Tag: ಕೆಲಸ

  • ವಾರದಲ್ಲಿ 2 ದಿನ ರಜೆ – ಕಾರ್ಮಿಕರ ಕೆಲಸದ ಅವಧಿ 10 ಗಂಟೆಗೆ ಹೆಚ್ಚಳ?

    ವಾರದಲ್ಲಿ 2 ದಿನ ರಜೆ – ಕಾರ್ಮಿಕರ ಕೆಲಸದ ಅವಧಿ 10 ಗಂಟೆಗೆ ಹೆಚ್ಚಳ?

    ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯ (10 Hour Workday For Labourers) ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ (Karnataka Government) ಚಿಂತನೆ ನಡೆಸಿದೆ.

    ಸದ್ಯ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಸೆಕ್ಷನ್ 7ರ ಪ್ರಕಾರ ಕೆಲಸದ ಅವಧಿ ದಿನಕ್ಕೆ ಒಂಬತ್ತು ಗಂಟೆ ಮೀರಬಾರದು ಮತ್ತು ಗರಿಷ್ಠ ಒಟಿ 10 ಗಂಟೆಗಳನ್ನು ಮೀರಬಾರದು ಎಂಬ ನಿಯಮವಿದೆ.

    ಈಗ ಈ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು ದಿನಕ್ಕೆ ಗರಿಷ್ಠ 10 ಗಂಟೆ ಮತ್ತು ಹೆಚ್ಚುವರಿ ಕೆಲಸದ ಅವಧಿಯನ್ನು ದಿನಕ್ಕೆ ಗರಿಷ್ಠ 12 ಗಂಟೆಗಳಿಗೆ ವಿಸ್ತರಿಸಲು ಚಿಂತನೆ ನಡೆಸಿದೆ. ಇದನ್ನೂ ಓದಿ: ಜನರಿಗೆ ಗುಡ್ ನ್ಯೂಸ್ – 3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್‌!

     

    ಕಾನೂನು ತಿದ್ದುಪಡಿ ವಿಚಾರ ಈಗ ಚರ್ಚಾ ಹಂತದಲ್ಲಿದ್ದು ಈ ಸಂಬಂಧ ರಾಜ್ಯ ಸರ್ಕಾರ ವಿಕಾಸ ಸೌಧದಲ್ಲಿ ಕೈಗಾರಿಕಾ ಮತ್ತು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸುತ್ತಿದೆ. ಈ ಸಭೆಯಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು, ಕಾರ್ಖಾನೆಗಳ ಮಾಲೀಕರು, ಕಾರ್ಮಿಕ ಸಂಘಟನೆಗಳು ಸದಸ್ಯರು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಇಸ್ರೇಲ್ ತಯಾರಿ

    ಈಗಾಗಲೇ ಕೇಂದ್ರ ಹಾಗೂ ಖಾಸಗಿ ಉದ್ಯೋಗಿಗಳ ಸಂಘದಿಂದಲೂ ಪ್ರಸ್ತಾವನೆ ಬಂದಿದೆ. ನಿತ್ಯ 10 ಗಂಟೆ ಕೆಲಸ ಮಾಡಿದರೆ ಶನಿವಾರ ಭಾನುವಾರ ಎರಡು ದಿನದ ರಜೆ ನೀಡಲಾಗುತ್ತದೆ.

    ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರ ಸರ್ಕಾರ ಕೆಲ ದಿನಗಳ ಹಿಂದೆ ನಡೆಸಿದ ಸಂಪುಟ ಸಭೆಯಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಿಸುವ ತಿದ್ದುಪಡಿ ಮಸೂದೆಗೆ  ಅನುಮೋದನೆ ನೀಡಿತ್ತು.

     

  • Nelamangala | ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು

    Nelamangala | ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು

    ಬೆಂಗಳೂರು: ಕೆಲಸ  ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣಾದ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.

    ಬಿಹಾರ (Bihar) ಮೂಲದ ರಾಹುಲ್ ಕುಮಾರ್ ಯಾದವ್ (22) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಹುಲ್ ಕೆಲಸ ಸಿಗದೆ ವಾಪಸ್ ಊರಿಗೆ ಹೋಗಲು ನಿರ್ಧಾರ ಮಾಡಿದ್ದ. ಇದನ್ನೂ ಓದಿ: SSLC ಫೇಲ್ ಆದ್ರೂ ಶಾಲೆಗೆ ಹೋಗ್ಬೋದು – ರೂಲ್ಸ್ ಏನು?

    ಇತ್ತ ಪೋಷಕರು ಊರಿಗೆ ಬರಲು ನಿರಾಕರಿಸಿದ ಹಿನ್ನೆಲೆ ಮನನೊಂದ ಯುವಕ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಳೆದ 15 ತಿಂಗಳಲ್ಲಿ ಅಯ್ಯರ್‌ ಮುಟ್ಟಿದ್ದೆಲ್ಲವೂ ಚಿನ್ನ – ಈಗ 6ನೇ ಟ್ರೋಫಿ ಗೆಲುವಿನ ಗುರಿ!

  • 8 ಗಂಟೆ ಕೆಲಸ ಮಾಡ್ತಾ ಕುಳಿತರೆ ಹೆಂಡ್ತಿ ಓಡಿಹೋಗ್ತಾಳೆ – ಗೌತಮ್‌ ಅದಾನಿ ಹಾಸ್ಯ!

    8 ಗಂಟೆ ಕೆಲಸ ಮಾಡ್ತಾ ಕುಳಿತರೆ ಹೆಂಡ್ತಿ ಓಡಿಹೋಗ್ತಾಳೆ – ಗೌತಮ್‌ ಅದಾನಿ ಹಾಸ್ಯ!

    ಮುಂಬೈ: ವಾರಕ್ಕೆ 70 ಗಂಟೆ ದುಡಿಬೇಕು ಎನ್ನುವ ಇನ್ಫೋಸಿಸ್ (Infosys) ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ (Narayana Murthy) ಅವರ ಹೇಳಿಕೆ ಕುರಿತು ಚರ್ಚೆಗಳು ನಡೆಯುತ್ತಲೇ ಇವೆ. ಈ ಹೊತ್ತಿನಲ್ಲೇ ದೇಶದ ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ (Gautam Adani) ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ʻಕೆಲಸ-ಜೀವನ ಸಮತೋಲʼ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ನಾವು ಇಷ್ಟಪಡುವ ಕೆಲಸಗಳನ್ನು ಮಾಡಿದಾಗ ಮಾತ್ರ ಜೀವನದಲ್ಲಿ ಸಮತೋಲನ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

    ನಿಮ್ಮ ಕೆಲಸ ಮತ್ತು ಜೀನವದ ಸಮತೋಲನವನ್ನು ನನ್ನ ಮೇಲೆ ಹೇರಬಾರದು, ಹಾಗೆಯೇ ನನ್ನ ಕೆಲಸ-ಜೀವನ ಸಮತೋಲನವನ್ನ ನಿಮ್ಮ ಮೇಲೆ ಹೇರಬಾರದು. ನಾನು ನನ್ನ ಕುಟುಂಬದೊಂದಿಗೆ ನಿತ್ಯ 4 ಗಂಟೆ ಕಳೆಯುತ್ತೇನೆ, ನನಗೆ ಅದರಲ್ಲಿ ಆನಂದ ಇದೆ. ಉಳಿದ ಸಮಯದಲ್ಲೂ 8 ಗಂಟೆಕಾಲ ಕೆಲಸ ಮಾಡ್ತಾ ಕುಳಿತರೇ ಹೆಂಡ್ತಿ ಓಡಿಹೋಗ್ತಾಳೆ ಅಂತ ಹಾಸ್ಯ ಚಟಾಕಿ ಹಾರಿಸಿದ್ದಾರೆ.

    ಕೆಲದಿನಗಳ ಹಿಂದೆಯಷ್ಟೆ ಇನ್ಫೋಸಿಸ್ ನಾರಾಯಣ ಮೂರ್ತಿ ಅವರು, ಭಾರತದ (India) ಕೆಲಸದ ಸಂಸ್ಕೃತಿ ಬದಲಾಗಬೇಕು ಮತ್ತು ಜಾಗತಿಕ ಮಟ್ಟದಲ್ಲಿ ದೇಶವು ಪರಿಣಾಮಕಾರಿಯಾಗಿ ಸ್ಪರ್ಧಿಸಬೇಕಾದರೆ ಯುವಜನತೆ (Youngsters) ವಾರಕ್ಕೆ 70 ಗಂಟೆಗಳ ಕಾಲ ಕೆಲಸ (70-Hour Work Week) ಮಾಡಲು ಸಿದ್ಧರಾಗಿರಬೇಕು ಎಂದು ಹೇಳಿದ್ದರು.

    ಎರಡನೇ ಮಹಾಯುದ್ಧದ ಬಳಿಕ ಜರ್ಮನಿ (Germany) ಹಾಗೂ ಜಪಾನ್ (Japan) ದೇಶ ಅಭಿವೃದ್ಧಿಯಾಗಿದ್ದನ್ನು ಉಲ್ಲೇಖಿಸಿದ್ದ ಅವರು, ಎರಡನೇ ಮಹಾಯುದ್ಧದ ಬಳಿಕ ಪ್ರತಿಯೊಬ್ಬ ಜರ್ಮನ್‌ ಪ್ರಜೆ ಕೆಲ ವರ್ಷಗಳವರೆಗೆ ಹೆಚ್ಚುವರಿ ಅವಧಿ ದುಡಿಯುತ್ತಿದ್ದರು. ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ನಾವು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎ೦ದು ಯುವಜನತೆಯಲ್ಲಿ ಮನವಿ ಮಾಡಿದ್ದರು.

  • ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಯುವಕ ಆತ್ಮಹತ್ಯೆ

    ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಯುವಕ ಆತ್ಮಹತ್ಯೆ

    ಶಿವಮೊಗ್ಗ: ಮನೆಯಲ್ಲಿ ಕೆಲಸಕ್ಕೆ (Job) ಹೋಗು ಎಂದಿದ್ದಕ್ಕೆ ಯುವಕ (Youth) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ನಡೆದಿದೆ.

    ಸಾಗರ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆಲಸಕ್ಕೆ ಹೋಗು ಎಂದು ಮನೆಯವರು ಹೇಳಿದ್ದಕ್ಕೆ ಮನನೊಂದು ಯುವಕ ಫೆಬ್ರವರಿ 19ರಂದು ಜ್ಯೂಸ್‌ಗೆ ಇಲಿಪಾಷಾಣ ಬೆರಸಿಕೊಂಡು ಕುಡಿದು ಆತ್ಮಹತ್ಯೆಗೆ (Suicide) ಯತ್ನಿಸಿದ್ದ. ಇದನ್ನೂ ಓದಿ: ನಾದಿನಿಯ ಮೇಲೆ ಕಣ್ಣಾಕಿ ಹೆಣವಾದ ಬಾವ – ಸಿನಿಮೀಯ ಶೈಲಿಯಲ್ಲಿ ಅಪಹರಿಸಿ ಬರ್ಬರ ಕೊಲೆ

    ವಿಷಯ ತಿಳಿದ ಕೂಡಲೇ ಯುವಕನ ಪೋಷಕರು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದವ್ಳು ಪರಪುರುಷನ ಜೊತೆ ಡೇಟಿಂಗ್- ರೊಚ್ಚಿಗೆದ್ದ ಪತಿ ಮಚ್ಚಿನಿಂದ ಅಟ್ಯಾಕ್

  • ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿ

    ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿ

    ನವದೆಹಲಿ: ಭಾರತದ (India) ಕೆಲಸದ ಸಂಸ್ಕೃತಿ ಬದಲಾಗಬೇಕು ಮತ್ತು ಜಾಗತಿಕ ಮಟ್ಟದಲ್ಲಿ ದೇಶವು ಪರಿಣಾಮಕಾರಿಯಾಗಿ ಸ್ಪರ್ಧಿಸಬೇಕಾದರೆ ಯುವಜನತೆ (Youngsters) ವಾರಕ್ಕೆ 70 ಗಂಟೆಗಳ ಕಾಲ ಕೆಲಸ (70-Hour Work Week) ಮಾಡಲು ಸಿದ್ಧರಾಗಿರಬೇಕು ಎಂದು ಇನ್ಫೋಸಿಸ್ (Infosys) ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ (Narayana Murthy) ಸಲಹೆ ನೀಡಿದ್ದಾರೆ.

    ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ನಾವು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎ೦ದು ಯುವಜನತೆಯಲ್ಲಿ ಮನವಿ ಮಾಡಿದರು.

    ಎರಡನೇ ಮಹಾಯುದ್ಧದ ಬಳಿಕ ಜರ್ಮನಿ (Germany) ಹಾಗೂ ಜಪಾನ್ (Japan) ದೇಶ ಅಭಿವೃದ್ಧಿಯಾಗಿದ್ದನ್ನು ಉಲ್ಲೇಖಿಸಿದ ಅವರು, ಎರಡನೇ ಮಹಾಯುದ್ಧದ ಬಳಿಕ ಪ್ರತಿಯೊಬ್ಬ ಜರ್ಮನ್‌ ಪ್ರಜೆ ಕೆಲ ವರ್ಷಗಳವರೆಗೆ ಹೆಚ್ಚುವರಿ ಅವಧಿ ದುಡಿಯುತ್ತಿದ್ದರು ಎಂದು ತಿಳಿಸಿದರು.  ಇದನ್ನೂ ಓದಿ: ಯುಪಿಎ ಅವಧಿಯಲ್ಲಿ ಆರ್ಥಿಕ ಚಟುವಟಿಕೆ ಸ್ಥಗಿತ – ಇನ್ಫಿ ನಾರಾಯಣ ಮೂರ್ತಿ

    ಭಾರತದ ಕೆಲಸದ ಉತ್ಪಾದಕತೆಯು ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದೆ. ನಾವು ನಮ್ಮ ಕೆಲಸದ ಉತ್ಪಾದಕತೆಯನ್ನು ಹೆಚ್ಚಿಸದೇ ಇದ್ದರೆ ಮತ್ತು ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಕಡಿಮೆ ಮಾಡದೇ ಇದ್ದರೆ ಪ್ರಚಂಡ ಸಾಧನೆ ಮಾಡಿದ ದೇಶಗಳೊಂದಿಗೆ ಸ್ಪರ್ಧಿಸಲು ನಮಗೆ ಸಾಧ್ಯವಾಗುವುದಿಲ್ಲ. ನಾವು ಅಂದುಕೊಂಡಿರುವ ಅವಧಿಯಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

    ನಾವು ಶಿಸ್ತುಬದ್ಧವಾಗಿರಬೇಕು ಮತ್ತು ನಮ್ಮ ಕೆಲಸದ ಉತ್ಪಾದಕತೆಯನ್ನು ಸುಧಾರಿಸಬೇಕು. ನಾವು ಏನೂ ಮಾಡದೇ ಇದ್ದರೆ ಸರ್ಕಾರ ಏನು ಮಾಡಬಹುದು? ನಾವು ಅತ್ಯಂತ ಶಿಸ್ತಿನ ಮತ್ತು ಅತ್ಯಂತ ಕಷ್ಟಪಟ್ಟು ದುಡಿಯುವ ಜನರಾಗಿ ಬದಲಾಗಬೇಕು ನಾರಾಯಣ ಮೂರ್ತಿ ಹೇಳಿದರು.  ಇದನ್ನೂ ಓದಿ: ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ನಾರಾಯಣ ಮೂರ್ತಿ

    https://twitter.com/nuts2406/status/1717574024589705503

    ನಮ್ಮ ಜನಸಂಖ್ಯೆಯಲ್ಲಿ ಬಹುಪಾಲು ಯುವಜನರೇ ಇರುವುದರಿಂದ ನಮ್ಮ ದೇಶವನ್ನು ಕಟ್ಟಲು ಅವರು ರೂಪಾಂತರವಾಗುವುದು ಬಹಳ ಮುಖ್ಯ ಎಂದರು.

    ನಾರಾಯಣ ಮೂರ್ತಿ ಅವರು ಯುವ ಜನತೆ ವಾರಕ್ಕೆ 70 ಗಂಟೆ ದುಡಿಯಬೇಕು ಎಂಬ ಹೇಳಿಕೆಯ ಬಗ್ಗೆ ಈಗ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಲಸಕ್ಕಾಗಿ ಅಲೆಯುತ್ತಿದ್ದಾರಂತೆ ನಟಿ ಉರ್ಫಿ ಜಾವೇದ್

    ಕೆಲಸಕ್ಕಾಗಿ ಅಲೆಯುತ್ತಿದ್ದಾರಂತೆ ನಟಿ ಉರ್ಫಿ ಜಾವೇದ್

    ವಿಚಿತ್ರ ವಿನ್ಯಾಸದ ಬಟ್ಟೆಗಳ ಮೂಲಕ ಫೇಮಸ್ ಆಗಿರುವ ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ಉರ್ಫಿ ಜಾವೇದ್ (Urfi Javed) ಇದೀಗ ಕೆಲಸ ಹುಡುಕುತ್ತಿದ್ದಾರಂತೆ. ಈ ಮಾಹಿತಿಯನ್ನು ಸ್ವತಃ ಅವರೇ ಹಂಚಿಕೊಂಡಿದ್ದಾರೆ. ನಾನು ಫೇಮಸ್ ಆಗಿದ್ದೇನೆ, ಜನರು ನನ್ನನ್ನು ಗುರುತಿಸುತ್ತಾರೆ ಎಲ್ಲವೂ ನಿಜ. ಆದರೆ, ನನಗೆ ಕೆಲಸವಿಲ್ಲ (Work). ನನ್ನೊಂದಿಗೆ ಕೆಲಸ ಮಾಡಲು ಯಾರೂ ಒಪ್ಪುವುದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

    ತಾವು ಕೆಲಸ ಮಾಡಲು ರೆಡಿಯಾಗಿದ್ದು, ತಮಗೆ ಯಾವುದೇ ಕೆಲಸ ಸಿಗುತ್ತಿಲ್ಲ ಎಂದು ಉರ್ಫಿ ಹೇಳಿಕೊಂಡಿದ್ದಾರೆ. ನಾನು ಕೆಲಸ ಮಾಡಲು ತಯಾರಿದ್ದರೂ, ನನ್ನೊಂದಿಗೆ ಕೆಲಸ ಮಾಡಲು ಯಾರೂ ಸಿದ್ದರಿಲ್ಲ. ಹಾಗಾಗಿ ನನಗೆ ಕೆಲಸ ಸಿಗುತ್ತಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ತಮಗಾಗಿ ಯಾರಾದರೂ ಕೆಲಸ ಸೃಷ್ಟಿ ಮಾಡಿದರೆ ಹೋಗುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ:ಕೊನೆಗೂ ತನ್ನ ಮಗುವಿನ ತಂದೆ ಬಗ್ಗೆ ಗುಟ್ಟು ರಟ್ಟು ಮಾಡಿದ ಇಲಿಯಾನಾ

    ಈ ಹಿಂದೆ ಉರ್ಫಿಗಾಗಿ ಕಾಸ್ಟ್ಯೂಮ್ (Costume) ಡಿಸೈನ್ ಮಾಡುವವರು ಯಾರೂ ಇರಲಿಲ್ಲವಂತೆ. ಹಾಗಾಗಿಯೇ ತಮ್ಮ ಕಾಸ್ಟ್ಯೂಮ್ ಅನ್ನು ತಾವೇ ಡಿಸೈನ್ ಮಾಡಲು ಕಲಿತಿದ್ದಾರಂತೆ. ಇತ್ತ ಮನೆಯಲ್ಲೂ ಗೌರವವಿಲ್ಲ, ಬೀದಿಯಲ್ಲೂ ಇಲ್ಲ. ಈ ವಿಚಾರವಾಗಿ ತಮಗೆ ತುಂಬಾ ನೋವಾಗಿದೆ ಎಂದಿದ್ದಾರೆ ಉರ್ಫಿ.

     

    ಕಾಸ್ಟ್ಯೂಮ್ ವಿಚಾರವಾಗಿಯೇ ಉರ್ಫಿ ಕೋರ್ಟ್ (ಕೋರ್ಟ್) ಮೆಟ್ಟಿಲು ಕೂಡ ಏರಿದ್ದಾರೆ. ಅರೆಬರೆ ಬಟ್ಟೆ ಹಾಕಿಕೊಂಡು ಬೀದಿಗೆ ಬಂದು ನಮ್ಮ ಸಂಸ್ಕೃತಿಯನ್ನು ಉರ್ಫಿ ಹಾಳು ಮಾಡುತ್ತಿದ್ದಾರೆ ಎಂದು ಹಲವರು ಇವರ ಮೇಲೆ ಪೊಲೀಸರಿಗೆ (Police) ದೂರು ನೀಡಿದ್ದರು. ಅನೇಕರು ತಮಗೆ ಸುಖಾಸುಮ್ಮನೆ ಕಿರುಕುಳು ನೀಡುತ್ತಿದ್ದಾರೆ ಎಂದು ಸ್ವತಃ ಉರ್ಫಿ ಅವರೇ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಇದೆಲ್ಲದರಿಂದ ಆಚೆ ಬರಲು ಉರ್ಫಿ ಕೆಲಸ ಹುಡುಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆ್ಯಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆಗೆ ಕೆಲಸ ನೀಡಿದ ಸಿಎಂ ಸಿದ್ದರಾಮಯ್ಯ

    ಆ್ಯಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆಗೆ ಕೆಲಸ ನೀಡಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಆ್ಯಸಿಡ್ ದಾಳಿಗೆ (Acid Attack) ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ತೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಸಿಎಂ ಸಿದ್ದರಾಮಯ್ಯ (Siddaramaiah) ಸೂಚಿಸಿದ್ದಾರೆ.

    ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಿಎಂ ಸಂತ್ರಸ್ತೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 2022ರ ಏಪ್ರಿಲ್ 28 ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆ ಎಂ.ಕಾಂ (M.Com) ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜೊತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

    ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ (Basavaraj Bommai) ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು. ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ದೆಹಲಿ ವಿಶ್ವವಿದ್ಯಾನಿಲಯದ ಕಾರ್ಯಕ್ರಮಕ್ಕೆ ಸಾಮಾನ್ಯನಂತೆ ಮೆಟ್ರೋದಲ್ಲಿ ಬಂದ ಪ್ರಧಾನಿ ಮೋದಿ

    ಪ್ರಕರಣ ಏನು?: ಆ್ಯಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ (Kamakshipaly Police Station) ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದರು.

    ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 48 ಗಂಟೆಯ ಒಳಗಡೆ ಕೆಲಸಕ್ಕೆ ಹಾಜರಾಗಿ, ಇಲ್ಲದಿದ್ದರೆ ಕಾನೂನು ಕ್ರಮ: NHM ಸಿಬ್ಬಂದಿಗೆ ಡೆಡ್‌ಲೈನ್‌

    48 ಗಂಟೆಯ ಒಳಗಡೆ ಕೆಲಸಕ್ಕೆ ಹಾಜರಾಗಿ, ಇಲ್ಲದಿದ್ದರೆ ಕಾನೂನು ಕ್ರಮ: NHM ಸಿಬ್ಬಂದಿಗೆ ಡೆಡ್‌ಲೈನ್‌

    ಬೆಂಗಳೂರು: ಮುಷ್ಕರ ನಿರತ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಸಿಬ್ಬಂದಿಗೆ ಸರ್ಕಾರ ಡೆಡ್‌ಲೈನ್‌ (Deadline) ನೀಡಿದ್ದು 48 ಗಂಟೆಗಳ‌ ಒಳಗೆ ಕೆಲಸಕ್ಕೆ ಹಾಜರಾಗುವಂತೆ ಆರೋಗ್ಯ ಇಲಾಖೆ (Health Ministry) ಖಡಕ್‌ ಸೂಚನೆ ನೀಡಿದೆ.

    ಎನ್‌ಎಚ್‌ಎಂ ನಿರ್ದೇಶಕರು ನೋಟಿಸ್‌ ಕಳುಹಿಸಿದ್ದು, 48 ಗಂಟೆಯ ಒಳಗಡೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಒಂದು ವೇಳೆ ಹಾಜರಾಗದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.

    ಆರೋಗ್ಯ ಇಲಾಖೆ ತುರ್ತುಸೇವೆ ನೀಡುವ ಇಲಾಖೆಯಾಗಿದ್ದು ಮುಷ್ಕರದಿಂದ ರೋಗಿಗಳಿಗೆ ತೊಂದರೆ ಆಗುತ್ತಿದೆ. ಈ ಹಿನ್ನಲೆ ಎನ್‌ಹೆಚ್‌ಎಂ ಸಿಬ್ಬಂದಿಗೆ ನೋಟಿಸ್‌ ಜಾರಿಯಾಗಿದೆ. ಇದನ್ನೂ ಓದಿ: ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿತ – 8 ಮಂದಿ ದುರ್ಮರಣ

    ಕಳೆದ ಒಂದು ತಿಂಗಳಿನಿಂದ ಕರ್ತವ್ಯಕ್ಕೆ ಹಾಜರಾಗದೇ ವೇತನ ಹೆಚ್ಚಳ ಮತ್ತು ಹುದ್ದೆ ಖಾಯಂಗೊಳಿಸುವಂತೆ ಆಗ್ರಹಿಸಿ ಎನ್‌ಹೆಚ್‌ಎಂ ಸಿಬ್ಬಂದಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ನೋಟಿಸ್‌ನಲ್ಲಿ ಏನಿದೆ?
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮವು 2005 ರಿಂದ ಜಾರಿಯಲ್ಲಿದ್ದು ಇದು ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯಕ್ರವಾಗಿದೆ. ಇದು ಮಿಷನ್‌ ಮೋಡ್‌ ಪ್ರಾಜೆಕ್ಟ್‌ ಆಗಿರುವುದರಿಂದ ನಿಗದಿಪಡಿಸಿದ ಉದ್ದೇಶ ಹಾಗೂ ಗುರಿಗಳು ಸಫಲವಾದ ನಂತರ ಕಾರ್ಯಕ್ರಮ ಮುಕ್ತಾಯಗೊಳ್ಳುವುದರ ಬಗ್ಗೆ ಕೇಂದ್ರ ಸರ್ಕಾರವು ತಿರ್ಮಾನಿಸುತ್ತದೆ.

    ಈ ಯೋಜನೆಯಲ್ಲಿ ಸುಮಾರು 53 ಕಾರ್ಯಕ್ರಮಗಳು ರಾಜ್ಯದಲ್ಲಿ ವಿವಿಧ ಹಂತದಲ್ಲಿ ಜಾರಿಯಲ್ಲಿರುತ್ತವೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಲ್ಲಿ ಒಳಗುತ್ತಿಗೆ ಆಧಾರದ ಮೇಲೆ 26,943 ಮತ್ತು 3,631 ಹೊರಗುತ್ತಿಗೆ ಒಟ್ಟು 30,574 ಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೌಕರರ ಪ್ರಮುಖ ಬೇಡಿಕೆಯಂದ ಸಂಬಳವನ್ನು ಏರಿಸಲಾಗಿದ್ದು, ಮಾರ್ಚ್‌ 4 ರಂದು ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉಳಿದ ಬೇಡಿಕೆಗಳ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಆಶ್ವಾಸನೆ ನೀಡಿದ್ದಾರೆ.

  • ಇಲ್ಲಿ ಇಲಿ ಕೊಲ್ಲುವವರಿಗೆ ತಿಂಗಳಿಗೆ 1.31 ಕೋಟಿ ರೂ. ಸಂಬಳ

    ಇಲ್ಲಿ ಇಲಿ ಕೊಲ್ಲುವವರಿಗೆ ತಿಂಗಳಿಗೆ 1.31 ಕೋಟಿ ರೂ. ಸಂಬಳ

    ನ್ಯೂಯಾರ್ಕ್: ಇಲಿ (Rat) ಕಾಟವನ್ನು ತಾಳಲಾರದೇ ನ್ಯೂಯಾರ್ಕ್ ಸಿಟಿ ಮೇಯರ್‌ರೊಬ್ಬರು ಇಲಿ ಕೊಲ್ಲಲು ಜನರನ್ನು ನೇಮಿಸುವುದಾಗಿ ಆಹ್ವಾನಿಸಿರುವ ಜಾಹಿರಾತನ್ನು ಹಾಕಿರುವ ವಿಚಿತ್ರ ಘಟನೆ ನಡೆದಿದೆ.

    ನ್ಯೂಯಾರ್ಕ್ (New York) ನಗರದಲ್ಲಿ ಸುಮಾರು 1.8 ಕೋಟಿ ಇಲಿಗಳು ಇವೆ ಎಂದು ವರದಿಯಾಗಿತ್ತು. ಇದಾದ ಬಳಿಕ, ನ್ಯೂಯಾರ್ಕ್ ಸಿಟಿ ಮೇಯರ್ ಎರಿಕ್ ಆಡಮ್ಸ್ ಇಲಿಯನ್ನು ಕೊಲ್ಲಲು ಜನರನ್ನು ನೇಮಿಸುವುದಾಗಿ ಜಾಹೀರಾತು ನೀಡಿದ್ದಾರೆ. ಅಷ್ಟೇ ಅಲ್ಲದೆ ಇವರಿಗೆ ಸಂಬಳವನ್ನು ನಿಗದಿ ಪಡಿಸಿದ್ದಾರೆ.

    ಜಾಹಿರಾತಿನಲ್ಲಿ ಏನಿದೆ?: ಇಲಿಯನ್ನು ಸಾಯಿಸಲು ಚಾಣಾಕ್ಷ್ಯತನವನ್ನು ಹೊಂದಿರಬೇಕು. ಆಯ್ಕೆಯಾದ ಸಿಬ್ಬಂದಿಯೂ ವಾರದ 7 ದಿನವೂ ಕೆಲಸ ಮಾಡಬೇಕು. ಜೊತೆಗೆ ದಿನದ 24 ಗಂಟೆಗಳ ಕೆಲಸ ಮಾಡಬೇಕು. ನಗರದ ಜನರೊಂದಿಗೆ ಉತ್ತಮ ಸಂಪರ್ಕ ಸಾಧಿಸಿ ಉತ್ಸಾಹದಿಂದ ಸಮಾಜದ ಕಡೆಗೆ ಸಕಾರಾತ್ಮಕ ದೃಷ್ಟಿಕೋನದಿಂದ ಕೆಲಸ ಮಾಡಬೇಕು. ಇದರಿಂದ 80 ಲಕ್ಷ ನಿವಾಸಿಗಳು ಇಲಿಗಳ ಸಮಸ್ಯೆಯಿಂದ ಪಾರಾಗಬಹುದು. ಒಂದು ವೇಳೆ ಇಲಿಯನ್ನು ಸಾಯಿಸಲು ಯಶಸ್ವಿಯಾದರೆ 1,70,000 ಡಾಲರ್‌ನ್ನು ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ. ಅಂದರೆ ಬರೋಬ್ಬರಿ 1,38,41,663 ರೂ. ಹಣವಾಗಿದೆ. ಇದನ್ನೂ ಓದಿ: ಅಪಘಾತವಾದ್ರೂ ಆಸ್ಪತ್ರೆಗೆ ಸೇರಿಸಲು ಹಿಂದೇಟು – ನಿನ್ಯಾವ ಸೀಮೆ MLC ಎಂದು ರವಿಕುಮಾರ್‌ಗೆ ಕ್ಲಾಸ್

    ಎರಡು ವರ್ಷಗಳ ಹಿಂದಿನದಕ್ಕೆ ಹೋಲಿಸಿದರೆ ಈ ವರ್ಷ ನ್ಯೂಯಾರ್ಕ್‍ನಲ್ಲಿ ಇಲಿಗಳ ಕಾಟದ ಕುರಿತಾದ ದೂರುಗಳ ಸಂಖ್ಯೆ ಶೇ. 70ರಷ್ಟು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಹೊಸ ಕಾನೂನನ್ನು ಪರಿಚಯಿಸಿದ್ದು, ನ್ಯೂಯಾರ್ಕ್ ನಿವಾಸಿಗಳು ರಾತ್ರಿ 8 ಗಂಟೆಯ ನಂತರ ಕಸವನ್ನು ತೆಗೆಯುವುದನ್ನು ನಿಷೇಧಿಸಲಾಗಿದೆ. ಸಂಜೆ 4 ಗಂಟೆಯ ನಂತರ ಯಾವುದೇ ಸಮಯದಲ್ಲಿ ಮನೆಗಳ ಹೊರಗೆ ಕಸ ಸುರಿಯಬಹುದು. ಇದನ್ನೂ ಓದಿ: ಪೊಲೀಸ್‌ ಕಾನ್‌ಸ್ಟೇಬಲ್‌ಗೆ ಕಪಾಳಮೋಕ್ಷ – ಬಿಜೆಪಿ ಮಾಜಿ ಸಂಸದೆ ವಿರುದ್ಧ ಎಫ್‌ಐಆರ್‌

    Live Tv
    [brid partner=56869869 player=32851 video=960834 autoplay=true]

  • ಮದುವೆ ದಿನವೂ ಲ್ಯಾಪ್‍ಟಾಪ್ ಹಿಡಿದುಕೊಂಡು ಕುಳಿತ ವರ!

    ಮದುವೆ ದಿನವೂ ಲ್ಯಾಪ್‍ಟಾಪ್ ಹಿಡಿದುಕೊಂಡು ಕುಳಿತ ವರ!

    ಕೋಲ್ಕತ್ತಾ: ಕೊರೊನಾ (Corona) ಲಾಕ್‍ಡೌನ್ ನಂತರ ಐಟಿ ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರಿಗೆ ವರ್ಕ್ ಫ್ರಮ್ ಹೋಮ್ (Work From Home) ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬ ವರ (Groom) ತನ್ನ ಮದುವೆಯ ದಿನವೂ ಮಂಟಪದಲ್ಲಿ ಲ್ಯಾಪ್‍ಟಾಪ್ ಹಿಡಿದುಕೊಂಡು ಕೆಲಸ ಮಾಡುತ್ತಿದ್ದಾನೆ.

    ಕೋಲ್ಕತ್ತಾದ (Kolkata) ವರನೊಬ್ಬ ಪುರೋಹಿತರೊಂದಿಗೆ ಕುಳಿತು ತನ್ನ ಮದುವೆ ಕಾರ್ಯದ ಜೊತೆಗೆ ಲ್ಯಾಪ್‍ಟಾಪ್‍ನಲ್ಲಿ (Laptop) ಕೆಲಸವನ್ನು ಮಾಡುತ್ತಿದ್ದಾನೆ. ಇತ್ತ ಪುರೋಹಿತರು ವಿಧಿವಿಧಾನಗಳನ್ನು ನೆರವೇರಿಸಿ ವರನನ್ನು ಆಶೀರ್ವದಿಸುತ್ತಿದ್ದಾರೆ. ಆದರೆ ವರ ಪುರೋಹಿತರ ಕಡೆಗೆ ನೋಡದೇ ಆತ ತನ್ನ ಲ್ಯಾಪ್‍ಟಾಪ್‌ನಲ್ಲಿ ಕೆಲಸ ಮಾಡುತ್ತ ಮಗ್ನನಾಗಿದ್ದಾನೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

     

    View this post on Instagram

     

    A post shared by Calcutta Instagrammers (@ig_calcutta)

    ಈ ಫೋಟೋವನ್ನು ಹಂಚಿಕೊಂಡಿರುವ ಇನ್‍ಸ್ಟಾಗ್ರಾಮ್ ಪೇಜ್‌ ಮದುವೆ ಸಮಯದಲ್ಲೂ ವರ್ಕ್ ಫ್ರಮ್ ಹೋಮ್ ಕೆಲಸ ಮಾಡುವ ಸ್ನೇಹಿತನನ್ನು ಟ್ಯಾಗ್ ಮಾಡಿ ಎಂದು ತಿಳಿಸಿದೆ. ವರ ಲ್ಯಾಪ್‍ಟಾಪ್‍ನಲ್ಲಿ ನಿಖರವಾಗಿ ಏನು ಕೆಲಸ ಮಾಡುತ್ತಿದ್ದಾನೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಕೆಲವರು ಆಫೀಸ್ ಕೆಲಸ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಯಚೂರು ನಗರ ಕ್ಷೇತ್ರ ಮತದಾರರ ಪಟ್ಟಿಯಲ್ಲಿ 40 ಸಾವಿರ ಹೆಸರು ಮಾಯ

    ಕೆಲವರು ಈ ಫೋಟೋ ನೋಡಿ ಹಾಸ್ಯ ಮಾಡಿದ್ದರೇ, ಇನ್ನೂ ಕೆಲವರು ಟೀಕಿಸಿದ್ದಾರೆ. ನೆಟ್ಟಿಗನೊಬ್ಬ ಕಾಮೆಂಟ್ ಮಾಡಿದ್ದು, ಈ ವ್ಯಕ್ತಿಗೆ ತನ್ನ ಸ್ವಂತ ವಿವಾಹವನ್ನು ಆನಂದಿಸಲು ಸಹ ಆಗುತ್ತಿಲ್ಲ ಎಂದು ಹೇಳಿದ್ದಾನೆ. ಮತ್ತೊಬ್ಬ ಕಾಮೆಂಟ್ ಮಾಡಿ, ನನಗೆ ಇದು ತಮಾಷೆಯಾಗಿ ಕಾಣುತ್ತಿಲ್ಲ. ಯಾವುದೇ ಸಂಸ್ಥೆಯು ಉದ್ಯೋಗಿಯನ್ನು ಅವರ ಮದುವೆಯ ದಿನಗಳಲ್ಲಿ ಕೆಲಸ ಮಾಡಲು ಕೇಳುವುದಿಲ್ಲ ಎಂದಾತ ಅವನು ಮದುವೆಯಾಗುವ ಮಹಿಳೆಯನ್ನು ದೇವರು ಆಶೀರ್ವದಿಸುತ್ತಾನೆ ಎಂದು ವ್ಯಂಗ್ಯವಾಡಿದ್ದಾನೆ. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿದ್ದ ಪೊಲೀಸ್ ಪೇದೆ ಪತ್ನಿ ಅನುಮಾನಾಸ್ಪದ ಸಾವು

    Live Tv
    [brid partner=56869869 player=32851 video=960834 autoplay=true]