Tag: ಕೆ. ಗೋಪಾಲಯ್ಯ

  • ಧರ್ಮಸ್ಥಳ ಪ್ರಕರಣ; ಎನ್‌ಐಎ ತನಿಖೆಗೆ ಶಾಸಕ ಗೋಪಾಲಯ್ಯ ಒತ್ತಾಯ

    ಧರ್ಮಸ್ಥಳ ಪ್ರಕರಣ; ಎನ್‌ಐಎ ತನಿಖೆಗೆ ಶಾಸಕ ಗೋಪಾಲಯ್ಯ ಒತ್ತಾಯ

    ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ (K Gopalaiah) ನೇತೃತ್ವದಲ್ಲಿ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಧರ್ಮಸ್ಥಳ ಚಲೋ (Dharmasthala Chalo) ಯಾತ್ರೆ ಪ್ರಾರಂಭವಾಗಿದೆ.

    `ನಮ್ಮ ನಡಿಗೆ-ಧರ್ಮದೆಡೆಗೆ’ ಎಂಬ ಘೋಷ ವಾಕ್ಯದಡಿ ಧರ್ಮಸ್ಥಳ ಚಲೋ ಯಾತ್ರೆಯನ್ನು ಆಯೋಜಿಸಲಾಗಿದ್ದು, ಸೋಮವಾರ ಬೆಳಗ್ಗೆ ರಾಣಿ ಅಬ್ಬಕ್ಕ ಆಟದ ಮೈದಾನದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ನೂರಾರು ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದರು. ಇದನ್ನೂ ಓದಿ: ಮೈಲಾರಿ ಹೋಟೆಲ್‌ನಲ್ಲಿ ಅಚ್ಚುಮೆಚ್ಚಿನ ದೋಸೆ ಸವಿದ ಸಿಎಂ

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ನಾವೆಲ್ಲ ಬಸ್‌ಗಳಲ್ಲಿ ಧರ್ಮಸ್ಥಳಕ್ಕೆ ಹೋಗಬೇಕೆಂದುಕೊಂಡಿದ್ದೆವು. ಆದರೆ ಬಸ್ ತಡೆಯುವ ಸಾಧ್ಯತೆ ಇರುವುದರಿಂದ ಕಾರುಗಳು ಮತ್ತು ಟೆಂಪೊ ಟ್ರಾವೆಲ್ಸ್ ಮೂಲಕ ಹೊರಟಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಜಮೀರ್‌ಗೆ 2.5 ಕೋಟಿ ಸಾಲ – ಲೋಕಾ ಪೊಲೀಸರಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ

    ನಮ್ಮ ಧರ್ಮ ಉಳಿಯಬೇಕು, ಅದಕ್ಕಾಗಿ ಈ ಹೋರಾಟ ಪ್ರಾರಂಭವಾಗಿದೆ. ಕಳೆದ ಒಂದುವರೆ ತಿಂಗಳಿಂದ ಮಂಜುನಾಥೇಶ್ವರ ಮತ್ತು ಅಣ್ಣಪ್ಪ ಸ್ವಾಮಿಯ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಇದರ ಹಿಂದೆ ಯಾರಿದ್ದಾರೆ ಮತ್ತು ಯಾರು ಷಡ್ಯಂತ್ರ ಮಾಡಿದ್ದಾರೆ ಎಂಬುದು ಜನತೆಗೆ ತಿಳಿಯಬೇಕು. ಹಾಗಾಗಿ ಇದನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

    ಎಸ್‌ಐಟಿಗಿಂತ ಎನ್‌ಐಎ (NIA) ತನಿಖೆ ಆದರೆ ಇದರ ಹಿಂದೆ ಯಾರಿದ್ದಾರೆ ಎಂಬುದು ತಿಳಿಯುತ್ತದೆ. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆದಿರುವಂತಹ ಪಿತೂರಿ. ಹಾಗಾಗಿ ಎನ್‌ಐಎ ತನಿಖೆ ಸೂಕ್ತ ಎಂದರು.

  • ಸಿಎಂ, ಡಿಸಿಎಂ, ರಾಜೀನಾಮೆಗೆ ಒತ್ತಾಯಿಸಿ ಜೂ. 17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ

    ಸಿಎಂ, ಡಿಸಿಎಂ, ರಾಜೀನಾಮೆಗೆ ಒತ್ತಾಯಿಸಿ ಜೂ. 17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ

    – 11 ಜನರ ಸಾವಿಗೆ ನ್ಯಾಯ ಒದಗಿಸಿ – ಧೀರಜ್ ಮುನಿರಾಜು

    ಬೆಂಗಳೂರು: ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಜೂನ್ 17 ರಂದು ಬೆಳಿಗ್ಗೆ 10:30 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ (K Gopalaiah) ಅವರು ತಿಳಿಸಿದ್ದಾರೆ.

    ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಪತ್ರಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 10 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

    ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆದ ದುರ್ಘಟನೆಯು ಇತಿಹಾಸದಲ್ಲಿ ಈ ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆ ಎಂದು ಅವರು ವಿಶ್ಲೇಷಿಸಿದರು. ಕಾಲ್ತುಳಿತದಿಂದ 11 ಜನರು ಸಾವಿಗೀಡಾಗಿದ್ದು, ಇದು ರಾಜ್ಯಕ್ಕೆ ದೊಡ್ಡ ಕಳಂಕ ಎಂದು ಗೋಪಾಲಯ್ಯ ತಿಳಿಸಿದರು. ಇದನ್ನೂ ಓದಿ: ನಿಖಿಲ್ ಪಟ್ಟಾಭಿಷೇಕಕ್ಕೂ ಮುನ್ನ ರಾಜ್ಯ ಪ್ರವಾಸದ ಪರೀಕ್ಷೆ – ನಾಳೆಯಿಂದ ಮೊದಲ ಹಂತದ ಟೂರ್

     

    ಆರ್‌ಸಿಬಿ (RCB) ಗೆದ್ದ ಸಂದರ್ಭದಲ್ಲಿ ಇಡೀ ರಾಜ್ಯಾದ್ಯಂತ ಪೊಲೀಸ್ ಭದ್ರತೆಯಲ್ಲಿ ಅಭಿಮಾನಿಗಳು ಸಂಭ್ರಮಿಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರವು ಗೌರವ ಕೊಡುವ ಸಂಬಂಧ ಎರಡು ಕಾರ್ಯಕ್ರಮಗಳನ್ನು ಏರ್ಪಡಿಸಿತ್ತು. ಈ ಕಾರ್ಯಕ್ರಮಗಳು ಬೇಡವೆಂದು ಪೊಲೀಸ್ ಇಲಾಖೆ ಪತ್ರದ ಮೂಲಕ ತಿಳಿಸಿದರೂ ಸಿಎಂ ರವರು ಕಾರ್ಯಕ್ರಮ ಮಾಡಬೇಕು. ಆಟಗಾರರಿಗೆ ಗೌರವ ಕೊಡಬೇಕು ಎಂದು ಸೂಚಿಸಿದರು. ಅದು ಅವರಿಗೆ ಗೌರವ ಕೊಡುವ ಕಾರ್ಯಕ್ರಮವಾಗಿರಲಿಲ್ಲ. ಆಟಗಾರರನ್ನು ಅವಮಾನಿಸುವ ಕಾರ್ಯಕ್ರಮವಾಗಿತ್ತು ಎಂದು ಗೋಪಾಲಯ್ಯ ಟೀಕಿಸಿದರು.

    167 ಕೋಟಿಯ ಲೆಕ್ಕ ಕೊಡಿ
    ಕಾಲ್ತುಳಿತವನ್ನು ಮರೆಮಾಚುವ ಸಲುವಾಗಿ ಮತ್ತೊಮ್ಮೆ ಜಾತಿಗಣತಿಯನ್ನು ಮಾಡಲು ಸರ್ಕಾರ ನಿರ್ಧರಿಸಿದೆ. ಅದನ್ನು ನಾವು ಸ್ವಾಗತ ಮಾಡುತ್ತೇವೆ. ಆದರೆ ಹಿಂದಿನ ಜನಗಣತಿಗೆ ರಾಜ್ಯದ ಜನರ ತೆರಿಗೆ ಹಣದಿಂದ 167 ಕೋಟಿ ಹಣ ವೆಚ್ಚ ಭರಿಸಿದ್ದು, ಅದರ ಲೆಕ್ಕವನ್ನು ಸಾರ್ವಜನಿಕರಿಗೆ ನೀಡಬೇಕು ಎಂದು ಕೆ. ಗೋಪಾಲಯ್ಯ ಅವರು ಆಗ್ರಹಿಸಿದರು.

     

    ಒಂದು ಲಕ್ಷಕ್ಕಿಂತ ಹೆಚ್ಚಿನ ಅಭಿಮಾನಿಗಳು ಸೇರಿದ್ದರೂ ವಿಧಾನಸೌಧದ ಬಳಿ ಆಯೋಜಿಸಿದ್ದ ಕಾರ್ಯಕ್ರಮವನ್ನು ನೋಡಲು ಆಗಲಿಲ್ಲ. ಇದೊಂದು ಪ್ರಚಾರಕ್ಕೆಂದೇ ಮಾಡಿರುವ ಕಾರ್ಯಕ್ರಮವಾಗಿದೆ ಎಂದು ಅವರು ಆರೋಪಿಸಿದರು.

    ಮಧ್ಯಾಹ್ನ ಸುಮಾರು 3 ಗಂಟೆಗೆ ಕಾಲ್ತುಳಿತದಿಂದ ಒಂದು ಸಾವಾಗಿದ್ದು, ಮುಖ್ಯಮಂತ್ರಿಗಳಿಗೆ ಆ ವಿಷಯವು ಸಂಜೆ 5 ಗಂಟೆಗೆ ತಿಳಿಯುತ್ತದೆ ಎಂದರೆ ಹೇಗೆ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.
    ವಿಧಾನ ಸೌಧದ ಮುಂದೆ ಕಾರ್ಯಕ್ರಮ ಆಯೋಜಿಸುವ ಮೊದಲು ಎಲ್ಲಾ ಸಿದ್ಧತೆ ಮಾಡಿಕೊಂಡು ಕಾರ್ಯಕ್ರಮವನ್ನು ಆಯೋಜಿಸುವ ಬದಲು ತರಾತುರಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಮೂಲಕ 11 ಜನರ ಬಲಿಯನ್ನು ಕಾಂಗ್ರೆಸ್ ಸರ್ಕಾರವು ಪಡೆದಿದೆ ಎಂದು ಅವರು ಆರೋಪಿಸಿದರು. ಇದನ್ನೂ ಓದಿ: ಅರಣ್ಯ ಇಲಾಖೆಯ ಗುತ್ತಿಗೆ ನೌಕರ ಸಂಶಯಾಸ್ಪದ ಸಾವು – DRF, RFO ಸೇರಿ ಐವರ ವಿರುದ್ಧ ಎಫ್‌ಐಆರ್‌

    ಸರ್ಕಾರದ ವೈಫಲ್ಯಗಳನ್ನು ಮರೆಮಾಚುವ ಸಲುವಾಗಿ ಪೊಲೀಸ್ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಭದ್ರತೆಯ ವೈಫಲ್ಯವೆಂದು ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ಗೋಪಾಲಯ್ಯ ಆಕ್ಷೇಪಿಸಿದರು.

    11 ಜನರ ಸಾವಿಗೆ ನ್ಯಾಯ ಒದಗಿಸಿ – ಧೀರಜ್ ಮುನಿರಾಜು
    ಸರ್ಕಾರದ ಮಂತ್ರಿಗಳು, ಶಾಸಕರು ಅಭಿಮಾನಿಗಳಾಗಿ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಲು ಹೋಗಿದ್ದೇವೆ. ಒಂದು ಕ್ರಿಕೆಟ್ ಪಂದ್ಯದ ಸಂಭ್ರಮಾಚರಣೆಗೆ ಹೋಗುವುದು ತಪ್ಪಲ್ಲ. ಸರ್ಕಾರ ಕಾರ್ಯಕ್ರಮ ಆಯೋಜಿಸುವ ಮೊದಲು ಪೊಲೀಸ್ ಭದ್ರತೆ, ಇನ್ನಿತರೆ ಸಿದ್ಧತೆಗಳನ್ನು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಏಕೆ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಪ್ರಶ್ನಿಸಿದರು.

    ಡಿ.ಪಿ.ಎ.ಆರ್. ಕಾರ್ಯದರ್ಶಿಯವರು ಮಾಧ್ಯಮದ ಮೂಲಕ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ನಾವು ಕಾರ್ಯಕ್ರಮವನ್ನು ರೂಪಿಸಿದ್ದೇವೆ; ದಯವಿಟ್ಟು ಸಾರ್ವಜನಿಕರು ಸ್ಟೇಡಿಯಂಗೆ ಬರಬೇಕು ಎಂದು ಹೇಳಿಕೆಯನ್ನು ನೀಡಿದ್ದಾರೆ. ಅದೇ ರೀತಿ ಡಿಸಿಎಂ ಅವರು ಕೂಡ ಹೇಳಿದ್ದಾರೆ. ಆದರೆ ಆರ್.ಸಿ.ಬಿ ತಂಡವು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದಕ್ಕೆ ಅವರನ್ನು ಬಂಧಿಸಿದ್ದಾರೆ. ಮೇಲೆ ಹೇಳಿಕೆ ನೀಡಿರುವವರನ್ನು ಏಕೆ ಬಂಧಿಸಿಲ್ಲ ಎಂದು ಅವರು ಕೇಳಿದರು.

    ಈ ದೇಶದಲ್ಲಿ ಒಂದು ರಾಜ್ಯದಲ್ಲಿ ಒಂದೊಂದು ನ್ಯಾಯವಿದೆ ಎಂದು ನನಗೆ ತಿಳಿದಿಲ್ಲ. ಆದರೆ ಇಡೀ ದೇಶಕ್ಕೆ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೋರಾಟ ಮಾಡಿದೆ. ಇಂದು ಇಡೀ ದೇಶಕ್ಕೆ, ನಾಗರೀಕರಿಗೆ, ಶಾಸಕರಿಗೆ, ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಒಂದೇ ಕಾನೂನು ಇರಬೇಕು. ಯಾರ ವೈಫಲ್ಯದಿಂದ ಈ ಸಾವಾಗಿದೆಯೋ ಅಷ್ಟು ಜನರ ಮೇಲೆ ಕ್ರಮತೆಗೆದುಕೊಳ್ಳಲು ಮತ್ತು 11 ಜನರ ಸಾವಿಗೆ ನ್ಯಾಯಕೊಡಿಸುವ ಸಲುವಾಗಿ ಈ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

  • ‘ಮಾಜರ್’ ಸಿನಿಮಾ ಹಾಡು ರಿಲೀಸ್ ಮಾಡಿದ ಸಚಿವ ಕೆ.ಗೋಪಾಲಯ್ಯ

    ‘ಮಾಜರ್’ ಸಿನಿಮಾ ಹಾಡು ರಿಲೀಸ್ ಮಾಡಿದ ಸಚಿವ ಕೆ.ಗೋಪಾಲಯ್ಯ

    ಗೀತ ರಚನೆಕಾರನಾಗಿ ಸಾಕಷ್ಟು ಜನಪ್ರಿಯ ಚಿತ್ರಗೀತೆಗಳನ್ನು ಬರೆದಿರುವ ಲೋಕಲ್ ಲೋಕಿ (Local Loki) ನಿರ್ದೇಶನದ ‘ಮಾಜರ್’ (Major) ಚಿತ್ರದ ಹಾಡುಗಳನ್ನು (Song Release) ಸಚಿವ ಕೆ‌.ಗೋಪಾಲಯ್ಯ (K. Gopalaya) ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಾಯಕ ಶ್ರೀನಗರ ಕಿಟ್ಟಿ, ರಾಜಕೀಯ ಮುಖಂಡರಾದ ಜಯರಾಮ್ ಮುಂತಾದ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ, ತಮ್ಮ ಪ್ರೋತ್ಸಾಹಭರಿತ ಮಾತುಗಳ ಮೂಲಕ ಚಿತ್ರಕ್ಕೆ ಶುಭ ಹಾರೈಸಿದರು.

    ನಾನು ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗೀತರಚನೆಕಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈಗ ಮಾಜರ್ ಎಂಬ ಚಿತ್ರವನ್ನು ನಿರ್ದೇಶಿಸಿದ್ದೇನೆ. ಈ ಚಿತ್ರದಲ್ಲಿ ಮೂರು ಹಾಡುಗಳು ಹಾಗೂ ಮೂರು ಬಿಟ್ ಗಳಿದೆ. ಎಲ್ಲಾ ಹಾಡುಗಳನ್ನು ನಾನೇ ಬರೆದಿದ್ದೇನೆ. ಹುಚ್ಚ ವೆಂಕಟ್, ಸಂತೋಷ್ ವೆಂಕಿ, ಶಶಾಂಕ್ ಶೇಷಗಿರಿ ಹಾಡಿದ್ದಾರೆ. ಎ.ಟಿ.ರವೀಶ್ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ರಾಜೇಶ್ ರಾಮನಾಥ್ ಅವರದು. ಇನ್ನು ಚಿತ್ರದ ಬಗ್ಗೆ ಹೇಳುವುದಾದರೆ, ಅನಾದಿಕಾಲದಿಂದಲೂ ಹೆಣ್ಣಿನ ಶೋಷಣೆ ನಡೆಯುತ್ತಲೇ ಇದೆ. ಆದರೆ ತಪಿತಸ್ಥರಿಗೆ ನೀಡುವ ಶಿಕ್ಷೆ ಬಹಳ ಕಡಿಮೆ. ಹೆಣ್ಣನ್ನು ಶೋಷಣೆ ಮಾಡಿದವರಿಗೆ ಯಾವ ರೀತಿ ಶಿಕ್ಷೆ ನೀಡಬೇಕೆಂದು ಈ ಚಿತ್ರದಲ್ಲಿ ತೋರಿಸಿದ್ದೇವೆ. ಬರೀ ಇಷ್ಟೇ ಅಲ್ಲ. ಲವ್ ಸ್ಟೋರಿ ಕೂಡ ನಮ್ಮ ಚಿತ್ರದಲ್ಲಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಲೋಕಲ್ ಲೋಕಿ ಹೇಳಿದರು. ಇದನ್ನೂ ಓದಿ: ಬ್ಲೂಫಿಲ್ಮ್ ಮಾಡ್ತೀಯಾ ಅಂತ ಕೇಳಿದ ‘ಆ’ ನಟ: ಪೆಂಟಗನ್ ನಟಿಯ ಕಣ್ಣೀರು

    ಕನ್ನಡದಲ್ಲಿ ಚಿತ್ರವೊಂದನ್ನು ನಿರ್ಮಿಸುವ ಆಸೆಯಿತ್ತು. ಲೋಕಿ ಅವರು ಹೇಳಿದ ಕಥೆ ಇಷ್ಟವಾಗಿ, ನಿರ್ಮಾಣ ಮಾಡಿದ್ದೇನೆ ಎಂದರು ನಿರ್ಮಾಪಕ ಮುರುಗನಂಥನ್.  ಹಾಡುಗಳ ಬಗ್ಗೆ ಎ.ಟಿ.ರವೀಶ್ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ಉಗ್ರಂ ರವಿ, ಅರ್ಜುನ್, ರಂಜಿತ್ ಪ್ರಿನ್ಸ್  ಹಾಗೂ ನೃತ್ಯ ನಿರ್ದೇಶಕರಾದ ಸೈ ಗೀತ, ವಾಸ್ತು ನಾಗ ಮಾಜರ್ ಚಿತ್ರದ ಬಗ್ಗೆ ಮಾತನಾಡಿದರು.

  • ಮದ್ಯ ಮಾರಾಟದಿಂದ ಚಿನ್ನದ ಬೆಳೆ ತೆಗೆದ ಸರ್ಕಾರ – 5 ವರ್ಷಗಳಲ್ಲಿ 1 ಲಕ್ಷ ಕೋಟಿ ಆದಾಯ

    ಮದ್ಯ ಮಾರಾಟದಿಂದ ಚಿನ್ನದ ಬೆಳೆ ತೆಗೆದ ಸರ್ಕಾರ – 5 ವರ್ಷಗಳಲ್ಲಿ 1 ಲಕ್ಷ ಕೋಟಿ ಆದಾಯ

    ಬೆಂಗಳೂರು: ಅಬಕಾರಿ ಇಲಾಖೆ (Excise Department) ಮದ್ಯ ಮಾರಾಟದಿಂದ (Liquor Sales) ಭರ್ಜರಿ ಆದಾಯಗಳಿಸಿದೆ. ಕಳೆದ 5 ವರ್ಷಗಳಲ್ಲಿ ಅಬಕಾರಿ ಇಲಾಖೆಯಿಂದ ಸರ್ಕಾರಕ್ಕೆ ಹಣದ ಹೊಳೆ ಹರಿದು ಬಂದಿದೆ.

    ಮದ್ಯ ಮಾರಾಟದ ಬಗ್ಗೆ ಸರ್ಕಾರ ಅಂಕಿ-ಅಂಶ ಬಿಡುಗಡೆ ಮಾಡಿದ್ದು, ಕಳೆದ 5 ವರ್ಷಗಳಲ್ಲಿ ಸುಮಾರು 1 ಲಕ್ಷ ಕೋಟಿ ಆದಾಯ ಸಂಗ್ರಹ ಮಾಡಿದೆ. ಇದನ್ನೂ ಓದಿ: 1.5 ಲಕ್ಷ ಮೌಲ್ಯದ ಚಪ್ಪಲಿ, 80 ಸಾವಿರ ಮೌಲ್ಯದ ಜೀನ್ಸ್ – ಜೈಲಿನಲ್ಲಿ ಸುಕೇಶ್ ಐಷಾರಾಮಿ ಜೀವನ

    ಜೆಡಿಎಸ್ (JDS) ಸದಸ್ಯ ಗೋವಿಂದ್ ರಾಜ್ ಪ್ರಶ್ನೆಗೆ ಸಚಿವ ಕೆ. ಗೋಪಾಲಯ್ಯ ಉತ್ತರ ನೀಡಿದ್ದಾರೆ. ಜನವರಿ ಅಂತ್ಯದ ವೇಳೆಗೆ 2017-2023ರ ನಡುವಿನ ಮದ್ಯ ಮಾರಾಟದ ಅಂಕಿ ಅಂಶ ಪ್ರಕಟ ಮಾಡಿದೆ. ಇದನ್ನೂ ಓದಿ: ಅನುದಾನಿತ ಕಾಲೇಜು ಉಪನ್ಯಾಸಕರಿಗೆ NPS ಜಾರಿಗೆ ಬಗ್ಗೆ ನ್ಯಾಯ ಸಮ್ಮತ ಕ್ರಮ: ಬೊಮ್ಮಾಯಿ

    ಒಟ್ಟು 3,494 ಲಕ್ಷ ಬಾಕ್ಸ್‌ಗಳಷ್ಟು ಮದ್ಯ ಮಾರಾಟ ಮಾಡಿದ್ದು, ಇದರಿಂದ 93,391 ಕೋಟಿ ಆದಾಯ ಬಂದಿದೆ. ಬಿಯರ್ ವ್ಯಾಪಾರದಲ್ಲಿ 1,399 ಲಕ್ಷ ಬಾಕ್ಸ್ ವ್ಯಾಪಾರ ಮಾಡಿ 16,297 ಕೋಟಿ ಆದಾಯ ಬಂದಿದೆ. ಮದ್ಯ, ಬಿಯರ್ ನಿಂದ 4,893 ಲಕ್ಷ ಬಾಕ್ಸ್ ಮಾರಾಟವಾಗಿದ್ದು ಒಟ್ಟು 1,09,688 ಕೋಟಿ ರಾಜಸ್ವ ಸಂಗ್ರಹವನ್ನು ಸರ್ಕಾರ ಮಾಡಿದೆ ಎಂದು ಅಂಕಿ-ಅಂಶದಲ್ಲಿ ತಿಳಿಸಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರೋಹಿಣಿ ಸಿಂಧೂರಿ VS ರೂಪಾ – ಸರ್ಕಾರಕ್ಕೆ ಎಲ್ಲರ ಮೇಲೂ ಕ್ರಮ ಕೈಗೊಳ್ಳುವ ಶಕ್ತಿಯಿದೆ: ಗೋಪಾಲಯ್ಯ

    ರೋಹಿಣಿ ಸಿಂಧೂರಿ VS ರೂಪಾ – ಸರ್ಕಾರಕ್ಕೆ ಎಲ್ಲರ ಮೇಲೂ ಕ್ರಮ ಕೈಗೊಳ್ಳುವ ಶಕ್ತಿಯಿದೆ: ಗೋಪಾಲಯ್ಯ

    ಹಾಸನ: ನಮ್ಮ ಸರ್ಕಾರಕ್ಕೆ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳುವ ಶಕ್ತಿಯಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಏನು ನಿರ್ದೇಶನ ಕೊಡಬೇಕು ಅದನ್ನು ಕೊಡ್ತಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ (K Gopalaiah) ಎಂದು ತಿಳಿಸಿದರು.

    ಅಧಿಕಾರಿಗಳಾದ ರೋಹಿಣಿ ಸಿಂಧೂರಿ (Rohini Sindhuri) ಹಾಗೂ ರೂಪಾ (D Roopa) ಕಿತ್ತಾಟ ವಿಚಾರ ಕುರಿತು ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಮಾತನಾಡಿದ ಅವರು, ಇಬ್ಬರು ಹೆಣ್ಣುಮಕ್ಕಳು ಆ ರೀತಿ ಮಾಡಬಾರದಿತ್ತು. ಮುಖ್ಯಮಂತ್ರಿಗಳ ಹಂತದಲ್ಲೇ ಏನು ಕ್ರಮ ತೆಗೆದುಕೊಳ್ಳಬೇಕೋ,‌ ಆ ಕ್ರಮ ತೆಗೆದುಕೊಳ್ಳುವ ಕೆಲಸವನ್ನು ಮಾಡುತ್ತಾರೆ. ನಾನು ಅದರ ಬಗ್ಗೆ ಬೇರೆ ಏನು ಹೇಳಲ್ಲ. ಮುಖ್ಯಮಂತ್ರಿಗಳು ಅದರ ಬಗ್ಗೆ ಕ್ರಮ ವಹಿಸುತ್ತಾರೆ ಎಂದು ಹೇಳಿದರು.

    ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಘಟನೆಯಲ್ಲ. ಯಾರೋ ಇಬ್ಬರು ವ್ಯಕ್ತಿಗಳ ಕಿತ್ತಾಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರಲ್ಲ. ಅವರು ತಪ್ಪು ಎಸಗಿದ್ದರೆ ಇಬ್ಬರ ಮೇಲೂ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದರು. ಇದನ್ನೂ ಓದಿ: ಹಳೆಯ ಪೀಠೋಪಕರಣ ನೀಡಿದ್ದಕ್ಕೆ ಮದುವೆಯನ್ನು ರದ್ದುಪಡಿಸಿದ ವರ

    ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರ್ಪಡೆ ಬಗ್ಗೆ ಸುಳಿವು ನೀಡಿದ ಅವರು, ಯಾರೇ ಒಬ್ಬರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಸಂದರ್ಭದಲ್ಲಿ ಗೌರವಯುತವಾಗಿ ಅವರನ್ನು ಕರೆದುಕೊಳ್ಳುವ ಕೆಲಸ ಮಾಡುತ್ತಾರೆ. ಯಾರೇ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ನಡೆಯುತ್ತಿದೆ. ಸೂಕ್ತ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಕಾರ್ಯಕ್ರಮ ಇರುತ್ತದೆ. 1999ರಲ್ಲಿ ಹಾಸನ ಜಿಲ್ಲೆಯ ಪುಣ್ಯಾತ್ಮರು ಬಿಜೆಪಿಗೆ 4 ಸ್ಥಾನ ಗೆಲ್ಲಿಸಿಕೊಟ್ಟಿದ್ದಾರೆ. ನಮಗೆ ವಿಶ್ವಾಸವಿದೆ ಮತ್ತೆ ಅದು ಪುನರಾವರ್ತನೆ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕಡಬದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ಆರಂಭ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಸಾಧನೆ ಮರೆಯಲು ಸಾಧ್ಯವಿಲ್ಲ: ಕೆ.ಗೋಪಾಲಯ್ಯ

    ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಸಾಧನೆ ಮರೆಯಲು ಸಾಧ್ಯವಿಲ್ಲ: ಕೆ.ಗೋಪಾಲಯ್ಯ

    ಬೆಂಗಳೂರು: ನಾಡಿಗಾಗಿ ದುಡಿದು ಅತ್ಯುತ್ತಮ ಸಾಧನೆಯನ್ನು ಮಾಡಿ ಎಲ್ಲ ರಾಜಕಾರಣಿಗಳಿಗೆ ಸ್ಫೂರ್ತಿಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (S.M Krishna) ಅವರ ಸಾಧನೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ (K Gopalaiah) ಅವರು ತಿಳಿಸಿದರು.

    ಬೆಂಗಳೂರಿನ ಸದಾಶಿವನಗರದಲ್ಲಿನ ಎಸ್.ಎಂ ಕೃಷ್ಣ ಅವರ ಮನೆಗೆ ತೆರಳಿ ಪದ್ಮವಿಭೂಷಣ (Padmavibhushan) ಪ್ರಶಸ್ತಿಗೆ ಆಯ್ಕೆಯಾಗಿರುವ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು. ನಮ್ಮ ರಾಜ್ಯದ ರಾಜಕಾರಣಿಗಳಿಗೆ ಎಸ್.ಎಂ ಕೃಷ್ಣ ಅವರು ಉತ್ತಮ ಮಾರ್ಗದರ್ಶಕರಾಗಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಹಾಗೂ ಗೃಹಮಂತ್ರಿ ಅಮಿತ್ ಶಾ (AmitShah) ಅವರು ಈ ಮಹಾನ್ ರಾಜಕಾರಣಿಯನ್ನು ಗುರುತಿಸಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಹೇಳಿದರು.

    ಮಂಡ್ಯ ಜಿಲ್ಲೆಯವರಾಗಿ ಎಸ್.ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತೆಗೆದುಕೊಂಡಂತಹ ಉತ್ತಮ ನಿರ್ಧಾರಗಳು ಹಾಗೂ ಅವರ ಸೇವೆಗೆ ಈ ಪ್ರಶಸ್ತಿ ಲಭಿಸಿದೆ. ಅವರಿಗೆ ಭಗವಂತನು ಹೆಚ್ಚಿನ ಆಯಸ್ಸು, ಆರೋಗ್ಯವನ್ನು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ಇದನ್ನೂ ಓದಿ: ಎಸ್.ಎಂ. ಕೃಷ್ಣ, ಎಸ್‍ಎಲ್ ಭೈರಪ್ಪ, ಸುಧಾಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ

    ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಆರೋಗ್ಯ ಸಚಿವ ಡಾ.ಕೆ ಸುಧಾಕರ್ (Dr. K Sudhakar), ಕಂದಾಯ ಸಚಿವ ಆರ್.ಅಶೋಕ್ (R Ashok) ಹಾಗೂ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಸೀಕ್ರೆಟ್ ಆಗಿ ದೆಹಲಿಗೆ ಹೋಗಿ ಬಂದಿದ್ರಾ ಯತ್ನಾಳ್? – ರೆಬೆಲ್ ಶಾಸಕ ಸದ್ಯಕ್ಕೆ ಸೇಫ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆ ಎದುರಿಸ್ತೇವೆ: ಗೋಪಾಲಯ್ಯ

    ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆ ಎದುರಿಸ್ತೇವೆ: ಗೋಪಾಲಯ್ಯ

    ಹಾಸನ: ಬಸವರಾಜ ಬೊಮ್ಮಾಯಿ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲೇ ಎದುರಿಸುತ್ತೇವೆ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

    ಹಾಸನದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಮೊದಲು ತಮ್ಮ ಪಕ್ಷದಲ್ಲಿ ಆಗುತ್ತಿರುವ ಗೊಂದಲಗಳನ್ನು ಸರಿಪಡಿಸಿಕೊಳ್ಳಲಿ. ನಂತರ ಗೆಲ್ಲುವ ಮಾತನಾಡಲಿ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೀವಿ ಅನ್ನೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಫ್ಘಾನ್‌ನಲ್ಲಿ ಆರಂಭಿಸಿರುವ ಅಭಿವೃದ್ಧಿ ಕಾರ್ಯಗಳನ್ನ ಭಾರತ ಪೂರ್ಣಗೊಳಿಸಬೇಕು – ಅಬ್ದುಲ್ ಕಹರ್ ಬಾಲ್ಕಿ

    ಬಿಜೆಪಿ ಮೂರು ಹೋಳಾಗಿದ್ದಾಗಲೇ 120 ಸೀಟ್ ತೆಗೆದುಕೊಂಡಿದ್ದೇವೆ, ಕಾಂಗ್ರೆಸ್ 5 ವರ್ಷ ಅಧಿಕಾರ ಮಾಡಿ ಯಾಕೆ ಮತ್ತೆ ಅಧಿಕಾರಕ್ಕೆ ಬರಲಿಲ್ಲ, ಎಷ್ಟು ಸೀಟ್ ಗೆದ್ದರು? ಉತ್ತಮ ಕೆಲಸ ಮಾಡಿದ್ದೀವಿ, ಅನ್ನಭಾಗ್ಯ, ಶಾದಿಭಾಗ್ಯ ಜಾರಿಗೆ ತಂದಿದ್ದೇವೆ ಅನ್ನೋರನ್ನ ಯಾಕೆ ಈ ರಾಜ್ಯದ ಜನ ತಿರಸ್ಕಾರ ಮಾಡಿದ್ರು? ಕಾಂಗ್ರೆಸ್ ಏಕೆ 79 ಸೀಟ್ ತೆಗೆದುಕೊಂಡರು. ಇದಕ್ಕೆ ಉತ್ತರ ಕೊಡಬೇಕು ಎಂದು ಕುಟುಕಿದ್ದಾರೆ.

    ಬಿಜೆಪಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ಅವರೇ ಪೂರ್ಣಾವಧಿಗೆ ಸಿಎಂ ಆಗಿರುತ್ತಾರೆ. ಈಗಾಗಲೇ ಮಾಜಿ ಶಾಸಕ ಸುರೇಶ್‌ಗೌಡ ಅವರಿಗೆ ರಾಜ್ಯದ ಅಧ್ಯಕ್ಷರು ಅವರಿಗೆ ಸೂಚನೆ ಕೊಟ್ಟಿದ್ದಾರೆ. ಮತ್ತೆ ಅವರು ಎಲ್ಲಿಯೂ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: Bigg Boss: ಮೂಡ್ ಇಲ್ಲ ಅಂದ್ರೆ ಮೂರು ದಿನ ಸ್ನಾನ ಮಾಡಲ್ಲ: ಸೋನು ಶ್ರೀನಿವಾಸ್ ಗೌಡ

    ನಾವೆಲ್ಲರೂ ಸರ್ಕಾರದ ಒಂದು ಭಾಗವಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಏನಾದ್ರು ಸಣ್ಣಪುಟ್ಟ ಸಮಸ್ಯೆ ಇದ್ದರೆ 4 ಗೋಡೆ ಮಧ್ಯೆ ಕುಳಿತು ಬಗೆಹರಿಸಿಕೊಳ್ಳುತ್ತೇವೆ. ಬಿಜೆಪಿ ಪಕ್ಷ ಇಡೀ ರಾಷ್ಟ್ರದಲ್ಲೇ ಒಂದು ದೊಡ್ಡ ಪಕ್ಷ, ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವನ್ನು ಇಡೀ ವಿಶ್ವ ನೋಡುತ್ತಿದೆ. ನಾವೂ ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಮತ್ತೆ ನಾವೇ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    Live Tv

    [brid partner=56869869 player=32851 video=960834 autoplay=true]

  • ಮದ್ಯ ಮಾರಾಟಗಾರರ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ : ಕೆ.ಗೋಪಾಲಯ್ಯ

    ಮದ್ಯ ಮಾರಾಟಗಾರರ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ : ಕೆ.ಗೋಪಾಲಯ್ಯ

    ಬೆಂಗಳೂರು: ಮದ್ಯ ಮಾರಾಟಗಾರರ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

    ಅಬಕಾರಿ ಆಯುಕ್ತರ ಕಚೇರಿಯಲ್ಲಿಂದು ಫೆಡರೇಷನ್ ಆಪ್ ವೈನ್ ಮರ್ಚಂಟ್ಸ್‌ಗಳ ಕೋರಿಕೆ ಹಿನ್ನೆಲೆಯಲ್ಲಿ ನಡೆದ ಇ-ಇಂಡೆಂಟಿಂಗ್ ನಿಂದ ಉಂಟಾಗಿರುವ ಸಮಸ್ಯೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮದ್ಯ ಮಾರಾಟಗಾರರು ಕಳೆದ ಒಂದೆರಡು ತಿಂಗಳಿನಿಂದ ಎದುರಿಸುತ್ತಿರುವ ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ನಮ್ಮಲ್ಲಿ ಪೆಟ್ರೋಲ್ ಮುಗಿದಿದೆ: ಶ್ರೀಲಂಕಾ

    ಇ-ಇಂಡೆಂಟಿಂಗ್ ಸಮಸ್ಯೆ ಕುರಿತು ಮದ್ಯ ಮಾರಾಟಗಾರರು ನನ್ನ ಗಮನಕ್ಕೆ ತಂದಾಗ ತಕ್ಷಣವೇ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಾಗಿದೆ. ಇಲಾಖೆ ಸಚಿವನಾಗಿ ಸಮಸ್ಯೆಯ ಗಂಭೀರತೆಯನ್ನು ಅರಿತಿದ್ದೇನೆ. ಇದಾದ ನಂತರ ನಡೆದ ಎಲ್ಲ ಬೆಳವಣಿಗೆಗಳನ್ನು ಗಮನಿಸಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಉಪಸ್ಥಿತರಿದ್ದ ಫೆಡರೇಷನ್ ಆಪ್ ವೈನ್ ಮರ್ಚಂಟ್ಸ್ ಅಧ್ಯಕ್ಷ ಗೋವಿಂದರಾಜ್ ಹೆಗಡೆ ಮಾತನಾಡಿ, ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಫ್ತಿಗೆ ನಿಷೇಧ ಹೇರಿದ ಭಾರತ- ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ

    ಈ ಸಂದರ್ಭದಲ್ಲಿ ರಾಜ್ಯ ಪಾನೀಯ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಾಫರ್, ಇಡಿಒ ರಾಜೇಂದ್ರ ಪ್ರಸಾದ್, ಡಾ.ರವಿಶಂಕರ್ ಉಪಸ್ಥಿತರಿದ್ದರು.

  • ಉಳ್ಳವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಕಾನೂನು ಕ್ರಮ: ಕೆ.ಗೋಪಾಲಯ್ಯ

    ಉಳ್ಳವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಕಾನೂನು ಕ್ರಮ: ಕೆ.ಗೋಪಾಲಯ್ಯ

    ಮೈಸೂರು: ಉಳ್ಳವರು ಬಿಪಿಎಲ್ ಪಡಿತರ ಚೀಟಿಗಳನ್ನು ಪಟೆದುಕೊಂಡಿದ್ದಾರೆ. ಅಂಥವರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

    ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದೆ. ಇದನ್ನು ದುರುಪಯೋಗ ಪಡಿಸಿಕೊಂಡವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು. ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದರು. ಇದನ್ನೂ ಓದಿ:  ಗಳಿಗೆ ತೇರು ಎಳೆಯುವ ಮುನ್ನ ಕುರಾನ್ ಪಠಣ ಮಾಡುವ ಸಂಪ್ರದಾಯವಿದೆ: ಸಯ್ಯದ್ ಸಜ್ಜಾದ್ ಭಾಷಾ ಖಾದ್ರಿ

    ಬಡವರಿಗೋಸ್ಕರ ಇರುವ ಬಿಪಿಎಲ್ ಕಾರ್ಡ್ ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು. ಈಗಾಗಲೇ ಹಲವಾರು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು, ಸರಿಯಾಗಿ ಪರಿಶೀಲಿಸಿದ ನಂತರ ಆ ಕಾರ್ಡ್ ಗಳನ್ನು ರದ್ದುಪಡಿಸಲಾಗುತ್ತಿದೆ. ಬಡವರಿಗೋಸ್ಕರ ಇರುವ ಯೊಜನೆಯನ್ನು ಇತರರು ಪಡೆಯಬಾರದು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುನರುಚ್ಚರಿಸಿದರು.

    ಸ್ವಂತ ಮನೆ ಹೊಂದಿ 2-3 ಮಹಡಿ ಮನೆ ಕಟ್ಟಿಕೊಂಡಿರುವವರಿಗೆ ಬಿಪಿಎಲ್ ಕಾರ್ಡ್ ರದ್ದಾಗಲಿದೆ. ಬಿಪಿಎಲ್ ಕಾರ್ಡ್ ಗಾಗಿ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದ್ದು, ಇದರ ದುರ್ಬಳಕೆ ತಡೆಯಲು ಈ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ. ಕೇಂದ್ರ ಸರ್ಕಾರ ದೇಶದಲ್ಲಿ 50 ಕೋಟಿ ಜನರಿಗೆ ಬಿಪಿಎಲ್ ಕಾರ್ಡ್ ಮುಖಾಂತರ ಆಹಾರ ಒದಗಿಸುತ್ತಿದೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರವೂ ಸಹ ಕೈಜೋಡಿಸಿ ಅಂತ್ಯೋದಯ ಕಾರ್ಡ್‍ಗೆ ತಲಾ ಹತ್ತು ಕೆಜಿ ಅಕ್ಕಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಈಶ್ವರಪ್ಪರನ್ನು ಸಮರ್ಥಿಸಿಕೊಂಡ ಸಿ.ಟಿ ರವಿ, ಗೋಪಾಲಯ್ಯ

  • ಹಾಸನ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಒತ್ತು: ಕೆ.ಗೋಪಾಲಯ್ಯ

    ಹಾಸನ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಒತ್ತು: ಕೆ.ಗೋಪಾಲಯ್ಯ

    ಹಾಸನ: ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿದೆ. ಎಲ್ಲ ತಾಲೂಕುಗಳಲ್ಲೂ ಈ ಕಾರ್ಯಕ್ರಮ ಮಾಡಬೇಕೆಂದು ಪ್ರಧಾನಮಂತ್ರಿಗಳು ಕರೆ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

    ಬಿಜೆಪಿ ಸಂಸ್ಥಾಪನಾ ದಿನಾಚರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ಯಾಮ ಪ್ರಕಾಶ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಅವರು ಹಾಕಿಕೊಟ್ಟ ದಾರಿಯಲ್ಲಿ ಇಂದು ಪಕ್ಷ ಸಂಘಟನೆಯಾಗಿ ದೇಶದ ಅಧಿಕಾರ ಹಿಡಿದಿರುವುದು ಶ್ಲಾಘನೀಯ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಜನಪರವಾದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಇದನ್ನೂ ಓದಿ: ವಿವಾದಿತ ಸಮಾಧಿಯನ್ನ ಶಾಂತಿಯುತವಾಗಿ ಸ್ಥಳಾಂತರಿಸಿದ ಕ್ರೈಸ್ತ ಸಮುದಾಯ

    ಯಾರು ಎಲ್ಲಿ ಬೇಕಾದರೂ ವ್ಯಾಪಾರ ಮಾಡಬಹುದು, ಇಂತಹುದೇ ಕಡೆ ವ್ಯಾಪಾರ ಮಾಡಿ ಎಂದು ಸರ್ಕಾರ ಯಾರಿಗೂ ಹೇಳಿಲ್ಲ, ಹೇಳುವುದೂ ಇಲ್ಲ. ಉತ್ತಮವಾದ ವಸ್ತು ಮತ್ತು ಉತ್ತಮ ದರ ಸಿಕ್ಕರೆ ಯಾರು ಎಲ್ಲಿ ಬೇಕಾದರೂ ವ್ಯಾಪಾರ ಮಾಡಬಹುದು. ಸರ್ಕಾರ ಇಂಥವರ ಬಳಿಯೇ ವ್ಯಾಪಾರ ಮಾಡಿ ಎಂದು ಎಲ್ಲೂ ಹೇಳಿಲ್ಲ. ಇದು ಜನರ ವೈಯಕ್ತಿಕ ವಿಚಾರ ಎಂದು ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

    ಈ ಸಂದರ್ಭದಲ್ಲಿ ಶಾಸಕ ಪ್ರೀತಂಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಬಿಜೆಪಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶೋಭಾ ಯಾತ್ರೆಯಲ್ಲಿ ಸಚಿವ ಕೆ.ಗೋಪಾಲಯ್ಯ ಭಾಗವಹಿಸಿದ್ದರು. ನಂತರ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣವನ್ನು ವರ್ಚುವಲ್ ವೀಕ್ಷಿಸಿದರು. ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.