Tag: ಕೆನಡಾ

  • ʼYou Are The Bestʼ – ಜಿ-7 ಶೃಂಗಸಭೆಯಲ್ಲಿ ಮೆಲೋಡಿ ಮೊಮೆಂಟ್

    ʼYou Are The Bestʼ – ಜಿ-7 ಶೃಂಗಸಭೆಯಲ್ಲಿ ಮೆಲೋಡಿ ಮೊಮೆಂಟ್

    ಒಟ್ಟಾವಾ: ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯಲ್ಲಿ (G7 Summit ) ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಇಟಾಲಿಯನ್ (Italy) ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಭೇಟಿಯಾಗಿದ್ದಾರೆ.

    ಮೋದಿ ಅವರನ್ನು ಭೇಟಿ ಆಗುತ್ತಿದ್ದಂತೆ ಮೆಲೋನಿ ಅವರು, ನೀವು ಅತ್ಯುತ್ತಮರು. ನಾನು ನಿಮ್ಮಂತೆ ಇರಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ಮೆಲೋನಿ ಮೋದಿ ಅವರಿಗೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ನೆಟ್ಟಿಗರು ʼಮೆಲೋಡಿ ಮೊಮೆಂಟ್ʼ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

    ಕಳೆದ ವರ್ಷ ಇಟಲಿಯಲ್ಲಿ ಜಿ-7 ಶೃಂಗಸಭೆ ಆಯೋಜನೆಗೊಂಡಿತ್ತು. ಭಾರತದ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ಪ್ರಧಾನಿ ಮೋದಿ ಅವರಿಗೆ ಏಪ್ರಿಲ್‌ ತಿಂಗಳಿನಲ್ಲಿ ಜಿ7 ಸಭೆಗೆ ವಿಶೇಷ ಆಹ್ವಾನಿತರಾಗಿ ಆಗಮಿಸುವಂತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಆಹ್ವಾನ ನೀಡಿದ್ದರು. ಈ ಶೃಂಗಸಭೆ ಮುಗಿದ ಬಳಿಕ ಮೆಲೋನಿ ಅವರು ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ ‘Hello From The Melody Team’ ಎಂದು ಬರೆದು ಪೋಸ್ಟ್‌ ಮಾಡಿದ್ದರು.

    ಭಾರತ ಜಿ7 ದೇಶಗಳ ಒಕ್ಕೂಟದಲ್ಲಿ ಇಲ್ಲ. ಆದರೆ ವಿಶೇಷ ಅತಿಥಿಯಾಗಿ ಈ ಸಭೆಯಲ್ಲಿ ಭಾಗವಹಿಸಲು ಜಿ7 ರಾಷ್ಟ್ರಗಳು ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡುತ್ತಿವೆ. ಇದನ್ನೂ ಓದಿ: ಭಾರತಕ್ಕೆ ಯಾವುದೇ ದೇಶದ ಮಧ್ಯಸ್ಥಿಕೆ ಅಗತ್ಯವಿಲ್ಲ: ಟ್ರಂಪ್‌ಗೆ ಮೋದಿ ಸ್ಪಷ್ಟನೆ

     

    ಏನಿದು ಮೆಲೋಡಿ?
    ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ನರೇಂದ್ರ ಮೋದಿ ಇಬ್ಬರು ಉತ್ತಮ ಸ್ನೇಹಿತರಾಗಿದ್ದಾರೆ. ಜಿ20 ಸಮ್ಮೇಳನಕ್ಕೆ ಮೆಲೋನಿ ಬಂದಾಗ #Melodi ಹ್ಯಾಶ್‌ ಟ್ಯಾಗ್‌ ಫೇಮಸ್‌ ಆಗಿತ್ತು. ಮೆಲೋನಿ ಮತ್ತು ಮೋದಿ ಹೆಸರನ್ನು ಸೇರಿಸಿ ಅಭಿಮಾನಿಗಳು Melodi ಟ್ಯಾಗ್‌ ಬಳಸಿ ಪೋಸ್ಟ್‌ ಮಾಡುತ್ತಿದ್ದಾರೆ.

  • ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿಯಾದ ಮೋದಿ – ಹೊಸ ಹೈಕಮೀಷನರ್ ನೇಮಿಸಲು ಸಮ್ಮತಿ

    ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿಯಾದ ಮೋದಿ – ಹೊಸ ಹೈಕಮೀಷನರ್ ನೇಮಿಸಲು ಸಮ್ಮತಿ

    -ಕೆನಡಾ ಪ್ರವಾಸ ಮುಗಿಸಿ ಕ್ರೊಯೇಷಿಯಾಗೆ ತೆರಳಿದ ಮೋದಿ

    ಒಟ್ಟಾವಾ: ಭಾರತ (India) ಮತ್ತು ಕೆನಾಡ (Canada) ನಡುವಿನ ಸಂಬಂಧ ಸುಧಾರಿಸಿದ್ದು, ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಕೆನಡಾ ಪ್ರವಾಸ ಕೈಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi), ಕೆನಡಾದ ನೂತನ ಪ್ರಧಾನಮಂತ್ರಿ ಮಾರ್ಕ್ ಕಾರ್ನಿ (Mark Carney) ಅವರನ್ನು ಭೇಟಿ ಮಾಡಿದ್ದಾರೆ.

    ಕೆನಡಾ ಪ್ರಧಾನಿ ಭೇಟಿ ವೇಳೆ ಎರಡೂ ದೇಶಗಳ ನಡುವೆ ಸಂಬಂಧ ಸುಧಾರಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿತ್ತು. ಎರಡೂ ದೇಶಗಳು ತಮ್ಮ ಹೈಕಮಿಷನರ್‌ಗಳನ್ನು ವಾಪಸ್ ಕರೆಸಿಕೊಂಡಿದ್ದವು. ಈಗ ಮಾತುಕತೆ ಬಳಿಕ ಭಾರತ ಮತ್ತು ಕೆನಡಾ ಹೊಸ ಹೈಕಮಿಷನರ್‌ಗಳನ್ನು ನೇಮಿಸಲು ಒಪ್ಪಿಕೊಂಡಿವೆ. ಇದನ್ನೂ ಓದಿ: ಗಾಳಿ ಇಲ್ಲ, ಮಳೆ ಇಲ್ಲ – ಸಿಎಂ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

    ಎರಡೂ ದೇಶಗಳು ಸಾಮಾನ್ಯ ರಾಜತಾಂತ್ರಿಕ ಸೇವೆಗಳನ್ನು ಪುನರಾರಂಭಿಸಲು ಹೊಸ ಹೈಕಮಿಷನರ್‌ಗಳನ್ನು ನೇಮಿಸುತ್ತವೆ. ಇದು ಎರಡೂ ದೇಶಗಳ ನಾಗರಿಕರು ಮತ್ತು ಉದ್ಯಮಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಶುದ್ಧ ಇಂಧನ, ಶುದ್ಧ ತಂತ್ರಜ್ಞಾನ, ಡಿಜಿಟಲ್ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ, ಆಹಾರ ಭದ್ರತೆ, ನಿರ್ಣಾಯಕ ಖನಿಜಗಳು ಮತ್ತು ಪೂರೈಕೆ ಸರಪಳಿಗಳಿಗೆ ಸಂಬಂಧಿಸಿದ ಹಲವಾರು ವಿಷಯಗಳ ಕುರಿತು ಸಂಭಾವ್ಯ ಸಹಕಾರವನ್ನು ಉಭಯ ನಾಯಕರು ಚರ್ಚಿಸಿದ್ದಾರೆ. ಕೆನಡಾ ಪ್ರವಾಸ ಮುಗಿಸಿದ ಮೋದಿ ಇದೀಗ ಕ್ರೊಯೇಷಿಯಾಗೆ ತೆರಳಿದ್ದಾರೆ. ಇದನ್ನೂ ಓದಿ: ವರುಣಾರ್ಭಟಕ್ಕೆ ಬಿರುಕು ಬಿಟ್ಟ ನಿಜಾಮರ ಕಾಲದ ಸೇತುವೆ – ಇತ್ತ ಮಲೆನಾಡಲ್ಲಿ ನದಿಗಳಿಗೆ ಜೀವಕಳೆ

  • ಗುಂಡು ತಗುಲಿ ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು

    ಗುಂಡು ತಗುಲಿ ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು

    ಹ್ಯಾಮಿಲ್ಟನ್: ಕೆನಡಾದ (Canada) ಒಂಟಾರಿಯೊ ಪ್ರಾಂತ್ಯದ ಹ್ಯಾಮಿಲ್ಟನ್‌ನಲ್ಲಿ (Hamilton) ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿನಿ (Indian Student) ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಘಟನೆಯಲ್ಲಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಗುಂಡಿಗೆ ಗುರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಈ ಗುಂಡಿನ ದಾಳಿಯಲ್ಲಿ ಮೊಹಾಕ್ ಕಾಲೇಜಿನಲ್ಲಿ ಓದಿತ್ತಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾಗೆ (Harsimrat Randhawa) ಗುಂಡು ತಗುಲಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಜನಿವಾರ ಕತ್ತರಿಸಿದ್ದು ಬಹಳ ದೊಡ್ಡ ತಪ್ಪು: ಪರಮೇಶ್ವರ್

    ಪ್ರಾಥಮಿಕ ತನಿಖೆಯಲ್ಲಿ ಕಪ್ಪು ಬಣ್ಣದ ಕಾರಿನ ಪ್ರಯಾಣಿಕನೊಬ್ಬ ಬಿಳಿ ಸೆಡಾನ್ ಕಾರಿನಲ್ಲಿದ್ದವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಎರಡೂ ವಾಹನಗಳು ಸ್ಥಳದಿಂದ ಹೊರಟುಹೋಯಿತು ಎಂದು ತಿಳಿದು ಬಂದಿದೆ. ಪೊಲೀಸರ ಪ್ರಕಾರ, ಈ ಗುಂಡಿನ ದಾಳಿಯು ಉದ್ದೇಶಿತ ಗುರಿಯಾಗಿರಲಿಲ್ಲ. ಘಟನೆಯ ಬಗ್ಗೆ ತನಿಖೆ ಆರಂಭವಾಗಿದ್ದು, ಶಂಕಿತರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ತಂಡವೊಂದು ಕಾರ್ಯನಿರ್ವಹಿಸುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ಟೆಂಟ್‌ ಸಾಮಗ್ರಿ ಪೂರೈಸುತ್ತಿದ್ದ ಕಂಪನಿಯ ಗೊಡೋನ್​ನಲ್ಲಿ ಅಗ್ನಿ ದುರಂತ

    ಕೆನಡಾದ ಭಾರತೀಯ ದೂತಾವಾಸವು ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಸಂಪರ್ಕ ಸಾಧಿಸಿ ಸೂಕ್ತ ಸಹಾಯವನ್ನು ಒದಗಿಸುವುದಾಗಿ ತಿಳಿಸಿದೆ. ಈ ಘಟನೆಯಿಂದಾಗಿ ಕೆನಡಾದ ಭಾರತೀಯ ವಿದ್ಯಾರ್ಥಿ ಸಮುದಾಯದಲ್ಲಿ ಆತಂಕ ಮೂಡಿದ್ದು, ಸ್ಥಳೀಯ ಆಡಳಿತ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸುವ ಭರವಸೆ ನೀಡಿದೆ. ಇದನ್ನೂ ಓದಿ: ಬಿರುಗಾಳಿ ಸಹಿತ ಮಳೆ – ರೇಷ್ಮೆ ಗೂಡಿಗೆ ಸಿಡಿಲು ಬಡಿದು ರೈತ ಸಾವು

  • ಮುಂಬೈ ದಾಳಿಕೋರ ರಾಣಾ ತನ್ನ ಪ್ರಜೆಯಲ್ಲ – ದಿಢೀರ್‌ ಪಾಕ್‌ ಸ್ಪಷ್ಟನೆ

    ಮುಂಬೈ ದಾಳಿಕೋರ ರಾಣಾ ತನ್ನ ಪ್ರಜೆಯಲ್ಲ – ದಿಢೀರ್‌ ಪಾಕ್‌ ಸ್ಪಷ್ಟನೆ

    ಇಸ್ಲಾಮಾಬಾದ್‌: ಮುಂಬೈ ದಾಳಿಯ (Mumbai Attack) ಉಗ್ರ ತಹವ್ವೂರ್ ರಾಣಾ (Tahawwur Rana) ತನ್ನ ಪ್ರಜೆಯಲ್ಲ, ಆತ ಕೆನಡಾದ (Canada) ಪ್ರಜೆ ಎಂದು ಪಾಕಿಸ್ತಾನ (Pakistan) ಹೇಳಿದೆ.

    ಅಮೆರಿಕದಿಂದ ರಾಣಾನನ್ನು ಭಾರತ ಕರೆ ತರುತ್ತಿದ್ದಂತೆ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಆತ ತನ್ನ ಹೆಸರನ್ನು ಹೇಳಬಹುದು ಎಂಬ ಭಯದಿಂದ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡದ ಪಾಕ್‌ ಈಗ ದಿಢೀರ್‌ ಸ್ಪಷ್ಟೀಕರಣ ನೀಡಿದೆ.

    ಈ ಸಂಬಂಧ ವಾರದ ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ಇಲಾಖೆ, ರಾಣಾ ಎರಡು ದಶಕಗಳಿಗೂ ಹೆಚ್ಚು ಕಾಲ ತನ್ನ ಪೌರತ್ವವನ್ನು ನವೀಕರಿಸದ ಕಾರಣ ಆತ ಪಾಕಿಸ್ತಾನಿ ಪ್ರಜೆಯಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು

    ಕಳೆದ ಎರಡು ದಶಕಗಳಿಂದ ತಹವ್ವೂರ್ ರಾಣಾ ತನ್ನ ಪಾಕಿಸ್ತಾನಿ ದಾಖಲೆಗಳನ್ನು ನವೀಕರಿಸಿಲ್ಲ. ಇದರಿಂದ ಆತ ಕೆನಡಾ ಪ್ರಜೆ ಎನ್ನುವುದು ಸ್ಪಷ್ಟವಾಗಿದೆ ಎಂದು ತಿಳಿಸಿದೆ.

    ಗುಪ್ತಚರ ವರದಿಗಳ ಪ್ರಕಾರ, ರಾಣಾ ಪಾಕಿಸ್ತಾನದ ಐಎಸ್‌ಐ ಜೊತೆ ಆಳವಾದ ಸಂಪರ್ಕ ಹೊಂದಿದ್ದ ಮತ್ತು ಪಾಕ್‌ ಸೇನೆಗೆ ಬೆಂಬಲ ನೀಡಿದ್ದ. ಮುಂಬೈ ದಾಳಿಯ ಸಂಚು ರೂಪಿಸುವಲ್ಲಿ ಪಾಕಿಸ್ತಾನದ ನೇರ ಪಾತ್ರದ ಬಗ್ಗೆ ರಾಣಾ ಬಹಿರಂಗ ಪಡಿಸುವ ಸಾಧ್ಯತೆಯಿದೆ.

    ಐಎಸ್‌ಐ ಭಾಗಿಯಿಂದ ಹಿಡಿದು ಲಷ್ಕರ್-ಎ-ತೊಯ್ಬಾದ ಜೊತೆಗಿನ ಸಮನ್ವಯದವರೆಗಿನ ಸಂಪೂರ್ಣ ಜಾಲವನ್ನು ರಾಣಾ ಬಹಿರಂಗಪಡಿಸುವ ಸಾಧ್ಯತೆಯಿದೆ.

    ಹೆಡ್ಲಿ ಮತ್ತು ಲಷ್ಕರ್ ಜೊತೆ ರಾಣಾ ಸಂಪರ್ಕ
    ದಾಳಿಯ ಮೊದಲು ಮುಂಬೈ ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯೊಂದಿಗಿನ ನಿಕಟ ಸಂಬಂಧದಿಂದಾಗಿ ರಾಣಾ ಹೆಸರು ಮುನ್ನೆಲೆಗೆ ಬಂದಿತ್ತು.

    ತಹಾವೂರ್ ರಾಣಾ ಯಾರು?
    ತಹಾವೂರ್ ರಾಣಾ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ. ತನ್ನ ಬಾಲ್ಯದ ಗೆಳೆಯ ಡೇವಿಡ್ ಕೋಲ್ಮನ್ ಹೆಡ್ಲಿ, ದಾವೂದ್ ಗಿಲಾನಿ ಮತ್ತು ಇತರರಿಗೆ ಸಹಕರಿಸಿದ್ದ. ಈ ಮೂಲಕ ಮುಂಬೈನಲ್ಲಿ ಲಷ್ಕರ್ ಭಯೋತ್ಪಾದಕ ದಾಳಿಯ ಯೋಜನೆ ಮತ್ತು ಕಾರ್ಯಗತಗೊಳಿಸಿದ್ದ.

    ರಾಣಾ ನವೆಂಬರ್ 11 ಮತ್ತು 21, 2008 ರ ನಡುವೆ ದುಬೈ ಮೂಲಕ ಮುಂಬೈಗೆ ಬಂದಿದ್ದ. ಪೊವೈನಲ್ಲಿರುವ ಹೋಟೆಲ್ ರಿನೈಸಾನ್ಸ್‌ನಲ್ಲಿ ತಂಗಿ ದಾಳಿಗೆ ಬೇಕಾದ ಸಿದ್ಧತೆ ಪರಿಶೀಲಿಸಿದ್ದ. ಈತ ದುಬೈಗೆ ಹೋದ 5 ದಿನಗಳ ಬಳಿಕ ದಾಳಿ ನಡೆದಿತ್ತು.

    ಭಾರತವು ಜೂನ್ 2020 ರಲ್ಲಿ ರಾಣಾನನ್ನು ಗಡೀಪಾರುಗಾಗಿ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಈ ವರ್ಷದ ಫೆಬ್ರವರಿಯಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು ಗಡೀಪಾರು ಮಾಡಲಾಗುವುದು ಎಂದು ದೃಢಪಡಿಸಿದ್ದರು.

    ಮುಂಬೈ ದಾಳಿ:
    2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

  • ಕೆನಡಾದಲ್ಲಿ ಭಾರತೀಯ ಪ್ರಜೆಗೆ ಚಾಕುವಿನಿಂದ ಇರಿದು ಕೊಲೆ

    ಕೆನಡಾದಲ್ಲಿ ಭಾರತೀಯ ಪ್ರಜೆಗೆ ಚಾಕುವಿನಿಂದ ಇರಿದು ಕೊಲೆ

    ಒಟ್ಟಾವಾ: ಭಾರತೀಯ ಪ್ರಜೆಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೆನಡಾದ(Canada) ರಾಕ್‌ಲ್ಯಾಂಡ್(Rockland) ಪ್ರದೇಶದಲ್ಲಿ ನಡೆದಿದೆ ಎಂದು ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ(Indian Embassy in Canada) ಶನಿವಾರ ತಿಳಿಸಿದೆ.

    `ಒಟ್ಟಾವಾ(Ottawa) ಬಳಿಯ ರಾಕ್‌ಲ್ಯಾಂಡ್‌ನಲ್ಲಿ ಚಾಕುವಿನಿಂದ ಇರಿದು ಭಾರತೀಯನನ್ನು ಕೊಲೆ ಮಾಡಿರುವ ದುರಂತದ ಘಟನೆಗೆ ನಾವು ತೀವ್ರ ದುಃಖಿತರಾಗಿದ್ದೇವೆ. ಶಂಕಿತ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಸಮುದಾಯ ಸಂಘದ ಮೂಲಕ ಕೊಲೆಯಾದ ವ್ಯಕ್ತಿಯ ಸಂಬಂಧಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ನಾವು ನಿಕಟ ಸಂಪರ್ಕದಲ್ಲಿದ್ದೇವೆ’ ಎಂದು ಭಾರತೀಯ ರಾಯಭಾರಿ ಕಚೇರಿ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಇದನ್ನೂ ಓದಿ: ಝೆಲೆನ್ಸ್ಕಿ ತವರೂರು ಕ್ರಿವಿ ರಿಹ್‌ ಮೇಲೆ ರಷ್ಯಾ ದಾಳಿ – 18 ಮಂದಿ ಸಾವು

    ಇಂದು ಬೆಳಿಗ್ಗೆ ಕ್ಲಾರೆನ್ಸ್-ರಾಕ್‌ಲ್ಯಾಂಡ್‌ನಲ್ಲಿ ಓರ್ವನನ್ನು ಕೊಲೆ ಮಾಡಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜ್ಯದಲ್ಲಿ ಏ.8ರವರೆಗೆ ಮಳೆಯ ಮುನ್ಸೂಚನೆ

  • ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ಬಂದ್‌! ಪರಿಣಾಮವೇನು?

    ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ಬಂದ್‌! ಪರಿಣಾಮವೇನು?

    ಸಾಮಾನ್ಯವಾಗಿ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ದೇಶಗಳಿಗೆ ತೆರಳಲು ಚಿಂತಿಸುತ್ತಾರೆ. ಅಂತಹ ದೇಶಗಳ ಪೈಕಿ ಅಮೆರಿಕ, ಕೆನಡಾ (Canada) ಸೇರಿದಂತೆ ಇನ್ನಿತರ ದೇಶಗಳು ಈ ಪಟ್ಟಿಯಲ್ಲಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಅಮೆರಿಕ ಸರ್ಕಾರ ವಿದ್ಯಾರ್ಥಿಗಳಿಗೆ ನೀಡುತ್ತಿದ್ದಂತಹ ವೀಸಾ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಿದೆ. ಏನಿದರ ಹಿಂದಿನ ಕಾರಣ ಹಾಗೂ ಈ ವೀಸಾ ಸಂಖ್ಯೆಗಳ ಕಡಿಮೆ ಮಾಡುವುದರಿಂದ ಭಾರತೀಯ ವಿದ್ಯಾರ್ಥಿಗಳ ಮೇಲಾಗುವ ಪರಿಣಾಮವೇನು? ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

    ಕಳೆದ ವರ್ಷ 2024ರ ಜನವರಿಯಿಂದ ಸೆಪ್ಟೆಂಬರ್‌ವರೆಗೆ ಭಾರತೀಯರಿಗೆ 64,008 ವಿದ್ಯಾರ್ಥಿ ವೀಸಾಗಳನ್ನು (Student Visa) ನೀಡಲಾಗಿದೆ. ಅದೇ ರೀತಿ 2023ರ ಜನವರಿಯಿಂದ ಸೆಪ್ಟೆಂಬರ್‌ವರೆಗೆ 1.03 ಲಕ್ಷ ವೀಸಾಗಳನ್ನು ನೀಡಲಾಗಿತ್ತು. ಕಳೆದೆರಡು ವರ್ಷಗಳಲ್ಲಿ ಭಾರತೀಯರಿಗೆ ನೀಡಿರುವ ವಿದ್ಯಾರ್ಥಿ ವೀಸಾಗಳ ತುಲನೆ ಮಾಡಿದಾಗ, ಅಮೆರಿಕ ಸರ್ಕಾರ ಶೇ.41 ರಷ್ಟು ವೀಸಾಗಳನ್ನು ತಿರಸ್ಕರಿಸಿದೆ. ಇದು ದಶಕದಲ್ಲಿ ಅತಿ ಹೆಚ್ಚು ವೀಸಾಗಳನ್ನು ತಿರಸ್ಕರಿಸಿದೆ ಎಂದು ವಿದೇಶಾಂಗ ಇಲಾಖೆ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಯುಕೆ, ಕೆನಡಾ ಮತ್ತು ಆಸ್ಟ್ರೇಲಿಯಾದಂತಹ ಹಲವಾರು ದೇಶಗಳು ವಿದ್ಯಾರ್ಥಿಗಳಿಗೆ ನೀಡುತ್ತಿದ್ದಂತಹ ವೀಸಾ ನಿಯಮಗಳಲ್ಲಿ ಬದಲಾವಣೆಗಳನ್ನು ತರುತ್ತಿವೆ. ಇದೇ ಸಮಯದಲ್ಲಿ ಅಮೆರಿಕ ಸರ್ಕಾರವು (America Government) ಕೂಡ ವಿದ್ಯಾರ್ಥಿ ವೀಸಾ ತಿರಸ್ಕರಿಸುವುದನ್ನು ಹೆಚ್ಚಿಸಿದೆ.

    2023ರ ಅಕ್ಟೋಬರ್‌ನಿಂದ 2024ರ ಸೆಪ್ಟೆಂಬರ್‌ವರೆಗೆ ಅಮೆರಿಕ ಸರ್ಕಾರ ಒಟ್ಟು 6.79 ಲಕ್ಷ ವಿದ್ಯಾರ್ಥಿ ವೀಸಾಗಳನ್ನು ಸ್ವೀಕರಿಸಿದೆ. ಈ ಪೈಕಿ ಒಟ್ಟು 2.79 ಲಕ್ಷ ತಿರಸ್ಕರಿಸಿದೆ. ಇದಕ್ಕೂ ಮುನ್ನ 2022 ಮತ್ತು 2023ರಲ್ಲಿ ಒಟ್ಟು 6.99 ಲಕ್ಷ ಅರ್ಜಿಗಳನ್ನು ಸ್ವೀಕರಿಸಿ, 2.53 ಲಕ್ಷ ಅರ್ಜಿಗಳನ್ನು ತಿರಸ್ಕರಿಸಿತ್ತು. ಈ ಪೈಕಿ ಶೇ.36ರಷ್ಟು ಏರಿಕೆಯಾಗಿದೆ.

    ಏನಿದು F-1 ವೀಸಾ?
    F-1 ಎಂಬುದು ಶಾಲಾ ಕಾಲೇಜು ಅಥವಾ ಇನ್ನಿತರ ಅಧ್ಯಯನಕ್ಕಾಗಿ ನಿರ್ದಿಷ್ಟ ಅವಧಿಯವರೆಗೆ ಅಮೆರಿಕದಲ್ಲಿ ವಾಸಿಸಲು ಈ ವೀಸಾವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. F1 ವೀಸಾ ಎನ್ನುವುದು ವಿದೇಶಿ ವಿದ್ಯಾರ್ಥಿಗಳಿಗೆ ನೀಡಲಾಗುವ ಅಮೆರಿಕಾ ವೀಸಾ ಆಗಿದ್ದು, ಇದನ್ನು ಮುಖ್ಯವಾಗಿ ವಿದ್ಯಾರ್ಥಿಗಳು ಅಮೆರಿಕಾದಲ್ಲಿ ತಮ್ಮ ವಿದ್ಯಾಭ್ಯಾಸಕ್ಕಾಗಿ ಬಳಸುತ್ತಾರೆ. ಈ ವೀಸಾ ಮೂಲಕ, ವಿದ್ಯಾರ್ಥಿಗಳು ಅಮೆರಿಕಾದಲ್ಲಿ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್‍ಗಳನ್ನು ಪೂರ್ಣಗೊಳಿಸಬಹುದು. ಈ ವೀಸಾ ಅನ್ನು ಪಡೆಯಲು ವಿದ್ಯಾರ್ಥಿಗಳು ತಾವು ಸೇರ ಬಯಸುವ ಕಾಲೇಜು ಅಥವಾ ವಿಶ್ವವಿದ್ಯಾಲಯದಿಂದ I-20 ಫಾರ್ಮ್ ಪಡೆದು, ಆಧಾರಿತ ದಾಖಲೆಗಳನ್ನು ಸಲ್ಲಿಸಿ, ಬಳಿಕ ವೀಸಾ ಪಡೆಯಲು ಸಂದರ್ಶನ ನೀಡಬೇಕಾಗುತ್ತದೆ.

    ವೀಸಾ ನಿರಾಕರಣೆಗೆ ಕಾರಣವೇನು?
    ಕಳೆದ 2-3 ವರ್ಷಗಳಲ್ಲಿ ಕೆನಡಾ ಹಾಗೂ ಅಮೆರಿಕ ದೇಶಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಹೀಗಾಗಿ 2024ರಲ್ಲಿ ಕೆನಡಾ ಹಾಗೂ ಅಮೆರಿಕ ದೇಶಗಳು ವಿದೇಶಗಳಿಂದ ಬರುವ ವಿದ್ಯಾರ್ಥಿಗಳ ಸಂಖ್ಯೆಗೆ ಹೊಸ ನಿಯಮವನ್ನು ರೂಪಿಸಿಕೊಂಡಿದ್ದು, ಇಂತಿಷ್ಟು ವಿದ್ಯಾರ್ಥಿಗಳಿಗೆ ಮಾತ್ರ ವೀಸಾ ನೀಡುವಂತೆ ನಿರ್ಧರಿಸಿದ್ದು, ವಸತಿ, ಆರೋಗ್ಯ, ರಕ್ಷಣೆ ಹಾಗೂ ಸಾರ್ವಜನಿಕ ಸೇವೆಗಳ ಮೇಲಿನ ಒತ್ತಡ ನಿಯಂತ್ರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ವೀಸಾಗಳನ್ನು ತಿರಸ್ಕರಿಸಿದೆ.

    ಪ್ರತಿಯೊಂದು ದೇಶದಲ್ಲಿಯೂ ಹೊಸ ನಿವಾಸಿಗಳ ಒಳಹರಿವು ಹೆಚ್ಚಾದಂತೆ ದೇಶದ ಮೂಲಸೌಕರ್ಯ ಮತ್ತು ಸಂಪನ್ಮೂಲಗಳಲ್ಲಿ ಹೆಚ್ಚಿನ ಬೇಡಿಕೆ ಉಂಟಾಗುತ್ತದೆ. ಹೀಗಾಗಿ ಅಲ್ಲಿನ ಪ್ರಜೆಗಳು ಇದರ ಸಮಸ್ಯೆಯನ್ನು ಅನುಭವಿಸುವ ಪರಿಸ್ಥಿತಿ ಉಂಟಾಗುತ್ತದೆ.

    ವಸತಿ ಬೇಡಿಕೆ:
    ಬೇರೆ ದೇಶಗಳಿಂದ ಬರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳವಾದಾಗ ಹೆಚ್ಚಿನ ಜನರಿಗೆ ವಸತಿಯ ಅವಶ್ಯಕತೆ ಇರುತ್ತದೆ. ಹೀಗಿರುವಾಗ ವಸತಿ ಕೊರತೆ, ಬಾಡಿಗೆಯಲ್ಲಿನ ಹೆಚ್ಚಳ ಹಾಗೂ ಸೂಕ್ತ ವಾಸ ಸ್ಥಳಗಳನ್ನು ಹುಡುಕುವಲ್ಲಿ ತೊಂದರೆ ಉಂಟಾಗುತ್ತದೆ.

    ಆರೋಗ್ಯ ಸೇವೆ:
    ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳವಾದಾಗ ಆಸ್ಪತ್ರೆ, ಚಿಕಿತ್ಸೆ ಹಾಗೂ ಔಷಧಾಲಯಗಳು ಸೇರಿದಂತೆ ಇನ್ನಿತರ ಆರೋಗ್ಯ ಸೌಲಭ್ಯಗಳ ಮೇಲೆ ಒತ್ತಡ ಉಂಟುಮಾಡುತ್ತದೆ. ಆರೋಗ್ಯ ಸೇವೆ ಎನ್ನುವುದು ಅಗತ್ಯವಾದ ಮೂಲಸೌಕರ್ಯವಾಗಿದ್ದು, ಎಲ್ಲರಿಗೂ ಅವಶ್ಯಕವಾದ ವೈದ್ಯಕೀಯ ನೆರವು ಸಿಗಲೇಬೇಕಾಗಿರುತ್ತದೆ.

    ಆರ್ಥಿಕ ಪರಿಣಾಮ:
    ಬೇರೆ ಬೇರೆ ದೇಶಗಳ ವಿದ್ಯಾರ್ಥಿಗಳು ಬೋಧನಾ ಶುಲ್ಕ ಮತ್ತು ಖರ್ಚಿನಿಂದಾಗಿ ದೇಶಕ್ಕೆ ಆರ್ಥಿಕ ಕೊಡುಗೆಯನ್ನು ನೀಡುತ್ತಾರೆ. ಆದರೆ ವಸತಿ ಮತ್ತು ಇನ್ನಿತರ ಸೇವೆಗಳ ಬೇಡಿಕೆ ಹೆಚ್ಚಾದಂತೆ ಜೀವನದ ಖರ್ಚು ಹೆಚ್ಚಾಗುತ್ತದೆ. ಹೀಗಾಗಿ ದೇಶಿಯ ಮತ್ತು ಅಂತರಾಷ್ಟ್ರೀಯ ನಿವಾಸಿಗಳ ಮೇಲೆ ಇದು ಪರಿಣಾಮ ಬೀರುತ್ತದೆ. ಹೀಗಾಗಿ ಕೆನಡಾ, ಅಮೆರಿಕ ಸೇರಿದಂತೆ ಇನ್ನಿತರ ದೇಶಗಳು ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ವಿದ್ಯಾರ್ಥಿ ವೀಸಾಗಳನ್ನು ತಿರಸ್ಕರಿಸುವಲ್ಲಿ ಮುಂದಾಗಿದೆ.

  • ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ

    ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ

    ಒಟ್ಟಾವಾ: ಅಮೆರಿಕ ದೇಶಗಳಿಗೆ ಆಮದಾಗುವ ವಾಹನಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ ಬೆನ್ನಲ್ಲೇ, ಅಮೆರಿಕ ಜೊತೆಗಿನ ಹಳೆಯ ಆರ್ಥಿಕ ಮತ್ತು ರಕ್ಷಣಾ ಸಂಬಂಧಗಳು ಕೊನೆಗೊಂಡಿದೆ ಎಂದು ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ (Mark Carney) ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

    ಈ ಕುರಿತು ಮಾತನಾಡಿದ ಅವರು, ಅಮೆರಿಕದ ಸುಂಕ (US Tariff) ವಿಧಿಸುವ ಕ್ರಮವು ಕೆನಡಾದ ಆರ್ಥಿಕತೆಯ ಮೇಲಿನ ನೇರ ದಾಳಿಯಾಗಿದೆ. ಇದು ಕೆನಡಾದ 5 ಲಕ್ಷ ಆಟೋಮೊಬೈಲ್‌ ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ. ನಮ್ಮ ಭದ್ರತೆ ಮತ್ತು ವ್ಯಾಪಾರ ಸಂಬಂಧಗಳ ಮಾತುಕತೆಗೆ ಮತ್ತೆ ಸಮಯ ಬರುತ್ತದೆ ಎಂದು ಕಾರ್ನಿ ಹೇಳಿದ್ದಾರೆ. ಇದನ್ನೂ ಓದಿ: ಮೂರು ವರ್ಷಗಳಿಂದ ಪಾಕ್‌ ಜೈಲಲ್ಲಿದ್ದ ಭಾರತದ ಮೀನುಗಾರ ನೇಣಿಗೆ ಶರಣು

    ಟ್ರಂಪ್‌ ಅವರ ಸುಂಕ ವಿಧಿಸುವ ಕ್ರಮವು ಅನ್ಯಾಯದ ಕ್ರಮ. ಈ ಮೂಲಕ ಟ್ರಂಪ್ ದೇಶಗಳ ನಡುವೆ ಅಸ್ತಿತ್ವದಲ್ಲಿರುವ ವ್ಯಾಪಾರ ಒಪ್ಪಂದಗಳನ್ನು ಉಲ್ಲಂಘಿಸುತ್ತಿದ್ದಾರೆ. ಯುನೈಟೆಡ್‌ ಸ್ಟೇಟ್ಸ್‌ನೊಂದಿಗಿನ ಸಂಬಂಧವನ್ನು ಶಾಶ್ವತವಾಗಿ ಬದಲಾಯಿಸುತ್ತಿದ್ದಾರೆ. ಭವಿಷ್ಯದ ವ್ಯಾಪಾರ ಸಂಬಂಧಗಳನ್ನು ಲೆಕ್ಕಿಸುತ್ತಿಲ್ಲ ಎಂದು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಭಾರತಕ್ಕಿಂತಲೂ ನಾವು ಹಿಂದಿದ್ದೇವೆ – ಚುನಾವಣಾ ವ್ಯವಸ್ಥೆಯನ್ನೇ ಬದಲಿಸಲು ಮುಂದಾದ ಟ್ರಂಪ್‌

    ನಮ್ಮ ಆರ್ಥಿಕತೆ, ಮಿಟರಿ ಸಹಕಾರ ಮತ್ತು ಭದ್ರತೆಯ ಆಧಾರದ ಮೇಲೆ ಅಮೆರಿಕದ ಜೊತೆಗಿನ ಹಳೆಯ ಸಂಬಂಧಗಳನ್ನು ಮುಗಿಸುತ್ತಿದ್ದೇವೆ. ಟ್ರಂಪ್‌ ಸುಂಕದ ವಿರುದ್ಧ ಹೋರಾಡುವುದು ಆರ್ಥಿಕತೆ ರಕ್ಷಿಸುವುದು ನಮ್ಮ ಮುಂದಿನ ಉದ್ದೇಶ. ಪ್ರತೀಕಾರದ ವ್ಯಾಪಾರ ಕ್ರಮಗಳೊಂದಿಗೆ ಹೋರಾಡುತ್ತೇವೆ, ಇದರಿಂದ ಹೆಚ್ಚು ಪರಿಣಾಮ ಬೀರುವುದು ಅಮೆರಿಕದ ಮೇಲೆಯೇ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಅಮೆರಿಕ ಆಮದು ಮೇಲಿನ ಸುಂಕ ಕಡಿತ – ಭಾರತದಿಂದ ಮೊದಲ ಹಂತದ ವ್ಯಾಪಾರ ಒಪ್ಪಂದ

  • ಕೆನಡಾ ಚುನಾವಣೆ| ಮೋದಿಯನ್ನು ಭೇಟಿಯಾಗಿದ್ದಕ್ಕೆ ಚಂದ್ರ ಆರ್ಯಗೆ ಟಿಕೆಟ್‌ ಮಿಸ್‌

    ಕೆನಡಾ ಚುನಾವಣೆ| ಮೋದಿಯನ್ನು ಭೇಟಿಯಾಗಿದ್ದಕ್ಕೆ ಚಂದ್ರ ಆರ್ಯಗೆ ಟಿಕೆಟ್‌ ಮಿಸ್‌

    ಒಟ್ಟಾವಾ: ಕೆನಡಾದಲ್ಲಿ(Canada Election) ಅಧಿಕಾರದಲ್ಲಿರುವ ಲಿಬರಲ್ ಪಾರ್ಟಿ ಭಾರತದ (India) ಮೇಲೆ ದ್ವೇಷ ಮುಂದುವರಿಸಿದೆ. ಖಲಿಸ್ತಾನಿಗಳ (Khalistan) ವಿರುದ್ಧ ಕಠಿಣ ನಿಲುವು ತಾಳಿದ್ದ ತುಮಕೂರು ಮೂಲದ ಸಂಸದ ಚಂದ್ರ ಆರ್ಯಗೆ (Chandra Arya) ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡಲು ನಿರಾಕರಿಸಿದೆ. ಇದನ್ನೂ ಓದಿ: ಓಲಾ, ಊಬರ್ ಕ್ಯಾಬ್‍ಗಳಿಗೆ ಕೇಂದ್ರ ಸರ್ಕಾರದಿಂದ ಶಾಕ್ – ಸಹಕಾರ್ ಟ್ಯಾಕ್ಸಿ ಲೋಕಾರ್ಪಣೆಗೆ ಸಿದ್ಧತೆ

     

    ಕಳೆದ ವರ್ಷ ಭಾರತ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ಮಾಡಿದ್ದ ಬಗ್ಗೆ ಸರ್ಕಾರಕ್ಕೆ ಚಂದ್ರ ಆರ್ಯ ಮಾಹಿತಿ ನೀಡಿಲ್ಲ ಎಂಬ ನೆಪ ಹೇಳಿ ಟಿಕೆಟ್ ಕೊಟ್ಟಿಲ್ಲ. ಕೆನಡಾ ಮತ್ತು ಭಾರತ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹದೆಗೆಟ್ಟ ಕಾರಣವನ್ನೂ ನೀಡಲಾಗಿದೆ. ಇದನ್ನೂ ಓದಿ : ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ – ಟ್ರಂಪ್‌ ಮತ್ತೆ ಹೊಸ ಬಾಂಬ್‌

    ತಮ್ಮ ಮೇಲೆ ಭಾರತ ಸರ್ಕಾರದ ಪ್ರಭಾವವಿದೆ ಎಂಬ ಆರೋಪಗಳನ್ನು ಚಂದ್ರ ಆರ್ಯ ತಿರಸ್ಕರಿಸಿದ್ದಾರೆ. ಏಪ್ರಿಲ್ 28ಕ್ಕೆ ಕೆನಡಾ ಸಂಸತ್ ಚುನಾವಣೆ ನಡೆಯಲಿದೆ.

     

  • ಕೆನಡಾ ಅಮೆರಿಕದ ಭಾಗವಾಗಲ್ಲ – ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಧಾನಿ ಮಾರ್ಕ್‌ ಕಾರ್ನಿ ಘೋಷಣೆ

    ಕೆನಡಾ ಅಮೆರಿಕದ ಭಾಗವಾಗಲ್ಲ – ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಧಾನಿ ಮಾರ್ಕ್‌ ಕಾರ್ನಿ ಘೋಷಣೆ

    ಒಟ್ಟಾವಾ: ಕೆನಡಾದ 24ನೇ ಪ್ರಧಾನ ಮಂತ್ರಿಯಾಗಿ ಮಾರ್ಕ್ ಕಾರ್ನಿ (Mark Carney) ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಟ್ರಂಪ್‌ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಆಕಾರದಲ್ಲಾಗಲಿ, ರೂಪದಲ್ಲಾಗಲಿ ಕೆನಡಾ (Canada), ಅಮೆರಿಕದ ಭಾಗವಾಗುವುದಿಲ್ಲ ಎಂದರಲ್ಲದೇ ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಸುಂಕ ವಿಧಿಸುವ ಕ್ರಮವನ್ನು ಎದುರಿಸುವುದೇ ನಮ್ಮ ಪ್ರಮುಖ ಆದ್ಯತೆ ಎಂದು ಗುಡುಗಿದ್ದಾರೆ.

    ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಮಾರ್ಕ್‌ ಕಾರ್ನಿ, ಕೆನಡಾ ಆಕಾರ – ಗಾತ್ರದಲ್ಲಿ, ಯಾವುದೇ ರೀತಿಯಲ್ಲಾಗಲಿ ಅಮೆರಿಕದ ಭಾಗವಾಗುವುದಿಲ್ಲ. ಆದ್ರೆ ನಮ್ಮ ಸರ್ಕಾರ ಎರಡೂ ದೇಶದ ಹಿತಾಸಕ್ತಿಯನ್ನು ಹೆಚ್ಚಿಸಲು ವಾಷಿಂಗ್ಟನ್‌ನೊಂದಿಗೆ ಒಟ್ಟಾಗಿ ಕೆಲಸ ಮಾಡಬಹುದು ಭರವಸೆ ನೀಡಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ನು ಮುಂದೆ ಕಸಕ್ಕೂ ಸರ್ವಿಸ್‌ ಚಾರ್ಜ್‌ – ಏ.1 ರಿಂದ ಜಾರಿ

    ಇದೇ ವೇಳೆ ಟ್ರಂಪ್‌ ಅವರನ್ನು ಭೇಟಿಯಾಗುವ ವಿಚಾರ ಕುರಿತು ಪ್ರತಿಕ್ರಿಯಿಸಿ, ಕೆನಡಾ ಅನುಭವಿ ಕ್ಯಾಬಿನೆಟ್‌ ಹೊಂದಿದ್ದು, ಅತ್ಯಂತ ವೇಗವಾಗಿ ಕೆಲಸ ಮಾಡುತ್ತದೆ. ಅಲ್ಲದೇ ಭವಿಷ್ಯವನ್ನು ರಕ್ಷಿಸುತ್ತಾ, ನಮ್ಮ ಆರ್ಥಿಕತೆಯನ್ನು ಸುರಕ್ಷಿತಗೊಳಿಸುತ್ತದೆ. ಕೆನಡಾದ ಸಾರ್ವಭೌಮತ್ವಕ್ಕೆ ಗೌರವ ಕೊಡುವುದಾದರೇ ಟ್ರಂಪ್‌ ಅವರನ್ನು ಭೇಟಿಯಾಗಲು ಒಪ್ಪುತ್ತೇನೆ ಎಂದು ಖಡಕ್ಕಾಗಿ ಹೇಳಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಮನೆಯಿಂದ ಹೊರಗೆ ಬರಬೇಡಿ: ದಿನೇಶ್ ಗುಂಡೂರಾವ್

    ಕಳೆದ ಜನವರಿಯಲ್ಲಿ ಟ್ರಂಪ್‌ ಅಧಿಕಾರ ಸ್ವೀಕರಿಸಿದ ಬಳಿಕ ಒಟ್ಟಾವ ಗಡಿಯಾಚೆಗಿನ ಸಂಬಂಧಗಳು ಕುಸಿದಿವೆ. ಅಲ್ಲದೇ ಕೆನಡಾವನ್ನು 51ನೇ ರಾಜ್ಯವಾಗಿ ಮಾಡಿಕೊಳ್ಳುವ ಚಿಂತನೆ ಹಾಗೂ ಕೆನಡಾ ಉತ್ಪನ್ನಗಳ ಮೇಲೆ ಸುಂಕ ವಿಧಿಸುವ ಟ್ರಂಪ್‌ ಅವರ ನಿರ್ಧಾರಗಳು ಉಭಯ ದೇಶಗಳ ಸಂಬಂಧ ಮತ್ತಷ್ಟು ಹಳಸುವಂತೆ ಮಾಡಿದೆ. ‌ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ವಕ್ಫ್‌ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ – ಅಧ್ಯಕ್ಷರಾಗಿ ಸೈಯದ್ ಹುಸೈನಿ ಆಯ್ಕೆ

  • ಕೆನಡಾ ನೂತನ ಪ್ರಧಾನಿಯಾಗಿ ಕಾರ್ನಿ ಪ್ರಮಾಣ ವಚನ ಸ್ವೀಕಾರ

    ಕೆನಡಾ ನೂತನ ಪ್ರಧಾನಿಯಾಗಿ ಕಾರ್ನಿ ಪ್ರಮಾಣ ವಚನ ಸ್ವೀಕಾರ

    ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ (Mark Carney) ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

    ಈ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಕೆನಡಾದ ಅಧ್ಯಕ್ಷರಾಗಿದ್ದರು. ಜನವರಿಯಲ್ಲಿ ಜಸ್ಟಿನ್ ಟ್ರುಡೋ ರಾಜೀನಾಮೆ ನೀಡಿದ್ದ ಹಿನ್ನೆಲೆ ಇತ್ತೀಚಿಗಷ್ಟೆ ಕಾರ್ನಿ ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಇದೀಗ ಕೆನಡಾದ 24ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಇದನ್ನೂ ಓದಿ: ರೈಲು ಹೈಜಾಕ್‌ನಲ್ಲಿ ಸೆರೆಯಾಗಿದ್ದ ಎಲ್ಲಾ 214 ಒತ್ತೆಯಾಳುಗಳ ಸಾಮೂಹಿಕ ಹತ್ಯೆ: ಬಿಎಲ್‌ಎ ಹೇಳಿಕೆ

    ಈ ಕುರಿತು ಮಾತನಾಡಿರುವ ಕಾರ್ನಿ, ತಮ್ಮ ಸರ್ಕಾರ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು ಸಿದ್ಧವಾಗಿದ್ದು, ಕೆನಡಿಯನ್ನರ ನಿರೀಕ್ಷೆ ಪೂರ್ಣಗೊಳಿಸಲಿದ್ದೇವೆ. ವೇಗವಾಗಿ ಚಲಿಸುವ, ನಮ್ಮ ಆರ್ಥಿಕತೆಯನ್ನು ಸುರಕ್ಷಿತಗೊಳಿಸುವ ಮತ್ತು ಕೆನಡಾದ ಭವಿಷ್ಯವನ್ನು ರಕ್ಷಿಸುವ ಅನುಭವಿ ಸಚಿವ ಸಂಪುಟ ನಮ್ಮದು ಎಂದಿದ್ದಾರೆ.

    2013ರಲ್ಲಿ ಲಿಬರಲ್ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದ ಜಸ್ಟಿನ್ ಟ್ರುಡೋ, 2025ರ ಜನವರಿ 6 ರಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು.ಇದನ್ನೂ ಓದಿ: ರೈತ ಮುಖಂಡ ರಾಕೇಶ್ ಟಿಕಾಯತ್ ಕಾರು ಅಪಘಾತ – ಸೀಟ್‌ ಬೆಲ್ಟ್‌ ಹಾಕಿದ್ದಕ್ಕೆ ಬಚಾವ್‌