ಯಶ್ ನಟನೆಯ ಕೆಜಿಎಫ್ ಸಿನಿಮಾದಲ್ಲಿ ಪುಟ್ಟ ಪಾತ್ರವಾದರೂ, ಜನರು ಗುರುತಿಸುವಂತಹ ನಟನೆ ಮಾಡಿದ್ದ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ. ಉಸಿರಾಟದ ತೊಂದರೆ ಕಾರಣದಿಂದಾಗಿ ಮೊನ್ನೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ತೀವ್ರ ಉಸಿರಾಟದ ತೊಂದರೆಯಿಂದಾಗಿ ಐದು ದಿನಗಳ ಹಿಂದೆಯಷ್ಟೇ ಅವರನ್ನು ಬೆಂಗಳೂರಿನ ಸೀತಾ ಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐದು ದಿನಗಳಿಂದ ವೈದ್ಯರು ಕೂಡ ಸತತ ಪ್ರಯತ್ನದಲ್ಲಿದ್ದರು. ಇಂದು (ಡಿ.7) ಚಿಕಿತ್ಸೆ ಫಲಿಸದೇ ಕೃಷ್ಣ ಅವರು ಬಾರದ ಲೋಕಕ್ಕೆ ಹೋಗಿದ್ದಾರೆ. ಇದನ್ನೂ ಓದಿ: ನಟಿ ಅಶು ರೆಡ್ಡಿ ಕಾಲು ಹಿಡಿದ ರಾಮ್ ಗೋಪಾಲ್ ವರ್ಮಾ: ನೆಟ್ಟಿಗರು ಶಾಕ್
ಕೃಷ್ಣ ಜಿ ರಾವ್ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದರೂ, ಕೆಜಿಎಫ್ ತಾತಾ ಎಂದೇ ಫೇಮಸ್ ಆಗಿದ್ದರು. ಶಂಕರ್ ನಾಗ್ ಕಾಲದಿಂದಲೂ ಇವರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವಾರು ಚಿತ್ರಗಳಲ್ಲಿ ಇವರು ನಟಿಸಿದ್ದರೂ, ಜನರು ಗುರುತಿಸುವಂತೆ ಮಾಡಿದ್ದು ಕೆಜಿಎಫ್ ಎನ್ನುವುದು ವಿಶೇಷ. ಈ ಸಿನಿಮಾದ ನಂತರ ಅವರು ಅನೇಕ ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಇವರ ಮುಖ್ಯ ಭೂಮಿಕೆಯ ಸಿನಿಮಾವೊಂದು ಬಿಡುಗಡೆಗೂ ಸಿದ್ಧವಾಗಿದೆ.
Live Tv
[brid partner=56869869 player=32851 video=960834 autoplay=true]
ಕೋಲಾರ: 22 ವರ್ಷಗಳ ನಂತರ ವಿಶ್ವ ಪ್ರಸಿದ್ಧ ಕೆಜಿಎಫ್ (KGF) ಚಿನ್ನದ (Gold) ಗಣಿಯಲ್ಲಿ ಮತ್ತೆ ಚಿನ್ನ ಹೊಳೆಯುವ ಸಾಧ್ಯತೆ ಗೋಚರವಾಗುತ್ತಿದೆ. ಕೆಜಿಎಫ್‍ನಲ್ಲಿ ಚಿನ್ನ ತೆಗೆಯಲು ಮನಸ್ಸು ಮಾಡಿರುವ ಕೇಂದ್ರ ಸರ್ಕಾರ ಎರಡು ದಶಕಗಳ ನಂತರ ಕೆಜಿಎಫ್ ಚಿನ್ನದ ಗಣಿಯ ಬಗ್ಗೆ ಆಸಕ್ತಿ ವಹಿಸಿರುವುದು ಸಂತಸ ತಂದಿದೆ. ಆದ್ರೆ ಸರ್ಕಾರ ಕಾರ್ಮಿಕರ ಹಿತಾಸಕ್ತಿ ಮರೆತಿದ್ದು ಬೇಸರ ಮೂಡಿಸಿದೆ.
ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಹೆಗ್ಗಳಿಗೆ ಕೋಲಾರದ ಕೆಜಿಎಫ್ ಚಿನ್ನದ ಗಣಿಗೆ ಸಲ್ಲುತ್ತದೆ. ಆದರೆ 2001ರಲ್ಲಿ ಚಿನ್ನದ ಗಣಿಗೆ ಬೀಗ ಹಾಕಿದ ನಂತರ, ಕೇಂದ್ರ ಸರ್ಕಾರ ಕೆಜಿಎಫ್ ಚಿನ್ನದ ಗಣಿಯನ್ನು ಇಲ್ಲಿನ ಕಾರ್ಮಿಕರನ್ನು ಅವರ ಸಂಕಷ್ಟಗಳು ಎಲ್ಲವನ್ನೂ ಮರೆತು ಹೋಗಿತ್ತು. ಚಿನ್ನದ ಗಣಿಗೆ ಬೀಗ ಹಾಕಿದ್ದ ಸರ್ಕಾರ ಕೆಲಸ ಕಳೆದುಕೊಂಡ ಕಾರ್ಮಿಕರಿಗೆ ಯಾವುದೇ ಪರಿಹಾರ ನೀಡದೇ, ನಿವೃತ್ತಿ ಪರಿಹಾರವನ್ನೂ ನೀಡಿರಲಿಲ್ಲ. ಸುಮಾರು 3,500 ಜನ ಕಾರ್ಮಿಕರಿಗೆ 52 ಕೋಟಿ ರೂಪಾಯಿ ಪರಿಹಾರ ನೀಡಬೇಕಿತ್ತು. ಯಾವುದನ್ನೂ ನೀಡದೆ ಚಿನ್ನದ ಗಣಿಗೆ ಬೀಗ ಹಾಕಿ ಸುಮ್ಮನಾಗಿತ್ತು. ಅತ್ತ ಕಾರ್ಮಿಕ ಸಂಘಟನೆಗಳು ಹತ್ತಾರು ವರ್ಷಕಾಲ ನ್ಯಾಯಕ್ಕಾಗಿ ಸರ್ಕಾರಗಳ ಬಳಿ, ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಲೇ ಇದ್ದಾರೆ. ಇನ್ನು ಕಾರ್ಮಿಕರಿಗೆ ಪರಿಹಾರ ಸಿಕ್ಕಿಲ್ಲ. ಇದನ್ನೂ ಓದಿ: ತುರಹಳ್ಳಿ ಫಾರೆಸ್ಟ್‌ನಲ್ಲಿ ಆಪರೇಷನ್ ಚಿರತೆ- ಬೆಂಗ್ಳೂರಿನಲ್ಲೂ `ರುದ್ರಪ್ರಯಾಗ’ದ ಥ್ರಿಲ್ಲರ್ ಸ್ಟೋರಿ
ಏಕಾಏಕಿ ಸರ್ಕಾರ ಈಗ ಕೆಜಿಎಫ್‍ನಲ್ಲಿ ಇರುವ ಚಿನ್ನವನ್ನು ತೆಗೆದ ನಂತರ ಹೊರ ಹಾಕಿರುವ ಮಣ್ಣಿನಲ್ಲಿ ಅಂದರೆ ಕೆಜಿಎಫ್‍ನಲ್ಲಿರುವ 13 ಸೈನೈಡ್ ಗುಡ್ಡಗಳಲ್ಲಿ ಚಿನ್ನವನ್ನು ಮತ್ತೊಮ್ಮೆ ಶೋಧಿಸುವ ಕೆಲಸಕ್ಕೆ ಟೆಂಡರ್ ಕರೆದಿದೆ. ಕೆಜಿಎಫ್ ನಗರದ ಸುತ್ತಮುತ್ತ 13 ಸೈನೈಡ್ ಗುಡ್ಡಗಳಿದ್ದು ಅದರಲ್ಲಿ ಸುಮಾರು 35 ಲಕ್ಷ ಮಿಲಿಯನ್ ಟನ್ ಮಣ್ಣಿದೆ. ಸಂಶೋಧನೆಗಳ ಪ್ರಕಾರ ಒಂದು ಟನ್ ಮಣ್ಣಿನಲ್ಲಿ ಸರಾಸರಿ ಒಂದು ಗ್ರಾಮ್ ಚಿನ್ನ ಸಿಗುತ್ತದೆ. ಅದರಂತೆ 25 ಟನ್ ಚಿನ್ನ ಸಿಗುವ ನಿರೀಕ್ಷೆ ಇದೆ. ಸದ್ಯ ಆ ಮಣ್ಣಿನಲ್ಲಿ ಚಿನ್ನವನ್ನು ಹೊರತೆಗೆಯುವ ಕೆಲಸ ಆರಂಭಿಸಿದ್ದು ಮೊದಲ ಹಂತದ ಟೆಂಡರ್ ಪ್ರಕ್ರಿಯೆ ಶುರುಮಾಡಿದೆ. ಇದನ್ನೂ ಓದಿ: ಇಕ್ಬಾಲ್ ಅನ್ಸಾರಿ ಹನುಮ ಮಾಲಾಧಾರಿಗಳಿಗೆ ಸ್ವಾಗತ ಕೋರಿ ಬ್ಯಾನರ್ – ಶ್ರೀರಾಮಸೇನೆ ಆಕ್ಷೇಪ
22 ವರ್ಷಗಳ ಹಿಂದೆ ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಕೆಲಸ ಕಳೆದುಕೊಂಡ ನಂತರ ಸಾವಿರಾರು ಕಾರ್ಮಿಕರು ಕೆಲಸವಿಲ್ಲದೆ ಬೀದಿಗೆ ಬಿದ್ದರು. ಕಾರ್ಮಿಕರ ಕುಟುಂಬಗಳು ಬೀದಿಗೆ ಬಿದ್ದ ಪರಿಸ್ಥಿತಿಯಲ್ಲಿ ಸರ್ಕಾರ ಕಾರ್ಮಿಕರಿಗೆ ಯಾವುದೇ ರೀತಿಯ ಪರಿಹಾರ ರೂಪಿಸಲಿಲ್ಲ. ಕೊನೆ ಪಕ್ಷ ಕಾರ್ಮಿಕರಿಗೆ ಆರೋಗ್ಯ, ಶಿಕ್ಷಣ, ಉದ್ಯೋಗ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಲಿಲ್ಲ. ಚಿನ್ನದ ಗಣಿಗೆ ಬೀಗ ಹಾಕಿದ ನಂತರ ಕೆಜಿಎಫ್‍ನ್ನು ಮರೆತೇ ಹೋಗಿತ್ತು. ಆದರೆ ಈಗ ಜಾಗತಿಕ ಮಟ್ಟದಲ್ಲಿ ಚಿನ್ನಕ್ಕೆ ಹೆಚ್ಚಿನ ಬೇಡಿಕೆ ಇರುವ ಕಾರಣದಿಂದಾಗಿ ಕೇಂದ್ರ ಸರ್ಕಾರ ಇಷ್ಟು ದಿನ ಕಾರ್ಮಿಕರ ಹಿತಾಸಕ್ತಿಯನ್ನು ಕಡೆಗಣಿಸಿ ಈಗ ಏಕಾಏಕಿ ಚಿನ್ನಕ್ಕಾಗಿ ಕೆಜಿಎಫ್ ಮೇಲೆ ಪ್ರೀತಿ ತೋರಿಸುವ ನಾಟಕ ಆಡುತ್ತಿದೆ ಎಂದು ಕೆಜಿಎಫ್ ಶಾಸಕಿ ರೂಪಕಲಾ ಆರೋಪಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕಾಂಗ್ರೆಸ್(Congress) ವಿರುದ್ಧ ಎಂಆರ್‌ಟಿ ಮ್ಯೂಸಿಕ್(MRT Music) ನ್ಯಾಯಾಂಗ ನಿಂದನೆ(Contempt of Court ) ಅರ್ಜಿ ಸಲ್ಲಿಸಿದ್ದು ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ಹೈಕೋರ್ಟ್‌ನಲ್ಲಿ(High Court) ನಡೆದ ವಿಚಾರಣೆ ವೇಳೆ ಕೆಜಿಎಫ್ ಚಾಪ್ಟರ್ 2(KGF 2) ಸಿನಿಮಾದ ಹಾಡು ತೆಗೆಯುತ್ತೇವೆಂದು ಕಾಂಗ್ರೆಸ್ ಮುಚ್ಚಳಿಕೆ ನೀಡಿತ್ತು. ಆದರೆ ಈ ಹಾಡನ್ನು ಇನ್ನೂ ತೆಗೆದಿಲ್ಲ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ದ್ವಿಸದಸ್ಯ ಪೀಠ ರಾಹುಲ್ ಗಾಂಧಿ (Rahul Gandhi), ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ (Supriya) ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್(Jairam Ramesh) ಅವರಿಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿಯ ಮುಂದಿನ ವಿಚಾರಣೆ ಜನವರಿ 12ಕ್ಕೆ ನಡೆಯಲಿದೆ.
ಏನಿದು ಪ್ರಕರಣ?:
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಸ್ಥೆಯ ಅನುಮತಿ ಇಲ್ಲದೇ ಕೆಜಿಎಫ್ ಹಾಡನ್ನು ಭಾರತ್ ಜೋಡೋ ಯಾತ್ರೆಯಲ್ಲಿ ಬಳಸಿದೆ. ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿರುವ ಎಂಆರ್‌ಟಿ ಸಂಸ್ಥೆಯು ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ, ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ವಿರುದ್ಧ ದೂರು ದಾಖಲಿಸಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿತ್ತು.
ಕೆಜಿಎಫ್ ಹಾಡನ್ನು ಕಾಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಾದ ಟ್ಟಿಟ್ಟರ್, ಯೂಟ್ಯೂಬ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಳಸಲಾಗಿದೆ. ನಮ್ಮ ಸಂಸ್ಥೆಯ ಅನುಮತಿ ಪಡೆಯದೇ ಕಾಪಿರೈಟ್ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಸ್ಥೆ ಬಳಿಕ ಕೋರ್ಟ್ ಮೊರೆ ಹೋಗಿತ್ತು. ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಯಾತ್ರೆಯ ಖಾತೆಯನ್ನು ತಾತ್ಕಾಲಿಕವಾಗಿ ಅಮಾನತು ಮಾಡುವಂತೆ ಟ್ವಿಟ್ಟರ್ ಕಂಪನಿಗೆ ಬೆಂಗಳೂರು ನಗರ ಜಿಲ್ಲಾ ವಾಣಿಜ್ಯ ಕೋರ್ಟ್ ಆದೇಶಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ನ.8 ರಂದು ನ್ಯಾ. ಜಿ. ನರೇಂದರ್ ಮತ್ತು ನ್ಯಾ.ಪಿಎನ್ ದೇಸಾಯಿ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆದ ಅರ್ಜಿಯ ವಿಚಾರಣೆ ವೇಳೆ ಕಾಂಗ್ರೆಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ನಮ್ಮ ಪ್ರತಿವಾದಿಗಳು ಸಂಪೂರ್ಣ ಟ್ವಿಟ್ಟರ್ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಆದರೆ 45 ಸೆಕೆಂಡಿನ ಆಡಿಯೋದಲ್ಲಿ ಮಾತ್ರ ಮ್ಯೂಸಿಕ್ ಬಳಕೆ ಮಾಡಲಾಗಿದೆ. ಮ್ಯೂಸಿಕ್ ಬಳಸಿ ನಾವು ತಪ್ಪು ಮಾಡಿದ್ದೇವೆ. ಕೆಜಿಎಫ್ ಮ್ಯೂಸಿಕ್ ಎಲ್ಲೆಲ್ಲಿ ಬಳಕೆ ಮಾಡಲಾಗಿದೆಯೋ ಅವೆಲ್ಲವನ್ನು ತೆಗೆದು ಹಾಕುತ್ತೇವೆ ಎಂದು ಮನವಿ ಮಾಡಿದ್ದರು.
ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಕೆಜಿಎಫ್ ಹಾಡನ್ನು ಬಳಕೆ ಮಾಡಿದ್ದ ಟ್ವೀಟ್‌ಗಳನ್ನು(Tweet) ತೆಗೆದು ಹಾಕಬೇಕೆಂದು ಹೈಕೋರ್ಟ್ ಕಾಂಗ್ರೆಸ್‌ಗೆ ಆದೇಶ ನೀಡಿ ಕೆಳ ನ್ಯಾಯಾಲಯ ನೀಡಿದ ಆದೇಶವನ್ನು ರದ್ದುಗೊಳಿಸಿತ್ತು.
ದೂರುದಾರರು ಸಂಪೂರ್ಣ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಇಲ್ಲಿ ಪ್ರತಿವಾದಿಯವರಿಗೆ ರಾಜಕೀಯ ಕುಮ್ಮಕ್ಕು ಇದೆಯೇ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ. ನಾವು ತಪ್ಪು ಮಾಡಿದ್ದೇವೆ. ಆದರೆ ಇದರಲ್ಲಿ ಯಾವುದೇ ವಾಣಿಜ್ಯ ಉದ್ದೇಶ ಇಲ್ಲ. ನಮ್ಮ ಅಭಿಪ್ರಾಯವನ್ನು ಆಲಿಸದೇ ಕೆಳ ನ್ಯಾಯಾಲಯ ಈ ರೀತಿಯ ಆದೇಶ ನೀಡಿದ್ದು ಎಷ್ಟು ಸರಿ? ದೇಶದ ದೊಡ್ಡ ರಾಜಕೀಯ ಪಕ್ಷದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವ್ಯಕ್ತಪಡಿಸುವ ಸಾಮಾಜಿಕ ಮಾಧ್ಯಮ ಧಮನಿಸುವುದಕ್ಕೆ ಕೋರ್ಟ್ ಅನುಮತಿ ನೀಡಬಾರದು ಎಂದು ಸಿಂಘ್ವಿ ಮನವಿ ಮಾಡಿದ್ದರು.
ಈ ವೇಳೆ ಎಂಆರ್‌ಟಿ ಸ್ಟುಡಿಯೋ ಪರ ವಕೀಲರಿಗೆ, ಈ ಪ್ರಕರಣದಲ್ಲಿ ಕಾಂಗ್ರೆಸ್ ಟ್ವಿಟ್ಟರ್ ಖಾತೆಯನ್ನು ತನಿಖೆ ಯಾಕೆ ಮಾಡಬೇಕು? ಆಯುಕ್ತರನ್ನು ಯಾಕೆ ನೇಮಿಸಬೇಕು? ಅವರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ತಪ್ಪನ್ನು ಒಪ್ಪಿಕೊಂಡ ಮೇಲೆ ತನಿಖೆ ಯಾಕೆ ಎಂದು ಪ್ರಶ್ನಿಸಿತು.
ಅಭಿಷೇಕ್ ಮನು ಸಿಂಘ್ವಿ, ನ.9ರ ಮಧ್ಯಾಹ್ನ 2 ಗಂಟೆಯ ಒಳಗಡೆ ಎಲ್ಲೆಲ್ಲಿ ಮ್ಯೂಸಿಕ್ ಬಳಕೆ ಮಾಡಿದ್ದೇವೋ ಅವುಗಳನ್ನು ತೆಗೆದು ಹಾಕುತ್ತೇವೆ. ಅರ್ಜಿದಾರ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಗೆ ದಾಖಲೆ ನೀಡುತ್ತೇವೆ ಎಂದು ತಿಳಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಕಾಪಿರೈಟ್ ಉಲ್ಲಂಘನೆ ಮಾಡಿದ ಎಲ್ಲಾ ಟ್ವೀಟ್‌ಗಳನ್ನು ತೆಗೆದು ಹಾಕುವಂತೆ ಆದೇಶಿಸಿತ್ತು.
Live Tv
[brid partner=56869869 player=32851 video=960834 autoplay=true]
ಚಿತ್ರರಂಗದಲ್ಲಿ ದಾಖಲೆ ಬರೆದ ಸಿನಿಮಾ `ಕೆಜಿಎಫ್’ನಲ್ಲಿ(Kgf) ತಾತ ಪಾತ್ರ ಮಾಡಿದ್ದ ಕೃಷ್ಣ ಜಿ.ರಾವ್ (Krishna G. Rao) ಏಕಾಏಕಿ ಅನಾರೋಗ್ಯ ಉಂಟಾಗಿದೆ. ಕೆಜಿಎಫ್ ಚಾಪ್ಟರ್ ಒನ್ ಮತ್ತು ಕೆಜಿಎಫ್ ಚಾಪ್ಟರ್ 2ನಲ್ಲಿ ನಟಿಸಿದ್ದ ತಾತನ ಆರೋಗ್ಯ ಏರುಪೇರಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಟ ಕೃಷ್ಣ ಜಿ. ರಾವ್ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದೆ. ಯಶ್ (Yash) ನಟನೆಯ ಕೆಜಿಎಫ್‌ನಲ್ಲಿ (Kgf) ವೃದ್ಧನ ಪಾತ್ರ ಮಾಡಿ ಅಪಾರ ಜನಪ್ರಿಯತೆ ಗಳಿಸಿದ್ದ ಕೃಷ್ಣ ಅವರಿಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ: ತಾಂಬೂಲ ಬದಲಿಸಿಕೊಂಡ ಕುಟುಂಬ
ಆದಷ್ಟು ಬೇಗ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾದ ಎರಡು ಚಿತ್ರಗಳು ರಾಷ್ಟ್ರ ಮಟ್ಟದಲ್ಲಿ ಸಾಕಷ್ಟು ಸುದ್ದಿ ಮಾಡಿದ ವಿಚಾರ ಹಳೆಯದು. ಪ್ರಶಾಂತ್ ನೀಲ್ ನಿರ್ದೇಶನ ಮಾಡಿ, ಯಶ್ ನಟಿಸಿರುವ ‘ಕೆಜಿಎಫ್’ ಸಿನಿಮಾ ದಾಖಲೆ ರೀತಿಯಲ್ಲಿ ಪ್ರದರ್ಶನ ಕಂಡಿತು. ಸಾವಿರಾರು ಕೋಟಿ ಹಣವನ್ನು ಮಾಡಿತು. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ ಕಾಂತಾರ ಚಿತ್ರ ಕೂಡ ಕೆಜಿಎಫ್ ಮಾಡಿದ ಹಲವು ದಾಖಲೆಗಳನ್ನು ಪುಡಿ ಪುಡಿ ಮಾಡಿ, ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಈ ಎರಡೂ ಚಿತ್ರಗಳು ಮಾಡಿರುವ ಕ್ರೇಜ್ ಅಷ್ಟಿಷ್ಟಲ್ಲ. ಕೆಜಿಎಫ್ ಸಿನಿಮಾದಲ್ಲಿ ಬಳಕೆಯಾದ ಹಲವು ವಸ್ತುಗಳು ಹರಾಜಾದವು. ಕೆಜಿಎಫ್ ನಲ್ಲಿ ಯಶ್ ಬಳಸಿದ್ದ ಬೈಕ್ ಟ್ರೆಂಡ್ ಆಯಿತು. ಅವರ ಹೇರ್ ಸ್ಟೈಲ್ ಅನ್ನು ಕೂಡ ಹಲವರು ಕಾಪಿ ಮಾಡಿದರು. ರಿಷಬ್ ಶೆಟ್ಟಿಯ ಕಾಂತಾರ ಬಂದ ಮೇಲೂ ಕಾಂತಾರ ಅನುಕರಣೆಯನ್ನು ಮಾಡಿದವರು ಇದ್ದಾರೆ. ಈ ಸಿನಿಮಾದ ಕೆಲವು ಡೈಲಾಗ್ ಕೂಡ ಟ್ರೋಲ್ ಆದವು. ಇದೀಗ ಈ ಎರಡೂ ಸಿನಿಮಾಗಳ ಹೆಸರಿನಲ್ಲಿ ಹೋಟೆಲ್ ಶುರುವಾಗುತ್ತಿವೆ. ಇದನ್ನೂ ಓದಿ:ಕೇಕ್ ಕತ್ತರಿಸಿ ಸಕ್ಸಸ್ ಆಚರಿಸಿದ ʻಗಂಧದ ಗುಡಿʼ ಟೀಮ್
ಈಗಾಗಲೇ ಕೆಜಿಎಫ್ ಹೆಸರಿನಲ್ಲಿ ಬೆಂಗಳೂರಿನ ಸಹಕಾರ ನಗರದ ಕೊಡಿಗೆಹಳ್ಳಿ ಗೇಟ್ ಬಳಿ ಹೋಟೆಲ್ ವೊಂದು ಶುರುವಾಗಿದೆ. ಇದರ ಬೆನ್ನಲ್ಲೆ ಮಂಗಳೂರಿನಲ್ಲೂ ಕಾಂತಾರ ಹೋಟೆಲ್ ಅತೀ ಶೀಘ್ರದಲ್ಲೇ ಪ್ರಾರಂಭ ಮಾಡುವುದಾಗಿ ಸುದ್ದಿಯಾಗಿದೆ. ಕಾಂತಾರ ಹೆಸರಿನಲ್ಲಿ ಶುರುವಾಗಲಿರುವ ಹೋಟೆಲ್ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈಗಾಗಲೇ ಕೆಜಿಎಫ್ ನಲ್ಲಿ ಊಟ ಸವಿದವರು, ಆ ಸಿನಿಮಾವನ್ನು ನೆನಪಿಸುವಂತಹ ಸ್ಥಳಗಳಲ್ಲಿ ಕೂತು ಎಂಜಾಯ್ ಮಾಡುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲಂಸ್. ಈಗ ಅದೇ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಕಾಂತಾರ’ ಚಿತ್ರವನ್ನು ಮನೆ ಮಂದಿಯೆಲ್ಲಾ ನೋಡಿ ಇಷ್ಟಪಟ್ಟಿದ್ದಾರೆ. ಹಿರಿಯರಿಂದ ಕಿರಿಯರವರೆಗೂ ಎಲ್ಲರೂ ಮೆಚ್ಚಿಕೊಂಡಿರುವ ಈ ಚಿತ್ರ ಎಲ್ಲರಿಗೂ ಇಷ್ಟವಾಗುವುದಕ್ಕೆ ಕಾರಣ ಚಿತ್ರದ ಕಥೆ ಮತ್ತು ಮೇಕಿಂಗ್. ಹೊಂಬಾಳೆ ಫಿಲಂಸ್ ಮೊದಲಿನಿಂದಲೂ ಕಥೆಗೆ ವಿಶೇಷವಾದ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಈಗಾಗಲೇ ‘ರಾಜ್ಕುಮಾರ’, ‘ಯುವರತ್ನ’, ‘ಕೆಜಿಎಫ್’ ಮುಂತಾದ ಚಿತ್ರಗಳು ಈ ವಿಷಯವನ್ನು ನಿರೂಪಿಸಿದೆ. ಈಗ ‘ಕಾಂತಾರ’ ಸಹ ಇದೇ ನಿಟ್ಟಿನಲ್ಲಿ ಸಾಗಿರುವುದಷ್ಟೇ ಅಲ್ಲ, ‘ಕೆಜಿಎಫ್’ ಸರಣಿಯ ನಂತರ ಒಂದೇ ಸಂಸ್ಥೆಯ ಇನ್ನೊಂದು ಚಿತ್ರ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿರುವುದು ವಿಶೇಷ.
ಬರೀ ಕನ್ನಡವಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಒಟ್ಟು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಯು ಹಲವು ಚಿತ್ರಗಳನ್ನು ನಿರ್ಮಿಸುತ್ತಿದೆ. ಒಂದೇ ಸಂಸ್ಥೆಯಿಂದ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ. ಇದನ್ನೂ ಓದಿ:ʻಕಮಾಂಡೋʼ ಶೂಟಿಂಗ್ ವೇಳೆ ರಾಗಿಣಿ ದ್ವಿವೇದಿ ಕೈಗೆ ಪೆಟ್ಟು
ಈಗಾಗಲೇ ಕನ್ನಡದಲ್ಲಿ ಜಗ್ಗೇಶ್ ಅಭಿನಯದಲ್ಲಿ ಸಂತೋಷ್ ಆನಂದರಾಮ್ ನಿರ್ದೇಶಿಸುತ್ತಿರುವ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಶ್ರೀಮುರಳಿ ಅಭಿನಯದಲ್ಲಿ ಡಾ. ಸೂರಿ ನಿರ್ದೇಶಿಸುತ್ತಿರುವ ‘ಬಘೀರ’ ಚಿತ್ರವು ಚಿತ್ರೀಕರಣ ಹಂತದಲ್ಲಿದೆ. ರಕ್ಷಿತ್ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಮತ್ತು ಯುವ ರಾಜ್‌ಕುಮಾರ್‌ಗಾಗಿ ಸಂತೋಷ್ ಆನಂದರಾಮ್ ನಿರ್ದೇಶಿಸಲಿರುವ ಹೊಸ ಚಿತ್ರಗಳು ಸದ್ಯದಲ್ಲೇ ಶುರುವಾಗಲಿವೆ.
ಬೇರೆ ಭಾಷೆಯ ಚಿತ್ರಗಳ ವಿಷಯಕ್ಕೆ ಬಂದರೆ, ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, 2023ರ ಸೆಪ್ಟೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ಎರಡು ಚಿತ್ರಗಳನ್ನು ಹೊಂಬಾಳೆ ನಿರ್ಮಿಸುತ್ತಿದ್ದು, ಈ ಪೈಕಿ ಒಂದು ಚಿತ್ರವನ್ನು ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರಾ ನಿರ್ದೇಶನ ಮಾಡಿದರೆ, ಇನ್ನೊಂದರ ಘೋಷಣೆ ಶೀಘ್ರದಲ್ಲೇ ಆಗಲಿದೆ. ಮಲಯಾಳಂನಲ್ಲೂ ಹೊಂಬಾಳೆ ಫಿಲಂಸ್ ವತಿಯಿಂದ ಎರಡು ಚಿತ್ರ ನಿರ್ಮಾಣವಾಗುತ್ತಿವೆ. ಫಹಾದ್ ಫಾಸಿಲ್ ಅಭಿನಯದ ‘ಧೂಮಂ’ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದರೆ, ಪೃಥ್ವಿರಾಜ್ ಸುಕುಮಾರನ್ ನಟಿಸಿ-ನಿರ್ದೇಶಿಸಲಿರುವ ‘ಟೈಸನ್’ ಚಿತ್ರವು ಮುಂದಿನ ವರ್ಷ ಪ್ರಾರಂಭವಾಗಲಿದೆ. ಹಿಂದಿ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯಲಿದ್ದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.
Live Tv
[brid partner=56869869 player=32851 video=960834 autoplay=true]
ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಎರಡು ದಿನಗಳಿಂದ ಕರ್ನಾಟಕದಲ್ಲಿ ಭಾರೀ ಗದ್ದಲ ಎದ್ದಿದೆ. ಅದರಲ್ಲೂ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಹೆಸರಿನಲ್ಲಿ ಮತದಾರರ ಖಾಸಗಿ ಸಂಗತಿಗಳು ಸೋರಿಕೆ ಆಗಿವೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಅದರಲ್ಲೂ ಸಚಿವ ಅಶ್ವತ್ಥ್ ನಾರಾಯಣ್ ಅವರ ಬಗ್ಗೆಯೇ ಅನುಮಾನ ವ್ಯಕ್ತ ಪಡಿಸಿದೆ. ಈ ಅನುಮಾನಕ್ಕೆ ಕಾರಣ ಹೊಂಬಾಳೆ ಹೆಸರು.
ಚಿತ್ರೋದ್ಯಮದ ಬಹುತೇಕರಿಗೆ ಗೊತ್ತಿರುವಂತೆ ಹೊಂಬಾಳೆ ಫಿಲ್ಮಸ್ ಸಂಸ್ಥೆಯು ಅಶ್ವತ್ಥ್ ನಾರಾಯಣ್ ಅವರ ಸಂಬಂಧಿ ವಿಜಯ್ ಕುಮಾರ್ ಅವರದ್ದು. ಈ ಹೊಂಬಾಳೆ ಫಿಲ್ಮಸ್ ಬ್ಯಾನರ್ ನಲ್ಲಿ ಕೆಜಿಎಫ್, ಕಾಂತಾರ ಸೇರಿದಂತೆ ಹಲವು ಚಿತ್ರಗಳು ನಿರ್ಮಾಣಗೊಂಡಿವೆ. ‘ಹೊಂಬಾಳೆ’ ಎನ್ನುವ ಹೆಸರೇ ಮತದಾರರ ಪಟ್ಟಿಯ ವಿವಾದಕ್ಕೆ ಮುನ್ನುಡಿಯಾಗಿದ್ದು, ಇದು ಚಿಲುಮೆ ಎನ್ನುವ ಹೆಸರಿನ ಸಂಸ್ಥೆಯ ಜೊತೆ ತಳುಕುಹಾಕಿಕೊಂಡಿದೆ. ಮತದಾರರ ಪಟ್ಟಿಯ ದುರುಪಯೋಗಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಹೆಸರು ಬಲವಾಗಿ ಕೇಳಿಬಂದಿದೆ. ಚಿಲುಮೆ ಸಂಸ್ಥೆಯು ಈ ಹಿಂದೆ ಹೊಂಬಾಳೆ ಹೆಸರಿನಲ್ಲಿ ಚಟುವಟಿಕೆಯಲ್ಲಿತ್ತು ಎನ್ನುವುದು ವಿವಾದಕ್ಕೆ ಕಾರಣವಾದ ಅಂಶ.
ಹೊಂಬಾಳೆ ಹೆಸರು ಕೇಳಿ ಬರುತ್ತಿದ್ದಂತೆಯೇ ಆದ ಘಟನೆಗೂ ಅಶ್ವತ್ಥ್ ನಾರಾಯಣ್ ಅವರಿಗೆ ನೇರ ಸಂಬಂಧವಿದೆ ಎನ್ನುವುದು ಕಾಂಗ್ರೆಸ್ ಪಕ್ಷದ ಆರೋಪ. ಹಾಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೊಂಬಾಳೆ ಫಿಲ್ಮಸ್ ಸಂಸ್ಥೆಯನ್ನು ತಿವಿಯಲು ಈ ಬ್ಯಾನರ್ ನಿಂದ ನಿರ್ಮಾಣವಾದ ಎರಡು ಚಿತ್ರಗಳ ಹೆಸರನ್ನು ಉಪಯೋಗಿಸಿಕೊಂಡು, ಹೊಂಬಾಳೆ ಫಿಲ್ಮ್ಸ್ ನ ಅಶ್ವತ್ಥ್ ನಾರಾಯಣ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ʻಕಮಾಂಡೋʼ ಶೂಟಿಂಗ್ ವೇಳೆ ರಾಗಿಣಿ ದ್ವಿವೇದಿ ಕೈಗೆ ಪೆಟ್ಟು
ಈ ಕುರಿತು ಸರಣಿಯ ಟ್ವಿಟ್ ಮಾಡಿರುವ ಸಿದ್ಧರಾಮಯ್ಯ, ‘ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕಥೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ, ಪಂಜುರ್ಲಿಯ ದಂತಕಥೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ ಅದನ್ನೇ ಮಾಡಬೇಕು’ ಎಂದು ಟ್ವಿಟ್ ಮಾಡಿದ್ದಾರೆ. ಈ ಟ್ವಿಟ್ ಭಾರೀ ವೈರಲ್ ಆಗಿದೆ. ಅಲ್ಲದೇ ಅನೇಕರು ಇದಕ್ಕೆ ಸ್ಪಂದಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕೆಜಿಎಫ್ ಚಿತ್ರದ ಹಾಡನ್ನು ಬಳಸಿದ್ದಕ್ಕೆ ಕಾಂಗ್ರೆಸ್ ಟ್ವಿಟ್ಟರ್(Congress Twitter) ಖಾತೆಯನ್ನು ಬ್ಲಾಕ್ ಮಾಡಬೇಕೆಂದು ಬೆಂಗಳೂರು ನಗರ ಜಿಲ್ಲಾ ವಾಣಿಜ್ಯ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್(High Court) ರದ್ದುಗೊಳಿಸಿದೆ. ಈ ಆದೇಶದಿಂದಾಗಿ ಕಾಂಗ್ರೆಸ್‌ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಕೆಜಿಎಫ್(KGF) ಹಾಡನ್ನು ಬಳಕೆ ಮಾಡಿದ್ದ ಟ್ವೀಟ್‌ಗಳನ್ನು(Tweet) ತೆಗೆದು ಹಾಕಬೇಕೆಂದು ಹೈಕೋರ್ಟ್ ಕಾಂಗ್ರೆಸ್‌ಗೆ ಆದೇಶ ನೀಡಿದೆ.
ಭಾರತ್ ಜೋಡೋ(Bharat Jodo) ಯಾತ್ರೆಯಲ್ಲಿ ಕೆಜಿಎಫ್ ಚಾಪ್ಟರ್ 2 ಚಿತ್ರದ ಹಾಡನ್ನು ಅನುಮತಿ ಇಲ್ಲದೇ ಕಾಂಗ್ರೆಸ್ ಬಳಸಿದೆ. ಕಾಪಿ ರೈಟ್ ಕಾಯ್ದೆಯನ್ನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಎಂಆರ್‌ಟಿ ಮ್ಯೂಸಿಕ್(MRT Music) ಸಂಸ್ಥೆಯ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರು ಕೋರ್ಟ್ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಅಮಾನತು ಮಾಡುವಂತೆ ಟ್ವಿಟ್ಟರ್ ಕಂಪನಿಗೆ ಆದೇಶ ನೀಡಿತ್ತು.
ಈ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇಂದು ನ್ಯಾ. ಜಿ. ನರೇಂದರ್ ಮತ್ತು ನ್ಯಾ.ಪಿಎನ್ ದೇಸಾಯಿ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು.
ಕಾಂಗ್ರೆಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನಮ್ಮ ಪ್ರತಿವಾದಿಗಳು ಸಂಪೂರ್ಣ ಟ್ವಿಟ್ಟರ್ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಆದರೆ 45 ಸೆಕೆಂಡಿನ ಆಡಿಯೋದಲ್ಲಿ ಮಾತ್ರ ಮ್ಯೂಸಿಕ್ ಬಳಕೆ ಮಾಡಲಾಗಿದೆ. ಮ್ಯೂಸಿಕ್ ಬಳಸಿ ನಾವು ತಪ್ಪು ಮಾಡಿದ್ದೇವೆ. ಕೆಜಿಎಫ್ ಮ್ಯೂಸಿಕ್ ಎಲ್ಲೆಲ್ಲಿ ಬಳಕೆ ಮಾಡಲಾಗಿದೆಯೋ ಅವೆಲ್ಲವನ್ನು ತೆಗೆದು ಹಾಕುತ್ತೇವೆ ಎಂದು ಮನವಿ ಮಾಡಿದರು.
ದೂರುದಾರರು ಸಂಪೂರ್ಣ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಇಲ್ಲಿ ಪ್ರತಿವಾದಿಯವರಿಗೆ ರಾಜಕೀಯ ಕುಮ್ಮಕ್ಕು ಇದೆಯೇ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ. ನಾವು ತಪ್ಪು ಮಾಡಿದ್ದೇವೆ. ಆದರೆ ಇದರಲ್ಲಿ ಯಾವುದೇ ವಾಣಿಜ್ಯ ಉದ್ದೇಶ ಇಲ್ಲ. ನಮ್ಮ ಅಭಿಪ್ರಾಯವನ್ನು ಆಲಿಸದೇ ಕೆಳ ನ್ಯಾಯಾಲಯ ಈ ರೀತಿಯ ಆದೇಶ ನೀಡಿದ್ದು ಎಷ್ಟು ಸರಿ? ದೇಶದ ದೊಡ್ಡ ರಾಜಕೀಯ ಪಕ್ಷದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವ್ಯಕ್ತಪಡಿಸುವ ಸಾಮಾಜಿಕ ಮಾಧ್ಯಮ ಧಮನಿಸುವುದಕ್ಕೆ ಕೋರ್ಟ್ ಅನುಮತಿ ನೀಡಬಾರದು ಎಂದು ಪ್ರಾರ್ಥಿಸಿದರು.
ಈ ವೇಳೆ ಎಂಆರ್‌ಟಿ ಸ್ಟುಡಿಯೋ ಪರ ವಕೀಲರಿಗೆ, ಈ ಪ್ರಕರಣದಲ್ಲಿ ಕಾಂಗ್ರೆಸ್ ಟ್ವಿಟ್ಟರ್ ಖಾತೆಯನ್ನು ತನಿಖೆ ಯಾಕೆ ಮಾಡಬೇಕು? ಆಯುಕ್ತರನ್ನು ಯಾಕೆ ನೇಮಿಸಬೇಕು? ಅವರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ತಪ್ಪನ್ನು ಒಪ್ಪಿಕೊಂಡ ಮೇಲೆ ತನಿಖೆ ಯಾಕೆ ಎಂದು ಪ್ರಶ್ನಿಸಿತು.
ಅಭಿಷೇಕ್ ಮನು ಸಿಂಘ್ವಿ, ಬುಧವಾರ ಮಧ್ಯಾಹ್ನ 2 ಗಂಟೆಯ ಒಳಗಡೆ ಎಲ್ಲೆಲ್ಲಿ ಮ್ಯೂಸಿಕ್ ಬಳಕೆ ಮಾಡಿದ್ದೇವೋ ಅವುಗಳನ್ನು ತೆಗೆದು ಹಾಕುತ್ತೇವೆ. ಅರ್ಜಿದಾರ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಗೆ ದಾಖಲೆ ನೀಡುತ್ತೇವೆ ಎಂದು ತಿಳಿಸಿದರು. ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಕಾಪಿರೈಟ್ ಉಲ್ಲಂಘನೆ ಮಾಡಿದ ಎಲ್ಲಾ ಟ್ವೀಟ್‌ಗಳನ್ನು ತೆಗೆದು ಹಾಕುವಂತೆ ಆದೇಶಿಸಿತು. ಇದನ್ನೂ ಓದಿ:ಕೆಜಿಎಫ್ ಮ್ಯೂಸಿಕ್ ಬಳಕೆ – ಕಾಂಗ್ರೆಸ್ ಟ್ವಿಟ್ಟರ್ ಖಾತೆ ಬ್ಲಾಕ್ ಮಾಡುವಂತೆ ಕೋರ್ಟ್ ಆದೇಶ
ಏನಿದು ಪ್ರಕರಣ?:
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಸ್ಥೆಯ ಅನುಮತಿ ಇಲ್ಲದೇ ಕೆಜಿಎಫ್ ಹಾಡನ್ನು ಭಾರತ್ ಜೋಡೋ ಯಾತ್ರೆಯಲ್ಲಿ ಬಳಸಿದೆ. ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿರುವ MRT ಸಂಸ್ಥೆಯು ರಾಹುಲ್ ಗಾಂಧಿ (Rahul Gandhi), ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ (Supriya) ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ (Jairam Ramesh) ವಿರುದ್ಧ ದೂರು ದಾಖಲಿಸಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿತ್ತು.
ಕೆಜಿಎಫ್ ಹಾಡನ್ನು ಕಾಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಾದ ಟ್ಟಿಟ್ಟರ್, ಯೂಟ್ಯೂಬ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಳಸಲಾಗಿದೆ. ನಮ್ಮ ಸಂಸ್ಥೆಯ ಅನುಮತಿ ಪಡೆಯದೇ ಕಾಪಿರೈಟ್ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಸ್ಥೆ ಕೋರ್ಟ್ ಮೊರೆ ಹೋಗಿತ್ತು. ಇದನ್ನೂ ಓದಿ: ಬಿಜೆಪಿಯದ್ದು ಜನ ಸಂಕಲ್ಪ ಯಾತ್ರೆ ಅಲ್ಲ, ಅದು ಜನರ ಸಂಕಷ್ಟದ ಯಾತ್ರೆ : ಯು.ಟಿ.ಖಾದರ್
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕಾಪಿರೈಟ್ ಉಲ್ಲಂಘನೆ Copyright Infringement) ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್(Congress) ಪಕ್ಷದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಟ್ವಿಟ್ಟರ್(Twitter) ಕಂಪನಿಗೆ ಆದೇಶ ನೀಡಿದೆ.
ಭಾರತ್ ಜೋಡೋ(Bharat Jodo Yatra) ಯಾತ್ರೆಯ ಪ್ರಚಾರದಲ್ಲಿ ಕೆಜಿಎಫ್ ಚಾಪ್ಟರ್-2 (KGF Chapter 2) ಸಿನಿಮಾದ ಆಡಿಯೋವನ್ನು ಬಳಸಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸ್ಟುಡಿಯೋ(MRT Studios) ಕೋರ್ಟ್ ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಆದೇಶಿಸಿದೆ.
ಮೂಲಹಾಡನ್ನು ಸಿಂಕ್ರೊನೈಸ್ ಮಾಡಿದ ಆವೃತ್ತಿಯೊಂದಿಗೆ ಸೇರಿಸಲಾಗಿದೆ. ಈ ಕೃತ್ಯಕ್ಕೆ ಪ್ರೋತ್ಸಾಹ ನೀಡಿದರೆ ಛಾಯಾಗ್ರಹಣ ಚಲನಚಿತ್ರಗಳು, ಹಾಡುಗಳು, ಸಂಗೀತ ಆಲ್ಬಮ್‌ಗಳನ್ನು ಸ್ವಾಧೀನಪಡಿಸಿಕೊಳ್ಳುವ ವ್ಯವಹಾರದಲ್ಲಿ ತೊಡಗಿರುವ ಉದ್ಯಮಗಳಿಗೆ ಸಮಸ್ಯೆಯಾಗಬಹುದು. ಅಲ್ಲದೇ ಇದು ಪೈರಸಿಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ವೀರ್ ದಾಸ್ ಕಾರ್ಯಕ್ರಮಕ್ಕೆ ಅನುಮತಿ ಕೊಡಬೇಡಿ – ಹಿಂದೂ ಸಂಘಟನೆಗಳಿಂದ ದೂರು
ಎಂಆರ್‌ಟಿ ಪರ ವಕೀಲರು, ನಮ್ಮ ಸಂಗೀತವನ್ನು ಕಾನೂನುಬಾಹಿರವಾಗಿ ಬಳಸಿ ನಮ್ಮ ಹಕ್ಕುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟ್ಟರ್, ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಖಾತೆಯ ಎಲೆಕ್ಟ್ರಾನಿಕ್ ಆಡಿಟ್ ಅನ್ನು ಪರಿಶೀಲಿಸಲು ಆಯುಕ್ತರನ್ನು ನೇಮಿಸುವುದು ಅಗತ್ಯ ಎಂದು ವಾದಿಸಿದರು.
ಈ ವಾದಕ್ಕೆ ಒಪ್ಪಿಗೆ ಸೂಚಿಸಿದ ನ್ಯಾಯಾಲಯ, ಆಯುಕ್ತರನ್ನು ನೇಮಿಸದಿದ್ದರೆ ತಡೆಯಾಜ್ಞೆ ನೀಡುವ ಉದ್ದೇಶ ಸೋಲುತ್ತದೆ ಎಂದು ಅಭಿಪ್ರಾಯಪಟ್ಟಿತು. ಕೋರ್ಟ್ ಮುಂದಿನ ವಿಚಾರಣೆಯನ್ನು ನ.21ಕ್ಕೆ ಮುಂದೂಡಿತು.
ಏನಿದು ಪ್ರಕರಣ?
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು, ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಯಾತ್ರೆಯಲ್ಲಿ ಬಳಸಿದ್ದಾರೆ. ಕೆಜಿಎಫ್ ಸಿನಿಮಾದ ‘ಸುಲ್ತಾನಾ..’ ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿರುವ MRT ಸಂಸ್ಥೆಯು ರಾಹುಲ್ ಗಾಂಧಿ (Rahul Gandhi) , ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ (Supriya) ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ (Jairam Ramesh) ವಿರುದ್ಧ ದೂರು ದಾಖಲಿಸಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿತ್ತು.
ಕೆಜಿಎಫ್ ಹಾಡನ್ನು ಕಾಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಾದ ಟ್ಟಿಟ್ಟರ್, ಯೂಟ್ಯೂಬ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಳಸಲಾಗಿದೆ. ನಮ್ಮ ಸಂಸ್ಥೆಯ ಅನುಮತಿ ಪಡೆಯದೇ ಕಾಪಿರೈಟ್ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಸ್ಥೆ ಕೋರ್ಟ್ ಮೊರೆ ಹೋಗಿತ್ತು.
Live Tv
[brid partner=56869869 player=32851 video=960834 autoplay=true]
ಬದುಕಿನ ಕತ್ತಲೆಯನ್ನು ಕಳೆದು ಬೆಳಕಿನ ಭರವಸೆ ನೀಡುವ ದೀಪಗಳ ಹಬ್ಬ ದೀಪಾವಳಿಯನ್ನು (Deepavali) ಎಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ. ಚಂದನವನದಲ್ಲೂ ದೀಪಾವಳಿಯ ಸಂಭ್ರಮ ಜೋರಾಗಿಯೇ ಮನೆ ಮಾಡಿದೆ. ಕೆಜಿಎಫ್ (KGF) ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಖ್ಯಾತಿ ಗಳಿಸಿರೋ ನಟಿ ಅರ್ಚನಾ ಜೋಯಿಸ್ ದೀಪಾವಳಿ ಸಂಭ್ರಮದಲ್ಲಿದ್ದು, ಹೊಸದೊಂದು ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.
ಸೆಲೆಬ್ರೆಟಿ ಫೋಟೋಗ್ರಾಫರ್ ನಾಗರಾಜ್ ಸೋಮಯಾಜಿ ರೂಪಿಸಿದ್ದ ಕಾನ್ಸೆಪ್ಟ್ ನಡಿ ಫೋಟೋಗಳನ್ನು ಸೆರೆ ಹಿಡಿಯಲಾಗಿದೆ. ನಾಗರಾಜ್ ಸೋಮಯಾಜಿ ತಮ್ಮ ಫೋಕಸ್ ಫೋಟೋಗ್ರಫಿ ಸರ್ವಿಸ್ ನಡಿ ಈ ಕಲರ್ ಫುಲ್ ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ. ಅರ್ಚನಾ ಜೋಯಿಸ್ ಚೆಂದದ ಈ ಫೋಟೋಗಳಿಗೆ ಯೋಗಿತ ಕಾಸ್ಟ್ಯೂಮ್ ಡಿಸೈನ್, ರೇಣುಕ ಹೇರ್ ಸ್ಟೈಲ್ ಮತ್ತು ಮೇಕಪ್ ಮಾಡಿದ್ದಾರೆ.
ಫೋಟೋಶೂಟ್ (Photo Shoot) ಬಗ್ಗೆ ಪ್ರತಿಕ್ರಿಯೆಸಿರುವ ನಟಿ ಅರ್ಚನಾ ಜೋಯಿಸ್ ದೀಪಾವಳಿ ಪ್ರಯುಕ್ತ ಫೋಟೋಶೂಟ್ ಮಾಡಲಾಗಿದೆ. ದೀಪಾವಳಿ ಅಂದ್ರೆ ಬೆಳಕು ಅದನ್ನೇ ಥೀಮ್ ಆಗಿಸಿಕೊಂಡು ನಾಗರಾಜ್ ಸೋಮಯಾಜಿ ಫೋಟೋಶೂಟ್ ಮಾಡಿದ್ದಾರೆ ಎಂದು ತಿಳಿಸಿದ್ರು. ಹಾಗೆ ದೀಪಾವಳಿ ಸಂಭ್ರಮದ ಬಗ್ಗೆಯೂ ಅನಿಸಿಕೆ ಹಂಚಿಕೊಂಡಿದ್ದು, ಪಟಾಕಿ ಹೊಡೆಯೋ ಅಭ್ಯಾಸ ಹೊರಟು ಹೋಗಿದೆ. ದೀಪಗಳ ಮೂಲಕವೇ ದೀಪಾವಳಿ ಸೆಲೆಬ್ರೇಟ್ ಮಾಡುತ್ತಿದ್ದೇವೆ. ನನಗೆ ಈ ಬಾರಿ ದೀಪಾವಳಿ ತುಂಬಾ ಸ್ಪೆಷಲ್. ಯಾಕಂದ್ರೆ ‘ಹೊಂದಿಸಿ ಬರೆಯಿರಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾ ಪ್ರಚಾರ ಕೂಡ ಜೋರಾಗಿ ನಡೆಯುತ್ತಿದೆ ಎಂದು ತಿಳಿಸಿದ್ರು.
ಕೆಜಿಎಫ್ ಸಿನಿಮಾ ನಂತರ ಸ್ಯಾಂಡಲ್ ವುಡ್ ಅಂಗಳದಲ್ಲಿ ಅರ್ಚನಾ ಜೋಯಿಸ್ ಸಖತ್ ಬ್ಯುಸಿಯಾಗಿದ್ದಾರೆ. ಇವರು ನಟಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ನವೆಂಬರ್ 18ರಂದು ಬಿಡುಗಡೆಯಾಗುತ್ತಿದ್ದು, ‘ಕ್ಷೇತ್ರಪಾಲ’ ಸಿನಿಮಾ ಕೂಡ ಬಿಡುಗಡೆಯ ಸನಿಹದಲ್ಲಿದೆ.
Live Tv
[brid partner=56869869 player=32851 video=960834 autoplay=true]