Tag: ಕೆಪಿಸಿಸಿ ಮಹಿಳಾ ಘಟಕ

  • ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

    ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

    ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಅತಿಹೆಚ್ಚು ಮಹಿಳೆಯರಿಗೆ ಅವಕಾಶ ಕೊಡಬೇಕು ಎಂದು ಮಾಜಿ ಸಚಿವೆ ಉಮಾಶ್ರೀ (Umashree) ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರಲ್ಲಿ ಮನವಿ ಮಾಡಿದ್ದಾರೆ.

    ಕಾಂಗ್ರೆಸ್ ಮಹಿಳಾ ಘಟಕದಿಂದ (Karnataka Pradesh Mahila Congress) ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ `ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರನ್‌ವೇ ಸಿದ್ದವಾಗಿದೆ, ಕೌಶಲ್ಯಗಳನ್ನು ಕಲಿತು ಟೇಕಾಫ್‌ ಆಗಿ – ಯುವ ಜನತೆಗೆ ಮೋದಿ ಕರೆ

    ಬೆಂಗಳೂರು ಅರಮನೆ ಮೈದಾನದಲ್ಲಿ (Bengaluru Palace Ground) ಜನವರಿ 16ರಂದು `ನಾ ನಾಯಕಿ’ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲದೇ ಕಾಂಗ್ರೆಸ್‌ನ ಮಾಜಿ ಮಹಿಳಾ ಶಾಸಕರು, ಹಾಲಿ ನಾಯಕಿರೂ ಸೇರಿದಂತೆ ಎಲ್ಲರೂ ಬರಲಿದ್ದಾರೆ. ಇದೇ ವೇಳೆ ಮಹಿಳಾ ಘಟಕದ ಹಲವು ಬೇಡಿಕೆಗಳನ್ನ ಮುಂದಿಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡಾಲಿಗೂ ಬೇಗ ಮದುವೆ ಆಗೋಕೆ ಹೇಳಿದ್ದೇನೆ: ವಸಿಷ್ಠ ಸಿಂಹ

    ಈ ಬಾರಿ ವಿಧಾನಸಭೆ ಚುನಾವಣೆಗೆ 109 ಮಹಿಳೆಯರು ಟಿಕೆಟ್ ಆಕಾಂಕ್ಷಿಗಳಾಗಿ ಅರ್ಜಿ ಹಾಕಿದ್ದಾರೆ. ಈ ಬಾರಿ ಕಾಂಗ್ರೆಸ್ ನಿಂದ ಹೆಚ್ಚು ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಬೇಕು. ಈ ಬಗ್ಗೆ `ನಾ ನಾಯಕಿ’ ಪ್ರಿಯಾಂಕಾ ಗಾಂಧಿ ಅವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

    ಕಾಂಗ್ರೆಸ್ ಮಹಿಳಾ ಘಟಕದ (Karnataka Pradesh Mahila Congress) ಅಧ್ಯಕ್ಷೆ ಪುಷ್ಪಾ ಅಮರನಾಥ್ (Pushpa Amarnath) ಮಾತನಾಡಿ, ಮಹಿಳೆಯರಿಗಾಗಿ ವಿಶೇಷ ಹಾಗೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಈಗಾಗಲೇ ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಲ್ಲಾಜಮ್ಮ ಸೇರಿದಂತೆ ಇತರ ಮಹಿಳಾ ನಾಯಕಿಯರು ಹಾಜರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • KPCC ಯಲ್ಲಿ ಭಿನ್ನಮತ ಸ್ಫೋಟ – ಪುಷ್ಪಾ ಅಮರನಾಥ್ ವಜಾಕ್ಕೆ ಆಗ್ರಹ

    KPCC ಯಲ್ಲಿ ಭಿನ್ನಮತ ಸ್ಫೋಟ – ಪುಷ್ಪಾ ಅಮರನಾಥ್ ವಜಾಕ್ಕೆ ಆಗ್ರಹ

    ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ (Karnataka Mahila Congress) ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅಧ್ಯಕ್ಷರ ಸ್ಥಾನದಿಂದ ಡಾ.ಪುಷ್ಪಾ ಅಮರನಾಥ್ (Dr Pushpa Amarnath) ಅವರನ್ನು ಕೆಳಗಿಳಿಸುವಂತೆ ಮಹಿಳಾ ಕಾರ್ಯಕರ್ತರೇ ಆಗ್ರಹಿಸಿದ್ದಾರೆ.

    ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರ ನಿವಾಸಕ್ಕೆ ಪುಷ್ಪಾ ಅಮರನಾಥ್ ವಿರುದ್ಧ ಪೋಸ್ಟರ್ ಹಿಡಿದು ಬಂದ ಮಹಿಳಾ ಕಾರ್ಯಕರ್ತರು ಅವರನ್ನು ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರಾಮಾಣಿಕರಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

    ಪುಷ್ಪಾ ಅಮರನಾಥ್ ಕೆಲ ದಿನಗಳ ಹಿಂದೆ ಏಕಾಏಕಿ ಜಿಲ್ಲಾ ಘಟಕಗಳ ಅಧ್ಯಕ್ಷರನ್ನ ಬದಲಾಯಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ (DK Shivakumar) ಅವರಿಗೂ ಈ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಅವರನ್ನು ವಜಾಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡೆಂಗ್ಯೂ ರೋಗಿಗೆ ಆಸ್ಪತ್ರೆಯಲ್ಲಿ ನೀಡಿದ್ದು ಮೂಸಂಬಿ ಜ್ಯೂಸ್‍ ಅಲ್ಲ, ಕಳಪೆ ಮಟ್ಟದ ಪ್ಲೇಟ್‌ಲೆಟ್‌ಗಳು: ಜಿಲ್ಲಾ ಮ್ಯಾಜಿಸ್ಟ್ರೇಟ್

    ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಇವತ್ತೇ ಈಗಲೇ ಕೆಪಿಸಿಸಿ ಅಧ್ಯಕ್ಷರ (KPCC President) ಬಳಿ ಮಾತನಾಡ್ತೇನೆ. ಎಲ್ಲ ಮಹಿಳೆಯರಿಗೂ ನಮಸ್ಕಾರ ಅಂದು ನಡೆದರು. ಈ ವೇಳೆ ಸಿದ್ದರಾಮಯ್ಯರನ್ನ ಮುತ್ತಿಕೊಂಡ 50ಕ್ಕೂ ಹೆಚ್ಚು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಕೆಲ ಕಾಲ ಒತ್ತಾಯಿಸಿದರು. ಇದನ್ನೂ ಓದಿ: ನಯನತಾರ ಬಾಡಿಗೆ ತಾಯಿ ವಿವಾದ ಸುಖಾಂತ್ಯ: ಸರಕಾರ ಸಲ್ಲಿಸಿದ ವರದಿಯಲ್ಲೇನಿದೆ?

    20 ದಿನಗಳ ಹಿಂದೆಯಷ್ಟೇ 11 ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ ಆಗಿತ್ತು. ಕಾಂಗ್ರೆಸ್ ಪದಾಧಿಕಾರಿಗಳು ಭಾರತ್ ಜೋಡೋ ಯಾತ್ರೆ (Bharat Jodo Yatra) ನಡೆಯುತ್ತಿರುವುದರಿಂದ ಮಧ್ಯದಲ್ಲಿ ಬದಲಾವಣೆ ಬೇಡವೆಂದು ಮನವಿ ಮಾಡಿಕೊಂಡಿದ್ದರು. ಆಗ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಿಗೆ ಕರೆ ಮಾಡಿ ಭಾರತ್ ಜೋಡೋ ಮುಗಿಯುವವರೆಗೆ ಬದಲಾವಣೆ ತಡೆ ಹಿಡಿಯಲು ಸೂಚನೆ ನೀಡಿದ್ದರು.

    ಈಗ 11 ಜಿಲ್ಲಾಧ್ಯಕ್ಷರ ಬದಲಾವಣೆ ಮುಂದಾದ ಪುಷ್ಪ ಅಮರನಾಥ್ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಆಕ್ರೋಶಗೊಂಡಿದ್ದಾರೆ. ಪುಷ್ಪ ಅಮರನಾಥ್ ರಾಜ್ಯಾಧ್ಯಕ್ಷರಾಗಿ 3 ವರ್ಷ ಆಗಿದೆ. ಅವರ ಅವಧಿಯೂ ಮುಗಿದಿದೆ. ಫೆಬ್ರವರಿಗೇ ಅವರ ಅವಧಿ ಮುಗಿದು 3 ವರ್ಷ ಆಗಿದೆ. ಅವರನ್ನೂ ಕೆಳಗಿಳಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಂಗೋಲಿ ಸ್ಪರ್ಧೆ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ

    ರಂಗೋಲಿ ಸ್ಪರ್ಧೆ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ

    ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈಗಾಗಲೇ ಹಿಂಸಾತ್ಮಕ ಹಾಗೂ ನಾನಾ ರೀತಿಯಲ್ಲಿ ಪ್ರತಿಭಟನೆಗಳು ನಡೆದಿವೆ. ಅದರ ಮುಂದುವರಿದ ಭಾಗವಾಗಿ ಮೈಸೂರಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸುವ ಮೂಲಕ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.

    ಕೆಪಿಸಿಸಿ ಮಹಿಳಾ ಘಟಕದಿಂದ ಮೈಸೂರಿನ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಈ ರಂಗೋಲಿ ಸ್ಪರ್ಧೆ ನಡೆಯಿತು. 20ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ರಂಗೋಲಿ ಮೂಲಕ ಪ್ರತಿಭಟನಾ ಸಂದೇಶ ಸಾರಿದರು.

    ರಂಗೋಲಿ ಬಿಡಿಸಿ ಅದರ ಒಳಗಡೆ ನೋ ಸಿಎಎ, ನೋ ಎನ್‍ಆರ್‍ಸಿ ಎಂದು ಬರೆದಿದ್ದರು. ಈ ಮೂಲಕ ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಈ ಸ್ಪರ್ಧೆ ನಡೆಯಿತು.