ಸದ್ಯ ಈ ವಿಡಿಯೋ ವೈರಲ್ ಆಗುತ್ತಿದ್ದು, ಬ್ಯಾಂಕ್‌ನಲ್ಲಿ ಮ್ಯಾನೇಜರ್ ಒಬ್ಬರು ಕನ್ನಡ ಭಾಷಾಂತರ ಮಾಡೋದಕ್ಕೆ ಸಿಬ್ಬಂದಿಯನ್ನ ಕರೆದ ಪ್ರಸಂಗ ನಡೆದಿದೆ. ಕೆನರಾ ಬ್ಯಾಂಕ್ ಅಧಿಕಾರಿ ಬ್ಯಾಂಕ್‌ಗೆ ಬಂದ ಗ್ರಾಹಕರನ್ನು ಹಿಂದಿಯಲ್ಲಿ ಮಾತನಾಡಿಸಿದ್ದಾರೆ. ಹಿಂದಿ ಅರ್ಥವಾಗದ ಗ್ರಾಹಕರು ಕನ್ನಡದಲ್ಲಿ ಮಾತನಾಡಿ ಅಂತ ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಮ್ಯಾನೇಜರ್ ನನಗೆ ಹಿಂದಿ, ತೆಲುಗು ಮಾತ್ರ ಬರೋದು ಅಂತ ಹೇಳಿ ಭಾಷಾಂತರ ಮಾಡೋಕೆ ಸಿಬ್ಬಂದಿಯೊಬ್ಬರನ್ನ ಕರೆದಿದ್ದಾರೆ.
ಇನ್ನೂ ಅಗತ್ಯವಿದ್ದ ಹೆಚ್ಚುವರಿ 2.5 ಲಕ್ಷ ರೂ. ಹಣವನ್ನು ಡ್ರಾ ಮಾಡಲು ಕೆನರಾ ಬ್ಯಾಂಕ್ ಶಾಖೆಗೆ ಬಂದಿದ್ದರು. ಕೆನರಾ ಬ್ಯಾಂಕ್‌ನೊಳಗೆ ಹೋಗುವ ಮುನ್ನ ಈ ಮೊದಲು ತಂದಿದ್ದ 13 ಲಕ್ಷ ರೂ. ಹಣವನ್ನು ಸ್ಕೂಟರ್‌ನ ಡಿಕ್ಕಿಯಲ್ಲಿ ಇಟ್ಟು, ಲಾಕ್ ಮಾಡಿ ಹೋಗಿದ್ದರು. ಬ್ಯಾಂಕ್‌ನೊಳಗೆ ಹೋಗಿ ಬರುವಷ್ಟರಲ್ಲಿ ಕಳ್ಳರು ಡಿಕ್ಕಿಯನ್ನು ಮುರಿದು ಹಣ ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮಂತ್ರವಾದಿ ಗೆಟಪ್‌ನಲ್ಲಿ ಬಂದ ಸಮಂತಾ- ಏನಿದು ಹೊಸ ಅವತಾರ?
ಯೋಗೇಶ್ ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಖದೀಮರಿಗೆ ಬಲೆ ಬೀಸಿದ್ದಾರೆ. ಸಕಲೇಶಪುರ ನಗರ ಪೊಲೀಸ್ (Sakaleshpura Town Police) ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು (KKRTC) ತನ್ನ ನೌಕರರಿಗೆ ಪ್ರೀಮಿಯಮ್ ರಹಿತ 1 ಕೋಟಿ ರೂ. ಮೊತ್ತದ ಅಪಘಾತ ವಿಮೆ ಯೋಜನೆಗೆ ಕೆನರಾ ಬ್ಯಾಂಕ್‌ನೊಂದಿಗೆ (Canara Bank) ಒಪ್ಪಂದ ಮಾಡಿಕೊಂಡಿದೆ.
ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಯವರ (Ramalinga Reddy) ಬೆಂಗಳೂರಿನ ಗೃಹ ಕಚೇರಿಯಲ್ಲಿ ಸಚಿವ ಸಮಕ್ಷಮ ಕೆನರಾ ಬ್ಯಾಂಕ್ ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪಾ ಮತ್ತು ಕೆನರಾ ಬ್ಯಾಂಕಿನ ಜನರಲ್ ಮ್ಯಾನೇಜರ್ ವಿಜಯಕುಮಾರ ಪರಸ್ಪರ ಒಡಂಬಡಿಕೆ ವಿನಿಮಯ ಮಾಡಿಕೊಂಡರು. ಇದನ್ನೂ ಓದಿ: ಬೆಳಗಾವಿ ಹಾಸ್ಟೆಲ್‌ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಸಾವು
ಈ ಸಂದರ್ಭದಲ್ಲಿ ಸಚಿವ ರಮಾಲಿಂಗಾರೆಡ್ಡಿ ಮಾತನಾಡಿ, ಸಾರಿಗೆ ನಿಗಮದಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗುತ್ತಿರುವ ಸಾವು-ನೋವುಗಳ ಪ್ರಮಾಣವನ್ನು ಗಮನಿಸಿ ಕೆ.ಕೆ.ಆರ್.ಟಿ.ಸಿ. ನಿಗಮವು ವೈಯಕ್ತಿಕ ಮತ್ತು ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ನೌಕರರು ನಿಧನರಾದಲ್ಲಿ 1 ಕೋಟಿ ರೂ. ಗಳ ಪ್ರೀಮಿಯಮ್ ರಹಿತ ಅಪಘಾತ ವಿಮೆ ಯೋಜನೆ ಜಾರಿಗೊಳಿಸಿದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಸ್ಸಾಂನಲ್ಲಿ ಹೋಟೆಲ್, ರೆಸ್ಟೋರೆಂಟ್, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ!
ಯಾರಿಗೆ ಅನುಕೂಲ?
ಕೆ.ಕೆ.ಆರ್.ಟಿ.ಸಿ ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ನಿಗಮದ ನೌಕರರಿಗೆ ಈ ವಿಮಾ ಸೌಲಭ್ಯ ಸಿಗಲಿದೆ. ವೇತನ ಖಾತೆಗಳನ್ನು ಕೆನರಾ ಬ್ಯಾಂಕಿನ ʻಪೇ-ರೋಲ್ ಪ್ಯಾಕೇಜ್ ಸ್ಟೀಮ್ʼ ಅಡಿಯಲ್ಲಿ ತೆರೆದು ಈ ವಿಮಾ ಸೌಲಭ್ಯ ಶುಲ್ಕ ರಹಿತವಾಗಿ ಪಡೆಯಬಹುದಾಗಿದೆ. ಇದನ್ನೂ ಓದಿ: ಮುಡಾದಲ್ಲಿ ನಡೆದಿರೋದು 4-5 ಸಾವಿರ ಕೋಟಿ ಹಗರಣ: ಆರ್. ಅಶೋಕ್ ಬಾಂಬ್
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುರಕ್ಷಿತ, ಮಿತವ್ಯಯ ಸಾರಿಗೆ ಸೌಲಭ್ಯ ಕಲ್ಪಿಸುವುದರ ಜೊತೆಗೆ ನೌಕರರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಈಗಾಗಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನಿಗಮದ ನೌಕರರು ಅಪಘಾತ ವಿಮೆಗೆ ಒಳಪಟ್ಟಿರುತ್ತಾರೆ. ಇದೀಗ ಆ ಸಾಲಿಗೆ ಕೆನರಾ ಬ್ಯಾಂಕ್ ಸೇರ್ಪಡೆಯಾಗಿದೆ. ಅಪಘಾತ ಹೊರತುಪಡಿಸಿ ಇತರೇ ನೈರ್ಸಗಿಕ ಸಾವುಗಳಿಗೆ ಕೆನರಾ ಬ್ಯಾಂಕ್ ಪ್ರೀಮಿಯಂ ರಹಿತ 6 ಲಕ್ಷ ರೂ. ವರೆಗೆ ಉಚಿತ ʻಟರ್ಮ್ ಇನ್ಶುರೆನ್ಸ್ʼ ಪಾಲಿಸಿ ಸಹ ನಿಡುತ್ತಿದೆ. ಇದಲ್ಲದೇ ನೌಕರರ ಮಕ್ಕಳ ವಿಧ್ಯಾಭ್ಯಾಸ, ಗೃಹ ಸಾಲ ಹಾಗೂ ವೈಯಕ್ತಿಕ ಮತ್ತು ವಾಹನ ಸಾಲಗಳಿಗೆ ವಿಶೇಷ ಬಡ್ಡಿ ದರ ನಿಗದಿಪಡಿಸಿದ್ದು, ನೌಕರ ವರ್ಗಕ್ಕೆ ಅನುಕೂಲವಾಗಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪಾ ಅವರು ಸಚಿವರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಕೆ.ಕೆ.ಆರ್.ಟಿ.ಸಿ. ನಿಗಮ ಮತ್ತು ಕೆನರಾ ಬ್ಯಾಂಕಿನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಂಬೈ: ಬದುಕಿನ ಎಲ್ಲ ಭರವಸೆಯನ್ನೂ ಕಳೆದುಕೊಂಡಿದ್ದೇನೆ. ಹೀಗಾಗಿ ನಾನು ಈಗಿರುವ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸಾಯುವುದೇ ಉತ್ತಮ ಎಂದು ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ (Jet Airways Founder Naresh Goyal) ಹೇಳಿದ್ದಾರೆ.
ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಆರೋಪಿಯಾಗಿರುವ ಅವರು ಶನಿವಾರ ವಿಶೇಷ ನ್ಯಾಯಾಲದಯಲ್ಲಿ (Special Court) ಈ ಮಾತನ್ನು ಹೇಳಿದರು. ಬ್ಯಾಂಕ್ ವಂಚನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಕಳೆದ ವರ್ಷ ಸೆಪ್ಟೆಂಬರ್ 1 ರಂದು ಗೋಯಲ್ ಅವರನ್ನು ಬಂಧಿಸಿತ್ತು. ಅವರು ಪ್ರಸ್ತುತ ಇಲ್ಲಿನ ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ವಿಶೇಷ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರ ಮುಂದೆ ಗೋಯಲ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗಾಗಿ ಗೋಯಲ್ ಅವರನ್ನು ಶನಿವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಗೋಯಲ್ ಅವರು ಕೆಲವು ನಿಮಿಷಗಳ ವೈಯಕ್ತಿಕ ವಿಚಾರಣೆಗೆ ಮನವಿ ಮಾಡಿದ್ದು, ಇದಕ್ಕೆ ನ್ಯಾಯಾಧೀಶರು ಅನುಮತಿ ನೀಡಿದರು.
ಜಡ್ಜ್ ಮುಂದೆ ಕಣ್ಣೀರಿಟ್ಟು ಹೇಳಿದ್ದೇನು ಗೋಯಲ್..?: ಜಡ್ಜ್ ಮುಂದೆ ಕೈಕಟ್ಟಿ ಕಣ್ಣೀರು ಸುರಿಸುತ್ತಾ, ಪತ್ನಿ ಆರೋಗ್ಯದ ಕುರಿತು ಮಾತನಾಡಿದರು. ಪತ್ನಿ ಅನಿತಾಳನ್ನು ತಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆಕೆ ಕ್ಯಾನ್ಸರ್‌ನ ಮುಂದುವರಿದ ಹಂತದಲ್ಲಿದ್ದಾಳೆ. ಸದ್ಯ ಆಕೆ ಹಾಸಿಗೆ ಹಿಡಿದಿದ್ದು, ಇತ್ತ ಇರುವ ಒಬ್ಬಳೇ ಮಗಳು ಕೂಡ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವಳನ್ನು ನೋಡಿಕೊಳ್ಳುವವರು ಯಾರೂ ಇಲ್ಲ. ಅಲ್ಲದೇ ಗೋಯಲ್ ತನ್ನ ಮೊಣಕಾಲುಗಳನ್ನು ತೋರಿಸಿದರು. ಅವು ಊದಿಕೊಂಡಿವೆ ಮತ್ತು ನೋವಿನಿಂದ ಕೂಡಿದೆ. ಕಾಲುಗಳನ್ನು ಮಡಚಲು ಸಾಧ್ಯವಾಗುತ್ತಿಲ್ಲ. ಮೂತ್ರ ವಿಸರ್ಜಿಸುವಾಗ ತೀವ್ರವಾದ ನೋವು ಮತ್ತು ಕೆಲವೊಮ್ಮೆ ಮೂತ್ರದ ಮೂಲಕ ರಕ್ತವು ಬರುತ್ತದೆ ಎಂದು ಗೋಯಲ್ ನ್ಯಾಯಾಲಯದ ಗಮನಕ್ಕೆ ತಂದರು.
ಆರೋಗ್ಯ ತಾಪಸಣೆಗಾಗಿ ನನ್ನನ್ನು ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆದರೆ ಆಸ್ಪತ್ರೆಗೆ ಹೋಗಿ ಹೆಚ್ಚು ಹೊತ್ತು ಸರದಿಯಲಿ ನಿಲ್ಲಲು ಆಗುತ್ತಿಲ್ಲ. ಅಷ್ಟೊಂದು ಶಕ್ತಿ ನನಗಿಲ್ಲ. ಹೀಗಾಗಿ ಪದೇ ಪದೇ ಆಸ್ಪತ್ರೆಗೆ ಹೋಗುವುದು ನನಗೆ ಬೇಸರ ಅನಿಸಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬದಲು ನನ್ನನ್ನು ಜೈಲಿನಲ್ಲಿಯೇ ಸಾಯಲು ಬಿಡಿ. ಜೀವನದ ಪ್ರತಿಯೊಂದು ಭರವಸೆಯನ್ನು ಕಳೆದುಕೊಂಡಿದ್ದೇನೆ. ಇಂತಹ ಪರಿಸ್ಥಿತಿಯಲ್ಲಿ ಜೀವಂತವಾಗಿರುವುದಕ್ಕಿಂತ ಸಾಯುವುದು ಉತ್ತಮ ಎಂದು ಗೋಯಲ್ ಹೇಳಿದರು.
ಗೋಯಲ್ ನಿವೇದನೆ ಆಲಿಸಿದ ಬಳಿಕ ಮಾತನಾಡಿದ ವಿಶೇಷ ಜಡ್ಜ್, ಗೋಯಲ್ ಅವರ ಮಾತುಗಳನ್ನು ತಾಳ್ಮೆಯಿಂದ ಆಲಿಸಿದ್ದೇನೆ. ಅವರು ಮಾತನಾಡುವಾಗ ಅವರ ದೇಹ ನಡುಗುತ್ತಿತ್ತು. ನಿಂತುಕೊಳ್ಳಲು ಕೂಡ ಅವರಿಗೆ ಸಹಾಯ ಬೇಕಾದಂತಹ ಪರಿಸ್ಥಿತಿಯಲ್ಲಿದ್ದಾರೆ. ಅವರಿಗೆ ಕಾಲು ಮಡಿಚಲೂ ಕೂಡ ಆಗುತ್ತಿಲ್ಲ ಎಂದರು. ಇದನ್ನೂ ಓದಿ: ಅಯೋಧ್ಯೆಗೆ ನನ್ನನ್ನು ಆಹ್ವಾನಿಸಿಲ್ಲ: ಡಿ.ಕೆ ಶಿವಕುಮಾರ್
ಆರೋಪಿಯನ್ನು ಅಸಹಾಯಕನಾಗಿ ಬಿಡುವುದಿಲ್ಲ. ಹೀಗಾಗಿ ಸರಿಯಾದ ಚಿಕಿತ್ಸೆಯೊಂದಿಗೆ ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ಕಾಳಜಿಯನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದೇನೆ ಎಂದರು. ಗೋಯಲ್ ಆರೋಗ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಕೀಲರಿಗೆ ನ್ಯಾಯಾಲಯ ಸೂಚಿಸಿದೆ. ಗೋಯಲ್ ಜಾಮೀನು ಅರ್ಜಿಗೆ ಇಡಿ ಪ್ರತಿಕ್ರಿಯೆ ನೀಡಿದ್ದು, ಜನವರಿ 16 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.
ನವದೆಹಲಿ: ಕೆನರಾ ಬ್ಯಾಂಕ್‍ಗೆ ವಂಚಿಸಿರುವ ಆರೋಪದ ಮೇಲೆ ಜೆಟ್ ಏರ್‌ವೇಸ್ (Jet Airways) ಸಂಸ್ಥಾಪಕ ನರೇಶ್ ಗೋಯಲ್ (78) ಅವರನ್ನು ಜಾರಿ ನಿರ್ದೇಶನಾಲಯ (Enforcement Directorate) ಬಂಧಿಸಿದೆ. ಮುಂಬೈನ (Mumbai) ಇಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆಗಟ್ಟುವಿಕೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಗೋಯಲ್ (Naresh Goyal) ಅವರನ್ನು ಇಡಿ ಬಂಧಿಸಿದೆ.
ಗೋಯಲ್ ಅವರು 538 ಕೋಟಿ ರೂ. ಹಣವನ್ನು ಅಕ್ರಮವಾಗಿ ವರ್ಗಾಯಿಸಿದ್ದಾರೆ ಎನ್ನಲಾಗಿದೆ. ಅವರನ್ನು ಮುಂಬೈನ ಪಿಎಂಎಲ್‍ಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಬಳಿಕ ಇಡಿ ಹೆಚ್ಚಿನ ವಿಚಾರಣೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ಕೆನರಾ ಬ್ಯಾಂಕ್‍ಗೆ 538 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ ಸಂಸ್ಥಾಪಕ ಗೋಯಲ್ ಮತ್ತು ಅವರ ಪತ್ನಿ ಅನಿತಾ ಸೇರಿದಂತೆ ಕಂಪನಿಯ ಕೆಲವು ಮಾಜಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಎಫ್‍ಐಆರ್ ದಾಖಲಿಸಿದೆ. ಇದರ ಆಧಾರದ ಮೇಲೆ ಇಡಿ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯ
ಜೆಟ್ ಏರ್‌ವೇಸ್ ಲಿಮಿಟೆಡ್‍ಗೆ (ಜೆಐಎಲ್) 848.86 ಕೋಟಿ ಮೊತ್ತದ ಸಾಲವನ್ನು ಮಂಜೂರು ಮಾಡಲಾಗಿತ್ತು. ಅದರಲ್ಲಿ 538.62 ಕೋಟಿ ರೂ. ಬಾಕಿ ಇದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್‍ನ ಆಡಳಿತ ಮಂಡಳಿ ನೀಡಿದ ದೂರಿನ ಆಧಾರದ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.
ಜಿಐಎಲ್‍ನ ವಿಧಿವಿಜ್ಞಾನ ಲೆಕ್ಕಪರಿಶೋಧನೆಯ ಪ್ರಕಾರ, ಸಂಬಂಧಿತ ಕಂಪನಿಗಳಿಗೆ ಒಟ್ಟು ಕಮಿಷನ್ ವೆಚ್ಚದಲ್ಲಿ 1,410 ಕೋಟಿ ರೂ. ಗಳನ್ನು ಪಾವತಿಸಿರುವುದು ಕಂಡುಬಂದಿದೆ. ಹಣವನ್ನು ಅಕ್ರಮವಾಗಿ ಬೇರೆಡೆಗೆ ವರ್ಗಾಹಿಸಿರುವುದು ಪತ್ತೆಯಾಗಿದೆ ಎಂದು ಕೆನರಾ ಬ್ಯಾಂಕ್ ತನ್ನ ವರದಿಯಲ್ಲಿ ತಿಳಿಸಿತ್ತು. ಜಿಐಎಲ್ ಕಂಪನಿ ತನ್ನ ಅಧೀನ ಕಂಪನಿಗಳಿಗೆ ಸಾಲದ ಹಣವನ್ನು ಸಾಲ ಮತ್ತು ಮುಂಗಡಗಳು ಸೇರಿದಂತೆ ಹೂಡಿಕೆಗಳ ರೂಪದಲ್ಲಿ ಬೇರೆಡೆಗೆ ತಿರುಗಿಸಿದೆ ಎಂದು ತಿಳಿಬಂದಿದೆ. ಇದನ್ನೂ ಓದಿ: ಭಾರತಕ್ಕೆ ಗೌರವ ತರುವ ಕೆಲಸವನ್ನ ಕರ್ನಾಟಕದಿಂದ ಇಸ್ರೋ ಮಾಡ್ತಿದೆ: ಡಿಕೆಶಿ
ಹಾವೇರಿ: ವ್ಯಕ್ತಿಯೊಬ್ಬನು ಕೆನರಾ ಬ್ಯಾಂಕ್‍ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಗರದ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ನಡೆದಿದೆ.
ವಸೀಮ್ ಮುಲ್ಲಾ (33) ಬೆಂಕಿ ಹಚ್ಚಿದ ಆರೋಪಿ. ವಸೀಮ್ ರಟ್ಟೀಹಳ್ಳಿ ನಿವಾಸಿಯಾಗಿದ್ದು, ಬೆಳಗ್ಗಿನ ಜಾವ ಬ್ಯಾಂಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಬ್ಯಾಂಕಿನಲ್ಲಿದ್ದ ಕಾಗದ ಪತ್ರಗಳು ಹಾಗೂ ನಗದು ಹಣ ಸುಟ್ಟು ಕರಕಲಾಗಿವೆ. ಇದನ್ನೂ ಓದಿ: ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ: ಬಿಜೆಪಿ ವ್ಯಂಗ್ಯ
ಗ್ರಾಮಸ್ಥರು ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಬ್ಯಾಂಕಿನ ಮ್ಯಾನೇಜರ್ ತನಗೆ ಲೋನ್ ಕೊಡಲಿಲ್ಲ ಎಂಬ ಕಾರಣಕ್ಕೆ ಬ್ಯಾಂಕಿನ ಗ್ಲಾಸ್ ಒಡೆದು ಬ್ಯಾಂಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬೆಂಕಿ ಹಚ್ಚಿ ಕಟ್ಟಡದ ಮೇಲಿಂದ ಜಿಗಿದು ಹೋಗಲು ಯತ್ನಿಸುತ್ತಿದ್ದ ವೇಳೆ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಗಿನೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಕಿ ಹೊತ್ತಿ ಉರಿಯುತ್ತಿದ್ದ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಲು ಪ್ರಾರಂಭಿಸಿದರು. ಆದರೆ ಬೆಂಕಿ ನಂದಿಸುವ ವೇಳೆ ಅಗ್ನಿಶಾಮಕ ಸಿಬ್ಬಂದಿ ಲೋ ಬಿಪಿಯಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಆ ಸಿಬ್ಬಂದಿಯನ್ನ ಕಲಬುರಗಿಯ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರಸೀಕೆರೆಯ ಎಪಿಎಂಸಿ ಬಳಿ ಇರುವ ಕೆನರಾ ಬ್ಯಾಂಕ್‍ಗೆ ಸೇರಿದ ಎಟಿಎಂನಲ್ಲಿ ದರೋಡೆಗೆ ಯತ್ನಿಸಲಾಗಿದ್ದು, ತಡರಾತ್ರಿ ಈ ಘಟನೆ ನಡೆದಿದೆ. ಹೆದ್ದಾರಿ ಪಕ್ಕದಲ್ಲೇ ಎಟಿಎಂ ಇದ್ದು, ಕಳ್ಳರು ಎಟಿಎಂ ಅನ್ನು ಬಹುತೇಕ ಜಖಂ ಗೊಳಿಸಿದ್ದಾರೆ. ಎಟಿಎಂ ಜಖಂ ಗೊಳಿಸಿದ್ದರು ಕೂಡ ಅಂತಿಮವಾಗಿ ಹಣ ಕದಿಯಲಾಗದೇ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು, ವೃತ್ತ ನಿರೀಕ್ಷಕ ಸೋಮೇಗೌಡ, ಡಿವೈಎಸ್‍ಪಿ ನಾಗೇಶ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆಲವು ತಿಂಗಳ ಹಿಂದೆಯಷ್ಟೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಆಕ್ಸಿಸ್ ಬ್ಯಾಂಕ್‍ನ ಎಟಿಎಂನಲ್ಲಿ ದರೋಡೆ ಮಾಡಲು ದುಷ್ಕರ್ಮಿಗಳು ಪ್ರಯತ್ನಿಸಿದ್ದರು. ಈ ವೇಳೆ ಎಟಿಎಂ ಯಂತ್ರದಲ್ಲಿ ಹಣ ಬರುವ ಸ್ಥಳವನ್ನು ಕೊರೆಯಲು ದುಷ್ಕರ್ಮಿಗಳು ಮುಂದಾಗಿದ್ದರು. ಆದರೆ ಕೊರೆಯಲು ಸಾಧ್ಯವಾಗದ ಕಾರಣ ಮಷಿನ್‍ನನ್ನು ಒಡೆಯಲು ಯತ್ನಿಸಿದಾಗ ಎಟಿಎಂ ಕೊಠಡಿಯಲ್ಲಿ ಇದ್ದ ಸೈರನ್ ಕೂಗಿಕೊಂಡಿದೆ. ಇದರಿಂದ ಗಾಬರಿಗೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದರು. ಇದನ್ನೂ ಓದಿ: ಕಲಾಪಕ್ಕೆ ಸಚಿವರ ಹಾಜರಿ ಕಡ್ಡಾಯ- ಸಿಎಂಗೆ ಪತ್ರ ಬರೆದ ಸಭಾಪತಿ ಹೊರಟ್ಟಿ
ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಿಎಂಟಿಸಿ ಬೆಂಗಳೂರಿನ ಬಸ್ ನಿಲ್ದಾಣವನ್ನೇ ಅಡವಿಟ್ಟಿದ್ದು ಪ್ರತಿ ತಿಂಗಳು 1.04 ಕೋಟಿ ರೂ. ಹಣವನ್ನು ಬಡ್ಡಿಯಾಗಿ ಪಾವತಿಸುತ್ತಿದೆ.
160 ಕೋಟಿ ರೂಪಾಯಿ ಸಾಲಕ್ಕೆ ಶಾಂತಿನಗರ ಟಿಟಿಎಂಸಿಯನ್ನು ಅಡವಿಟ್ಟ ಬಿಎಂಟಿಸಿ ಈಗ ಪ್ರತಿ ತಿಂಗಳು 1.04 ಕೋಟಿ ರೂಪಾಯಿ ಬಡ್ಡಿಯನ್ನು ಕೆನರಾ ಬ್ಯಾಂಕಿಗೆ ಪಾವತಿಸುತ್ತಿರುವ ವಿಚಾರ ಮಾಹಿತಿ ಹಕ್ಕು ಕಾಯ್ದೆಯ ಅಡಿ ಬಯಲಾಗಿದೆ.
ಆನಂದ ಎಂಬವರು 2019 ಅಕ್ಟೋಬರ್ 10 ರಿಂದ 2021 ಜನವರಿ 12ರವರೆಗೆ ಬಿಎಂಟಿಸಿ ಸಂಸ್ಥೆ ಎಷ್ಟು ಸಾಲ ಮಾಡಿದೆ? ಇದಕ್ಕೆ ಎಷ್ಟು ಬಡ್ಡಿಯನ್ನು ಕಟ್ಟಲಾಗುತ್ತಿದೆ ಮತ್ತು ಈ ಸಾಲಕ್ಕೆ ಅಡಮಾನ ಇಟ್ಟಿರುವ ಆಸ್ತಿಯ ವಿವರಗಳನ್ನು ಕೋರಿ ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು
ಈ ಅರ್ಜಿಗೆ ಬಿಎಂಟಿಸಿಯ ಅಯವ್ಯಯ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಜ.28 ರಂದು ಉತ್ತರ ನೀಡಿದ್ದಾರೆ. ಉತ್ತರದಲ್ಲಿ ಕೇಳಿದ ಅವಧಿಯಲ್ಲಿ ಒಟ್ಟು 160 ಕೋಟಿ ರೂ. ಸಾಲವನ್ನು ಕೆನರಾ ಬ್ಯಾಂಕಿನಿಂದ ಪಡೆಯಲಾಗಿದೆ. ಈ ಸಾಲಕ್ಕೆ ಪ್ರತಿ ತಿಂಗಳು 1.04 ಕೋಟಿ ರೂ. ಬಡ್ಡಿಯನ್ನು ಪಾವತಿಸಲಾಗುತ್ತಿದೆ. ಈ ಸಾಲ ಪಡೆಯಲು ಶಾಂತಿನಗರ ಟಿಟಿಎಂಸಿಯನ್ನು ಅಡಮಾನ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಿಬ್ಬಂದಿಯ ಪಿಎಫ್, ವಿಮೆ ಮತ್ತು ಇನ್ನಿತರೆ ಬಾಕಿ ಪಾವತಿಗೆ ಹಣವಿಲ್ಲದೆ ಬಿಎಂಟಿಸಿ ಸಂಕಷ್ಟಕ್ಕೆ ಸಿಲುಕಿತ್ತು. ಹೀಗಾಗಿ 2019ರಲ್ಲಿ 160 ಕೋಟಿ ರೂ. ಸಾಲ ಕೋರಿ ಟೆಂಡರ್ ಕರೆದಿತ್ತು. ಆದರೆ ಯಾವುದೇ ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕ್‌ಗಳು ಸಾಲ ನೀಡಲು ಮುಂದೆ ಬರದ ಕಾರಣ ಟಿಟಿಎಂಸಿ ಕಟ್ಟಡವನ್ನು ಅಡವಿಟ್ಟು, ಸಾಲವನ್ನು ಪಡೆಯಲಾಗಿತ್ತು.