Tag: ಕೆ ಚಂದ್ರಶೇಖರ್ ರಾವ್

  • ಮಾಜಿ ಸಿಎಂ ಕೆಸಿಆರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆ

    ಮಾಜಿ ಸಿಎಂ ಕೆಸಿಆರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆ

    ಹೈದರಾಬಾದ್: ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್(K Chandrashekar Rao) ವಿರುದ್ಧ ಭ್ರಷ್ಟಾಚಾರ(Corruption) ಆರೋಪ ಮಾಡಿ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಜಯಶಂಕರ್ ಭೂಪಲಪಲ್ಲಿಯಲ್ಲಿ(Jayashankar Bhupalpally) ನಡೆದಿದೆ.

    ಎನ್.ರಾಜಲಿಂಗಮೂರ್ತಿ ಕೊಲೆಯಾದ ವ್ಯಕ್ತಿ. ಕಾಳೇಶ್ವರಂ ಯೋಜನೆಯ ಭಾಗವಾಗಿ ಮೇಡಿಗಡ್ಡ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಮತ್ತು ಇತರರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್; ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? – ವಿಜಯೇಂದ್ರ

    ರಾಜಲಿಂಗಮೂರ್ತಿ ಬುಧವಾರ ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಭೂ ವಿವಾದದ ಹಿನ್ನೆಲೆ ಇಬ್ಬರು ಆರೋಪಿಗಳು ಚಾಕುವಿನಿಂದ ಇರಿದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶಮಿಗೆ 5 ವಿಕೆಟ್‌; ಬಾಂಗ್ಲಾ ಆಲೌಟ್‌ – ಟೀಂ ಇಂಡಿಯಾಗೆ 229 ರನ್‌ಗಳ ಗುರಿ

    ಮೇಡಿಗಡ್ಡ ಬ್ಯಾರೇಜ್‌ನ ಕೆಲವು ಕಂಬಗಳು ಮುಳುಗಿದ ನಂತರ ಕೆಸಿಆರ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜಲಿಂಗಮೂರ್ತಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಇ.ಡಿ ವಿಚಾರಣೆಯಿಂದ ಸಿಎಂ ಪತ್ನಿಗೆ ರಿಲೀಫ್‌ – ಪಾರ್ವತಿ, ಸಚಿವ ಬೈರತಿಗೆ ಮಧ್ಯಂತರ ರಕ್ಷಣೆ ಮುಂದುವರಿಕೆ

    ಕೆಸಿಆರ್, ಅವರ ಸೋದರಳಿಯ ಮತ್ತು ಮಾಜಿ ಸಚಿವ ಟಿ.ಹರೀಶ್ ರಾವ್ ತಮ್ಮ ವಿರುದ್ಧದ ಅರ್ಜಿ ವಜಾಗೊಳಿಸಲು ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: ಚಿಕನ್ ಖರೀದಿಗೆ ಬಂದಿದ್ದ ದೈತ್ಯ ವಿದೇಶಿ ಪ್ರಜೆ ಕೊಲೆ – ಅನುಮಾನಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

  • ಶಾಸಕರ ಖರೀದಿಗೆ BJPಯಿಂದ ಸಾವಿರಾರು ಕೋಟಿ ಆಮಿಷ- ಕಾಂಗ್ರೆಸ್

    ಶಾಸಕರ ಖರೀದಿಗೆ BJPಯಿಂದ ಸಾವಿರಾರು ಕೋಟಿ ಆಮಿಷ- ಕಾಂಗ್ರೆಸ್

    ಬೆಂಗಳೂರು: ತೆಲಂಗಾಣದಲ್ಲಿ ಆಪರೇಷನ್ ಕಮಲ (Operation Kamala) ಶುರುವಾಗಿದ್ದು, ತೆಲಂಗಾಣ ರಾಷ್ಟ್ರ ಸಮಿತಿ (TRS) ಶಾಸಕರನ್ನು ಖರೀದಿಸಲು ಬಿಜೆಪಿ (BJP) ಸಾವಿರಾರು ಕೋಟಿ ಆಮಿಷ ಒಡ್ಡಿದೆ ಎಂದು ಕಾಂಗ್ರೆಸ್ (Congress) ಗಂಭೀರ ಆರೋಪ ಮಾಡಿದೆ.

    ಈ ಕುರಿತು ಟ್ವಿಟ್ಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ (Congress), ಮೂಲಗಳ ಪ್ರಕಾರ ಆಪರೇಷನ್ ಕಮಲದ (Operation Kamala) ರೂವಾರಿಗಳು ಅಮಿತ್ ಶಾ (Amit Shah), ಬಿ.ಎಲ್ ಸಂತೋಷ್ ಹಾಗೂ ಜೆ.ಪಿ ನಡ್ಡಾ (JP Nadda). ಸಂಸ್ಕಾರ, ಚಾರಿತ್ರ್ಯ ಹಾಗೂ ನೈತಿಕ ರಾಜಕಾರಣದ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿ.ಎಲ್.ಸಂತೋಷ್ ಮಾಡುವುದು ಮಾತ್ರ ಅನಾಚಾರ. ಆಪರೇಷನ್ ಕಮಲ ಯಾವ ಸಂಸ್ಕಾರ ಎಂದು ಪ್ರಶ್ನಿಸಿದೆ.

    ಟಿಆರ್‌ಎಸ್ (ತೆಲಂಗಾಣ ರಾಷ್ಟ್ರ ಸಮಿತಿ) ಶಾಸಕರನ್ನು ಖರೀದಿಸಲು ಸಾವಿರಾರು ಕೋಟಿ ಆಮಿಷ ಒಡ್ಡಲಾಗಿದೆ. ಬಿಜೆಪಿಯವರಿಗೆ ಇಷ್ಟೊಂದು ದುಡ್ಡು ಬರುವುದು ಎಲ್ಲಿಂದ? ಆಪರೇಷನ್ ಕಮಲಕ್ಕೆ ಪಿಎಂ ಕೇರ್ (PM Cares) ನಿಧಿ ಬಳಸಲಾಗುತ್ತಿದೆಯೇ ಅಥವಾ ಭ್ರಷ್ಟಾಚಾರದಿಂದ ಗಳಿಸಿದ ಹಣ ಬಳಕೆಯಾಗುತ್ತಿದೆಯೇ? ನಾ ಖಾವೂಂಗಾ, ನಾ ಖಾನೇದೂಂಗಾ ಎನ್ನುವ ಮೋದಿಯವರೆ (Narendra Modi), ಆಪರೇಷನ್ ಕಮಲದ ಹಣದ ಮೂಲ ಯಾವುದು ತಿಳಿಸುವಿರಾ? ಎಂದು ಕುಟುಕಿದೆ.

    ಈಗಾಗಲೇ ಹಲವು ರಾಜ್ಯಗಳಲ್ಲಿ ಆಪರೇಷನ್ ಕಮಲದ ಮೂಲಕ ಅಕ್ರಮವಾಗಿ ಅಧಿಕಾರಕ್ಕೇರಿರುವ ಬಿಜೆಪಿ (BJP) ಈಗ ತೆಲಂಗಾಣದಲ್ಲೂ ಅನಿಷ್ಟ ಪ್ರಯತ್ನಕ್ಕೆ ಕೈ ಹಾಕಿದೆ. ಆದರೆ ತೆಲಂಗಾಣದಲ್ಲಿ ಆಪರೇಷನ್ ಕಮಲ ಯಶಸ್ವಿಯಾಗಿಲ್ಲ. ಏಕೆಂದರೆ ಆಪರೇಷನ್ ಕಮಲ ಬಿಜೆಪಿಯ ಅನೈತಿಕ ಶಿಶು. ಬಿಜೆಪಿಯವರು ಪ್ರಜಾಪ್ರಭುತ್ವದ ರಕ್ಷಕರಾಗದೇ ಭಕ್ಷಕರಾಗುತ್ತಿದ್ದಾರೆ ಎಂದು ಕಿಡಿ ಕಾರಿದೆ.

    Live Tv
    [brid partner=56869869 player=32851 video=960834 autoplay=true]

  • ಕೆಸಿಆರ್ ಅಭಿಮಾನಿಯ ಕನಸು ನನಸು – 9 ವರ್ಷದ ಬಳಿಕ ಮಗಳ ನಾಮಕರಣ

    ಕೆಸಿಆರ್ ಅಭಿಮಾನಿಯ ಕನಸು ನನಸು – 9 ವರ್ಷದ ಬಳಿಕ ಮಗಳ ನಾಮಕರಣ

    ಹೈದರಾಬಾದ್: ಹೆಸರೇ ಇಲ್ಲದ ಒಂಬತ್ತು ವರ್ಷದ ತೆಲಂಗಾಣದ (Telangana) ಬಾಲಕಿ ತನ್ನ ಪೋಷಕರೊಂದಿಗೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (Chief Minister K Chandrashekar Rao) ಅವರನ್ನು ಭೇಟಿಯಾಗಿ ಕೊನೆಗೂ ನಾಮಕರಣ ಮಾಡಿಸಿಕೊಂಡಿದ್ದಾಳೆ.

    ಸುರೇಶ್ ( Suresh) ಮತ್ತು ಅನಿತಾ (Anitha) ದಂಪತಿ ಜನಪ್ರಿಯ ನಾಯಕ ಚಂದ್ರಶೇಖರ್ ರಾವ್ ಅವರ ನೇತೃತ್ವದ ತೆಲಂಗಾಣ ರಾಜ್ಯ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. 2013ರಲ್ಲಿ ತಮ್ಮ ಮಗಳು ಜನಿಸಿದಾಗ ಆಕೆಗೆ ಕೆಸಿಆರ್ ಅವರೇ ಹೆಸರಿಡಬೇಕೆಂದು ಬಯಸಿದ್ದರು. ಆದರೆ ಒಂಬತ್ತು ವರ್ಷಗಳ ಕಾಲ ಈ ಆಸೆ ಈಡೇರಲಿಲ್ಲ. ಆದರೆ ಇದೀಗ ಕಾಲಗೂಡಿ ಬಂದಿದ್ದು, ಕೊನೆಗೂ ಬಾಲಕಿಗೆ ಹೆಸರು ಇಡಲಾಗಿದೆ. ಇದನ್ನೂ ಓದಿ: ಹಾಡಹಗಲೇ ವಕೀಲೆ ಮೇಲೆ ದುಷ್ಕರ್ಮಿಯಿಂದ ಕುಡುಗೋಲಿನಲ್ಲಿ ಅಟ್ಯಾಕ್

    ತೆಲಂಗಾಣ ರಾಷ್ಟ್ರ ಸಮಿತಿಯ (Telangana Rashtra Samithi ) ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಅಸೆಂಬ್ಲಿ ಸ್ಪೀಕರ್ ಮಧುಸೂಧನ ಚಾರಿ (Madhusudhana Chary) ಅವರಿಗೆ ಇತ್ತೀಚೆಗೆ ಈ ವಿಚಾರ ತಿಳಿದುಬಂದಿದ್ದು, ನಂತರ ದಂಪತಿ ಮತ್ತು ಅವರ ಪುತ್ರಿಯನ್ನು ತೆಲಂಗಾಣ ಮುಖ್ಯಮಂತ್ರಿಯ ಅಧಿಕೃತ ನಿವಾಸ ಪ್ರಗತಿ ಭವನಕ್ಕೆ(Pragathi Bhavan) ಆಹ್ವಾನಿಸಿದ್ದಾರೆ.

    ವಿಷಯ ತಿಳಿದ ಮುಖ್ಯಮಂತ್ರಿ ಕೆಸಿಆರ್ ದಂಪತಿ, ಸುರೇಶ್ ಮತ್ತು ಅನಿತಾ ಅವರನ್ನು ಅಭಿನಂದಿಸಿ, ಅವರ ಪುತ್ರಿಗೆ ಮಹತಿ (Mahati) ಎಂದು ನಾಮಕರಣ ಮಾಡಿದರು. ದಂಪತಿ ಮತ್ತು ಅವರ ಮಗಳಿಗೆ ಉಡುಗೊರೆ ನೀಡಿದರು. ಅಲ್ಲದೇ ಮಹತಿಯ ಶಿಕ್ಷಣಕ್ಕೆ ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದರು.  ಇದನ್ನೂ ಓದಿ: ಸುಮಲತಾ ಹೇಳಿದ ದಿನ ಆಣೆ ಮಾಡಲು ರೆಡಿ- ಮೇಲುಕೋಟೆ ಸನ್ನಿಧಿಯಲ್ಲಿ ಪುಟ್ಟರಾಜು ಸವಾಲು ಸ್ವೀಕಾರ

    Live Tv
    [brid partner=56869869 player=32851 video=960834 autoplay=true]

  • ರಾಯಚೂರನ್ನು ತೆಲಂಗಾಣಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಕೆಸಿಆರ್

    ರಾಯಚೂರನ್ನು ತೆಲಂಗಾಣಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಕೆಸಿಆರ್

    ಅಮರಾವತಿ: ಟಿಆರ್‌ಎಸ್ ಸರ್ಕಾರದ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ಅಲ್ಲಿನ ಪ್ರದೇಶವನ್ನು ತೆಲಂಗಾಣಕ್ಕೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದರು.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕರ್ನಾಟಕದೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ಗಡಿ ಪ್ರದೇಶವಾದ ತಾಂಡೂರಿಗೆ ರಾಯಚೂರಿನ ಜನರು ಹತ್ತಿರದಲ್ಲಿದ್ದೀರಿ. ಈ ಹಿನ್ನೆಲೆಯಲ್ಲಿ ರಾಯಚೂರಿನ ಕೆಲವು ಗಡಿ ಭಾಗದ ಜನರು ತಮ್ಮನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇಲ್ಲದಿದ್ದರೆ ನಮ್ಮ ರಾಜ್ಯದಲ್ಲಿ ಜಾರಿಗೆ ತಂದಿರುವ ರೀತಿಯ ಯೋಜನೆಗಳನ್ನು ಕರ್ನಾಟಕದಲ್ಲಿ ಒದಗಿಸಬೇಕು ಎಂದು ಹೇಳಬೇಕು ಎಂದರು.

    ಇದೇ ಸಂದರ್ಭದಲ್ಲಿ ಅವರು ತಮ್ಮ ಉಚಿತ ಕುಡಿಯುವ ನೀರು, ಮಿಷನ್ ಭಗೀರಥ, ಗರ್ಭಿಣಿಯರಿಗೆ ಕೆಸಿಆರ್ ಕಿಟ್‍ಗಳಂತಹ ಉಪಕ್ರಮಗಳನ್ನು ಪ್ರಸ್ತಾಪಿಸಿದರು. ಹಾಲುಣಿಸುವ ತಾಯಂದಿರು, ಉಚಿತ ವಿದ್ಯುತ್, ಎಕರೆಗೆ ವಾರ್ಷಿಕ 10,000 ರೂ. ನೀಡುವ ಯೋಜನೆಗಳನ್ನು ಕೊಂಡಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಎದುರು ಯಡಿಯೂರಪ್ಪ ಮಾಸ್ ಇಮೇಜ್ ಅಸ್ತ್ರ – ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್‍ವೈ ಆಯ್ಕೆ ಹಿಂದಿನ ಪ್ಲಾನ್ ಏನು?

    ಕೆಸಿಆರ್ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಅವರು ಈ ಹಿಂದೆಯೂ ಇಂತಹ ಅನೇಕ ಹೇಳಿಕೆಗಳನ್ನು ನೀಡಿದ್ದರು. ನಾಂದೇಡ್‍ನಂತಹ ಮಹಾರಾಷ್ಟ್ರದ ಕೆಲವು ಗಡಿ ಪ್ರದೇಶಗಳನ್ನು ಉಲ್ಲೇಖಿಸಿ, ಮತದಾರರು ಬುದ್ಧಿವಂತಿಕೆಯಿಂದ ಯೋಚಿಸುವಂತೆ ಕರೆ ನೀಡಿದ್ದರು. ಇದನ್ನೂ ಓದಿ: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ನಿತ್ಯ ಹಾಡಿಸೋದು ಕಡ್ಡಾಯ

    Live Tv
    [brid partner=56869869 player=32851 video=960834 autoplay=true]

  • ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ಗಳಿಗೆ ಹಂಚಲು ಕೇಂದ್ರ ಸಂಚು: ಕೆಸಿಆರ್

    ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ಗಳಿಗೆ ಹಂಚಲು ಕೇಂದ್ರ ಸಂಚು: ಕೆಸಿಆರ್

    ಹೈದರಾಬಾದ್: ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್‌ಗಳಿಗೆ ವಹಿಸಿ ರೈತರನ್ನು ಕೂಲಿ ಮಾಡಿಸುವ ಷಡ್ಯಂತರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೃಷಿ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ. ತಮ್ಮ ರಾಜ್ಯದ ರೈತರಿಂದ ಅಕ್ಕಿಯನ್ನು ಖರೀದಿಸಲು ಕೇಂದ್ರಕ್ಕೆ 24 ಗಂಟೆಗಳ ಕಾಲ ಗಡುವು ವಿಧಿಸುತ್ತೇವೆ. ಆದರೆ ಕೇಂದ್ರದ ಬಳಿ ಹಣವಿಲ್ಲವೇ ಅಥವಾ ಆಹಾರ ಧಾನ್ಯವನ್ನು ಖರೀದಿಸಲು ಪ್ರಧಾನಿಗೆ ಮನಸ್ಸಿಲ್ಲವೇ ಎಂದು ಕಿಡಿಕಾರಿದರು.

    ಬ್ಯಾಂಕ್‍ಗಳನ್ನು ದಿವಾಳಿಯಾಗಲು ಬಿಟ್ಟವರನ್ನು ಸರ್ಕಾರ ರಕ್ಷಿಸುತ್ತದೆ. ಲಂಡನ್‍ನಲ್ಲಿ ಕಾರ್ಪೊರೇಟ್ ವಂಚಕರನ್ನು ರಕ್ಷಿಸಲು 10,000 ಕೋಟಿ ರೂ. ಖರ್ಚು ಮಾಡಲಾಗಿದೆ. ನಮ್ಮ ಬಳಿ ಈ ಬಗ್ಗೆ ದಾಖಲೆಗಳಿವೆ. ಅವುಗಳನ್ನು ಬಹಿರಂಗ ಪಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: XE ರೂಪಾಂತರಿಯನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ: ಮಾ ಸುಬ್ರಮಣಿಯನ್

    ನಾನು ಮತ್ತು ನನ್ನ ಮಂತ್ರಿಗಳು ಆಹಾರ ಧಾನ್ಯ ಖರೀದಿಸಲು ದೆಹಲಿಗೆ ಹೋಗಿದ್ದೆವು. ಆದರೆ ಅಲ್ಲಿ ಕೇಂದ್ರ ಸಚಿವರು ರೈತರು ಅವಮಾನಿಸಿದ್ದಾರೆ. ತೆಲಂಗಾಣ ಜನರು ಒಡೆದ ಅಕ್ಕಿ ತಿನ್ನುವಂತೆ ಹೇಳಿದ್ದಾರೆ. ಕೇಂದ್ರ ಮತ್ತು ದುರ್ಬಲ ರಾಜ್ಯಗಳನ್ನು ಹೊಂದುವುದು ಬಿಜೆಪಿ ತತ್ವವಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಮೇ.3ರೊಳಗೆ ಮಸೀದಿಗಳಿಂದ ಧ್ವನಿವರ್ಧಕ ತೆರವುಗೊಳಿಸಿ: ಸರ್ಕಾರಕ್ಕೆ ರಾಜ್ ಠಾಕ್ರೆ ಗಡುವು

    ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರು ಇತ್ತೀಚೆಗೆ ತೆಲಂಗಾಣ ಸರ್ಕಾರವು ಭಾರತೀಯ ಆಹಾರ ನಿಗಮಕ್ಕೆ ಕಚ್ಚಾ ಅಕ್ಕಿಯನ್ನು ಪೂರೈಸುವುದಿಲ್ಲ ಎಂದು ಲಿಖಿತವಾಗಿ ನೀಡಿದ್ದಾರೆ ಎಂದು ಆರೋಪಿಸಿದರು.

  • ಮೋದಿಯನ್ನು ಭೇಟಿಯಾದ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್

    ಮೋದಿಯನ್ನು ಭೇಟಿಯಾದ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್

    ನವದೆಹಲಿ: ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲೆಯಾದ ತಮಿಳಿಸೈ ಸೌಂದರರಾಜನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಜೊತೆಗೆ ಅಮಿತ್ ಶಾ ಅವರನ್ನು ಸಹ ಭೇಟಿಯಾಗಲಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಪ್ರಗತಿ ಭವನ ಮತ್ತು ರಾಜಭವನ ನಡುವಿನ ಅಂತರ ಹೆಚ್ಚುತ್ತಿರುವ ಮಧ್ಯೆ ರಾಜ್ಯಪಾಲರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಕೂಡ ದೆಹಲಿಯಲ್ಲಿರುವುದು ಎಲ್ಲರಲ್ಲಿಯೂ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಡ್ರಾಮಾ ಕ್ವೀನ್ ಭಾರತಿ ಸಿಂಗ್ ಗಂಡನಿಗೆ 6 ಮಕ್ಕಳು ಬೇಕಂತೆ : ಹೆರಿಗೆ ನೋವಿನ ಕ್ಷಣಗಳನ್ನು ಹಂಚಿಕೊಂಡ ಹಾಸ್ಯ ಕಲಾವಿದೆ

    ಜೂನ್ 2021 ರಿಂದಲೂ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಅವರು ರಾಜ್ಯಪಾಲರನ್ನು ಭೇಟಿ ಮಾಡಿಲ್ಲ ಮತ್ತು ರಾಜ್ಯಪಾಲರು ಭಾಗವಹಿಸಿದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ ಎಂದು ಮೂಲಗಳ ಮೂಲಕ ತಿಳಿದುಬಂದಿದೆ. ಅಲ್ಲದೇ ರಾಜ್ಯಪಾಲರನ್ನು ಭೇಟಿಯಾಗಲು ಅಥವಾ ವಿವರಣೆ ನೀಡಲು ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಿಎಂ ಅವಕಾಶ ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ವಿವಾದಿತ ಸಮಾಧಿಯನ್ನ ಶಾಂತಿಯುತವಾಗಿ ಸ್ಥಳಾಂತರಿಸಿದ ಕ್ರೈಸ್ತ ಸಮುದಾಯ

    ಇತ್ತೀಚೆಗಷ್ಟೇ ರಾಜಭವನದಲ್ಲಿ ಆಯೋಜಿಸಲಾಗಿದ್ದ ಯುಗಾದಿ ಪೂರ್ವ ಕಾರ್ಯಕ್ರಮದಿಂದ ಅರ್ಧದಲ್ಲಿಯೇ ಕೆಸಿಆರ್ ಕ್ಯಾಬಿನೆಟ್ ಮಂತ್ರಿಗಳು ಎದ್ದು ಹೋಗಿದ್ದರು. ಮುಳುಗು ಜಿಲ್ಲೆಯ ಸಮ್ಮಕ್ಕ ಸರಳಮ್ಮ ಜಾತ್ರೆಗೆ ರಾಜ್ಯಪಾಲರು ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ಇತ್ತೀಚೆಗಷ್ಟೇ ನೂತನವಾಗಿ ಉದ್ಘಾಟನೆಗೊಂಡ ಯದಾದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದಗಲೂ ಜಿಲ್ಲಾಧಿಕಾರಿಗಳು ರಾಜ್ಯಪಾಲರನ್ನು ಬರಮಾಡಿಕೊಂಡಿರಲಿಲ್ಲ.

  • ಹೃದಯ ಸಂಬಂಧಿ ಸಮಸ್ಯೆಯಿಂದ ತೆಲಂಗಾಣ ಸಿಎಂ ಆಸ್ಪತ್ರೆಗೆ ದಾಖಲು

    ಹೃದಯ ಸಂಬಂಧಿ ಸಮಸ್ಯೆಯಿಂದ ತೆಲಂಗಾಣ ಸಿಎಂ ಆಸ್ಪತ್ರೆಗೆ ದಾಖಲು

    ಹೈದರಾಬಾದ್: ಹೃದಯ ಸಂಬಂಧಿ ಸಮಸ್ಯೆ, ಜ್ವರದಿಂದ ಬಳಲುತ್ತಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (K Chandrashekar Rao) ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನಂತರ ಡಿಸ್ಚಾರ್ಜ್ ಆಗಿದ್ದಾರೆ.

    ಜ್ವರ, ಹೃದಯದಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೈದರಾಬಾದ್‍ನ ಯಶೋಧಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯರು ಆಂಜಿಯೋಗ್ರಾಮ್ (angiogram) ಪರೀಕ್ಷೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

    ಆಸ್ಪತ್ರೆ ವೈದ್ಯರಾದ ಎಂ. ವಿ. ರಾವ್ ಅವರು ಮಾತನಾಡಿ, ಪ್ರತಿವರ್ಷ ಚಂದ್ರಶೇಖರ್‌ ರಾವ್‌ ಅವರಿಗೆ ಎಲ್ಲ ರೀತಿಯ ತಪಾಸಣೆ ಮಾಡುತ್ತೇವೆ. ಸ್ವಲ್ಪ ಜ್ವರ, ಎದೆಯಲ್ಲಿ ನೋವು ಕಾಣಿಸಿಕೊಂಡಿದೆ. ಅವರ ಹೃದಯದಲ್ಲಿ ಯಾವುದೇ ಬ್ಲಾಕ್‍ಗಳು ಕಂಡುಬಂದಿಲ್ಲ. ಸಿಟಿ ಸ್ಕ್ಯಾನ್, ಎಂಆರ್‌ಐ ಸ್ಕ್ಯಾನ್ ಮಾಡುತ್ತೇವೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ:  ಕೆಲಸ ಬಿಟ್ಟು ಬಿರಿಯಾನಿ ಸ್ಟಾಲ್ ತೆರೆದ ಇಂಜಿನಿಯರ್ ಯುವಕರು

  • ಪ್ರಾದೇಶಿಕ ರಾಜಕೀಯ ಪಕ್ಷಗಳೊಂದಿಗೆ ಸೇರಿ ಬಿಜೆಪಿಯೇತರ ರಂಗ ರೂಪಿಸುತ್ತೇವೆ: ಕೆಸಿಆರ್‌

    ಪ್ರಾದೇಶಿಕ ರಾಜಕೀಯ ಪಕ್ಷಗಳೊಂದಿಗೆ ಸೇರಿ ಬಿಜೆಪಿಯೇತರ ರಂಗ ರೂಪಿಸುತ್ತೇವೆ: ಕೆಸಿಆರ್‌

    ರಾಂಚಿ: ದೇಶಕ್ಕೆ ನೂತನ ದಿಕ್ಕನ್ನು ನೀಡಲು ಸಮಾನ ಮನಸ್ಕ ಪಕ್ಷಳೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ರಾಜಕೀಯ ಸಂಘಟನೆಗಳ ಜೊತೆ ಮಾತುಕತೆ ನಡೆಸಿ ಬಿಜೆಪಿಯೇತರ ರಂಗವನ್ನು ರೂಪಿಸುತ್ತೇನೆ ಎಂದು ತಿಳಿಸಿದರು.

    ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ದೇಶ ಯಾವುದೇ ರೀತಿಯಲ್ಲೂ ಅಭಿವೃದ್ಧಿಯನ್ನು ಹೊಂದಿಲ್ಲ. ಇದರಿಂದಾಗಿ ರಾಷ್ಟ್ರದ ಅಭಿವೃದ್ಧಿಗೆ ಅಗತ್ಯವಾದ ಕ್ರಮ ಜರುಗಿಸುವಲ್ಲಿ ರಾಜಕೀಯ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.

    ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನವನ್ನು ನಡೆಸುತ್ತೇವೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದನ್ನು ಕೆಲವರು ಮೂರನೇ ರಂಗವೆಂದು ಇನ್ನೂ ಕೆಲವರು ನಾಲ್ಕನೇ ರಂಗವೆಂದು ಕರೆಯುತ್ತಿದ್ದಾರೆ. ಆದರೆ ಇದು ಯಾವ ಆಕಾರವನ್ನು ತೆಗೆದುಕೊಳ್ಳುತ್ತವೆ ಎಂದು ನಂತರ ನಿಮಗೆ ತಿಳಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬುದ್ಧಿಮಾಂದ್ಯನ ಮೇಲೆ ಮನಬಂದಂತೆ ಥಳಿಸಿದ PSI

    ಈ ಬಗ್ಗೆ ಶೀಘ್ರವೇ ನಿಮಗೆ ಅರ್ಥವಾಗುತ್ತದೆ. ಈಗಲೇ ತೀರ್ಮಾನಕ್ಕೆ ಬರಬೇಡಿ ಎಂದ ಅವರು, ಜಾರ್ಖಂಡ್‌ ಮುಖ್ಯಮಂತ್ರಿ ಮತ್ತು ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರೊಂದಿಗೆ ರಾಜಕೀಯ ಚರ್ಚೆ ನಡೆಸಿದ್ದೇನೆ ಎಂದು ಈ ವೇಳೆ ತಿಳಿಸಿದರು. ಇದನ್ನೂ ಓದಿ: ಉಕ್ರೇನ್‍ನಿಂದ ಹಿಂತಿರುಗಿದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನುಮತಿ ನೀಡಿ – ಪ್ರಧಾನಿಗೆ ಐಎಂಎ ಪತ್ರ

    ಕಳೆದ ಡಿಸೆಂಬರ್‌ನಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ಕಳೆದ ತಿಂಗಳು ಮಹಾರಾಷ್ಟ್ರದಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಶರದ್ ಪವರ್ ಜೊತೆ ಮಾತುಕತೆ ನಡೆಸಿದ್ದರು.

  • ಎಲ್ಲರನ್ನು ಒಟ್ಟಾಗಿ ಮುನ್ನಡೆಸುವ ಶಕ್ತಿ ಕೆಸಿಆರ್‌ಗಿದೆ: ಸಂಜಯ್ ರಾವತ್

    ಎಲ್ಲರನ್ನು ಒಟ್ಟಾಗಿ ಮುನ್ನಡೆಸುವ ಶಕ್ತಿ ಕೆಸಿಆರ್‌ಗಿದೆ: ಸಂಜಯ್ ರಾವತ್

    ಮುಂಬೈ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಎಲ್ಲರನ್ನು ಒಟ್ಟಾಗಿ ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಅಭಿಪ್ರಾಯಪಟ್ಟರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ. ಚಂದ್ರಶೇಖರ್ ರಾವ್ ಅವರು ತುಂಬಾ ಕಷ್ಟಪಟ್ಟು ಕೆಲಸ ಮಾಡುವ ನಾಯಕರಾಗಿದ್ದಾರೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಸಾಕಷ್ಟು ಹೋರಾಟಗಳನ್ನು ಎದುರಿಸಿದ್ದಾರೆ. ಅವರು ಎಲ್ಲವನ್ನೂ ಒಟ್ಟಾಗಿ ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ವಿಧ್ವಾಸ ವ್ಯಕ್ತಪಡಿಸಿದ ಅವರು, ಪ್ರಸ್ತುತ ನಡೆಯುತ್ತಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಲಿದೆ ಎಂದು ಭವಿಷ್ಯ ನುಡಿದರು.

    ಭಾನುವಾರ ನಡೆದ ಸಭೆಯಲ್ಲಿ, ತೆಲಂಗಾಣ ರಾಷ್ಟ್ರ ಸಮಿತಿಯ ಮುಖ್ಯಸ್ಥರಾದ ಚಂದ್ರಶೇಖರ್ ರಾವ್ ಮತ್ತು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಅಭಿವೃದ್ಧಿ ಮತ್ತು ದೇಶದ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆಂದರು. ಇದನ್ನೂ ಓದಿ: ಈಶ್ವರಪ್ಪನಿಗೆ ದಿನಕ್ಕೊಮ್ಮೆ ನನ್ನ ಹೆಸ್ರು ಹೇಳದಿದ್ರೆ ನಿದ್ರೆ ಬರಲ್ಲ: ಡಿಕೆಶಿ

    ಮುಂಬೈನಲ್ಲಿ ಚಂದ್ರಶೇಖರ್ ರಾವ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದ ನಂತರದಲ್ಲಿ ನಾನು ಹಾಗೂ ಠಾಕ್ರೆ ಅವರು ಚರ್ಚಿಸಿ, ಈ ಸಮಯದ ಬದಲಾವಣೆಯ ಅಗತ್ಯವಿದೆ ಎಂದು ನಾವು ಒಪ್ಪಿಕೊಂಡಿದ್ದೇವೆ ಎಂದರು. ಇದನ್ನೂ ಓದಿ: ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೊಡುವಂತೆ ಪಟ್ಟು ಹಿಡಿದ ವಿದ್ಯಾರ್ಥಿನಿಯರು!

    ಟಿಆರ್‌ಎಸ್ ಮುಖ್ಯಸ್ಥರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಭಾನುವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದರು. ಶಿವಸೇನಾ ಸಂಸದ ಮತ್ತು ಪಕ್ಷದ ಮುಖ್ಯ ವಕ್ತಾರ ಸಂಜಯ್ ರಾವತ್ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದು, ಚಂದ್ರಶೇಖರ್ ರಾವ್ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‌ನೊಂದಿಗೆ ಅಧಿಕಾರವನ್ನು ಹಂಚಿಕೊಂಡಿರುವ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ.

  • ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚಿಸಿದರೂ ಮೋದಿ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ: ರಾಮದಾಸ್ ಅಠವಳೆ

    ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚಿಸಿದರೂ ಮೋದಿ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ: ರಾಮದಾಸ್ ಅಠವಳೆ

    ನವದೆಹಲಿ: ಶಿವಸೇನೆ, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಮತ್ತು ಇತರ ಪಕ್ಷಗಳು ಸೇರಿ ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚಿಸಿದರೂ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ಡಿಎ ಸರ್ಕಾರದಿಂದ ಜನರು ಸಂತೋಷವಾಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚಿಸಿದರೂ ಯಾವುದೇ ಅಪಾಯವಿಲ್ಲ ಎಂದ ಅವರು, 2024ರ ರಾಷ್ಟ್ರೀಯ ಚುನಾವಣೆ ಮತ್ತು ಐದು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಟಿಆರ್‌ಎಸ್ ಮುಖ್ಯಸ್ಥರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಭಾನುವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದರು.

    ಶಿವಸೇನಾ ಸಂಸದ ಮತ್ತು ಪಕ್ಷದ ಮುಖ್ಯ ವಕ್ತಾರ ಸಂಜಯ್ ರಾವತ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದು, ನಂತರದ ದಿನದಲ್ಲಿ ಚಂದ್ರಶೇಖರ್ ರಾವ್ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‌ನೊಂದಿಗೆ ಅಧಿಕಾರವನ್ನು ಹಂಚಿಕೊಂಡಿರುವ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾಗಲಿದ್ದಾರೆ. ಇದನ್ನೂ ಓದಿ: ಉದ್ಧವ್ ಠಾಕ್ರೆಯನ್ನು ಭೇಟಿಯಾದ ತೆಲಂಗಾಣ CM ಕೆಸಿಆರ್

    ಬಿಜೆಪಿ ನೀತಿಗಳ ವಿರುದ್ಧ ಹೋರಾಟ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಎತ್ತಿಹಿಡಿಯುವ ರಾವ್ ಅವರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಠಾಕ್ರೆ ಇತ್ತೀಚಿಗೆ ಘೋಷಿಸಿದ್ದರು. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ: ಚರಣ್‍ಜಿತ್ ಸಿಂಗ್ ಚನ್ನಿ

    ಹಲವು ವಿಷಯಗಳಿಂದ ಬಿಜೆಪಿ ಮತ್ತು ಕೇಂದ್ರವನ್ನು ಟೀಕಿಸುತ್ತಾ ಬಂದಿರುವ ತೆಲಂಗಾಣ ಸಿಎಂ, ಬಿಜೆಪಿ ಮತ್ತು ಎನ್‌ಡಿಎ ಸರ್ಕಾರದ ವಿರುದ್ಧ ವಿವಿಧ ರಾಜಕೀಯ ಪಕ್ಷಗಳನ್ನು ಒಗ್ಗೂಡಿಲು ಪ್ರಯತ್ನಗಳನ್ನು ನಡೆಸುತ್ತಿದ್ದು, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ಸಹವರ್ತಿಗಳೊಂದಿಗೆ ಸಭೆ ನಡೆಸುವುದಾಗಿ ಹೇಳಿದ್ದರು.