Tag: ಕೆಜಿಎಫ್ ರಿಲೀಸ್

  • ರಾಕಿಂಗ್ ಸ್ಟಾರ್ ಯಶ್‍ಗೆ ತಮಿಳು ನಟ ವಿಶಾಲ್ ಸಾಥ್!

    ರಾಕಿಂಗ್ ಸ್ಟಾರ್ ಯಶ್‍ಗೆ ತಮಿಳು ನಟ ವಿಶಾಲ್ ಸಾಥ್!

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹು ನಿರೀಕ್ಷಿತ ಚಿತ್ರ ಕೆಜಿಎಫ್. ಈಗಾಗಲೇ ತಮಿಳು ಮತ್ತು ತೆಲುಗು ಭಾಷೆಗಳಲ್ಲಿಯೂ ಯಶ್ ಅವರಿಗೆ ಅಭಿಮಾನಿ ಸಮೂಹವೊಂದು ಹುಟ್ಟಿಕೊಂಡಿದೆ. ಅವರಿಗಾಗಿಯೇ ಕೆಜಿಎಫ್ ಚಿತ್ರ ತಮಿಳು, ತೆಲುಗಿನಲ್ಲಿಯೂ ಬಿಡುಗಡೆಯಾಗಲಿದೆ. ಇದೀಗ ತಮಿಳು ವರ್ಷನ್ನಿನ ಕೆಜಿಎಫ್ ಟ್ರೈಲರ್ ಬಿಡುಗಡೆ ಮಾಡಿ ಅದೇ ಸಂದರ್ಭದಲ್ಲಿ ರಿಲೀಸಿಂಗ್ ಡೇಟ್ ಅನೌನ್ಸ್ ಮಾಡಲು ತಮಿಳು ಸ್ಟಾರ್ ವಿಶಾಲ್ ರೆಡಿಯಾಗಿದ್ದಾರೆ.

    ಇಂದು ಸಂಜೆ 6 ಘಂಟೆಗೆ ವಿಶಾಲ್ ತಮ್ಮ ಟ್ವಿಟರ್ ಖಾತೆಯ ಮೂಲಕ ಕೆಜಿಎಫ್ ಟ್ರೈಲರನ್ನು ತಮಿಳುನಾಡಿನಲ್ಲಿ ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಮಿಳು ಕೆಜಿಎಫ್ ಬಿಡುಗಡೆಯಾಗೋ ದಿನಾಂಕವನ್ನೂ ಘೋಷಿಸಲಿದ್ದಾರೆ.

    ಕನ್ನಡ ಮಾತ್ರವಲ್ಲದೆ ಬೇರೆ ಭಾಷೆಗಳಲ್ಲಿಯೂ ಕೆಜಿಎಫ್ ಚಿತ್ರದ ಬಗೆಗೊಂದು ಕುತೂಹಲ ನೆಲೆಗೊಂಡಿದೆ. ಸುದೀರ್ಘವಾಗಿ ಎರಡು ವರ್ಷಗಳ ಕಾಲ ನಿರಂತರವಾಗಿ ಚಿತ್ರೀಕರಣ ನಡೆಸಿಕೊಂಡಿರೋ ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್ ಆಗುತ್ತೆ ಎಂಬ ನಿರೀಕ್ಷೆಯೂ ಇದೆ. ಈ ಚಿತ್ರ ಜಪಾನ್ ಹಾಗೂ ಚೈನೀಸ್ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆಯಂತೆ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊನೆಗೂ ಕೆಜಿಎಫ್ ರಿಲೀಸ್‍ಗೆ ಮುಹೂರ್ತ ಫಿಕ್ಸ್

    ಕೊನೆಗೂ ಕೆಜಿಎಫ್ ರಿಲೀಸ್‍ಗೆ ಮುಹೂರ್ತ ಫಿಕ್ಸ್

    ಬೆಂಗಳೂರು: ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಷ್ ಆಗಿದ್ದು, ನವಂಬರ್ ತಿಂಗಳಲ್ಲಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

    ಇತ್ತೀಚೆಗೆ ಯಶ್ ಯಾವುದೇ ಕಾರ್ಯಕ್ರದಲ್ಲಿ ಸಿಕ್ಕರು ಅಭಿಮಾನಿಗಳು ಕೆಜಿಎಫ್ ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕೇಳುತ್ತಿದ್ದರು. ಅಷ್ಟೇ ಅಲ್ಲದೆ ಅಭಿಮಾನಿಗಳು ಟ್ವಿಟ್ಟರ್ ಮತ್ತು ಫೇಸ್‍ಬುಕ್ ಮೂಲಕ ಯಶ್ ಮತ್ತು ರಾಧಿಕಾ ಇಬ್ಬರಿಗೂ ‘ಕೆಜಿಎಫ್’ ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಮೆಂಟ್ ಮೂಲಕ ಕೇಳುತ್ತಿದ್ದರು. ಈಗ ಅವರೆಲ್ಲರಿಗೂ ಯಶ್ ‘ಕೆಜಿಎಫ್’ ಸಿನಿಮಾ ಬಿಡುಗಡೆಯ ದಿನಾಂಕದ ಮೂಲಕ ಖುಷಿ ಸುದ್ದಿಯನ್ನು ನೀಡಿದ್ದಾರೆ.

    ಈ ಹಿಂದೆ ಅಭಿಮಾನಿಯೊಬ್ಬರು ‘ಕೆಜಿಎಫ್’ ಸಿನಿಮಾದ ಟ್ರೈಲರ್ ಯಾವಾಗ ಎಂದು ಕೇಳಿದ್ದರು. ಅಭಿಮಾನಿಗೆ ಉತ್ತರಿಸಿದ್ದ ಯಶ್ ಅವರು ಅಕ್ಟೋಬರ್ ಗೆ ಸಿನಿಮಾದ ಟ್ರೈಲರ್ ರಿಲೀಸ್ ಆಗುತ್ತದೆ ಎಂದು ಹೇಳಿದ್ದರು. ಈಗ ನವೆಂಬರ್ 16 ಕ್ಕೆ ‘ಕೆಜಿಎಫ್’ ಸಿನಿಮಾ ಥಿಯೇಟರ್ ಗಳಲ್ಲಿ ಧೂಳೆಬ್ಬಿಸಲು ಸಿದ್ಧವಾಗಿದೆ.

    ಇಂದು ಸಂಜೆ 6 ಘಂಟೆಗೆ ತಮಿಳು ಸ್ಟಾರ್ ವಿಶಾಲ್ ತಮ್ಮ ಟ್ವಿಟರ್ ಖಾತೆಯ ಮೂಲಕ ಕೆಜಿಎಫ್ ಟ್ರೈಲರನ್ನು ತಮಿಳುನಾಡಿನಲ್ಲಿ ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಮಿಳು ಕೆಜಿಎಫ್ ಬಿಡುಗಡೆಯಾಗೋ ದಿನಾಂಕವನ್ನೂ ಘೋಷಿಸಲಿದ್ದಾರೆ.

    ಕನ್ನಡ ಮಾತ್ರವಲ್ಲದೆ ಬೇರೆ ಭಾಷೆಗಳಲ್ಲಿಯೂ ಕೆಜಿಎಫ್ ಚಿತ್ರದ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ. ಸುದೀರ್ಘವಾಗಿ ಎರಡು ವರ್ಷಗಳ ಕಾಲ ನಿರಂತರವಾಗಿ ಚಿತ್ರೀಕರಣ ನಡೆಸಿಕೊಂಡಿರುವ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗುತ್ತೆ ಎಂಬ ನಿರೀಕ್ಷೆಯೂ ಇದೆ.

    ಸದ್ಯ ಈ ಚಿತ್ರವನ್ನು `ಉಗ್ರಂ’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದು, ಹೊಂಬಾಳೆ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗಿದೆ. ಇದೇ ಮೊದಲ ಬಾರಿಗೆ ಈ ಸಿನಿಮಾದಲ್ಲಿ ಯಶ್ ಜೊತೆ ಶ್ರೀ ನಿಧಿ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಐಟಂ ಹಾಡಿಗೆ ಯಶ್ ಜೊತೆ ಮಿಲ್ಕಿ ಬ್ಯೂಟಿ ಕ್ವೀನ್ ತಮನ್ನಾ ಭಾಟಿಯಾ ಅವರು ಹೆಜ್ಜೆ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv