವ್ಯವಹಾರವಾಗಿದೆ ಎಂದು ನಾನು ಹೇಳಿದರೆ ಪ್ರಿಯಾಂಕ್ ಖರ್ಗೆ ಬರೀ ಆರೋಪ ಮಾಡುತ್ತಾರೆ ಎನ್ನುತ್ತಾರೆ. ಹಾಗಾಗಿ ನಾನು ಲಿಖಿತ ಪ್ರಶ್ನೆ ಕೇಳಿದಾಗ ಇಲಾಖೆಯ ಉನ್ನತ ಅಧಿಕಾರಿಗಳು ಉತ್ತರಿಸಿ, ಈ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ತನಿಖೆ ನಡೆಯುತ್ತಿದೆ. ಇದರಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ತಯಾರಿಸಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ಇದರರ್ಥ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದಂತಲ್ಲವೇ ಎಂದರು.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಅಭಿವೃದ್ದಿ, ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ಕಾನೂನು ಬಾಹಿರವಾಗಿ ಕೆಕೆಆರ್‌ಡಿಬಿಯ ಅನುದಾನ ಬಿಡುಗಡೆ ಮಾಡಿರುವುದ ಕುರಿತು ನಾನು ಅಧಿವೇಶನದಲ್ಲಿ ಪ್ರಶ್ನೆ ಎತ್ತಿದಾಗ, ಕಾನೂನು ಸಚಿವರು ಹಾಗೆ ಮಾಡಲು ಬರುವುದಿಲ್ಲ. ಒಂದು ವೇಳೆ ಬಿಡುಗಡೆ ಮಾಡಿದ್ದರೆ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ನಂತರ, ತೋಟಗಾರಿಕೆ, ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರಾದ ಮುನಿರತ್ನ ಅವರು ಕೆಕೆಆರ್‌ಡಿಬಿಯಿಂದ ಸಂಘಕ್ಕೆ ಬಿಡುಗಡೆಯಾದ ಅನುದಾನದ ಬಳಕೆ ಹಾಗೂ ಮಾಡಿರುವ ಕಾಮಗಾರಿಗಳ ಕುರಿತು ಸ್ಥಳ ಪರಿಶೀಲನೆ ಮಾಡಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಆದೇಶ ಮಾಡಿರುತ್ತಾರೆ. ಆದರೆ, ತನಿಖೆ ಈಗ ನಿಂತಿದೆ. ಯಾರ ಒತ್ತಡದಿಂದಾಗಿ ತನಿಖೆ ನಡೆಯುತ್ತಿಲ್ಲ ಎನ್ನುವುದು ಗೊತ್ತಾಗಬೇಕು. ಇಷ್ಟಾದರೂ ಸಂಘದ ವಿರುದ್ದ ಯಾಕೆ ಕ್ರಮ ಜರುಗಿಸಿಲ್ಲ? ಇದನ್ನು ಗಮನಿಸಿದರೆ ಕಲಬುರಗಿಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಕೆಕೆಆರ್‌ಡಿಬಿಯ ಅನುದಾನ ದುರ್ಬಳಕೆಯಾಗುತ್ತಿದೆ. ಹಾಗಾಗಿ ಕೆಕೆಆರ್‌ಡಿಬಿಯನ್ನು ಸಿಸಿಆರ್‌ಡಿಬಿ ( Collection and Corruption Regional Development Board ) ಎಂದು ಮರುನಾಮಕರಣ ಮಾಡುವುದು ಉಚಿತ ಎಂದು ಕುಟುಕಿದರು.
ಸಿಎಂ ಇಲ್ಲಿಗೆ ಯಾಕೆ ಬಂದಿದ್ದು? ರಾಜ್ಯ ಸರ್ಕಾರದ ವ್ಯಾಪಕ ಭ್ರಷ್ಟಾಚಾರವನ್ನು ಕಲಬುರಗಿಯ ಜನರಿಗೆ ತಿಳಿಸುವುದಕ್ಕಾ? ಎಂದು ಖಾರವಾಗಿ ಹೇಳಿದ ಶಾಸಕರು, ರಾಜ್ಯ ಸರ್ಕಾರ ಖಾಲಿ ಹುದ್ದೆಗಳನ್ನು ತುಂಬುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಒಟ್ಟು 2,50,000 ಹುದ್ದೆಗಳು ಖಾಲಿ ಇದ್ದು, ಅವುಗಳಲ್ಲಿ 20,000 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿವೆ. ಇದಕ್ಕೆ ಉತ್ತರ ಕೊಡಿ ಎಂದರೆ ಮಾತು ಬದಲಿಸಿ ಕಾಂಗ್ರೆಸ್ ಕಾಲದಲ್ಲಿಯೂ ಭ್ರಷ್ಟಾಚಾರ ನಡೆದಿತ್ತು ಎಂದು ಹೇಳುತ್ತಾರೆ. ಭ್ರಷ್ಟಚಾರ ನಡೆದಿದ್ದರೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಹಾಕಿಸಿ ಎಂದು ಸಿಎಂಗೆ ಸವಾಲೊಡ್ಡಿದರು.
ಒತ್ತಾಯ: ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳನ್ನು ಈ ಕೂಡಲೇ ತುಂಬಬೇಕು. ಘೋಷಿತ ಅನುದಾನ 3,000 ಕೋಟಿ ರೂಪಾಯಿಯನ್ನು ಸಮರ್ಪಕವಾಗಿ ಹಾಗೂ ಕಾನೂನುಬದ್ಧವಾಗಿ ಕೆಕೆಆರ್‌ಡಿಬಿಗೆ ಬಿಡುಗಡೆ ಮಾಡಬೇಕು. ಸಂಘದ ಅಡಿಯಲ್ಲಿ ನಡೆದ ಅವ್ಯವಹಾರದ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ ಖರ್ಗೆ ಅವರು, ಇಷ್ಟನ್ನು ಮಾಡಿದರೆ ಬೊಮ್ಮಾಯಿಯವರಿಗೆ ನಿಜವಾಗಿ ಧಮ್ ಇದೆ ಅರ್ಥವಾಗುತ್ತದೆ ಎಂದರು. ಜೊತೆಗೆ ನೀವೇ ಘೋಷಿಸಿರುವಂತೆ 5,000 ಕೋಟಿ ರೂ. ಬಿಡುಗಡೆ ಮಾಡಿದರೆ ನಿಮ್ಮ ಫೋಟೋಗಳನ್ನು ನಾವೇ ಹಾಕಿಸುತ್ತೇವೆ ಎಂದು ಹೇಳಿದರು.
ಲೋಕಾಯುಕ್ತಕ್ಕೆ ದೂರು: ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಸಂಘದಲ್ಲಿ ನಡೆದ ಅವ್ಯವಹಾರದ ತನಿಖೆ ನಡೆಸುವುದಾಗಿ ಕಾನೂನು ಸಚಿವರು ಭರವಸೆ ನೀಡಿದ್ದಾರೆ. ಅವರ ಮೇಲೆ ನನಗೆ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ನಾವು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಿದ್ದೇವೆ ಎಂದರು.
ಅಪ್ಪುಗೌಡರು ಸಿಎಂ ಆಗಲಿ: ಕಲಬುರಗಿಯ ಅಪ್ಪನ ಕೆರೆಯನ್ನು ಒತ್ತುವರಿ ಮಾಡಿ ಮಹನೀಯರ ಪ್ರತಿಮೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಪ್ರಿಯಾಂಕ್ ಆರೋಪಿಸಿರುವುದಕ್ಕೆ ಪ್ರತಿಕ್ರಿಯಿಸಿದ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೆಯ ಪಾಟೀಲ ಅವರು ನನ್ನ ರಾಜಕೀಯ ಏಳಿಗೆ ಸಹಿಸದೇ ಪ್ರಿಯಾಂಕ್ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸಿದ ಪ್ರಿಯಾಂಕ್, ಅಪ್ಪುಗೌಡರು ಈಗ ಶಾಸಕರಿದ್ದಾರೆ, ಮುಂದೆ ಸಚಿವರಾಗಿ ಅಥವಾ ಸಿಎಂ ಆಗಲಿ ಅದು ನನಗೆ ವ್ಯತ್ಯಾಸ ತರದು. ನಾನೇಕೆ ಅವರ ರಾಜಕೀಯ ಏಳಿಗೆ ಸಹಿಸಲ್ಲ? ನಾನು ಕೆರೆ ಒತ್ತುವರಿ ಆಗಿದೆ ಎಂದಿರುವುದನ್ನು ಅವರೇಕೆ ವೈಯಕ್ತಿಕವಾಗಿ ತೆಗೆದುಕೊಳ್ಳಬೇಕು? ಕೆರೆ ಒತ್ತುವರಿ ಆಗಿಲ್ಲದಿದ್ದರೆ, ಜಿಲ್ಲಾಧಿಕಾರಿ ಯಾಕೆ ಕಾಮಗಾರಿಯನ್ನು ತಡೆಹಿಡಿದಿದ್ದಾರೆ. ಅಪ್ಪುಗೌಡರು ದಾಖಲೆಗಳನ್ನು ಡಿಸಿ ತೋರಿಸಲಿ. ನನಗೆ ಉತ್ತರಿಸುವುದೇ ಬೇಡ ನನ್ನ ಪ್ರಶ್ನೆಗಳು ಜನಸಮಾನ್ಯರ ಪ್ರಶ್ನೆಗಳು ಜನರಿಗೆ ಉತ್ತರ ನೀಡಲಿ ಎಂದು ತಿಳಿಸಿದರು.
ಡಿಕೆಶಿ ಅಭಿಪ್ರಾಯವೂ ಪ್ರಾಮುಖ್ಯ: ಕೆಲಸ ಮಾಡುವವರಿಗೆ ಮಾತ್ರ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹೇಳಿರುವುದಕ್ಕೆ ಕಾಂಗ್ರೆಸ್‍ನಲ್ಲಿಯೇ ಕೆಲವರು ವಿರೋಧಿಸಿದ್ದು ಟಿಕೆಟ್ ನೀಡುವುದು ವರಿಷ್ಠರು ಎಂದಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಶಾಸಕರು ಅಧ್ಯಕ್ಷರು ಕೂಡಾ ಆಂತರಿಕ ಸಮೀಕ್ಷೆ ನಡೆಸುತ್ತಿದ್ದಾರೆ ಅವರ ಅಭಿಪ್ರಾಯವೂ ಪ್ರಮುಖವಾಗುತ್ತದೆ ಎಂದರು. ಸುದ್ದಿಗೋಷ್ಠಿ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಸುಭಾಷ್ ರಾಠೋಡ, ಶಿವಾನಂದ ಪಾಟೀಲ, ಶಿವು ಹೊನಗುಂಟಿ, ಈರಣ್ಣ ಝಳಕಿ ಹಾಗೂ ಮತ್ತಿತರಿದ್ದರು.
Live Tv
[brid partner=56869869 player=32851 video=960834 autoplay=true]
ಕೊಪ್ಪಳ: ಕೆಕೆಆರ್‌ಡಿಬಿ ಅನುದಾನದಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆದ ನಂತರ ಕಾಮಗಾರಿ ವಿಳಂಬವಾದರೆ ಅನುಷ್ಠಾನ ಏಜೆನ್ಸಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಮಂಜೂರಾದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಗೆ ಕೆಕೆಆರ್‌ಡಿಬಿ ಇಂದ ಕಳೆದ 2-3 ವರ್ಷಗಳ ಹಿಂದೆ ಮಂಜೂರಾದ ಕಾಮಗಾರಿಗಳಲ್ಲಿ ಅನೇಕ ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ. ಆಡಳಿತಾತ್ಮಕ ಅನುಮೋದನೆ ಪಡೆದ ನಂತರವೂ ಕಾಮಗಾರಿ ಆರಂಭ ಮಾಡದೇ ಇರುವುದು ಅನುಷ್ಠಾನ ಏಜೆನ್ಸಿಗಳ ಇಚ್ಛಾಶಕ್ತಿ ಕೊರತೆಯನ್ನು ತೋರಿಸುತ್ತದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಕಾಮಗಾರಿಗಳನ್ನು ನಿಗದಿತ ಅನುಷ್ಠಾನ ಏಜೆನ್ಸಿಗಳಿಗೆ ಹಂಚಿಕೆ ಮಾಡಲಾಗಿದೆ. ಸಂಬಂಧಿಸಿದ ಇಲಾಖೆಗಳು ತಮ್ಮ ಇಲಾಖಾ ಕಾಮಗಾರಿಗಳನ್ನು ಏಜೆನ್ಸಿಗಳ ಮೂಲಕ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಹಾಗೂ ಅನುಷ್ಠಾನ ಏಜೆನ್ಸಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಸತ್ತಿರುವ ವಿಚಾರಕ್ಕೆ ಹೋರಾಟ ಮಾಡಿದ್ದು ಸಣ್ಣ ವಿಚಾರನಾ?: ಸಿದ್ದರಾಮಯ್ಯ ಕಿಡಿ
ಕಾಮಗಾರಿ ಅನುಷ್ಠಾನಕ್ಕೆ ಆಡಳಿತಾತ್ಮಕ ಅನುಮೋದನೆ ಪಡೆಯುವ ಮೊದಲೇ ಕಾಮಗಾರಿ ಅನುಷ್ಠಾನಕ್ಕೆ ಬರಬಹುದಾದ ತಾಂತ್ರಿಕ ಸಮಸ್ಯೆಗಳನ್ನು ಪರಿಶೀಲಿಸಿ, ಸೂಕ್ತ ಕ್ರಿಯಾ ಯೋಜನೆಯೊಂದಿಗೆ ಕಾಮಗಾರಿ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಬಹುತೇಕ ಎಲ್ಲ ತಾಲೂಕುಗಳಲ್ಲಿ ಕಾಮಗಾರಿಗಳು ಆರಂಭವಾಗಿಲ್ಲ ಮತ್ತು ಬಹಳಷ್ಟು ಕಾಮಗಾರಿಗಳು ಪೂರ್ಣಗೊಂಡಿಲ್ಲ. ಒಂದು ಕಾಮಗಾರಿಯನ್ನು ಪೂರ್ಣಗೊಳಿಸಲು ನಿಗದಿತ ಗಡುವನ್ನು ನೀಡಲಾಗಿರುತ್ತದೆ. ಆ ನಂತರವೂ ಹಲವಾರು ವರ್ಷಗಳ ಕಾಲ ಒಂದೇ ಕಾಮಗಾರಿಗೆ ಸಮಯವನ್ನು ಮೀಸಲಿರಿಸಿದರೆ ಜಿಲ್ಲೆಯ ಉಳಿದ ಭಾಗಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳ್ಳುವುದು ಯಾವಾಗ ಎಂದು ಅವರು ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿದರು.
ಪ್ರಸಕ್ತ ಸಾಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಕೆಕೆಆರ್‌ಡಿಬಿಗೆ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಬೇಕಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲ ಕ್ಷೇತ್ರಗಳ ಶಾಸಕರು ತಮ್ಮ ಕ್ಷೇತ್ರದಲ್ಲಿ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಪ್ರಸ್ತಾವನೆ ಸಲ್ಲಿಸಿದಲ್ಲಿ, ಅವುಗಳನ್ನು ಕ್ರೋಢೀಕರಿಸಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿ ಪಡೆಯ ಬಹುದು. ಆದ್ದರಿಂದ ಎರಡು ದಿನಗಳಲ್ಲಿ ಎಲ್ಲ ಶಾಸಕರು ತಮ್ಮ ಕ್ಷೇತ್ರದ ಕಾಮಗಾರಿಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಎಂದು ಶಾಸಕರಿಗೆ ತಿಳಿಸಿದರು. ಇದನ್ನೂ ಓದಿ: ಸಂತೋಷ್ ಪಾಟೀಲ್ ಪತ್ನಿಗೆ 11 ಲಕ್ಷ ರೂ. ಚೆಕ್ ವಿತರಿಸಿದ ಡಿಕೆಶಿ
ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರು ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕರಾದ ಹಾಲಪ್ಪ ಆಚಾರ್ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಶಾಸಕರಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಸಂಬಂಧಿಸಿದ ಅಧಿಕಾರಿಗಳು ಹಾಗೂ ಅನುಷ್ಠಾನ ಏಜೆನ್ಸಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡುವುದರ ಮೂಲಕ ಕಾಮಗಾರಿಗಳನ್ನು ಪೂರ್ಣಗೊಳಿಸಲು ಶಾಸಕರು ಆಗಾಗ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸುವುದು ಮುಖ್ಯವಾಗುತ್ತದೆ. ಅದರಂತೆ ನಾವೆಲ್ಲರೂ ನಮ್ಮ ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವ ಕಾಮಗಾರಿಗಳ ಬಗ್ಗೆ ಕೆಕೆಆರ್‌ಡಿಬಿಗೆ ಪ್ರಸ್ತಾವನೆ ಸಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಕ್ರಮ ವಹಿಸಬೇಕಿದೆ ಎಂದು ಹೇಳಿದರು.