Tag: ಕೆರಳ

  • ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿ – ಕೊಡಗಿನಲ್ಲಿ ಹೈ ಅಲರ್ಟ್

    ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿ – ಕೊಡಗಿನಲ್ಲಿ ಹೈ ಅಲರ್ಟ್

    ಮಡಿಕೇರಿ: ಕೇರಳದ ಗಡಿ ಜಿಲ್ಲೆ ವಯನಾಡಿನಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕರ್ನಾಟಕ ಗಡಿ ನುಸುಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

    ಕೇರಳದ ಗಡಿಯಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿಯಿಂದ ನಕ್ಸಲರು ತೊಂದರೆಗೆ ಸಿಲುಕಿದ್ದಾರೆ. ಇದರಿಂದ ಕರ್ನಾಟಕ ಗಡಿಯತ್ತ ನುಸುಳುವ ಶಂಕೆ ಇದೆ. ಮುಂಜಾಗೃತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಗಡಿಭಾಗದಲ್ಲಿ ನಿಯೋಜನೆ ಮಾಡಲಾಗಿದೆ. ಕೊಡಗಿನ ಕುಟ್ಟ, ಬಿರುನಾಣಿ, ಪರಕಟಗೇರಿ ಹಾಗೂ ತೆರಾಲು ಭಾಗಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಮುಂದಿನ ವಾರ KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್‌ ರೂಲ್ಸ್‌ ಏನು?

    ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡು ಬಂದರೆ ಕೂಡಲೇ ವಿಚಾರಣೆಗೆ ಒಳಪಡಿಸುವಂತೆ ಎಸ್‍ಪಿ ರಾಮರಾಜನ್ ಆದೇಶ ನೀಡಿದ್ದಾರೆ. ಅಲ್ಲದೇ ಗಡಿ ಭಾಗದಲ್ಲಿ ಸಂಚರಿಸುವ ವಾಹನಗಳ ಮೇಲೂ ಕಣ್ಣಿರಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ತೆರಾಲು ಸೇರಿದಂತೆ ಕೆಲವೆಡೆ ನಾಕಾಬಂದಿ ಹಾಕಲಾಗಿದೆ. ಈಗಾಗಲೇ ಕುಟ್ಟ ಭಾಗದಲ್ಲಿ ಎ.ಎನ್.ಎಫ್. ತಂಡ ಕೆಲಸ ನಿರ್ವಹಿಸುತ್ತಿದೆ. ಇದರೊಂದಿಗೆ ಪೊಲೀಸರು ಈಗ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    ಗಡಿಭಾಗಕ್ಕೆ ಎಸ್ಪಿ ರಾಮರಾಜನ್, ವೀರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಓದು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ಪುತ್ರ ನೇಣಿಗೆ ಶರಣು

  • ಪ್ರತಿನಿತ್ಯ ನೂರು ಸೈಬರ್ ದಾಳಿಗಳ ವಿರುದ್ಧ ಇಸ್ರೋ ಹೋರಾಟ: ಎಸ್.ಸೋಮನಾಥ್

    ಪ್ರತಿನಿತ್ಯ ನೂರು ಸೈಬರ್ ದಾಳಿಗಳ ವಿರುದ್ಧ ಇಸ್ರೋ ಹೋರಾಟ: ಎಸ್.ಸೋಮನಾಥ್

    ತಿರುವನಂತಪುರಂ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಪ್ರತಿನಿತ್ಯ ನೂರು ಸೈಬರ್ ದಾಳಿಗಳ (Cyber Attacks) ವಿರುದ್ಧ ಹೋರಾಡುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ (S.Somanath) ಹೇಳಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಅಂತಾರಾಷ್ಟ್ರೀಯ ಸೈಬರ್ ಸಮ್ಮೇಳನದ 16ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ ಈ ವಿಚಾರವನ್ನು ಅವರು ಬಹಿರಂಗ ಪಡಿಸಿದ್ದಾರೆ.

    ಅಲ್ಟ್ರಾ-ಆಧುನಿಕ ಸಾಫ್ಟ್‍ವೇರ್ ಬಳಸುವ ರಾಕೆಟ್ ತಂತ್ರಜ್ಞಾನದಲ್ಲಿ ಸೈಬರ್ ದಾಳಿಯ ಸಾಧ್ಯತೆ ಹೆಚ್ಚು. ಅಂತಹ ದಾಳಿಗಳನ್ನು ಎದುರಿಸಲು ಸಂಸ್ಥೆಯು ದೃಢವಾದ ಸೈಬರ್ ಭದ್ರತೆಯ ನೆಟ್‍ವರ್ಕ್‍ನೊಂದಿಗೆ ಸಜ್ಜುಗೊಂಡಿದೆ. ಇದರ ಸಲುವಾಗಿ ಸಾಫ್ಟ್‍ವೇರ್ ಮಾತ್ರವಲ್ಲದೇ ರಾಕೆಟ್‍ಗಳೊಳಗಿನ ಹಾರ್ಡ್‍ವೇರ್ ಚಿಪ್‍ಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ಸಂಶೋಧನೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹಮಾಸ್ ಉಗ್ರರಿಂದ ಮಗಳ ಬೆತ್ತಲೆ ಮೆರವಣಿಗೆ- ಸಾರ್ವಜನಿಕರಲ್ಲಿ ತಾಯಿ ಮನವಿ

    ಉಪಗ್ರಹವನ್ನು ನಿಯಂತ್ರಣ ಮಾಡುವ ವಿಧಾನವು ಒಂದೇ ಸಮಯದಲ್ಲಿ ಅನೇಕ ಉಪಗ್ರಹಗಳನ್ನು ನಿಯಂತ್ರಿಸುವ ಸಾಫ್ಟ್‍ವೇರ್ ವಿಧಾನವಾಗಿ ಬದಲಾಗಿದೆ. ಇದು ಈ ವಲಯದ ಮಹತ್ವದ ಬೆಳವಣಿಗೆಯನ್ನು ಸೂಚಿಸುತ್ತದೆ. ಇಂದು ಸಾಮಾನ್ಯ ಜನರ ದೈನಂದಿನ ಜೀವನಕ್ಕೆ ಸಹಾಯ ಮಾಡುವ ಉಪಗ್ರಹಗಳು ಸಹ ಪ್ರಸ್ತುತವಾಗಿವೆ. ಇವೆಲ್ಲವನ್ನೂ ವಿವಿಧ ರೀತಿಯ ಸಾಫ್ಟ್‍ವೇರ್‍ಗಳಿಂದ ನಿಯಂತ್ರಿಸಲಾಗುತ್ತದೆ. ಇವೆಲ್ಲವನ್ನೂ ರಕ್ಷಿಸಲು ಸೈಬರ್ ಸುರಕ್ಷತೆ ಬಹಳ ಮುಖ್ಯ ಎಂದು ಅವರು ತಿಳಿಸಿದ್ದಾರೆ.

    ಸುಧಾರಿತ ತಂತ್ರಜ್ಞಾನವು ಒಂದು ವರದಾನವಾಗಿದೆ. ಇದೇ ವೇಳೆ ಅದು ಬೆದರಿಕೆಗೂ ಕಾರಣವಾಗಿದೆ. ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನವನ್ನು ಬಳಸಿಕೊಂಡು ಸೈಬರ್ ಅಪರಾಧಿಗಳು ಒಡ್ಡುವ ಸವಾಲುಗಳನ್ನು ನಾವು ಅದೇ ತಂತ್ರಜ್ಞಾನದಿಂದ ಎದುರಿಸಬಹುದು. ಈ ನಿಟ್ಟಿನಲ್ಲಿ ಸಂಶೋಧನೆ ಆಗಬೇಕಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹಾವೇರಿ, ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ: ಬೊಮ್ಮಾಯಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾಲ ಮಾಡಿ ಲಾಟರಿ ಟಿಕೆಟ್ ಖರೀದಿಸಿದ ಪೌರಕಾರ್ಮಿಕ ಮಹಿಳೆಯರಿಗೆ 10 ಕೋಟಿ ರೂ. ಬಂಪರ್

    ಸಾಲ ಮಾಡಿ ಲಾಟರಿ ಟಿಕೆಟ್ ಖರೀದಿಸಿದ ಪೌರಕಾರ್ಮಿಕ ಮಹಿಳೆಯರಿಗೆ 10 ಕೋಟಿ ರೂ. ಬಂಪರ್

    ತಿರುವನಂತಪುರಂ: 250 ರೂ. ಸಾಲ ಪಡೆದು ಲಾಟರಿ ಟಿಕೆಟ್ ಖರೀದಿಸಿದ ಕೇರಳದ (Kerala) 11 ಪೌರಕಾರ್ಮಿಕ ಮಹಿಳೆಯರ ಅದೃಷ್ಟ ಖುಲಾಯಿಸಿದೆ. ಕೇರಳ ಲಾಟರಿ ಇಲಾಖೆ  (Kerala Lottery) ನಡೆಸುವ ಡ್ರಾನಲ್ಲಿ 10 ಕೋಟಿ ರೂ. ಬಹುಮಾನ ಈ ಮಹಿಳೆಯರ ಪಾಲಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳೆಯರು (Women), ನಾವೆಲ್ಲರೂ ಮೊದಲು ಹಣವನ್ನು ಒಟ್ಟುಗೂಡಿಸಿ ಲಾಟರಿ ಟಿಕೆಟ್‍ಗಳನ್ನು ಖರೀದಿಸಿದ್ದೆವು. ಇದೇ ಮೊದಲ ಬಾರಿಗೆ ನಾವು ಗೆದ್ದಿದ್ದೇವೆ. ಬಹುಮಾನ ಗೆಲ್ಲುತ್ತೇವೆ ಎಂದು ಕನಸಲ್ಲೂ ಊಹಿಸಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮನೆ ಬಾಗಿಲು ಮುರಿದು ಬಂದೂಕು ಕದ್ದ ಕಳ್ಳರು

    ನಮ್ಮ ಟಿಕೆಟ್‍ಗೆ ಬಹುಮಾನ ಬಂದಿರುವುದು ತಿಳಿದಾಗ ಖುಷಿಯಾಯಿತು. ನಮಗೆ ವೇತನ ಹೊರತುಪಡಿಸಿ ಯಾವುದೇ ಆದಾಯ ಮೂಲಗಳಿಲ್ಲ. ನಾವೆಲ್ಲರೂ ಜೀವನದಲ್ಲಿ ಕಷ್ಟಗಳನ್ನು ಎದುರಿಸುತ್ತಿದ್ದೇವೆ. ನಮ್ಮ ಸಮಸ್ಯೆಗಳನ್ನು ಪರಿಹರಿಸಲು ಈ ಹಣ ಸಹಕಾರವಾಗಲಿದೆ ಎಂದು ಮತ್ತೋರ್ವ ಮಹಿಳೆ ತಿಳಿಸಿದ್ದಾರೆ.

    ನಗರಸಭೆಯ ಹರಿತ ಕರ್ಮ ಸೇನೆ (Haritha Karma Sena) ಒಕ್ಕೂಟದ ಅಧ್ಯಕ್ಷೆ ಶೀಜಾ ಮಾತನಾಡಿ, ಈ ಬಾರಿ ಅತ್ಯಂತ ಅರ್ಹರಿಗೆ ಅದೃಷ್ಟ ಒಲಿದು ಬಂದಿದೆ. ಎಲ್ಲಾ ವಿಜೇತರು ಶ್ರಮಜೀವಿಗಳಾಗಿದ್ದಾರೆ. ಅವರೆಲ್ಲ ಹೆಚ್ಚಾಗಿ ಸಾಲದಲ್ಲಿದ್ದಾರೆ. ಅಲ್ಲದೇ ಮದುವೆಗೆ ಬಂದಿರುವ ಹೆಣ್ಣುಮಕ್ಕಳಿದ್ದಾರೆ. ಕೆಲವರು ಅವರ ಕುಟುಂಬಸ್ಥರ ಚಿಕಿತ್ಸಾ ವೆಚ್ಚಕ್ಕೆ ಹಣ ಹೊಂದಿಸಬೇಕಿದೆ. ಅವರ ಮನೆಗಳು ಭದ್ರವಾಗಿಲ್ಲ. ಅಂಥವರಿಗೆ ಈ ಲಾಟರಿ ಒಲಿದಿರುವುದು ಖುಷಿ ನೀಡಿದೆ ಎಂದಿದ್ದಾರೆ.

    ಲಾಟರಿ ವಿಜೇತ ಮಹಿಳೆಯರನ್ನು ಭೇಟಿ ಮಾಡಿ ಹಲವಾರು ಜನ ಅಭಿನಂದಿಸಿದ್ದಾರೆ. ಶ್ರಮಜೀವಿಗಳಿಗೆ ಒಲಿದ ಅದೃಷ್ಟಕ್ಕೆ ಖುಷಿಪಟ್ಟಿದ್ದಾರೆ. ಇದನ್ನೂ ಓದಿ: ಬಸವಸಾಗರ ಜಲಾಶಯ ಭರ್ತಿ – ಕೃಷ್ಣಾ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ರಿಲೀಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧರ್ಮಗುರು ಹೆಂಡತಿಯನ್ನು ಹೇಗೆ ಕೊಂದ? – ಗೂಗಲ್ ಸರ್ಚ್‍ನಿಂದ ಸಿಕ್ಕಿಬಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

    ಧರ್ಮಗುರು ಹೆಂಡತಿಯನ್ನು ಹೇಗೆ ಕೊಂದ? – ಗೂಗಲ್ ಸರ್ಚ್‍ನಿಂದ ಸಿಕ್ಕಿಬಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

    ತಿರುವನಂತನಪುರಂ: ಆ ಧರ್ಮ ಗುರು (Spiritual Guru) ತನ್ನ ಹೆಂಡತಿಯನ್ನು ಹೇಗೆ ಕೊಂದ? ಎಂದು ಗೂಗಲ್‍ನಲ್ಲಿ (Google) ಸರ್ಚ್ ಮಾಡಿ ಸಂಚು ರೂಪಿಸಿ ಪ್ರೇಯಸಿಯನ್ನು ಕೊಲೆಗೈದ‌ (Murder) ದುಷ್ಕರ್ಮಿಗೆ ಜೀವಾವಧಿ ಶಿಕ್ಷೆ ಹಾಗೂ 2.5 ಲಕ್ಷ ರೂ. ದಂಡ ವಿಧಿಸಿ ಕೊಲ್ಲಂನ (Kollam) ಹೆಚ್ಚುವರಿ ಸೆಷನ್ಸ್ ಕೋರ್ಟ್ (Sessions Court) ತೀರ್ಪು ನೀಡಿದೆ.

    ಅಪರಾಧಿ ಪ್ರಶಾಂತ್ ನಂಬಿಯಾರ್, 2020ರ ಮಾ. 20ರಂದು ಇಂಟರ್‌ನೆಟ್ ಕೊಲೆಯ ಪ್ರಕರಣವೊಂದನ್ನು ಸರ್ಚ್ ಮಾಡಿ, ಅದರಂತೆ ಪ್ರೇಯಸಿ ಸುಚಿತ್ರಾ ಪಿಳ್ಳೈಯನ್ನು (42) ಹತ್ಯೆ ಮಾಡಿದ್ದ. ಅಲ್ಲದೆ ಕೊಲೆಗೈದ ನಂತರ ಚಲನಚಿತ್ರವೊಂದನ್ನು ನೋಡಿ, ಅದರಲ್ಲಿ ದೇಹವನ್ನು ಕತ್ತರಿಸಿದ್ದ ರೀತಿಯಲ್ಲೇ ತುಂಡು ತುಂಡಾಗಿ ಕತ್ತರಿಸಿದ್ದ. ಬಳಿಕ ಮನೆಯ ಹಿಂದಿನ ಹೊಂಡದಲ್ಲಿ ಎಸೆದಿದ್ದ. ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಆತನ ಗೂಗಲ್ ಸರ್ಚ್ ಹಿಸ್ಟರಿಯಿಂದ ಕೊಲೆ ರಹಸ್ಯ ಬಯಲಿಗೆಳೆದಿದ್ದರು. ಇದನ್ನೂ ಓದಿ:ಹಿಂಡನ್‍ಬರ್ಗ್ ಪ್ರಕರಣ – ಮೂರು ತಿಂಗಳಲ್ಲಿ ತನಿಖೆಯ ಪ್ರಗತಿ ತೋರಿಸಲು ಸೆಬಿಗೆ ಸುಪ್ರೀಂ ಸೂಚನೆ

    ಖಾಸಗಿ ಶಾಲೆಯಲ್ಲಿ ಸಂಗೀತ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಪರಾಧಿ, ತನ್ನ ಹೆಂಡತಿಯ ಸಂಬಂಧಿ ಸುಚಿತ್ರಾಳನ್ನು ಕುಟುಂಬದ ಕಾರ್ಯಕ್ರಮದಲ್ಲಿ ಪರಿಚಯ ಮಾಡಿಕೊಂಡಿದ್ದ. ಬಳಿಕ ಸಾಮಾಜಿಕ ಜಾಲತಾಣದ ಮೂಲಕ ಇಬ್ಬರ ಸ್ನೇಹ ಪ್ರೇಮಕ್ಕೆ ತಿರುಗಿತ್ತು.

    ಎರಡು ಬಾರಿ ವಿಚ್ಛೇದನ ಪಡೆದಿದ್ದ ಸುಚಿತ್ರಾ, ಅಪರಾಧಿಯನ್ನು ಮದುವೆಯಾಗಲು ತಯಾರಿ ನಡೆಸಿದ್ದಳು. ಆತನಿಂದ ಮಗುವನ್ನು ಹೊಂದಿದ್ದಳು. ಆದರೆ ಈಗಾಗಲೇ ಮದುವೆಯಾಗಿ ಪತ್ನಿಯೊಂದಿಗೆ ವಾಸವಾಗಿದ್ದ ಪ್ರಶಾಂತ್ ಮದುವೆಗೆ ನಿರಾಕರಿಸಿದ್ದ. ಆದರೆ ಮದುವೆಯಾಗುವಂತೆ ಪಟ್ಟು ಹಿಡಿದಿದ್ದ ಆಕೆಯನ್ನು ಹತ್ಯೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆಗೆ ಕಿರುಕುಳ – ಬಿವಿ ಶ್ರೀನಿವಾಸ್‍ಗೆ ಸುಪ್ರೀಂ ಜಾಮೀನು

  • 12 ಸಾವಿರ ಕೋಟಿ ಮೌಲ್ಯದ 2.5 ಟನ್ ಡ್ರಗ್ಸ್ ಜಪ್ತಿ – ಪಾಕ್ ಆರೋಪಿಯ ಬಂಧನ

    12 ಸಾವಿರ ಕೋಟಿ ಮೌಲ್ಯದ 2.5 ಟನ್ ಡ್ರಗ್ಸ್ ಜಪ್ತಿ – ಪಾಕ್ ಆರೋಪಿಯ ಬಂಧನ

    ತಿರುವನಂತನಪುರಂ: 12,000 ಕೋಟಿ ರೂ. ಮೌಲ್ಯದ ಸುಮಾರು 2,500 ಕೆಜಿ ಮೆಥಾಂಫೆಟಮೈನ್ ಎಂಬ ಮಾದಕ ವಸ್ತುವನ್ನು ನೌಕಾಪಡೆ (Navy) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ.

    ಕೇರಳ (Kerala), ಕರಾವಳಿಯಲ್ಲಿ ಹಡಗಿನ ಮೂಲಕ ಸಾಗಿಸುತ್ತಿದ್ದ ಪಾಕ್  (Pakistan) ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಇದು ದೇಶದಲ್ಲಿ ವಶಪಡಿಸಿಕೊಳ್ಳಲಾದ ಅತಿ ಹೆಚ್ಚು ಪ್ರಮಾಣದ ಮೆಥಾಂಫೆಟಮೈನ್ ಆಗಿದೆ. ಸಾಗರ ಮಾರ್ಗವಾಗಿ ನಡೆಯುವ ಕಳ್ಳಸಾಗಾಣಿಕೆಯ ಗುರಿಯಾಗಿಸಿ ನಡೆಸುವ `ಅಪರೇಷನ್ ಸಮುದ್ರಗುಪ್ತ್’ ಕಾರ್ಯಾಚರಣೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: CBI ನಿರ್ದೇಶಕರ ಆಯ್ಕೆ ಪಟ್ಟಿಯಲ್ಲಿ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ ಹೆಸರು

    ಕರಾವಳಿಯಲ್ಲಿ ಸಾಗುತ್ತಿದ್ದ ಹಡಗನ್ನು ತಡೆದು ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 134 ಚೀಲಗಳಲ್ಲಿ ಮೆಥಾಂಫೆಟಮೈನ್‍ನನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ವಶ ಪಡಿಸಿಕೊಂಡ ಡ್ರಗ್ಸ್ ಹಾಗೂ ಆರೋಪಿಯನ್ನು ಎನ್‍ಸಿಬಿಯ ವಶದಲ್ಲಿರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


    ಕಳೆದ ಒಂದೂವರೆ ವರ್ಷದಲ್ಲಿ ದಕ್ಷಿಣ ಭಾಗದ ಸಮುದ್ರದ ಮೂಲಕ ಸಾಗಣಿಕೆಯಾಗುವ ಮಾದಕ ವಸ್ತುಗಳ ವಶಪಡಿಸಿಕೊಂಡಿರುವ ಪ್ರಕರಣದಲ್ಲಿ ಇದು ಮೂರನೇ ಪ್ರಕರಣವಾಗಿದೆ. ಇತ್ತೀಚೆಗೆ 500 ಕೆ.ಜಿ ಹೆರಾಯಿನ್ ಮತ್ತು 529 ಕೆ.ಜಿ ಹಶಿಶ್‍ನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಮಾದಕವಸ್ತುಗಳು ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ (Afghanistan) ಮೂಲಕ ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 2024ರ ಹೊತ್ತಿಗೆ ಬಿಜೆಪಿ ಅಂತ್ಯ ಶುರು: ಮಮತಾ ಬ್ಯಾನರ್ಜಿ

  • ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಕೇರಳ ಸರ್ಕಾರ

    ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಕೇರಳ ಸರ್ಕಾರ

    ತಿರುವನಂತಪುರಂ: ಕೇರಳ (Kerala) ಸರ್ಕಾರವು ತನ್ನ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ (Mask) ಅನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಕೋವಿಡ್ (Covid-19) ಪ್ರಕರಣಗಳ ಏರಿಕೆಯ ಅಪಾಯದಲ್ಲಿರುವುದರಿಂದ ಕೇರಳ ಮತ್ತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

    ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ ಸಮಾರಂಭಗಳಲ್ಲಿ ಜನರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರ ಜನರಿಗೆ ತನ್ನ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ಟ್ರಾಫಿಕ್‍ನಲ್ಲಿ ಅಂಬುಲೆನ್ಸ್‌ಗಳು ಸಿಲುಕಿ ಕಿರಿಕಿರಿ- ಎಚ್ಚೆತ್ತ ಪೊಲೀಸರಿಂದ ಅಡಾಪ್ಟಿವ್ ಸಿಗ್ನಲ್ ಅಳವಡಿಕೆ

    ಜನರಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲು ಸರ್ಕಾರ ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ನಿರ್ದೇಶನ ನೀಡಿದೆ. ಕೋವಿಡ್ ಹೆಚ್ಚಳದ ಆತಂಕದ ನಡುವೆ ಹೊರಡಿಸಲಾದ ಈ ಆದೇಶ ಮುಂದಿನ 30 ದಿನಗಳವರೆಗೆ ಕೇರಳ ರಾಜ್ಯದ ಎಲ್ಲಾ ಭಾಗಗಳಲ್ಲೂ ಜಾರಿಯಲ್ಲಿರಲಿದೆ. ಇದನ್ನೂ ಓದಿ: ವೋಲ್ವೋ ಬಸ್‌ಗಳನ್ನು ಅಂತರ್ ಜಿಲ್ಲೆ ವಿಸ್ತರಣೆಗೆ ಬಿಎಂಟಿಸಿ ಮೆಗಾ ಪ್ಲಾನ್

    ನೆರೆಯ ಚೀನಾದಲ್ಲಿ ಕೋವಿಡ್-19 ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿದ್ದು, ಇದರ ಅಪಾಯ ಭಾರತಕ್ಕೂ ಇರುವುದರಿಂದ ಕೇರಳ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k