Tag: ಕೆಸರು

  • ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿ ಪ್ರತಿಭಟಿಸಿ ಕೆಸರು ನೀರಲ್ಲೇ ಸ್ನಾನ ಮಾಡಿದ ಶಾಸಕಿ

    ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿ ಪ್ರತಿಭಟಿಸಿ ಕೆಸರು ನೀರಲ್ಲೇ ಸ್ನಾನ ಮಾಡಿದ ಶಾಸಕಿ

    ರಾಂಚಿ: ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ (National Highway) ತುಂಬಿದ ಕೆಸರಲ್ಲಿ (Mud) ಕುಳಿತು ಶಾಸಕಿಯೊಬ್ಬರು (MLA) ಸ್ನಾನ (Bath) ಮಾಡಿ ಪ್ರತಿಭಟಿಸಿರುವ ಘಟನೆ ಜಾರ್ಖಂಡ್‌ನ (Jharkhand) ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ. ಶಾಸಕಿ ಕೊಳಚೆ ನೀರಿನಲ್ಲಿ ಮಿಂದು ತಕ್ಷಣವೇ ರಸ್ತೆಯ ದುರಸ್ತಿ ಮಾಡುವಂತೆ ಒತ್ತಾಯಿಸಿದ್ದಾರೆ.

    ಮಹಾಗಾಮಾದ ಕಾಂಗ್ರೆಸ್ ಶಾಸಕಿ ದೀಪಿಕಾ ಪಾಂಡೆ ಸಿಂಗ್ ಅವರು ತಮ್ಮ ಮೇಲೆ ಕೆಸರು ನೀರನ್ನು ಸುರಿದುಕೊಂಡು, ಈ ರಸ್ತೆಯ ದುರಸ್ತಿಯನ್ನು ಕೈಗೊಂಡು ದೊಡ್ಡ ಗುಂಡಿಗಳನ್ನು ಮುಚ್ಚಲು ಈಗಿಂದೀಗಲೇ ಮುಂದಾಗದಿದ್ದರೆ, ನಾನು ಇಲ್ಲಿಂದ ಕದಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ – ಪ್ರಿಂಟಿಂಗ್ ಮಿಸ್ಟೇಕ್ ಎಂದ ಕಾಂಗ್ರೆಸ್

    ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವಿನ ಹೋರಾಟದಲ್ಲಿ ನಾನು ಭಾಗಿಯಾಗಲು ಬಯಸಲ್ಲ. ಇದು ಎನ್‌ಹೆಚ್-133 ಆಗಿದ್ದು, ಈ ವರ್ಷ ಮೇ ತಿಂಗಳಿನಲ್ಲಿ ಇದರ ವಿಸ್ತರಣೆಯ ಜವಾಬ್ದಾರಿಯನ್ನು ಅಧಿಕಾರಿಗಳು ವಹಿಸಿಕೊಂಡಿದ್ದರು. ಆದರೆ ದುರಸ್ತಿಗೆ ಕೇಂದ್ರ ಹಣವನ್ನು ನೀಡಿಲ್ಲ. ಈ ಹೆದ್ದಾರಿಯಿಂದ ಸಾರ್ವಜನಿಕರು ಕಷ್ಟಪಡುತ್ತಿದ್ದು, ಇದನ್ನು ಸರಿಪಡಿಸುವಂತೆ ನಾನು ಮುಖ್ಯಮಂತ್ರಿಗಳಿಗೆ ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೋಗ್ಬೇಡಿ ಸರ್- ಮಂಡ್ಯದಲ್ಲಿ ಶಿಕ್ಷಕನ ವರ್ಗಾವಣೆಗೆ ವಿದ್ಯಾರ್ಥಿಗಳು ಕಣ್ಣೀರು

    Live Tv
    [brid partner=56869869 player=32851 video=960834 autoplay=true]

  • ಕಾರ್ ಡ್ರೈವರ್‌ಗೆ ಪಾಠ ಕಲಿಸಲು ಫೇಕ್ ಕಾಲ್ ಮಾಡಿದವ ಅರೆಸ್ಟ್ – ಅಸಲಿ ಕಾರಣವೇನು?

    ಕಾರ್ ಡ್ರೈವರ್‌ಗೆ ಪಾಠ ಕಲಿಸಲು ಫೇಕ್ ಕಾಲ್ ಮಾಡಿದವ ಅರೆಸ್ಟ್ – ಅಸಲಿ ಕಾರಣವೇನು?

    ನವದೆಹಲಿ: ಕಾರ್ ಡ್ರೈವರ್‌ಗೆ ಪಾಠ ಕಲಿಸಲು ಪೊಲೀಸರಿಗೆ ಫೇಕ್ ಕಾಲ್ ಮಾಡಿದವನನ್ನು ಅರೆಸ್ಟ್ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    ದೆಹಲಿಯ ಮುಂಡ್ಕಾ ಪೊಲೀಸ್ ಠಾಣೆಗೆ ಕಾಲ್ ಮಾಡಿದ ಆರೋಪಿಯು, ತನ್ನ ಮೇಲೆ ಯಾರೂ ಪಿಸ್ತೂಲ್‍ನಿಂದ ಹಲ್ಲೆ ಮಾಡಲು ಬಂದಿದ್ದಾರೆ ಎಂದು ಪೊಲೀಸರಿಗೆ ನಕಲಿ ಕರೆ ಮಾಡಿದ್ದಾನೆ. ಈ ಹಿನ್ನೆಲೆ ಕಾಲ್‌ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ಇದನ್ನೂ ಓದಿ:  ಭಾರತದ ಗಡಿಯನ್ನು ಅಕ್ರಮವಾಗಿ ಪ್ರವೇಶಿದ್ದ ಪೋಲೆಂಡ್ ಪ್ರಜೆ ಅರೆಸ್ಟ್

    ಜುಲೈ 22 ರಂದು ಅರವಿಂದ್ ಕುಮಾರ್(39) ಬೈಕ್‍ನಲ್ಲಿ ಹೋಗುತ್ತಿದ್ದಾಗ ಕಾರೊಂದು ಕೊಚ್ಚೆಯ ಮೇಲೆ ಹರಿದಿದೆ. ಈ ವೇಳೆ ಪಕ್ಕದಲ್ಲೇ ಇದ್ದ ಅರವಿಂದ್ ಮೇಲೆ ಕೊಚ್ಚೆ ನೀರು ಬಿದ್ದಿದೆ. ಇದರಿಂದ ತನ್ನ ಬಟ್ಟೆ ಹಾಳು ಮಾಡಿದ್ದಕ್ಕಾಗಿ ಚಾಲಕನಿಗೆ ಪಾಠ ಕಲಿಸಲು, ಅವನು ಪೊಲೀಸರಿಗೆ ನಕಲಿ ಕರೆ ಮಾಡಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ(ಹೊರ) ಸಮೀರ್ ಶರ್ಮಾ ಹೇಳಿದ್ದಾರೆ.

    ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ಮಾಡುವ ಕುಮಾರ್, ಮುಂಡ್ಕ ಪೊಲೀಸ್ ಠಾಣೆಗೆ ಕರೆ ಮಾಡಿ ಕಾರು ಚಾಲಕ ತನ್ನ ಮೇಲೆ ಪಿಸ್ತೂಲ್‍ನಿಂದ ಹಲ್ಲೆ ಮಾಡಲು ಬಂದಿದ್ದಾನೆ ಎಂದು ಆರೋಪಿಸಿದ್ದಾನೆ. ಆದರೆ, ಪೊಲೀಸರು ಸ್ಥಳಕ್ಕೆ ತಲುಪಿದಾಗ ಕುಮಾರ್ ಅಲ್ಲಿ ಇರಲಿಲ್ಲ ಮತ್ತು ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಕಮರಿಗೆ ಬಿದ್ದ ಕಾರು: 5 ಸಾವು, ಇಬ್ಬರಿಗೆ ಗಂಭೀರ ಗಾಯ

    ಮರುದಿನ, ಪೊಲೀಸರು ಕುಮಾರ್‌ನನ್ನು ಸಂಪರ್ಕಿಸಿದ್ದು, ವಿಚಾರಣೆಯ ಮಾಡಿದ್ದಾರೆ. ಈ ವೇಳೆ, ತಾನು ಕಾರು ಚಾಲಕನಿಗೆ ಬುದ್ಧಿ ಕಲಿಸಲು ನಕಲಿ ಕರೆ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ಮೈ ಮೇಲೆ ಕೆಸರು ಹಾರಿಸಿದ್ದಕ್ಕೆ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ

    ಮೈ ಮೇಲೆ ಕೆಸರು ಹಾರಿಸಿದ್ದಕ್ಕೆ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ

    ರಾಯಚೂರು: ಕೆಸರು ಮೈ ಮೇಲೆ ಹಾರಿದೆ ಎಂದು ಬಸ್ ಚಾಲಕನ  ಮೇಲೆ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಹಲ್ಲೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

    ರಾಯಚೂರಿನ ಮಸ್ಕಿ ತಾಲೂಕಿನ ಪರಸಾಪುರ ಬಳಿ ಬಸ್ ಚಾಲಕ ಕೆಸರಿದ್ದ ರಸ್ತೆ ಮೇಲೆ ಬಸ್ ಚಲಾಯಿಸಿದ ವೇಳೆ ಅಲ್ಲೇ ಇದ್ದ ಪಿ.ಗೌಡರ ಮೇಲೆ ಕೆಸರು ಹಾರಿದೆ. ಇದರಿಂದ ಸಿಟ್ಟಿಗೆದ್ದ ಗೌಡ, ಕೆಸರಿನ ಮೇಲೆ ಬಸ್ ಚಲಾಯಿಸಿದ್ದಕ್ಕೆ ಕೆಸರು ತನ್ನ ಬಟ್ಟೆಗೆಲ್ಲಾ ಮೆತ್ತಿದೆ ಎಂದು ಗಲಾಟೆ ಮಾಡಿದ್ದಾನೆ.

    ಮಾತಿಗೆ ಮಾತು ಬೆಳೆದು ಗೌಡ ತನ್ನ ಚಪ್ಪಲಿಯಿಂದ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ. ರಾಯಚೂರು ವಿಭಾಗದ ಮಸ್ಕಿ ಘಟಕದ ಬಸ್ ಇದಾಗಿದ್ದು, ಸಾರ್ವಜನಿಕರ ಎದುರೇ ಚಪ್ಪಲಿಯಿಂದ ಚಾಲಕನ ಮೇಲೆ ಹಲ್ಲೆ ನಡೆದಿದೆ. ಇದನ್ನೂ ಓದಿ: ಆಜಾನ್ ವಿರುದ್ಧ ಆರತಿ, ಹನುಮಾನ್ ಚಾಲೀಸಾ ಪಠಿಸಲು ಹಿಂದೂಪರ ಸಂಘಟನೆಗಳ ನಿರ್ಧಾರ

    ಘಟನೆಯಿಂದ ಅವಮಾನಿತನಾದ ಬಸ್ ಚಾಲಕ ಮಸ್ಕಿ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಆದರೆ ಪೊಲೀಸರು ಇಬ್ಬರಿಗೂ ರಾಜಿ ಮಾಡಿಸಿ ದೂರು ದಾಖಲಿಸಿಕೊಂಡಿಲ್ಲ. ಇದರಿಂದ ಚಾಲಕ ಬೇಸರ ವ್ಯಕ್ತಪಡಿಸಿದ್ದಾರೆ.

  • ಸಕಲೇಶಪುರ ಬಳಿ ಕೆಸರಲ್ಲಿ ಸಿಲುಕಿದ ತಾಯಾನೆ- ಅಮ್ಮನನ್ನು ಬಿಟ್ಟು ಕದಲದ ಮರಿಯಾನೆ

    ಸಕಲೇಶಪುರ ಬಳಿ ಕೆಸರಲ್ಲಿ ಸಿಲುಕಿದ ತಾಯಾನೆ- ಅಮ್ಮನನ್ನು ಬಿಟ್ಟು ಕದಲದ ಮರಿಯಾನೆ

    ಹಾಸನ: ನೀರು ಕುಡಿಯಲು ಹೋಗಿ ತಾಯಾನೆಯ ಕಾಲು ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಮನಕಲಕುವ ಘಟನೆ ಸಕಲೇಶಪುರ ತಾಲೂಕಿನ ಕಡದರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಕಾಡಾನೆಯ ಕಾಲು ಕೆಸರಿನಲ್ಲಿ ಹೂತುಕೊಂಡು ನರಕಯಾತನೆ ಅನುಭವಿಸುತ್ತಿದ್ರೆ, ಇತ್ತ ತನ್ನ ತಾಯಿ ವೇದನೆ ಕಂಡು ಮರಿಯಾನೆ ಮರುಗುತ್ತಿರುವ ದೃಶ್ಯ ಎಂತವರನ್ನು ಒಂದು ಬಾರಿ ಕಣ್ಣೀರು ಹಾಕಿಸುವಂತಿದೆ.

    ಕಳೆದ ನಾಲ್ಕು ದಿನಗಳಿಂದ ತಾಯಿ ಆನೆ ಕೆಸರಿನಲ್ಲೇ ಸಿಲುಕಿಕೊಂಡಿದೆ. ಮರಿ ಆನೆ ತನ್ನ ತಾಯಿ ಆನೆಯನ್ನು ಬಿಟ್ಟು ಕದಲಿಲ್ಲ. ಸದ್ಯ ಆನೆಯನ್ನು ಹೊರ ತೆಗೆಯಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಆನೆಯ ಒಂದು ಕಾಲು ಗಾಯಗೊಂಡ ಪರಿಣಾಮ ಕೆಸರಿನಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಅರವಳಿಕೆ ತಜ್ಞರಿಗೆ ಈ ಕುರಿತು ಮಾಹಿತಿ ರವಾನಿಸಿದ್ದು, ಸ್ಥಳಕ್ಕೆ ದೌಡಾಯಿಸಿ ಸಾಕಾನೆಗಳು ಮುಖಾಂತರ ಕೆಸರಿನಿಂದ ಆನೆಯನ್ನು ಸುರಕ್ಷಿತವಾಗಿ ಹೊರತೆಗೆಯಬೇಕಾಗಿದೆ.

    ಇತ್ತ ಸ್ಥಳೀಯರು ಆನೆಯನ್ನು ಕೆಸರಿನಿಂದ ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಜೆಸಿಬಿ ಮುಖಾಂತರ ಹೂಳು ತೆಗಿಸುತ್ತಿದ್ದಾರೆ. ಒಟ್ಟಿನಲ್ಲಿ ಕಾರ್ಯಚರಣೆ ಮುಂದುವರಿದಿದೆ.

    ಮಲೆನಾಡು ಭಾಗದಲ್ಲಿ ಹೆಚ್ಚಿದ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಕಾಡಾನೆಗಳು ಅಹಾರ ಅರಸಿ ಕಾಡಿನಿಂದ ನಾಡಿಗೆ ಬರುತ್ತಿವೆ. ಹೀಗಾಗಿ ಕಾಡಾನೆ ಮತ್ತು ಮಾನವರ ನಡುವಿನ ಸಂಘರ್ಷ ಮುಂದುವರಿದಿದೆ. ಆದ್ರೂ ಅರಣ್ಯ ಇಲಾಖೆ ಕಾಡಾನೆ ಹಾವಳಿ ನಿಯಂತ್ರಿಸಲು ಸಂಪೂರ್ಣ ವಿಫಲವಾಗಿದೆ ಅಂತ ಸ್ಥಳೀಯರು ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಡಿಯೋ: ಹಿಂಡು ಹಿಂಡಾದ ಮೊಸಳೆಗಳ ಮಧ್ಯೆ ಸಿಲುಕಿದ್ದ ಕರುವನ್ನು ರಕ್ಷಿಸಿದ್ದು ಹೀಗೆ

    ವಿಡಿಯೋ: ಹಿಂಡು ಹಿಂಡಾದ ಮೊಸಳೆಗಳ ಮಧ್ಯೆ ಸಿಲುಕಿದ್ದ ಕರುವನ್ನು ರಕ್ಷಿಸಿದ್ದು ಹೀಗೆ

    ಬ್ರೆಜಿಲಿಯಾ: ಕೆರೆಯ ಕೆಸರಿನಲ್ಲಿ ರಾಶಿ ಮೊಸಳೆಗಳ ಮಧ್ಯೆ ಸಿಲುಕಿದ್ದ ಕರುವನ್ನು ವ್ಯಕ್ತಿಯೋರ್ವ ಬಹಳ ಜಾಗರೂಕತೆಯಿಂದ ರಕ್ಷಣೆ ಮಾಡಿದ ಘಟನೆ ನಡೆದಿದೆ.

    ವ್ಯಕ್ತಿ ಕರುವನ್ನು ರಕ್ಷಣೆ ಮಾಡುತ್ತಿರುವ ದೃಶ್ಯವನ್ನು ಬ್ರೆಜಿಲ್ ನ ವ್ಯಕ್ತಿ ಸೆರೆಹಿಡಿದಿದ್ದಾರೆ. ಈ ಘಟನೆ ಅಕ್ಟೋಬರ್ 24ರಂದು ನಡೆದಿದೆ.

    ಬನಾನಲ್ ದ್ವೀಪ ಎಂಬ ದೊಡ್ಡ ನದಿ ಈಗ ಬರಗಾಲದಿಂದ ನೀರಿಲ್ಲದೆ ಬತ್ತಿ ಹೋಗಿತ್ತು. ಹೀಗಾಗಿ ಮೊಸಳೆಗಳ ಹಿಂಡು ಕೆಸರಿನಲ್ಲಿ ಹೊರಳಾಡುತ್ತಿದ್ದವು. ಇವುಗಳ ಮಧ್ಯೆ ಕರುವೊಂದು ಸಿಲುಕಿ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ವ್ಯಕ್ತಿಯೊಬ್ಬ ಮೊಸಳೆಗಳ ಹಿಂಡನ್ನು ಲೆಕ್ಕಿಸದೇ, ಭಯಪಡದೇ ಕರುವಿನ ಕಿವಿಯಲ್ಲಿ ಎಳೆದು ರಕ್ಷಿಸಿದ್ದಾರೆ. ಕಿವಿಯಲ್ಲಿ ಹಿಡಿದು ಎಳೆದಾಗ ನೋವಿನಿಂದ ನರಳಿತ್ತು. ಮೊಸಳೆಗಳಿಂದ ರಕ್ಷಿಸಿದ ತಕ್ಷಣವೇ ಕರು ಅಲ್ಲಿಂದ ಕಾಲ್ಕಿತ್ತಿದೆ.

    ಬಳಿಕ ವ್ಯಕ್ತಿಯ ತಂಡ ಆ ಕೆರೆಯಲ್ಲಿ ಏನೇನಿರಬಹುದೆಮದು ಪರಿಶೀಲಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರಿಗೆ ಒಂದು ಕಡೆ ಸತ್ತು ಬಿದ್ದಿರುವ ಮೊಸಳೆಗಳು ಕಾಣಸಿಗುತ್ತವೆ. ಇನ್ನೊಂದೆಡೆ ಹಸುವೊಂದು ಕೆಸರಿನಲ್ಲಿ ಸಿಲುಕಿರುವುದು ಕಂಡಿದೆ. ಅಂತೆಯೇ ಅದನ್ನು ಕೂಡ ಅವರು ಅಪಾಯದಿಂದ ರಕ್ಷಿಸಿದ್ದಾರೆ.

    https://www.youtube.com/watch?v=oFAtu8_QNQ4