Tag: ಕೆಮಿಕಲ್ ಫ್ಯಾಕ್ಟರಿ

  • ಕೆಮಿಕಲ್ ದುರ್ವಾಸನೆಗೆ ಉಸಿರುಗಟ್ಟಿ ಕಾರ್ಮಿಕರು ಅಸ್ವಸ್ಥ – ಲಾರಿಯಿಂದ ಕೆಳಗೆ ಬಿದ್ದು ಓರ್ವ ಸಾವು

    ಕೆಮಿಕಲ್ ದುರ್ವಾಸನೆಗೆ ಉಸಿರುಗಟ್ಟಿ ಕಾರ್ಮಿಕರು ಅಸ್ವಸ್ಥ – ಲಾರಿಯಿಂದ ಕೆಳಗೆ ಬಿದ್ದು ಓರ್ವ ಸಾವು

    ಚಿಕ್ಕಬಳ್ಳಾಪುರ: ಕೆಮಿಕಲ್ (Chemical) ದುರ್ವಾಸನೆಯಿಂದ ಉಸಿರುಗಟ್ಟಿ, ತಲೆ ಸುತ್ತು ಬಂದು ಲಾರಿಯಿಂದ ಕೆಳಗೆ ಬಿದ್ದು ಕಾರ್ಮಿಕನೋರ್ವ ದುರ್ಮರಣಕ್ಕೀಡಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

    ಬಿಹಾರ ಮೂಲದ ಮಹಮದ್ ರಜೀಕ್ (33) ಮೃತ ಕಾರ್ಮಿಕ. ಘಟನೆಯಲ್ಲಿ ವಿಕಾಸ್ ಹಾಗೂ ಸೋನು ಎಂಬ ಸಹ ಕಾರ್ಮಿಕರು (labours) ಉಸಿರಾಟದ ಸಮಸ್ಯೆಯಿಂದ (Breathing problem) ಅಸ್ವಸ್ಥಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ನೂರಾರು ಜನರ ಮುಂದೆ ಯುವತಿಯ ಬರ್ಬರ ಹತ್ಯೆ – ಆರೋಪಿಗೆ ಧರ್ಮದೇಟು

    ಮಹಮದ್ ರಜೀಕ್ ಮೂಲತಃ ಬಿಹಾರದವನು, ಕಳೆದ 5 ವರ್ಷಗಳ ಹಿಂದೆ ಹೆಂಡತಿಯೊಂದಿಗೆ ಕೂಲಿ ಕೆಲಸ ಹರಸಿ ಚಿಕ್ಕಬಳ್ಳಾಪುರಕ್ಕೆ ಬಂದಿದ್ದ. ನಗರ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಮಾಲೀಕ ಶ್ರೀನಿವಾಸಮೂರ್ತಿ ಎಂಬುವವರಿಗೆ ಸೇರಿದ ರಾಮ್ ಕೀ ಕೆಮಿಕಲ್ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ. ಈತನ ಜೊತೆ ಸೋನು ಹಾಗೂ ವಿಕಾಸ್ ಸಹ ಕೆಲಸ ಮಾಡ್ತಿದ್ರು. ಇದನ್ನೂ ಓದಿ: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕ

    ಎಂದಿನಂತೆ ಬುಧವಾರ ಸಂಜೆ ಫ್ಯಾಕ್ಟರಿಗೆ ಕೆಮಿಕಲ್ ವೇಸ್ಟ್ ತುಂಬಿಕೊಂಡು ಹೋಗಲು ಟ್ಯಾಂಕರ್ ಲಾರಿ ಬಂದಿದೆ. ಈ ವೇಳೆ ಟ್ಯಾಂಕರ್‌ನ ಮೇಲ್ಭಾಗದ ಕ್ಯಾಪ್ ಒಪನ್ ಆಗಿದೆ. ಇದರಿಂದ ಕೆಮಿಕಲ್‌ ದುರ್ವಾಸನೆ ಹೊರಸೂಸಿದ್ದು, ಏಕಾಏಕಿ ಮೂವರಿಗೂ ಉಸಿರುಗಟ್ಟಿದಂತಾಗಿದೆ. ತಲೆ ಸುತ್ತು ಬಂದು ಲಾರಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮಹಮದ್ ರಜೀಕ್ ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ರೆ ವಿಕಾಸ್ ಹಾಗೂ ಸೋನು ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ನಂತರ ಲಾರಿ ಚಾಲಕ ಲಾರಿಯೊಂದಿಗೆ ಎಸ್ಕೇಪ್ ಆಗಿದ್ದಾನೆ. ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯೆ ಶವಾಗರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇನ್ನೂ ಮೃತದೇಹವನ್ನ ಮೃತನ ಸ್ವಗ್ರಾಮ ಬಿಹಾರಕ್ಕೆ ಕಳುಹಿಸಿಕೊಡಲು ತಯಾರಿ ಮಾಡಲಾಗಿದೆ. ಕೆಮಿಕಲ್‌ ಕಾರ್ಖಾನೆ ಮಾಲೀಕ ಶ್ರೀನಿವಾಸಮೂರ್ತಿ ಮೃತರ ಜೊತೆಗಾರರ ಜೊತೆ ಮಧ್ಯಸ್ಥಿಕೆ ಮಾಡಿಸಿ ಪ್ರಕರಣ ಮುಚ್ಚಿ ಹಾಕಿವ ಹುನ್ನಾರ ಸಹ ನಡೆಸಿದ್ರು ಎಂಬ ಆರೋಪ ಕೇಳಿಬಂದಿದೆ. ಆದ್ರೆ ಕಾರ್ಮಿಕ ಇಲಾಖಾಧಿಕಾರಿಗಳಿಗೆ ʻಪಬ್ಲಿಕ್‌ ಟಿವಿʼ ಮಾಹಿತಿ ಮುಟ್ಟಿಸಿದ್ದು ಸ್ಥಳಕ್ಕೆ ಬಂದ ಅಧಿಕಾರಿಗಳು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

    ಮಾಲೀಕನ ನಿರ್ಲಕ್ಷ್ಯ ಆರೋಪದಡಿ ಕಾರ್ಮಿಕನ ಸಾವು ಸಂಭವಿಸಿದ್ದು, ನಂದಿಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನೂ ಕಾರ್ಮಿಕ ಇಲಾಖೆ ಸಹ ಕಾರ್ಮಿಕರಿಗೆ ಬೇಕಾದ ಯಾವುದೇ ಸುರಕ್ಷತಾ ಕ್ರಮಗಳನ್ನ ಕೈಗೊಂಡಿಲ್ಲ ಅಂತ ಮಾಲೀಕನ ಮೇಲೆ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ತ್ರಿಬಲ್‌ ಮರ್ಡರ್‌ ಕೇಸ್‌ – ಎರಡನೇ ಪತ್ನಿ, ಮಲ ಮಗಳ ಮೇಲೆ ಅಕ್ರಮ ಸಂಬಂಧ ಅನುಮಾನ

  • ಸೂರತ್ ಕೆಮಿಕಲ್ ಫ್ಯಾಕ್ಟರಿ ಅಗ್ನಿ ಅವಘಡ – ರಾಸಾಯನಿಕ ಸ್ಥಾವರದ ಆವರಣದಲ್ಲಿ 7 ಸುಟ್ಟ ಶವಗಳು ಪತ್ತೆ

    ಸೂರತ್ ಕೆಮಿಕಲ್ ಫ್ಯಾಕ್ಟರಿ ಅಗ್ನಿ ಅವಘಡ – ರಾಸಾಯನಿಕ ಸ್ಥಾವರದ ಆವರಣದಲ್ಲಿ 7 ಸುಟ್ಟ ಶವಗಳು ಪತ್ತೆ

    ಗಾಂಧಿನಗರ: ಬುಧವಾರ ಸೂರತ್‌ನ (Surat) ಕೆಮಿಕಲ್ ಫ್ಯಾಕ್ಟರಿಯಲ್ಲಿ (Chemical Factory) ಸಂಭವಿಸಿದ ಅಗ್ನಿ ಅವಘಡದಲ್ಲಿ 24 ಕಾರ್ಮಿಕರು ಗಾಯಗೊಂಡಿದ್ದು, ಒಂದು ದಿನದ ನಂತರ ರಾಸಾಯನಿಕ ಸ್ಥಾವರದ ಆವರಣದಲ್ಲಿ ಕನಿಷ್ಠ ಏಳು ಸುಟ್ಟ ಶವಗಳು ಪತ್ತೆಯಾಗಿವೆ ಎಂದು ಸೂರತ್ ಪೊಲೀಸರು ತಿಳಿಸಿದ್ದಾರೆ.

    ಸಚಿನ್ ಜಿಐಡಿಸಿ ಕೈಗಾರಿಕಾ ಪ್ರದೇಶದಲ್ಲಿ ನೆಲೆಗೊಂಡಿರುವ ಈಥರ್ ಇಂಡಸ್ಟ್ರೀಸ್‌ನಲ್ಲಿ ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಸೈಟ್‌ನಲ್ಲಿ ಸುಮಾರು ಏಳು ವ್ಯಕ್ತಿಗಳ ಅಸ್ಥಿಪಂಜರಗಳು ಮತ್ತು ಇತರ ಅವಶೇಷಗಳು ಕಂಡುಬಂದಿವೆ ಎಂದು ಅಧಿಕಾರಿಯೊಬ್ಬರು ಹೇಳಿದರು. ಇದನ್ನೂ ಓದಿ: ಸೂರತ್‍ನ ಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 24 ಕಾರ್ಮಿಕರಿಗೆ ಗಾಯ

    ಈ ಹಿಂದೆ ಏಳು ಮಂದಿ ಸ್ಥಳದಿಂದ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದರು. ಪೊಲೀಸರು ಮತ್ತು ಇತರ ರಕ್ಷಣಾ ಕಾರ್ಯಕರ್ತರು ಬುಧವಾರ ಒಳಗೆ ಸಿಲುಕಿದ್ದ 24 ವ್ಯಕ್ತಿಗಳನ್ನು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಘಟನೆಯಲ್ಲಿ ಸುಟ್ಟ ಗಾಯಗಳಾಗಿರುವ ಕಾರ್ಮಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಅಂತರ್ಜಾತಿ ಪ್ರೇಮ ವಿವಾಹವಾಗಿದ್ದಕ್ಕೆ ಯುವಕನ ಕಡೆಯವರ ಆಟೋಗೆ ಬೆಂಕಿ ಹಚ್ಚಿದ ಹುಡುಗಿ ಕಡೆಯವರು

    ಘಟನೆಗೆ ಏನು ಕಾರಣ ಎಂಬುದನ್ನು ಕಂಡುಹಿಡಿಯುವ ಸಲುವಾಗಿ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಏಕಾಏಕಿ ಸಂಭವಿಸಿದ ಸಮಯದಲ್ಲಿ, 100 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಳ ಮಾರಾಟ ಪ್ರಕರಣ- ತರಕಾರಿ ಮಾರುತ್ತಲೇ ಡೀಲ್ ಮಾಡುತ್ತಿದ್ದ ಮಹಾಲಕ್ಷ್ಮಿ

    ಸೂರತ್ ಮೂಲದ ಈಥರ್ ಇಂಡಸ್ಟ್ರೀಸ್ ಕೃಷಿ ರಾಸಾಯನಿಕ, ಔಷಧೀಯ ಮತ್ತು ತೈಲ ಮತ್ತು ಅನಿಲ ಉದ್ಯಮಗಳಿಗೆ ರಾಸಾಯನಿಕಗಳನ್ನು ಪೂರೈಸುತ್ತದೆ. ಪಶ್ಚಿಮ ಭಾರತದ ರಾಜ್ಯವಾದ ಗುಜರಾತ್‌ನಲ್ಲಿ ಈಥರ್ ಎರಡು ಕಾರ್ಖಾನೆಗಳನ್ನು ಹೊಂದಿದೆ. ಇದನ್ನೂ ಓದಿ: ಮದುವೆ ಒಪ್ಪಂದಕ್ಕೆ ಒಪ್ಪದ ಶಿಕ್ಷಕಿಯ ಅಪಹರಣ

  • ರಾಯಚೂರಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ದುರಂತ – ತಪ್ಪಿದ ಅನಾಹುತ

    ರಾಯಚೂರಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ದುರಂತ – ತಪ್ಪಿದ ಅನಾಹುತ

    ರಾಯಚೂರು: ತಾಲ್ಲೂಕಿನ ಚಿಕ್ಕಸುಗೂರು ಬಳಿ ಕೈಗಾರಿಕಾ ಪ್ರದೇಶದ (Industrial Area) ಕೆಮಿಕಲ್ ಫ್ಯಾಕ್ಟರಿಯಲ್ಲಿ (Chemical Factory) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

    ಬೆಂಕಿಯಿಂದ ದಟ್ಟಹೊಗೆ ಆವರಿಸುತ್ತಿದ್ದಂತೆಯೇ ಹೊರ ಓಡಿಬಂದ ಸಿಬ್ಬಂದಿ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ.

    ಹೈದರಾಬಾದ್‌ ರಸ್ತೆ ಬಳಿಯ ಜಯಂತ್ ಲೈಫ್ ಸೈನ್ಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ‌ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಕೂಡಲೇ ರಸ್ತೆಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಹೆಸರು ಕಳೆದುಕೊಳ್ಳಲು ಇಷ್ಟವಿಲ್ಲ- ರಾಮನಗರ ಮರುನಾಮಕರಣ ಪುನರುಚ್ಚರಿಸಿದ ಡಿಕೆಶಿ

    ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಇದನ್ನೂ ಓದಿ: ನಮ್ಮ ಪಕ್ಷದೊಳಗೆ ರಾಮ, ಹಿಂದೂಗಳನ್ನು ದ್ವೇಷಿಸುವ ನಾಯಕರಿದ್ದಾರೆ: ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ

  • ಪ್ರಧಾನಿ ತವರಲ್ಲೇ ಭೀಕರ ದುರಂತ – ಕೆಮಿಕಲ್ ಫ್ಯಾಕ್ಟರಿ ಸ್ಫೋಟಗೊಂಡು 6 ಮಂದಿ ಸಾವು

    ಪ್ರಧಾನಿ ತವರಲ್ಲೇ ಭೀಕರ ದುರಂತ – ಕೆಮಿಕಲ್ ಫ್ಯಾಕ್ಟರಿ ಸ್ಫೋಟಗೊಂಡು 6 ಮಂದಿ ಸಾವು

    ಗಾಂಧಿನಗರ: ಗುಜರಾತ್‌ನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡಿದ್ದು, 6 ಮಂದಿ ಕಾರ್ಮಿಕರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ.

    ಅಹಮದಾಬಾದ್‌ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ವೇಳೆ ದ್ರಾವಕ ಭಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ- ಯುವಕನಿಗೆ ಪೆಟ್ರೋಲ್ ಸುರಿದು ಬೆಂಕಿ

    POLICE

    ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದಾಗಿ ಅಲ್ಲೇ ಇದ್ದ 6 ಮಂದಿ ಮೃತಪಟ್ಟಿದ್ದಾರೆ. ನಂತರ ಬೆಂಕಿಯನ್ನು ನಿಯಂತ್ರಿಸಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದರ ಹೊರತಾಗಿ ಯಾರೂ ಗಾಯಗೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಂದ್ರು ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಸರ್ಕಾರ

  • ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ- 8 ಜನಕ್ಕೆ ಗಾಯ, ಓರ್ವ ಸಾವಿನ ಶಂಕೆ

    ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ- 8 ಜನಕ್ಕೆ ಗಾಯ, ಓರ್ವ ಸಾವಿನ ಶಂಕೆ

    ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಅತ್ತಿಬೆಲೆ ವಡ್ಡರ ಪಾಳ್ಯ ಸಮೀಪವಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 8 ಮಂದಿ ಗಾಯಗೊಂಡು ಓರ್ವ ಸಾವಿನ ಶಂಕೆ ವ್ಯಕ್ತವಾಗಿದೆ.

    ಅತ್ತಿಬೆಲೆ ವಡ್ಡರ ಪಾಳ್ಯ ಸಮೀಪ ಲೇಟ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ. ಬಾಯ್ಲರ್ ಸ್ಫೋಟದಿಂದ ಹೊಗೆ 3 ಕಿ.ಮೀ ವ್ಯಾಪಿಸಿದೆ. ಈಗಾಗಲೇ 8 ಮಂದಿಗೆ ಗಾಯ ಓರ್ವ ಸಾವಿನ ಶಂಕೆ ವ್ಯಕ್ತವಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿರುವ ಜನರಲ್ಲಿ ಆತಂಕ ಎದುರಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಸ್ಫೋಟ – ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ

    ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟದ ಪರಿಣಾಮ ಮೇಲ್ಭಾಗದ ಶಿಟ್‍ಗಳು ಹಾರಿ ಹೋಗಿದೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದೆ. ಈಗಾಗಲೇ ಸ್ಫೋಟದಿಂದ ಕೆಟ್ಟ ವಾಸನೆ ಬರಲಾರಂಭಿಸಿದೆ ಎಂದು ವರದಿಯಾಗಿದ್ದು, ಈ ಹಿಂದೆ ಕೂಡ ಸ್ಫೋಟ ಸಂಭವಿಸಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

  • ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ!

    ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ!

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

    ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ. ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇಡೀ ರಸ್ತೆಯಲ್ಲಾ ಎಲ್ಲಿ ನೋಡಿದರೂ ಬೆಂಕಿಮಯವಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿದೆ.

    ಫ್ಯಾಕ್ಟರಿ ಅಕ್ಕ ಪಕ್ಕ ನಿಲ್ಲಿಸಿದ್ದ ವಾಹನಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಬ್ಯಾಟರಾಯನಪುರ ಪೊಲೀಸರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿರುವುದರಿಂದ ಹರಸಾಹಸ ಪಡುವಂತಾಗಿದೆ. ಈಗಾಗಲೇ ಅಕ್ಕ ಪಕ್ಕದ ಮನೆಯವರನ್ನು ಸ್ಥಳಾಂತರಿಸಲಾಗುತ್ತಿದೆ. ಆದರೆ ಸಾವು, ನೋವಿನ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

  • ಬೆಂಗ್ಳೂರಲ್ಲಿ ಮತ್ತೊಂದು ಅಗ್ನಿ ದುರಂತ- ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ

    ಬೆಂಗ್ಳೂರಲ್ಲಿ ಮತ್ತೊಂದು ಅಗ್ನಿ ದುರಂತ- ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ

    ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಫ್ಲೋರ್ ಮಿಲ್ ರಸ್ತೆಯಲ್ಲಿ ಸೋಫಾ ಕೆಮಿಕಲ್ ತಯಾರು ಮಾಡುವ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ದುರಂತ ಘಟಿಸಿದೆ.

    ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಕೆಮಿಕಲ್ ತಯಾರಾಗುತ್ತಿದ್ದ ಸ್ಥಳವಾದ್ದರಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬೆಂಕಿ ಹೊತ್ತಿ ಉರಿದಿದೆ. ಕಟ್ಟದಲ್ಲಿದ್ದ ಕಾರ್ಮಿಕರನ್ನು ಸ್ಥಳೀಯರು ಸುರಕ್ಷಿತವಾಗಿ ಹೊರ ತಂದಿದ್ದಾರೆ.

    ಕಳೆದ ನಾಲ್ಕೈದು ವರ್ಷಗಳಿಂದ ಈ ಕಟ್ಟಡದಲ್ಲಿ ಸೋಫಾ ಮಾಲೀಷ್ ಮಾಡುವ ಕೆಮಿಕಲನ್ನು ತಯಾರಿಸಲಾಗುತ್ತಿದೆ. ಸೋಮವಾರದಂದು ಅಗ್ನಿ ಅವಘಡ ನಡೆದಾಗ ಸುಮಾರು 200ಕ್ಕೂ ಹೆಚ್ಚು ಕೆಮಿಕಲ್ ಟಿನ್ ಗಳು ಪತ್ತೆಯಾಗಿವೆ. ಸದ್ಯ ಕಟ್ಟಡ ಮಾಲೀಕ ವಾಜೀದ್ ಅಹ್ಮದ್ ತಲೆ ಮರೆಸಿಕೊಂಡಿದ್ದಾನೆ.

    ಬೆಂಕಿ ದುರಂತ ನಡೆದ ಕಟ್ಟಡದ ಪಕ್ಕದಲ್ಲೇ ಅನೇಕ ಮನೆಗಳಿದ್ದು ಬೆಂಕಿ ಆವರಿಸುವ ಆತಂಕ ಮನೆ ಮಾಡಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಲೀ ಹಾಗು ಇನ್ನಿತರೆ ತೊಂದರೆ ಕಂಡುಬಂದಿಲ್ಲ. ಕೆಮಿಕಲ್ ತಯಾರು ಮಾಡುವ ಘಟಕ ಸ್ಥಾಪನೆಗೆ ಅನುಮತಿಯನ್ನಾಗಲಿ, ಪರವಾನಿಗೆಯನ್ನಾಗಲಿ ಮಹಾನಗರಪಾಲಿಕೆ ನೀಡಿಲ್ಲ. ಮಾಲೀಕರು ಅವಘಡ ಸಂಭವಿಸಿದಾಗ ಎದುರಿಸಬೇಕಾಗಿರುವ ಯಾವುದೇ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಂಡಿಲ್ಲ.

    ಬೆಂಕಿ ದುರಂತ ನಡೆದ ಸ್ಥಳಕ್ಕೆ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಮತ್ತು ನೂರಾರು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಮೇಯರ್ ಸಂಪತ್ ರಾಜ್ ಹಾಗೂ ಅಗ್ನಿಶಾಮಕ ತಂಡಗಳ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕಟ್ಟಡ ಮತ್ತು ಕೆಮಿಕಲ್ ಫ್ಯಾಕ್ಟರಿ ಮಾಲೀಕನ ಬೇಜವಾಬ್ದಾರಿತನದ ವಿರುದ್ಧ ಡಿಜೆ.ಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಮಾಲೀಕ ಮತ್ತು ಸಂಬಂಧಪಟ್ಟ ಇಲಾಖೆಗಳ ಬೇಜವಾಬ್ದಾರಿತನದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.