Tag: ಕೆಪಿಟಿಸಿಎಲ್

  • ಇಂದು ಬೆಂಗಳೂರಿನ ಹಲವಡೆ ವಿದ್ಯುತ್‌ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿಕೊಳ್ಳಿ

    ಇಂದು ಬೆಂಗಳೂರಿನ ಹಲವಡೆ ವಿದ್ಯುತ್‌ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿಕೊಳ್ಳಿ

    ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ (Bengaluru) ಮಹಾಲಕ್ಷ್ಮೀ ಲೇಔಟ್ (Mahalakshmi Layout) ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

    ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಣೆಯಲ್ಲಿ ತಿಳಿಸಿದೆ.


    ಯಾವ ಪ್ರದೇಶದಲ್ಲಿ ವ್ಯತ್ಯಯ?
    ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ. ಇದನ್ನೂ ಓದಿ: ರಷ್ಯಾ ಡ್ರೋನ್‌ ದಾಳಿ ಮುಳುಗಿತು ಉಕ್ರೇನ್‌ ಅತಿ ದೊಡ್ಡ ನೌಕಾ ಹಡಗು

    ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಲಕ್ಷ್ಮೀ ನಗರ, HVKಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, VJSSಲೇಔಟ್, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಖ ಹೋಮ್ ಸುತ್ತಮುತ್ತ, ಶಂಕರಮಠ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿನಗರ 2ನೇ ಬ್ಲಾಕ್.

    ESI ಹಾಸ್ಪಿಟಲ್, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಗೆಳೆಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಇಸ್ಕಾನ್, BNES ಕಾಲೇಜು, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.

  • ಬೆಂಗಳೂರಿನಲ್ಲಿ ಶನಿವಾರ, ಭಾನುವಾರ ವಿದ್ಯುತ್ ವ್ಯತ್ಯಯ – ನಿಮ್ಮ ನಗರ ಇದ್ಯಾ ಚೆಕ್‌ ಮಾಡಿ

    ಬೆಂಗಳೂರಿನಲ್ಲಿ ಶನಿವಾರ, ಭಾನುವಾರ ವಿದ್ಯುತ್ ವ್ಯತ್ಯಯ – ನಿಮ್ಮ ನಗರ ಇದ್ಯಾ ಚೆಕ್‌ ಮಾಡಿ

    ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೂಡಿ ಸ್ಟೇಷನ್ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಎಲ್ಲೆಲ್ಲಿ ವ್ಯತ್ಯಯ?
    ಹುಡಿ ವಿಲೇಜ್, ತಿಗಳರಪಾಳ್ಯ, ಸೀತಾರಾಮಪಾಳ್ಯ, ಬಸವನಗರ, ಸೊನ್ನೆಹಳ್ಳಿ, ಎನ್‌ಜಿಎಫ್‌ ಕೈಗಾರಿಕಾ ಪ್ರದೇಶ, ಶಿವರಾಜ್ ಫ್ಯಾಕ್ಟರಿ, ಇಎಸ್ಐ ರಸ್ತೆ, ವಿಎಸ್ಎನ್ಎಲ್ ಡೇಟಾ ಸೆಂಟರ್, ಪುರವ ಪಾರ್ಕ್ ವಿಲಾಸ್, ಶಿವಗಂಗಾ ಲೇಔಟ್, ಅನುಗ್ರಹ ಲೇಔಟ್, ಚಿನ್ನಪ್ಪ ಲೇಔಟ್, ಔಟರ್ ರಿಂಗ್ ರಸ್ತೆ, ರಾಮಕೃಷ್ಣ ರೆಡ್ಡಿ ಲೇಔಟ್, ಗರುಡಾಚಾರ್ ಪಾಳ್ಯ, ಲಕ್ಷ್ಮೀ ಸಾಗರ, ಮಹೇಶ್ವರಮ್ಮ ದೇವಾಲಯ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

    ಪೀಣ್ಯ ವ್ಯಾಪ್ತಿಯಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ
    ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ: ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೀವಿ: ಡಿಕೆಶಿ

    ಎಲ್ಲೆಲ್ಲಿ ವ್ಯತ್ಯಯ?
    ಹೆಚ್. ಎಮ್.ಟಿ ರಸ್ತೆ, ಆಆರ್‌ಎನ್‌ಎಸ್‌ ಅಪಾರ್ಟ್‌ಮೆಂಟ್‌, ಸಿಎಂಟಿಐ, ಬರ‍್ಲಿಂಗಪ್ಪ ಗಾರ್ಡನ್‌, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ. ಇದನ್ನೂ ಓದಿ: ಡಾ. ವಿಷ್ಣು ಅಭಿಮಾನ ಸ್ಮಾರಕ ಪುತ್ಥಳಿ ನಿರ್ಮಾಣಕ್ಕೆ ಚಾಲನೆ

    ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭಿರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿ 5ನೇ ಮುಖ್ಯ ರಸ್ತೆ, ಯುಕೊ ಬ್ಯಾಂಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್ಐಸಿ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶ

    ನೆಲಗೆದರನಹಳ್ಳಿ ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಕೆಂಪಯ್ಯ ಗಾರ್ಡನ್‌, ತಿಗಳರಪಾಳ್ಯ ಮುಖ್ಯ ರಸ್ತೆ, ಮಾರುತಿ ಇಂಡಸ್ಟ್ರಿಯಲ್ ಎಸ್ಟೇಟ್, ನೆಲಿಕಾಗಡರನಹಳ್ಳಿ, ಹೆಚ್ ಎಂ ಟಿ ಲೇಔಟ್, ಶಿವಪುರ, ಗೃಹಲಕ್ಷ್ಮಿ ಲೇಔಟ್, ಶಿವಪುರ ಬೆಳ್ಮಾರ್ ಲೇಔಟ್, ವಿನಾಯಕನಗರ, 8ನೇ ಮೈಲ್ ರಸ್ತೆ, ಜಾಲಹಳ್ಳಿ ಕ್ರಾಸ್, ಕೆ.ಎಲ್.ಎ.ಪಿ.ಎಲ್. ಆಂಟಿಬಯೋಟಿಕ್ಸ್ ಪ್ರೈವೇಟ್ ಲಿಮಿಟೆಡ್, ರುಕ್ಮಿಣಿನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯತ್ಯಯ ಉಂಟಾಗಲಿದೆ.

  • ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್‌ ವ್ಯತ್ಯಯ

    ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್‌ ವ್ಯತ್ಯಯ

    ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಸಹಕಾರನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ಇದೇ ಜುಲೈ 21 (ಸೋಮವಾರ), ಜು.22 (ಮಂಗಳವಾರ) ಬೆಂಗಳೂರು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ (Power Outage) ಆಗಲಿದೆ.

    ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ (Electricity) ಪೂರೈಕೆಯಲ್ಲಿ ವ್ಯತ್ತಯ ಉಂಟಾಗಲಿದೆ ಎಂದು ಕೆಪಿಟಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಸಂಸದರು ಮೋದಿ ಮುಂದೆ ನಿಂತು ಮಾತಾಡೋಕೆ ನಡುಗುತ್ತಾರೆ: ಸಿದ್ದರಾಮಯ್ಯ ವಾಗ್ದಾಳಿ

    ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?
    ಬೆಂಗಳೂರು ನಗರದ ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ-ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋನಗರ, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್‌ಎಲ್‌ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ. ಇದನ್ನೂ ಓದಿ: ಜೆಡಿಎಸ್ ಶಾಸಕರಿಗೆ ಅನುದಾನ ಬಿಡುಗಡೆ ಮಾಡದೇ ರಾಜ್ಯ ಸರ್ಕಾರ ಅನ್ಯಾಯ: ಸುರೇಶ್ ಬಾಬು

  • ಡಿಕೆ ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ: ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಡಿಕೆಶಿ

    ಡಿಕೆ ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ: ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಡಿಕೆಶಿ

    ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮತ್ತೊಮ್ಮೆ ಪರೋಕ್ಷವಾಗಿ ಸಿಎಂ ಸ್ಥಾನ ಆಸೆಯನ್ನು ಹೊರ ಹಾಕಿದ್ದಾರೆ. ಅಷ್ಟೇ ಅಲ್ಲ ಡಿಕೆ ಶಿವಕುಮಾರ್‌ಗೆ ನೀವು ಶಕ್ತಿ ಕೊಡಬೇಕು ಎಂಬ ಮನವಿ ಮಾಡುವ ಮೂಲಕ ಸಿಎಂ ಸ್ಥಾನಕ್ಕೆ (Chief Minister Post) ನನ್ನನ್ನ ಕೂರಿಸಿ ಎಂಬ ಪರೋಕ್ಷವಾಗಿ ಸಂದೇಶ ಕಳುಹಿಸಿದ್ದಾರೆ.

    ಅರಮನೆ ಮೈದಾನದಲ್ಲಿ ಇವತ್ತು ಕೆಪಿಟಿಸಿಎಲ್ (KPTCL) ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ವೇಳೆ ಡಿಕೆ ಶಿವಕುಮಾರ್ ಭಾಷಣ ಮಾಡಲು ಬಂದ ಕೂಡಲೇ ವಿದ್ಯುತ್ ಇಲಾಖೆ ಸಿಬ್ಬಂದಿಗಳು, ನೌಕರರು ಡಿಕೆ ಡಿಕೆ ಅಂತ ಘೋಷಣೆ ಕೂಗಿದರು. ಇದನ್ನೂ ಓದಿ: ನಂದಿನಿ ನಮ್ಮ ಸಂಸ್ಥೆ, ‘ನಮ್ಮ ಮೆಟ್ರೋ’ದಲ್ಲಿ ಮಳಿಗೆ ಹಾಕಲು ಅವಕಾಶ ಕೊಡ್ತೀವಿ: ಡಿಕೆಶಿ

     

    ಈ ವೇಳೆ ಮಾತಾನಾಡಿದ ಡಿಕೆ ಶಿವಕುಮಾರ್ ಈಗ ಡಿಕೆ ಡಿಕೆ ಅನ್ನೋದು ಅಲ್ಲ. ಎಲೆಕ್ಷನ್ ‌ನಲ್ಲಿ ಇನ್ನೊಂದು ಸಾರಿ ಡಿಕೆ ಶಿವಕುಮಾರ್ ತಂದು ಕೂರಿಸಿದ ಮೇಲೆ ಈ ಘೋಷಣೆ ಕೂಗಿ ಎಂದರು. ಇದನ್ನೂ ಓದಿ: ನಾವಿರುವವರೆಗೂ ಎಸ್ಕಾಂಗಳ ಖಾಸಗೀಕರಣಕ್ಕೆ ಅವಕಾಶವಿಲ್ಲ: ಡಿ.ಕೆ ಶಿವಕುಮಾರ್

    ಮಾತು ಮುಂದುವರೆಸಿದ ಡಿಕೆಶಿವಕುಮಾರ್, ತಾವು ಇಂಧನ ಇಲಾಖೆ ಸಚಿವನಾಗಿ ಇದ್ದಾಗ ಮಾಡಿದ ಸಾಧನೆ ಹೇಳಿದ್ರು. ನೀವು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ನನ್ನು ಮೇಲಕ್ಕೆ ಎತ್ತಬಹುದು. ಕೆಳಗೆ ಇಳಿಸಬಹುದು. ಅಷ್ಟು ಶಕ್ತಿ ನಿಮಗೆ ಇದೆ. ನಾವು ನಿಮಗೆ ಎಲ್ಲಾ ಮಾಡಿದ್ದೇವೆ. ನಿಮಗೆ ನಮ್ಮ ಮೇಲೆ ಉಪಕಾರ ಸ್ಮರಣೆ ಇರಬೇಕು. ಬರೀ ಡಿಕೆ ಡಿಕೆ ಅನ್ನೋದಲ್ಲ. ಈ ಸರ್ಕಾರವನ್ನು ತಂದು ಕೂರಿಸಬೇಕು ಎನ್ನುವ ಮೂಲಕ ಸಿಎಂ ಸ್ಥಾನಕ್ಕೆ ಆಶೀರ್ವಾದ ಮಾಡಬೇಕೆಂದು ಪರೋಕ್ಷವಾಗಿ ಹೇಳಿದರು.

  • ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ, ಬೇಸಿಗೆಯಲ್ಲೂ ತೊಂದರೆಯಾಗಲ್ಲ: ಕೆಪಿಟಿಸಿಎಲ್ ಎಂಡಿ

    ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ, ಬೇಸಿಗೆಯಲ್ಲೂ ತೊಂದರೆಯಾಗಲ್ಲ: ಕೆಪಿಟಿಸಿಎಲ್ ಎಂಡಿ

    ಬೆಂಗಳೂರು: ವಿದ್ಯುತ್ ಸಂಗ್ರಹ ರಾಜ್ಯದಲ್ಲಿ ಚೆನ್ನಾಗಿ ಇದೆ. ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ, ಜನಕ್ಕೆ ಅನುಕೂಲ ಮಾಡಿಕೊಡಲು ಕ್ರಮ ಕೈಗೊಂಡಿದ್ದೇವೆ ಎಂಬುದಾಗಿ ಕೆಪಿಟಿಸಿಎಲ್ (KPTCL) ಎಂಡಿ ಪಂಕಜ್ ಕುಮಾರ್ ಪಾಂಡೆ (Pankaj Kumar Pandey) ಹೇಳಿದ್ದಾರೆ.

    ಬೆಸ್ಕಾಂನ (BESCOM) ಬೆಳಕು ಭವನದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯದ ಪ್ರಸ್ತುತ ವಿದ್ಯುತ್ ಪರಿಸ್ಥಿತಿ ಮತ್ತು ಇಂಧನ ಇಲಾಖೆಯ ಕಾರ್ಯ ಪ್ರಗತಿ, ಗ್ರ‍್ಯಾಚುಟಿ, ಪಿಂಚಣಿ ಹಣಕ್ಕಾಗಿ ವಿದ್ಯುತ್ ದರ ಏರಿಕೆ ಕುರಿತು ಚರ್ಚಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಕೆಪಿಟಿಸಿಎಲ್ ಎಂಡಿ ಪಂಕಜ್‌ಕುಮಾರ್ ಪಾಂಡೆ, ಬೆಸ್ಕಾಂ ಎಂಡಿ ಶಿವಶಂಕರ್ ಭಾಗಿಯಾಗಿದ್ದರು.ಇದನ್ನೂ ಓದಿ:‌’ಸಿಕಂದರ್‌’ ಚಿತ್ರದ ಟ್ರೈಲರ್‌ನಲ್ಲಿ ಮಿಂಚಿದ ಕನ್ನಡಿಗ ಕಿಶೋರ್

    ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 6 ತಿಂಗಳಿಂದ ವಿದ್ಯುತ್ ಬಳಕೆ ಪ್ರಮಾಣ ಹೆಚ್ಚಾಗಿದೆ, ಗೃಹಬಳಕೆ ಹಾಗೂ ಕೈಗಾರಿಕೆಗಳಲ್ಲಿ ಎಸಿ ಬಳಕೆ ಹೆಚ್ಚಳವಾಗಿದೆ. ಇನ್ನೂ ಏಪ್ರಿಲ್ ತಿಂಗಳಲ್ಲಿ 18,500 ಮೆಗಾ ವ್ಯಾಟ್ ಬಳಕೆ ಹೆಚ್ಚಳವಾಗಲಿದ್ದು, ಪಂಜಾಬ್, ಯುಪಿಯಿಂದ ವಿದ್ಯುತ್ ಪಡೆಯುತ್ತಿದ್ದೇವೆ ಎಂದರು.

    ಈ ಮೊದಲು ವಿದ್ಯುತ್ ಬೇಡಿಕೆ 17,220 ಮೆಗಾವ್ಯಾಟ್‌ನಷ್ಟಿತ್ತು. ಆದರೆ ಈ ವರ್ಷ 18,500 ಮೆಗಾವ್ಯಾಟ್‌ಗೆ ಹೆಚ್ಚಿದೆ. ಕಳೆದ ವರ್ಷಕ್ಕಿಂತ ಈ ಬಾರಿ 15% ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಕಳೆದ ನವಂಬರ್‌ನಲ್ಲಿ 14,856 ಮೆಗಾವ್ಯಾಟ್ ಇತ್ತು. ಇದೀಗ ಮಾರ್ಚ್ನಲ್ಲಿ ವಿದ್ಯುತ್ ಬೇಡಿಕೆ 18,395 ಮೆಗಾವ್ಯಾಟ್ ಇದೆ. ಏಪ್ರಿಲ್ – ಮೇನಲ್ಲಿ ವಿದ್ಯುತ್ ಬೇಡಿಕೆ ಇನ್ನೂ ಹೆಚ್ಚಾಗುತ್ತದೆ. ಇದೆಲ್ಲಕ್ಕಿಂತಲೂ ಹೆಚ್ಚಾಗಿ ರಾಜ್ಯದಲ್ಲಿ ವಿದ್ಯುತ್ ಸಂಗ್ರಹ ಚೆನ್ನಾಗಿ ಇದೆ. ಕೈಗಾರಿಕಾ ವಲಯದಲ್ಲಿ ಶೇ15% ರಷ್ಟು ವಿದ್ಯುತ್ ಬೇಡಿಕೆ ಇದೆ. ಮಳೆ ಚೆನ್ನಾಗಿ ಆಗಿರುವ ಕಾರಣಕ್ಕೆ ಕೃಷಿ ಚಟುವಟಿಕೆಗಳೂ ಜೋರಾಗಿದೆ. ಹೀಗಾಗಿ 20% ಹೆಚ್ಚಿನ ವಿದ್ಯುತ್ ಕೃಷಿ ಚಟುವಟಿಕೆಗಳಿಗೆ ನೀಡಬೇಕಾಗಬಹುದು. ಒಟ್ಟಾರೆ ಈ ಬೇಸಿಗೆಯಲ್ಲಿ ಕರೆಂಟ್ ಬಳಕೆ ಹೆಚ್ಚಾಗಲಿದ್ದು, ಅದಕ್ಕೆ ಬೇಕಾದ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

    ಅದರ ಜೊತೆಗೆ ರೈತರಿಗೆ ತೊಂದರೆ ಆಗದಂತೆ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ವಿದ್ಯುತ್ ಕಡಿತಗೊಳಿಸದಂತೆ ಹಾಗೂ ವಿದ್ಯುತ್ ಕೊರತೆ ಆಗದಂತೆ ಕ್ರಮ ಕೈಗೊಂಡಿದ್ದೇವೆ. ಯಾವುದೇ ಸಮಸ್ಯೆ ಆಗದಂತೆ ವಿದ್ಯುತ್ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

    ಇದೇ ವೇಳೆ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಮಾತನಾಡಿ, ಈ ವರ್ಷದಲ್ಲಿ ಅತಿ ಹೆಚ್ಚು ವಿದ್ಯುತ್ ಬೇಡಿಕೆ ನೋಡುತ್ತಿದ್ದೇವೆ. ಕೆಲ ಜಿಲ್ಲೆಗಳಲ್ಲಿ ಅತಿ ಹೆಚ್ಚು ವಿದ್ಯುತ್ ಬೇಡಿಕೆ ಇದೆ. ಜನವರಿಯಿಂದ ವಿದ್ಯುತ್ ಬೇಡಿಕೆ ಬಂದಿದ್ದು, ಈ ವರ್ಷ ಹಲವು ಪೂರ್ವ ಸಿದ್ಧತೆ ಮಾಡಿದ್ದೇವೆ. ತಾಪಮಾನ ಹೆಚ್ಚಿದ ಕಾರಣ ವಿದ್ಯುತ್ ಬೇಡಿಕೆ ಹೆಚ್ಚಾದ ಕಾರಣಕ್ಕೆ ಸೋಲಾರ್ ಬಳಕೆ ರಾಜ್ಯದಲ್ಲಿ ಜಾಸ್ತಿಯಾಗುತ್ತಿದೆ, ಹೀಗಾಗಿ ವಿದ್ಯುತ್ ಮಿತವಾಗಿ ಬಳಕೆ ಮಾಡಿ ಎಂದು ಮನವಿ ಮಾಡಿಕೊಂಡರು.ಇದನ್ನೂ ಓದಿ:ಹನಿಟ್ರ್ಯಾಪ್ ಪ್ರಕರಣ; FIR ಆಗದೇ ತನಿಖೆಗೆ ಕೊಡಲು ಆಗಲ್ಲ: ಪರಮೇಶ್ವರ್

  • ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ

    ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ

    – 370 ಮೆ.ವ್ಯಾ ಸ್ಥಾಪಿತ ಸಾಮರ್ಥ್ಯದ ಗ್ಯಾಸ್, ಸ್ಟೀಮ್‌ನಿಂದ ಉತ್ಪಾದನೆ

    ಬೆಂಗಳೂರು: ವಿದ್ಯುತ್ ಸ್ಥಾವರ ಉದ್ಘಾಟನೆ ಮೂಲಕ ಭವಿಷ್ಯದ ಬೇಡಿಕೆಗೆ ಅಗತ್ಯ ವಿದ್ಯುತ್ ಉತ್ಪಾದನೆಯತ್ತ ಮಹತ್ವದ ಹೆಜ್ಜೆ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

    ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸ್ಥಾಪಿಸಿರುವ ರಾಜ್ಯದ ಮೊಟ್ಟ ಮೊದಲ 370 ಮೆಗಾವ್ಯಾಟ್ ಸಾಮರ್ಥ್ಯದ ಅನಿಲ ಆಧಾರಿತ ಯಲಹಂತ ಸಂಯುಕ್ತ ವಿದ್ಯುತ್ ಸ್ಥಾವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ (K J George) ಮಂಗಳವಾರ ಲೋಕಾರ್ಪಣೆ ಮಾಡಿದರು.ಇದನ್ನೂ ಓದಿ:

    ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಈ ಸ್ಥಾವರ ಉದ್ಘಾಟನೆ ಮೂಲಕ ಭವಿಷ್ಯದ ಬೇಡಿಕೆಗೆ ಅಗತ್ಯ ವಿದ್ಯುತ್ ಉತ್ಪಾದನೆಯತ್ತ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. 2016ರಲ್ಲಿ ಈ ಸ್ಥಾವರ ಸ್ಥಾಪನೆಗೆ ಮುಖ್ಯಮಂತ್ರಿಯಾಗಿ ನಾನೇ ಅಡಿಗಲ್ಲು ಹಾಕಿದ್ದೆ. ಆಗ ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದರು. ಕೆ.ಜೆ.ಜಾರ್ಜ್ ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದರು. ಇದೀಗ ಎಂಟು ವರ್ಷಗಳ ಬಳಿಕ ಮುಖ್ಯಮಂತ್ರಿಯಾಗಿ ಸ್ಥಾವರ ಲೋಕಾರ್ಪಣೆ ಮಾಡಿದ್ದೇನೆ ಎಂದು ಹೇಳಿದರು.

    ವಿದ್ಯುತ್‌ನಲ್ಲಿ ಸ್ವಾವಲಂಬನೆ ಸಾಧ್ಯವಾಗದಿದ್ದರೆ ಆರ್ಥಿಕ ಪ್ರಗತಿ ಸಾಧ್ಯವಿಲ್ಲ. ವಾಣಿಜ್ಯ, ಕೃಷಿ, ಗೃಹ ಬಳಕೆಗೆ ವಿದ್ಯುತ್ ಅನಿವಾರ್ಯವಾಗಿದೆ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸದಿದ್ದಲ್ಲಿ ಜಿಡಿಪಿ ಬೆಳವಣಿಗೆಯೂ ಆಗುವುದಿಲ್ಲ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಗುಣಮಟ್ಟದ ವಿದ್ಯುತ್ ಪೂರೈಕೆ ಜೊತೆಗೆ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡುತ್ತದೆ ಎಂದರು.

    ರಾಜ್ಯದಲ್ಲಿ ಬೇಸಿಗೆಯಲ್ಲಿ 16 ರಿಂದ 17 ಸಾವಿರ ಮೆಗಾವ್ಯಾಟ್ ಮತ್ತು ಮಳೆಗಾಲದಲ್ಲಿ 15 ರಿಂದ 16 ಸಾವಿರ ಮೆಗಾವ್ಯಾಟ್ ಯೂನಿಟ್ ವಿದ್ಯುತ್ ಬೇಡಿಕೆ ಇದೆ. ಕಳೆದ ವರ್ಷ ತೀವ್ರ ಬರಗಾಲವಿದ್ದರೂ ಸಮರ್ಪಕ ವಿದ್ಯುತ್ ಪೂರೈಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಆದರೂ ಭವಿಷ್ಯದ ಬೇಡಿಕೆಯನ್ನು ಮುಂದಿಟ್ಟುಕೊಂಡು 2030ರ ವೇಳೆಗೆ ಈಗಿರುವ 34,639 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯವನ್ನು 60 ಸಾವಿರ ಮೆಗಾವ್ಯಾಟ್‌ಗೆ ಹೆಚ್ಚಿಸಲು ಬಜೆಟ್‌ನಲ್ಲಿ ಘೋಷಿಸಿದ್ದು, ಅದಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದರು.

    ಛತ್ತೀಸ್‌ಗಡದ ಗೋದ್ನಾದಲ್ಲಿ 1600 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಸ್ಥಾವರ, ಶರಾವತಿಯಲ್ಲಿ 2,000 ಮೆಗಾವ್ಯಾಟ್, ವಾರಾಹಿಯಲ್ಲಿ 1500 ಮೆಗಾವ್ಯಾಟ್ ಪಂಪ್ಡ್ ಸ್ಟೋರೇಜ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದರ ಜೊತೆಗೆ ಸೌರ ಮತ್ತು ಪವನ ವಿದ್ಯುತ್ ಉತ್ಪಾದನೆಗೂ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.ಇದನ್ನೂ ಓದಿ:

  • KPTCL ನೌಕರರಿಗೆ ಶೇ. 20ರಷ್ಟು ವೇತನ ಪರಿಷ್ಕರಣೆ

    KPTCL ನೌಕರರಿಗೆ ಶೇ. 20ರಷ್ಟು ವೇತನ ಪರಿಷ್ಕರಣೆ

    ಬೆಂಗಳೂರು: ಕೆಪಿಟಿಸಿಎಲ್ (KPTCL) ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ. 20ರಷ್ಟು ವೇತನ (Salary) ಪರಿಷ್ಕರಣೆಗೆ ಒಪ್ಪಿದ್ದು, ಇಂದು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Basavaraj Bommai) ತಿಳಿಸಿದರು.

    ಇದೇ ವೇಳೆ ಸಾರಿಗೆ ನೌಕರರಿಗೆ ಶೇ. 15ರಷ್ಟು ವೇತನ ಪರಿಷ್ಕರಣೆ ಬಗ್ಗೆಯೂ ಮಾತನಾಡಿದರು. ಸಾರಿಗೆ ಇಲಾಖೆ ನೌಕರರಿಗೆ ಶೇ. 15ರಷ್ಟು ವೇತನ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಈ ಎರಡೂ ಆಜ್ಞೆ ಇಂದು ಹೊರಡಿಸಲಾಗುವುದು ಎಂದರು. ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧ ಸೋಮಣ್ಣ ಚಾರ್ಜ್‌ಶೀಟ್‌- ಇತ್ಯರ್ಥ ಮಾಡ್ತೀವಿ ಎಂದ ಶಾ

    ಕಾಡ್ಗಿಚ್ಚು ನಿಯಂತ್ರಣಕ್ಕೆ ಕ್ರಮ: ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಆಗುತ್ತಿದೆ. ಸಾಧ್ಯತೆ ಇರುವೆಡೆಯಲ್ಲಿ ಪೂರ್ವಭಾವಿ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರಸ್ತುತ ಕಾಡ್ಗಿಚ್ಚನ್ನು ನಂದಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಚಿವ ಹಾಲಪ್ಪ ಆಚಾರ್ ಸೀರೆ ಹಂಚಿಕೆ – ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

  • ಮುಷ್ಕರಕ್ಕೂ ಮೊದಲೇ ಜಯ – KPTCL, ESCOM ನೌಕರರ ವೇತನ ಹೆಚ್ಚಳ

    ಮುಷ್ಕರಕ್ಕೂ ಮೊದಲೇ ಜಯ – KPTCL, ESCOM ನೌಕರರ ವೇತನ ಹೆಚ್ಚಳ

    ಬೆಂಗಳೂರು: ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಮಮಿತ (KPTCL) ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಹೆಚ್ಚಳ ಮಾಡಿ ಇಂಧನ ಸಚಿವ ಸುನೀಲ್ ಕುಮಾರ್ (Sunil Kumar) ಆದೇಶ ಪ್ರಕಟಿಸಿದ್ದಾರೆ.

    ವೇತನ  (Salary)  ಪರಿಷ್ಕರಣೆಗೆ ಪಟ್ಟು ಹಿಡಿದು, ಗುರುವಾರದಿಂದ ಎಸ್ಕಾಂ ಸಿಬ್ಬಂದಿ ಅನಿರ್ದಿಷ್ಟ ಅವಧಿಗೆ ಹೋರಾಟಕ್ಕೆ ಸಿದ್ಧರಾಗಿದ್ದ ಬೆನ್ನಲ್ಲೇ ಕೆಪಿಟಿಸಿಎಲ್ ಎಂಡಿಗೆ ಸಚಿವರು ಈ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗೆ 2022ರಿಂದ ಪೂರ್ವಾನ್ವಯವಾಗುವಂತೆ ಶೇ.20ರಷ್ಟು ವೇತನ ಹೆಚ್ಚಳ ಮಾಡಲು ಆದೇಶಿಸಿದ್ದಾರೆ. ಇದೀಗ ಸಚಿವರ ಭರವಸೆಯಿಂದ ಎಸ್ಕಾಂ ಸಿಬ್ಬಂದಿ ಹೋರಾಟಕ್ಕೂ ಮುನ್ನವೇ ಜಯ ಸಿಕ್ಕಿದೆ.

    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರು ಗುರುವಾರ ಇಡೀ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ಸ್ಥಗಿತ ಮಾಡಿ ಮುಷ್ಕರ ನಡೆಸಲು ನಿರ್ಧರಿಸಿದ್ದರು. ಲೈನ್‍ಮ್ಯಾನ್‍ಗಳಿಂದ ಹಿಡಿದು ಎಂಜಿನಿಯರ್‍ಗಳವರೆಗೆ ಸುಮಾರು 60 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದರು. ಶೇ. 40% ವೇತನ ಹೆಚ್ಚಳ ಆಗಬೇಕು. 2022ರ ಏಪ್ರಿಲ್ 1 ರಿಂದ ಬಾಕಿ ವೇತನ ಬಿಡುಗಡೆ ಮಾಡಬೇಕು. ತಕ್ಷಣವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿದ್ಯುತ್ ಕಂಪನಿಗಳ ಖಾಸಗೀಕರಣ ಉದ್ದೇಶದ ಪ್ರಸ್ತಾವಿತ ಮಸೂದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: 10 ಕ್ಷೇತ್ರಗಳಿಂದ ನನಗೆ ಆಹ್ವಾನ, ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ: ಡಿ.ಕೆ.ಸುರೇಶ್

    ಒಂದು ದಿನ ಕೆಪಿಟಿಸಿಎಲ್ ನೌಕರರು ಕೆಲಸ ನಿಲ್ಲಿಸಿದರೆ 1 ಸಾವಿರ ಕೋಟಿ ರೂ. ನಷ್ಟ ಸಂಭವಿಸುವ ಸಾಧ್ಯತೆಯಿದೆ. ಒಂದು ದಿನ ವಿದ್ಯುತ್ ಉತ್ಪಾದನೆ ನಿಂತರೆ ಒಂದು ವಾರ ರಾಜ್ಯಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತದೆ. ಈ ಅವ್ಯವಸ್ಥೆ ಸರಿಪಡಿಸಲು 10 ರಿಂದ 15 ದಿನಗಳು ಬೇಕಾಗುತ್ತದೆ. ಇದನ್ನೂ ಓದಿ: ಆಣೆ-ಪ್ರಮಾಣದ ಪಾಲಿಟಿಕ್ಸ್ ; ಕರ್ಪೂರ ಹಚ್ಚಿ ಪ್ರಮಾಣ ಮಾಡಿದ ಮಾಗಡಿ ಶಾಸಕರ ಪತ್ನಿ

  • ಗುರುವಾರ ರಾಜ್ಯಾದ್ಯಂತ 60 ಸಾವಿರ KPTCL ನೌಕರರಿಂದ ಮುಷ್ಕರ

    ಗುರುವಾರ ರಾಜ್ಯಾದ್ಯಂತ 60 ಸಾವಿರ KPTCL ನೌಕರರಿಂದ ಮುಷ್ಕರ

    ಬೆಂಗಳೂರು: ಗುರುವಾರ ಇಡೀ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ಸ್ಥಗಿತ ಮಾಡಿ ಮುಷ್ಕರ (Strike) ನಡೆಸಲು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (KPTCL) ನೌಕರರು ನಿರ್ಧರಿಸಿದ್ದಾರೆ.

    ವೇತನ (Salary) ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.  ನೌಕರರು ಕೆಲಸ ನಿಲ್ಲಿಸಿದರೆ ರಾಜ್ಯದ ಎಲ್ಲಾ ಕಾರ್ಖಾನೆಗಳು ಬಂದ್ ಆಗುವ ಸಾಧ್ಯತೆ ಇದೆ.

    ಲೈನ್‌ಮ್ಯಾನ್‌ಗಳಿಂದ ಹಿಡಿದು ಎಂಜಿನಿಯರ್‌ಗಳವರೆಗೆ ಸುಮಾರು 60 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ತಾಂತ್ರಿಕ ದೋಷಗಳು, ಗ್ರಾಹಕರ ಕುಂದುಕೊರತೆಗಳನ್ನು ಪರಿಹರಿಸುವುದು ಸೇರಿದಂತೆ ಯಾವುದೇ ಆಡಳಿತಾತ್ಮಕ ಕಾರ್ಯಗಳನ್ನು ನೌಕರರು ನಿರ್ವಹಿಸಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುತ್‌ ಪೂರೈಕೆಯಲ್ಲಿಅಡಚಣೆ ಎದುರಾಗುವ ಸಾಧ್ಯತೆಗಳು ಹೆಚ್ಚಿವೆ.

    ಬೇಡಿಕೆಗಳೇನು?
    ಶೇ. 40% ವೇತನ ಹೆಚ್ಚಳ ಆಗಬೇಕು.  2022ರ ಏಪ್ರಿಲ್‌ 1 ರಿಂದ ಬಾಕಿ ವೇತನ ಬಿಡುಗಡೆ ಮಾಡಬೇಕು. ತಕ್ಷಣವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿದ್ಯುತ್‌ ಕಂಪನಿಗಳ ಖಾಸಗೀಕರಣ ಉದ್ದೇಶದ ಪ್ರಸ್ತಾವಿತ ಮಸೂದೆಯನ್ನು ಹಿಂಪಡೆಯಬೇಕು. ಇದನ್ನೂ ಓದಿ: ವಜ್ರದ ವ್ಯಾಪಾರಿ ಪುತ್ರಿಯೊಂದಿಗೆ ಮೋದಿ ತವರಿನಲ್ಲಿ ಅದಾನಿ ಪುತ್ರನ ನಿಶ್ಚಿತಾರ್ಥ

    ಒಂದು ದಿನ ಕೆಪಿಟಿಸಿಎಲ್ ನೌಕರರು ಕೆಲಸ ನಿಲ್ಲಿಸಿದರೆ 1 ಸಾವಿರ ಕೋಟಿ ರೂ. ನಷ್ಟ ಸಂಭವಿಸುವ ಸಾಧ್ಯತೆಯಿದೆ. ಒಂದು ದಿನ ವಿದ್ಯುತ್ ಉತ್ಪಾದನೆ ನಿಂತರೆ ಒಂದು ವಾರ ರಾಜ್ಯಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತದೆ. ಈ ಅವ್ಯವಸ್ಥೆ ಸರಿಪಡಿಸಲು 10 ರಿಂದ 15 ದಿನಗಳು ಬೇಕಾಗುತ್ತದೆ.

  • ಹೇಗೆ ಬಲಿ ಹಾಕಬೇಕೆಂದು ಗೊತ್ತಿದೆ – ಟ್ರಾನ್ಸ್‌ಫಾರ್ಮರ್ ಬದಲಿಸದ ಅಧಿಕಾರಿಗೆ ಹೆಚ್.ಡಿ.ರೇವಣ್ಣ ಕ್ಲಾಸ್

    ಹೇಗೆ ಬಲಿ ಹಾಕಬೇಕೆಂದು ಗೊತ್ತಿದೆ – ಟ್ರಾನ್ಸ್‌ಫಾರ್ಮರ್ ಬದಲಿಸದ ಅಧಿಕಾರಿಗೆ ಹೆಚ್.ಡಿ.ರೇವಣ್ಣ ಕ್ಲಾಸ್

    ಹಾಸನ: ಇನ್ನೂ ಎರಡು ತಿಂಗಳಲ್ಲಿ ನಿಮ್ಮ ಅಧಿಕಾರಿ ಸಿಗದೇ ಎಲ್ಲಿಗೂ ಹೋಗಲ್ಲ. ಹೇಗೆ ಬಲಿ ಹಾಕಬೇಕೆಂದು ಗೊತ್ತಿದೆ ಎಂದು ಕೆಟ್ಟಿದ್ದ ಟ್ರಾನ್ಸ್‌ಫಾರ್ಮರ್ (Transformer) ಬದಲಿಸಲು ಕ್ರಮಕೈಗೊಳ್ಳದ ಕೆಪಿಟಿಸಿಎಲ್ (KPTCL) ಸಹಾಯಕ ಅಧಿಕಾರಿಯ ವಿರುದ್ಧ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಹರಿಹಾಯ್ದಿದ್ದಾರೆ.

    ಹಾಸನದ (Hassan) ಮೆಳಗೋಡು (Melagodu) ಗ್ರಾಮದ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಕೆಟ್ಟಿದ್ದ  ಟ್ರಾನ್ಸ್‌ಫಾರ್ಮರ್ ಬದಲಾಯಿಸಿಲ್ಲ ಎಂದು ಅಧಿಕಾರಿ ಅರ್ಜುನ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನಾನು ಹತ್ತು ರೂ. ಮುಟ್ಟದೆ ಕೆಲಸ ಕೊಟ್ಟೆ. ಈಗ ಜನರ ಸೇವೆ ಮಾಡಿ ಎಂದರೆ ನಾಟಕ ಮಾಡುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಪೊಲೀಸರ ನಡುವೆ ಗುಂಡಿನ ಚಕಮಕಿ- ಆರೋಪಿ ಅಂದರ್

    ಗ್ರಾಮದ ಜನರು ಕುಡಿಯುವ ನೀರು (Drinking water), ಚರಂಡಿ ವ್ಯವಸ್ಥೆ ಹಾಗೂ ವಿದ್ಯುತ್ ಬಿಟ್ಟು ಮತ್ತೇನು ಕೇಳುತ್ತಾರೆ? ಇನ್ನೂ ಎರಡು ತಿಂಗಳಲ್ಲಿ ನಮ್ಮ ಸರ್ಕಾರ ಬರಲಿದೆ. ನಿಮ್ಮ ಅಧಿಕಾರಿ ಎಲ್ಲೂ ಹೋಗಲ್ಲ. ಬಲಿ ಹಾಕ್ತೀನಿ ಎಂದು ಅರ್ಜುನ್ ಅವರ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್‌ಕೌಂಟರ್‌ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು