Tag: ಕೆಜಿಎಫ್

  • ಮುಂಬೈನಲ್ಲಿ ಕಾಣಿಸಿಕೊಂಡ ಯಶ್ : ಸದ್ಯದಲ್ಲೇ ಹೊಸ ನ್ಯೂಸ್

    ಮುಂಬೈನಲ್ಲಿ ಕಾಣಿಸಿಕೊಂಡ ಯಶ್ : ಸದ್ಯದಲ್ಲೇ ಹೊಸ ನ್ಯೂಸ್

    ರಾಕಿಂಗ್ ಸ್ಟಾರ್ ಯಶ್ (Yash) ಪದೇ ಪದೇ ಮುಂಬೈನಲ್ಲಿ (Mumbai) ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಆಪ್ತರ ಪ್ರಕಾರ ಮುಂಬೈನಲ್ಲೇ ಅವರ ಹೊಸ ಸಿನಿಮಾದ ಕೆಲವು ಕೆಲಸಗಳು ನಡೆಯುತ್ತಿವೆಯಂತೆ. ಹಾಗಾಗಿ ಅವರು ಪದೇ ಪದೇ ಮುಂಬೈ ಫ್ಲೈಟ್ ಏರುತ್ತಿದ್ದಾರೆ. ಈಗಾಗಲೇ ಬಾಲಿವುಡ್ (Bollywood) ಬೆರಗಾಗುವಂತಹ ಸಿನಿಮಾ ಕೊಟ್ಟಿರುವ ಯಶ್, ಮುಂದಿನ ಟಾರ್ಗೆಟ್ ಹಾಲಿವುಡ್ (Hollywood) ಅಂದುಕೊಂಡಿದ್ದಾರೆ. ಹಾಗಾಗಿ ಜಾಗತಿಕ ಮಟ್ಟದ ಸಿನಿಮಾವನ್ನು ಅವರು ಕೈಗೆತ್ತಿಕೊಂಡಿದ್ದಾರಂತೆ.

    ಈ ಬಾರಿಯ ಸಿನಿಮಾದ ಬಜೆಟ್ ಮತ್ತು ಮೇಕಿಂಗ್  ಕೆಜಿಎಫ್ (KGF) ಸಿನಿಮಾಗಿಂತಲೂ ಇನ್ನೂ ಅದ್ಧೂರಿಯಾಗಿ ಇರಲಿದೆಯಂತೆ. ಅಲ್ಲದೇ, ಯುದ್ಧಗಳು ಸೇರಿದಂತೆ ಹಲವು ಅಚ್ಚರಿಯ ಸಂಗತಿಗಳನ್ನು ಒಳಗೊಂಡಿರುವ ಸಿನಿಮಾ ಅದಾಗಿದೆಯಂತೆ. ಈ ಕಾರಣಕ್ಕಾಗಿಯೇ ಹಾಲಿವುಡ್ ತಂತ್ರಜ್ಞರನ್ನೂ ಯಶ್ ಭೇಟಿ ಮಾಡಿದ್ದಾರೆ. ಸಿನಿಮಾದ ತಯಾರಿ ಕುರಿತಂತೆ ಹಲವು ರೀತಿಯಲ್ಲಿ ಚರ್ಚೆಯನ್ನೂ ಅವರು ಮಾಡಿದ್ದಾರಂತೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

    ಯಶ್ ಮುಂದಿನ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ಮಾಡಲಿದೆ ಎನ್ನುವುದನ್ನು ಬಿಟ್ಟರೆ ಉಳಿದಂತೆ ಯಾವುದೇ ಮಾಹಿತಿ ಈವರೆಗೂ ಲಭ್ಯವಾಗಿಲ್ಲ. ಹಾಗಂತ ಕೆವಿಎನ್ ಸಂಸ್ಥೆಯೇ ಯಶ್ ಮುಂದಿನ ಸಿನಿಮಾ ಮಾಡಲಿದೆ ಎನ್ನುವುದು ಪಕ್ಕಾ ಕೂಡ ಆಗಿಲ್ಲ. ಈ ನಡುವೆ ಜಗತ್ತಿನ ಹೆಸರಾಂತ ತಂತ್ರಜ್ಞರನ್ನು ಯಶ್ ಭೇಟಿ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರೆಲ್ಲರೂ ಒಂದಾಗಲಿದ್ದಾರೆ ಎನ್ನುವುದು ಸದ್ಯಕ್ಕಿರುವ ಮಾಹಿತಿ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಪ್ಪನಿಗಿಂತ ನಾನೇ ಸ್ಟ್ರಾಂಗ್, ಯಶ್ ಜೊತೆ ಮಗನ ತುಂಟಾಟದ ವೀಡಿಯೋ ವೈರಲ್

    ಅಪ್ಪನಿಗಿಂತ ನಾನೇ ಸ್ಟ್ರಾಂಗ್, ಯಶ್ ಜೊತೆ ಮಗನ ತುಂಟಾಟದ ವೀಡಿಯೋ ವೈರಲ್

    ಪ್ಯಾನ್ ಇಂಡಿಯಾ ಸ್ಟಾರ್ ಯಶ್ `ಕೆಜಿಎಫ್ 2′ (Kgf 2)ಯಶಸ್ಸಿನ ನಂತರ ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಇದರ ನಡುವೆ ಮುದ್ದು ಯಥರ್ವ್ ಜೊತೆ ಸಮಯ ಕಳೆದ್ದಿದ್ದಾರೆ. ಅಪ್ಪನಿಗಿಂತ ನಾನೇ ಗಟ್ಟಿ ಎಂದು ಹೇಳಿರುವ ಯಶ್ ಜೊತೆಗಿನ ಯಥರ್ವ್ ತುಂಟಾಟದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

    `ಕೆಜಿಎಫ್ 2′ ನಂತರ ಹೊಸ ಕಥೆ, ಪ್ರಾಜೆಕ್ಟ್‌ನತ್ತ ಯಶ್ (Yash) ಬ್ಯುಸಿಯಾಗಿದ್ದಾರೆ. ಇದರ ನಡುವೆ ಮಗನ ಜೊತೆಗಿನ ತುಂಟಾಟದ ವೀಡಿಯೋವನ್ನ ಯಶ್ ಶೇರ್ ಮಾಡಿದ್ದಾರೆ. ಮಗನ ಜೊತೆ ರಾಕಿಬಾಯ್ ಸಮಯ ಕಳೆದಿದ್ದಾರೆ. ಇದನ್ನೂ ಓದಿ:ಮಗಳ ಜೊತೆಗಿನ ಮುದ್ದಾದ ಫೋಟೋ ಹಂಚಿಕೊಂಡ ನಟಿ ಬಿಪಾಶಾ ಬಸು

    ಯಶ್ ಅವರ ತೋಳನ್ನು ಮುಟ್ಟುವ ಯಥರ್ವ್ (Yatharva) ತುಂಬ ಸಾಫ್ಟ್ ಆಗಿದೆ ಎನ್ನುತ್ತಾನೆ. ತನ್ನ ತೋಳು ತೋರಿಸಿ ತುಂಬ ಗಟ್ಟಿಯಾಗಿದೆ ಎನ್ನುತ್ತಾನೆ. ಮಗನ ಈ ಮಾತು ಕೇಳಿ ಯಶ್‌ಗೆ ಅಚ್ಚರಿ. ಸೂಪರ್ ಮಗನೆ, ನೀನೇ ಎಲ್ಲರಿಗಿಂತ ಸ್ಟ್ರಾಂಗ್ ಎಂದು ಅವರು ಪುತ್ರನ ಬೆನ್ನು ತಟ್ಟುತ್ತಾರೆ. ಅಪ್ಪ-ಮಗನ ಈ ವಿಡಿಯೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಈ ಕ್ಯೂಟ್ ವೀಡಿಯೋ ಎಲ್ಲಡೆ ಸದ್ದು ಮಾಡ್ತಿದೆ.

     

    View this post on Instagram

     

    A post shared by Yash (@thenameisyash)

    ಯಶ್ ನಟಿಸಿರುವ ಕೆಜಿಎಫ್, ಕೆಜಿಎಫ್ 2 ಎರಡು ಭಾಗಗಳು ಸೂಪರ್ ಹಿಟ್ ಆಗಿದೆ. ಯಶ್ ಮುಂದಿನ ನಡೆ ಮೇಲೆ ಎಲ್ಲರ ಕಣ್ಣಿದೆ. ಆದಷ್ಟು ಸಿನಿಮಾ ಅಧಿಕೃತ ಅಪ್‌ಡೇಟ್ ಕೊಡಲಿ ಅಂತಾ ಕಾಯ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ʻಘೋಸ್ಟ್ʼ ಸಿನಿಮಾದಲ್ಲಿ ಪತ್ರಕರ್ತೆಯಾದ ಕೆಜಿಎಫ್‌ ನಟಿ ಅರ್ಚನಾ ಜೋಯಿಸ್

    ʻಘೋಸ್ಟ್ʼ ಸಿನಿಮಾದಲ್ಲಿ ಪತ್ರಕರ್ತೆಯಾದ ಕೆಜಿಎಫ್‌ ನಟಿ ಅರ್ಚನಾ ಜೋಯಿಸ್

    ಶಿವಣ್ಣ ನಟನೆಯ `ಘೋಸ್ಟ್’ (Ghost) ಸಿನಿಮಾ ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುಲೇ ಇದೆ. ಸ್ಟಾರ್ ಕಲಾವಿದರ ದಂಡೇ ಶಿವಣ್ಣನ ಟೀಮ್‌ಗೆ ಸೇರ್ಪಡೆಯಾಗುತ್ತಿದೆ. ಸದ್ಯ `ಕೆಜಿಎಫ್’ ಖ್ಯಾತಿಯ ಅರ್ಚನಾ ಜೋಯಿಸ್ (Archana Jois) `ಘೋಸ್ಟ್’ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ.

     

    View this post on Instagram

     

    A post shared by Archana Jois (@jois_archie)

    `ವೇದ’ ಬಳಿಕ ಶಿವಣ್ಣ ನಟನೆಯ `ಘೋಸ್ಟ್’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇತ್ತೀಚಿಗೆ ಚಿತ್ರತಂಡಕ್ಕೆ ಅನುಪಮ್ ಖೇರ್, ಜಯರಾಮ್, ಪ್ರಶಾಂತ್ ನಾರಾಯಣ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಈಗ ನಟಿ ಅರ್ಚನಾ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕೆ ಜೀವತುಂಬಿದ್ದಾರೆ. ಇದನ್ನೂ ಓದಿ: ರಾಕಿಂಗ್ ಸ್ಟಾರ್ ಮನೆ ಮುಂದೆ ಜನಸಾಗರ: ಯಶ್‌ ಜೊತೆಗೆ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

    ಶ್ರೀನಿ ನಿರ್ದೇಶನದ ಈ ಚಿತ್ರದಲ್ಲಿ `ಕೆಜಿಎಫ್’ (Kgf) ನಟಿ ಅರ್ಚನಾ ಪತ್ರಕರ್ತೆಯ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ತಮ್ಮ ಭಾಗದ ಚಿತ್ರೀಕರಣ ಕೂಡ ಕಂಪ್ಲೀಟ್ ಮಾಡಿದ್ದಾರೆ. ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ಅರ್ಚನಾ ನಟಿಸಿದ್ದಾರೆ.

    ಸಂದೇಶ್ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಶಿವಣ್ಣ ವಿಭಿನ್ನ ಗೆಟಪ್‌ನಲ್ಲಿ ನಟಿಸಿದ್ದಾರೆ. ಈಗಾಗಲೇ ಸಿನಿಮಾ 60ರಷ್ಟು ಚಿತ್ರೀಕರಣ ಆಗಿದೆ. ಸದ್ಯದಲ್ಲೇ 3ನೇ ಹಂತದ ಶೂಟಿಂಗ್ ಶುರುವಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ಯಾನ್ ಇಂಡಿಯಾ ಸ್ಟಾರ್ ನಟಿ ಶ್ರೀನಿಧಿ ಶೆಟ್ಟಿ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ

    ಪ್ಯಾನ್ ಇಂಡಿಯಾ ಸ್ಟಾರ್ ನಟಿ ಶ್ರೀನಿಧಿ ಶೆಟ್ಟಿ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ

    `ಕೆಜಿಎಫ್’ (Kgf) ಮತ್ತು `ಕೆಜಿಎಫ್ 2′ ಸಕ್ಸಸ್ ನಂತರ ಶ್ರೀನಿಧಿ ಶೆಟ್ಟಿ (SrinidhI Shetty) ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಮಿಂಚ್ತಿದ್ದಾರೆ. ಹೀಗಿರುವಾಗ ಮಂಗಳೂರು ಬ್ಯೂಟಿ ಶ್ರೀನಿಧಿ ತಮ್ಮ ಸಂಭಾವನೆಯನ್ನ ಹೆಚ್ಚಿಸಿಕೊಂಡಿದ್ದಾರೆ.

    ಮಾಡೆಲ್ ಆಗಿದ್ದವರು ಶ್ರೀನಿಧಿ ಶೆಟ್ಟಿ, ಪ್ರಶಾಂತ್ ನೀಲ್ ನಿರ್ದೇಶನದ `ಕೆಜಿಎಫ್’ ಮೂಲಕ ಯಶ್‌ಗೆ (Yash) ನಾಯಕಿಯಾಗಿ ಎಂಟ್ರಿ ಕೊಟ್ಟರು. ರೀನಾ ಆಗಿ ಸೈ ಎನಿಸಿಕೊಂಡರು. ಬಳಿಕ `ಕೆಜಿಎಫ್ ಪಾರ್ಟ್ 2’ನಲ್ಲೂ (Kgf 2) ಅಚ್ಚುಕಟ್ಟಾಗಿ ನಟಿಸಿದ್ದರು. ಈ ಸಿನಿಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಮಿಂಚಿದ್ದರು ಕೂಡ ಸಿನಿಮಾ ಸೆಲೆಕ್ಷನ್ ವಿಷ್ಯದಲ್ಲಿ ಸಖತ್ ಚ್ಯೂಸಿಯಾದರು.

    ಇತ್ತೀಚೆಗೆ ತಮಿಳು ನಟ ವಿಕ್ರಮ್ (Vikram) ನಟನೆಯ `ಕೋಬ್ರಾ’ದಲ್ಲಿ  (Cobra) ನಟಿಸಿದ್ದರು. ಈ ನಟಿಗೆ ಬೇಡಿಕೆ ಹೆಚ್ಚಾಗುತ್ತಿದ್ದಂತೆ ತನ್ನ ಸಂಭಾವನೆಯನ್ನ ಕೂಡ ಹೆಚ್ಚಿಸಿಕೊಂಡಿದ್ದಾರೆ. ಶ್ರೀನಿಧಿ ಶೆಟ್ಟಿ ತಮ್ಮ ಮುಂಬರುವ ಚಿತ್ರಗಳಿಗೆ 5 ಕೋಟಿ ರೂ. ಡಿಮ್ಯಾಂಡ್ ಮಾಡ್ತಿದ್ದಾರಂತೆ. ಈ ಸುದ್ದಿ ಕೇಳಿ ನಿರ್ಮಾಪಕರು ದಂಗಾಗಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ನಂದು- ಜಶ್ವಂತ್ ಬ್ರೇಕಪ್‌ಗೆ ಕಾರಣವಾದ್ರಾ ಸಾನ್ಯ ಅಯ್ಯರ್?

    ಶ್ರೀನಿಧಿ ಇದೀಗ ಹೊಸ ಕಥೆಗಳನ್ನ ಕೇಳ್ತಿದ್ದಾರೆ. ಸೂಕ್ತ ಕಥೆಯ ಮೂಲಕ ನಟಿ ಬೆಳ್ಳಿತೆರೆಯಲ್ಲಿ ಮಿಂಚಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹುಟ್ಟುಹಬ್ಬದ ಹಿನ್ನೆಲೆ ಕುಟುಂಬ, ಆಪ್ತರ ಜೊತೆ ದುಬೈನಲ್ಲಿ ರಾಕಿಂಗ್ ಸ್ಟಾರ್ ಯಶ್‌

    ಹುಟ್ಟುಹಬ್ಬದ ಹಿನ್ನೆಲೆ ಕುಟುಂಬ, ಆಪ್ತರ ಜೊತೆ ದುಬೈನಲ್ಲಿ ರಾಕಿಂಗ್ ಸ್ಟಾರ್ ಯಶ್‌

    ಕೆಜಿಎಫ್‌ (KGF) ಸಿನಿಮಾ ಮೂಲಕ ಭಾರತೀಯ ಚಿತ್ರರಂಗದಲ್ಲಿ ಜನಪ್ರಿಯತೆ ಗಳಿಸಿರುವ ರಾಕಿಂಗ್‌ ಸ್ಟಾರ್‌ ಯಶ್‌ (Yash) ಹುಟ್ಟುಹಬ್ಬದ (Birthday) ಸಂಭ್ರಮದಲ್ಲಿದ್ದಾರೆ. ಭಾನುವಾರ (ಜ.8) ಯಶ್‌ ತಮ್ಮ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಕುಟುಂಬದ ಸದಸ್ಯರು ಹಾಗೂ ಆಪ್ತರ ಜೊತೆ ದುಬೈಗೆ (Dubai) ತೆರಳಿದ್ದು, ಎಂಜಾಯ್‌ ಮಾಡುತ್ತಿದ್ದಾರೆ.

    ಪತ್ನಿ ರಾಧಿಕಾ ಪಂಡಿತ್‌ (Radhika Pandit), ಕುಟುಂಬದ ಸದಸ್ಯರು ಹಾಗೂ ಆಪ್ತರೊಂದಿಗೆ ದುಬೈನಲ್ಲಿ ಯಶ್‌ ಕಾಲ ಕಳೆಯುತ್ತಿದ್ದಾರೆ. ಯಶ್‌ ಕುಟುಂಬಸ್ಥರೊಡನೆ ದುಬೈನಲ್ಲಿರುವ ಫೋಟೋವನ್ನು ಆಪ್ತರು ಶೇರ್‌ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಎಂಟ್ರಿಯಿಂದ ವಿಜಯ್- ಸಂಗೀತಾ ದಾಂಪತ್ಯದಲ್ಲಿ ಕಲಹ?

    ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಹತ್ತಿರದಿಂದಲೇ ವಿಶ್‌ ಮಾಡಬೇಕು ಎಂದುಕೊಂಡಿದ್ದ ಅಭಿಮಾನಿಗಳಿಗೆ ಯಶ್‌ ಶಾಕ್‌ ಕೊಟ್ಟಿದ್ದರು. ಹುಟ್ಟುಹಬ್ಬದ ಸಂಭ್ರಮದ ದಿನ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ ಎಂದು ಕೆಲ ದಿನಗಳ ಹಿಂದೆಯಷ್ಟೇ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದರು. ಆದಷ್ಟು ಬೇಗ ನಿಮಗೆ ಸಿಗುತ್ತೇನೆ. ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ ಎಂದು ಕುತೂಹಲ ಮೂಡಿಸಿದ್ದರು.

    ಹುಟ್ಟುಹಬ್ಬದ ದಿನದಂದೇ 400 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಚಿತ್ರದ ಹೆಸರು ಘೋಷಣೆ ಮಾಡಲು ಮುಂದಾಗಿರುವುದು ಯಶ್‌ ಅಭಿಮಾನಿಗಳಿಗೆ ಡಬ್ಬಲ್ ಧಮಾಕ ನೀಡಿದಂತಾಗಿದೆ. ಇದನ್ನೂ ಓದಿ: ನೋರಾ ಫತೇಹಿ ಜೊತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ಪಾಕಿಸ್ತಾನ ನಟಿಯ ಜೊತೆ ಆರ್ಯನ್ ಖಾನ್ ಪಾರ್ಟಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶೀಘ್ರವೇ ನಿಮ್ಮ ಮುಂದೆ ಬರುತ್ತೇನೆ – ಅಭಿಮಾನಿಗಳಿಗೆ ಯಶ್‌ ಪ್ರೀತಿಯ ಪತ್ರ

    ಶೀಘ್ರವೇ ನಿಮ್ಮ ಮುಂದೆ ಬರುತ್ತೇನೆ – ಅಭಿಮಾನಿಗಳಿಗೆ ಯಶ್‌ ಪ್ರೀತಿಯ ಪತ್ರ

    ಕೊರೊನಾ (Corona) ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದಲೂ ರಾಕಿಂಗ್ ಸ್ಟಾರ್ ಯಶ್ (Yash) ಹುಟ್ಟುಹಬ್ಬ (Birthday) ಸಂಭ್ರಮದಿಂದ ನೋಡದ ಅಭಿಮಾನಿಗಳು ಈ ವರ್ಷದಲ್ಲಿ ಅದ್ಧೂರಿಯಾಗಿ ಆಚರಿಸಲು ಕಾತುರದಿಂದ ಕಾಯುತ್ತಿದ್ದಾರೆ.

     

    View this post on Instagram

     

    A post shared by Yash (@thenameisyash)

    ಅಲ್ಲದೇ ಹುಟ್ಟುಹಬ್ಬದ ದಿನದಂದೇ ಯಶ್ (Yash) 400 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಚಿತ್ರದ ಹೆಸರು ಘೋಷಣೆ ಮಾಡಲು ಮುಂದಾಗಿರುವುದು ಅಭಿಮಾನಿಗಳಿಗೆ ಡಬ್ಬಲ್ ಧಮಾಕ ನೀಡಿದಂತಾಗಿದೆ. ಇದನ್ನೂ ಓದಿ: ಯಶ್ ಹೊಸ ಸಿನಿಮಾದ ಬಜೆಟ್ ಬರೋಬ್ಬರಿ 400 ಕೋಟಿ: ಜ.8ಕ್ಕೆ ಘೋಷಣೆ

    ಹುಟ್ಟುಹಬ್ಬಕ್ಕೆ ಇನ್ನೂ ಮೂರೇ ದಿನಗಳು ಬಾಕಿಯಿದ್ದು, ರಾಜ್ಯಾದ್ಯಂತ ಮಾತ್ರವಲ್ಲದೇ ದೇಶಾದ್ಯಂತ ಸಂಭ್ರಮದಿಂದ ಕೊಂಡಾಡಲು ಕಾಯುತ್ತಿದ್ದಾರೆ. ಆದ್ರೆ ರಾಕಿಭಾಯ್ ಅಭಿಮಾನಿಗಳಿಗೆ ಯಶ್ ನಿರಾಸೆ ಉಂಟುಮಾಡಿದ್ದಾರೆ. ಇದನ್ನೂ ಓದಿ: ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಅಬ್ಬರಿಸಲಿದ್ದಾರೆ ಆಮೀರ್ ಖಾನ್

    ಅಭಿಮಾನಿಗಳಿಗೆ ಯಶ್ ಸಂದೇಶ: 
    `ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ… ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ, ನನ್ನ ಹೃದಯ ತುಂಬುವಂತೆ ಮಾಡಿದೆ. ನನಗೆ ಗೊತ್ತು ನೀವೆಲ್ಲಾ ಕಾಯುತ್ತಿದ್ದೀರಾ. ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದೆ ಇತ್ತೀಚಿನ ವರ್ಷಗಳಲ್ಲಿ. ಯಾವಾಗ ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸಿ ವಿಜೃಂಭಿಸೋಕೆ ಶುರು ಮಾಡಿದ್ದರಿಂದ. ಹಾಗಾಗಿ ನಾನು ಕೂಡ ಈ ವರ್ಷದ ಹುಟ್ಟುಹಬ್ಬದಂದು ನಿಮ್ಮನ್ನ ನೋಡಬೇಕು. ನಿಮ್ಮೊಂದಿಗೆ ಸಮಯ ಕಳೆಯಬೇಕು ಅಂದುಕೊಂಡಿದ್ದೆ. ಆದರೆ ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೂ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ನಿಮ್ಮ ಉಡುಗೊರೆ. ಕ್ಷಮಿಸಿ ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ ಆದಷ್ಟು ಬೇಗ ನಿಮಗೆ ಸಿಗುತ್ತೇನೆ ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ. ನಿಮ್ಮ ಪ್ರೀತಿಯ ಯಶ್ ಎಂದು ಅಭಿಮಾನಿಗಳಿಗೆ ಪತ್ರ ಸಂದೇಶ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿನಿಮಾಗಳಿಗೆ 3 ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ ಅಧಿಕೃತ ಘೋಷಣೆ

    ಸಿನಿಮಾಗಳಿಗೆ 3 ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ ಅಧಿಕೃತ ಘೋಷಣೆ

    ಕೆಜಿಎಫ್, ಕಾಂತಾರ (Kantara) ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಹೊಂಬಾಳೆ ಫಿಲ್ಮಸ್ (Hombale Films) ಮುಂದಿನ ಐದು ವರ್ಷಗಳಲ್ಲಿ ಬರೋಬ್ಬರಿ ಮೂರು ಸಾವಿರ ಕೋಟಿ ಬಂಡವಾಳವನ್ನು ಚಿತ್ರರಂಗದಲ್ಲಿ ಹೂಡಲಿದೆ ಎಂದು ಈ ಹಿಂದೆಯೇ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಯನ್ನು ಬ್ರೇಕ್ ಮಾಡಿತ್ತು. ಇದೀಗ ಸ್ವತಃ ಹೊಂಬಾಳೆ ಫಿಲ್ಮ್ಸ್ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಭಾರತೀಯ ಸಿನಿಮಾ ರಂಗಕ್ಕೆ ಬಿಗ್ ನ್ಯೂಸ್ ನೀಡಿದ್ದಾರೆ.

    ಒಂದು ಮೂಲದ ಪ್ರಕಾರ ಈಗಾಗಲೇ ಅವರು ಸಾವಿರ ಕೋಟಿಯಷ್ಟು ಹಣವನ್ನು ಚಿತ್ರೋದ್ಯಮದಲ್ಲಿ ಹೂಡಿಕೆ ಮಾಡಿದ್ದಾರೆ. ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯದಲ್ಲೇ ಅವರು ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿ ಕೊಡಲಿದ್ದಾರೆ. ಈಗಾಗಲೇ ಶಾರುಖ್ ಖಾನ್ ಸಿನಿಮಾ ಮಾಡುವ ಕುರಿತು ಮಾತುಕತೆ ಕೂಡ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಕನ್ನಡ ನಿರ್ಮಾಣ ಸಂಸ್ಥೆಯೊಂದು ಸಿನಿಮಾ ರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈ ಪ್ರಮಾಣದ ಹಣವನ್ನು ಹೂಡಿಕೆ ಮಾಡುತ್ತಿದೆ. ಅಲ್ಲದೇ, ಭಾರತೀಯ ಬಹುತೇಕ ಭಾಷೆಯ ಚಿತ್ರಗಳಲ್ಲಿ ಸಿನಿಮಾ ಮಾಡುವ ಗುರಿ ಹೊಂದಲಾಗಿದೆ. ಇದರ ಭಾಗವಾಗಿಯೇ ದಕ್ಷಿಣದ ಅಷ್ಟೂ ಭಾಷೆಗಳಲ್ಲಿ ಈಗಾಗಲೇ ಚಿತ್ರ ನಿರ್ಮಾಣವನ್ನು ಮಾಡಲಾಗುತ್ತಿದೆ. ಸದ್ಯದಲ್ಲೇ ಬಾಲಿವುಡ್ ನಲ್ಲೂ ಸಿನಿಮಾ ಮಾಡುವ ಯೋಜನೆಯೊಂದು ಬಹಿರಂಗಗೊಳ್ಳಲಿದೆ.

    Live Tv
    [brid partner=56869869 player=32851 video=960834 autoplay=true]

  • KGF ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್: ಮುರುಗೇಶ್‌ ನಿರಾಣಿ

    KGF ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್: ಮುರುಗೇಶ್‌ ನಿರಾಣಿ

    ಬೆಳಗಾವಿ: ಕೆಜಿಎಫ್‌ನ (KGF) ಬಿಇಎಂಎಲ್ (BEML) ಸಂಸ್ಥೆ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ (Industrial Township) ಮಾಡುವ ಕುರಿತು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ವಿಧಾನಪರಿಷತ್ತಿಗೆ ತಿಳಿಸಿದರು.

    ಸದಸ್ಯ ಗೋವಿಂದರಾಜು ಪರವಾಗಿ ಕೆ.ಎ.ತಿಪ್ಪೇಸ್ವಾಮಿ ಅವರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಜಿಎಫ್  (KGF) ತಾಲೂಕಿನ ಬಂಗಾರದ ಗಣಿ ಗ್ರಾಮದಲ್ಲಿ ರಾಜ್ಯ ಸರ್ಕಾರವು BEML ಕಾರ್ಖಾನೆ ಸ್ಥಾಪಿಸಲು ಸುಮಾರು 1870.30 ಎಕರೆ ಜಮೀನು ಉದ್ದೇಶಿತ ಸಂಸ್ಥೆಗೆ ಜಮೀನು ಉಪಯೋಗಿಸಿಕೊಂಡು ಬಾಕಿ ಉಳಿದಿರುವ 971.33 ಎಕರೆ ಜಮೀನನ್ನು ಕರ್ನಾಟಕ ಭೂ ಮಂಜುರಾತಿ ಅನ್ವಯ ಎಲ್ಲಾ ಋಣ ಭಾರದಿಂದ ಮುಕ್ತಗೊಳಿಸಿ ಕಂದಾಯ ಇಲಾಖೆಗೆ ವಶಪಡಿಸಿಕೊಳ್ಳಲು ಕೋಲಾರ (Kolara) ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ನಿರಾಣಿ ಹೇಳಿದರು.

    ಕೆಜಿಎಫ್‍ನಲ್ಲಿನ (KGF) 13 ಸಾವಿರ ಎಕರೆ ಜಮೀನನ್ನು ಚಿನ್ನದ ಗಣಿಗಾರಿಕೆಗಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿತ್ತು. ಈಗ ಗಣಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ. ಹೆಚ್ಚುವರಿಯಾಗಿ ಉಳಿದಿರುವ ಭೂಮಿಯನ್ನು ವಾಪಾಸ್ ಪಡೆದುಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಂವಹನ ನಡೆಸಲಾಗಿತ್ತು. ಆರಂಭದಲ್ಲಿ 3,500 ಎಕರೆಯನ್ನು ಮರಳಿಕೊಡುತ್ತೇವೆ ಎಂದು ಕೇಂದ್ರ ತಿಳಿಸಿತ್ತು. ಅದಕ್ಕೆ ಪೂರಕವಾಗಿ ಸ್ಪಷ್ಟವಾದ ಚಕ್ಕುಬಂದಿ ತಿಳಿಸಲು ಸೂಚಿಸಲಾಗಿತ್ತು. ರಾಜ್ಯ ಸರ್ಕಾರ ಸರ್ವೇ ನಡೆಸಿದಾಗ ಬಹಳಷ್ಟು ಭೂಮಿ ಒತ್ತುವರಿಯಾಗಿರುವುದು ಕಂಡುಬಂದಿತು ಎಂದು ಸಚಿವ ನಿರಾಣಿ ಹೇಳಿದರು.

    ಕೆಲವರು ಅಲ್ಲಿ ಮನೆಗಳನ್ನು ನಿರ್ಮಿಸಿರೋದನ್ನ ಜಿಲ್ಲಾಧಿಕಾರಿ ಗುರುತಿಸಿದ್ದಾರೆ. ಸರ್ವೇ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದಾಗ ಅಲ್ಲಿನ ಸಮಿತಿ ಚರ್ಚೆ ನಡೆಸಿ, ಕೇವಲ 3,500 ಎಕರೆಯನ್ನಷ್ಟೇ ಅಲ್ಲ ಪೂರ್ತಿ ಭೂಮಿಯನ್ನು ವಾಪಾಸ್ ನೀಡುತ್ತೇವೆ. ಸಾಲದ ಹೊಣೆಗಾರಿಕೆಯೊಂದಿಗೆ ಭೂಮಿಯನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ನಿರಾಣಿ ಹೇಳಿದರು. ಇದನ್ನೂ ಓದಿ: ನನಗೆ ನಿದ್ದೆಯಿಲ್ಲ, ಆರೋಗ್ಯದಲ್ಲಿ ಸಮಸ್ಯೆ ಇದೆ: ಹೆಚ್‌ಡಿಕೆ

    ಭೂಮಿಯ ಮೌಲ್ಯಕ್ಕಿಂತ ಸಾಲವೇ ಹೆಚ್ಚಿದೆ. ಅದಕ್ಕಾಗಿ ಒಮ್ಮೆಲೇ ಎಲ್ಲಾಭೂಮಿ ಬೇಡ. ಮೊದಲ ಹಂತದಲ್ಲಿ 3,500 ಎಕರೆ ಮಾತ್ರ ನೀಡಿ. ನಂತರ 2ನೇ ಹಂತದಲ್ಲಿ ಉಳಿದ ಭೂಮಿ ಪಡೆದುಕೊಳ್ಳುತ್ತೇವೆ ಎಂದು ರಾಜ್ಯ ಸರ್ಕಾರ ಸಲಹೆ ನೀಡಿದೆ. ಈ ಸಂವಹನದ ನಂತರ ಕೇಂದ್ರದಿಂದ ಪ್ರತಿಕ್ರಿಯೆ ಬಂದಿಲ್ಲ ಎಂದು ನಿರಾಣಿ ಸ್ಪಷ್ಟ ಪಡಿಸಿದರು. ಇದನ್ನೂ ಓದಿ: ಮದುವೆ ಅನ್ನೋದು ಒಂದು ಜವಾಬ್ದಾರಿ: ಎರಡನೇ ಮದುವೆ ಬಗ್ಗೆ ನಟಿ ಅಪೂರ್ವ ಮಾತು

    ಬೆಮೆಲ್‍ನಲ್ಲಿ ಹೆಚ್ಚುವರಿಯಾಗಿ 967 ಎರಕೆ ಭೂಮಿ ಕಂದಾಯ ಇಲಾಖೆ ಅಧೀನದಲ್ಲಿದೆ. ಅದನ್ನು ವಾಪಾಸ್ ಪಡೆದು ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ಕಂದಾಯ ಇಲಾಖೆಯಿಂದ ಈವರೆಗೂ ಭೂಮಿ ಹಸ್ತಾಂತರವಾಗಿಲ್ಲ. ಭೂಮಿ ನಮ್ಮ ಇಲಾಖೆಗೆ ಬರುತ್ತಿದ್ದಂತೆ ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ನಿರಾಣಿ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಐದು ವರ್ಷ, 3000 ಕೋಟಿ ಬಂಡವಾಳ: ಇದು ಹೊಂಬಾಳೆ ಫಿಲ್ಮ್ಸ್ ಸಂಕಲ್ಪ

    ಐದು ವರ್ಷ, 3000 ಕೋಟಿ ಬಂಡವಾಳ: ಇದು ಹೊಂಬಾಳೆ ಫಿಲ್ಮ್ಸ್ ಸಂಕಲ್ಪ

    ಭಾರತೀಯ ಸಿನಿಮಾ ರಂಗಕ್ಕೆ ಅತ್ಯುತ್ತಮ ಸಿನಿಮಾಗಳನ್ನು ನೀಡುತ್ತಾ ಬಂದಿರುವ ಹೊಂಬಾಳೆ ಫಿಲ್ಮ್ಸ್, ಒಂದು ಮಹತ್ವದ ನಿರ್ಧಾರ ತಗೆದುಕೊಂಡಿದೆ ಅನ್ನುವ ವಿಚಾರ ಗಾಂಧಿನಗರದಲ್ಲಿ ಭಾರೀ ಸದ್ದು ಮಾಡುತ್ತಿದೆ. ಮುಂದಿನ ಐದು ವರ್ಷಗಳಲ್ಲಿ ಅದು ಚಿತ್ರೋದ್ಯಮಕ್ಕೆ ಮೂರು ಸಾವಿರ ಕೋಟಿ ಬಂಡವಾಳ ಹೂಡಲಿದೆಯಂತೆ. ಭಾರೀ ಬಜೆಟ್ ಸಿನಿಮಾಗಳ ಜೊತೆಗೆ ಉತ್ತಮ ಬಜೆಟ್ ನಲ್ಲಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡಲಿದ್ದಾರಂತೆ.

    ಕೆಜಿಎಫ್, ಕಾಂತಾರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿವೆ. ಅತೀ ಹೆಚ್ಚು ಲಾಭವನ್ನೂ ತಂದುಕೊಟ್ಟಿವೆ. ಅಲ್ಲದೇ, ಮತ್ತಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಕನ್ನಡದಲ್ಲಿ ಮೂರು, ಮಲಯಾಳಂನಲ್ಲಿ ಒಂದು ಮತ್ತು ತಮಿಳಿನಲ್ಲಿ ಒಂದು ಸಿನಿಮಾವನ್ನು ಘೋಷಣೆ ಮಾಡಲಾಗಿದೆ. ಹಿಂದಿಯಲ್ಲೂ ಒಂದು ಚಿತ್ರವನ್ನು ಮಾಡುವ ಯೋಜನೆ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಭಾರತೀಯ ಹಲವು ಭಾಷೆಗಳಲ್ಲಿ ಸಿನಿಮಾ ಮಾಡಲಿದೆಯಂತೆ ಹೊಂಬಾಳೆ ಫಿಲ್ಮ್ಸ್.

    ಜಗ್ಗೇಶ್ ನಟನೆಯ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಗೆ ಸಿದ್ಧವಾಗಿದೆ. ಪವನ್ ಕುಮಾರ್ ಮಲಯಾಳಂನಲ್ಲಿ ಭರ್ಜರಿಯಾಗಿಯೇ ಶೂಟಿಂಗ್ ಶುರು ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ದೊಡ್ಮನೆಯ ಕುಡಿ ಯುವರಾಜ್ ನನ್ನು ಲಾಂಚ್ ಮಾಡುತ್ತಿದ್ದಾರೆ. ಜೊತೆಗೆ ಕಾಂತಾರ 2 ಮತ್ತು ಕೆಜಿಎಫ್ ಸಿನಿಮಾದ ಮುಂದುವರೆ ಭಾಗ ಕೂಡ ಸಿನಿಮಾವಾಗಿ ಮೂಡಿ ಬರಲಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಹಿಂದಿಯಲ್ಲಿ ಸ್ಟಾರ್ ನಟನ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ ಎಂದೂ ಹೇಳಲಾಗುತ್ತಿದೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ

    ನಾನಾ ಮಾಧ್ಯಮಗಳ ಜೊತೆ ಮಾತನಾಡಿರುವ ವಿಜಯ ಕಿರಗಂದೂರು ಈ ಕುರಿತು ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ, ಯಾವೆಲ್ಲ ಸಿನಿಮಾಗಳನ್ನು ಮಾಡಲಿದ್ದಾರೆ? ನಟನಾರು? ನಿರ್ದೇಶಕರಾರು ಅನ್ನುವ ವಿಷಯವನ್ನು ಬಹಿರಂಗ ಪಡಿಸಿಲ್ಲ. ಅಲ್ಲದೇ, ಕೆಲವು ವಿಷಯಗಳನ್ನು ಅವರು ಅಧಿಕೃತಗೊಳಿಸಿಲ್ಲ. ಆದರೂ, ಸಾಕಷ್ಟು ವಿಷಯಗಳು ಗಾಂಧಿನಗರ ಪಡಸಾಲೆಯಲ್ಲಿ ಕೇಳಿ ಬರುತ್ತಿರುದು ಸುಳ್ಳಲ್ಲ.

    Live Tv
    [brid partner=56869869 player=32851 video=960834 autoplay=true]

  • ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಕೆಜಿಎಫ್ ಗತ ವೈಭವ: ಹೆಚ್‌ಡಿಕೆ ಘೋಷಣೆ

    ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಕೆಜಿಎಫ್ ಗತ ವೈಭವ: ಹೆಚ್‌ಡಿಕೆ ಘೋಷಣೆ

    ಕೋಲಾರ: ಮುಂದಿನ ವಿಧಾನಸಭಾ ಚುನಾವಣೆ ತಯಾರಿಯಲ್ಲಿರುವ ಜೆಡಿಎಸ್ ಪಂಚರತ್ನ ಮೂಲಕ ರಣಕಹಳೆ ಮೊಳಗಿಸಿದೆ. ಚಿನ್ನದ ನಾಡು, ರಾಜ್ಯದ ಮೂಡಣ ದಿಕ್ಕು ಕೋಲಾರದಿಂದಲೇ ಯಾತ್ರೆ ಆರಂಭಿಸಿದೆ. ಪ್ರಾದೇಶಿಕ ಪಕ್ಷಕ್ಕೆ ಆಶೀರ್ವಾದ ಮಾಡಿದ್ರೆ ಚಿನ್ನದ ಗಣಿ ಪ್ರದೇಶದಲ್ಲಿ ಹಳೇ ವೈಭವ ಮರುಕಳಿಸಲಿದೆ ಅನ್ನೋ ಘೋಷಣೆಯನ್ನ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಮಾಡಿದ್ದಾರೆ.

    ಕೋಲಾರದಲ್ಲಿ (Kolara) ಈ ಹಿಂದೆ ಐದು ಕ್ಷೇತ್ರಗಳಲ್ಲಿ ಹಿಡಿತ ಹೊಂದಿದ್ದ ಜೆಡಿಎಸ್ (JDS) ಇತ್ತೀಚೆಗೆ ತನ್ನ ಬಲ ಕುಸಿತದಿಂದ ನೇಪತ್ಯಕ್ಕೆ ಸರಿದಿದೆ. ಈ ಮಧ್ಯೆ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿರುವ ಜೆಡಿಎಸ್ ಪಂಚರತ್ನ ಯಾತ್ರೆ ಆರಂಭಿಸಿದೆ. ಅದರಂತೆ ಇತ್ತೀಚೆಗೆ ಕೋಲಾರದ ಕೆಜಿಎಫ್‌ನಲ್ಲಿ ಮತ್ತೆ ಹಿಡಿತ ಸಾಧಿಸುವ ನಿಟ್ಟಿನಲ್ಲಿ ಅಭ್ಯರ್ಥಿ ಹುಡುಕಾಟದಲ್ಲಿದ್ದಾರೆ ದಳಪತಿಗಳು. ಕೆಜಿಎಫ್ ಕ್ಷೇತ್ರದಲ್ಲಿ ಹಿಂದೆ ದಿವಂಗತ ಭಕ್ತವತ್ಸಲಂ ಎರಡು ಭಾರಿ ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿದ್ದವರು. ಇದನ್ನೂ ಓದಿ: ಸಿದ್ದರಾಮಯ್ಯ ಯಾವತ್ತು ಕೂಡ ಸತ್ಯ ಒಪ್ಪಿಕೊಳ್ಳಲ್ಲ : ಆರಗ ಜ್ಞಾನೇಂದ್ರ

    ಆದ್ರೆ ಅವರ ನಿಧನದ ನಂತರ ಕ್ಷೇತ್ರದಲ್ಲಿ ಜೆಡಿಎಸ್‌ಗೆ ನಾಯಕನಿಲ್ಲದೆ ಹಿನ್ನಡೆಯಾಗಿದೆ. ಪರಿಣಾಮ ಈ ಬಾರಿ ಚುನಾವಣಾ ದೃಷ್ಟಿಯಿಂದ ಇತ್ತೀಚೆಗೆ ಕೆಜಿಎಫ್‌ಗೆ ಆಗಮಿಸಿದ್ದ ಹೆಚ್‌ಡಿಕೆ, ಕೆಜಿಎಫ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನ ಗೆಲ್ಲಿಸಿಕೊಡುವಂತೆ ಮನವಿ ಮಾಡಿದ್ದಾರೆ. ಜೆಡಿಎಸ್ ಟಿಕೆಟ್ ಅಭ್ಯರ್ಥಿ ಯಾರೆಂದು ಘೋಷಣೆ ಮಾಡದೆ ಈ ಬಾರಿ ಜೆಡಿಎಸ್‌ಗೆ ಅಧಿಕಾರ ಕೊಟ್ಟಿದ್ದೇ ಆದಲ್ಲಿ ಸ್ತ್ರೀಶಕ್ತಿ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

    ಇನ್ನೂ ಹೆಚ್ಚಾಗಿ ನಗರ ಭಾಗದಲ್ಲಿಯೇ ಮತದಾರರಿದ್ದು, ಅದರಲ್ಲೂ ತಮಿಳು ಭಾಷಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇದೆ. ಹೀಗಾಗಿ ತಮಿಳು ಭಾಷಿಗರ ಮನಗೆಲ್ಲುವ ಅಭ್ಯರ್ಥಿಯನ್ನೆ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎಲ್ಲ ಪಕ್ಷಗಳಿಗೂ ಇದೆ. ಮಾತ್ರವಲ್ಲದೆ ಗ್ರಾಮೀಣ ಭಾಗ ಅಂದ್ರೆ ಬೇತಮಂಗಲ ಹಾಗೂ ಕ್ಯಾಸಂಬಳ್ಳಿ ಹೋಬಳಿಯಲ್ಲಿ ರೈತಾಪಿ ವರ್ಗ ಹೆಚ್ಚಾಗಿದ್ದು. ಎರಡೂ ವರ್ಗಗಳ ಮತದಾರರನ್ನು ಸೆಳೆಯಬಲ್ಲ ಅಭ್ಯರ್ಥಿಯನ್ನ ಆಯ್ಕೆ ಮಾಡುವ ನಿಟ್ಟಿನಲ್ಲಿ ಉದ್ಯಮಿ ರಮೇಶ್ ಬಾಬು ತಮ್ಮ ಬೆಂಬಲಿಗರೊಂದಿಗೆ ನಗರದಲ್ಲಿ ಪಂಚರತ್ನ ಸಮಾವೇಶ ಆಯೋಜಿಸಿದ್ರೆ, ವಕೀಲ ಸುರೇಶ್ ಎಂಬುವವರು ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಬೆಂಬಲಿಗರು ಒತ್ತಾಯ ಮಾಡಿದ್ದಾರೆ. ಹಾಗಾಗಿ ಇಲ್ಲಿ ಅಭ್ಯರ್ಥಿ ಯಾರೆಂದು ಘೋಷಣೆ ಮಾಡದೆ, ಒಂದು ಭಾರಿ ಪ್ರಾದೇಶಿಕ ಪಕ್ಷಕ್ಕೆ ಆದ್ಯತೆ ನೀಡಿದ್ದೇ ಆದಲ್ಲಿ ಕೆಜಿಎಫ್ ಗತ ವೈಭವವನ್ನ ಮರುಕಳಿಸುವಂತೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಕೆಪಿಸಿಸಿ ಕಾರ್ಯಾಧ್ಯಕ್ಷರ ಎದುರೇ ಕಾರ್ಯಕರ್ತರ ಕಿತ್ತಾಟ

    ಕೆಜಿಎಫ್‌ನ ತಮಿಳು ಹಾಗೂ ಕಾರ್ಮಿಕ ವಲಯದ ಮೇಲೆ ಕಣ್ಣಿಟ್ಟಿರುವ ಹೆಚ್‌ಡಿಕೆ, ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಕೆಜಿಎಫ್ ಗತ ವೈಭವದ ಭರವಸೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]