Tag: ಕೆ.ಆರ್.ಜಿ ಸ್ಟುಡಿಯೋ

  • ಕೆ.ಆರ್.ಜಿ ಸ್ಟುಡಿಯೋದಲ್ಲಿ ರಮ್ಯಾ:  ಹೊಂಬಾಳೆ ಫಿಲ್ಮ್ಸ್ ಮೂಲಕ ರಮ್ಯಾ ಚಿತ್ರರಂಗಕ್ಕೆ ಕಮ್ ಬ್ಯಾಕ್?

    ಕೆ.ಆರ್.ಜಿ ಸ್ಟುಡಿಯೋದಲ್ಲಿ ರಮ್ಯಾ: ಹೊಂಬಾಳೆ ಫಿಲ್ಮ್ಸ್ ಮೂಲಕ ರಮ್ಯಾ ಚಿತ್ರರಂಗಕ್ಕೆ ಕಮ್ ಬ್ಯಾಕ್?

    ಕೆಜಿಎಫ್ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಅವರ ಕೆ.ಆರ್.ಜಿ ಸ್ಟುಡಿಯೋಗೆ ಇಂದು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಭೇಟಿ ಮಾಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈ ಹಿಂದೆಯೂ ಕೂಡ ಇದೇ ಕೆ.ಆರ್.ಜಿ ಸ್ಟುಡಿಯೋ ನಿರ್ಮಿಸುತ್ತಿರುವ ಹೊಯ್ಸಳ ಸಿನಿಮಾದ ಶೂಟಿಂಗ್ ಸ್ಪಾಟ್ ಗೂ ರಮ್ಯಾ ಭೇಟಿ ಮಾಡಿದ್ದರು. ಹಾಗಾಗಿ ಕೆ.ಆರ್.ಜಿ ಸ್ಟುಡಿಯೋ ಅಥವಾ ಹೊಂಬಾಳೆ ಫಿಲ್ಮ್ಸ್ ಮೂಲಕ ರಮ್ಯಾ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಆಗುತ್ತಿದ್ದಾರೆ ಎನ್ನಲಾಗುತ್ತಿದೆ.

    ಪದೇ ಪದೇ ಕೆ.ಆರ್.ಜಿ ಸ್ಟುಡಿಯೋ ಮಾಲೀಕರನ್ನು ರಮ್ಯಾ ಭೇಟಿ ಆಗುತ್ತಿರುವುದರಿಂದ ಈ ಟೀಮ್ ಮೂಲಕವೇ ರಮ್ಯಾ ಸಿನಿಮಾ ಮಾಡಬಹುದು ಎನ್ನುವ ಸುದ್ದಿ ದಟ್ಟವಾಗಿದ್ದು, ಇದು ಪುನೀತ್ ಅವರ ಆಸೆಯೂ ಆಗಿತ್ತು ಎನ್ನಲಾಗಿದೆ. ಪುನೀತ್ ನಟಿಸಬೇಕಿದ್ದ, ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಬೇಕಿದ್ದ ಚಿತ್ರವೊಂದಕ್ಕೆ ರಮ್ಯಾ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಬೇಕು ಎನ್ನುವುದು ಸ್ವತಃ ಪುನೀತ್ ರಾಜ್ ಕುಮಾರ್ ಅವರ ಆಸೆಯಾಗಿತ್ತಂತೆ. ಅದನ್ನು ಹೊಂಬಾಳೆ ಈಡೇರಿಸಲಿದೆ ಎನ್ನುವುದು ಸದ್ಯದ ವರ್ತಮಾನ. ಇದನ್ನೂ ಓದಿ:ಮತ್ತೆ ಟಾಪ್‌ಲೆಸ್ ಅವತಾರದಲ್ಲಿ ಬಂದ ಉರ್ಫಿ ಜಾವೇದ್: ನೆಟ್ಟಿಗರಿಂದ ನಟಿಗೆ ಕ್ಲಾಸ್

    RAMYA

    ಇಂದು ಕೂಡ ರಮ್ಯಾ ಅವರು ಕೆ.ಆರ್.ಜಿ ಸ್ಟುಡಿಯೋ ಕಚೇರಿಗೆ ಭೇಟಿ  ನೀಡಿದ್ದಾರೆ. ಈ ಸಂದರ್ಭದಲ್ಲಿ ಖ್ಯಾತ ನಿರ್ಮಾಪಕ ಜಯಣ್ಣ, ನಿರ್ದೇಶಕ ಯೋಗಿ ಜಿ ರಾಜ್, ಪುನೀತ್ ಅವರ ಕುಟುಂಬದ ಸದಸ್ಯರೇ ಆಗಿರುವ ಚೆನ್ನ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದಾರೆ. ಈಗಾಗಲೇ ರಮ್ಯಾ ಅವರಿಗಾಗಿಯೇ ಕಥೆಯನ್ನು ಸಿದ್ಧ ಪಡಿಸುತ್ತಿದ್ದು, ಅತೀ ಶೀಘ್ರದಲ್ಲೇ ಘೋಷಣೆ ಮಾಡುವ ಸಾಧ್ಯತೆ ಇದೆ. ಆದರೆ, ಈ ಕುರಿತು ಕೆ.ಆರ್.ಜಿ ಸ್ಟುಡಿಯೋ ಯಾವುದೇ ಅಧಿಕೃತ ಮಾಹಿತಿಯನ್ನಂತೂ ನೀಡಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಕೆ.ಆರ್.ಜಿ ಸ್ಟುಡಿಯೋ ನಿರ್ಮಾಣದ ಉತ್ತರಕಾಂಡ ಸಿನಿಮಾಗೆ ಶಿವರಾಜ್ ಕುಮಾರ್ ಹೀರೋ?

    ಕೆ.ಆರ್.ಜಿ ಸ್ಟುಡಿಯೋ ನಿರ್ಮಾಣದ ಉತ್ತರಕಾಂಡ ಸಿನಿಮಾಗೆ ಶಿವರಾಜ್ ಕುಮಾರ್ ಹೀರೋ?

    ಇಂದು ಸಂಜೆ 4.47ಕ್ಕೆ ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ ಅಡಿ ಹೊಸ ಸುದ್ದಿಯನ್ನು ಕೊಡುವುದಾಗಿ ಘೋಷಣೆ ಮಾಡಿತ್ತು. ಅಂದುಕೊಂಡಂತೆ ಪೋಸ್ಟರ್ ರಿಲೀಸ್ ಮಾಡಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಸಿನಿಮಾವೊಂದು ಘೋಷಣೆ ಮಾಡಿದ್ದು, ಈ ಚಿತ್ರಕ್ಕೆ ‘ಉತ್ತರಕಾಂಡ’ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ರೋಹಿತ್ ಪದಕಿ ನಿರ್ದೇಶಕರು. ಕಾರ್ತಿಕ್ ಮತ್ತು ಯೋಗಿ ಜಿ ರಾಜ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಜನವರಿ 2023ರಿಂದ ಈ ಸಿನಿಮಾ ಶುರುವಾಗಲಿದೆ.

    ನಿನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಕುತೂಹಲ ಮೂಡಿಸುವಂತಹ ಪೋಸ್ಟರ್ ವೊಂದನ್ನು ಶೇರ್ ಮಾಡಿದ್ದರು ನಿರ್ಮಾಪಕ ಕಾರ್ತಿಕ್. ಈ ಪೋಸ್ಟರ್ ನಲ್ಲಿ ‘ಅವ್ನಪ್ನ, ಮಿರ್ಚಿ, ಮಂಡಕ್ಕಿ, ಮಾಲ್ಪುರಿ, ಮಂಡಗಿ, ಕುಂದಾ, ಪೇಡಾ, ಅರ್ಧ ಎಗ್ ರೈಸ್, ಉಳ್ಳಾಗಡ್ಡಿ, ಬದ್ನಿಕಾಯ್ ಬನ್ಇ, ಬುಲ್ಲೆಟ್ಟು, ಬಾಂಬು ಬಂದುಕು’ ಎಂದು ಪೋಸ್ಟರ್ ನಲ್ಲಿ ಬರೆಯಿಸಲಾಗಿತ್ತು. ಅಲ್ಲಿಗೆ ಈ ಸಿನಿಮಾ ಭೀಮಾ ತೀರದಲ್ಲಿ ನಡೆದ ಅಥವಾ ಆ ಪ್ರದೇಶದಲ್ಲಿ ನಡೆಯುವ ಕಥೆ ಎಂದು ಹಿಂಟ್ ಕೊಟ್ಟಿತ್ತು. ಇದು ಅದೇ ಭಾಗದ ಕಥೆ ಎನ್ನುವುದು ಗೊತ್ತಾಗಿದೆ.

    ಈ ಹಿಂದೆ ರತ್ನನ್ ಪ್ರಪಂಚ ಸಿನಿಮಾ ಮಾಡಿದ್ದ ರೋಹಿತ್ ಪದಕಿ, ಈ ಬಾರಿ ಉತ್ತರ ಕರ್ನಾಟಕ ಗ್ಯಾಂಗ್ ಸ್ಟರ್ ಕಥೆಯನ್ನು ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಶಿವರಾಜ್ ಕುಮಾರ್ ನಾಯಕ ಎನ್ನಲಾಗುತ್ತಿದೆ. ಮೊನ್ನೆಯಷ್ಟೇ ಬೈರಾಗಿ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಶಿವರಾಜ್ ಕುಮಾರ್ ಅವರು ಕೂಡ ಸಣ್ಣದೊಂದು ಸುಳಿವು ಕೊಟ್ಟಿದ್ದರು. ಹೀಗಾಗಿ ಈ ಸಿನಿಮಾದ ಹೀರೋ ಶಿವರಾಜ್ ಕುಮಾರ್ ಎನ್ನುವುದು ಪಕ್ಕಾ ಎನ್ನಲಾಗುತ್ತಿದೆ. ಇದನ್ನೂ ಓದಿ : ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್

    ಇನ್ನೂ ಆರೇಳು ತಿಂಗಳ ನಂತರ ಈ ಸಿನಿಮಾದ ಶೂಟಿಂಗ್ ಶುರುವಾಗುವುದರಿಂದ, ನಂತರದ ದಿನಗಳಲ್ಲಿ ಸಿನಿಮಾದ ಹೀರೋ ಯಾರು ಎನ್ನುವುದನ್ನು ಬಹಿರಂಗ ಪಡಿಸಬಹುದು. ಅಥವಾ ಮುಂದಿನ ತಿಂಗಳು ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬ. ಅಂದು ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ನಾಯಕನ ಅಧಿಕೃತ ಘೋಷಣೆ ಮಾಡಬಹುದು.

    Live Tv

  • ಬೆಳಗಾವಿ ಭಾಗದ ದಿಟ್ಟ ಅಧಿಕಾರಿಯ ಪಾತ್ರದಲ್ಲಿ ಧನಂಜಯ್

    ಬೆಳಗಾವಿ ಭಾಗದ ದಿಟ್ಟ ಅಧಿಕಾರಿಯ ಪಾತ್ರದಲ್ಲಿ ಧನಂಜಯ್

    ಡವ ರಾಸ್ಕಲ್ ಸಿನಿಮಾದ ಟೂರ್ ಮುಗಿಸಿಕೊಂಡು, ಸದ್ಯ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ನಟ ಧನಂಜಯ್. ಈಗ ಅವರು ತಮ್ಮ 25ನೇ ಸಿನಿಮಾ ಹೊಯ್ಸಳದ ಚಿತ್ರೀಕರಣದಲ್ಲಿ ತೊಡಗಿದ್ದು, ಈ ಚಿತ್ರದಲ್ಲಿ ಅವರದ್ದು ವಿಶೇಷ ಪಾತ್ರವಂತೆ. ಇದನ್ನೂ ಓದಿ : Exclusive – ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ನಾನಾ ಸಿನಿಮಾಗಳಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಆದರೆ, ಹೊಯ್ಸಳದಲ್ಲಿ ಅವರದ್ದು ಮತ್ತೊಂದು ರೀತಿಯ ಪೊಲೀಸ್ ಅಧಿಕಾರಿಯ ಕ್ಯಾರೆಕ್ಟರ್ ಅಂತೆ. ಬೆಳಗಾವಿ ಭಾಗದ ದಕ್ಷ ಪೊಲೀಸ್ ಅಧಿಕಾರಿಯಾಗಿ ಧನಂಜಯ್ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಇದನ್ನೂ ಓದಿ : ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಬೆಳಗಾವಿ ಭಾಗದಲ್ಲೇ ಸಿನಿಮಾದ ಕಥೆ ನಡೆಯುವುದರಿಂದ ಆ ಭಾಗದ ಸುತ್ತಮುತ್ತ ಶೂಟಿಂಗ್ ಆರಂಭವಾಗಿದೆ. ಧನಂಜಯ್ ಅವರ 25ನೇ ಸಿನಿಮಾ ಇದಾಗಿದ್ದರಿಂದ ಸಹಜವಾಗಿ ಅಭಿಮಾನಿಗಳಿಗೂ ಕುತೂಹಲ ಹೆಚ್ಚಿದೆ. ಇದನ್ನೂ ನೋಡಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ಈ ಹಿಂದೆ ಗಣೇಶ್ ಗಾಗಿ ‘ಗೀತಾ’ ಸಿನಿಮಾ ಮಾಡಿದ್ದ ನಿರ್ದೇಶಕ ವಿಜಯ್.ಎನ್ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದು, ಕೆ.ಆರ್.ಜಿ  ಸ್ಟುಡಿಯೋಸ್ ನಿರ್ಮಾಣ ಸಂಸ್ಥೆಯು ಇದನ್ನು ತಯಾರಿಸುತ್ತಿದೆ. ಈ ಹಿಂದೆ ಧನಂಜಯ್ ಅವರ ರತ್ನನ್ ಪ್ರಪಂಚ ಸಿನಿಮಾ ಮಾಡಿದ್ದು ಇದೇ ಸಂಸ್ಥೆ. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

    ಒಂದರ ಮೇಲೊಂದು ಸಿನಿಮಾಗಳನ್ನು ಒಪ್ಪಿಕೊಳ್ಳುವ ಮೂಲಕ ಧನಂಜಯ್ ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡುತ್ತಿದ್ದಾರೆ. ತಿಂಗಳಲ್ಲಿ ಐದಕ್ಕಿಂತಲೂ ಹೆಚ್ಚು ಕಥೆಗಳನ್ನು ಅವರು ಇದೀಗ ಕೇಳುತ್ತಿದ್ದಾರಂತೆ.