Tag: ಕೆಜಿಎಫ್

  • ಬಿಡುಗಡೆಯ ಮುನ್ನವೇ ಮತ್ತೊಂದು ದಾಖಲೆ ಬರೆದ ಕೆಜಿಎಫ್

    ಬಿಡುಗಡೆಯ ಮುನ್ನವೇ ಮತ್ತೊಂದು ದಾಖಲೆ ಬರೆದ ಕೆಜಿಎಫ್

    ಬೆಂಗಳೂರು: ಭಾರತೀಯ ಚಲನ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯಲು ಸಿದ್ಧವಾಗಿರುವ ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಸಿನಿಮಾ ಈಗ ಭಾರತೀಯ ಅತ್ಯಂತ ನಿರೀಕ್ಷಿತ ಚಲನಚಿತ್ರಗಳಲ್ಲಿ ನಂಬರ್ ಓನ್ ಸ್ಥಾನ ಪಡೆದಿದೆ.

    ಖ್ಯಾತ ಸಿನಿಮಾ ಡೇಟಾಬೇಸ್ ವೆಬ್‍ಸೈಟ್ ಇಂಟರ್ ನೆಟ್ ಮೂವಿ ಡೇಟಾ ಬೇಸ್(ಐಎಂಡಿಬಿ) ಟಾಪ್ 10 ಬಹು ನಿರೀಕ್ಷಿತ ಸಿನಿಮಾಗಳ ಪೈಕಿ ಬಾಲಿವುಡ್ ಬಾದ್‍ಶಾ ಶಾರೂಖ್ ಖಾನ್ ಅಭಿನಯದ ‘ಝೀರೋ’ ಸಿನಿಮಾ 2ನೇ ಸ್ಥಾನದಲ್ಲಿದ್ದರೆ, ಕೆಜಿಎಫ್ ಮೊದಲ ಸ್ಥಾನದಲ್ಲಿದೆ. ಶೇ.57 ಜನ ಕೆಜಿಎಫ್ ಪರ ಒಲವು ವ್ಯಕ್ತಪಡಿಸಿದ್ದರೆ, ಶೇ.18.4 ರಷ್ಟು ಜನ ಝೀರೋ ಪರ ಒಲವು ವ್ಯಕ್ತಪಡಿಸಿದ್ದಾರೆ. ಈ ಮೂಲಕ ಐಎಂಡಿಬಿಯಲ್ಲಿ ಮೊದಲ ಸ್ಥಾನ ಪಡೆದ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಕೆಜಿಎಫ್ ಪಾತ್ರವಾಗಿದೆ.

    ಈಗಾಗಲೇ ಕೆಜಿಎಫ್ ಸಿನಿಮಾ ಆಡಿಯೋ ರೈಟ್ಸ್ ಲಹರಿ ಸಂಸ್ಥೆ ಖರೀದಿ ಮಾಡಿದ್ದು, ಹಿಂದಿ ಭಾಷೆ ಬಿಟ್ಟು ಉಳಿದ 4 ಭಾಷೆಗಳ ಹಕ್ಕುಗಳನ್ನು ಪಡೆದುಕೊಂಡಿದೆ. ಈ ಹಿಂದೆ ಬಾಹುಬಲಿ ಸಿನಿಮಾ ಆಡಿಯೋವನ್ನು 3 ಕೋಟಿ ರೂ.ಗೆ ಖರೀದಿ ಮಾಡಿದ್ದ ಲಹರಿ ಸಂಸ್ಥೆ ಕೆಜಿಎಫ್ ಚಿತ್ರದ ಆಡಿಯೋವನ್ನು 3.60 ಕೋಟಿ ರೂ.ಗೆ ಖರೀದಿ ಮಾಡಿದೆ. ಇದರೊಂದಿಗೆ ದಕ್ಷಿಣ ಭಾರತದ ಸಿನಿ ಇತಿಹಾಸದಲ್ಲಿ ಕೆಜಿಎಫ್ ಹೊಸ ದಾಖಲೆ ಬರೆದಂತಾಗಿದೆ.

    ಈ ಹಿಂದೆ ಐಎಂಡಿಬಿಯ ಬಹು ನಿರೀಕ್ಷಿತ ಸಿನಿಮಾಗಳ ಪೈಕಿ ರಜಿನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅಭಿನಯದ 2.0 ಮೊದಲ ಸ್ಥಾನ ಪಡೆದಿದ್ದರೆ, ಕೆಜಿಎಫ್ ಎರಡನೇ ಸ್ಥಾನ ಪಡೆದುಕೊಂಡಿತ್ತು.

    ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಕೆಜಿಎಫ್ ಒಟ್ಟು ಐದು ಭಾಷೆಗಳಲ್ಲಿ ನಿರ್ಮಾಣಗೊಂಡಿವೆ. ಪಂಚಭಾಷೆಯಲ್ಲಿ ಕೆಜಿಎಫ್ ತೆರೆಗೆ ಬರುತ್ತಿದ್ದು, ಈಗಾಗಲೇ ಚಿತ್ರದ ಟ್ರೇಲರ್ ಮೂಲಕ ದೇಶಾದ್ಯಂತ ತನ್ನ ಹವಾ ಸೃಷ್ಟಿ ಮಾಡಿದೆ. ಚಿತ್ರೀಕರಣದ ಆರಂಭದಿಂದ ಒಂದಿಲ್ಲೊಂದು ವಿಷಯಕ್ಕೆ ಕೆಜಿಎಫ್ ಸದ್ದು ಮಾಡುತ್ತಾ ಬರುತ್ತಿದೆ. ಡಿಸೆಂಬರ್ 21ರಂದು ಚಿತ್ರ ತೆರೆಕಾಣಲಿದೆ. ಟ್ರೇಲರ್ ಹವಾ ಮೂಲಕವೇ ಸ್ಯಾಂಡಲ್‍ವುಡ್‍ಗೆ ಸೀಮಿತವಾಗಿದ್ದ ಕೆಜಿಎಫ್ ಬಾಲಿವುಡ್ ಅನ್ನೂ ಮೀರಿ ವಿಶ್ವ ಮಟ್ಟದಲ್ಲಿಯೂ ಹೆಸರು ಮಾಡಲಿದೆ ಎಂಬ ಮಾತುಗಳೂ ವ್ಯಾಪಕವಾಗಿಯೇ ಕೇಳಿ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬಾಹುಬಲಿಯನ್ನ ಹಿಂದಿಕ್ಕಿದ ಕೆಜಿಎಫ್ – ದಾಖಲೆ ಮೊತ್ತಕ್ಕೆ ಆಡಿಯೋ ರೈಟ್ಸ್ ಮಾರಾಟ!

    ಬಾಹುಬಲಿಯನ್ನ ಹಿಂದಿಕ್ಕಿದ ಕೆಜಿಎಫ್ – ದಾಖಲೆ ಮೊತ್ತಕ್ಕೆ ಆಡಿಯೋ ರೈಟ್ಸ್ ಮಾರಾಟ!

    ಬೆಂಗಳೂರು: ಭಾರತೀಯ ಚಲನ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯಲು ಸಿದ್ಧವಾಗಿರುವ ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಚಿತ್ರ 2015 ರಲ್ಲಿ ಬಿಡುಗಡೆಯಾಗಿದ್ದ ಬಾಹುಬಲಿ ಚಿತ್ರದ ದಾಖಲೆಯನ್ನು ಹಿಂದಿಕ್ಕಿದೆ.

    ಕೆಜಿಎಫ್ ಚಿತ್ರದ ಆಡಿಯೋ ರೈಟ್ಸ್ ಲಹರಿ ಸಂಸ್ಥೆ ಖರೀದಿ ಮಾಡಿದ್ದು, ಹಿಂದಿ ಭಾಷೆ ಬಿಟ್ಟು ಉಳಿದ 4 ಭಾಷೆಗಳ ಹಕ್ಕುಗಳನ್ನು ಪಡೆದುಕೊಂಡಿದೆ. ಈ ಹಿಂದೆ ಬಾಹುಬಲಿ ಸಿನಿಮಾ ಆಡಿಯೋವನ್ನು 3 ಕೋಟಿ ರೂ.ಗೆ ಖರೀದಿ ಮಾಡಿದ್ದ ಲಹರಿ ಸಂಸ್ಥೆ ಕೆಜಿಎಫ್ ಚಿತ್ರದ ಆಡಿಯೋವನ್ನು 3.60 ಕೋಟಿ ರೂ.ಗೆ ಖರೀದಿ ಮಾಡಿದೆ. ಇದರೊಂದಿಗೆ ದಕ್ಷಿಣ ಭಾರತದ ಸಿನಿ ಇತಿಹಾಸದಲ್ಲಿ ಕೆಜಿಎಫ್ ಹೊಸ ದಾಖಲೆ ಬರೆದಿದೆ.

    ಪಂಚಭಾಷೆಯಲ್ಲಿ ಕೆಜಿಎಫ್ ತೆರೆಗೆ ಬರುತ್ತಿದ್ದು, ಈಗಾಗಲೇ ಚಿತ್ರದ ಟ್ರೇಲರ್ ಮೂಲಕ ದೇಶಾದ್ಯಂತ ತನ್ನ ಹವಾ ಸೃಷ್ಟಿ ಮಾಡಿದೆ. ಚಿತ್ರೀಕರಣದ ಆರಂಭದಿಂದ ಒಂದಿಲ್ಲೊಂದು ವಿಷಯಕ್ಕೆ ಕೆಜಿಎಫ್ ಸದ್ದು ಮಾಡುತ್ತಾ ಬರುತ್ತಿದೆ. ಡಿಸೆಂಬರ್ 21ರಂದು ಚಿತ್ರ ತೆರೆಕಾಣಲಿದೆ. ಟ್ರೇಲರ್ ಹವಾ ಮೂಲಕವೇ ಸ್ಯಾಂಡಲ್‍ವುಡ್‍ಗೆ ಸೀಮಿತವಾಗಿದ್ದ ಕೆಜಿಎಫ್ ಬಾಲಿವುಡ್ ಅನ್ನೂ ಮೀರಿ ವಿಶ್ವ ಮಟ್ಟದಲ್ಲಿಯೂ ಹೆಸರು ಮಾಡಲಿದೆ ಎಂಬ ಮಾತುಗಳೂ ವ್ಯಾಪಕವಾಗಿಯೇ ಕೇಳಿ ಬಂದಿದೆ.

    ಸದ್ಯ ಎಲ್ಲರ ಚಿತ್ತ ಕೆಜಿಎಫ್ ಚಿತ್ರದ ಮೇಲಿದ್ದು, ಭೂಗತ ಲೋಕದ ಕರಾಳ ಸತ್ಯವನ್ನು ಕೆಜಿಎಫ್ ತೋರಿಸಲಿದೆ ಎಂಬುವುದನ್ನು ಟ್ರೇಲರ್ ಸಾರಿ ಸಾರಿ ಹೇಳುತ್ತಿದೆ. ಓರ್ವ ಕಥಾನಾಯಕನ ಜೀವನದ ಏರುಪೇರುಗಳನ್ನು ತುಂಬಾ ಸ್ಪಷ್ಟವಾಗಿ ಪ್ರಶಾಂತ್ ನೀಲ್ ತೋರಿಸುವ ಪ್ರಯತ್ನ ಟ್ರೇಲರ್ ನಲ್ಲಿ ಕಾಣುತ್ತಿದೆ. ಇನ್ನು ಟೀಸರ್ ಆರಂಭದಲ್ಲಿ ಕೇಳಿಬರುವ ಹಿನ್ನೆಲೆ ಧ್ವನಿ ಟ್ರೇಲರ್ ನಲ್ಲಿ ನೋಡುಗರಲ್ಲಿ ರೋಮ ರೋಮಗಳಲ್ಲಿ ರೋಮಾಂಚನ ಮಾಡುವಲ್ಲಿ ಯಶ್ವಸಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬಾಲಿವುಡ್‍ಗೆ ಹಾರಲಿದ್ದಾರಾ ಕೆಜಿಎಫ್ ಹುಡುಗಿ ಶ್ರೀನಿಧಿ?

    ಬಾಲಿವುಡ್‍ಗೆ ಹಾರಲಿದ್ದಾರಾ ಕೆಜಿಎಫ್ ಹುಡುಗಿ ಶ್ರೀನಿಧಿ?

    ಒಂದು ಚಿತ್ರ ಯಶ ಕಂಡ ನಂತರ ಅದರ ಪಾತ್ರಧಾರಿಗಳು ಸೇರಿಸದಂತೆ ಇಡೀ ಚಿತ್ರತಂಡಕ್ಕೆ ಅವಕಾಶಗಳ ಸುರಿಮಳೆಯಾಗುತ್ತೆ. ಇದು ಮಾಮೂಲು. ಆದರೆ ಯಶ್ ಅಭಿನಯದ ಕೆಜಿಎಫ್ ಚಿತ್ರದ ವಿಚಾರದಲ್ಲಿ ಇದು ಮಾಮೂಲಾಗಿಲ್ಲ. ಟ್ರೈಲರ್ ಬಿಡುಗಡೆಯಾದ ಬೆನ್ನಿಗೇ ಅಂತಾ ಸೂಚನೆ ಸಿಗಲಾರಂಭಿಸಿದೆ. ಮೊದಲು ಅದರ ಫಲಾನುಭವಿಯಾಗೋ ಅದೃಷ್ಟ ಖುಲಾಯಿಸಿರೋದು ನಾಯಕಿಯಾಗಿ ನಟಿಸಿರೋ ಶ್ರೀನಿಧಿ ಶೆಟ್ಟಿಗೆ!

    ಶ್ರೀನಿಧಿ ಶೆಟ್ಟಿ ಪಾಲಿಗೆ ಕೆಜಿಎಫ್ ಚಿತ್ರದ ನಾಯಕಿಯಾಗೋ ಅವಕಾಶವೇ ಬಯಸದೇ ಒಲಿದ ಅದೃಷ್ಟ. ಮಂಗಳೂರು ಮೂಲದ ಈಕೆ ಮಾಡೆಲಿಂಗ್ ಲೋಕದಲ್ಲಿ ಮಿಂಚಿದ್ದವರು. ಅಲ್ಲಿಂದ ಮಿಸ್ ಇಂಡಿಯಾ ಸ್ಪರ್ಧೆಯ ಮೂಲಕ ನಿರ್ದೇಶಕ ಪ್ರಶಾಂತ್ ನೀಲ್ ಕಣ್ಣಿಗೆ ಬಿದ್ದ ಶ್ರೀನಿಧಿ ಆ ಮೂಲಕವೇ ಕೆಜಿಎಫ್ ನಾಯಕಿಯಾಗೋ ಅವಕಾಶ ಗಿಟ್ಟಿಸಿಕೊಂಡಿದ್ದರು.

    ಈ ಚಿತ್ರ ಟ್ರೈಲರ್ ಮೂಲಕ ಹುಟ್ಟಿಸಿರೋ ಕ್ರೇಜ್ ಕಂಡೇ ಥ್ರಿಲ್ ಆಗಿರೋ ಶ್ರೀನಿಧಿಗೀಗ ಬಾಲಿವುಡ್‍ನಿಂದಲೇ ಆಫರುಗಳು ಬರಲಾರಂಭಿಸಿವೆಯಂತೆ. ಇನ್ನು ತೆಲುಗು, ತಮಿಳು ಸೇರಿದಂತೆ ನಾನಾ ಭಾಷೆಗಳಿಂದಲೂ ಇವರನ್ನು ಸಂಪರ್ಕಿಸಲಾರಂಭಿಸಿದ್ದಾರೆ. ಆದರೆ ಶ್ರೀನಿಧಿ ಮೊದಲಿಗೆ ಬಾಲಿವುಡ್ ನತ್ತ ಪ್ರಯಾಣ ಬೆಳೆಸೋ ಸಾಧ್ಯತೆಗಳಿವೆ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹಳೇ ವೈಷಮ್ಯಕ್ಕೆ ಮೂವರ ಮೇಲೆ ಗ್ಯಾಂಗ್ ಅಟ್ಯಾಕ್

    ಹಳೇ ವೈಷಮ್ಯಕ್ಕೆ ಮೂವರ ಮೇಲೆ ಗ್ಯಾಂಗ್ ಅಟ್ಯಾಕ್

    ಕೋಲಾರ: ಹಳೇ ವೈಷಮ್ಯಕ್ಕೆ ಗುಂಪವೊಂದು ಒಂದೇ ಕುಟುಂಬದ ಮೂವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೆಜಿಎಫ್‍ನ ಮಾರಿಕುಪ್ಪಂನಲ್ಲಿ ನಡೆದಿದೆ.

    ಮಾರಿಕುಪ್ಪಂ ನಿವಾಸಿಗಳಾದ ಗೊರಿಲ್ಲಾ ಚಂದ್ರನ್ (40), ಬೇಲೆನ್ಸ್ ಚಂದ್ರನ್ (22) ಹಾಗೂ ಗ್ಯಾಂಬಲರ್ (75) ಹಲ್ಲೆಗೊಳಗಾದವರು. ಗೊರಿಲ್ಲಾ ಚಂದ್ರನ್ ತಲೆ, ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿದ್ದು, ಕುಟುಂದ ಹಿರಿಯ ಯಜಮಾನ ಗ್ಯಾಂಬಲರ್ ಸ್ಥಿತಿ ಚಿಂತಾಜನಕವಾಗಿದೆ.

    ಘಟನೆಯ ವಿವರ: ಮಾರಿಕುಪ್ಪಂ ಸ್ಥಳೀಯ 25 ಜನರ ಗುಂಪವೊಂದು ಏಕಾಏಕಿ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಗ್ಯಾಂಬಲರ್ ಅವರ ಮನೆಗೆ ನುಗ್ಗಿ, ಬೇಲೆನ್ಸ್ ಚಂದ್ರನ್ ಮೇಲೆ ಹಲ್ಲೆಗೆ ಮುಂದಾಗಿದೆ. ಈ ವೇಳೆ ಮನೆಯಲ್ಲಿದ್ದ ಗೊರಿಲ್ಲಾ ಚಂದ್ರನ್ ಮತ್ತು ಗ್ಯಾಂಬಲರ್ ಹಲ್ಲೆ ತಡೆಯಲು ಯತ್ನಿಸಿದ್ದು, ಅವರ ಮೇಲೂ ಹಲ್ಲೆ ಮಾಡಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ.

    ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಮಾರಿಕುಪ್ಪಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕೆಜಿಎಫ್ ಟ್ರೈಲರ್ ನೋಡಿ ವಾವ್ ಅಂದ್ರು ಪಾ ರಂಜಿತ್!

    ಕೆಜಿಎಫ್ ಟ್ರೈಲರ್ ನೋಡಿ ವಾವ್ ಅಂದ್ರು ಪಾ ರಂಜಿತ್!

    ಬೆಂಗಳೂರು: ಈಗ ದೇಶಾದ್ಯಂತ ಮಂಡ್ಯ ಸೀಮೆಯ ಅಣ್ತಮ್ಮನ ಚಿತ್ರದ್ದೇ ಹವಾ. ಕೆಜಿಎಫ್ ಚಿತ್ರದ ಟ್ರೈಲರ್ ಬಗ್ಗೆ ಸಾಲು ಸಾಲಾಗಿ ಪರಭಾಷಾ ಚಿತ್ರರಂಗದ ಅತಿರಥ ಮಹಾರಥರೇ ಮೆಚ್ಚುಗೆಯ ಮಾತಾಡುತ್ತಿದ್ದಾರೆ. ಇದೀಗ ಕಬಾಲಿ ನಿರ್ದೇಶಕ ಪಾ. ರಂಜಿತ್ ಅವರ ಸರದಿ!

    ಕೆಜಿಎಫ್ ಚಿತ್ರದ ಟ್ರೈಲರ್ ನೋಡಿದಾಕ್ಷಣವೇ ಪಾ ರಂಜಿತ್ ಟ್ವಟರ್ ಮೂಲಕ ಹೊಗಳಿಕೆಯ ಮಾತಾಡಿದ್ದಾರೆ. ಇದೊಂದು ಅದ್ಭುತವಾದ ಟ್ರೈಲರ್ ಅಂದಿರೋ ರಂಜಿತ್ ಯಶ್ ಮತ್ತು ಇಡೀ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ.

    ಕಾಳ, ಕಬಾಲಿಯಂಥಾ ಚಿತ್ರಗಳನ್ನು ನಿರ್ದೇಶನ ಮಾಡೋ ಮೂಲಕ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವವರು ಪಾ ರಂಜಿತ್. ಅಂಥವರೇ ಕೆಜಿಎಫ್ ಟ್ರೈಲರನ್ನು ಮೆಚ್ಚಿಕೊಂಡಿರೋದು ಕನ್ನಡ ಚಿತ್ರರಂಗದ ಪಾಲಿಗೆ ಹೆಮ್ಮೆಯ ಸಂಗತಿ. ಅಂತೂ ಇಂಥಾದ್ದೊಂದು ಸಕಾರಾತ್ಮಕ ಬೆಳವಣಿಗೆಗೆ ಯಶ್ ಅಭಿನಯದ ಕೆಜಿಎಫ್ ಚಿತ್ರ ಶ್ರೀಕಾರ ಹಾಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕೆಜಿಎಫ್ ದಾಖಲೆಯನ್ನು ಬೀಟ್ ಮಾಡುತ್ತಾ ಪೈಲ್ವಾನ್?

    ಕೆಜಿಎಫ್ ದಾಖಲೆಯನ್ನು ಬೀಟ್ ಮಾಡುತ್ತಾ ಪೈಲ್ವಾನ್?

    ಬೆಂಗಳೂರು: ಇದೀಗ ದೇಶಾದ್ಯಂತ ಕೆಜಿಎಫ್ ಚಿತ್ರದ ಅಲೆ ಜೋರಾಗಿದೆ. ಈ ಚಿತ್ರ ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಆದರೆ ಇದೀಗ ವೇಗವಾಗಿ ಚಿತ್ರೀಕರಣಗೊಳ್ಳುತ್ತಿರೋ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಈ ದಾಖಲೆಯನ್ನ ಬೀಟ್ ಮಾಡೋ ಉತ್ಸಾಹದಿಂದಿದೆ!

    ಪೈಲ್ವಾನ್ ಚಿತ್ರದಲ್ಲಿನ ಸುದೀಪ್ ಲುಕ್ಕು ಈ ಹಿಂದೆಯೇ ಭಾರೀ ಸದ್ದು ಮಾಡಿತ್ತು. ಇದು ವಿಶಿಷ್ಟವಾದೊಂದು ಕಥೆ ಹೊಂದಿರೋ ಚಿತ್ರ ಎಂಬ ಸುಳಿವೂ ಜಾಹೀರಾಗಿತ್ತು. ಆದರೀಗ ಇದು ಏಕಕಾಲದಲ್ಲಿಯೇ ಒಂಬತ್ತು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂಬ ವಿಚಾರ ಚಿತ್ರತಂಡದ ಕಡೆಯಿಂದಲೇ ಹೊರಬಿದ್ದಿದೆ.

    ಕೆಜಿಎಫ್ ಚಿತ್ರ ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲೆಯಾಳಂ ಚಿತ್ರದಲ್ಲಿ ಬಿಡುಗಡೆಯಾಗಲಿದೆ. ಆದರೆ ಪೈಲ್ವಾನ್ ಚಿತ್ರ ಕನ್ನಡ, ಹಿಂದಿ, ತಮಿಳು, ತೆಲುಗು ಮಲೆಯಾಳಂ ಮತ್ತು ಮರಾಠಿ, ಪಂಜಾಬಿ, ಭೋಜ್ ಪುರಿ, ಬೆಂಗಾಲಿ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆಯಂತೆ. ಈ ಮೂಲಕ ಪೈಲ್ವಾನ್ ವಿಶ್ವವ್ಯಾಪಿಯಾಗಿಯೂ ಅಲೆಯೆಬ್ಬಿಸಲು ಅಣಿಯಾಗಿ ನಿಂತಿದೆ.

    ಸುದೀಪ್ ಅವರಿಗೆ ಭಾರತದಾದ್ಯಂತ ಮಾರ್ಕೆಟ್ ಇದೆ. ಬಾಹುಬಲಿ ಚಿತ್ರದ ಮೂಲಕವೇ ಅದು ಸಾಧ್ಯವೂ ಆಗಿದೆ. ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಚಿತ್ರತಂಡ ತೀರ್ಮಾನಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕೆಜಿಎಫ್ ಸಿನ್ಮಾ ಯಾಕೆ ನೋಡ್ಬೇಕು? ನಿರ್ದೇಶಕ ಪ್ರಶಾಂತ್ ನೀಲ್ ನೀಡಿದ ಉತ್ತರ ಹೀಗಿತ್ತು

    ಕೆಜಿಎಫ್ ಸಿನ್ಮಾ ಯಾಕೆ ನೋಡ್ಬೇಕು? ನಿರ್ದೇಶಕ ಪ್ರಶಾಂತ್ ನೀಲ್ ನೀಡಿದ ಉತ್ತರ ಹೀಗಿತ್ತು

    ಬೆಂಗಳೂರು: ದೇಶಾದ್ಯಂತ ಕೆಜಿಎಫ್ ತನ್ನ ಹವಾ ಸೃಷ್ಟಿ ಮಾಡಿದೆ. ಚಿತ್ರೀಕರಣದ ಆರಂಭದಿಂದ ಒಂದಿಲ್ಲೊಂದು ವಿಷಯಕ್ಕೆ ಕೆಜಿಎಫ್ ಸದ್ದು ಮಾಡುತ್ತಾ ಬರುತ್ತಿದೆ. ಈಗಾಗಲೇ ಟೀಸರ್ ಮತ್ತು ಟ್ರೇಲರ್ ಬಿಡುಗಡೆ ಆಗಿದ್ದು, ವೀಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿ ಆಗುತ್ತಿವೆ. ಆದ್ರೆ ಒಬ್ಬ ಸಾಮಾನ್ಯ ನಾಗರೀಕ ಅಥವಾ ವೀಕ್ಷಕ ‘ಕೆಜಿಎಫ್’ ಸಿನಿಮಾ ಯಾಕೆ ನೋಡಬೇಕೆಂದು ನಿರ್ದೇಶಕ ಪ್ರಶಾಂತ್ ನೀಲ್ ಹೇಳಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಶಾಂತ್ ನೀಲ್, ತಾಯಿ ಮತ್ತು ಒಂದು ಮಗುವಿನ ಬಾಂಧವ್ಯವನ್ನ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇನೆ. ಟ್ರೇಲರ್ ಮತ್ತು ಟೀಸರ್ ನೋಡಿದವರು 70ರ ದಶಕದ ಅಂತಾನೇ ತಿಳಿದಿರ್ತಾರೆ. ಆದ್ರೆ ತಾಯಿ ಮತ್ತು ಮಗನ ಸೆಂಟೆಮೆಂಟ್ ನಮ್ಮ ಚಿತ್ರದ ಮೂಲ ಕಥೆ ಅಂತಾ ಹೇಳಿದರು.

    ನಾನು 1970ರ ಕಾಲದಲ್ಲಿ ಬೆಳೆದವನು. ಅಂದು ಅಮಿತಾಬ್ ಬಚ್ಚನ್ ಅವರ ಸಿನಿಮಾ ನೋಡಿ, ಅವರ ಆ್ಯಕ್ಷನ್, ಗನ್ ಹಿಡಿಯುವ ಶೈಲಿ ಎಲ್ಲವೂ ನನ್ನ ಮೇಲೆ ಪ್ರಭಾವ ಬೀರಿದ್ದವು. ಈ ಎಲ್ಲ ಅಂಶಗಳಿಂದ ನನಗೆ 1970 ಕಾಲಘಟ್ಟದ ಸಿನಿಮಾ ಮಾಡಬೇಕು ಎಂಬ ಯೋಚನೆ ನನಗೆ ಬಂತು. 1970ರಲ್ಲಿಯೇ ಚಿನ್ನದ ಬೆಲೆ ಏರಿಕೆ ಆಯಿತು. ಇದನ್ನೇ ಆಧಾರವಾಗಿಯೇ ಒಂದು ಕಥೆ ರಚನೆ ಆಯ್ತು. ಕಥೆಯನ್ನು ವಿಜಿ ಸರ್ ಮತ್ತು ಯಶ್ ಅವರಿಗೆ ಹೇಳಿದಾಗ ಸ್ವಲ್ಪ ಕಷ್ಟವಾದರೂ ಪರವಾಗಿಲ್ಲ, ಸಿನಿಮಾ ಮಾಡೋಣ ಅಂತಾ ಹೇಳಿದರು.

    1970ರ ದಶಕವನ್ನ ಚಿತ್ರಕ್ಕಾಗಿ ಪುನರ್ ನಿರ್ಮಾಣ ಮಾಡಬೇಕಿತ್ತು. ಹಾಗಾಗಿ ಅಂದಿನ ಉಡುಪು, ಮಾತಿನ ಶೈಲಿ, ಜೀವನ ಕ್ರಮ, ಸ್ಥಳ ಆಯ್ಕೆಯ ಬಗ್ಗೆ ರಿಸರ್ಚ್ ಮಾಡಲು ನಮ್ಮ ತಂಡ ಎರಡು ವರ್ಷ ಕೆಲಸ ಮಾಡಿದೆ. ಚಿತ್ರದ ಪ್ರತಿಯೊಂದು ಅಂಶವನ್ನು ಪ್ರಾಯೋಗಿಕವಾಗಿ ಪ್ರಯತ್ನಿಸಲಾಯಿತು. ಫೋಟೋ ಶೂಟ್, ಸ್ಕೆಚ್ ಮಾಡಿ ಎಲ್ಲವನ್ನು 1970ರ ಕಾಲದಂತೆ ನಿರ್ಮಿಸಿಲು ಮಾಡಲು ಚಿತ್ರತಂಡ ಸಾಕಷ್ಟು ಪ್ರಯತ್ನ ಮಾಡಿದೆ ಎಂದು ಪ್ರಶಾಂತ್ ತಿಳಿಸಿದರು.

    ಕೆಜಿಎಫ್ ಒಟ್ಟು ಎರಡು ಭಾಗಗಳಲ್ಲಿ ತೆರೆ ಕಾಣಲಿದೆ. ಒಂದು ಕಥೆಯನ್ನು ಎರಡು ಭಾಗಗಳಲ್ಲಿ ಹೇಳುತ್ತಿದ್ದು, 3ನೇ ಭಾಗ ಮಾಡಲು ಕಥೆಯಲ್ಲಿ ಆಸ್ಪದವಿಲ್ಲ. ಮುಂಬೈ, ಬೆಂಗಳೂರು ಮತ್ತು ಕೆಜಿಎಫ್ ಎಂಬ ಮೂರು ಹಂತಗಳಲ್ಲಿ ಕಥೆ ನಡೆಯುತ್ತದೆ. ಹಾಗಾಗಿ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಿಲ್ಲ. ಕೆಜಿಎಫ್ ಬಳಿಕ ಮುಂದೆ ಯಾವ ಸಿನಿಮಾ ಮಾಡಬೇಕೆಂದು ಯೋಚಿಸಿಲ್ಲ. ಚಿತ್ರ ರಿಲೀಸ್ ಬಳಿಕ ಅರು ತಿಂಗಳು ವಿಶ್ರಾಂತಿ ಪಡೆದುಕೊಂಡು ಮುಂದೆ ಪ್ಲಾನ್ ಮಾಡ್ತೀನಿ ಅಂತಾ ಪ್ರಶಾಂತ್ ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರಾಕಿಂಗ್ ಸ್ಟಾರ್ ಗೆ ಶುಭಾಶಯ ಕೋರಿದ ಪವರ್ ಸ್ಟಾರ್

    ರಾಕಿಂಗ್ ಸ್ಟಾರ್ ಗೆ ಶುಭಾಶಯ ಕೋರಿದ ಪವರ್ ಸ್ಟಾರ್

    ಬೆಂಗಳೂರು: ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಸಿನಿಮಾ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ದೇಶಾದ್ಯಂತ ಸಂಚಲನ ಮೂಡಲಾರಂಭಿಸಿದೆ. ಸದ್ಯ ಈ ಚಿತ್ರಕ್ಕೆ ಈಗ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಶುಭ ಕೋರಿದ್ದಾರೆ.

    “ಕೆ.ಜಿ.ಎಫ್ ಚಿತ್ರದ ಟ್ರೇಲರ್ ಎಲ್ಲ ಭಾಷೆಯಲ್ಲೂ 20 ಲಕ್ಷಕ್ಕೂ ಹೆಚ್ಚು ವ್ಯೂ ಪಡೆದಿದ್ದಕ್ಕೆ ಯಶ್, ವಿಜಯ್ ಸರ್, ಪ್ರಶಾಂತ್ ನೀಲ್ ಹಾಗೂ ಇಡೀ ಚಿತ್ರತಂಡಕ್ಕೆ ನನ್ನ ಶುಭಾಶಯಗಳು. ಕೆಜಿಎಫ್ ಚಿತ್ರದ ಬಿಡುಗಡೆಗೂ ನನ್ನ ಶುಭಾಶಯಗಳು” ಎಂದು ಪುನೀತ್ ರಾಜ್‍ಕುಮಾರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

    ಕೆಜಿಎಫ್ ಚಿತ್ರಕ್ಕೆ ಶುಭ ಕೋರಿದ ಜೊತೆಗೆ ಪುನೀತ್ ‘ನಟಸಾರ್ವಭೌಮ’ ಚಿತ್ರದ ಡಬ್ಬಿಂಗ್ ಮುಗಿಸಲಾಗಿದೆ ಎಂದು ಹೇಳಿ ಒಂದು ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ. ಪುನೀತ್ ಇದೂವರೆಗೆ ಒಟ್ಟು ನಾಲ್ಕು ಟ್ವೀಟ್ ಗಳನ್ನು ಮಾತ್ರ ಮಾಡಿದ್ದು, 20 ಸಾವಿರ ಮಂದಿ ಅವರನ್ನು ಫಾಲೋ ಮಾಡುತ್ತಿದ್ದಾರೆ. ಇದನ್ನೂ ಓದಿ: ಶಾರೂಖ್ ಖಾನ್ ನಟನೆಯ ಝೀರೋ ಸಿನಿಮಾ ಹಿಂದಿಕ್ಕಿದ ಕೆಜಿಎಫ್

    ಕೆಜಿಎಫ್ ಚಿತ್ರದ ಜಬರ್ದಸ್ತ್ ಟ್ರೈಲರ್ ಕಂಡು ಕಿಚ್ಚ ಸುದೀಪ್ ಕೂಡ ಥ್ರಿಲ್ ಆಗಿದ್ದಾರೆ. ಈ ಬಗ್ಗೆ ಮನಸಾರೆ ಹೊಗಳಿಕೆಯ ಮಾತಾಡಿ ಚಿತ್ರಕ್ಕೆ ಶುಭ ಕೋರಿದ್ದಾರೆ. ಈ ಟ್ರೈಲರ್ ಲಾವಾರಸ ಉಕ್ಕಿ ಬಂದಂತಿಂದೆ ಎಂದಿರೋ ಕಿಚ್ಚ ಸುದೀಪ್, ನಿರ್ದೇಶಕ ಪ್ರಶಾಂತ್ ರಾಜ್ ಈ ಚಿತ್ರವನ್ನು ಬೇರೆಯದ್ದೇ ಹಂತಕ್ಕೆ ಕೊಂಡೊಯ್ದಿದ್ದಾರೆ ಅಂದಿದ್ದಾರೆ. ಒಟ್ಟಾರೆಯಾಗಿ ಯಶ್ ಲುಕ್ಕಿಗೆ ಫಿದಾ ಆಗಿರೋದಾಗಿಯೂ ಟ್ವಿಟ್ಟರ್ ಮೂಲಕ ಬರೆದುಕೊಂಡಿದ್ದಾರೆ.

    ಭೂಗತ ಲೋಕದ ಕರಾಳ ಸತ್ಯವನ್ನು ಕೆಜಿಎಫ್ ತೋರಿಸಲಿದೆ ಎಂಬುವುದನ್ನು ಟ್ರೇಲರ್ ಸಾರಿ ಸಾರಿ ಹೇಳುತ್ತಿದೆ. ಓರ್ವ ಕಥಾನಾಯಕನ ಜೀವನದ ಏರುಪೇರುಗಳನ್ನು ತುಂಬಾ ಸ್ಪಷ್ಟವಾಗಿ ಪ್ರಶಾಂತ್ ನೀಲ್ ತೋರಿಸುವ ಪ್ರಯತ್ನ ಟ್ರೇಲರ್ ನಲ್ಲಿ ಕಾಣುತ್ತಿದೆ. ಇನ್ನು ಟೀಸರ್ ಆರಂಭದಲ್ಲಿ ಕೇಳಿಬರುವ ಹಿನ್ನೆಲೆ ಧ್ವನಿ ಟ್ರೇಲರ್ ನಲ್ಲಿ ನೋಡುಗರಲ್ಲಿ ರೋಮ ರೋಮಗಳಲ್ಲಿ ರೋಮಾಂಚನ ಮಾಡುವಲ್ಲಿ ಯಶ್ವಸಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಶಾರೂಖ್ ಖಾನ್ ನಟನೆಯ ಝೀರೋ ಸಿನಿಮಾ ಹಿಂದಿಕ್ಕಿದ ಕೆಜಿಎಫ್

    ಶಾರೂಖ್ ಖಾನ್ ನಟನೆಯ ಝೀರೋ ಸಿನಿಮಾ ಹಿಂದಿಕ್ಕಿದ ಕೆಜಿಎಫ್

    -ದೇಶಾದ್ಯಂತ ಕೆಜಿಎಫ್ ಸಂಚಲನ

    ಬೆಂಗಳೂರು: ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಸಿನಿಮಾ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ದೇಶಾದ್ಯಂತ ಸಂಚಲನ ಮೂಡಲಾರಂಭಿಸಿದೆ.

    ಖ್ಯಾತ ಸಿನಿಮಾ ಡೇಟಾಬೇಸ್ ವೆಬ್‍ಸೈಟ್ ಇಂಟರ್ ನೆಟ್ ಮೂವಿ ಡೇಟಾ ಬೇಸ್(ಐಎಂಡಿಬಿ) ಪಟ್ಟಿಯಲ್ಲಿ ಕೆಜಿಎಫ್ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ಬಾಲಿವುಡ್ ಬಾದ್‍ಶಾ ಶಾರೂಖ್ ಖಾನ್ ಅಭಿನಯದ ಸಿನಿಮಾವನ್ನು ಹಿಂದಿಕ್ಕಿದೆ. ತೆಲುಗಿನ ವಿಜಯ್ ದೇವರಕೊಂಡ ಅಭಿನಯದ ಟ್ಯಾಕ್ಸಿವಾಲಾ ಮೂರನೇ ಸ್ಥಾನದಲ್ಲಿದೆ. ಝೀರೋ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ರಜಿನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅಭಿನಯದ 2.0 ಮೊದಲ ಸ್ಥಾನದಲ್ಲಿದೆ.

    ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಕೆಜಿಎಫ್ ಒಟ್ಟು ಐದು ಭಾಷೆಗಳಲ್ಲಿ ನಿರ್ಮಾಣಗೊಂಡಿವೆ. ಡಿಸೆಂಬರ್ 21ರಂದು ಚಿತ್ರ ತೆರೆಕಾಣಲಿದೆ. ಶಾರೂಖ್ ಖಾನ್ ಅಭಿನಯದ ಝೀರೋ ಸಿನಿಮಾ ಸಹ ಡಿಸೆಂಬರ್ 21ರಂದು ತೆರೆಕಾಣಲಿದೆ. ಈಗಾಗಲೇ ಎರಡು ಚಿತ್ರಗಳು ಟ್ರೇಲರ್ ಮೂಲಕ ತನ್ನದೇ ಗುರುತನ್ನು ಸಿನಿ ಅಂಗಳದಲ್ಲಿ ಮೂಡಿಸುವ ಪ್ರಯತ್ನ ಮಾಡಿವೆ. ನವೆಂಬರ್ 9ರಂದು ಬಿಡುಗಡೆ ಆಗಿರುವ ಕನ್ನಡದ ಕೆಜಿಎಫ್ ಟ್ರೇಲರ್ ಇದೂವರೆಗೂ 71 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ. ತೆಲುಗು ಭಾಷೆಯ ಟ್ರೇಲರ್ 45 ಲಕ್ಷಕ್ಕೂ ಅಧಿಕ ಮತ್ತು ಹಿಂದಿ ಭಾಷೆಯ ಟ್ರೇಲರ್ 95 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ.

    ನವೆಂಬರ್ 2ರಂದು ಬಿಡುಗಡೆ ಆಗಿರುವ ಝೀರೋ ಸಿನಿಮಾ ಇದೂವರೆಗೂ 8 ಕೋಟಿಗೂ ಅಧಿಕ ಬಾರಿ ವೀಕ್ಷಣೆಯಾಗಿದೆ. ಯಶ್ ಅಭಿನಯದ ಈ ಚಿತ್ರ ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಅಭಿನಯದ ಝೀರೋ ಚಿತ್ರಕ್ಕೆದುರಾಗಿ ಬಿಡುಗಡೆಯಾಗಲಿದೆ ಎಂಬ ವಿಚಾರ ತಿಳಿಯುತ್ತಲೇ ಅನೇಕರು ಲೇವಡಿಯಾಡಿದ್ದೂ ಇದೆ. ಆದರೆ ಇದೀಗ ಕೆಜಿಎಫ್ ಟ್ರೇಲರ್ ಬಾಲಿವುಡ್ ಮಟ್ಟದಲ್ಲಿಯೂ ಸಂಚಲನ ಸೃಷ್ಟಿಸಿದೆ. ಇದುವೇ ಈ ಚಿತ್ರದ ಗೆಲುವಿನ ಭವಿಷ್ಯವನ್ನೂ ಹೇಳುತ್ತಿದೆ.

    ಭೂಗತ ಲೋಕದ ಕರಾಳ ಸತ್ಯವನ್ನು ಕೆಜಿಎಫ್ ತೋರಿಸಲಿದೆ ಎಂಬುವುದನ್ನು ಟ್ರೇಲರ್ ಸಾರಿ ಸಾರಿ ಹೇಳುತ್ತಿದೆ. ಓರ್ವ ಕಥಾನಾಯಕನ ಜೀವನದ ಏರುಪೇರುಗಳನ್ನು ತುಂಬಾ ಸ್ಪಷ್ಟವಾಗಿ ಪ್ರಶಾಂತ್ ನೀಲ್ ತೋರಿಸುವ ಪ್ರಯತ್ನ ಟ್ರೇಲರ್ ನಲ್ಲಿ ಕಾಣುತ್ತಿದೆ. ಇನ್ನು ಟೀಸರ್ ಆರಂಭದಲ್ಲಿ ಕೇಳಿಬರುವ ಹಿನ್ನೆಲೆ ಧ್ವನಿ ಟ್ರೇಲರ್ ನಲ್ಲಿ ನೋಡುಗರಲ್ಲಿ ರೋಮ ರೋಮಗಳಲ್ಲಿ ರೋಮಾಂಚನ ಮಾಡುವಲ್ಲಿ ಯಶ್ವಸಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕೆಜಿಎಫ್ ಮೂಲಕ ವಿಶ್ವ ಮಟ್ಟದಲ್ಲಿ ಶುರುವಾಗಲಿದೆಯಾ ಯಶ್ ಹವಾ?

    ಕೆಜಿಎಫ್ ಮೂಲಕ ವಿಶ್ವ ಮಟ್ಟದಲ್ಲಿ ಶುರುವಾಗಲಿದೆಯಾ ಯಶ್ ಹವಾ?

    ಬೆಂಗಳೂರು: ಅಖಂಡ ಎರಡು ವರ್ಷಗಳ ನಿರಂತರ ಶ್ರಮವೊಂದು ಸಾರ್ಥಕಗೊಂಡಿದೆ. ಈ ಅವಧಿಯಲ್ಲಿ ಈ ಸಿನಿಮಾವನ್ನೇ ಉಸಿರಾಡಿದ್ದ ಕೆಜಿಎಫ್ ಚಿತ್ರತಂಡದ ಮುಖದಲ್ಲೀಗ ತೃಪ್ತಿಯ ಮಂದಹಾಸ ಮೂಡಿಕೊಂಡಿದೆ. ಅದಕ್ಕೆ ಕಾರಣವಾಗಿರೋದು ಮೊನ್ನೆಯಷ್ಟೇ ಬಿಡುಗಡೆಯಾಗಿರೋ ಟ್ರೇಲರ್ ಗೆ ಎಲ್ಲ ಭಾಷೆಗಳಲ್ಲಿಯೂ ಸಿಗುತ್ತಿರೋ ಅಭೂತಪೂರ್ವ ಪ್ರತಿಕ್ರಿಯೆ!

    ಯಶ್ ಅಭಿನಯದ ಈ ಚಿತ್ರ ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಅಭಿನಯದ ಝೀರೋ ಚಿತ್ರಕ್ಕೆದುರಾಗಿ ಬಿಡುಗಡೆಯಾಗಲಿದೆ. ಈ ವಿಚಾರ ತಿಳಿಯುತ್ತಲೇ ಅನೇಕರು ಲೇವಡಿಯಾಡಿದ್ದೂ ಇದೆ. ಆದರೆ ಇದೀಗ ಕೆಜಿಎಫ್ ಟ್ರೇಲರ್ ಬಾಲಿವುಡ್ ಮಟ್ಟದಲ್ಲಿಯೂ ಸಂಚಲನ ಸೃಷ್ಟಿಸಿದೆ. ಇದುವೇ ಈ ಚಿತ್ರದ ಗೆಲುವಿನ ಭವಿಷ್ಯವನ್ನೂ ಹೇಳುತ್ತಿದೆ.

    ಟ್ರೇಲರ್ ಹವಾ ಮೂಲಕವೇ ಸ್ಯಾಂಡಲ್‍ವುಡ್‍ಗೆ ಸೀಮಿತವಾಗಿದ್ದ ಯಶ್ ಬಾಲಿವುಡ್ ಅನ್ನೂ ಮೀರಿ ವಿಶ್ವ ಮಟ್ಟದಲ್ಲಿಯೂ ಹೆಸರು ಮಾಡಲಿದ್ದಾರೆಂಬ ಮಾತುಗಳೂ ವ್ಯಾಪಕವಾಗಿಯೇ ಕೇಳಿ ಬರಲಾರಂಭಿಸಿವೆ. ಇಂಥಾ ಸಂದರ್ಭದಲ್ಲಿಯೇ ಯಶ್ ಕೂಡಾ ಈ ಯಶದ ಬಗ್ಗೆ ಮಾತಾಡಿದ್ದಾರೆ. ತಾನು ವಿಶ್ವಮಟ್ಟದಲ್ಲಿ ಗಮನ ಸೆಳೆದವ ನಟ ಅಲ್ಲದಿದ್ದರೂ ಶಾರೂಖ್ ರಂಥಾ ನಟರ ಸಿನಿಮಾದೊಂದಿಗೇ ತಮ್ಮ ಕೆಜಿಎಫ್ ಚಿತ್ರವೂ ತೆರೆ ಕಾಣುತ್ತಿರೋದರ ಬಗ್ಗೆ ಖುಷಿ ಇದೆ ಅಂದಿದ್ದಾರೆ. ಜೊತೆಗೆ ತಾವು ಸಿನಿಮಾ ಅಭಿಮಾನಿ ಅಂದಿರೋ ಯಶ್ ಅವರಿಗೆ ಬಾಲಿವುಡ್ಡಲ್ಲಿ ಅಮಿತಾಬ್ ಬಚ್ಚನ್ ಅಂದ್ರೆ ಇಷ್ಟವಂತೆ. ಇನ್ನು ದೀಪಿಕಾ ಪಡುಕೋಣೆ ಅಂದರೂ ತಮಗಿಷ್ಟ ಅಂದಿದ್ದಾರೆ ಯಶ್!