Tag: ಕೆನಡಾ

  • ಲ್ಯಾಂಡಿಂಗ್‌ ವೇಳೆ ರನ್‌ ವೇಯಲ್ಲಿ ಪಲ್ಟಿಯಾಗಿ ಹೊತ್ತಿ ಉರಿದ ವಿಮಾನ!

    ಲ್ಯಾಂಡಿಂಗ್‌ ವೇಳೆ ರನ್‌ ವೇಯಲ್ಲಿ ಪಲ್ಟಿಯಾಗಿ ಹೊತ್ತಿ ಉರಿದ ವಿಮಾನ!

    ಟೊರೊಂಟೋ: ಲ್ಯಾಂಡ್‌ ಆಗಿ ರನ್‌ ವೇಯಲ್ಲಿ ಸಾಗುವಾಗ ವಿಮಾನ ಪಲ್ಟಿಯಾಗಿ ಹೊತ್ತಿ ಉರಿದ (Plane Crash) ಘಟನೆ ಕೆನಡಾದ (Canada) ರಾಜಧಾನಿ ಟೊರೊಂಟೋದಲ್ಲಿ (Toronto) ನಡೆದಿದೆ.

    80 ಜನರನ್ನು ಹೊತ್ತಿದ್ದ ಡೆಲ್ಟಾ ಏರ್ ಲೈನ್ಸ್ ವಿಮಾನ ಲ್ಯಾಂಡ್‌ ಆಗಿ ರನ್‌ವೇಯಲ್ಲಿ ಮುಂದಕ್ಕೆ ಬರುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ವಿಮಾನ ದುರಂತದಲ್ಲಿ ಕನಿಷ್ಠ 18 ಜನರಿಗೆ ಗಾಯಗಳಾಗಿವೆ. ಇದರಲ್ಲಿ ಒಂದು ಮಗು ಸೇರಿದಂತೆ, ಓರ್ವ ವ್ಯಕ್ತಿ ಹಾಗೂ ಮಹಿಳೆಯೊಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ವಿಮಾನ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಬಿಜೆಪಿ ಸಿಎಂಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ? – ಡಿಕೆಶಿ ಫುಲ್‌ ಗರಂ

    76 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದ ವಿಮಾನ ಅಮೆರಿಕದ ಮಿನ್ನೇಸೋಟದ ಮಿನ್ನಿಯಾಪೋಲಿಸ್‌ನಿಂದ ಕೆನಡಾದ ಅತಿದೊಡ್ಡ ಮಹಾನಗರ ಟೊರೊಂಟೊಕ್ಕೆ ಬಂದಿತ್ತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

    ವಿಮಾನ ಪಲ್ಟಿಯಾಗುತ್ತಿದ್ದಂತೆ ನಿಲ್ದಾಣದಲ್ಲಿದ್ದ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಗಾಯಗಳುಗಳನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಘಟನೆಯ ನಂತರ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಸುಮಾರು ಎರಡು ಗಂಟೆಗಳ ಬಳಿಕ ವಿಮಾನ ನಿಲ್ದಾಣದಿಂದ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇತ್ತೀಚೆಗೆ ಉತ್ತರ ಅಮೆರಿಕದಲ್ಲಿ ವಾಷಿಂಗ್ಟನ್‌ನಲ್ಲಿ ಯುಎಸ್ ಸೇನಾ ಹೆಲಿಕಾಪ್ಟರ್ ಮತ್ತು ಪ್ಯಾಸೆಂಜರ್ ಜೆಟ್ ನಡುವೆ ಆಕಾಶದಲ್ಲಿ ಡಿಕ್ಕಿ ಸಂಭವಿಸಿ 67 ಜನರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

  • ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ – ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ

    ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ – ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ

    ಒಟ್ಟಾವಾ: ಕೆನಡಾದ (Canadaa) ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಚಂದ್ರ ಆರ್ಯ ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಲಿಬರಲ್ ಪಕ್ಷದಿಂದ ಪ್ರಧಾನಿ ಹುದ್ದೆಗೆ ಉಮೇದುವಾರಿಕೆ ಸಲ್ಲಿಸಿದ ಬಳಿಕ ಕನ್ನಡದಲ್ಲಿ (Kannada) ಮಾತನಾಡಿ ಚಂದ್ರ ಆರ್ಯ (Indian-origin MP Chandra Arya) ಗಮನ ಸೆಳೆದಿದ್ದಾರೆ.

    ಸದನವನ್ನು ಉದ್ದೇಶಿಸಿ ಆರ್ಯ ಅವರು ತಮ್ಮ ಪರಂಪರೆಯ ಬಗ್ಗೆ ಅಪಾರ ಹೆಮ್ಮೆಯಿಂದ ಮಾತನಾಡಿದರು. ಕರ್ನಾಟಕದ (Karnataka) ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಲು ಗ್ರಾಮದ ವ್ಯಕ್ತಿಯೊಬ್ಬರು ಕೆನಡಾದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದು, ಈಗ ಈ ಗೌರವಾನ್ವಿತ ಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ತಿಳಿಸಿದರು.

    ಭಾಷಣದ ಕೊನೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಗೂ ನಟ ಡಾ.ರಾಜ್‌ಕುಮಾರ್ ಅವರು ಹಾಡಿದ್ದ ಪ್ರಸಿದ್ಧ ಹಾಡಿನ ಸಾಲನ್ನು ಹೇಳಿದರು. ಎಲ್ಲಾದರೂ ಇರು ಎಂಥಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದು ಹೇಳಿ ತಮ್ಮ ಮಾತಿಗೆ ಪೂರ್ಣ ವಿರಾಮ ಹಾಕಿದರು. ಈ ಹಿಂದೆ ಸಂಸದರಾಗಿ ಆಯ್ಕೆಯಾದ ವೇಳೆಯೂ ಸಂಸತ್‌ನಲ್ಲಿ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದಿದ್ದರು.

    ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸಲು ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಅವರು ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ.

    ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಹಿತದೃಷ್ಟಿಯಿಂದ, ನಾವು ಸಂಪೂರ್ಣವಾಗಿ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಲಿಬರಲ್ ಪಕ್ಷದ ಮುಂದಿನ ನಾಯಕರಾಗಿ ಆಯ್ಕೆಯಾದರೆ, ನನ್ನ ಜ್ಞಾನ ಮತ್ತು ಪರಿಣತಿಯ ಮೇಲೆ ಉತ್ತಮ ಆಡಳಿತ ನೀಡುತ್ತೇನೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಆರ್ಯ ಅವರು 2015 ರಲ್ಲಿ ಮೊದಲ ಬಾರಿಗೆ ಹೌಸ್ ಆಫ್ ಕಾಮನ್ಸ್‌ಗೆ ಆಯ್ಕೆಯಾದರು ಮತ್ತು 2019 ರಲ್ಲಿ ಮರು ಆಯ್ಕೆಯಾದರು. 2022 ರಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಮಾತನಾಡುವ ಮೂಲಕ ಗಮನ ಸೆಳೆದರು. ಹಿಂದೂ ಕೆನಡಿಯನ್ನರ ಪರವಾಗಿ ವಾದಿಸುವ ವಕೀಲರಾಗಿ, ಆರ್ಯ ಆಗಾಗ ದೃಢವಾದ ನಿಲುವುಗಳನ್ನು ತೆಗೆದುಕೊಂಡಿದ್ದಾರೆ.

     

    2024 ರಲ್ಲಿ ಸಂಸತ್ತಿನ ಹೊರಗೆ ‘ಓಂ’ ಚಿಹ್ನೆಯನ್ನು ಹೊಂದಿರುವ ಕೇಸರಿ ಧ್ವಜವನ್ನು ಹಾರಿಸಿದ್ದರು. ಇದು ಚರ್ಚೆಗೆ ಗ್ರಾಸವಾಗಿತ್ತು. ಹಿಂದೂ ಸಮುದಾಯ ರಾಜಕೀಯದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲು ಅವರು ಈ ಸಂದರ್ಭವನ್ನು ಬಳಸಿಕೊಂಡಿದ್ದರು.

    ತುಮಕೂರು ಮೂಲದ ಆರ್ಯ ಅವರು, ಧಾರವಾಡದಲ್ಲಿರುವ ಕೌಸಾಲಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. ಅವರು 20 ವರ್ಷಗಳ ಹಿಂದೆ ಒಟ್ಟಾವಾಕ್ಕೆ ತೆರಳಿದ್ದರು. ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ್ದರು.

  • ಕೆನಡಾ ಪ್ರಧಾನಿ ರೇಸ್‌ನಲ್ಲಿ ಕನ್ನಡಿಗ ಚಂದ್ರ ಆರ್ಯ!

    ಕೆನಡಾ ಪ್ರಧಾನಿ ರೇಸ್‌ನಲ್ಲಿ ಕನ್ನಡಿಗ ಚಂದ್ರ ಆರ್ಯ!

    ಒಟ್ಟಾವಾ: ಕೆನಡಾದ ಪ್ರಧಾನಿ ಸ್ಥಾನದ ಪೈಪೋಟಿಯಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ ಅವರ ಹೆಸರು ಕೇಳಿಬಂದಿದೆ.

    ಕೆನಡಾದ ಪ್ರಧಾನ ಮಂತ್ರಿ ಹುದ್ದೆಗೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಅವರು ಘೋಷಿಸಿದ್ದಾರೆ. ಲಿಬರಲ್ ಪಕ್ಷದ ಸಂಸದರಾಗಿರುವ ಅವರು, ದೇಶವನ್ನು ಸಾರ್ವಭೌಮ ಗಣರಾಜ್ಯವನ್ನಾಗಿ ಪರಿವರ್ತಿಸುವ ಭರವಸೆ ನೀಡಿದ್ದಾರೆ. ಇನ್ನೂ, ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ ನಂತರ ಆಡಳಿತಾರೂಢ ಲಿಬರಲ್ ಪಕ್ಷದ ನಾಯಕ ಮತ್ತು ಪ್ರಧಾನಿ ಸ್ಥಾನದಿಂದ ಕೆಳಗಿಳಿಯಲು ಜಸ್ಟಿನ್ ಟ್ರುಡೊ ಸೋಮವಾರ ನಿರ್ಧಾರ ಪ್ರಕಟಿಸಿದ್ದರು. ಇದಾದ ಬಳಿಕ ಈ ಬೆಳವಣಿಗೆಯಾಗಿದೆ.

    ಆರ್ಯ ಚಂದ್ರ ಅವರು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲೆಸ್ತೇನ್‌ನ್ನು ಒಂದು ರಾಜ್ಯವಾಗಿ ಗುರುತಿಸುವುದು ಸೇರಿದಂತೆ ಮಹತ್ವಾಕಾಂಕ್ಷೆಯ ನೀತಿ ಪ್ರಸ್ತಾಪಗಳನ್ನು ಉಮೇದುವಾರಿಕೆ ಬಳಿಕ ವಿವರಿಸಿದ್ದಾರೆ.

    ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸಲು ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಅವರು ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ.

    ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಹಿತದೃಷ್ಟಿಯಿಂದ, ನಾವು ಸಂಪೂರ್ಣವಾಗಿ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಲಿಬರಲ್ ಪಕ್ಷದ ಮುಂದಿನ ನಾಯಕರಾಗಿ ಆಯ್ಕೆಯಾದರೆ, ನನ್ನ ಜ್ಞಾನ ಮತ್ತು ಪರಿಣತಿಯ ಮೇಲೆ ಉತ್ತಮ ಆಡಳಿತ ನೀಡುತ್ತೇನೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಆರ್ಯ ಅವರು 2015 ರಲ್ಲಿ ಮೊದಲ ಬಾರಿಗೆ ಹೌಸ್ ಆಫ್ ಕಾಮನ್ಸ್‌ಗೆ ಆಯ್ಕೆಯಾದರು ಮತ್ತು 2019 ರಲ್ಲಿ ಮರು ಆಯ್ಕೆಯಾದರು. 2022 ರಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಮಾತನಾಡುವ ಮೂಲಕ ಗಮನ ಸೆಳೆದರು. ಹಿಂದೂ ಕೆನಡಿಯನ್ನರ ಪರವಾಗಿ ವಾದಿಸುವ ವಕೀಲರಾಗಿ, ಆರ್ಯ ಆಗಾಗ ದೃಢವಾದ ನಿಲುವುಗಳನ್ನು ತೆಗೆದುಕೊಂಡಿದ್ದಾರೆ.

    2024 ರಲ್ಲಿ ಸಂಸತ್ತಿನ ಹೊರಗೆ ‘ಓಂ’ ಚಿಹ್ನೆಯನ್ನು ಹೊಂದಿರುವ ಕೇಸರಿ ಧ್ವಜವನ್ನು ಹಾರಿಸಿದ್ದರು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಹಿಂದೂ ಸಮುದಾಯ ರಾಜಕೀಯದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲು ಅವರು ಈ ಸಂದರ್ಭವನ್ನು ಬಳಸಿಕೊಂಡಿದ್ದರು.

    ತುಮಕೂರು ಮೂಲದ ಆರ್ಯ ಅವರು, ಧಾರವಾಡದಲ್ಲಿರುವ ಕೌಸಾಲಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. ಅವರು 20 ವರ್ಷಗಳ ಹಿಂದೆ ಒಟ್ಟಾವಾಕ್ಕೆ ತೆರಳಿದ್ದರು. ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ್ದರು.

  • ಭಾರತದ ಜೊತೆ ಚೇಷ್ಟೆ ಮಾಡುತ್ತಿದ್ದ ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ?

    ಭಾರತದ ಜೊತೆ ಚೇಷ್ಟೆ ಮಾಡುತ್ತಿದ್ದ ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ?

    ಒಟ್ಟಾವಾ: ಖಲಿಸ್ತಾನ (Khalistan) ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡಿದ್ದ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಇಂದು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

    ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ. ಟ್ರುಡೋ  ಯಾವಾಗ ರಾಜೀನಾಮೆ ಘೋಷಿಸುತ್ತಾರೆ ಎಂಬುದು ಖಚಿತವಾಗಿ ತಿಳಿದಿಲ್ಲ. ಬುಧವಾರದ ಪಕ್ಷದ ರಾಷ್ಟ್ರೀಯ ಸಭೆ ನಡೆಯುವ ಮೊದಲೇ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟ್ರಂಪ್‌ ಪ್ರಮಾಣವಚನ ಸಮಾರಂಭ – 8.57 ಕೋಟಿ ದೇಣಿಗೆ ನೀಡಲಿದ್ದಾರೆ ಟಿಮ್‌ ಕುಕ್‌

    ಪಕ್ಷದ ಆಂತಂರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕಾಏಕಿ ರಾಜೀನಾಮೆ ಘೋಷಣೆ ಮಾಡುತ್ತಾರಾ ಅಥವಾ ಹೊಸ ನಾಯಕತ್ವ ಆಯ್ಕೆವರೆಗೂ ಪ್ರಧಾನಿಯಾಗಿ ಮುಂದುವರೆಯುತ್ತಾರೋ ಇನ್ನೂ ಸ್ಪಷ್ಟವಾಗಿಲ್ಲ . ಇದನ್ನೂ ಓದಿ: ಮಾರುತಿಯ 40 ವರ್ಷದ ಓಟಕ್ಕೆ ಟಾಟಾ ಬ್ರೇಕ್‌ – ಪಂಚ್‌ ದೇಶದ ನಂ.1 ಕಾರು!

    ಟ್ರುಡೋ ಅವರು 2013 ರಲ್ಲಿ ಲಿಬರಲ್ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಅಕ್ಟೋಬರ್ ಅಂತ್ಯದಲ್ಲಿ ಕೆನಡಾದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಲಿಬರಲ್‌ ಪಕ್ಷ ಹೀನಾಯವಾಗಿ ಸೋಲಲಿದೆ ಎಂದು ಸಮೀಕ್ಷೆಗಳು ಈಗಾಗಲೇ ಭವಿಷ್ಯ ನುಡಿದಿವೆ.

    ಇತ್ತೀಚಿನ ಚುನಾವಣೆಗಳಲ್ಲಿ ಲಿಬರಲ್‌ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದರು.

    ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪಿಸಿದ್ದರು. ಆದರೆ ಅಕ್ಟೋಬರ್‌ 16  ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು  ಜಸ್ಟಿನ್‌ ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿತ್ತು.

     

  • ಭಾರತದ ಜೊತೆ ಚೇಷ್ಟೆ ಮಾಡಿದ್ದ ಟ್ರುಡೋ ಶೀಘ್ರವೇ ರಾಜೀನಾಮೆ?

    ಭಾರತದ ಜೊತೆ ಚೇಷ್ಟೆ ಮಾಡಿದ್ದ ಟ್ರುಡೋ ಶೀಘ್ರವೇ ರಾಜೀನಾಮೆ?

    ಒಟ್ಟಾವಾ: ಖಲಿಸ್ತಾನ (Khalistan) ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡುತ್ತಿರುವ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

    ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ಉಪಪ್ರಧಾನಿ ಕ್ರಿಸ್ಟಿಯಾ ಫ್ರೀಲ್ಯಾಂಡ್ (Chrystia Freeland) ರಾಜೀನಾಮೆ ನೀಡಿದ ಬೆನ್ನಲ್ಲೇ ಈಗ ಟ್ರುಡೋ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಿದೆ.

    ಉಪಪ್ರಧಾನಿ ಹುದ್ದೆಯೊಂದಿಗೆ ಹಣಕಾಸು ಖಾತೆಯನ್ನು ಹೊಂದಿದ್ದ ಫ್ರೀಲ್ಯಾಂಡ್ ಟ್ರುಡೋ ಸರ್ಕಾರದಲ್ಲಿ ಅತ್ಯಂತ ಶಕ್ತಿಶಾಲಿ ಸಚಿವರಾಗಿದ್ದರು. ಕಳೆದ 4 ವರ್ಷಗಳಲ್ಲಿ ಸರ್ಕಾರದಿಂದ ಹೊರಬಂದ ಎರಡನೇ ಹಣಕಾಸು ಸಚಿವೆ ಇವರಾಗಿದ್ದಾರೆ.

    ಟ್ರುಡೋ ರಾಜೀನಾಮೆ ನೀಡಲು ಚಿಂತನೆ ಮಾಡಿದ್ದಾರೆ ಮತ್ತು ಸಂಸತ್ತನ್ನು ಉದ್ದೇಶಿಸಿ ಮಾತನಾಡಲು ಮುಂದಾಗಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಕೆನಡಾ ಮಾಧ್ಯಮವೊಂದು ವರದಿ ಮಾಡಿದೆ.

    ಕೆನಡಾದಿಂದ ಅಕ್ರಮವಾಗಿ ವಲಸಿಗರು ಅಮೆರಿಕಕ್ಕೆ ನುಸುಳುತ್ತಿದ್ದಾರೆ. ನುಸುಳುಕೋರರ ವಿರುದ್ಧ ಕೆನಡಾ ಕ್ರಮ ಕೈಗೊಳ್ಳುತ್ತಿಲ್ಲ. ತಾನು ಅಧಿಕಾರಕ್ಕೆ ಏರಿದ ಬಳಿಕ ಕೆನಡಾದಿಂದ ಆಮದಾಗುವ ವಸ್ತುಗಳ ಮೇಲೆ 25% ಆಮದು ತೆರಿಗೆ ವಿಧಿಸುವುದಾಗಿ ಟ್ರಂಪ್‌ (Donald Trump) ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಸ್ಟಿನ್‌ ಟ್ರುಡೋ ಕೆನಡಾದ ಗವರ್ನರ್‌ ಎಂದು ಟ್ರಂಪ್‌ ವ್ಯಂಗ್ಯವಾಡಿದ್ದಾರೆ. ಅಮೆರಿಕ ಕೆನಡಾದ ಸಂಬಂಧ ಹಾಳಾಗುತ್ತಿರುವ ಬೆನ್ನಲ್ಲೇ ಟ್ರುಡೋ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲವಾಗುತ್ತಿದೆ.

    ಕೆನಡಾದ ಪ್ರಮುಖ ವ್ಯಾಪಾರ ಪಾಲುದಾರ ಅಮೆರಿಕವಾಗಿದ್ದು ಪ್ರತಿ ವರ್ಷ ಅದರ ರಫ್ತಿನ 75 ಪ್ರತಿಶತವು ಅಮೆರಿಕಕ್ಕೆ ಹೋಗುತ್ತಿದೆ. ಕೆಲ ದಿನಗಳ ಹಿಂದೆ ಜಸ್ಟಿನ್‌ ಟ್ರುಡೋ ಟ್ರಂಪ್‌ ಅವರನ್ನು ಫ್ಲೋರಿಡಾದಲ್ಲಿ ಭೇಟಿಯಾಗಿ ಮಾತನಾಡಿದ್ದರು. ಆಮದು ಸುಂಕದ ಬಗ್ಗೆ ಟ್ರುಡೋ ಮಾತುಕತೆ ನಡೆಸಿದ್ದರೂ ಟ್ರಂಪ್‌ ಕಡೆಯಿಂದ ಯಾವುದೇ ಧನಾತ್ಮಕ ನಿರ್ಧಾರ ಪ್ರಕಟವಾಗಿಲ್ಲ.

    ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಕೆನಾಡದ ಮಾಧ್ಯಮಗಳು ವರದಿ ಮಾಡಿವೆ.

    ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಆದರೆ ಅ.16 ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು ಕೆ ಜಸ್ಟಿನ್‌ ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿತ್ತು.

  • ಕೆನಡಾ| ಸೆಕ್ಯೂರಿಟಿಯಾಗಿ ಕೆಲಸ ಮಾಡ್ತಿದ್ದ ಭಾರತೀಯ ವಿದ್ಯಾರ್ಥಿಯನ್ನ ಗುಂಡಿಕ್ಕಿ ಹತ್ಯೆ – ಇಬ್ಬರು ಶಂಕಿತರ ಬಂಧನ

    ಕೆನಡಾ| ಸೆಕ್ಯೂರಿಟಿಯಾಗಿ ಕೆಲಸ ಮಾಡ್ತಿದ್ದ ಭಾರತೀಯ ವಿದ್ಯಾರ್ಥಿಯನ್ನ ಗುಂಡಿಕ್ಕಿ ಹತ್ಯೆ – ಇಬ್ಬರು ಶಂಕಿತರ ಬಂಧನ

    ಕೆನಡಾ: 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು (Indian Origin Student) ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಕೆನಡಾದ  (Canada) ಎಡ್ಮಂಟನ್‌ನ (Edmonton) ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.

    ಸೆಕ್ಯೂರಿಟಿ ಗಾರ್ಡ್ ಆಗಿಯೂ ಕೆಲಸ ಮಾಡುತ್ತಿದ್ದ ಹರ್ಷನದೀಪ್ ಸಿಂಗ್‌ನನ್ನು ಶುಕ್ರವಾರ ಮಧ್ಯರಾತ್ರಿ 12:30ರ ಸುಮಾರಿಗೆ ಶೂಟೌಟ್ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರನ್ಮು ಇವಾನ್ ರೈನ್ ಮತ್ತು ಜುಡಿತ್ ಸಾಲ್ಟ್ಯಾಕ್ಸ್ ಎಂದು ಗುರುತಿಸಲಾಗಿದೆ. ಮೂವರು ಸದಸ್ಯರ ಗ್ಯಾಂಗ್ ಹರ್ಷನದೀಪ್‌ಗೆ ಗುಂಡಿಕ್ಕಿ ಹತ್ಯೆಗೈಯ್ಯುವ ದೃಶ್ಯ ಸಿಸಿಟಿವಿ ವೀಡಿಯೋದಲ್ಲಿ ರೆಕಾರ್ಡ್ ಆಗಿದೆ. ಇದನ್ನೂ ಓದಿ: ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು – ಭಯಕ್ಕೆ ತೋಟದ ಕಡೆ ತೆರಳದ ಕಾರ್ಮಿಕರು

    ಕೊಲೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹರ್ಷನದೀಪ್ ಸಿಂಗ್‌ನನ್ನು ಆಸ್ಪತ್ರಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಹರ್ಷನದೀಪ್ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯನ್ನು ಸೋಮವಾರ ನಿಗದಿಪಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಕುಮಾರಸ್ವಾಮಿ, ಅಶೋಕ್‌ ಕನಸು – 5 ವರ್ಷ ನಮ್ಮದೇ ಸರ್ಕಾರ ಎಂದ ಸಿದ್ದರಾಮಯ್ಯ

  • ಕೆನಡಾ ಭಾರತೀಯರಿಗೆ ನೀಡುವ ಪ್ರವಾಸಿ ವೀಸಾಗಳನ್ನು ಕಡಿಮೆಗೊಳಿಸುತ್ತಿದೆ ಏಕೆ?

    ಕೆನಡಾ ಭಾರತೀಯರಿಗೆ ನೀಡುವ ಪ್ರವಾಸಿ ವೀಸಾಗಳನ್ನು ಕಡಿಮೆಗೊಳಿಸುತ್ತಿದೆ ಏಕೆ?

    ಕೆನಡಾ ಭಾರತೀಯರಿಗೆ ನೀಡುವ ಪ್ರವಾಸಿ ವೀಸಾಗಳನ್ನು ಕೆಲವು ಮಾನದಂಡಗಳ ಆಧಾರದ ಮೇಲೆ ಕಡಿಮೆಗೊಳಿಸುತ್ತಿದೆ. ಯುಎಸ್-ಕೆನಡಾ ಗಡಿ ದುರುಪಯೋಗ ಆರೋಪ, ಭಾರತ-ಕೆನಡಾ ರಾಜತಾಂತ್ರಿಕ ಗಲಾಟೆ ಇವು ಪ್ರಮುಖ ಪಾತ್ರವನ್ನು ವಹಿಸುತ್ತವೆ.

    ಕೆನಡಾವು ಭಾರತೀಯರಿಗೆ ನೀಡುತ್ತಿರುವ ಪ್ರವಾಸಿ ವೀಸಾಗಳ ಸಂಖ್ಯೆಯನ್ನು ತೀವ್ರವಾಗಿ ಕಡಿತಗೊಳಿಸಿದ್ದು, 80% ರಿಂದ 20% ಇಳಿಸಿದೆ.

    ಇತ್ತೀಚಗೆ ಕೆನಡಾ ತನ್ನ ವೀಸಾ ನೀತಿಯನ್ನು ತಿದ್ದುಪಡಿ ಮಾಡಿದೆ. 10 ವರ್ಷಗಳ ಹಳೆಯವೀಸಾಗಳನ್ನು ಸ್ಥಗಿತಗೊಳಿಸಿದೆ. ಇನ್ನೂ ವಿಸ್ತೃತ ಅವಧಿಯ ವೀಸಾಗಳನ್ನು ವೈಯಕ್ತಿಕ ಮೌಲ್ಯಮಾಪನದ ಆಧಾರದ ಮೇಲೆ ಅನುಮತಿ ನೀಡುತ್ತದೆ. ಈ ವೀಸಾ ನೀತಿಯ ಬದಲಾವಣೆಯು ತಮ್ಮ ಜೀವನ ಮಟ್ಟವನ್ನು ನಿರ್ವಹಿಸಲು, ವಸತಿ ಕೊರತೆಯನ್ನು ಪರಿಹರಿಸಲು, ಜೀವನ ವೆಚ್ಚವನ್ನು ನಿಯಂತ್ರಣಕ್ಕೆ ತರಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.

    ಕುಸಿತಕ್ಕೆ ಮೂಲ ಕಾರಣವೇನು?
    ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಒತ್ತಡದ ಹೊರತಾಗಿಯೂ, 2024ರ ಮೊದಲಾರ್ಧದಲ್ಲಿ ಕೆನಡಾದಿಂದ ಭಾರತೀಯರಿಗೆ ನೀಡಲಾದ ಪ್ರವಾಸಿ ವೀಸಾಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಜನವರಿ ಮತ್ತು ಜುಲೈ ನಡುವೆ ಭಾರತೀಯರಿಗೆ 3,65,750 ಸಂದರ್ಶಕರ ವೀಸಾಗಳನ್ನು ನೀಡಿದೆ. ಇನ್ನೂ 2023ರ ಇದೇ ಅವಧಿಯಲ್ಲಿ 3,45,631 ವೀಸಾಗಳನ್ನು ನೀಡಲಾಗಿತ್ತು.

    ಈ ಕುರಿತು ಕೆನಡಾದ ವಲಸೆ ಸಚಿವ ಮಾರ್ಕ್ ಮಿಲ್ಲರ್, ಭಾರತದಲ್ಲಿ ಕೆನಡಾ ವಲಸೆ ಅಧಿಕಾರಿಗಳು 2023ರಲ್ಲಿ 27 ಜನರಿದ್ದರು. ಆದರೆ ಇದೀಗ ವಲಸೆ ಅಧಿಕಾರಿಗಳು ಕಡಿಮೆಯಾಗಿದ್ದು, 4ಕ್ಕೆ ಇಳಿದಿದೆ. ಹೀಗಾಗಿ ಇದು ಕೆನಡಾದಲ್ಲಿ ನೀಡಲಾಗುವ ವೀಸಾ ಪ್ರಕ್ರಿಯೆ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.

    ಗಡಿ ದುರ್ಬಳಕೆ: ಭಾರತೀಯ ಪ್ರವಾಸಿಗರು ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಕೆನಡಾ ಗಡಿಯನ್ನು ಬಳಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅಮೆರಿಕಾ ಸರ್ಕಾರ ವೀಸಾ ನೀಡಲು ಕಟ್ಟುನಿಟ್ಟಾದ ವೀಸಾ ನಿಯಮಗಳನ್ನು ಹೊಂದಿದ್ದು, ವೀಸಾ ಪಡೆಯಲು ದೀರ್ಘ ಕಾಲ ಕಾಯಬೇಕಾಗುತ್ತದೆ. ಈ ಕಾರಣದಿಂದ ಯುಎಸ್ ವೀಸಾಗಳನ್ನು ಕೆನಡಾದಲ್ಲಿ ಪಡೆಯುವ ಉದ್ದೇಶದಿಂದ ಕೆನಾಡಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಇನ್ನೂ ಯುಎಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಸಿಬಿಪಿ) ಪ್ರಕಾರ, ಜೂನ್ 2024 ರಲ್ಲಿ 5,000ಕ್ಕೂ ಹೆಚ್ಚು ಭಾರತೀಯರು ಕೆನಡಾದಿಂದ ಯುಎಸ್‌ಗೆ ಕಾಲ್ನಡಿಗೆಯಲ್ಲಿ ಸರಿಯಾದ ದಾಖಲೆಗಳಿಲ್ಲದೆ ಪ್ರವೇಶಿದ್ದಾರೆ ಎಂದು ತಿಳಿಸಿದೆ.

    ದೇಶೀಯ ಕಾಳಜಿಗಳು: ದೇಶವು ತಾತ್ಕಾಲಿಕ ನಿವಾಸಿಗಳ ಸಂಖ್ಯೆಯನ್ನು ಮಿತಿಗೊಳಿಸುವ ಉದ್ದೇಶವನ್ನು ಹೊಂದಿದ್ದು, ವೀಸಾಕ್ಕೆ ಅರ್ಜಿ ಸಲ್ಲಿಸುವ ಪ್ರತಿ ಅರ್ಜಿದಾರರ ಪರಿಶೀಲನೆಯ ನಂತರ ವೀಸಾ ನೀಡುತ್ತದೆ. 2023ರ ಜೂನ್‌ನಲ್ಲಿ ಸರ್ರೆಯ ಗುರುದ್ವಾರದ ಹೊರಗೆ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಭಾರತೀಯ ಅಧಿಕಾರಿಗಳ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕಳೆದ ವರ್ಷ ಅಕ್ಟೋಬರ್‌ನಲ್ಲಿ ತಮ್ಮ ಸಂಸತ್ತಿನಲ್ಲಿ ಆರೋಪಿಸಿದರು. ಈ ಕಾರಣದಿಂದ ಭಾರತ ಮತ್ತು ಕೆನಡಾ ಸಂಬಂಧದಲ್ಲಿ ಬಿಕ್ಕಟ್ಟು ಉಂಟಾಗಿತ್ತು. ಇದು ಒಂದು ಕಾರಣವಾಗಿದ್ದು, ವೀಸಾ ಕಡಿತಗೊಳಿಸಲು ಇದು ಕಾರಣವಲ್ಲ ಎಂದು ಕೆನಡಾ ಸ್ಪಷ್ಟನೆ ನೀಡಿದೆ.

    ಕೆನಡಾದ ಹೊಸ ವೀಸಾ ಮಾರ್ಗಸೂಚಿಗಳು ಯಾವುವು?
    ಹೊಸ ನಿಯಮದ ಪ್ರಕಾರ, ವೀಸಾ ಅಧಿಕಾರಿಗಳು ಪ್ರತಿ ಅರ್ಜಿದಾರರನ್ನು ಪ್ರತ್ಯೇಕವಾಗಿ ಪರಿಶೀಲನೆ ನಡೆಸುತ್ತಾರೆ. ಏಕ-ಪ್ರವೇಶ ಮತ್ತು ಬಹು-ಪ್ರವೇಶದ ಕೆನಡಿಯನ್ ವೀಸಾದ ವೆಚ್ಚವು ಪ್ರತಿ ವ್ಯಕ್ತಿಗೆ ಕೆನಡಾ ಮೌಲ್ಯ 100 ಆಗಿದೆ. ಒಂದು ಹಾಗೂ ಎರಡು ವೀಸಾಗಳ ನಡುವೆ ಯಾವುದೇ ವೆಚ್ಚದ ವ್ಯತ್ಯಾಸವಿಲ್ಲ. ಸರ್ಕಾರವು ತನ್ನ ವಲಸೆ ಮಟ್ಟದ ಯೋಜನೆಯನ್ನು ಕೂಡ ಪರಿಷ್ಕರಿಸಿದ್ದು, ಅದರ ಗುರಿಯನ್ನು 5,00,000 ಹೊಸ ಶಾಶ್ವತ ನಿವಾಸಿಗಳಿಂದ 2025ರಲ್ಲಿ 3,95,000, 2026ರಲ್ಲಿ 3,80,000 ಮತ್ತು 2027ರಲ್ಲಿ 3,65,000ಕ್ಕೆ ಇಳಿಸಿದೆ.

  • ಅಧಿಕಾರಕ್ಕೆ ಏರುವ ಮುನ್ನವೇ ಚೀನಾ, ಕೆನಡಾಗೆ ಟ್ರಂಪ್ ಶಾಕ್

    ಅಧಿಕಾರಕ್ಕೆ ಏರುವ ಮುನ್ನವೇ ಚೀನಾ, ಕೆನಡಾಗೆ ಟ್ರಂಪ್ ಶಾಕ್

    ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಡೊನಾಲ್ಡ್‌ ಟ್ರಂಪ್ (Donald Trump) ಚೀನಾ, ಮೆಕ್ಸಿಕೋ ಮತ್ತು ಕೆನಡಾಗೆ ಶಾಕ್ ನೀಡಿದ್ದಾರೆ.

    ಜ.20 ರಂದು ತಾನು ಅಧಿಕಾರ ಸ್ವೀಕರಿಸಿದ ಕೂಡಲೇ ಮೆಕ್ಸಿಕೋ, ಕೆನಡಾದಿಂದ ಆಮದಾಗುವ ಉತ್ಪನ್ನಗಳ ಮೇಲೆ 25% ರಷ್ಟು ತೆರಿಗೆ ವಿಧಿಸುವ ಕಡತಕ್ಕೆ ಸಹಿ ಹಾಕುವುದಾಗಿ ಟ್ರಂಪ್ ಪ್ರಕಟಿಸಿದ್ದಾರೆ.

    ಕಾನೂನುಬಾಹಿರವಾದ ಮಾದಕವಸ್ತು ಸರಬರಾಜು, ವಲಸೆಗಳಿಗೆ ವಿರುದ್ಧವಾಗಿ ತಾನು ಈ ನಿರ್ಧಾರ ತೆಗೆದುಕೊಳ್ಳೋದಾಗಿ ಟ್ರಂಪ್ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಚೀನಾ (China) ಉತ್ಪನ್ನಗಳ ಮೇಲೆ ಹೆಚ್ಚುವರಿ 10% ಸುಂಕ ವಿಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಪಾಕ್‌ ಹಿಂಸಾಚಾರಕ್ಕೆ ನಾಲ್ವರು ಸೈನಿಕರು ಸೇರಿ 5 ಸಾವು – ಸೇನೆಯಿಂದ ಕಂಡಲ್ಲಿ ಗುಂಡು ಆದೇಶ

    ಅಮೆರಿಕ (USA) ವಿಶ್ವದ ದೊಡ್ಡ ಆಮುದುದಾರ ದೇಶವಾಗಿದೆ. ಅಮರಿಕಕ್ಕೆ ಆಮದಾಗುವ ವಸ್ತುಗಳ ಪೈಕಿ ಕೆನಡಾ, ಚೀನಾ, ಮೆಕ್ಸಿಕೋದ ಪಾಲು 40% ಇದೆ.

    ಟ್ರಂಪ್ ಘೋಷಣೆ ಮಾಡಿದ ನಂತರ, ಅವರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರೊಂದಿಗೆ ಸುಮಾರು 10 ನಿಮಿಷಗಳ ಕಾಲ ವ್ಯಾಪಾರ ಮತ್ತು ಗಡಿ ಭದ್ರತೆಯ ಬಗ್ಗೆ ಚರ್ಚಿಸಿದ್ದಾರೆ. ಅಮೆರಿಕ-ಮೆಕ್ಸಿಕೋ ಗಡಿಗೆ ಹೋಲಿಸಿದರೆ ಕೆನಡಾದ ಗಡಿಯನ್ನು ದಾಟುವ ವಲಸಿಗರ ಸಂಖ್ಯೆ ಬಹಳ ಸಣ್ಣದು ಎಂದು ಟ್ರುಡೋ ಹೇಳಿರುವುದಾಗಿ ವರದಿಯಾಗಿದೆ.

     

  • ಭಾರತದ ಒತ್ತಡಕ್ಕೆ ಮಣಿದ ಕೆನಡಾ – ಮೋದಿ ಹೆಸರನ್ನು ಉಲ್ಲೇಖಿಸಿ ಮಾಧ್ಯಮ ವರದಿಯನ್ನು ತಿರಸ್ಕರಿಸಿದ ಸರ್ಕಾರ

    ಭಾರತದ ಒತ್ತಡಕ್ಕೆ ಮಣಿದ ಕೆನಡಾ – ಮೋದಿ ಹೆಸರನ್ನು ಉಲ್ಲೇಖಿಸಿ ಮಾಧ್ಯಮ ವರದಿಯನ್ನು ತಿರಸ್ಕರಿಸಿದ ಸರ್ಕಾರ

    ಒಟ್ಟಾವಾ: ಖಲಿಸ್ತಾನಿ ಉಗ್ರ ನಿಜ್ಜರ್‌ (Hardeep Singh Nijjar) ಹತ್ಯೆಯ ಸಂಚಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ತಿಳಿದಿತ್ತು ಎಂದು ನಾವು ಹೇಳಿಲ್ಲ ಎಂದು ಹೇಳುವ ಮೂಲಕ ಮಾಧ್ಯಮ ವರದಿಯನ್ನು ಕೆನಡಾ ಸರ್ಕಾರ (Canada Government) ಅಧಿಕೃತವಾಗಿ ತಿರಸ್ಕರಿಸಿದೆ.

    ಭಾರತದ ಒತ್ತಡ ತೀವ್ರವಾದ ಬೆನ್ನಲ್ಲೇ ಕೆನಡಾ ಪ್ರಧಾನ ಮಂತ್ರಿಯ ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ಸಲಹೆಗಾರರಾದ ನಥಾಲಿ ಜಿ ಡ್ರೂಯಿನ್ ಹೇಳಿಕೆ ಪ್ರಕಟಿಸಿ ಎರಡು ರಾಷ್ಟ್ರಗಳ ಮಧ್ಯೆ ನಡೆಯುತ್ತಿರುವ ತಿಕ್ಕಾಟವನ್ನು ಕಡಿಮೆ ಮಾಡಲು ಮುಂದಾಗಿದ್ದಾರೆ.

    ಹೇಳಿಕೆಯಲ್ಲಿ ಏನಿದೆ?
    ಅಕ್ಟೋಬರ್ 14 ರಂದು ಸಾರ್ವಜನಿಕ ಸುರಕ್ಷತೆ ಮತ್ತು ಬೆದರಿಕೆಯ ಕಾರಣ ಕೆನಡಾ ಪೊಲೀಸ್‌ (RCMP) ಮತ್ತು ಅಧಿಕಾರಿಗಳು ಕೆನಡಾದಲ್ಲಿ ಭಾರತ ಸರ್ಕಾರದ ಏಜೆಂಟರು ನಡೆಸಿದ ಗಂಭೀರ ಅಪರಾಧ ಚಟುವಟಿಕೆಯ ಬಗ್ಗೆ ಸಾರ್ವಜನಿಕವಾಗಿ ಆರೋಪಗಳನ್ನು ಮಾಡುವ ಕ್ರಮವನ್ನು ತೆಗೆದುಕೊಂಡರು. ಆದರೆ ಕೆನಡಾ ಸರ್ಕಾರ ಯಾವುದೇ ಹೇಳಿಕೆ ನೀಡಿಲ್ಲ. ಕೆನಡಾದೊಳಗಿನ ಗಂಭೀರ ಕ್ರಿಮಿನಲ್ ಚಟುವಟಿಕೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಅಥವಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್ ಅವರ ಪಾತ್ರದ ಬಗ್ಗೆ ಯಾವುದೇ ಪುರಾವೆ ಇಲ್ಲ. ಮಾಧ್ಯಮ ವರದಿ ಕೇವಲ ಊಹೆ ಮತ್ತು ನಿಖರವಾಗಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

    ವರದಿಯಲ್ಲಿ ಏನಿತ್ತು?
    ಕೆನಡಾದ ಗ್ಲೋಬ್ ಆಂಡ್ ಮೇಲ್ ಪತ್ರಿಕೆ ಅನಾಮಧೇಯ ಕೆನಡಾ ಸರ್ಕಾರಿ ಅಧಿಕಾರಿಯ ಹೇಳಿಕೆ ಉಲ್ಲೇಖಿಸಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್‌ನ ಹತ್ಯೆ ಸಂಚನ್ನು ಗೃಹ ಸಚಿವ ಅಮಿತ್ ಶಾ ರೂಪಿಸಿದ್ದರು. ಈ ಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ ಮಾಹಿತಿ ನೀಡಲಾಗಿತ್ತು ಎಂದು ವರದಿಯಲ್ಲಿ ಉಲ್ಲಖಿಸಲಾಗಿತ್ತು.

    ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್‌, ನಾವು ಸಾಮಾನ್ಯವಾಗಿ ಮಾಧ್ಯಮ ವರದಿಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಹೀಗಿದ್ದರೂ ಕೆನಡಾದ ಸರ್ಕಾರದ ಮೂಲವನ್ನು ಆಧಾರಿಸಿ ಪತ್ರಿಕೆಗೆ ನೀಡಿದ ಇಂತಹ ಹಾಸ್ಯಾಸ್ಪದ ಹೇಳಿಕೆಗಳನ್ನು ಅರ್ಹವಾದ ಖಂಡನೆಗಳೊಂದಿಗೆ ತಿರಸ್ಕರಿಸಬೇಕು. ಈ ರೀತಿಯ ಸುಳ್ಳು ಆರೋಪಗಳು ಈಗಾಗಲೇ ಹದಗೆಟ್ಟಿರುವ ನಮ್ಮ ಸಂಬಂಧಗಳನ್ನು ಇನ್ನಷ್ಟು ಹಾಳುಮಾಡುತ್ತವೆ ಎಂದು ಖಡಕ್‌ ಆಗಿಯೇ ಹೇಳಿದ್ದರು.

     

  • ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಸಲು ಯುವಕರನ್ನ ಪ್ರಚೋದಿಸುತ್ತಿದ್ದ ಖಲಿಸ್ತಾನಿ ಉಗ್ರ ಕೆನಡಾದಲ್ಲಿ ಬಂಧನ

    ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಸಲು ಯುವಕರನ್ನ ಪ್ರಚೋದಿಸುತ್ತಿದ್ದ ಖಲಿಸ್ತಾನಿ ಉಗ್ರ ಕೆನಡಾದಲ್ಲಿ ಬಂಧನ

    ಒಟ್ಟಾವಾ: ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಸಲು ಯುವಕರನ್ನ ಪ್ರಚೋದಿಸುತ್ತಿದ್ದ ಖಲಿಸ್ತಾನಿ ಉಗ್ರ (Khalistani Terrorist) ಹಾಗೂ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್‌ ಸಹಾಯಕ ಅರ್ಶ್‌ದೀಪ್‌ ಡಲ್ಲಾನನ್ನ (Arshdeep Dalla) ಕೆನಡಾ ಭದ್ರತಾ ಏಜೆನ್ಸಿ ಅಧಿಕಾರಿಗಳು ಬಂಧಿಸಿದ್ದಾರೆ. ಆದ್ರೆ ಬಂಧಿತನನ್ನ ಜೈಲಿನಲ್ಲಿಟ್ಟಿದ್ದಾರಾ? ಅಥವಾ ಬಿಡುಗಡೆ ಮಾಡಿದ್ದಾರೆಯೇ ಅನ್ನೋ ಮಾಹಿತಿ ಬಹಿರಂಗಪಡಿಸಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.

    ಕಳೆದ ಅಕ್ಟೋಬರ್ 27-28 ರಂದು ಕೆನಡಾದಲ್ಲಿ (Canada) ಮಿಲ್ಟನ್‌ನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿದಂತೆ ಡಲ್ಲಾನನ್ನ ಬಂಧಿಸಿದ್ದು, ತನಿಖೆ ನಡೆಸುತ್ತಿರುವುದಾಗಿ ಭದ್ರತಾ ಏಜೆನ್ಸಿಗಳು ಸ್ಪಷ್ಟಪಡಿಸಿವೆ. 28 ವರ್ಷದ ಡಲ್ಲಾ ತನ್ನ ಪತ್ನಿಯೊಂದಿಗೆ ಕೆನಡಾದ ಸರ್ರೆಯಲ್ಲಿ ನೆಲೆಸಿದ್ದಾನೆ ಎಂದು ಭಾರತೀಯ ಭದ್ರತಾ ಏಜೆನ್ಸಿಗಳ ಮೂಲಗಳು ತಿಳಿಸಿವೆ. ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದಿಂದ ಕೆನಡಾ-ಭಾರತದ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿರುವ ಹೊತ್ತಿನಲ್ಲೇ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಟ್ರಂಪ್‌ಗೆ `ಎಕ್ಸ್‌’ನಲ್ಲಿ ಪಾಕ್ ಪ್ರಧಾನಿ ಅಭಿನಂದನೆ – ಬ್ಯಾನ್ ಮಾಡಿದ್ದ ಸೋಶಿಯಲ್‌ ಮೀಡಿಯಾ ವೇದಿಕೆ ಬಳಸಿದ್ದಕ್ಕೆ ಜನರ ಆಕ್ಷೇಪ

    ಡಲ್ಲಾ ಸುಲಿಗೆ, ಕೊಲೆ ಮತ್ತು ಇತರ ಭಯೋತ್ಪಾದನೆ ಚಟುವಟಿಕೆಗಳಿಗೆ ಸಂಬಂಧಿಸಿದ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತನ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣಗಳನ್ನ ದಾಖಲಿಸಲಾಗಿದೆ. ಅಲ್ಲದೇ ಫೇಸ್‌ಬುಕ್ ಪೋಸ್ಟ್‌ನಲ್ಲಿ, ಪಂಜಾಬ್‌ನ ಜಾಗರಾನ್‌ನಿಂದ ಎಲೆಕ್ಟ್ರಿಷಿಯನ್ ಪರಮ್‌ಜೀತ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ನಂತರ ಈತನ ವಿರುದ್ಧ ಪಂಜಾಬ್ ಪೊಲೀಸರು ಲುಕ್‌ಔಟ್ ಸುತ್ತೋಲೆ ಜಾರಿಗೊಳಿಸಿದ್ದರು. ಇದನ್ನೂ ಓದಿ: ಯುಪಿ ಪ್ರಧಾನಿ ಆಯೋಜಿಸಿದ್ದ ದೀಪಾವಳಿ ಪಾರ್ಟಿಯಲ್ಲಿ ಎಣ್ಣೆ, ಮಾಂಸ – ಬ್ರಿಟಿಷ್‌ ಹಿಂದೂಗಳು ಶಾಕ್‌!

    ಭಾರತದಲ್ಲಿ ಭಯೋತ್ಪಾದನೆಗೆ ಪ್ರಚೋದನೆ:
    ಜೊತೆಗೆ 2020ರ ನವೆಂಬರ್‌ನಲ್ಲಿ ನಡೆದ ಡೇರಾ ಸಚ್ಚಾ ಸೌದಾ ಅನುಯಾಯಿ ಮನೋಹರ್ ಲಾಲ್‌ನನ್ನ ಅಪಹರಣ, ಹತ್ಯೆಗೆ ಸಂಚು ರೂಪಿಸುವ ಪ್ರಕರಣದಲ್ಲೂ ಭಾಗಿಯಾಗಿದ್ದ. ಜೊತೆಗೆ ಭಾರತದಲ್ಲಿ ಭಯೋತ್ಪಾದನೆ ಸಂಬಂಧಿತ ಚಟುವಟಿಕೆ ನಡೆಸಲು ಯುವಕರನ್ನು ಪ್ರೇರೇಪಿಸುತ್ತಿದ್ದ, ಆಮೂಲಾಗ್ರಿಕರಣ ಮಾಡುವಲ್ಲಿ ಪರಿಣಿತನಾಗಿದ್ದ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ದಿನಕ್ಕೆ ಒಂದಲ್ಲ.. 16 ಬಾರಿ ಆಗುತ್ತೆ ಸೂರ್ಯೋದಯ, ಸೂರ್ಯಾಸ್ತ – ಬಾಹ್ಯಾಕಾಶದಲ್ಲಿ ಸುನಿತಾ ವಿಲಿಯಮ್ಸ್‌ಗೆ ಆಗ್ತಿರೋ ಅನುಭವಗಳೇನು?