Tag: ಕೆ.ಜಿ ಬೋಪಯ್ಯ

  • ಜಿಲ್ಲೆಯ ಬೇತಾಳದಿಂದ ನನಗೆ ಸಚಿವ ಸ್ಥಾನ ಸಿಗಲಿಲ್ಲ: ಅಪ್ಪಚ್ಚು ರಂಜನ್

    ಜಿಲ್ಲೆಯ ಬೇತಾಳದಿಂದ ನನಗೆ ಸಚಿವ ಸ್ಥಾನ ಸಿಗಲಿಲ್ಲ: ಅಪ್ಪಚ್ಚು ರಂಜನ್

    ಮಡಿಕೇರಿ: ಸಚಿವ ಸಂಪುಟ ವಿಸ್ತರಣೆ ವೇಳೆಯಲ್ಲಿ ಕೊಡಗು ಜಿಲ್ಲೆಗೂ ಒಂದು ಮಂತ್ರಿಸ್ಥಾನ ಸಿಗುತ್ತದೆ ಎನ್ನುವ ನಿರೀಕ್ಷೆಯಲ್ಲಿ ಇದ್ದ ಶಾಸಕ ಅಪ್ಪಚ್ಚು ರಂಜನ್ ಅವರಿಗೆ ಕೊನೆಗಳಿಗೆಯಲ್ಲಿ ಸಚಿವ ಸ್ಥಾನ ಕೈಯಿತಪ್ಪಿ ಹೋಗಿದೆ. ಈ ಕುರಿತಾಗಿ ಮಾಧ್ಯಮದವರೊಂದಿಗೆ ಅಪ್ಪಚ್ಚು ರಂಜನ್ ಮಾತಣಾಡಿದ್ದಾರೆ.

    ನನ್ನ ಬೆನ್ನಿಗೆ ಬಿದ್ದ ಬೇತಾಳದಿಂದ ನನಗೆ ಸಚಿವಸ್ಥಾನ ಸಿಗಲಿಲ್ಲ. ನಾನೇ ಬೆಳೆಸಿದ ಬೇತಾಳ ನನ್ನ ತಲೆಗೆ ಹೊಡೆಯುತ್ತಿದೆ. ಆ ಬೇತಾಳವನ್ನು ಬೆಳೆಸಬಾರದೆಂದು ನನಗೆ ಗೊತ್ತಿರಲಿಲ್ಲ, ಈಗ ಬೇತಾಳ ಎತ್ತರಕ್ಕೆ ಬೆಳೆದು ನನಗೆ ಸಮಸ್ಯೆ ಆಗಿದೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅಕ್ರೋಶ ಹೋರ ಹಾಕಿದ್ದಾರೆ. ಇದನ್ನೂ ಓದಿ: ಯಾಕ್ರೀ ಇಂತಹವರಿಗೆಲ್ಲ ಕೆಲಸ ಕೊಡ್ತೀರಾ, ನಿಮ್ಮನ್ನೆಲ್ಲ ಬಲಿ ಹಾಕ್ತೀವಿ- ರೇವಣ್ಣ ಆಕ್ರೋಶ

    ಜಿಲ್ಲೆಯ ಜನ ಪ್ರತಿನಿಧಿಯೊಬ್ಬರು ಹಸ್ತಕ್ಷೇಪ ಮಾಡಿದ ಪರಿಣಾಮದಿಂದಾಗಿ ಈ ಬಾರೀ ಸಚಿವಸ್ಥಾನ ಸಿಕ್ಕಿಲ್ಲ. ಹೈಕಮಾಂಡ್‍ನ ಮೂವರಿಂದ ನನಗೆ ಕರೆ ಬಂದಿತ್ತು. ಸಚಿವಸ್ಥಾನ ಸಿಗೋದು ಖಚಿತ ಅಂತ ಹೈಕಮಾಂಡ್ ಹೇಳಿದ್ದರು. ಆದರೆ ಪಟ್ಟಿ ಬೆಂಗಳೂರಿಗೆ ಬಂದಾಗ ಎಲ್ಲವೂ ಕೈತಪ್ಪಿಹೋಯಿತು. ಅದಕ್ಕೆ ಈ ಬೇತಾಳವೇ ಕಾರಣ. ಸಚಿವ ಸಂಪುಟದಲ್ಲಿ ಜಿಲ್ಲಾವಾರು ಜಾತಿವಾರು ಸಾಮಾಜಿಕ ನ್ಯಾಯ ಇರುವುದಾಗಿ ಹೇಳಿದ್ರು. ಆದರೆ ಕೊಡಗು ಜಿಲ್ಲೆಗೆ ಪ್ರಾತಿನಿಧ್ಯವನ್ನೇ ಕೊಟ್ಟಿಲ್ಲ. ಕೊಡಗನ್ನು ಟೇಕ್ ಈಸ್ ಇಟ್ ಗ್ರ್ಯಾಂಟೆಡ್ ಎಂದು ಮಾಡಿಕೊಳ್ಳಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

    ರಾಜ್ಯದಲ್ಲಿ ಎಂಟು ಚುನಾವಣೆ ನಡೆದಿವೆ. ಅದರಲ್ಲಿ ಬಿಜೆಪಿ ಏಳು ಬಾರಿ ಸೋತಿದೆ ಮಡಿಕೇರಿಯಲ್ಲಿ ಮಾತ್ರ ಭರ್ಜರಿಯಾಗಿ ಗೆದ್ದಿದ್ದೇವೆ. ಹೀಗೆ ಗೆಲ್ಲಿಸಿದ್ದೇ ತಪ್ಪಾಯಿತಾ? ಜಿಲ್ಲಾವಾರು ಪ್ರಾತಿನಿಧ್ಯ ಕೊಡುತ್ತೇವೆ ಎಂದಿದ್ದರು. ಆದರೆ ಬೆಂಗಳೂರಿಗೆ ಎಂಟು ಸ್ಥಾನ ಮಂಗಳೂರಿಗೆ 3 ಸ್ಥಾನ, ಶಿವಮೊಗ್ಗಕ್ಕೆ ಮೂರುಸ್ಥಾನ ಬೆಳಗಾವಿಗೆ ಐದು ಸ್ಥಾನ ಕೊಡಲಾಗಿದೆ. ಕೊಡಗನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಬೇಸರ ಹೊರಹಾಕಿದರು.

    ಸಂಸದರು ಕೂಡ ಇದರ ಬಗ್ಗೆ ಮೌನ ವಹಿಸಿದ್ಯಾಕೆ ?ಅವರಿಗೆ ಜಿಲ್ಲೆಯಿಂದ 80 ಸಾವಿರ ಮತಗಳ ಮುನ್ನಡೆಯನ್ನು ನೀಡಿದ್ದೆವು. ಅವರಾದರೂ ಹೈಕಮಾಂಡ್ ಜೊತೆಗೆ ಮಾತನಾಡಬಹುದಿತ್ತು. ಜಿಲ್ಲೆಯಲ್ಲಿ ನಾಲ್ಕೈದು ಬಾರಿ ಗೆದ್ದವರಿದ್ದಾರೆ ಎಂದು ಹೇಳಬಹುದಿತ್ತು. ಕೊಡಗು ಜಿಲ್ಲೆಯನ್ನು ಇಷ್ಟೊಂದು ಕಡೆಗಣಿಸಿದ್ದು, ಸರಿಯಲ್ಲ. ಇದರಿಂದ ನನಗೆ ಮತ್ತು ಜಿಲ್ಲೆಯ ಜನರಿಗೆ ತೀವ್ರ ಬೇಸರವಾಗಿದೆ ಮುಂದಿನ ಚುನಾವಣೆಗಳಲ್ಲಿ ಖಂಡಿತಾ ಇದರಿಂದ ಪಕ್ಷಕ್ಕೆ ನಷ್ಟವಾಗಲಿದೆ ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ.

    ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಒಳ ಜಗಳ ಕಂಡುಬರುತ್ತಿದ್ದು, ಕೊಡಗಿನಲ್ಲೂ ಇಬ್ಬರ ಶಾಸಕರ ನಡುವೆ ಆಂತರಿಕ ಒಳಜಗಳಕ್ಕೆ ಕಾರಣವಾಗುತ್ತಿದೆ.

  • ಕೊಡಗಿನಲ್ಲಿ ಜುಲೈ 5ರ ಬಳಿಕವೂ ಅನ್‍ಲಾಕ್ ಡೌಟ್- ಬೋಪಯ್ಯ ಸುಳಿವು

    ಕೊಡಗಿನಲ್ಲಿ ಜುಲೈ 5ರ ಬಳಿಕವೂ ಅನ್‍ಲಾಕ್ ಡೌಟ್- ಬೋಪಯ್ಯ ಸುಳಿವು

    ಮಡಿಕೇರಿ: ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆಯಾಗದ ಹಿನ್ನಲೆಯಲ್ಲಿ ಜುಲೈ 5ರ ಬಳಿಕವೂ ಕೊಡಗು ಜಿಲ್ಲೆ ಅನ್‍ಲಾಕ್ ಆಗೋದು ಬಹುತೇಕ ಡೌಟ್. ಈ ಕುರಿತು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯ ಹಂಚಿಕೊಂಡಿದ್ದು, ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆ ಆಗದಿದ್ದರೆ ಲಾಕ್‍ಡೌನ್ ತೆರವುಗೊಳಿಸುವುದು ಬೇಡ ಎಂದು ಹೇಳಿದ್ದಾರೆ.

    ಈ ಕುರಿತು ಮಾತನಾಡಿದ ಅವರು, ಜೀವನಕ್ಕಿಂತ ಜೀವ ಮುಖ್ಯ. ಹೀಗಾಗಿ ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆ ಆಗದಿದ್ದರೆ, ಜಿಲ್ಲೆಯಲ್ಲಿ ಲಾಕ್‍ಡೌನ್ ಮುಂದುವರಿಸುವುದು ಅನಿವಾರ್ಯ ಎಂದು ಕೆ.ಜಿ.ಬೋಪಯ್ಯ ಅವರು ಲಾಕ್‍ಡೌನ್ ಮುಂದುವರಿಯುವ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ ಸುಳಿಯಲ್ಲಿ ಕೊಡಗು- ರಾಜ್ಯದಲ್ಲಿಂದು 3,382 ಮಂದಿಗೆ ಪಾಸಿಟಿವ್

    ಇತ್ತರೆ ಜಿಲ್ಲೆಗಳಲ್ಲಿ ಅನ್‍ಲಾಕ್ ಅಗಿರುವುದರಿಂದ ಲಾಕ್‍ಡೌನ್ ಆಗಿರುವ ಕೊಡಗು ಜಿಲ್ಲೆಗೆ ಹೆಚ್ಚಾಗಿ ಪ್ರವಾಸಿಗರು ಬರುತ್ತಿರುವುದರಿಂದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಗಡಿ ಭಾಗದಲ್ಲಿಯೂ ಹೆಚ್ಚಾಗಿ ಹೊರ ರಾಜ್ಯದ ಜನರನ್ನು ತಪಾಸಣೆ ನಡೆಸದಿರುವುದರಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನಲಾಗಿದೆ. ಅಲ್ಲದೆ ಬಹುತೇಕ ಜಿಲ್ಲೆಗಳಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದೆ. ಹಾಗೆಯೇ ನಮ್ಮ ಜಿಲ್ಲೆಯಲ್ಲೂ ಅನ್‍ಲಾಕ್ ಮಾಡಬೇಕು ಎಂದು ಜಿಲ್ಲೆಯಲ್ಲಿ ಕೆಲವರು ಹೇಳುತ್ತಿದ್ದಾರೆ.

    ಕೊಡಗಿನಲ್ಲಿ ಇಂದು 209 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.9.08 ಕ್ಕೆ ಹೆಚ್ಚಳವಾಗಿದೆ. ಈ ಹಿನ್ನೆಲೆ ಅನ್‍ಲಾಕ್ ಮಾಡುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಬಲವಾಗಿ ಕೇಳಿಬರುತ್ತಿದೆ.

  • ಯಾವ ಪ್ರವಾಸಿಗರು ನಮ್ಮ ಜಿಲ್ಲೆಗೆ ಬರುವುದು ಬೇಡ: ಕೆ.ಜಿ ಬೋಪಯ್ಯ

    ಯಾವ ಪ್ರವಾಸಿಗರು ನಮ್ಮ ಜಿಲ್ಲೆಗೆ ಬರುವುದು ಬೇಡ: ಕೆ.ಜಿ ಬೋಪಯ್ಯ

    ಮಡಿಕೇರಿ: ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚು ಕಡಿಮೆ ಅಗುತ್ತಿದೆ.ಹೀಗಾಗಿ ನಮ್ಮ ಜಿಲ್ಲೆಗೆ ಪ್ರವಾಸಿಗರು ಬರುವುದುಬೇಡ ಎಂದು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮರದ ಕೆಳಗೆ, ನಡು ರಸ್ತೆಯಲ್ಲಿ, ಬೆಳೆಗಳ ಮಧ್ಯೆ, ಜನ ಎಲ್ಲಿ ಸಿಗುತ್ತಾರೋ ಅಲ್ಲಿ ಲಸಿಕೆ

    ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಕೊರೊನಾ ಸೋಂಕು ಎಲ್ಲಾಕಡೆ ಇದೆ. ವೀಕೆಂಡ್‍ಗಳಲ್ಲಿ ರಾಜ್ಯ ಮತ್ತು ಅಂತರ್ ರಾಜ್ಯದ ಪ್ರವಾಸಿಗರು ಎಂಟ್ರಿ ಕೋಡುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಜಿಲ್ಲೆ ಒಳಗೆ ಬಂದು ಬಿಟ್ಟರೆ ಸ್ವಯಂ ಕೃತ ಅಪರಾಧ ಅಗುತ್ತದೆ. ನಮ್ಮ ಜಿಲ್ಲೆಗೆ ಯಾವ ಪ್ರವಾಸಿಗರು ಬರೋದು ಬೇಡ  ಎಂದಿದ್ದಾರೆ.

    ಕೊಡಗಿಗೆ ಪ್ರವಾಸಿಗರು ಬರುವುದು ಸರಿ ಅಲ್ಲ. ಜಿಲ್ಲೆಯಲ್ಲಿ ದಿನನಿತ್ಯ ಕೊರೊನಾ ಸೋಂಕಿನ ಪ್ರಕರಣದ ಪಾಸಿಟಿವ್ ರೇಟ್ ಕಣ್ಣಾಮುಚ್ಚಾಲೆ ಅಡುತ್ತಿದೆ. ಹೀಗೆ ಇರುವ ಸಂದರ್ಭದಲ್ಲಿ ಟೆಸ್ಟಿಂಗ್ ರೇಟ್ ಕೋಡ ಜಿಲ್ಲೆಯಲ್ಲಿ ಜಾಸ್ತಿ ಮಾಡಿದ್ದೇವೆ. ರಾಜ್ಯದಲ್ಲಿ ವ್ಯಾಕ್ಸಿನ್ ಹಾಕಿಸಿಕೊಳ್ಳುವುದರಲ್ಲೂ ಕೊಡಗು ಜಿಲ್ಲೆಯ ಜನರು ಮುಂದೆ ಇದ್ದಾರೆ. ಹೀಗೆ ಇರುವ ಸಂದರ್ಭದಲ್ಲಿ ಹೋರ ಜಿಲ್ಲೆಯ ಹಾಗೂ ಹೋರ ರಾಜ್ಯದ ಪ್ರವಾಸಿಗರು ಬಂದು ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಪ್ರವಾಸಿಗರನ್ನು ಜಿಲ್ಲೆ ಒಳಗೆ ಬಿಟ್ಟರೆ ನಾವೇ ಸ್ವಯಂ ಕೃತ ಅಪರಾಧವಾಗುತ್ತದೆ. ಹೀಗಾಗಿ ಪ್ರವಾಸಿಗರನ್ನು ತಡೆಯಬೇಕು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ವಿವಿಧ ಇಲಾಖೆ ಆದಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ಬೋಪಯ್ಯ ತಿಳಿಸಿದ್ದಾರೆ.

  • ಕೊಡಗು ಮೆಡಿಕಲ್ ಕಾಲೇಜಿಗೆ ತಜ್ಞ ವೈದ್ಯರನ್ನು ನೇಮಿಸುವಂತೆ ಸಿಎಂಗೆ ಮನವಿ

    ಕೊಡಗು ಮೆಡಿಕಲ್ ಕಾಲೇಜಿಗೆ ತಜ್ಞ ವೈದ್ಯರನ್ನು ನೇಮಿಸುವಂತೆ ಸಿಎಂಗೆ ಮನವಿ

    ಮಡಿಕೇರಿ: ಕೊಡಗು ಮೆಡಿಕಲ್ ಕಾಲೇಜಿಗೆ ಹೆಚ್ಚುವರಿ ವೈದ್ಯರನ್ನು ಕೂಡಲೇ ನೇಮಕ ಮಾಡುವಂತೆ ಕೊಡಗಿನ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

    ಈಗಾಗಲೇ ಮೆಡಿಕಲ್ ಕಾಲೇಜಿಗೆ ವೈದ್ಯರ ಹುದ್ದೆ ಭರ್ತಿ ಸಂಬಂಧಿತ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿತ್ತಾದರೂ ನಿರೀಕ್ಷಿತ ರೀತಿಯಲ್ಲಿ ವೈದ್ಯರು ಬರಲಿಲ್ಲ. ಹೀಗಾಗಿ ಸರ್ಕಾರವೇ ಕೂಡಲೇ ಸೂಕ್ತ ತಜ್ಞ ವೈದ್ಯರನ್ನು ಮಡಿಕೇರಿಯಲ್ಲಿರುವ ಕೊಡಗು ಮೆಡಿಕಲ್ ಕಾಲೇಜಿಗೆ ನೇಮಿಸುವ ಮೂಲಕ ಕೊಡಗಿನ ವೈದ್ಯಕೀಯ ಕ್ಷೇತ್ರಕ್ಕೆ ನೆರವಾಗುವಂತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಶಾಸಕರು ಮನವಿ ಮಾಡಿದರು. ಈ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬೋಪಯ್ಯ ತಿಳಿಸಿದ್ದಾರೆ.

    ಇದೇ ಸಂದರ್ಭ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ರಮೇಶ್ ಹೊಳ್ಳ, ಮಡಿಕೇರಿ ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. ಮುಖ್ಯಮಂತ್ರಿ ಭೇಟಿ ಸಂದರ್ಭ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ನಿಗಮದ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಹಾಜರಿದ್ದು ಸಿಎಂ ಜೊತೆ ಮಾತುಕತೆ ನಡೆಸಿದರು. ಇದನ್ನೂ ಓದಿ: ಅಹಂಕಾರ ಮಾಡಿದ್ರೆ ಮುದ್ದು ಮಾಡ್ತೀನಿ, ದುರಾಂಕಾರ ತೋರಿದ್ರೆ ಮದ್ದಾನೆ ಆಗ್ತೀನಿ: ಚಕ್ರವರ್ತಿ

  • ಯೋಗೇಶ್ವರ್ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ: ಕೆ.ಜಿ. ಬೋಪಯ್ಯ

    ಯೋಗೇಶ್ವರ್ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ: ಕೆ.ಜಿ. ಬೋಪಯ್ಯ

    ಮಡಿಕೇರಿ: ಸಚಿವ ಯೋಗೇಶ್ವರ್ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ವಿರಾಜ್‍ಪೇಟೆ ಬಿಜೆಪಿ ಶಾಸಕ ಕೆ.ಜಿ ಬೋಪಯ್ಯ ಗರಂ ಆಗಿದ್ದಾರೆ.

    ಮಡಿಕೇರಿ ತಾಲೂಕಿನ ನಾಪೋಕ್ಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ಮಾತನ್ನೆಲ್ಲ ನಾನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಅಂತವರ ಮಾತಿಗೆಲ್ಲಾ ಯಾವುದೇ ಬೆಲೆ ಇಲ್ಲ ಎಂದು ತಿರುಗೇಟು ನೀಡಿದರು.

    ಸಿಎಂ ಯಡಿಯೂರಪ್ಪ ಅವರೇ ಮುಂದೆಯೂ ಸಿಎಂ ಆಗಿ ಮುಂದುವರಿಯುತ್ತಾರೆ. ಸಿಎಂ ಸ್ಥಾನದಿಂದ ಬದಲಾವಣೆಯ ಮಾತೇ ಇಲ್ಲ ಎಂದು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಕೂಡ ಸ್ಪಷ್ಟವಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ರಾಷ್ಟ್ರೀಯ ಅಧ್ಯಕ್ಷರು ಅದನ್ನೇ ಹೇಳಿದ್ದಾರೆ.

    ರಾಜ್ಯಅಧ್ಯಕ್ಷರಂತು ಅದನ್ನೇ ಹೇಳಿ ಹೇಳಿ ಅವರಿಗೆ ಸಾಕಾಗಿದೆ ಹೋಗಿದೆ. ಹೀಗಿದ್ದರು ಸಿಎಂ ಬದಲಾಗುತ್ತಾರೆ ಎನ್ನೋದು ಸಾಧ್ಯವೇ ಇಲ್ಲ. ಯೋಗೇಶ್ವರ್ ಅವರ ಮಾತು ಯಾರಿಗೂ ಲೆಕ್ಕಕ್ಕಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮತ್ತೆ ಡಿಸಿಗೆ ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ – ಇನ್ಮುಂದೆ ಮಾತಾಡಲ್ಲವೆಂದು ಕದನ ವಿರಾಮ ಘೋಷಣೆ!

    ಇತ್ತೀಚಿನ ದಿನಗಳ ಬಿಜೆಪಿಯಲ್ಲಿ ಮುಸುಕಿನ ಗುದ್ದಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಯೋಗೇಶ್ವರ್ ಅವರನ್ನು ಸಚಿವ ಸಂಪುಟದಿಂದ ಕೈಬೀಡುವಂತೆ ಬಿಜೆಪಿ ಸಚಿವ ಶಾಸಕರು ಹೇಳತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಆತನ ಬಗ್ಗೆ ಮಾತನಾಡುವಷ್ಟು ಯೋಗೇಶ್ವರ್ ದೊಡ್ಡ ವ್ಯಕ್ತಿ ಅಲ್ಲ ಎಂದು ಶಾಸಕರು ಗರಂ ಆಗಿದ್ದಾರೆ.

  • ಕೊಡಗಿನಲ್ಲಿ ನಡೆಯುತ್ತಿದೆ ಅಸ್ಸಾಂ ಕೂಲಿ ಕಾರ್ಮಿಕರ ದಾಖಲೆ ಪರಿಶೀಲನೆ

    ಕೊಡಗಿನಲ್ಲಿ ನಡೆಯುತ್ತಿದೆ ಅಸ್ಸಾಂ ಕೂಲಿ ಕಾರ್ಮಿಕರ ದಾಖಲೆ ಪರಿಶೀಲನೆ

    ಮಡಿಕೇರಿ: ಒಂದೆಡೆ ಎನ್‌ಆರ್‌ಸಿ(ರಾಷ್ಟ್ರೀಯ ನಾಗರಿಕ ನೋಂದಣಿ) ಮತ್ತು ಸಿಎಎ ಕಾಯ್ದೆ(ಪೌರತ್ವ ತಿದ್ದುಪಡಿ ಕಾಯ್ದೆ) ಜಾರಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ಕೊಡಗಿನ ಕಾಫಿ ತೋಟಗಳಲ್ಲಿ ಅಕ್ರಮವಾಗಿ ನೆಲೆಸಿರುವ ಅಸ್ಸಾಂ ಮತ್ತು ಬಾಂಗ್ಲಾ ವಲಸಿಗರ ದಾಖಲೆ ಪರಿಶೀಲನೆ ನಡೆಯುತ್ತಿದೆ.

    ಕೊಡಗಿನಲ್ಲಿ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಅಸ್ಸಾಂ ಕಾರ್ಮಿಕರು ನೆಲೆಸಿದ್ದು, ಜಿಲ್ಲೆಯ ಮೂರು ತಾಲೂಕಿನಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆಯಲ್ಲಿ ಪೊಲೀಸರಿಂದ ಅಸ್ಸಾಂ ಕೂಲಿ ಕಾರ್ಮಿಕರ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಅವರು, ಕೊಡಗಿನಲ್ಲಿ ಅಪಾರ ಸಂಖ್ಯೆಯಲ್ಲಿ ಅಸ್ಸಾಂ ಕಾರ್ಮಿಕರು ನೆಲೆಸಿದ್ದಾರೆ. ಒಂದೆಡೆ ಗೋಣಿಕೊಪ್ಪಲಿನಲ್ಲಿ ಉಗ್ರರ ತರಬೇತಿಗೆ ಸ್ಕೆಚ್ ಕೂಡ ಹಾಕಲಾಗಿದೆ ಎಂಬ ದೂರು ಕೇಳಿ ಬಂದಿತ್ತು. ಹೀಗಾಗಿ ಕಟ್ಟುನಿಟ್ಟಿನ ಪರಿಶೀಲನೆ ಆಗಲಿ ಎಂದು ಬೋಪಯ್ಯ ಒತ್ತಾಯಿಸಿದ್ದಾರೆ. ಅಲ್ಲದೆ ಕಾಫಿ ತೋಟದ ಮಾಲೀಕರು ಪೋಲಿಸ್ ಇಲಾಖೆಯೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

  • ಕೊಡಗಿನ ವೀರಯೋಧ ಅಜ್ಜಮಾಡ ದೇವಯ್ಯರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

    ಕೊಡಗಿನ ವೀರಯೋಧ ಅಜ್ಜಮಾಡ ದೇವಯ್ಯರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

    ಮಡಿಕೇರಿ: ಭಾರತ ಪಾಕ್ ನಡುವೆ 1965ರಲ್ಲಿ ನಡೆದ ಯುದ್ಧದಲ್ಲಿ ಶತ್ರು ರಾಷ್ಟ್ರದ ವಿಮಾನವನ್ನು ಹೊಡೆದುರುಳಿಸಿ ವೀರಮರಣವನ್ನಪ್ಪಿದ ಕೊಡಗಿನ ವೀರಯೋಧ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಆರು ಮೂಕ್ಕಾಲು ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದ್ದು, ನಗರದ ದೇವಯ್ಯ ವೃತ್ತದಲ್ಲಿ ಇಂದು ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

    ಅಜ್ಜಮಾಡ ಕುಟುಂಬಸ್ಥರು, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಮೆಮೋರಿಯಲ್ ಟ್ರಸ್ಟ್, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಮತ್ತು ಕೊಡವ ಮಕ್ಕಡ ಕೂಟ ಆಶ್ರಯದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಲಾಯಿತು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಪ್ರತಿಮೆ ತಲೆಎತ್ತಲಿರುವ ಜಾಗದಲ್ಲಿ ಇರುವ ಹೈ ಮಾಸ್ಕ್ ದೀಪವನ್ನು ನಾಳೆಯೇ ತೆರವುಗೊಳಿಸಬೇಕು, ನಾಳೆಯಿಂದಲೇ ಇಲ್ಲಿ ಪ್ರತಿಮೆ ನಿರ್ಮಾಣ ಸಂಬಂಧ ಕಾಮಗಾರಿ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಮೊಮೇರಿಯಲ್ ಟ್ರಸ್ಟ್ ನ ಅಜ್ಜಮಾಡ ಕಟ್ಟಿ ಮಂದಯ್ಯ, ನಿವೃತ್ತ ಏರ್ ಮಾರ್ಷಲ್ ನಂದಾ ಕಾರ್ಯಪ್ಪ, ಮಾಜಿ ಸೈನಿಕರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

    ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಕಂಚಿನ ಪತ್ರಿಮೆ ಈಗಾಗಲೇ ಸಿದ್ಧವಾಗಿದ್ದು, ಅಜ್ಜಮಾಡ ಐನ್‍ಮನೆಯಲ್ಲಿದೆ. ಕಂಚಿನ ಪ್ರತಿಮೆಗೆ 20 ಲಕ್ಷ ರೂ. ವೆಚ್ಚವಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ಪುತ್ಥಳಿಯನ್ನು ಸಿದ್ಧಗೊಳಿಸಲಾಗಿದೆ.

    ಯಾರಿದು ಅಜ್ಜಮಾಡ ದೇವಯ್ಯ?
    ದೇವಯ್ಯ ವಿರಾಜಪೇಟೆ ತಾಲೂಕಿನ ಕುಟ್ಟ ಸಮೀಪದ ಮಂಚಳ್ಳಿ ಗ್ರಾಮದ ಅಜ್ಜಮಾಡ ಕುಟುಂಬದ ಬೋಪಯ್ಯ ಹಾಗೂ ನೀಲಮ್ಮ ದಂಪತಿ ಪುತ್ರ. 1932 ಡಿ. 24ರಂದು ದೇವಯ್ಯ ಅವರು ಜನಿಸಿದರು. ದೇವಯ್ಯ ಅವರು 1954 ಡಿಸೆಂಬರ್ 6ರಂದು ಭಾರತೀಯ ವಾಯುಪಡೆಯ ಪೈಲಟ್ ಆಗಿ ನೇಮಕಗೊಂಡರು. 1965ರಲ್ಲಿ ಪಾಕಿಸ್ತಾನ ಭಾರತದ ಯುದ್ಧದಲ್ಲಿ ಅಜ್ಜಮಾಡ ದೇವಯ್ಯ ಪಾಕಿಸ್ತಾನದ ಮೇಲೆ ಬಾಂಬ್ ದಾಳಿ ನಡೆಸಿ ಹಿಂತಿರುಗುತ್ತಿದ್ದಾಗ ಪಾಕಿಸ್ತಾನದ ಯುದ್ಧ ವಿಮಾನ ಹಿಂಬಾಲಿಸಿ ಬರುತಿತ್ತು. ದೇವಯ್ಯ ಅವರು ಈ ಸಂದರ್ಭ ಪಾಕ್ ಸೈನಿಕರಿಂದ ತಪ್ಪಿಸಿಕೊಳ್ಳುವ ಎಲ್ಲ ಅವಕಾಶವೂ ಇತ್ತು. ಆದರೂ ಅವರು ಭಾರತದ ಉಳಿದ ವಿಮಾನಗಳ ರಕ್ಷಣೆಗಾಗಿ ಪಾಕ್ ವಿಮಾನದೊಂದಿಗೆ ಕಾದಾಟಕ್ಕೆ ನಿಂತು, ತಮ್ಮ ದುರ್ಬಲ ವಿಮಾನದಲ್ಲಿ ಕೆಚ್ಚೆದೆಯಿಂದ ನೇರವಾಗಿ ಹೋರಾಡಿ, ಶತ್ರುವಿನ ವಿಮಾನವನ್ನು ಹೊಡೆದುರುಳಿಸಿ ತಾವು ಕೂಡ ಹುತಾತ್ಮರಾದರು.

    1965ರಲ್ಲಿ ದೇವಯ್ಯ ಅವರ ಫೈಟರ್ ವಿಮಾನ ಕಣ್ಮರೆಯಾದ ನಂತರ ಅವರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಸೇನೆ ಅವರನ್ನು ನಾಪತ್ತೆಯಾದವರ ಪಟ್ಟಿಗೆ ಸೇರಿಸಿತ್ತು. ಆದರೆ 1979ರಲ್ಲಿ ಬ್ರಿಟನ್ ಲೇಖಕರೊಬ್ಬರು ಬರೆದ ಪುಸ್ತಕದಲ್ಲಿ ದೇವಯ್ಯ ತನ್ನ ಪ್ರಾಣ ಹಂಗನ್ನು ತೊರೆದು ದೇಶದ ರಕ್ಷಣೆಗೆ ಮುಂದಾದ ಸಂದರ್ಭವನ್ನು ಹೇಳಿದ್ದರು. ನಂತರ ಸರ್ಕಾರ ದೇವಯ್ಯ ಅವರನ್ನು ಹುತಾತ್ಮರೆಂದು ಪರಿಗಣಿಸಿ 1988ರಲ್ಲಿ ಮರಣೋತ್ತರ ಮಹಾವೀರ್ ಪ್ರಶಸ್ತಿ ನೀಡಿ ಗೌರವಿಸಿತ್ತು.

  • ಸಚಿವ ಸ್ಥಾನ ಕೊಟ್ರೆ ನಿಭಾಯಿಸುವೆ: ಶಾಸಕ ಕೆ.ಜಿ ಬೋಪಯ್ಯ

    ಸಚಿವ ಸ್ಥಾನ ಕೊಟ್ರೆ ನಿಭಾಯಿಸುವೆ: ಶಾಸಕ ಕೆ.ಜಿ ಬೋಪಯ್ಯ

    ಮಡಿಕೇರಿ: ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನ ಕೊಡದಿರುವ ಬಗ್ಗೆ ಕೊಡಗಿನ ಜನತೆಗೆ ಅಸಮಾಧಾನವಿದ್ದು ಒಂದು ವೇಳೆ ಸಚಿವ ಸ್ಥಾನ ಕೊಟ್ಟರೆ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಸಚಿವ ಸ್ಥಾನ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಇದುವರೆಗೂ ಪಕ್ಷದ ಘನತೆಗೆ ಕುಂದು ಬರುವಂತೆ ನಡೆದುಕೊಂಡಿಲ್ಲ. ಪಕ್ಷ ಏನು ಹೇಳುತ್ತೆ ಅದನ್ನ ಕೇಳುವೆ. ಪಕ್ಷ ಜವಾಬ್ದಾರಿ ಕೊಟ್ಟಾಗ ವೈಯಕ್ತಿಕ ಪ್ರತಿಷ್ಠೆಯನ್ನು ಪಕ್ಕಕ್ಕಿಟ್ಟು ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇನೆ. ಸಚಿವ ಸ್ಥಾನಕ್ಕಾಗಿ ಎಂದೂ ಲಾಬಿ ಮತ್ತೊಂದನ್ನು ನಾನು ಮಾಡುವುದಿಲ್ಲ ಎಂದರು.

    ನಾವು ಇಂದು ಎಂತಹ ಪರಿಸ್ಥಿತಿಯಲ್ಲಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಗೊತ್ತಿದೆ. ಸಂಪುಟದಲ್ಲಿ 34 ಜನರಿಗೆ ಮಾತ್ರ ಮಂತ್ರಿ ಸ್ಥಾನ ಕೊಡುವ ಅವಕಾಶವಿದೆ. ಒಂದು ವೇಳೆ ಸಚಿವ ಸ್ಥಾನ ಕೊಟ್ಟರೂ ಅಥವಾ ಕೊಡದೇ ಇದ್ದರೂ ಸಮರ್ಥವಾಗಿ ನಿಭಾಯಿಸುವೆ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಅಭಿಪ್ರಾಯ ವ್ಯಕ್ತಪಡಿಸಿದರು.

  • ಪೊಲೀಸ್ರಿಗೆ ಅವಾಜ್ ಹಾಕಿ ಬಲವಂತವಾಗಿ ವಾಹನ ತಡೆದ ಕೆಜಿ ಬೋಪಯ್ಯ

    ಪೊಲೀಸ್ರಿಗೆ ಅವಾಜ್ ಹಾಕಿ ಬಲವಂತವಾಗಿ ವಾಹನ ತಡೆದ ಕೆಜಿ ಬೋಪಯ್ಯ

    ಮಡಿಕೇರಿ: ಇಂದು ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ವ್ಯಾಪಕ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸುವ ಪ್ರಯತ್ನ ಮಾಡ್ತಿದ್ದಾರೆ.

    ಇಂದು ಬೆಳಗ್ಗೆಯಿಂದಲೂ ಮಡಿಕೇರಿ ನಗರಕ್ಕೆ ಆಗಮಿಸುತ್ತಿರುವ ವಾಹನಗಳನ್ನು ಶಾಸಕ, ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಡೆಯುತ್ತಿದ್ದಾರೆ. ಶಾಸಕರು ಬಲವಂತವಾಗಿ ವಾಹನಗಳನ್ನು ತಡೆಯುತ್ತಿದ್ದರಿಂದ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ರು. ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ರು ಲೆಕ್ಕಿಸದ ಮಾಜಿ ಸ್ಪೀಕರ್ ವಾಹನಗಳನ್ನು ತಡೆಯುತ್ತಿದ್ದಾರೆ.

    ಮುಖ್ಯಮಂತ್ರಿಗಳು ನುಡಿದಂತೆ ನಡೆಯಬೇಕು. ಚುನಾವಣಾ ಪೂರ್ವದಲ್ಲಿ ಹೇಳಿದಂತೆ ಸಾಲಮನ್ನಾ ಮಾಡಬೇಕು. ಜಿಲ್ಲೆಯ ಎಲ್ಲ ರೈತರು, ಸ್ಥಳೀಯರು ಸ್ಪಂದನೆ ಮಾಡಿದ್ದಾರೆ. ಆದ್ರೆ ಜಿಲ್ಲೆಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆಯೇ ಹೆಚ್ಚಾಗಿದೆ. ಪೊಲೀಸರು ಪ್ರವಾಸಿಗರ ಏಜೆಂಟ್‍ರಂತೆ ವರ್ತಿಸುತ್ತಿದ್ದಾರೆ. ಪೊಲೀಸರ ದಬ್ಬಾಳಿಕೆಗೆ ಹೆದರುವವರು ನಾವಲ್ಲ ಅಂತಾ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಹೇಳಿದ್ದಾರೆ.

    ವಾಹನಗಳ ತಡೆಯಿಂದ ಪ್ರಯಾಣಿಕರು ಅನುಭವಿಸುವಂತಾಗಿದೆ. ಸ್ಥಳದಲ್ಲಿ 20ಕ್ಕೂ ಅಧಿಕ ಕಾರ್ಯಕರ್ತರು ಶಾಸಕರಿಗೆ ಸಾಥ್ ನೀಡಿದ್ದಾರೆ.

  • ಸ್ಪೀಕರ್ ಬೋಪಯ್ಯ ಆಯ್ಕೆ ವಿರೋಧಿಸಿ ಕಾಂಗ್ರೆಸ್ ಅರ್ಜಿ- ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

    ಸ್ಪೀಕರ್ ಬೋಪಯ್ಯ ಆಯ್ಕೆ ವಿರೋಧಿಸಿ ಕಾಂಗ್ರೆಸ್ ಅರ್ಜಿ- ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

    ನವದೆಹಲಿ: ಹಂಗಾಮಿ ಸ್ಪೀಕರ್ ಆಗಿ ಕೆ.ಜಿ ಬೋಪಯ್ಯ ಅವರನ್ನು ಆಯ್ಕೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

    ಬೋಪಯ್ಯ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತ್ವರಿತ ವಿಚಾರಣೆಗೆ ಕಾಂಗ್ರೆಸ್ ಪರ ವಕೀಲರು ಮನವಿ ಮಾಡಿದ್ದರು. ಹೀಗಾಗಿ ನ್ಯಾಯಮೂರ್ತಿ ಎ.ಕೆ.ಸಿಕ್ರಿ ನ್ಯಾ. ಅಶೋಕ್ ಭೂಷಣ್ ಹಾಗೂ ನ್ಯಾ.ಎಸ್.ಎ ಬೊಬ್ಡೆ ತ್ರಿಸದಸ್ಯ ಪೀಠದಿಂದ ವಿಚಾರಣೆ ನಡೆಯಲಿದೆ.

    ಇಂದಿನ ವಿಶ್ವಾಸಮತದ ಐತಿಹಾಸಿಕ ಅಧಿವೇಶನ ಆರಂಭಕ್ಕೆ ಮೊದಲೇ ವಿವಾದಕ್ಕೀಡಾಗಿದೆ. ಹಿರಿತನವನ್ನೇ ಬದಿಗಿರಿಸಿ ಯಡಿಯೂರಪ್ಪ ಅವರ ನಿಷ್ಠಾಳು ಆಗಿರೋ ಬೋಪಯ್ಯ ಅವರನ್ನ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ನೇಮಿಸಿದೆ. ಇದನ್ನೂ ಓದಿ: ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ನೇಮಕ: ಬಹುಮತ ಸಾಬೀತಿಗೂ ಮುನ್ನ ಜೆಡಿಎಸ್ ರೆಬೆಲ್ ಶಾಸಕರು ಅನರ್ಹ?

    ಹಂಗಾಮಿ ಸ್ಪೀಕರ್ ಬೋಪಯ್ಯ ನೇಮಕ ವಿವಾದವೇಕೆ?
    * ಹಿರಿಯ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡುವುದು ವಾಡಿಕೆ
    * ಬೋಪಯ್ಯಗಿಂತ ಆರ್.ವಿ. ದೇಶಪಾಂಡೆ, ಉಮೇಶ್ ಕತ್ತಿ ಹಿರಿಯರು
    * ಬೋಪಯ್ಯ 4 ಬಾರಿ ಎಂಎಲ್‍ಎಯಾದ್ರೆ, ಇವರಿಬ್ಬರು 8 ಬಾರಿ ಎಂಎಲ್‍ಎಗಳು
    * ಜಮೀರ್ ಅಹ್ಮದ್, ಅಖಂಡ ಶ್ರೀನಿವಾಸಮೂರ್ತಿ, ಭೀಮಾನಾಯ್ಕ್ ಅನರ್ಹ ಭೀತಿ
    * 2010ರಲ್ಲಿ ಪಕ್ಷಾಂತರ ಕಾಯ್ದೆಯಡಿ ಅನರ್ಹ ಮಾಡಿದ್ದ ಬೋಪಯ್ಯ

    ಇನ್ನು, ಹಂಗಾಮಿ ಸ್ಪೀಕರ್ ಕಾರ್ಯವ್ಯಾಪ್ತಿ ಈ ರೀತಿ ಇರಲಿದೆ
    * ಶಾಸಕರನ್ನು ಅನರ್ಹ ಮಾಡುವ ಅಧಿಕಾರ ಇರುವುದಿಲ್ಲ
    * ನೂತನ ಸಚಿವರಿಗೆ ಪ್ರಮಾಣವಚನ ಬೋಧನೆ ಮಾಡಬಹುದಷ್ಟೇ
    * ವಿಶ್ವಾಸಮತ ಯಾಚನೆ ಪ್ರಕ್ರಿಯೆಗಷ್ಟೇ ಹಂಗಾಮಿ ಸ್ಪೀಕರ್ ಸೀಮಿತ
    * ಶಾಸಕರನ್ನು ಅನರ್ಹ ಮಾಡುವ ಅಧಿಕಾರ ಇರುವುದಿಲ್ಲ

    ಹಿರಿಯ ಶಾಸಕರನ್ನೇ ಹಂಗಾಮಿ ಶಾಸಕರಾಗಿ ನೇಮಕ ಮಾಡ್ಬೇಕಾ..? ಅನ್ನೋದನ್ನ ನೋಡೋದಾದ್ರೆ
    – ಕಾಂಗ್ರೆಸ್‍ಗೆ ತಿರುಗುಬಾಣವಾಗುತ್ತಾ ಅದರದ್ದೇ ತಂತ್ರ?
    – 2005ರಲ್ಲಿ ಉತ್ತರಾಖಂಡ್ ವಿಧಾನಸಭೆಗೆ ಕಿರಿಯ ಶಾಸಕರನ್ನೇ ಹಂಗಾಮಿ ಸ್ಪೀಕರ್ ಆಗಿ ನೇಮಕ (ಕಾಂಗ್ರೆಸ್ ಅಧಿಕಾರ)
    – 2017ರಲ್ಲಿ ಪಂಜಾಬ್ ವಿಧಾನಸಭೆಗೆ ಕಿರಿಯ ಶಾಸಕ ಕೆಪಿ ಸಿಂಗ್ ಹಂಗಾಮಿ ಸ್ಪೀಕರ್ ಆಗಿ ನೇಮಕ (ಕಾಂಗ್ರೆಸ್ ಅಧಿಕಾರ)
    – ಉತ್ತರಪ್ರದೇಶ ವಿಧಾನಸಭೆಗೆ ಕಿರಿಯ ಶಾಸಕ ಫತೇರ್ ಬಹುದ್ದೂರ್ ಸಿಂಗ್ ಹಂಗಾಮಿ ಶಾಸಕರಾಗಿ ನೇಮಕ