Tag: ಕೆ.ಕೆ.ಶೈಲಜಾ

  • CPI(M) ಪಕ್ಷ ವಿರೋಧ ಹಿನ್ನೆಲೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನಿರಾಕರಿಸಿದ ಕೆ.ಕೆ ಶೈಲಜಾ

    CPI(M) ಪಕ್ಷ ವಿರೋಧ ಹಿನ್ನೆಲೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನಿರಾಕರಿಸಿದ ಕೆ.ಕೆ ಶೈಲಜಾ

    ತಿರುವನಂತಪುರಂ: ಕೇರಳದ ಮಾಜಿ ಆರೋಗ್ಯ ಸಚಿವೆ ಮತ್ತು ಭಾರತೀಯ ಕಮ್ಯುನಿಸ್ಟ್ ಪಾರ್ಟಿ ಮಾಕ್ರ್ಸಿಸ್ಟ್ (ಸಿಪಿಎಂ) ನಾಯಕಿ ಕೆ.ಕೆ ಶೈಲಜಾ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಸಿಪಿಎಂ ಪಕ್ಷ ಪ್ರಶಸ್ತಿಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

    ಶೈಲಜಾ ಕೇರಳದ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ, ನಿಫಾ ವೈರಸ್ ಮತ್ತು ಕೋವಿಡ್ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ್ದರು. ಸಾಂಕ್ರಾಮಿಕ ರೋಗಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದ ಅವರ ನಾಯಕತ್ವಕ್ಕೆ ವಿಶ್ವಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಹಾಗಾಗಿ ಸಾರ್ವಜನಿಕ ಆರೋಗ್ಯಕ್ಕಾಗಿ ಸೇವೆ ಸಲ್ಲಿಸಿದ ಕಾರಣಕ್ಕಾಗಿ ಶೈಲಜಾ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪ್ರತಿಷ್ಠಾನದಿಂದ 64ನೇ ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಇದನ್ನೂ ಓದಿ: ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ರಾರಾಜಿಸಿದ ನೂಪುರ್ ಶರ್ಮಾ ಫ್ಲೆಕ್ಸ್

    2022ರ ಜುಲೈ ಕೊನೆಯ ವಾರದಲ್ಲಿ ಶೈಲಜಾಗೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪ್ರತಿಷ್ಠಾನ ಇ-ಮೇಲ್ ಮೂಲಕ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ ತಿಳಿಸಿತ್ತು ಮತ್ತು ಪ್ರಶಸ್ತಿ ಸ್ವೀಕರಿಸುವುದಕ್ಕಾಗಿ ಅವರ ದೃಢೀಕರಣವನ್ನು ಬಯಸಿತ್ತು. ಬಳಿಕ ಈ ಬಗ್ಗೆ ಸಿಪಿಎಂನ ಕೇಂದ್ರ ಸಮಿತಿಯ ಸದಸ್ಯರಾಗಿರುವ ಶೈಲಜಾ ಪಕ್ಷದ ಹಿರಿಯರಿಗೆ ಪ್ರಶಸ್ತಿ ಬಂದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಆ ಬಳಿಕ ಸಿಪಿಎಂ ಪ್ರಶಸ್ತಿಯನ್ನು ವಿರೋಧಿಸಿದೆ. ಹಿರಿಯ ಸಿಪಿಎಂ ನಾಯಕರ ಪ್ರಕಾರ, ಶೈಲಜಾ ಅವರು ಪಕ್ಷದಿಂದ ನಿಯೋಜಿಸಲಾದ ಕರ್ತವ್ಯವನ್ನು ಮಾತ್ರ ನಿರ್ವಹಿಸಿದ್ದಾರೆ. ಇದು ವಿಶೇಷವೇನೂ ಅಲ್ಲ ಎಂದು ಪಕ್ಷವು ಅಭಿಪ್ರಾಯಪಟ್ಟಿದೆ ಹಾಗಾಗಿ ವಿರೋಧ ವ್ಯಕ್ತಪಡಿಸಿದ್ದರು ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಸರ್ಕಾರಿ ಇಲಾಖೆಯಲ್ಲಿ ಲಂಚ ಇಲ್ಲದೇ ಕೆಲಸ ನಡೆಯಲ್ಲ; ಭ್ರಷ್ಟಾಚಾರಕ್ಕೆ ಮೋದಿ ಬೆಂಬಲ – ಸಿದ್ದು ಆರೋಪ

    ನಿಫಾ ಮತ್ತು ಕೊರೊನಾ ವಿರುದ್ಧದ ಹೋರಾಟವು ಸರ್ಕಾರ ಜಂಟಿ ಪ್ರಯತ್ನವಾಗಿದೆ ಎಂದು ಪಕ್ಷವು ನಂಬುತ್ತದೆ. ಇದು ವೈಯಕ್ತಿಕ ಪ್ರಯತ್ನವಲ್ಲ, ಆದ್ದರಿಂದ ಅವರು ಪ್ರಶಸ್ತಿಯನ್ನು ಸ್ವೀಕರಿಸಬಾರದು ಎಂಬ ಅಭಿಪ್ರಾಯ ಪಕ್ಷದ ನಾಯಕರಲ್ಲಿ ವ್ಯಕ್ತವಾಗಿತ್ತು. ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಏಷ್ಯನ್ ನೊಬೆಲ್ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಸಮರ್ಥವಾಗಿ ನಿಭಾಯಿಸಿದ್ದ ಶೈಲಜಾರಿಗೆ ಕೊಕ್- ಕೇರಳ ಸಿಎಂ ಹೊಸ ಕ್ಯಾಬಿನೆಟ್

    ಕೊರೊನಾ ಸಮರ್ಥವಾಗಿ ನಿಭಾಯಿಸಿದ್ದ ಶೈಲಜಾರಿಗೆ ಕೊಕ್- ಕೇರಳ ಸಿಎಂ ಹೊಸ ಕ್ಯಾಬಿನೆಟ್

    – ಕಳೆದ ಬಾರಿಯ ಎಲ್ಲ ಸಚಿವರು ಔಟ್, ಹೊಸಬರು, ಯುವಕರಿಗೆ ಆದ್ಯತೆ

    ತಿರುವನಂತಪುರಂ: ಕೇರಳದಲ್ಲಿ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್(ಎಲ್‍ಡಿಎಫ್) ಸರ್ಕಾರ ಪೂರ್ಣ ಬಹುಮತದಿಂದ ಮತ್ತೆ ಅಧಿಕಾರಕ್ಕೆ ಬಂದಿದ್ದು, ಎರಡನೇ ಬಾರಿ ಪಿಣರಾಯಿ ವಿಜಯನ್ ಮುಖ್ಯಮಂತ್ರಿಯಾಗುತ್ತಿದ್ದಾರೆ. ಆದರೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎರಡು ದಿನ ಇರುವಾಗಲೇ ಕ್ಯಾಬಿನೆಟ್ ಕುರಿತು ಅಚ್ಚರಿಯ ವಿಷಯ ಹೊರಗೆ ಬಿದ್ದಿದೆ. ಕೊರೊನಾ ಸಮರ್ಥವಾಗಿ ನಿರ್ವಹಿಸುವ ಮೂಲಕ ವಿಶ್ವಸಂಸ್ಥೆ ಸೇರಿದಂತೆ ವಿವಿಧ ಗಣ್ಯರ ಮೆಚ್ಚುಗೆಗೆ ಪಾತ್ರವಾಗಿದ್ದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರನ್ನು ಈ ಬಾರಿ ಕ್ಯಾಬಿನೆಟ್‍ನಿಂದ ಹೊರಗಿಡಲಾಗುತ್ತಿದೆ.

    ಕಳೆದ ಬಾರಿಯ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದಲ್ಲಿ ಆರೋಗ್ಯ ಸಚಿವೆಯಾಗಿದ್ದ ಕೆ.ಕೆ.ಶೈಲಜಾ ಅವರು 2021ರ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 60 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಅಲ್ಲದೆ ಕಳೆದ ಬಾರಿ ಆರೋಗ್ಯ ಸಚಿವೆಯಾಗಿದ್ದಾಗ ಕೊರೊನಾ ಸಮರ್ಥವಾಗಿ ನಿಭಾಯಿಸಿದ್ದರು. ಈ ಬಗ್ಗೆ ವಿಶ್ವಸಂಸ್ಥೆಯಾದಿಯಾಗಿ ಪ್ರಮುಖ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೂ ಈ ಬಾರಿಯ ಕ್ಯಾಬಿನೆಟ್‍ನಲ್ಲಿ ಇವರನ್ನು ಕೈ ಬಿಡಲಾಗಿದೆ.

    ಈ ಕುರಿತು ಸಿಪಿಐ(ಎಂ) ರಾಜ್ಯ ಸಮಿತಿ ಹೇಳಿಕೆ ನೀಡಿದ್ದು, ಆರೋಗ್ಯ ಸಚಿವೆ ಶೈಲಜಾ ಸೇರಿ ಪ್ರಸ್ತುತ ಈಗಿರುವ ಎಲ್ಲ ಮಂತ್ರಿಗಳನ್ನು ಕೈ ಬಿಡಲಾಗಿದೆ. ಪಕ್ಷವು ಎಂ.ಬಿ.ರಾಜೇಶ್ ಅವರನ್ನು ಸ್ಪೀಕರ್ ಅಭ್ಯರ್ಥಿಯಾಗಿ ಘೋಷಿಸಿದೆ. ಶೈಲಜಾ ಅವರನ್ನು ಸರ್ಕಾರದ ಮುಖ್ಯ ಸಚೇತಕರಾಗಿ (ವಿಪ್) ಮಾಡಲಾಗಿದೆ. ಟಿ.ಪಿ.ರಾಮಕೃಷ್ಣನ್ ಅವರನ್ನು ಪಕ್ಷದ ಶಾಸಕಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.

    ಪಿಣರಾಯಿ ವಿಜಯನ್ ಅವರನ್ನು ಸಿಎಂ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ, ಎಂ.ವಿ.ಗೋವಿಂದನ್, ಕೆ.ರಾಧಾಕೃಷ್ಣನ್, ಕೆ.ಎನ್.ಬಾಲಗೋಪಾಲ್, ಪಿ.ರಾಜೀವ್, ವಿ.ಎನ್.ವಾಸವನ್, ಸಾಜಿ ಚೆರಿಯನ್, ವಿ.ಶಿವಂಕುಟ್ಟಿ, ಮೊಹಮ್ಮದ್ ರಿಯಾಜ್, ಡಾ.ಆರ್.ಬಿಂದು, ವೀಣಾ ಜಾರ್ಜ್ ಹಾಗೂ ವಿ.ಅಬ್ದುಲ್ ರೆಹ್ಮಾನ್ ಅವರನ್ನು ಸಚಿವರಾಗಿ ಘೋಷಿಸಲಾಗಿದೆ ಎಂದು ಸಿಪಿಐ(ಎಂ) ತಿಳಿಸಿದೆ.

    ಶೈಲಜಾ ಅವರನ್ನು ಕ್ಯಾಬಿನೆಟ್‍ನಿಂದ ಹೊರಗಿರಿಸಿದ್ದಕ್ಕೆ ಶಾಸಕ ಎ.ಎನ್.ಶಮ್ಸೀರ್ ಪ್ರತಿಕ್ರಿಯಿಸಿ, ಇದು ನಮ್ಮ ಪಕ್ಷದ ನಾಯಕರು ಕೈಗೊಂಡಿರುವ ಸಾಮೂಹಿಕ ನಿರ್ಧಾರವಾಗಿದೆ. ಒಬ್ಬ ವ್ಯಕ್ತಿಯನ್ನು ಪಕ್ಷದಿಂದ ಹೊರಗಿಟ್ಟು ನೋಡಬೇಡಿ, ಈ ಕುರಿತು ಪಕ್ಷದ ನಾಯಕರನ್ನೇ ಪ್ರಶ್ನಿಸಬೇಕು. ಹೊಸ ಕ್ಯಾಬಿನೆಟ್‍ನಲ್ಲಿ ಪಿಣರಾಯಿ ವಿಜಯನ್ ಹೊರತುಪಡಿಸಿ ಬೇರೆ ಯಾವ ಸಚಿವರೂ ಇಲ್ಲ. ಎಲ್ಲ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಇದು ಯುವಕರ ಹಾಗೂ ಹಿರಿಯರ ಮಿಶ್ರಣವಾಗಿದೆ ಎಂದು ವಿವರಿಸಿದ್ದಾರೆ.

    ಎಲ್‍ಡಿಎಫ್ ವಕ್ತಾರ ಎ.ವಿಜಯರಾಘವನ್ ಈ ಕುರಿತು ಸೋಮವಾರವೇ ಮಾಹಿತಿ ನೀಡಿದ್ದು, ಮೇ 20ರಂದು ಪಿಣರಾಯಿ ವಿಜಯನ್ ಸೇರಿ 21 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರಲ್ಲಿ 12 ಜನ ಸಿಪಿಐ(ಎಂ), ನಾಲ್ವರು ಸಿಪಿಐ, ಕೇರಳ ಕಾಂಗ್ರೆಸ್(ಎಂ), ಜೆಡಿಎಸ್ ಹಾಗೂ ಎನ್‍ಸಿಪಿಯಿಂದ ತಲಾ ಒಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉಳಿದಂತೆ ನಾಲ್ಕು ಏಕ ಶಾಸಕರ ಪಕ್ಷಗಳು ಎರಡು ಕ್ಯಾಬಿನೆಟ್ ಹುದ್ದೆಗಳನ್ನು ಹಂಚಿಕೊಳ್ಳಲಿದ್ದು, ಪ್ರತಿ ಪಕ್ಷವು ತಲಾ 2.5 ವರ್ಷಗಳ ಅವಧಿಯನ್ನು ಪಡೆಯುತ್ತದೆ ಎಂದು ತಿಳಿಸಿದ್ದರು.

  • ಕೇರಳದಲ್ಲಿ ಕೋವಿಡ್ 2ನೇ ಅಲೆ – ಲಾಕ್‍ಡೌನ್ ಎಚ್ಚರಿಕೆ ನೀಡಿದ ಸಚಿವೆ ಕೆ.ಕೆ.ಶೈಲಜಾ

    ಕೇರಳದಲ್ಲಿ ಕೋವಿಡ್ 2ನೇ ಅಲೆ – ಲಾಕ್‍ಡೌನ್ ಎಚ್ಚರಿಕೆ ನೀಡಿದ ಸಚಿವೆ ಕೆ.ಕೆ.ಶೈಲಜಾ

    ತಿರುವನಂತಪುರಂ: ಕೋವಿಡ್‍ನಿಂದ ದಿನೇ ದಿನೇ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕೊರೊನಾದ ಎರಡನೇ ಅಲೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮಾಡಬಹುದು ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೇರಳದ ಆರೋಗ್ಯ ಸಚಿವೆಗೆ ಗೌರವ ಸಲ್ಲಿಸಿದ ವಿಶ್ವಸಂಸ್ಥೆ

    ಕೊರೊನಾ ಕಾಣಿಸಿಕೊಂಡ ಆರಂಭದಲ್ಲಿ ಕೇರಳ ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಉತ್ತಮ ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ ಈಗ ಜನರು ಬೇಜವಾಬ್ದಾರಿಯಿಂದ ಕೊರೊನಾ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದ್ದಾರೆ. ಇದರಿಂದ ಕೊರೊನಾ ಗಂಭೀರತೆಯನ್ನು ಜನರು ಮರೆಯುತ್ತಿದ್ದಾರೆ. ಹೀಗೆ ಮುಂದುವರಿದರೆ ಎರಡನೇ ಬಾರಿಗೆ ಲಾಕ್‍ಡೌನ್ ಹೇರುವ ಜೊತೆಗೆ ಮತ್ತಷ್ಟು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಮತ್ತೆ ಲಾಕ್‍ಡೌನ್ ತಪ್ಪಿಸಲು ರಾಜ್ಯವು ಉತ್ತಮವಾಗಿ ಪ್ರಯತ್ನಿಸುತ್ತಿದೆ. ಆದರೆ ಜನರು ಅಧಿಕಾರಿಗಳೊಂದಿಗೆ ಸಹಕರಿಸಲು ಸಿದ್ಧರಿಲ್ಲದಿದ್ದರೆ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್‍ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಕೆ.ಕೆ.ಶೈಲಜಾ ತಿಳಿಸಿದ್ದಾರೆ.

    ರಾಜ್ಯದಲ್ಲಿ ಇದುವರೆಗೆ 1,67,939 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರಲ್ಲಿ 1,14,530 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇನ್ನೂ ಕೊರೊನಾಗೆ ರಾಜ್ಯದಲ್ಲಿ 656 ಜನರು ಬಲಿಯಾಗಿದ್ದಾರೆ. ಇದು ಒಟ್ಟು ಪ್ರಕರಣಗಳಲ್ಲಿ ಶೇ.0.39 ಆಗಿದೆ ಎಂಬ ಮಾಹಿತಿ ನೀಡಿದರು.

    20-40 ವಯಸ್ಸಿನವರಲ್ಲಿ ಹೆಚ್ಚಾಗಿ ಕೊರೊನಾ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕೋವಿಡ್‍ನಿಂದ ಸಾವನ್ನಪ್ಪಿದವರಲ್ಲಿ ಶೇ. 72 ರಷ್ಟು 60 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಕೇರಳವು ಮತ್ತಷ್ಟು ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಎಂದು ಇದು ತೋರಿಸುತ್ತದೆ.

    ಕೊರೊನಾ ಸೋಂಕು ಕಾಣಿಸಿಕೊಂಡ 10-15 ದಿನಗಳ ನಂತರ ಮತ್ತೆ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ. ಆಗ ವರದಿಯಲ್ಲಿ ನೆಗೆಟಿವ್ ಬಂದರೆ ಮಾತ್ರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ. ಆದರೆ ಕೇಂದ್ರದ ಸಲಹೆಯಂತೆ ರೋಗಿಗೆ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಳ್ಳದಿದ್ದರೆ 4 ಅಥವಾ 5 ದಿನಗಳಲ್ಲಿ ಕೋವಿಡ್ ರೋಗಿಯನ್ನು ಬಿಡುಗಡೆ ಮಾಡಬಹುದು ಎಂದು ಸಚಿವರು ತಿಳಿಸಿದರು.

    ವಿಶ್ವಸಂಸ್ಥೆ ಗೌರವಿಸಿತ್ತು:
    ಹೆಮ್ಮಾರಿ ಕೋವಿಡ್-19 ಹರಡುವುದನ್ನು ನಿಯಂತ್ರಿಸಿದ್ದಕ್ಕಾಗಿ ಕೇರಳ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಟೀಚರ್ ಅವರಿಗೆ ಈ ಹಿಂದೆ ವಿಶ್ವಸಂಸ್ಥೆ ವಿಶೇಷ ಗೌರವ ಸಲ್ಲಿಸಿತ್ತು. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹಾಗೂ ಸಾಮಾನ್ಯ ಸಭೆಯ ಅಧ್ಯಕ್ಷರ ನೇತೃತ್ವ ವಹಿಸಿದ್ದ ಸಾರ್ವಜನಿಕ ಸೇವಾ ದಿನಾಚರಣೆಯಲ್ಲಿ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಟೀಚರ್ ಪಾಲ್ಗೊಂಡಿದ್ದರು. ಜೂನ್ 23ರಂದು ವರ್ಚುವಲ್ ಕಾರ್ಯಕ್ರಮದಲ್ಲಿ ಕೋವಿಡ್ ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ವಿವಿಧ ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಭಾರತದಿಂದ ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರಿಗೆ ಮಾತ್ರ ಆಹ್ವಾನ ಸಿಕ್ಕಿತ್ತು.

  • ಕೇರಳದ ಆರೋಗ್ಯ ಸಚಿವೆಗೆ ಗೌರವ ಸಲ್ಲಿಸಿದ ವಿಶ್ವಸಂಸ್ಥೆ

    ಕೇರಳದ ಆರೋಗ್ಯ ಸಚಿವೆಗೆ ಗೌರವ ಸಲ್ಲಿಸಿದ ವಿಶ್ವಸಂಸ್ಥೆ

    ನ್ಯೂಯಾರ್ಕ್: ಹೆಮ್ಮಾರಿ ಕೋವಿಡ್-19 ಹರಡುವುದನ್ನು ನಿಯಂತ್ರಿಸಿದ್ದಕ್ಕಾಗಿ ಕೇರಳ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಟೀಚರ್‌ ಅವರಿಗೆ ವಿಶ್ವಸಂಸ್ಥೆ ವಿಶೇಷ ಗೌರವ ಸಲ್ಲಿಸಿದೆ.

    ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹಾಗೂ ಸಾಮಾನ್ಯ ಸಭೆಯ ಅಧ್ಯಕ್ಷರ ನೇತೃತ್ವ ವಹಿಸಿದ್ದ ಸಾರ್ವಜನಿಕ ಸೇವಾ ದಿನಾಚರಣೆಯಲ್ಲಿ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಟೀಚರ್‌ ಪಾಲ್ಗೊಂಡಿದ್ದರು. ಜೂನ್ 23ರಂದು ವರ್ಚುವಲ್ ಕಾರ್ಯಕ್ರಮದಲ್ಲಿ ಕೋವಿಡ್ ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ವಿವಿಧ ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಭಾರತದಿಂದ ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರಿಗೆ ಮಾತ್ರ ಆಹ್ವಾನ ಸಿಕ್ಕಿತ್ತು.

    ಈ ವೇಳೆ ಮಾತನಾಡಿದ ಕೆ.ಕೆ.ಶೈಲಜಾ ಟೀಚರ್‌, 2018-19ರ ನಡುವೆ ನಿಪಾ ವೈರಸ್ ಮತ್ತು ಎರಡು ಪ್ರವಾಹಗಳು ಸಂಭವಿಸಿ ರಾಜ್ಯವನ್ನು ತಲ್ಲಣಗೊಳಿಸಿತ್ತು. ಈ ವೇಳೆ ಕೈಗೊಂಡ ತಂತ್ರಗಳು ಕೋವಿಡ್-19 ಅನ್ನು ಸಮಯೋಚಿತವಾಗಿ ನಿಭಾಯಿಸಲು ಸಹಾಯಕವಾಯಿತು ಎಂದು ತಿಳಿಸಿದರು.

    “ವುಹಾನ್‍ನಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾದ ತಕ್ಷಣವೇ ಎಚ್ಚೆತ್ತ ಕೇರಳ ಸರ್ಕಾರ ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಮಾಹಿತಿ, ಸೂಚನೆಯನ್ನು ಅನುಸರಿಸಲು ಆರಂಭಿಸಿತು. ವಿದೇಶದಿಂದ ಪ್ರತಿಯೊಬ್ಬರನ್ನ ಕ್ವಾರಂಟೈನ್ ಮಾಡುವುದು ಸೇರಿದಂತೆ ವಿವಿಧ ನಿಯಮಗಳನ್ನು ಅನುಸರಿಸಿದ್ದರಿಂದ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿತು” ಎಂದು ವಿವರಿಸಿದರು.

    ಕಾರ್ಯಕ್ರಮದಲ್ಲಿ ಕೆ.ಕೆ.ಶೈಲಜಾ ಹಾಗೂ ಕೊರೊನಾ ನಿಯಂತ್ರಣಕ್ಕೆ ನಿರ್ಣಾಯಕ ಪಾತ್ರ ವಹಿಸಿರುವ ವಿವಿಧ ದೇಶಗಳ ಪ್ರತಿನಿಧಿಗಳಿಗೆ ವಿಶ್ವಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿ, ಗೌರವ ಸಲ್ಲಿಸಿತು. ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಸಾಮಾನ್ಯ ಸಭೆಯ ಅಧ್ಯಕ್ಷ ಟಿಜ್ಜನಿ ಮೊಹಮ್ಮದ್ ಬಂಡೆ, ಇಥಿಯೋಪಿಯಾದ ಅಧ್ಯಕ್ಷ ಸಾಹ್ಲೆ ವರ್ಕ್ ಸೂಡ್, ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಡೆನೊಮಮ್ ಗೆಬ್ರಿಯೇಶಿಯಸ್, ವಿಶ್ವ ಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ಉಪ ಕಾರ್ಯದರ್ಶಿ ಲಿಯು ಶೆನ್ಮಿನ್, ಕೊರಿಯಾದ ಆಂತರಿಕ ಮತ್ತು ಭದ್ರತಾ ಸಚಿವ ಚಿನ್ ಯಂಗ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.