Tag: ಕೆ.ಆರ್.ರಮೇಶ್ ಕುಮಾರ್

  • ಮತ್ತೆ ಒಂದಾದ ಕೆ.ಹೆಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣ

    ಮತ್ತೆ ಒಂದಾದ ಕೆ.ಹೆಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣ

    ಕೋಲಾರ: ಸಿದ್ದರಾಮಯ್ಯನವರಿಗಾಗಿ ಕಾಂಗ್ರೆಸ್ ಪಕ್ಷದ ಕೆ.ಹೆಚ್.ಮುನಿಯಪ್ಪ (KH Muniyappa) ಹಾಗೂ ರಮೇಶ್ ಕುಮಾರ್ (Ramesh Kumar) ಬಣ ಮತ್ತೆ ಒಂದಾಗಿದೆ.

    ಕೋಲಾರದಲ್ಲಿ (Kolar) ಸಿದ್ದರಾಮಯ್ಯ (Siddaramaiah) ಸ್ಪರ್ಧೆಯ ವಿಚಾರವಾಗಿ ಕೆ.ಹೆಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣದ ನಡುವೆ ಮಾತಿನ ಜಟಾಪಟಿ ನಡೆದಿತ್ತು. ಇದೀಗ ಸಿದ್ದರಾಮಯ್ಯನವರಿಗಾಗಿ ಬಣ ರಾಜಕಾರಣ, ಗುಂಪುಗಾರಿಕೆ ಹಾಗೂ ಭಿನ್ನಮತ ಮರೆತು ಮತ್ತೆ ಕಾಂಗ್ರೆಸ್ ನಾಯಕರು ಒಂದಾಗಿ ಭರ್ಜರಿ ಕ್ಯಾಂಪೇನ್ ನಡೆಸುತ್ತಿದ್ದಾರೆ. ಇದನ್ನೂ ಓದಿ: `ಸತ್ಯ ಮೇವ ಜಯತೆ’ ಎಂದ ರೂಪಾ

    ಮತ್ತೆ ಒಂದಾದ ಮುಖಂಡರು ಕೋಲಾರ ತಾಲೂಕಿನ ದೊಡ್ಡಹಸಾಳ ಗ್ರಾಮದಲ್ಲಿ ಹಳ್ಳಿ ಹಳ್ಳಿಗೆ ತೆರಳಿ ಸಿದ್ದರಾಮಯ್ಯನವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ, ಸಿದ್ದರಾಮಯ್ಯನವರ ಪರವಾಗಿ ಜಿಲ್ಲಾ ಕಾಂಗ್ರೆಸ್ ನಾಯಕರು ಕ್ಷೇತ್ರ ಪ್ರವಾಸವನ್ನೂ ಕೈಗೊಂಡಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಸುದರ್ಶನ್, ಪರಿಷತ್ ಸದಸ್ಯ ಅನಿಲ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಸೇರಿದಂತೆ ಅನೇಕರು ಈ ಪ್ರವಾಸದಲ್ಲಿ ಭಾಗಿಯಾಗಿದ್ದಾರೆ.

    ಮುಖಂಡರು ಚಿಕ್ಕಹಸಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಸಂಘಟನೆಯನ್ನು ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: BJP ಕಾರ್ಯಕರ್ತರು ಮೈ ಮರೆತ್ರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ: ಪ್ರತಾಪ್ ಸಿಂಹ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ್ರೆ ಕೆಲವರಿಗೆ ಗೌರವ ಕಡಿಮೆ: ರಮೇಶ್ ಕುಮಾರ್

    ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ್ರೆ ಕೆಲವರಿಗೆ ಗೌರವ ಕಡಿಮೆ: ರಮೇಶ್ ಕುಮಾರ್

    ಕೋಲಾರ: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಕೆಲವರಿಗೆ ಗೌರವ ಕಡಿಮೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು, ಅಲ್ಲೆ ಸತ್ತರೂ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ವಿ ಅಂತಾರೆ ಎಂದು ಶಾಸಕ ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

    ಇಂದು ಎಸ್‍ಎನ್‍ಆರ್ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಯೊಂದಿಗೆ 2 ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ ವೈದ್ಯರು ಕಾಪಿ ಹೊಡೆದು ಪರೀಕ್ಷೆ ಬರೆದು ಬಂದು ಚಿಕಿತ್ಸೆ ಕೊಡುತ್ತಿಲ್ಲ. ಅವರೆಲ್ಲಾ ಮೆಡೆಲ್ ತೆಗೆದುಕೊಂಡ ಉತ್ತಮ ವೈದ್ಯರು. ನಮ್ಮ ಜನರಲ್ಲಿ ಸರ್ಕಾರಿ ಆಸ್ಪತ್ರೆಗಳೆಂದರೆ ತಾತ್ಸಾರ ಮನೋಭಾವನೆ ಮೂಡಿದೆ ಇದನ್ನು ಮೊದಲು ಹೋಗಲಾಡಿಸಬೇಕಿದೆ ಎಂದರು.

    ಸರ್ಕಾರಿ ಆಸ್ಪತ್ರೆಗಳ ಕುರಿತು ಜನರಿಗೆ ಮಾನಸಿಕವಾಗಿ ಬಂದಿರುವ ಕಾಯಿಲೆಯನ್ನು ವಾಸಿ ಮಾಡಲು ಸಾಧ್ಯವಿಲ್ಲ. ಜನ ಜಾಗೃತರಾಗದಿದ್ದಲ್ಲಿ ನಾವೇನು ಮಾಡಲು ಸಾಧ್ಯವಿಲ್ಲ. ನಾನೇನು ಅರೋಗ್ಯ ಸಚಿವನಾ, ಎಲ್ಲವನ್ನೂ ಸರಿ ಮಾಡಕ್ಕಾಗುತ್ತಾ? ಎಲ್ಲಾ ಸರಿ ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರಿ ಆಸ್ಪತ್ರೆಗಳು ಎಂದರೆ ಮೂಗು ಮುರಿಯುವ ಜನರ ವಿರುದ್ಧ ಬೇಸರ ವ್ಯಕ್ತಪಡಿಸಿದರು.

    ಫೋನ್ ಟ್ಯಾಪಿಂಗ್ ಕುರಿತು ಪ್ರತಿಕ್ರಿಯಿಸಲ್ಲ:
    ಸಭಾದ್ಯಕ್ಷ ಸ್ಥಾನ ದೊಡ್ಡದು, ನಾವು ಸಣ್ಣವರು, ಅಂತಹ ಸ್ಥಾನಕ್ಕೆ ಹೋಗಿ ಕುಳಿತುಕೊಂಡು ಬಂದ ಮೇಲೆ ಸಾರ್ವಜನಿಕ ಜೀವನದಲ್ಲಿ ಜವಾಬ್ದಾರಿಯುತವಾಗಿ ಮಾತನಾಡಬೇಕು. ಜನ ನನ್ನನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಗೌರವಯುತವಾಗಿ ನಡೆದುಕೊಳ್ಳಬೇಕು, ಜನರು ನಮ್ಮ ಮೇಲೆ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ನಾವು ಅದಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಹೀಗಾಗಿ ಫೋನ್ ಕದ್ದಾಲಿಕೆ ಕುರಿತು ಪ್ರತಿಕ್ರಿಯಿಸಲ್ಲ ಎಂದು ರಮೇಶ್ ಕುಮಾರ್ ಸ್ಪಷ್ಟಪಡಿಸಿದರು.

  • ಎತ್ತಿನ ಹೊಳೆಗೂ ದಕ್ಷಿಣ ಕನ್ನಡದ ನೀರಿನ ಸಮಸ್ಯೆಗೂ ಯಾವುದೇ ಸಂಬಂಧವಿಲ್ಲ – ರಮೇಶ್ ಕುಮಾರ್

    ಎತ್ತಿನ ಹೊಳೆಗೂ ದಕ್ಷಿಣ ಕನ್ನಡದ ನೀರಿನ ಸಮಸ್ಯೆಗೂ ಯಾವುದೇ ಸಂಬಂಧವಿಲ್ಲ – ರಮೇಶ್ ಕುಮಾರ್

    ಕೋಲಾರ: ಎತ್ತಿನ ಹೊಳೆ ನೀರಿನ ಯೋಜನೆಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ನೀರಿ ಸಮಸ್ಯೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಅವರು ಹೇಳಿದ್ದಾರೆ.

    ಇಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗೂ ಮಂಗಳೂರು ಹಾಗೂ ಧರ್ಮಸ್ಥಳದಲ್ಲಿ ಇರುವ ನೀರಿನ ಸಮಸ್ಯೆಗೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಎತ್ತಿನ ಹೊಳೆ ಯೋಜನೆ ವೇಗವಾಗಿ ಸಾಗುತ್ತಿದ್ದು, ಜೂ.12 ರಂದು ಬಯಲುಸೀಮೆಯ ಎಲ್ಲಾ ಶಾಸಕರು ಕಾಮಗಾರಿಯನ್ನು ಪರಿಶೀಲನೆ ಮಾಡಲಿದ್ದಾರೆ. ಮಂಗಳೂರಲ್ಲಿ ನೀರಿನ ಸಮಸ್ಯೆಗೂ ಎತ್ತಿನ ಹೊಳೆಗೂ ಸಂಬಂಧವಿಲ್ಲ ಕೆಲವರು ಬೇಕಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ವಿರೋಧ ಮಾಡುವರು ನಮ್ಮ ವಿರೋಧಿಗಳಲ್ಲ. ಅವರೆಲ್ಲ ನಮ್ಮ ಅಣ್ಣ ತಮ್ಮಂದಿರು ಅವರಿಗೆ ನಮ್ಮ ಸಮಸ್ಯೆ ಕುರಿತು ಮನವರಿಕೆ ಮಾಡಲಾಗುವುದೆಂದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಆಕಾಶದಿಂದ ಬೀಳುವ ನೀರು ಪಶ್ಚಿಮಘಟ್ಟಗಳ ಮೂಲಕ ಅರಬ್ಬಿ ಸಮುದ್ರಕ್ಕೆ ಸೇರುತಿತ್ತು. 65 ವರ್ಷಗಳ ಇತಿಹಾಸದ ಅಂಕಿ ಅಂಶಗಳ ಪ್ರಕಾರ ಸಕಲೇಶಪುರದ ಕೆಂಪುಹೊಳೆ, ವಾಟೆ ಹೊಳೆ, ಹೊಸ ಹೊಳೆ ಸೇರಿದಂತೆ 7 ಹೊಳೆಗಳಿದ್ದು, ಇಲ್ಲಿ ಸುಮಾರು 400 ರಿಂದ 450 ಟಿಎಂಸಿ ನೀರು ಹರಿದು ಪ್ರತಿ ವರ್ಷ ಅರಬ್ಬಿ ಸಮುದ್ರ ಸೇರುತ್ತಿದೆ. ಇಲ್ಲಿ ಸಣ್ಣದಾದ ಗೋಡೆಯನ್ನು ನಿರ್ಮಿಸಿ 24 ಟಿಎಂಸಿ ನೀರನ್ನು ಬಯಲುಸೀಮೆ ಪ್ರದೇಶಗಳಿಗೆ ಹರಿಸುವುದೇ ಎತ್ತಿನಹೊಳೆ ಯೋಜನೆ ಉದ್ದೇಶ ಎಂದರು.

    ಈ ವಿಚಾರದ ಬಗ್ಗೆ ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ಶಾಸಕರುಗಳಿಗೆ ಚಿಕ್ಕ ಆಕ್ಷೇಪವಿತ್ತು. ಅದನ್ನು ದೂರವಾಣಿ ಮೂಲಕ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

  • ಸಿಎಂ ಆಗಿರೋವಾಗ ನೀವಿರೋದು ನನ್ನ ಜೀವನದ ಅವಿಸ್ಮರಣೀಯ ಕ್ಷಣ: ಸ್ಪೀಕರ್ ಗೆ ಎಚ್‍ಡಿಕೆ ಅಭಿನಂದನೆ

    ಸಿಎಂ ಆಗಿರೋವಾಗ ನೀವಿರೋದು ನನ್ನ ಜೀವನದ ಅವಿಸ್ಮರಣೀಯ ಕ್ಷಣ: ಸ್ಪೀಕರ್ ಗೆ ಎಚ್‍ಡಿಕೆ ಅಭಿನಂದನೆ

    ಬೆಂಗಳೂರು: ನೂತನ ಸ್ಪೀಕರ್ ಆಗಿ ಆಯ್ಕೆಯಾದ ಕೆ.ಆರ್.ರಮೇಶ್‍ಕುಮಾರ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

    ಅವಿರೋಧವಾಗಿ ಆಯ್ಕೆಯಾದ ಬಳಿಕ ಸದನದಲ್ಲಿ ಮಾತನಾಡಿದ ಅವರು, ಐದು ವರ್ಷಗಳ ನಡೆಸುವ ನಮ್ಮ ಸರ್ಕಾರಕ್ಕೆ ಸೂಕ್ತ ಮಾರ್ಗವನ್ನು ತೋರಿಸಬೇಕು. ನಿಮ್ಮ ಅನುಭವ ಎಲ್ಲರಿಗೂ ಮಾದರಿಯಾಗಿರಬೇಕು. ಇಂದು ನೀವು ನಮ್ಮೊಂದಿಗೆ ನೀವಿರುವುದು ನಮ್ಮೆಲ್ಲರ ಸೌಭಾಗ್ಯ. ವಿರೋಧ ಪಕ್ಷದ ನಾಯಕರು ಸಹ ನಿಮ್ಮನ್ನು ಸರ್ವಾನುಮತದಿಂದ ಆಯ್ಕೆ ಮಾಡಿದಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ ಎಂದರು.

    1994ರಲ್ಲಿ ನೀವು ಸ್ಪೀಕರ್ ಆಗಿದ್ದಾಗ ನನ್ನ ಸ್ಥಾನದಲ್ಲಿ ನಮ್ಮ ತಂದೆಯವರಾದ ದೇವೇಗೌಡರು ಇದ್ದರು. ಇಂದು ಕಾಕತಾಳೀಯವಾಗಿ ಆ ಸ್ಥಾನದಲ್ಲಿ ನಾನಿದ್ದೇನೆ. ಹಾಗಾಗಿ ಇದು ನನ್ನ ಜೀವನದ ಅವಿಸ್ಮರಣೀಯ ಕ್ಷಣ ಅಂತಾ ಬಣ್ಣಿಸಿದ್ರು.

    ಇದೇ ವೇಳೆ ಮೈಸೂರು ರಾಜರ ಆಳ್ವಿಕೆಯನ್ನು ಮೆಲಕು ಹಾಕಿಕೊಂಡ ಎಚ್‍ಡಿಕೆ ದೇಶದಲ್ಲಿಯೇ ಮೈಸೂರು ಆಳ್ವಿಕೆಗೆ ಹೆಸರು ವಾಸಿಯಾಗಿದೆ. ಸದನದ ಘನತೆ ಗೌರವವನ್ನು ಎತ್ತಿ ಹಿಡಿಯುವುದು ನಮ್ಮ ಕರ್ತವ್ಯ ಅಂತಾ ಹೇಳಿದ್ರು.

    ವಿರೋಧ ಪಕ್ಷದ ನಾಯಕರಾದ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ನೀವು ಸ್ಪೀಕರ್ ಆಗಿ ಆಯ್ಕೆಯಾಗಿರುವುದು ನಮ್ಮಲ್ಲಿ ಸಂಭ್ರಮ ಮನೆ ಮಾಡಿದೆ. ಸ್ಪೀಕರ್ ಸ್ಥಾನ ಅತಿ ದೊಡ್ಡ ಸ್ಥಾನ ಆಗಿರುವದರಿಂದ ನಮ್ಮ ಅಭ್ಯರ್ಥಿ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ. 1994 ರಿಂದ 99ರಲ್ಲಿಯೂ ನೀವು ಸ್ಪೀಕರ್ ಆಗಿ ಕೆಲಸ ಮಾಡಿರುವುದನ್ನು ನಾವು ನೋಡಿದ್ದೇವೆ. ನಿಮಗೆ ಪಕ್ಷದ ಎಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಅಂತಾ ತಿಳಿಸಿದ್ರು.